ಶಿವಮೊಗ್ಗ: ಸಿದ್ದರಾಮಯ್ಯನವರು ನಿಮಿಷಕ್ಕೊಂದು ಮಾತನಾಡ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ, ರಾಮ ಎರಡೂ ಇದೆ. ನೀವೇಕೆ ಬಿಜೆಪಿ ರಾಮಮಂದಿರ ಅಂತ ಅಂದುಕೊಳ್ತೀರಾ? ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa), ಸಿಎಂ ವಿರುದ್ಧ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗದಲ್ಲಿ (Shivamogga) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಅನಂತಕುಮಾರ್ ಹೇಳಿರೋದ್ರಲ್ಲಿ ತಪ್ಪಿಲ್ಲ. ಏಕೆಂದರೆ ಮಂಡ್ಯದ ಶ್ರೀರಂಗಪಟ್ಟಣ, ಕಾರವಾರ ಜಿಲ್ಲೆಯಲ್ಲಿ ದೇವಸ್ಥಾನ ಒಡೆದು ಮಸೀದಿ (Mosque) ಕಟ್ಟಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಸ್ವಾಗತ ಮಾಡಬೇಕಾ? ಎಂದು ಪ್ರಶ್ನಿಸಿದ್ದಾರೆ. https://ainlivenews.com/rowdysheeter-arrested-by-kylie-machi-and-shouting-at-a-woman/ ಸಿದ್ದರಾಮಯ್ಯ ಅವರು ಮೋದಿ (Modi) ಬಗ್ಗೆ ಏಕವಚನದಲ್ಲಿ ಮಾತನಾಡ್ತಾರೆ. ಒಮ್ಮೆ ಅಯೋಧ್ಯೆಗೆ ಹೋಗಲ್ಲ ಅಂದಿದ್ದರು. ಈಗ ಜ.22ರ ನಂತರ ಹೋಗ್ತೀನಿ ಅಂತಾರೆ. ನಿಮಿಷಕ್ಕೊಂದು ಮಾತನಾಡ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ ರಾಮ ಎರಡೂ ಇದೆ, ರಾಮ ಮಂದಿರಕ್ಕೆ ಹೋಗಿ ನಿಮ್ಮ ಪಾಪ ಕಳೆದುಕೊಂಡು ಬನ್ನಿ ಎಂದು ಟಾಂಗ್ ಕೊಟ್ಟಿದ್ದಾರೆ.
Author: AIN Author
ಬೆಂಗಳೂರು: ನಗರದ ಮನೆಯೊಂದರಲ್ಲಿ ಅಗ್ನಿ ಅವಘಡ ಕಾಣಿಸಿಕೊಂಡಿರುವ ಘಟನೆ ಆರ್.ಟಿ.ನಗರದಲ್ಲಿ ನಡೆದಿದೆ. ಎರಡನೇ ಮಹಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಆಗಿದ್ದು ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಇಲ್ಲ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮನವಾಗಿದ್ದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ ತೌಸಿಫ್ ಎಂಬುವವರಿಗೆ ಸೇರಿದ ಮನೆಯಾಗಿದ್ದು ವಾಷಿಂಗ್ ಮಷಿನ್,ಟಿವಿ,ಫ್ರಿಡ್ಜ್ ಸೇರಿ ಎಲ್ಲಾ ವಸ್ತು ಸುಟ್ಟು ಕರಕಲುವಾಗಿದೆ ಹಾಗೆ ಮನೆಯಲ್ಲಿದ್ದ ವಸ್ತು ಸಂಪೂರ್ಣ ಸುಟ್ಟು ಕರಕಲು ಈ ವೇಳೆ ಮನೆಯಲ್ಲಿ ಸಿಲುಕಿದ್ದ ಇಬ್ನರು ಮಕ್ಕಳ ರಕ್ಷಣೆ ಮಾಡಿದ ಸಿಬ್ಬಂದಿ!
ಬೆಂಗಳೂರು : ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ಕುರಿತ ವಿವಾದಾತ್ಮಕ ಹೇಳಿಕೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಮೊದಲೇ ರಾಜಕಾರಣಿಗಳು ಅಂದ್ರೆ ಜನ ನಂಬಲ್ಲ, ಅಂಥ ಪರಿಸ್ಥಿತಿ ಇದೆ. ಯಾರೇ ಇದ್ದರೂ ನಮ್ಮ ಹೇಳಿಕೆ ಗಂಭೀರವಾಗಿರಬೇಕು. ಸಮಾಜ ಒಪ್ಪುವಂತೆ ಮಾತು ಇರಬೇಕು. ಅನಂತ್ ಕುಮಾರ್ ಹೆಗಡೆ ಹೇಳಿಕೆಗಳನ್ನು ನಾನೂ ಗಮನಿಸಿದ್ದೇನೆ. ನಾನು ಅವರ ಜತೆಗೂ ಇದರ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ. ಅನಂತ್ ಕುಮಾರ್ ಅವರು ಹೇಳಿರೋದೆಲ್ಲ ಅವರ ವೈಯಕ್ತಿಕ ಅಭಿಪ್ರಾಯಗಳು. ಇದಕ್ಕೂ ಪಕ್ಷಕ್ಕೂ ಸಂಬಂಧ ಕಲ್ಪಿಸುವುದು ಬೇಡ. ಇದರ ಬಗ್ಗೆ ಅವರ ಜತೆ ವೈಯಕ್ತಿಕವಾಗಿ ಮಾತನಾಡುತ್ತೇನೆ. ರಾಜಕಾರಣಿಗಳು ಅಂದ್ರೆ ನೋಡುವ ದೃಷ್ಟಿ ಬದಲಾಗಿದೆ. ಯಾರೇ ಆದರೂ ಕೊಡುವ ಹೇಳಿಕೆ ಎಲ್ಲರೂ ಒಪ್ಪುವಂತಿರಬೇಕು ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಹಾವೇರಿ: ಹಾನಗಲ್ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಹಾವೇರಿ ಜಿಲ್ಲೆಯಲ್ಲಿಂದು ಆಯೋಜನೆಗೊಂಡಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಹಾನಗಲ್ ಗ್ಯಾಂಗರೇಪ್ ಪ್ರಕರಣದ ಸಂತ್ರಸ್ತೆಯನ್ನೂ ಭೇಟಿ ಮಾಡಿ ಸಮಸ್ಯೆಗಳನ್ನ ಆಲಿಸಿದರು. ಪೊಲೀಸರಿಂದ ತನಿಖೆ ಬೆಳವಣಿಗೆ ಮಾಹಿತಿ ಪಡೆದರು. ಇದೇ ವೇಳೆ ಸಂತ್ರಸ್ತೆಯ ಸಂಬಂಧಿಕರನ್ನು ಭೇಟಿಯಾಗಿ ಮನವಿ ಸ್ವೀಕರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗ ಳನ್ನೂ ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ, ಯಾರನ್ನೂ ಕಾನೂನು ಕೈಗೆ ತೆಗೆದುಕೊಳ್ಳೋದಕ್ಕೆ ಬಿಡೋದಿಲ್ಲ. ಯಾವುದೇ ಧರ್ಮಕ್ಕೆ ಸೇರಿದವರಾಗಲಿ ಜಾತಿಗೆ ಸೇರಿದವರಾಗಿದ್ದರೂ ಕ್ರಮ ಗ್ಯಾರಂಟಿ. ಈ ಕೇಸ್‌ನಲ್ಲಿ ಯಾರೇ ಕಾನೂನು ಕೈಗೆ ತೆಗೆದುಕೊಂಡಿದ್ದರೂ ಶಿಕ್ಷೆ ಕೊಡಿಸ್ತೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ದಾವಣಗೆರೆ: ಬೊಲೆರೋ ವಾಹನ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಚಿನ್ನಿಕಟ್ಟಿ ಎಂಬಲ್ಲಿ ನಡೆದಿದೆ. ಭದ್ರಾವತಿಯ ಚಂದನಕೆರೆ ಗ್ರಾಮದ ನಾಗರಾಜ್(38), ಮಂಜುನಾಥ್(45), ಗೌತಮ್(17) ಮೃತ ದುರ್ದೈವಿಗಳು. ಅಡಿಕೆ ಕೊಯ್ಲು ಮುಗಿಸಿ ವಾಪಾಸ್ ಬರುವಾಗ ರಸ್ತೆಗೆ ಹಸು ಅಡ್ಡ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಪಲ್ಟಿಯಾಗಿದೆ. ಬೊಲೆರೋ ವಾಹನದಡಿ ಸಿಲುಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಆರು ಮಂದಿ ಗಾಯಗೊಂಡಿದ್ದಾರೆ. ನ್ಯಾಮತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ನಟ ದರ್ಶನ್ ಅಭಿನಯದ ‘ಕಾಟೇರ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿರುವ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಅವರು ಮಕರ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ‘ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮಕರ ಸಂಕ್ರಾಂತಿಯ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.
ಕೋಲಾರ: ಜಿಲ್ಲೆಯ ಅಬಕಾರಿ ಪೊಲೀಸರ ಮಹತ್ ಕಾರ್ಯಚರಣೆ ನಡೆಸಿದ್ದು ನಗರದ ಎರಡು ಕಡೆ 1,300 ಗ್ರಾಂ ಗಾಂಜಾ ವನ್ನು ಜಪ್ತಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಬೆಂಗಳೂರು ದಕ್ಷಿಣ ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ರಮೇಶ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯನ್ನು ನಡೆಸಿದ್ದು ಅಪಾರ ಪ್ರಮಾಣದ ಗಾಂಜಾ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ. ಕೋಲಾರ ತಾಲ್ಲೂಕಿನ ಶ್ರೀನಿವಾಸಪುರ ಕೋಲಾರ ರಸ್ತೆಯ ಮಹರ್ಷಿ ಸ್ಕೂಲ್ ಬಳಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ 800 ಗ್ರಾಂ ಹೂ ಮತ್ತು ಬೀಜಗಳಿಂದ ಕೂಡಿದ ಒಣ ಗಾಂಜಾ ಸೊಪ್ಪನ್ನು ಹೊಂದಿ ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಿದ್ದು ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಹಿಡಿದಿದ್ದಾರೆ . ಹಾಗೆ ಕೋಲಾರದ ಮೂರಂಡಹಳ್ಳಿ ಕ್ರಾಸ್ ಬಳಿ ಕೂಡ ಪೊಲೀಸರು ದಾಳಿ ನಡೆಸಿದ್ದು ಸುಮಾರು 400 ಗ್ರಾಂ ಹೂ ಮತ್ತು ಬೀಜದಿಂದ ಕೂಡಿರುವ ಒಣ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಹೊಂದಿರುವುದನ್ನು ಪತ್ತೆ ಹಚ್ಚಿ ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತರಿಂದ ಕೃತ್ತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳು, ಜಪ್ಪಿ…
ಬೆಂಗಳೂರು: ದಕ್ಷತೆಗೆ ಹೆಸರಾದ ಬೆಂಗಳೂರು ಪೊಲೀಸರಿಂದ ಮಹಾಯಡವಟ್ಟು ಮಹತ್ವದ ವಿಚಾರಗಳಲ್ಲೂ ಹೀಗ್ ಮಾಡುದ್ರೆ ಹೇಗೆ ಪೊಲೀಸರೇ..? ಸಮಾಜಕ್ಕೆ ಮಾದರಿಯಾಗೋ ಕಾರ್ಯಕ್ರಮದಲ್ಲಿ ಪೊಲೀಸರು ಮಾಡಿದ್ದೇನು ಗೊತ್ತಾ..? ಡ್ರಗ್ ಜಾಗೃತಿ ಕಾರ್ಯಕ್ರಮದಲ್ಲಿ ಪೊಲೀಸರ ಯಡವಟ್ಟುಡ್ರಗ್ ಕನ್ಸೂಮ್ ಮಾಡಿದ್ದವರಿಂದಲೇ ಜಾಗೃತಿ ಕಾರ್ಯಕ್ರಮ ಮಾಡಿಸಿದ್ರಾ ಪೊಲೀಸ್ರು.. ಬೆಂಗಳೂರು ನಗರದಲ್ಲಿ ಡ್ರಗ್ಸ್ ಕುರಿತಾಗಿ ಜಾಗೃತಿ ಮೂಡಿಸುತ್ತಿರುವ ನಗರ ಪೊಲೀಸರು ನಗರದ ಪ್ರತೀ ಡಿವಿಷನ್ ನಲ್ಲೂ SAY NO TO DRUGS (ಮಾದಕ ವಸ್ತು ನಮಗೆ ಬೇಡ) ಎಂಬ ಜಾಗೃತಿ ಕಾರ್ಯಕ್ರಮ ಮಾಡುತ್ತಿರುವ ಪೊಲೀಸರು… ಕಳೆದ ಭಾನುವಾರ ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರಿಂದಲೂ ಜಾಗೃತಿ ಈ ಜಾಗೃತಿ ಕಾರ್ಯಕ್ರಮದಲ್ಲಿ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು ಹಾಗೆ ಜಾಗೃತಿ ಕಾರ್ಯಕ್ರಮದಲ್ಲಿ ನಟ ದಿಗಂತ್ ಸಹ ಭಾಗವಹಿಸಿ ಭಾಷಣ ಮಾಡಿದ್ದರು.ಆದ್ರೆ ನಟ ದಿಗಂತ್ ಈ ಹಿಂದೆ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸಿದ್ದರೂ ಅದ್ರಲ್ಲೂ ಸೆಲೆಬ್ರಿಟಿಗಳ ಡ್ರಗ್ ಕೇಸ್ ನಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ನಟ.. ಈ ವೇಳೆ ಡ್ರಗ್ ಸೇವಿಸೋದಾಗಿ…
ಸಂಕ್ರಾಂತಿ ಸಂಭ್ರಮಕ್ಕೆ ನೋ ಎಲಿಮಿನೇಷನ್ ಸಿಹಿ ಕೊಟ್ಟಿರುವ ಬಿಗ್‌ಬಾಸ್, ಹೊಸ ವಾರಕ್ಕೆ ಸ್ಪರ್ಧಿಗಳಿಗೆ ಹೊಸ ಹೊಸ ಟಾಸ್ಕ್‌ಗಳನ್ನು ನೀಡುತ್ತಿದ್ದಾರೆ. ಸದಸ್ಯರ ನಡುವಿನ ಸ್ಪರ್ಧೆಯ ತುರುಸನ್ನು ಹೆಚ್ಚಿಸುವ ಬೆಂಕಿ ಚಟುವಟಿಕೆಯೊಂದು ಮನೆಯೊಳಗೆ ನಡೆದಿದೆ. JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಅದರ ಝಲಕ್ ಜಾಹೀರಾಗಿದೆ. ‘ಈ ವಾರದ ನಾಮಿನೇಷನ್‌ನಲ್ಲಿ ನಿಮ್ಮೊಳಗಿರುವ ಗೆಲುವಿನ ಕಿಚ್ಚಿಗೆ ಇಬ್ಬರುಸದಸ್ಯರು ಬಲಿಯಾಗಬೇಕು’ ಎಂದು ಹೇಳಿದ್ದಾರೆ. ಎದುರಿಗೆ ಧಗದಹಿಸಿ ಉರಿಯುತ್ತಿರುವ ಬೆಂಕಿಗೆ ತಾವು ಇಚ್ಛಿಸಿರುವ ಇಬ್ಬರು ಸದಸ್ಯರ ಫೊಟೊಗಳನ್ನು ಹಾಕಬೇಕು. ಮನೆಯೊಳಗೇ ರೂಪುಗೊಂಡಿರುವ ಬಾಂಧವ್ಯವೆಲ್ಲವೂ ಈ ಬೆಂಕಿಯಲ್ಲಿ ಹಾದು ಬಣ್ಣ ಬದಲಿಸಿಕೊಳ್ಳುತ್ತಿವೆ. ಕೆಲವು ಉರಿದು ಬೂದಿಯಾಗುತ್ತಿವೆ. ಕೆಲವು ಕರಕಲಾಗುತ್ತಿವೆ. ಯಾವುದಾದರೂ ಬೆಂಕಿಯಲ್ಲಿ ಬೆಂದು ಅಪ್ಪಟ ಚಿನ್ನವಾಗಿ ಹೊರಬರಲಿವೆಯೇ ಎಂದು ಕಾದು ನೋಡಬೇಕಿದೆ. ಸಂಗೀತಾ, ಪ್ರತಾಪ್ ಅವರ ಫೋಟೊವನ್ನು ಬೆಂಕಿಗೆ ಎಸೆದಿದ್ದಾರೆ. ‘ನಾನು ಇದುವರೆಗೆ ನೋಡಿರುವ ಪ್ರತಾಪ್ ಬೇರೆಯೇ, ಈಗ ನೋಡ್ತಿರೋ ಪ್ರತಾಪ್ ಬೇರೆಯೇ. ಹಾಗಾಗಿ ಅವರನ್ನು ನಾಮಿನೇಟ್ ಮಾಡುತ್ತೇನೆ’ ಎಂದು ಸಂಗೀತಾ ವಿವರಣೆ ನೀಡಿದ್ದಾರೆ. ತುಕಾಲಿ ಸಂತೋಷ್ ಮತ್ತು ತನಿಷಾ ಇಬ್ಬರೂ…
ಚಾಮರಾಜನಗರ: ಮಕರ ಸಂಕ್ರಾಂತಿ ಹಬ್ಬದಂದು ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ನಿವಾಸಿಗಳಾದ ಸಂತೋಷ್(32), ಸೌಮ್ಯ(27) ನಿತ್ಯಸಾಕ್ಷಿ (4) ಅಭಿ(9) ಮೃತ ದುರ್ದೈವಿಗಳು. ಪಾಳ್ಯದ ಗ್ರಾಮದ ಮೃತ ಕುಟುಂಬದವರು ಹೊಸ ಬಟ್ಟೆ ಖರೀದಿಸಲು ಕೊಳ್ಳೇಗಾಲಕ್ಕೆ ತೆರಳುತ್ತಿದ್ದವರು ಈ ವೇಳೆ ಭತ್ತ ಕಟಾವು ಮಾಡುವ ಲಾರಿಯು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.