ವಿಜಯಪುರ:- ಮಾಜಿ ಸಚಿವ ಹೆಚ್.ಆಂಜನೇಯ ಅಂತಹ ಅವಿವೇಕಿ ಮತ್ತೊಬ್ಬನಿಲ್ಲ ಎಂದು ಯತ್ನಾಳ್ ಕಿಡಿಕಾರಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಹಿಂದೆ ಸಚಿವರಾಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ. ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ಪೂಜಾ ಕೈಂಯರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಕುರಿತು ಹೆಚ್.ಆಂಜನೇಯನವರು, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು ಹೋಗಿ ಯಾಕೆ ಪೂಜಿಸಬೇಕು ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ ಬಸನಗೌಡ ಪಾಟೀಲ್ ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ತಿರುಗೇಟು ಕೊಟ್ಟಿದ್ದಾರೆ. 1992ರಲ್ಲಿ ಕರಸೇವಕರಾಗಿ ಶ್ರೀ ರಾಮ ದೇವರ ಸೇವೆ ಮಾಡಿದ ಭಕ್ತರಿಗೆ, ಕಾರ್ಯಕರ್ತರಿಗೆ ಈಗ ನೋಟೀಸ್ ನೀಡಿ ಹುಬ್ಬಳ್ಳಿ ಪೊಲೀಸರು ಬಂಧನ ಮಾಡುವುದಾಗಿ ಬೆದರಿಸುತ್ತಿರುವುದು…
Author: AIN Author
ಬೆಂಗಳೂರು: ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್‌ಗೆ ಮಹಿಳೆಯೊಬ್ಬರು ಜಿಗಿದ ಆಘಾತಕಾರಿ ಘಟನೆ ಹೊಸ ವರ್ಷದಂದೇ ಬೆಂಗಳೂರಿನ (Bengaluru) ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ (Namma Metro) ನಡೆದಿದೆ. ನಿನ್ನೆ ಸಂಜೆ 6:40 ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್‌ನಲ್ಲಿ ಮಹಿಳೆ ಮೆಟ್ರೋಗಾಗಿ ಕಾದು ನಿಂತಿದ್ದರು. ಈ ವೇಳೆ ಅವರ ಕೈಯಿಂದ ಮೊಬೈಲ್ ಮೆಟ್ರೋ ಟ್ರ್ಯಾಕ್ ಕೆಳಗೆ ಬಿದ್ದಿದೆ. ಅದನ್ನು ಎತ್ತಿಕೊಳ್ಳಲು ಮಹಿಳೆ ಟ್ರ್ಯಾಕ್‌ಗೆ ಜಿಗಿದಿದ್ದಾರೆ. ತಕ್ಷಣ ಎಚ್ಚೆತ್ತ ಮೆಟ್ರೋ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. BMRCL ಸಿಬ್ಬಂದಿಯ ಮುಂಜಾಗ್ರತೆಯಿಂದ ಭಾರಿ ಅನಾಹುತ ತಪ್ಪಿದೆ. ಮಹಿಳೆಯ ಬೇಜವಾಬ್ದಾರಿತನದ ವರ್ತನೆಯಿಂದಾಗಿ 15 ನಿಮಿಷ ಮೆಟ್ರೋ ಸಂಚಾರ ಸ್ಥಗಿತವಾಗಿತ್ತು. ನೇರಳೆ ಮಾರ್ಗದ ಲೈನ್‌ನಲ್ಲಿ ಜಸ್ಟ್ ಮಿಸ್ ಆಗಿ ಮಹಿಳೆ ಬಚಾವ್ ಆಗಿದ್ದಾಳೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟನೆ ನೀಡಿದೆ. ವಿದ್ಯುತ್ ತೆಗೆದ ನಂತರ ಎಲ್ಲವನ್ನೂ ರೀಸೆಟ್ ಮಾಡಲು 15 ನಿಮಿಷ ಬೇಕಾಯಿತು. ಸೋಮವಾರ ಹೊಸ ವರ್ಷದಂದು ಪೀಕ್‌ಹವರ್‌ನಲ್ಲೇ ಈ ರೀತಿ ಸಮಸ್ಯೆ ಆಗಿದೆ. ಇದಕ್ಕೆ ವಿಷಾದಿಸುತ್ತೇವೆ ಎಂದು…
ಕವಿತಾಳ :- ಮಾರುಕಟ್ಟೆಯಲ್ಲಿ ಸದ್ಯ ಉತ್ತಮ ದರ ಸಿಗುತ್ತಿರುವ ಹಿನ್ನೆಲೆಯಲ್ಲಿ ತೊಗರಿ ಬೆಳೆದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ತೊಗರಿಗೆ ₹10 ಸಾವಿರ ಮೇಲ್ಪಟ್ಟು ಮಾರಾಟವಾಗುತ್ತಿದ್ದು, ರೈತರು ದಾಸ್ತಾನು ಮಾಡದೆ ಮಾರಾಟ ಮಾಡುತ್ತಿದ್ದಾರೆ. ಕಳೆದ ವರ್ಷ ಒಂದು ಕ್ವಿಂಟಲ್‌ಗೆ ₹7 ಸಾವಿರ ಇದ್ದ ದರ ಈ ವರ್ಷ ₹10 ಸಾವಿರಕ್ಕೆ ಏರಿಕೆ ಆಗಿರುವುದು ರೈತರಲ್ಲಿ ಕೊಂಚ ನೆಮ್ಮದಿಗೆ ಕಾರಣವಾಗಿದೆ. ಹೋಬಳಿ ವ್ಯಾಪ್ತಿಯಲ್ಲಿ ಒಟ್ಟು 9,735 ಹೆಕ್ಟೇರ್ ತೊಗರಿ ಬಿತ್ತನೆ ಆಗಿದೆ. ‘ಮಳೆ ಕೊರತೆ ಮತ್ತು ಕೀಟ ಬಾಧೆಯಿಂದ ಇಳುವರಿ ಕಡಿಮೆ ಬಂದಿದ್ದರೂ ಉತ್ತಮ ದರ ಸಿಗುತ್ತಿರುವ ಕಾರಣ ನಷ್ಟವಂತೂ ಉಂಟಾಗುವುದಿಲ್ಲ’ ಎಂದು ರೈತರು ಹೇಳುತ್ತಿದ್ದಾರೆ. ಕವಿತಾಳ ಸೇರಿದಂತೆ ಹಿರೇಹಣಿಗಿ, ಸೈದಾಪುರ, ಹುಸೇನಪುರ, ತೊಪ್ಪಲದೊಡ್ಡಿ, ವಟಗಲ್, ಯಕ್ಲಾಸ್ಪುರ, ಅಮೀನಗಡ ಮತ್ತು ಪಾಮನಕಲ್ಲೂರು ಸುತ್ತಮುತ್ತಲಿನ ಮಳೆ ಆಧಾರಿತ ಕೃಷಿ ಭೂಮಿಯಲ್ಲಿ ಹೆಚ್ಚಿನ ರೈತರು ತೊಗರಿ ಬೆಳೆದಿದ್ದು ಉತ್ತಮ ದರ ಸಿಗುತ್ತಿರುವ ಕಾರಣ ಉತ್ಸಾಹದಿಂದ ತೊಗರಿ ಕಣ ಮಾಡುತ್ತಿದ್ದಾರೆ. ಅಂದಾಜು…
ದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ (Ayodhya) ಭವ್ಯ ಶ್ರೀರಾಮನ ಮೂರ್ತಿಯ ಪ್ರಾಣಪ್ರತಿಷ್ಠೆ (Ram Mandir’s Prana Pratishtha ) ನಡೆಯಲಿದೆ. ಆದರೆ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಮೂರ್ತಿ ಯಾವುದು ಎಂಬ ಪ್ರಶ್ನೆಯನ್ನು ಎಲ್ಲರೂ ಕೇಳುತ್ತಿದ್ದಾರೆ. ಈ ಕುತೂಹಲದ ಪ್ರಶ್ನೆಗೆ ಸಣ್ಣದೊಂದು ಸುಳಿವು ಸಿಕ್ಕಿದೆ.. ಈ ಸುಳಿವು ನಿಜವಾದರೆ ಕರ್ನಾಟಕ (Karnataka) ಪಾಲಿಗೆ ಮಂದಿರಾದ ಖುಷಿ ದುಪ್ಪಟ್ಟಾಗಲಿದೆ ಈಗಾಗಲೇ ಪ್ರತಿಷ್ಠಾಪನೆಗೆ ಮೂರು ಮೂರ್ತಿಗಳು ಸಿದ್ಧಗೊಂಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ (Shri Ram Janmabhoomi Teerth Kshetra) ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲು ಒಟ್ಟು ಮೂರು ಮೂರ್ತಿಗಳನ್ನು ಕೆತ್ತಿಸಿದೆ. ಸಮಯ ಅಭಾವ, ಶಿಲ್ಪಿಗಳಗೆ ಸಮಸ್ಯೆಯಾದರೆ ಅದು ಉದ್ಘಾಟನೆ ಕಾರ್ಯಕ್ರಮಕ್ಕೆ ತೊಂದರೆಯಾಗಬಾರದು ಮತ್ತು ಅತ್ಯುತ್ತಮ ಮೂರ್ತಿಗಾಗಿ ಮೂವರು ಶಿಲ್ಪಿಗಳಿಂದ ಬಾಲರಾಮನ (Balarama) ಕೆತ್ತಿಸಲಾಗಿತ್ತು. ಇವುಗಳಲ್ಲಿ ಬೆಂಗಳೂರಿನ ಜಿಎಲ್ ಭಟ್, ಮೈಸೂರಿನ ಅರುಣ್ ಯೋಗಿರಾಜ್ (Arun Yogiraj) ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಮೂರ್ತಿ ಕೆತ್ತಿ ಹಸ್ತಾಂತರ ಮಾಡಿದ್ದಾರೆ. ಈಗಾಗಲೇ ಹಸ್ತಾಂತವಾಗಿರುವ ಮೂರ್ತಿಗಳ ಪೈಕಿ ಒಂದನ್ನು ಆಯ್ಕೆ ಮಾಡಲು ಟ್ರಸ್ಟ್…
ಬೆಳಗಾವಿ :- ನಾವಗೆ ಗ್ರಾಮದಲ್ಲಿ ನಾಲ್ಕು ಮನೆಗಳ ಮೇಲೆ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಏಕಾಏಕಿ ಮನೆಗಳ ಮೇಲಿನ ದಾಳಿಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಗ್ರಾಮದ ಹಿರಿಯರ ಮನೆಗಳನ್ನು ಟಾರ್ಗೆಟ್ ಮಾಡಿ ಕಿಡಿಗೇಡಿಗಳಿಂದ ಕೃತ್ಯ ಎಸಗಲಾಗಿದೆ. ಹಿರಿಯರ ಮನೆ ಟಾರ್ಗೆಟ್ ಆಗಲು ಕಾರಣವಾಯಿತಾ ತ್ರಿಕೋನ ಪ್ರೇಮ ಪ್ರಕರಣ ಎಂಬ ಶಂಕೆ ಮೂಡಿದೆ. ಬೆಳಗಾವಿ ತಾಲೂಕಿನ ಖರ್ಲೆ ಗ್ರಾಮದ ಹುಡುಗಿಯನ್ನು ಪ್ರೀತಿಸುತ್ತಿದ್ದ ನಾವಗೆ, ಬಾದರವಾಡಿ ಗ್ರಾಮದ ಹುಡುಗರು, ಸ್ಟೇಟಸ್ ಇಡುವ ವಿಚಾರಕ್ಕೆ ನಾವಗೆ ಹಾಗೂ ಬಾದರವಾಡಿ ಗ್ರಾಮದ ಹುಡುಗರ ಮಧ್ಯೆ ಗಲಾಟೆ ನಡೆದಿದೆ. ಎರಡು ದಿನಗಳ ಹಿಂದೆ ಯುವಕರನ್ನು ಕೂರಿಸಿಕೊಂಡು ನಾವಗೆ ಗ್ರಾಮದ ಹಿರಿಯರು ಬುದ್ಧಿವಾದ ಹೇಳಿದ್ದರು. ಅಲ್ಲದೇ ಗ್ರಾಮದ ಪಂಚರು ಬೆಳಗಾವಿ ಗ್ರಾಮೀಣ ಠಾಣೆಗೂ ಮಾಹಿತಿ ನೀಡಿದ್ದರು. ಇದರಿಂದ ಕುಪಿತಗೊಂಡ ಬಾದರವಾಡಿಯ 30 ಕ್ಕೂ ಅಧಿಕ ಯುವಕರಿಂದ ಅಟ್ಟಹಾಸ ಮೆರೆದಿದ್ದಾರೆ. ಗ್ರಾಮದ ಹಿರಿಯಯ ಮನೆಗಳನ್ನು ದ್ವಂಸ ಮಾಡಲು ಯತ್ನಿಸಲಾಗಿದೆ. ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ವಾಹನ, ಬೈಕ್, ಮನೆಗಾಜು ಪುಡಿಪುಡಿ ಮಾಡಿದ್ದಾರೆ.
ಕನಕಗಿರಿ:- ಅನೈತಿಕ ಚಟುವಟಿಕೆಗಳ ತಾಣವಾಗಿ ಪಟ್ಟಣದ ರಾಜಬೀದಿಯಲ್ಲಿರುವ ಹಳೆಯ ಪೊಲೀಸ್ ಠಾಣೆಯ ಕಟ್ಟಡ ಪಾಳು ಬಿದ್ದಿದೆ. ಪಟ್ಟಣ ಪಂಚಾಯಿತಿ ಮೂಲಗಳ ಪ್ರಕಾರ ಈ ಕಟ್ಟಡ ಮುಜರಾಯಿ ಇಲಾಖೆಗೆ ಸಂಬಂಧಿಸಿದ್ದು ಎನ್ನಲಾಗುತ್ತಿದೆ. ‘ಪೊಲೀಸ್ ಇಲಾಖೆಯವರು ಬಹಳ ವರ್ಷಗಳ ಕಾಲ ಪೊಲೀಸ್ ಠಾಣೆಯನ್ನಾಗಿ ಉಪಯೋಗಿಸಿದ್ದಾರೆ. ದಶಕದ ಹಿಂದೆ ಲಿಂಗಸಗೂರು-ಗಂಗಾವತಿ ರಸ್ತೆಯಲ್ಲಿ ಹೊಸ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಕಟ್ಟಡ ಖಾಲಿ ಬಿದ್ದಿತ್ತು. ಕಂದಾಯ ಇಲಾಖೆಯವರು ಉಪ ತಹಶೀಲ್ದಾರ್ ಕಚೇರಿಯನ್ನಾಗಿ ಬಳಸಿಕೊಂಡರು. ಕಟ್ಟಡವು ಪಟ್ಟಣದ ಹೃದಯ ಭಾಗದಲ್ಲಿರುವ ಕಾರಣ ಉಪ ತಹಶೀಲ್ದಾರ್, ಕಂದಾಯ ನಿರೀಕ್ಷಕರು ಹಾಗೂ ವಿವಿಧ ಗ್ರಾಮಗಳ ಗ್ರಾಮ ಆಡಳಿತ ಅಧಿಕಾರಿಗಳು ಇಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವರ್ಷದ ಹಿಂದೆ ಕಲಕೇರಿ ಗ್ರಾಮದ ರಸ್ತೆಯಲ್ಲಿ ಹೊಸ ಉಪ ತಹಶೀಲ್ದಾರ್ ಕಚೇರಿ ಆರಂಭಗೊಂಡ ಪರಿಣಾಮ ಪೊಲೀಸ್ ಠಾಣೆ ಕಟ್ಟಡ ಪಾಳು ಬಿದ್ದಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿವರ್ತನೆಯಾಗಿದೆ’ ಎಂದು ಪ್ರಮುಖರಾದ ದೊಡ್ಡಬಸಪ್ಪ ಭತ್ತದ, ಪಾಮಣ್ಣ ಅರಳಿಗನೂರು, ಕೊಟ್ರೇಶ ಮಡಿವಾಳರ ದೂರಿದರು. ರಾಜಬೀದಿ,…
ಅಯೋಧ್ಯೆ (ಉತ್ತರ ಪ್ರದೇಶ): ಮುಂಬರುವ ಜನವರಿ 22, ಹಿಂದೂಗಳಿಗೆ ಮತ್ತು ಶ್ರೀರಾಮನ ಭಕ್ತರಿಗೆ ಸ್ಮರಣೀಯ ದಿನ. ಬಾಲ ರಾಮ (ರಾಮಲಲ್ಲಾ) ಅಯೋಧ್ಯೆಯ (Ayodhya Ram Mandir) ತನ್ನ ಅರಮನೆಯಲ್ಲಿ ಮತ್ತೆ ಪಟ್ಟಾಭಿಷಿಕ್ತರಾಗುತ್ತಿದ್ದಾರೆ. ಅಂದು ಪೂಜೆ, ಮಂತ್ರ, ವಿಧಿವಿಧಾನಗಳ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದೆ. ವಿಶ್ವದಾದ್ಯಂತ ಇರುವ ಸಮಸ್ತ ಹಿಂದೂಗಳ ಗಮನ ಸೆಳೆದಿರುವ ರಾಮಮಂದಿರ ಹಲವು ವಿಶೇಷತೆ ಹೊಂದಿದೆ. ಅಷ್ಟೇ ಅಲ್ಲ, ದೇವಾಲಯದ ಗರ್ಭಗುಡಿಯೂ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಕಳೆದ ವರ್ಷ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮಮಂದಿರದ ಪವಿತ್ರ ಗರ್ಭಗುಡಿಯ (Sanctum Sanctorum) ಶಿಲಾನ್ಯಾಸ ನೆರವೇರಿಸಿದ್ದರು. ಮಂತ್ರ ಪಠಣದ ನಡುವೆ ಗರ್ಭಗುಡಿಯ ಶಂಕುಸ್ಥಾಪನೆ ನೆರವೇರಿತ್ತು. ಇದಾದ ಬಳಿಕ ಅದರ ನಿರ್ಮಾಣ ಕಾರ್ಯ ಆರಂಭವಾಯಿತು. ಈಗ ಅದು ಸಿದ್ಧವಾಗಿದೆ. ಅಯೋಧ್ಯೆ ರಾಮಮಂದಿರದ ಗರ್ಭಗುಡಿಯು 20 ಅಡಿ ಉದ್ದ ಮತ್ತು 20 ಅಡಿ ಅಗಲವಿದೆ. ಅದರ ಎತ್ತರವನ್ನು 161 ಅಡಿ. ಹಿಂದೆ ಭಾರತದ ದೇವಾಲಯಗಳಲ್ಲೇ ಅತಿ ದೊಡ್ಡ ಗರ್ಭಗುಡಿಯನ್ನು…
ಟೋಕಿಯೊ: ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ ಜಪಾನ್‌ನಲ್ಲಿ (Japan Earthquakes) 13 ಮಂದಿ ಸಾವಿಗೀಡಾಗಿದ್ದಾರೆ. ಹೊಸ ವರ್ಷದಂದೇ ಭೂಕಂಪ ಸಂಭವಿಸಿ ಅಪಾರ ಸಾವು-ನೋವಿಗೆ ಕಾರಣವಾಗಿದೆ. ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರು ಬೆಂಕಿ ಅವಘಡಕ್ಕೆ ಕಾರಣವಾಯಿತು, ರಸ್ತೆಗಳು ಬಿರುಕು ಬಿಟ್ಟಿವೆ ಜಪಾನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ. ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ. ಏರಿಯಲ್ ನ್ಯೂಸ್ ಫೂಟೇಜ್ ಬಂದರಿನಲ್ಲಿ ಭೂಕಂಪದಿಂದ ಬೆಂಕಿ ಅವಘಡ ಸಂಭವಿಸಿತು. ಏಳು ಅಂತಸ್ತಿನ ಕಟ್ಟಡವು ಕುಸಿದಿದೆ. ಈ ಪ್ರದೇಶದಲ್ಲಿ ಸುಮಾರು 45,000…
ಟೋಕಿಯೊ: ಹೊಸ ವರ್ಷದ ಆರಂಭದಲ್ಲೇ ಜಪಾನ್‍ಗೆ (Japan) ತೀವ್ರ ಆಘಾತ ಎದುರಾಗಿದೆ. ಈಶಾನ್ಯ ಜಪಾನ್‍ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು, ಇಶಿಕಾವಾ ಪ್ರಾಂತ್ಯದ ವಾಜಿಮಾ ನಗರಕ್ಕೆ 1.2 ಮೀಟರ್‌ಗಳಷ್ಟು ಎತ್ತರದ ತೆರೆಗಳು ಅಪ್ಪಳಿಸುತ್ತಿದೆ. ಇಶಿಕಾವಾ, ನೈಕತಾ ಮತ್ತು ಟೊಯಾಮಾ ನಗರಗಳ ಕರಾವಳಿ ತೀರಗಳಲ್ಲಿ ಸುನಾಮಿ (Tsunami) ಎಚ್ಚರಿಕೆ ನೀಡಲಾಗಿದೆ. ಇಶಿಕಾವಾ ಜಿಲ್ಲೆಯ ಕರಾವಳಿ ನೋಟೋಗೆ 5 ಮೀಟರ್ ಎತ್ತರದವರೆಗಿನ ಬೃಹತ್ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ. ನೈಗತ ಮತ್ತು ಟೊಯಾಮಾ ಸೇರಿದಂತೆ ಉಳಿದ ಕೆಲವು ಕರಾವಳಿ ತೀರಗಳಲ್ಲಿ 3 ಮೀಟರ್‍ವರೆಗೂ ಅಲೆಗಳು ಏಳಬಹುದು ಎಂದು ಜಪಾನ್ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಸ್ಥಳೀಯ ಕಾಲಮಾನ ಸಂಜೆ 4:10 ಸುಮಾರಿಗೆ ಇಶಿಕಾವಾ ಪ್ರಾಂತ್ಯದ ನೋಟೊ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನದ ತೀವ್ರತೆ ದಾಖಲಾಗಿದೆ. ಜಪಾನ್‍ನ ಈಶಾನ್ಯ ಭಾಗದ ನನಾವೋ ಭೂ ಕಂಪನದ ಕೇಂದ್ರ ಬಿಂದು ಎಂದು ವರದಿಯಾಗಿದೆ.
ಹುಬ್ಬಳ್ಳಿ: 1992ರ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಶ್ರೀಕಾಂತ ಪೂಜಾರಿ ಅವರ ಬಂಧನ ಖಂಡಿಸಿ ನಗರದ ಶಹರ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದ್ದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ಡಿಸಿಪಿ ರಾಜೀವ್ ಎಂ. ಅವರು ಭರವಸೆ ನೀಡಿದ ಬಳಿಕ ಧರಣಿ ವಾಪಸ್ ಪಡೆದರು. ಡಿಸಿಪಿ ರಾಜೀವ್ ಎಂ. ಅವರು ಪೊಲೀಸ್ ಅಧಿಕಾರಿಗಳ ಜೊತೆ ಸೇರಿ ಪ್ರತಿಭಟನಕಾರರ ಮನವೊಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘1992ರ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ಸತ್ಯಾಸತ್ಯತೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದರು. ‘ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಪೆಕ್ಟರ್ ಅವರು ಆರೋಪಿ ಬಂಧನಕ್ಕೆ ಮೊದಲು ವಾರಂಟ್ ನೀಡದ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಆಂತರಿಕ ತನಿಖೆ ನಡೆಸುತ್ತೇವೆ. ಕ್ರಮ ತಪ್ಪಾಗಿದ್ದರೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತೇವೆ. ಕೆಲವು ಪ್ರಕರಣದಲ್ಲಿ ಅಧಿಕಾರಿಗಳು ವಿವೇಚನೆಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ಹೆಜ್ಜೆ ಇಡುತ್ತೇವೆ’ ಎಂದು ತಿಳಿಸಿದರು. ‘ಆರೋಪಿಯನ್ನು ಬಂಧಿಸಿರುವ ಸಂದರ್ಭ ತಪ್ಪಾಗಿತ್ತು ಎಂದು ಇನ್‌ಸ್ಪೆಕ್ಟರ್ ಹೇಳಿರುವುದಾಗಿ ಡಿಸಿಪಿ…