ಬೆಂಗಳೂರು: ಪಕ್ಷದಲ್ಲಿ ಕಲೆವರ ನಡೆಗೆ ಅಸಮಾಧಾನಗೊಂಡಿದ್ದ ವಿ ಸೋಮಣ್ಣ ಇದೀಗ ಹೈಕಮಾಂಡ್ ಭೇಟಿ ಮಾಡಿ ಮಹತ್ವದ ಚರ್ಚೆ ಮಾಡಿದ್ದಾರೆ. ಅಲ್ಲದೇ ಹೈಕಮಾಂಡ್ ಸಹ ಸೋಮಣ್ಣ ಕೋಪವನ್ನು ಶಮನ ಮಾಡಿದ್ದಾರೆ. ಬಿಜೆಪಿ ಹೈಕಮಾಂಡ್ ಜತೆ ಶನಿವಾರವಷ್ಟೇ ಮಾತುಕತೆ ನಡೆಸಿ ಬಂದಿರುವ ಹಿರಿಯ ನಾಯಕ ವಿ ಸೋಮಣ್ಣ , https://ainlivenews.com/darshan-greeted-sankranti-in-his-own-style-with-a-cow/ ಇದೀಗ ಭೇಟಿ ಬಗ್ಗೆ ಮಾಹಿತಿ ನೀಡಿದ್ದು ಎಲ್ಲವೂ ಸುಖಾಂತ್ಯವಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಸೋಮಣ್ಣ ಹಿರಿಯರು, ಪಕ್ಷಕ್ಕೆ ಅವರದ್ದೇ ಆದ ಕೊಡುಗೆ ಇದೆ. ಗೆಲ್ಲುವ ಭರವಸೆ ಮೇಲೆ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರು. ಸೋಮಣ್ಣ ಪರಾಭವ ಆಗಿದ್ದಕ್ಕೆ ನಮಗೂ ನೋವು ಇದೆ ಎಂದಿದ್ದಾರೆ.
Author: AIN Author
ವಿಜಯಪುರ: ರಾಮಮಂದಿರ (Ram Mandir) ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಮಾತನಾಡಿರುವ ಕಾಂಗ್ರೆಸ್ ಪಕ್ಷವನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನು ರಾವಣನಿಗೆ ಹೋಲಿಸಿ ತರಾಟೆಗೆ ತೆಗೆದುಕೊಂಡರು. ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ಕಾಂಗ್ರೆಸ್‌ನವರು ಕೌರವರು, ರಾವಣನಂತೆ ವರ್ತಿಸುತ್ತಿದ್ದಾರೆ. ಹೊಸ ಹಿಂದುತ್ವ ಪ್ರಾರಂಭ ಆಗುತ್ತದೆ. ಅಯ್ಯೋಧೆಯಲ್ಲಿ ರಾಮಮಂದಿರದ ಬಳಿಕ ಹಿಂದೂ ಯುಗ ಆರಂಭ ಆಗುತ್ತದೆ. ಸನಾತನ ಧರ್ಮ ವಿಶ್ವದಲ್ಲಿ ಪಸರಿಸುತ್ತದೆ ಎಂದು ಭವಿಷ್ಯ ನುಡಿದರು. https://ainlivenews.com/darshan-greeted-sankranti-in-his-own-style-with-a-cow/ ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಹೋಗುವುದಿಲ್ಲ ಎಂಬ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಪಕ್ಷ ಗುಲಾಮಗಿರಿಯ ಸಂಕೇತವಾಗಿದೆ. ಹಿಂದಿನ ಕಾಲದಲ್ಲಿ ಕೌರವರು, ರಾವಣ ಹೇಗಿದ್ದನೋ ಹಾಗೇ ಕಾಂಗ್ರೆಸ್ ಕೂಡಾ ಇದೆ. ಕಾಂಗ್ರೆಸ್ ಗುಲಾಮಗಿರಿ ಸಂಕೇತ ಎಂದು ಅವರ ನಾಯಕರ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದರು. ರಾಮನ ಭಕ್ತರಾಗಿದ್ದರೆ, ಅವರು ಮಂದಿರ ಉದ್ಘಾಟನೆಗೆ ಹೋಗಬೇಕಿತ್ತು. ಕಾಂಗ್ರೆಸ್ ನಾಯಕರು ಮಂದಿರ ನಿರ್ಮಾಣದ ವಿರುದ್ಧ ವಕೀಲರನ್ನ ನೇಮಿಸಿದ್ದರು. ಮಂದಿರವನ್ನು ಬಿಜೆಪಿಯವರಾದ್ರು ಕಟ್ಟಲಿ, ಆರ್‌ಎಸ್‌ಎಸ್‌ನವರಾದ್ರು ಕಟ್ಟಲಿ,…
‘ಅಡಚಣೆಗಾಗಿ ಕ್ಷಮಿಸಿ’ ಮತ್ತು ‘ಮುಗಿಲ್ ಪೇಟೆ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಭರತ್ ಎಸ್. ನಾವುಂದ ಈಗ 3ನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಸುಗ್ಗಿ ಹಬ್ಬದ ವಿಶೇಷವಾಗಿ ಇಂದು ಬಿಡುಗಡೆ ಮಾಡಲಾಗಿದೆ. ‘ಮುಗಿಲ್ ಪೇಟೆ’ ಸಿನಿಮಾ ಮೂಲಕ ಪ್ರೇಕ್ಷಕರಲ್ಲಿ ಭರವಸೆ ಮೂಡಿಸಿರುವ ಭರತ್ ಹಾಗೂ ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿ ಗಳಿಸಿರುವ ತಾಂಡವ್ ರಾಮ್ ಸಿನಿಮಾಗೆ ‘ದೇವನಾಂಪ್ರಿಯ’ ಎಂಬ ಶೀರ್ಷಿಕೆ ಇಡಲಾಗಿದೆ. “ದೇವನಾಂಪ್ರಿಯ” ಅಂದರೆ “ದೇವತೆಗಳಿಗೆ ಪ್ರಿಯನಾದವನು” ಎಂದು ಕರೆಯಲಾಗುತ್ತದೆ. ಫಸ್ಟ್ ಲುಕ್ ಪೋಸ್ಟರ್ ಸಖತ್ ಇಂಪ್ರೆಸಿವ್ ಆಗಿದ್ದು, ನಾನಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೋಸ್ಟರ್ ನ್ನು ಸೂಕ್ಷ್ಮವಾಗಿ ಗಮನಿಸಿದ್ದರೆ ಕಿಚ್ಚು ಹಾಯಿಸುತ್ತಿರುವ ನಾಯಕ, ವೀರಭದ್ರ ಸ್ವಾಮಿ, ನಾಯಕನ ಬೆನ್ನಿಂದ ಮಹಿಳೆಯ ಆಕೃತಿ, ಎರಡು ಗ್ರಾಮಗಳು ಹೀಗೆ ನಾನಾ ವಿಷಯಗಳು ಕಾಣ ಸಿಗುತ್ತವೆ.…
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸುಪ್ರಸಿದ್ಧ ಘಾಟಿ ಸುಬ್ರಹ್ಮಣ್ಯದಲ್ಲಿ ಮಂಗಳವಾರ ನಡೆದ ಬ್ರಹ್ಮರಥೋತ್ಸವದ ವೇಳೆ ಭಾರೀ ಅನಾಹುತವೊಂದು ತಪ್ಪಿದೆ. ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ರಥೋತ್ಸವದ ಸಂದರ್ಭದಲ್ಲಿ ರಥ ಎಳೆಯುವಾಗ ಚಕ್ರದಡಿಗೆ ಸಿಲುಕಿದ್ದ ಏಳು ಮಂದಿ ಭಕ್ತರನ್ನು ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಪಿ.ರವಿ ಹಾಗೂ ಪತ್ರಕರ್ತ ಶಿವರಾಜ್ ನೇಸರ ಅವರು ಪ್ರಾಣಾಪಾಯದಿಂದ ಪಾರು ಮಾಡಿ ಸಮಯಪ್ರಜ್ಞೆ ಮೆರೆದಿದ್ದಾರೆ. ರಥ ಎಳೆಯುವ ಉತ್ಸಾಹದಲ್ಲಿ ಭಕ್ತರು ಕೆಳಕ್ಕೆ ಬಿದ್ದರು. ಅಲ್ಲಿಯೇ ಜನರನ್ನು ನಿಯಂತ್ರಿಸುತ್ತಿದ್ದ ಡಿವೈಎಸ್ಪಿ ರವಿ ಅವರು ರಥ ನಿಲ್ಲಿಸುವಂತೆ ಕೂಗಿಕೊಂಡರು. ಆದರೆ, ಯಾರೂ ಕಿವಿಗೊಡಲಿಲ್ಲ. ಆಗ ಪತ್ರಕರ್ತ ಶಿವರಾಜ ನೇಸರ ಅವರು ಮಹಿಳೆ ಸೇರಿದಂತೆ ಏಳೂ ಜನರನ್ನು ಚಕ್ರ ಸಾಗುವ ಹಾದಿಯಿಂದ ಹೊರದೂಡಿ ಅಪಾಯದಿಂದ ಪಾರು ಮಾಡಿದರು. ಆ ಬಳಿಕ ಚಕ್ರ ಮುಂದಕ್ಕೆ ಸಾಗಿತು. ಒಟ್ಟಾರೆ ಅಧಿಕಾರಿ ಹಾಗೂ ಪತ್ರಕರ್ತರ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಅವಘಡವೊಂದು ತಪ್ಪಿತು. ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಸರ್ಪ ದೋಷ ಪರಿಹಾರ…
ಕೊಹಿಮಾ:- ಜನವರಿ 22 ರಂದು ನಡೆಯುವ ರಾಜಕೀಯ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಆರ್‌ಎಸ್‌ಎಸ್ ಮತ್ತು ಬಿಜೆಪಿ (BJP) ಜನವರಿ 22 ರ ಕಾರ್ಯವನ್ನು ಸಂಪೂರ್ಣವಾಗಿ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದೆ. ಇದು ಆರ್‌ಎಸ್‌ಎಸ್ ಬಿಜೆಪಿ ಕಾರ್ಯಕ್ರಮವಾಗಿದ್ದು, ಕಾಂಗ್ರೆಸ್ ಅಧ್ಯಕ್ಷರು ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಹೇಳಿದರು. ನಾವು ಎಲ್ಲಾ ಧರ್ಮಗಳು, ಎಲ್ಲಾ ಆಚರಣೆಗಳಿಗೆ ಮುಕ್ತರಾಗಿದ್ದೇವೆ ಎಂದು ನಾಗಾಲ್ಯಾಂಡ್‌ನ ರಾಜಧಾನಿ ಕೊಹಿಮಾದಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಹೇಳಿದ್ದಾರೆ. ಹಿಂದೂ ಧರ್ಮದ ವರಿಷ್ಠರು, ಹಿಂದೂ ಧರ್ಮದ ಮಠಾಧಿಪತಿಗಳು ಸಹ ಜನವರಿ 22 ರ ಸಮಾರಂಭ ರಾಜಕೀಯ ಕಾರ್ಯ ಎಂದು ತಮ್ಮ ಅಭಿಪ್ರಾಯವನ್ನು ಎಂದು ಸಾರ್ವಜನಿಕವಾಗಿ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಭಾರತದ ಪ್ರಧಾನ ಮಂತ್ರಿಯ ಸುತ್ತ ವಿನ್ಯಾಸಗೊಳಿಸಲಾದ ಮತ್ತು ಆರೆಸ್ಸೆಸ್ ಸುತ್ತ ವಿನ್ಯಾಸಗೊಳಿಸಲಾದ ರಾಜಕೀಯ ಕಾರ್ಯಕ್ರಮಕ್ಕೆ ಹೋಗುವುದು ನಮಗೆ ಸರಿಯನಿಸುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಂಗಳವಾರ…
ನೀವು ಆರೋಗ್ಯಕರವಾದ ಬಿಸಿಯಾದ ಪಾಲಕ್ ಸೊಪ್ಪುವಿನ ದೋಸೆ ಸವಿದು ನೋಡಿ, ಮತ್ತೊಮ್ಮೆ ತಿನ್ನಬೇಕು ಅನಿಸುತ್ತದೆ. ಬೇಕಾಗುವ ಸಾಮಾಗ್ರಿಗಳು * ಪಾಲಕ್ ಸೊಪ್ಪು- 1 ಕಟ್ಟು * ರುಬ್ಬಿದ ದೋಸೆ ಹಿಟ್ಟು – 2ಕಪ್ * ಅಡುಗೆ ಎಣ್ಣೆ- ಅರ್ಧ ಕಪ್ * ರುಚಿಗೆ ತಕ್ಕಷ್ಟು ಉಪ್ಪು * ಈರುಳ್ಳಿ-1 * ಜೀರಿಗೆ- ಸ್ವಲ್ಪ * ಬೆಳ್ಳುಳ್ಳಿ- 1 * ಕೊತ್ತಂಬರಿ ಸೊಪ್ಪು- ಸ್ವಲ್ಪ * ಹಸಿಮೆಣಸಿನಕಾಯಿ-4 * ಮೆಣಸಿನಪುಡಿ- ಸ್ವಲ್ಪ ಮಾಡುವ ವಿಧಾನ ಒಂದು ಬಾಣಲೆಗೆ ಅಡುಗೆ ಎಣ್ಣೆಯನ್ನು ಹಾಕಿ ಜೊತೆಗೆ ತೊಳೆದ ಪಾಲಕ್ ಸೊಪ್ಪು ಹಾಕಿ ಬಾಡುವ ತನಕ ಹುರಿಯಿರಿ. ನಂತರ ಒಂದು ಮಿಕ್ಸಿಯಲ್ಲಿ ಸೊಪ್ಪು ಮತ್ತು ಉಪ್ಪನ್ನು ಹಾಕಿ ನುಣ್ಣಗೆ ಪೇಸ್ಟ್ ಮಾಡಿಕೊಳ್ಳಿ. ಒಂದು ಚಿಕ್ಕ ಪಾತ್ರೆ ಅಥವಾ ಬಾಣಲೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿ ಇದಕ್ಕೆ ಜೀರಿಗೆ, ಬೆಳ್ಳುಳ್ಳಿ, ಈರುಳ್ಳಿ, ಮೆಣಸಿನ ಪುಡಿ, ಹಸಿಮೆಣಸು, ಕೊತ್ತಂಬರಿ ಸೊಪ್ಪು ಹಾಕಿ ಹುರಿದುಕೊಳ್ಳಿ. ಅದನ್ನು ಆರಲು ಬಿಡಿ.…
ಇಲಿಗಳಿಂದ ಹರಡುವ ರೋಗಗಳು ಮನುಷ್ಯರಿಗೂ ಹರಡುತ್ತವೆ. ಇವು ಕೆಲವೊಮ್ಮೆ ಮಾರಕವಾಗಬಹುದು. ಇಲಿಗಳಿಂದ ಹರಡುವ ಕೆಲವು ರೋಗಗಳು ಶೀತ, ಕೆಮ್ಮು ಮತ್ತು ಕಾಮಾಲೆಯಂತಹ ಆರಂಭಿಕ ಲಕ್ಷಣಗಳನ್ನು ತೋರಿಸುತ್ತವೆ. ಆದ್ದರಿಂದ, ಈ ಕಾಯಿಲೆಗಳನ್ನು ಸಾಮಾನ್ಯವಾಗಿ ಶೀತ ಅಥವಾ ಜ್ವರ ಎಂದು ತಪ್ಪಾಗಿ ಗ್ರಹಿಸಲಾಗುತ್ತದೆ. ಆದಾಗ್ಯೂ, ಈ ರೋಗಗಳನ್ನು ನಿರ್ಲಕ್ಷಿಸುವುದು ಮಾರಕವಾಗಬಹುದು. ಕೆಲವು ಸಂದರ್ಭಗಳಲ್ಲಿ ಇದು ಸಾವಿಗೆ ಕಾರಣವಾಗಬಹುದು. ಇಲಿಗಳಿಂದ ಲೆಪ್ಟೊಸ್ಪಿರೋಸಿಸ್: ಲೆಪ್ಟೊಸ್ಪಿರೋಸಿಸ್ ಬ್ಯಾಕ್ಟೀರಿಯಾದ ಸೋಂಕು. ಇದು ಇಲಿ ಮೂತ್ರದ ಸಂಪರ್ಕದ ಮೂಲಕ ಹರಡುತ್ತದೆ. ಈ ಸೋಂಕು ಜ್ವರ, ತಲೆನೋವು, ಸ್ನಾಯು ನೋವು, ಆಯಾಸ, ವಾಂತಿ ಮುಂತಾದ ಲಕ್ಷಣಗಳನ್ನು ಉಂಟುಮಾಡುತ್ತದೆ. ತೀವ್ರತರವಾದ ಪ್ರಕರಣಗಳಲ್ಲಿ ಇದು ಮೂತ್ರಪಿಂಡ ವೈಫಲ್ಯ ಅಥವಾ ಸಾವಿಗೆ ಕಾರಣವಾಗಬಹುದು. ಇಲಿಗಳಿಂದ ಪ್ಲೇಗ್: ಪ್ಲೇಗ್ ಎಂಬುದು ಇಲಿ ಕಡಿತದಿಂದ ಹರಡುವ ಬ್ಯಾಕ್ಟೀರಿಯಾದ ಸೋಂಕು. ಈ ಸೋಂಕು ಜ್ವರ, ಆಯಾಸ, ದದ್ದುಗಳಂತಹ ಲಕ್ಷಣಗಳನ್ನು ಉಂಟುಮಾಡುತ್ತದೆ. ತೀವ್ರತರವಾದ ಪ್ರಕರಣಗಳಲ್ಲಿ ಇದು ಸಾವಿಗೆ ಸಹ ಕಾರಣವಾಗಬಹುದು. ಇಲಿಗಳಿಂದ ಕ್ಷಯರೋಗ: ಕ್ಷಯವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವ ಸಾಂಕ್ರಾಮಿಕ ರೋಗವಾಗಿದೆ.…
ರಾಯಚೂರು:- ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿಯಾಗುತ್ತದೆ. ಈ ಹಿಂದೆ ಬರ ಪರಿಹಾರ, ಅತೀವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನ್ಯತೆಗಳಿದ್ದವು. ಎಷ್ಟೋ ಜನ ಬೆಳೆಯನ್ನೇ ಇಡದಿದ್ದರೂ ಅವರಿಗೂ ಪರಿಹಾರ ಸಿಗುತ್ತಿತ್ತು. ಬೆಳೆ ಹಾನಿಯಾದವರಿಗೆ ಪರಿಹಾರ ಸಿಗುತ್ತಿರಲಿಲ್ಲ ಎಂದರು. ಹಿಂದಿನ ಸರ್ಕಾರ ಇದ್ದಾಗ, ನಾನು ಕೃಷಿ ಸಚಿವನಿದ್ದಾಗಲೂ ನೋಡಿದ್ದೇನೆ. ಯಾರದ್ದೋ ಜಮೀನು ಮತ್ತೊಬ್ಬರಿಗೆ ಹಣ ಪಾವತಿಯಾಗಿತ್ತಿತ್ತು. ರೈತರ ಬೆಳೆಯೇ ಬೇರೆ ಪರಿಹಾರ ಬರುವುದೇ ಬೇರೆ ಬೆಳೆಗೆ. ಅಧಿಕಾರಿಗಳು ಮಾಹಿತಿ ಸೇರಿಸುವಾಗ ತಪ್ಪುಗಳಾಗುತ್ತಿದ್ದವು. ಇದೆಲ್ಲಾ ಸರಿಮಾಡಿ ಬೆಳೆಸಮೀಕ್ಷೆ ಆಧಾರದಲ್ಲಿ ಹಣ ಪಾವತಿಯಾಗುತ್ತದೆ ಎಂದರು. ವ್ಯವಸ್ಥೆ ಸರಿಪಡಿಸಲು ಎರಡು ತಿಂಗಳು ತಡವಾಗಿದೆ. ಒಂದು ವಾರದಲ್ಲಿ ಮೊದಲ ಕಂತಿನ ಹಣ ಬರುತ್ತದೆ. 12 ಲಕ್ಷ ಜನರಿಗೆ ಆರ್‌ಬಿಐಗೆ ಪೇಮೆಂಟ್ ಆರ್ಡರ್ ಕಳುಹಿಸಿದ್ದೇವೆ. ಇನ್ನೂ 20…
ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ಆಹ್ವಾನಿಸಲಾಗಿದೆ. ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಅವರನ್ನು ಆಹ್ವಾನಿಸಿರುವ ಫೋಟೋಗಳನ್ನು ಕೊಹ್ಲಿ ಅವರ ಅಭಿಮಾನಿಗಳು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಇದೇ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ (ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭ) ವಿಶ್ವದಾದ್ಯಂತ ಗಣ್ಯರು ಭಾಗವಹಿಸಲಿದ್ದಾರೆ. ದಕ್ಷಿಣ ಭಾರತದ ಕೆಲವು ಕ್ರೀಡಾಪಟುಗಳಿಗೆ ಮಾತ್ರ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಕ್ರಿಕೆಟ್ ದಿಗ್ಗಜರ ಸಮಾಗಮ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೂ ಈಗಾಗಲೇ ಐತಿಹಾಸಿಕ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಕಿಂಗ್ ಕೊಹ್ಲಿ ಸಹ ರಾಮಮಂದಿರದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದು, ಈ ಸಮಾರಂಭ ಕ್ರಿಕೆಟ್ ದಿಗ್ಗಜರು ಸಮಾಗಮಕ್ಕೆ ಸಾಕ್ಷಿಯಾಗಲಿದೆ.
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥಿತವಾಗಿ ಜಾರಿಗೆ ತಂದು ಕಠಿಣಗೊಳಿಸಬೇಕಂತ ರಾಜ್ಯ ಸರ್ಕಾರ ಮುಂದಾಗಿದೆ.. ಸರ್ಕಾರ ಬಂದು 8 ತಿಂಗಳ ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ವಾರ್ಷಿಕ ಸಮಾವೇಶ ಸಭೆ ನಡೆಸಿದ್ರು.. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಠಿಣ ಕ್ರಮ ಜಾರಿಗೊಳಿಸೋದರ ಜೊತೆಗೆ ಪೊಲೀಸರಿಗೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿ ಖಡಕ್ ಸೂಚನೆಯನ್ನ ರವಾನಿಸಿದ್ರು ಸಿಎಂ.. ಹಾಗಾದ್ರೆ ಇವತ್ತಿನ ಪೊಲಿಸ್ ಹಿರಿಯ ಅಧಿಕಾರಿಗಳೊಂದಿಗೆ ಯಾವೆಲ್ಲಾ ವಿಚಾರಗಳನ್ನ ಚರ್ಚೆ ಮಾಡಲಾಯ್ತು .. ಅಧಿಕಾರಿಗಳಿಗೆ ಕೊಟ್ಟ ಖಡಕ್ ಸೂಚನೆ ಏನು ಅಂತೀರಾ ಈ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್ ಎಸ್… ರಾಜ್ಯದಲ್ಲಿ ಇತ್ತೀಚಿಗೆ ನಡೆದ ಘಟನೆಗಳು ಸೇರಿದಂತೆ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿಚ ಪರಮೇಶ್ವರ್ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಯ್ತು..ನೃಪತುಂಗ ರಸ್ತೆ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಜಿಪಿ, ಎಡಿಜಿಪಿಗಳು, ಐಜಿಗಳು, ಡಿಐಜಿಗಳು,…