ಬೆಂಗಳೂರು: ಕೋವಿಶೀಲ್ಡ್ (Covishield) ಅಥವಾ ಕೊವ್ಯಾಕ್ಸಿನ್ (Covaxin) 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ. ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು 60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ. ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ? ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660,…
Author: AIN Author
ತೀರ್ಥಹಳ್ಳಿ : ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಗೆ ಇ.ಡಿ ಅಧಿಕಾರಿಗಳು ಡೌಡಾಯಿಸಿದ್ದು ಪ್ರತಿಷ್ಠಿತ ಸಂಸ್ಥೆಯ ಮೇಲೆ ದಾಳಿ ನೆಡೆಸಿದ್ದಾರೆ. ಪ್ರಖ್ಯಾತ ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್ ಹಾಗೂ ಇಂಡಿಯನ್ ಗ್ಯಾಸ್ ಗೋಡನ್, ಹಾಗೂ ನ್ಯಾಷನಲ್ ಸಂಸ್ಥೆಯ ಮಾಲೀಕರ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನೆಡೆಸುತ್ತಿದ್ದಾರೆ. https://ainlivenews.com/benefits-of-eating-black-dry-grapes/ ತಾಲೂಕಿನ ಹಾಗೂ ರಾಜ್ಯದ ಹಲವೆಡೆ ರಸ್ತೆಯ ಕಾಮಗಾರಿಗಳನ್ನು ಈ ಸಂಸ್ಥೆಯೇ ವಹಿಸಿಕೊಳ್ಳುತ್ತಿದ್ದು ಈ ಎಲ್ಲಾ ಕಾರಣಗಳಿಂದ ಹಣದ ವಿಚಾರದಲ್ಲಿ ಲೋಪ ಕಂಡು ಬಂದಿದ್ದಲ್ಲಿ ಅಧಿಕಾರಿಗಳು ದಾಳಿ ನೆಡೆಸಿರುವ ಶಂಕೆಯಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ಬರಬೇಕಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಹಾಗು ಸಂಸದರಾದ ಸದಾನಂದ ಗೌಡ ಅವರನ್ನು ಇಂದು ವಿಜಯೇಂದ್ರ ಅವರು ಭೇಟಿ ಮಾಡಿದರು. ಬೆಂಗಳೂರು ನಿವಾಸಕ್ಕೆ ಭೇಟಿ ಕೊಟ್ಟು ಬಿಜೆಪಿ ರಾಜ್ಯ ಅಧ್ಯಕ್ಷರಾದ ವಿಜಯೇಂದ್ರ ಅವರು ಹೊಸ ವರ್ಷದ ಶುಭಾಶಯ ಕೋರಿದರು
ಧಾರವಾಡ: ಧಾರವಾಡದಲ್ಲಿರುವ ಕೆಐಎಡಿಬಿಯಲ್ಲಿ ನಡೆದಿರುವ ಹಗರಣ ಬಗೆದಷ್ಟು ಬಯಲಾಗುತ್ತಲೇ ಇದೆ. ಇತ್ತೀಚೆಗಷ್ಟೇ ಈ ಕೆಐಎಡಿಬಿಯಿಂದ ಅಂದಾಜು 20 ಕೋಟಿಯಷ್ಟು ಅವ್ಯವಹಾರ ನಡೆದಿರುವ ಬಗ್ಗೆ ಈ ಹಿಂದೆ ದಾಖಲೆ ಬಿಡುಗಡೆ ಮಾಡಿದ್ದ ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ, ಈ ಕುರಿತ ತನಿಖೆ ನಡೆಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಇದೀಗ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ವೀಕ್ ಚಾರ್ಜ್‌ಶೀಟ್ ಸಲ್ಲಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಹೌದು! ಈ ಹಿಂದೆ ಕೆಐಎಡಿಬಿಯಲ್ಲಿನ ಕೆಲ ಅಧಿಕಾರಿಗಳು 20 ಕೋಟಿ ಹಣವನ್ನು ಡಬಲ್ ಪೇಮೆಂಟ್ ಆಗಿ ಮಾಡಿಕೊಂಡಿದ್ದರು. ಈ ಸಂಬಂಧ ದಾಖಲೆಗಳನ್ನು ಸಹ ಕೊರವರ ಬಿಡುಗಡೆ ಮಾಡಿದ್ದರು. ಬಹುಕೋಟಿ ಹಗರಣ ಇದಾಗಿದ್ದರಿಂದ ಸಿಐಡಿ ಅಧಿಕಾರಿಗಳು ಈ ಪ್ರಕರಣವನ್ನು 9 ತಿಂಗಳು ತನಿಖೆ ಮಾಡಿದ್ದರು. ಅಲ್ಲದೇ ಈ ಸಂಬಂಧ ತನಿಖಾಧಿಕಾರಿ ಎಲ್.ಆರ್.ಅಗ್ನಿ ಅವರು 2 ಸಾವಿರ ಪುಟಗಳುಳ್ಳ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಆದರೆ, ಅವರು ಸಲ್ಲಿಸಿರುವ ಚಾರ್ಜ್‌ಶೀಟ್ ವೀಕ್ ಆಗಿದ್ದು, ಹಲವರನ್ನು…
ಚಳ್ಳಕೆರೆ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಚಳ್ಳಕೆರೆ ನಗರದ ಹೊರಹೊಲಯದಲ್ಲಿ ಸಂಭವಿಸಿದೆ. ತಾಲೂಕಿನ ಸಿದ್ದಾಪುರ ಗ್ರಾಮದ ರಂಗಸ್ವಾಮಿ(40)ಸಾವಿಗೀಡಾದ ಮೃತ ದುರ್ದೈವಿ. ಬಳ್ಳಾರಿ- ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು ರಸ್ತೆಯ ಸೇತುವೆ ಬಳಿ . ರಂಗಸ್ವಾಮಿ ಚಳ್ಳಕೆರೆ ಯಿಂದ ಸಿದ್ದಾಪುರ ಗ್ರಾಮಕ್ಕೆ ಹೋಗುವ ವೇಳೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಟಿವಿಎಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಸೇತುವೆ ಮೇಲಿಂದ ಬಿದ್ದು ಪಲ್ಟಿಯಾಗಿದ್ದು, ಲಾರಿ ಚಾಲಕ,ಹಾಗೂ ಕ್ಲಿನರ್ ಪ್ರಾಣಾಪಯಾದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಚಳ್ಳಕೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವರದಿ: ಪುರ್ಲೆಹಳ್ಳಿ ಹನುಮಂತರಾಜು
ಧಾರವಾಡ: ಧಾರವಾಡದ ನಗರ ಪ್ರದೇಶದಲ್ಲಿ ಎರಡು ಹೆಚ್ಚುವಾರಿಯಾಗಿ ಪೊಲೀಸ್ ಠಾಣೆ ನಿರ್ಮಿಸಲು ಅಗ್ರಹಿಸಿ, ಧಾರವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಯ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಕರ್ನಾಟಕ ರಕ್ಷಣಾ ವೇದಿ ಪ್ರವೀಣ ಶೆಟ್ಟಿ ಬಣದ ಬೆಳಗಾವಿ ವಿಭಾಗಿ ಮಾಟ್ಟ ಹಾಗೂ ಧಾರವಾಡ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಬೇಕೇ ಬೇಕು ಹೆಚ್ಚುವರಿ ಪೊಲೀಸ್ ಠಾಣೆ ಬೇಕು ಎಂದು ಘೋಷಣೆ ಕೂಗಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು. ಈಗಾಗಲೇ ಧಾರವಾಡ ನಗರ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಉತ್ತರ ಕರ್ನಾಟಕದ ವಿದ್ಯಾಕಾಶಿಯಾಗಿರುವ ಜಿಲ್ಲಾ ಕೇಂದ್ರಕ್ಕೆ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಅರಸಿ ಬರುತ್ತಾರೆ. ಅಲ್ಲದೆ ಈ ನಗರ ಸಾಹಿತಿಗಳ ತವರೂರುಬೆಂದು ಕರೆಯಿಸಿಕೊಳ್ಳುತ್ತದೆ. ಈಗಿರುವ ಪೊಲೀಸ್ ಠಾಣೆಗೆ ಹೆಚ್ಚಿನ ಜವಾಬ್ದಾರಿ ಬೀಳುತ್ತಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಒಂದು ಲಾ ಆ್ಯಂಡ್ ಆರ್ಡ್ ಪೊಲೀಸ್ ಬಠಾಣೆ ಹಾಗೂ ಇನ್ನೊಂದು ಸಂಚಾರಿ ಪೊಲೀಸ್…
ಬೆಂಗಳೂರು : ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಇಂದು ಭೇಟಿಯಾದರು. ನಗರದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಹೊಸ ವರ್ಷದ ಶುಭಾಶಯಗಳನ್ನ ಕೋರಿದರು. ಡಿಕೆ ಶಿವಕುಮಾರ್ ಅವರನ್ನ ಮಂಗಳವಾರ ಬೆಳಗ್ಗೆ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದ ಪೊಲೀಸ್ ಕಮಿಷನರ್ ಬಿ ದಯಾನಂದ ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಅನುಚೇತ್, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಲಕ್ನೋ: ಶ್ರೀರಾಮನ ಭಕ್ತರಿಗೆ ಮಾತ್ರ ರಾಮಲಲ್ಲಾ ಪ್ರತಿಷ್ಠಾಪನೆಗೆ ಆಹ್ವಾನ ನೀಡಲಾಗಿದೆ ಎಂದು ಅಯೋಧ್ಯೆ ರಾಮಮಂದಿರದ (Ayodhya Ram Mandir) ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಹೇಳಿದ್ದಾರೆ. ಈ ಮೂಲಕ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆಯವರು (Uddhav Thackeray) ನೀಡಿದ್ದ ಹೇಳಿಕೆಗೆ ಅವರು ತಿರುಗೇಟು ನೀಡಿದ್ದಾರೆ. ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ ಎಂದು ಇತ್ತೀಚೆಗೆ ಉದ್ಧವ್ ಠಾಕ್ರೆ ಹೇಳಿದ್ದರು. ಈ ಹೇಳಿಕೆಗೆ ಆಚಾರ್ಯ ಸತ್ಯೇಂದ್ರ ದಾಸ್ ಪ್ರತಿಕ್ರಿಯೆ ನೀಡಿದ್ದು, ರಾಮನ ಭಕ್ತರಿಗೆ ಮಾತ್ರ ಆಹ್ವಾನ ನೀಡಲಾಗುತ್ತದೆ. ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂಬ ಮಾತು ತಪ್ಪು. ಪ್ರಧಾನಿ ನರೇಂದ್ರ ಮೋದಿಯವರು ಅಪಾರ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಇದು ಅವರ ರಾಜಕೀಯವಲ್ಲ, ಭಕ್ತಿ ಎಂದಿದ್ದಾರೆ. https://ainlivenews.com/benefits-of-eating-black-dry-grapes/ ಉದ್ಧವ್ ಠಾಕ್ರೆಯವರು, ರಾಮ ಮಂದಿರ ಉದ್ಘಾಟನೆಗೆ ನನಗೆ ಯಾವುದೇ ಆಹ್ವಾನ ಬಂದಿಲ್ಲ. ಅಲ್ಲಿಗೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ. ರಾಮ ಯಾವುದೇ ಪಕ್ಷದ ಆಸ್ತಿಯಲ್ಲ,…
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇರೋದು ಹಿಂದೂ ವಿರೋಧಿ ಸರ್ಕಾರ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಅಂತ ಪದೇ ಪದೇ ನೆನಪು ಮಾಡಿಕೊಡುವ ಕೆಲಸ ಮಾಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ಹುಬ್ಬಳ್ಳಿಯಲ್ಲಿ 30 ವರ್ಷದ ಹಳೇ ಕೇಸನ್ನ ರೀ ಓಪನ್ ಮಾಡಿ ಶ್ರೀಕಾಂತ್ ಪೂಜಾರಿ ಅವರನ್ನ ಅರೆಸ್ಟ್ ಮಾಡಿರೋಧನ್ನ ಬಿಜೆಪಿ ವಿರೋಧಿಸುತ್ತೆ. ಇಡೀ ದೇಶದಲ್ಲಿ ಕೋಟ್ಯಾಂತರ ಹಿಂದೂ ಕಾರ್ಯಕರ್ತರು ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಟಾಪನೆ ಸಂಧರ್ಭದಲ್ಲಿ ಆಯ್ಕೆ ಮಾಡಿಕೊಂಡಿದೆ ಎಂದು ಹೇಳಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಇಡೀ ದೇಶಕ್ಕೇ ತೋರಿಸಿದ್ದಾರೆ ಬಿಜೆಪಿ ಇದನ್ನ ಬಲವಾಗಿ ಖಂಡಿಸುತ್ತೆ ಅರುಣ್ ಯೋಗರಾಜ್ ರಾಮನ ಶಿಲೆ ಕೆತ್ತಿದ್ದಾರೆ ಅಂತ ಸಂತೋಷ ಪಟ್ಟಿದ್ದೆವು ಇಂತಹ ಸಂದರ್ಭಗಳಲ್ಲಿ ಸರ್ಕಾರ ಬಂಧನ ಮಾಡುವ ಕೆಲಸ ಮಾಡಿದೆ ಎಂದರು. ನಾಳೆ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡ್ತಿದ್ದೇನೆ ಬೆಂಗಳೂರಿನ ಪ್ರೀಡಂಪಾರ್ಕ್ ನಲ್ಲಿ…
ಶಿವಮೊಗ್ಗ:- ಸತ್ತವರ ಹೆಸರಲ್ಲಿ ಹಣ ತಿಂದವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೋವಿಡ್ ವೇಳೆ ಸತ್ತವರ ಹೆಸರಲ್ಲಿ ₹40 ಸಾವಿರ ಕೋಟಿ ಭ್ರಷ್ಟಾಚಾರ ಮಾಡಿರುವ ಬಿಜೆಪಿಯವರಿಗೆ ಚೆಕ್ ಬೌನ್ಸ್ ನೆಪದಲ್ಲಿ ನನ್ನ ರಾಜೀನಾಮೆ ಕೇಳುವ ನೈತಿಕತೆ ಇದೆಯೇ’ ಎಂದರು. ಕೋವಿಡ್ ಸಂದರ್ಭದಲ್ಲಿನ ಭ್ರಷ್ಟಾಚಾರದ ಬಗ್ಗೆ ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪ ಮಾಡಿದ್ದಾರೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಹೆಸರು ಕೇಳಿ ಬಂದಿದೆ. ಹಾಗಿದ್ದರೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನನ್ನ ರಾಜೀನಾಮೆ ಕೇಳುವುದು ಹಾಸ್ಯಾಸ್ಪದ’ ಎಂದರು. ‘ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ ಮಧು ಬಂಗಾರಪ್ಪ, ದಮ್ಮು, ತಾಕತ್ತು ಇದ್ದರೆ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪಗಳಿಗೆ ವಿಜಯೇಂದ್ರ ಉತ್ತರಿಸಲಿ’ ಎಂದು ಒತ್ತಾಯಿಸಿದರು. ‘ನಮ್ಮ ತಂದೆಯ ವಿರುದ್ಧ…