Author: AIN Author

ಬೆಂಗಳೂರು: ರಾಜ್ಯದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಪಟಾಕಿಯಿಂದ ಉಂಟಾಗುವ ಮಾಲಿನ್ಯದ ಕುರಿತು ಸಿಎಂ ಎಚ್ಚರಿಕೆ ನೀಡಿದ್ದು ಎಲ್ಲರೂ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಸಂದೇಶ ನೀಡಿರುವ ಸಿಎಂ, ದೀಪಾವಳಿ ತಮ್ಮೆಲ್ಲರ ಬಾಳಿನಲ್ಲಿ ಸುಖ, ಸಮೃದ್ಧಿಯ ಹೊಸ ಬೆಳಕು ಹೊತ್ತು ತರಲಿ. ಎಲ್ಲರೂ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Read More

ಬೆಂಗಳೂರು:- ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಜೈಲು ಸೇರಿರುವ ಚೈತ್ರಾ ಕುಂದಾಪುರ ಮೇಲೆ ಆಫ್ರಿಕನ್ ಮಹಿಳಾ ಖೈದಿಗಳು ಹಲ್ಲೆ ಮಾಡಿರುವ ಘಟನೆ ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಮಧ್ಯಾಹ್ನ ಈ ಘಟನೆ ನಡೆದಿದ್ದು, ಮಹಿಳಾ‌ ವಿಚಾರಣಾಧೀನ ಕೈದಿಗಳ ಬ್ಯಾರಕ್‌ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಕುಂದಾಪುರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಮತ್ತು ಮೂವರು ಸ್ಥಳೀಯ ಖೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸರಿಗೆ ಚೈತ್ರಾ ಕುಂದಾಪುರ ದೂರು ನೀಡಿದ್ದಾರೆ.

Read More

ಬೆಂಗಳೂರು:- ರಾತ್ರಿ ವೇಳೆ ಮನೆ ಬಾಗಿಲು ಬಡಿದು ನೈಜೀರಿಯಾ ಮಹಿಳೆ ಭೀತಿಗೊಳಿಸುತ್ತಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಬೆಂಗಳೂರು ಉತ್ತರ ತಾಲೂಕಿನ ಪಿಳ್ಳಳ್ಳಿ ಗ್ರಾಮದಲ್ಲಿ ನೈಜೀರಿಯಾದ ಮಳೆಯೊಬ್ಬಳು ರಾತ್ರಿ ವೇಳೆ ಮನೆಮನೆಗೆ ತೆರಳಿ ಬಾಗಿಲು ಬಡಿದು ಕಾಟ ಕೊಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಮನೆ ಬಾಗಿಲು ಬಡಿದು ಮನೆ ಮಂದಿಯನ್ನು ಭೀತಿಗೊಳಿಸಿ ಬಳಿಕ ಸ್ಥಳದಿಂದ ಪರಾರಿಯಾಗುತ್ತಾಳೆ. ನೈಜೀರಿಯ ಮಹಿಳೆಯ ಈ ಕೃತ್ಯ ಯಶೋಧ ಬಸವರಾಜ್ ದಂಪತಿ ಮನೆಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Read More

ಬೆಂಗಳೂರು:- ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳು ವಿಫಲವಾಗಿವೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಖಾತರಿ ಯೋಜನೆಗಳ ಹೆಸರಿನಲ್ಲಿ, ಈ ಕರ್ನಾಟಕ ಸರ್ಕಾರ ಸಾಮಾನ್ಯ ನಾಗರಿಕರ ಹೆಸರಿನಲ್ಲಿ ಹಣವನ್ನು ದುರ್ಬಳಕೆ ಮಾಡುತ್ತಿದೆ. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ರೈತರಿಗೆ ನೀಡುತ್ತಿದ್ದ ವಿತ್ತೀಯ ಸವಲತ್ತುಗಳನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿಲ್ಲ ಎಂದು ಕುಮಾರಸ್ವಾಮಿ ಆರೋಪಿಸಿದರು. “ಕರ್ನಾಟಕದಲ್ಲಿ ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ₹ 6,000 ಸಿಗುತ್ತಿತ್ತು. ಇದಕ್ಕೆ ಪೂರಕವಾಗಿ ಹಿಂದಿನ ಬಿಜೆಪಿ ಸರ್ಕಾರ ₹ 4000 ನೀಡಿತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಕೊಡುತ್ತಿದ್ದ ₹ 4000 ರದ್ದುಗೊಳಿಸಿದರು,” ಎಂದು ಹೇಳಿದರು. ರಾಜ್ಯದಲ್ಲಿ ವಿದ್ಯುತ್ ಅಭಾವದ ಬಗ್ಗೆ ಮಾತನಾಡಿದ ಅವರು, ಲಂಗಾಣದಲ್ಲಿ ರೈತ ಸಮುದಾಯಕ್ಕೆ 24 ಗಂಟೆಗಳ ನಿರಂತರ ವಿದ್ಯುತ್ ನೀಡಲಾಗುತ್ತದೆ, ಇಲ್ಲಿ ಅವರು ಐದು ಗಂಟೆಗಳ ವಿದ್ಯುತ್ ನೀಡುವುದಾಗಿ ಹೇಳುತ್ತಿದ್ದಾರೆ. ಆದರೆ ನಮ್ಮ ರಾಜ್ಯದ ರೈತರಿಗೆ 2 ಗಂಟೆಗಳ ಕಾಲ ಸರಿಯಾದ ವಿದ್ಯುತ್ ನೀಡುತ್ತಿಲ್ಲ” ಎಂದು…

Read More

ವಿಶ್ವಕಪ್ ಪ್ರಶಸ್ತಿ ಗೆಲ್ಲಲು ಭಾರತಕ್ಕೆ ಉತ್ತಮ ಅವಕಾಶ ಒದಗಿ ಬಂದಿದೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ. ಭಾರತ ತಂಡಕ್ಕೆ ಈ ಬಾರಿ ವಿಶ್ವಕಪ್‌ ನಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದಿದ್ದರೆ ಬಹುಶಃ ಇನ್ನು ಮೂರು ವಿಶ್ವ ಕಪ್ ಗಳಲ್ಲಿ ಕಾಯಬೇಕಾಗುತ್ತದೆ ಎಂದು ರವಿಶಾಸ್ತ್ರಿ ಲೆಕ್ಕಾಚಾರ ಮಾಡಿದ್ದಾರೆ. ತಂಡದ ಬಹುಪಾಲು ಆಟಗಾರರು ತಮ್ಮ ಉತ್ತುಂಗದಲ್ಲಿದ್ದಾರೆ. ಭಾರತಕ್ಕೆ ತಮ್ಮ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಲು ಉತ್ತಮ ಅವಕಾಶ ಈಗ ಒದಗಿ ಬಂದಿದೆ” ಎಂದು ಹೇಳಿದ್ದಾರೆ. ಆಡಮ್ ಗಿಲ್‌ಕ್ರಿಸ್ಟ್ ಮತ್ತು ಮೈಕೆಲ್ ವಾನ್ ಕೂಡ ಪಾಡ್‌ಕ್ಯಾಸ್ಟ್‌ನ ಭಾಗವಾಗಿದ್ದರು. ಭಾರತ ಕ್ರಿಕೆಟ್ ಹುಚ್ಚಿನಲ್ಲಿದ್ದು, 12 ವರ್ಷಗಳ ಹಿಂದೆ ಅವರು ಕೊನೆಯ ಬಾರಿಗೆ ವಿಶ್ವಕಪ್ ಗೆದ್ದಿದ್ದು, ಮತ್ತೊಮ್ಮೆ ಗೆಲ್ಲಲು ಅವಕಾಶವಿದೆ. ಆಡುತ್ತಿರುವ ರೀತಿ ನೋಡಿದರೆ ತಂಡಕ್ಕೆ ಉತ್ತಮ ಅವಕಾಶ ಒದಗಿ ಬಂದಿದೆ”ಎಂದು ಭಾರತದ ಮಾಜಿ ಮುಖ್ಯ ಕೋಚ್ ಹೇಳಿದರು. ಕೆಲ ಆಟಗಾರರಿಗೆ ಇದು ಕೊನೆಯ ವಿಶ್ವಕಪ್ ಆಗಿರಬಹುದು. ಅವರು ಆಡುವ ರೀತಿ, ಪರಿಸ್ಥಿತಿಗಳನ್ನು ಗಮನಿಸಿದರೆ, ಅವರು ಅದನ್ನು ಗೆಲ್ಲಲೆಂದೇ ತಂಡದಲ್ಲಿದ್ದಾರೆ” ಎಂದರು.…

Read More

ಬೆಂಗಳೂರು:- ದೇವನಹಳ್ಳಿವರೆಗೂ ಮೆಟ್ರೋ ವಿಸ್ತರಣೆ ಚರ್ಚೆ ಮಾಡಿದ್ದೇನೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪಟ್ಟಣಕ್ಕೆ ಮೆಟ್ರೋ ರೈಲು ಮತ್ತು ಕಾವೇರಿ ನೀರು ಒದಗಿಸಲು ಪ್ರಯತ್ನ ಮಾಡುತ್ತೇನೆ. ಸರ್ಕಾರದ ಹಂತದಲ್ಲೂ ಚರ್ಚೆ ಮಾಡಿದ್ದೇನೆ’ ಎಂದರು. ದೇವನಹಳ್ಳಿ ಜಿಲ್ಲಾ ಕೇಂದ್ರ ಸಂಬಂಧ ಮುಖ್ಯಮಂತ್ರಿ, ಡಿಸಿಎಂ ಮತ್ತು ಕಂದಾಯ ಸಚಿವರೊಂದಿಗೆ ಮಾತನಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು. ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರು ದೇವನಹಳ್ಳಿ ಬೀರಸಂದ್ರದ ಬಳಿ ಜಿಲ್ಲಾಡಳಿತ ಭವನ ನಿರ್ಮಿಸಿ, ಬೆಂಗಳೂರಿನಲ್ಲಿದ್ದ ಕಚೇರಿಗಳನ್ನು ಸ್ಥಳಾಂತರ ಮಾಡಿಸಿದ್ದಾರೆ. ಅವರ ಜೊತೆಗೆ ಈ ಕುರಿತು ಮಹತ್ವದ ಸಭೆ ನಡೆಸಿ ಮಾರ್ಗದರ್ಶನ ಪಡೆದುಕೊಳ್ಳುತ್ತೇನೆ ಎಂದು ಮಾಹಿತಿ ನೀಡಿದರು. ‘ನಾನು ನ್ಯಾಯವಾದಿಯಾಗಿದ್ದಾಗ ಅಂದಿನ ವಕೀಲರ ಪ್ರಯತ್ನದಿಂದ ರಾಜಕೀಯಕ್ಕೆ ಪಾದರ್ಪಣೆ ಮಾಡಿದೆ’ ಎಂದು ರಾಜಕೀಯ ಪ್ರವೇಶದ ದಿನವನ್ನು ಮೆಲಕು ಹಾಕಿದರು. ನ್ಯಾಯಾಲಯ ಸಂಕೀರ್ಣ ಸ್ಥಾಪನೆಗೆ ಇರುವ ತೊಡಕು ನಿವಾರಿಸಿಕೊಂಡರೇ ₹15 ಲಕ್ಷ ಅನುದಾನವನ್ನು ಕಟ್ಟಡ ನಿರ್ಮಾಣಕ್ಕೆ ನೀಡಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲೆಯಲ್ಲಿ…

Read More

ಈ ಹಿಂದೆ ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದರು. ಈಗ ಮರಳಿ ದೊಡ್ಮನೆಗೆ ಬಂದಿದ್ದಾರೆ. ಅವರು ಈವಾರ ಬಿಗ್ ಬಾಸ್​ನಿಂದ ಹೊರ ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಸೇವ್ ಆದ ಹೊರತಾಗಿಯೂ ಅವರು ಎಲಿಮಿನೇಟ್ ಆಗುತ್ತೇನೆ ಎಂದರು. ಹಿಂದಿ ಬಿಗ್ ಬಾಸ್​ನಲ್ಲಿ ಈ ರೀತಿ ಮಾಡಿದರೆ ದೊಡ್ಡ ದಂಡ ಕಟ್ಟಬೇಕಾಗುತ್ತದೆ. ಆ ಬಗ್ಗೆ ಇಲ್ಲಿದೆ ವಿವರ. ಪ್ರತಿ ವರ್ಷ ವೀಕ್ಷಕರು ಬಿಗ್ ಬಾಸ್​ಗಾಗಿ ಕಾಯುತ್ತಾರೆ. 3 ತಿಂಗಳ ಕಾಲ ನಡೆಯುವ ಈ ರಿಯಾಲಿಟಿ ಶೋನಲ್ಲಿ ಜಗಳ ಸಾಮಾನ್ಯ. ಬಿಗ್ ಬಾಸ್​ನ​ ವಿವಾದಾತ್ಮಕ ಶೋ ಎಂದೂ ಕರೆಯಲಾಗುತ್ತದೆ. ಭಾರತದಲ್ಲಿ ಬೇರೆ ಬೇರೆ ಭಾಷೆಗಳಲ್ಲಿ ಇದು ಪ್ರಸಾರ ಆಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಹಿಂದಿಯಲ್ಲಿ ಸಲ್ಮಾನ್ ಖಾನ್ ಈ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಸಲ್ಮಾನ್ ಪ್ರತಿ ಸೀಸನ್‌ಗೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ.ಅವರು ಸ್ಪರ್ಧಿಗಳ ಜೊತೆ ಕಠಿಣವಾಗಿ ನಡೆದುಕೊಳ್ಳುತ್ತಾರೆ. ಈ ವೇಳೆ ಕೆಲವರು ಶೋನಿಂದ ಅರ್ಧಕ್ಕೆ ಹೊರಹೋಗುವ…

Read More

ಕೋಲಾರ:- ಕುಡುಕ ಪೊಲಿಸಪ್ಪ ಕಂಠಪೂರ್ತಿ ಕುಡಿದು ಬಾರ್‌ ಸಿಬ್ಬಂದಿ ಮೇಲೆಯೇ ಹಲ್ಲೆಗೆ ಮಾಡಲು ಯತ್ನಿಸಿರು ಘಟನೆ ಕೋಲಾರದಲ್ಲಿ ನಡೆದಿದೆ. ಕುಡಿದು ರಂಪಾಟ ಮಾಡಿರುವ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ASI ನಾರಾಯಣಸ್ವಾಮಿ. ಕೋಲಾರ ನಗರದ ಬಂಗಾರಪೇಟೆ ಸರ್ಕಲ್ ನಲ್ಲಿರುವ ಸಾಮ್ರಾಟ್ ಅಶೋಕ ಬಾರ್ ಬಳಿ ನಡೆದಿರುವ ಘಟನೆ. ಕಳೆದ ರಾತ್ರಿ ನಡೆದ ಘಟನೆ. ಬಾರ್‌ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾನೂನು ಪರಿಪಾಲನೆ ಮಾಡಬೇಕಾದ ಪೋಲಿಸಪ್ಪನಿಂದಲೇ ಗುಂಡಾ ವರ್ತನೆ. ಕ್ಷುಲ್ಲಕ ವಿಚಾರಕ್ಕೆ ಅವಾಚ್ಯ ಶಬ್ದಗಳಿಂದ ನಿಂಧಿಸಿ ಕಲ್ಲಿನಿಂದ ಹೊಡೆಯಲು ಮುಂದಾಗಿದ್ದ ಎಎಸ್‌ಐ. ಗಲಾಟೆ ವಿಡಿಯೋ ಮೊಬೈಲ್‌ನಲ್ಲಿ ಸೆರೆ ಹಿಡಿದಿರುವು ಬಾರ್‌ ಸಿಬ್ಬಂದಿ. ಪೊಲೀಸಪ್ಪನ ವಿರುದ್ಧ ಶಿಸ್ತು ಕ್ರಮಕ್ಕೆ ಎಸ್‌ಪಿಗೆ ಕೋಲಾರ ಬಾರ್ ಅಸೋಸಿಯೇಷನ್ ಅಧ್ಯಕ್ಷ ಚಲಪತಿ ದೂರು ನೀಡಿದ್ದಾರೆ.

Read More

ಕಲಬುರಗಿ:- ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಬಿ ವೈ ವಿಜಯೇಂದ್ರ ರವರಿಗೆ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಅಭಿನಂದನೆ ಸಲ್ಲಿಸಿದ್ದಾರೆ. ಇಂದು ಬೆಂಗಳೂರು ನಿವಾಸಕ್ಕೆ ತೆರಳಿ ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದ್ರು.ಮಾತ್ರವಲ್ಲ ನಿಮ್ಮ ಅಧ್ಯಕ್ಷತೆಯಲ್ಲಿ ಬಿಜೆಪಿ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಶುಭ ಹಾರೈಸಿದರು..

Read More

ಬೆಂಗಳೂರು:- ಸಚಿವರೊಬ್ಬರು ಸಿಎಂ ಮನೆ ರಿನೋವೇಷನ್​ಗೆ ಫರ್ನಿಚರ್ ಕೊಟ್ಟಿದ್ದಾರಂತೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಿಎಂ ಮನೆಯಲ್ಲಿ ಕಾನ್ಫರೆನ್ಸ್ ಹಾಲ್ ಮಾಡಿದ್ದಾರೆ. ಅದಕ್ಕೆ‌ ಎಷ್ಟೋ ಖರ್ಚು ಮಾಡಿದ್ದಾರೋ?, ನಿಮ್ಮನ್ನೆಲ್ಲ ಒಳಗೆ ಬಿಟ್ಟಿದ್ದಾರೊ ಇಲ್ಲ ಗೊತ್ತಿಲ್ಲ, ಮೂರು ಕೋಟಿನೋ ಎಷ್ಟೋ, ಅದು ಬೇರೆ ಅಂತೆ. ಸರ್ಕಾರದ ದುಡ್ಡಲ್ಲ, ಸಚಿವರೊಬ್ಬರು ಸಿಎಂ ಮನೆ ರಿನೋವೇಷನ್​ಗೆ ಸ್ಟಾಂಗ್ಲೆ ಅಂತ ಫರ್ನಿಚರ್ ಕೊಟ್ಟಿದ್ದಾರಂತೆ. ಈ ಬಗ್ಗೆ ಸತ್ಯ ಹರಿಶ್ಚಂದ್ರರೇ ಉತ್ತರ ಕೊಡಬೇಕು. ಇದರ ಮೌಲ್ಯ 1.9 ಕೋಟಿ ಅಂತೆ ಒಂದು ಸೋಫಾ ಸೆಟ್” ಎಂದು ಹೆಚ್​ಡಿಕೆ ಆರೋಪಿಸಿದ್ದಾರೆ. “ಬಿಜೆಪಿ ಜೊತೆ ಜೆಡಿಎಸ್ ವಿಲೀನವಾಗಿ ನಾನು ಪ್ರತಿಪಕ್ಷ ನಾಯಕ ಆಗುವುದು ವದಂತಿ, ಬಿಜೆಪಿ ಜೊತೆ ಜೆಡಿಎಸ್ ವಿಲೀನ ಪ್ರಶ್ನೆ ಇಲ್ಲ, ನಮ್ಮ ಪಕ್ಷದ ಐಡೆಂಟಿಟಿ ಉಳಿಸಿಕೊಂಡಿದ್ದೇವೆ ಎನ್ ಡಿ.ಎ ನಲ್ಲಿ ಇದ್ದೇವೆ ಮುಂದುವರೆಯುತ್ತೇವೆ ಅಷ್ಟೆ” ಎಂದು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Read More