Author: AIN Author

ಬೆಂಗಳೂರು:-ಮಾದನಾಯಕನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಸಿದ್ದನಹೊಸಹಳ್ಳಿಯಲ್ಲಿ ಬೈಕ್​ಗಳ ನಡುವೇ ಭೀಕರ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. ಒಂದು ಬೈಕ್ ವೇಗವಾಗಿಬರುತ್ತದೆ, ಈ ವೇಳೆ ಎದುರುಗಡೆಯಿಂದ ಬರುವ ಟಿಟಿ ತಪ್ಪಿಸಲು ಹೋಗಿ ಪಕ್ಕದಲ್ಲಿ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕುಡಿತದ ಅಮಲಿನಲ್ಲಿದ್ದವನ ಅತೀಯಾಟಕ್ಕೆ ತಾನೂ ಸಾವನ್ನಪ್ಪಿದ್ದು, ‍ರಾಜಸ್ಥಾನ ಮೂಲದ ಕೂಲಿ‌ ಕಾರ್ಮಿಕನ ಪ್ರಾಣ ತೆಗೆದಿದ್ದಾನೆ. ಇಲ್ಲಿ ಸಾವನ್ನಪ್ಪಿರೋದು ಓರ್ವ ರಾಜಸ್ಥಾನ ಮೂಲದ ರಾಜೇಶ್ ಹಾಗೂ ಮತ್ತೊಬ್ಬ ಬೆಂಗಳೂರು ಉತ್ತರ ತಾಲೂಕು ಹೆಗ್ಗಡದೇವನಪುರ ನಿವಾಸಿ ಧನರಾಜ್ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಅಂಬ್ಯೂಲನ್ಸ್ ಮುಖಾಂತರವಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಮೃತ ದೇಹಗಳನ್ನು ಸಾಗಿಸಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗಳೊಂದಿಗೆ ಪಾರಾಗಿದ್ದಾರೆ. ಇನ್ನು ಈ ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Read More

ಬೆಂಗಳೂರು:- ಕೇರಳದಲ್ಲಿ ಜೆಡಿಎಸ್​​ ಕಾರ್ಯಕಾರಣಿ ಸಭೆಯನ್ನು ನ. 15 ರಂದು ಆಯೋಜಿಸಿದ್ದು, ಸಭೆಯಲ್ಲಿ ಯಾರು ಹಾಜರಾಗದಂತೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸೂಚನೆ ನೀಡಿದ್ದಾರೆ. ಪತ್ರ ಬರೆದಿರುವ ಗೌಡ್ರು, JDS ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾನು ಕರೆದ ಸಭೆಗೆ ಹಾಜರಾಗಬೇಡಿ. ಕರೆದಿರುವ ಸಭೆ ಅಧಿಕೃತ ಸಭೆ ಅಲ್ಲ, ಯಾರು ಕೂಡ ಹಾಜರಾಗಬಾರದು ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಿಗೆ ಪತ್ರ ಬರೆಯಲಾಗಿದೆ. JDS ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾನು ಅವರು 15 ನವೆಂಬರ್ ರಂದು ಬೆಳಿಗ್ಗೆ 10 ಗಂಟೆಗೆ ಕೇರಳ ಆರ್ಟ್ಸ್ ಮತ್ತು ಕ್ರಾಫ್ಟ್ಸ್ ವಿಲೇಜ್, ವೆಲ್ಲರ್, ತಿರುವನಂತಪುರದಲ್ಲಿ ಜನತಾ ದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯನ್ನು ಆಯೋಜಿಸಿದ್ದಾರೆ. ಸಿ.ಕೆ ನಾನು ಅವರು ಕರೆದಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯೂ ಯಾವುದೇ ಅಧಿಕಾರವಿಲ್ಲದೆ ಮತ್ತು ಜೆಡಿಎಸ್​ ಪಕ್ಷದ ಸಂವಿಧಾನದ ಪರಿಚ್ಛೇದದ ಉಲ್ಲಂಘನೆಯಾಗಿದೆ. ಅಂತಹ ಸಭೆ ನಡೆಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮತಿ ಇಲ್ಲ. ಹೀಗಾಗಿ ಇದೊಂದು ಅನಧಿಕೃತ ಸಭೆ ಆಗಿದೆ. ಆದ್ದರಿಂದ,…

Read More

ಚಿತ್ರದುರ್ಗ :- ಚಿತ್ರಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಅಂತರ್ ರಾಜ್ಯ ಶ್ರೀಗಂಧ ಕಳ್ಳರ ಗ್ಯಾಂಗ್ ಅನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳರಿಂದ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ ಮಾಡಿದ್ದಾರೆ. ಕೊಳಾಳ್ ಬಳಿ ಇಕೋ ಕಾರಿನಲ್ಲಿದ್ದ 6 ಮಂದಿ ಅರೆಸ್ಟ್ ಮಾಡಲಾಗಿದೆ. 91 KG ಶ್ರೀಗಂಧ, 15.5 KG ರಕ್ತಚಂದನ, 25.4KG ಆನೆದಂತ, 34 .1 KG ಪೆಂಗೋಲಿನ್ ಚಿಪ್ಪು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ್ದ 1ಲಕ್ಷ ಹಣ, 2 ಕಾರ್, 9 ಮೊಬೈಲ್ ಸೇರಿ ಮಾರಕಾಸ್ತ್ರ ವಶಕ್ಕೆ ಪಡೆಯಲಾಗಿದೆ. A-1ಚಂದ್ರಶೇಖರ್ , A2- ಖಲೀಲ್,A-3 ಪ್ರಶಾಂತ್, A-4 ರಂಗಸ್ವಾಮಿ, A-5 ಪುನೀತ್ ನಾಯ್ಕ್, A-6 ರಾಮಾನಾಯ್ಕ್ ಬಂಧಿತರು. ಚಿತ್ರಹಳ್ಳಿ, ಶ್ರೀರಾಂಪುರ, ಐಮಂಗಲ ಸೇರಿ ವಿವಿಧ ಠಾಣೆಯಲ್ಲಿ ಈ ಗ್ಯಾಂಗ್ ಕಳ್ಳತನ ಮಾಡಿದ್ದರು. ಈ ಸಂಬಂಧ ಖಚಿತ ಮಾಹಿತಿ ಪಡೆದು ಚಿತ್ರದುರ್ಗ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ, ಹಿರಿಯೂರು ನಗರದ ಬಬ್ಬೂರು ಬಾಡಿಗೆ ಮನೆಯಲ್ಲಿ…

Read More

ಹುಬ್ಬಳ್ಳಿ: ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ “ಶಕ್ತಿ” ಯೋಜನೆ ಐದು ತಿಂಗಳು ಪೂರೈಸಿದೆ. ವಾ.ಕ.ರ.ಸಾ.ಸಂಸ್ಥೆಯ ಬಸ್ಸುಗಳಲ್ಲಿ ಒಟ್ಟು 21.76 ಕೋಟಿ ಮಹಿಳೆಯರು ಉಚಿತ ಸಂಚಾರ ಮಾಡಿದ್ದು, ಪ್ರಯಾಣದ ಟಿಕೆಟ್ ಮೌಲ್ಯ ರೂ.556.41 ಕೋಟಿ ಗಳಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದಿಂದ ಆರಂಭಿಸಲಾಗಿರುವ ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣದ “ಶಕ್ತಿ” ಯೋಜನೆಗೆ ನಿರೀಕ್ಷೆಗೂ ಮೀರಿ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಹಕಾರದಿಂದ ಯಶಸ್ವಿಯಾಗಿ ಮುಂದುವರೆದಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಆರು ಜಿಲ್ಲೆಗಳ 9 ಸಾರಿಗೆ ವಿಭಾಗಗಳ ಬಸ್ಸುಗಳಲ್ಲಿ ಜೂನ್ 11ರಿಂದ ನವೆಂಬರ್ 10 ರವರೆಗೆ ಐದು ತಿಂಗಳ ಅವಧಿಯಲ್ಲಿ ಒಟ್ಟು 21,76,17,297 ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಗಳ ಮೌಲ್ಯ ರೂ.556,41,82,443 ಗಳಾಗಿದೆ. ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ…

Read More

ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ಇಂಗ್ಲೆಂಡ್ ತಂಡ 9 ವಿಕೆಟ್ ಕಳೆದುಕೊಂಡು ಪಾಕಿಸ್ತಾನ ಗೆಲುವಿಗೆ 338 ರನ್ ಗಳ ಗುರಿ ನೀಡಿದೆ. ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ಬೃಹತ್ ಮೊತ್ತ ಪೇರಿಸುವ ಕನನಸಿನಲ್ಲಿದ್ದ ಪಾಕ್ ಟಾಸ್ ನಲ್ಲಿಯೇ ನಿರಾಸೆಯಾಯಿತು. ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ನಿರ್ಧಾರ ಪ್ರಕಟಿಸಿತು. ಪರಿಣಾಮ ಪಾಕಿಸ್ತಾನ ಪಂದ್ಯ ಶುರುವಾಗುದಕ್ಕೂ ಮೊದಲೇ ಸೆಮೀಸ್ ರೇಸ್ ನಿಂದ ಬಹುತೇಕ ಹೊರಬಿದ್ದಿತು. ಪಾಕ್ ವಿರುದ್ಧ ಬ್ಯಾಟಿಂಗ್ ಅರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಟೂರ್ನಿಯಲ್ಲಿ ಮೊದಲ ಬಾರಿ ಓಪನರ್ ಗಳು ತಕ್ಕ ಮಟ್ಟಿನ ಉತ್ತಮ ಅಡಿಪಾಯ ಹಾಕಿದರು. ಡೇವಿಡ್ ಮಲನ್ 31 ರನ್ ಗಳಿಸಿ ಇಫ್ತಿಕಾರ್ ಎಸೆತದಲ್ಲಿ ಔಟ್ ಆದರೆ ಇನ್ನೋರ್ವ ಆರಂಭಿಕ ಜಾನಿ ಬೈರ್ ಸ್ಟೋವ್ 7 ಬೌಂಡರಿ 1 ಸಿಕ್ಸರ್ ಸಹಿತ 59 ರನ್ ಗೆ ಹಾರಿಸ್ ರವೊಫ್ ಗೆ ವಿಕೆಟ್ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ಜೋ ರೂಟ್ 4 ಬೌಂಡರಿ ಸಹಿತ…

Read More

ಬೆಂಗಳೂರು:- ಭಾರತ ಹಾಗೂ ನೆದರ್‌ಲ್ಯಾಂಡ್ ಕ್ರಿಕೆಟ್ ಪಂದ್ಯಾವಳಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಹಿನ್ನೆಲೆ, ಕ್ರೀಡಾಂಗಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ಸಂಬಂಧ ಮಾತನಾಡಿದ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್, ಕ್ಯಾಬ್ ಗಳಿಗೆ ಪಿಕ್ ಅಪ್ ಅಂಡ್ ಡ್ರಾಪ್ ಸ್ಥಳಗಳನ್ನ ಗುರುತಿಸಲಾಗಿದೆ. ನಾಳೆ ಕ್ರಿಕೆಟ್ ವೀಕ್ಷಣೆಗೆ ಬರುವ ಕ್ರೀಡಾಭಿಮಾನಿಗಳ ಹೆಚ್ಚಳದಿಂದ ಸಂಚಾರ ದಟ್ಟಣೆ ಉಂಟಾಗಲಿದೆ. ಸಾರ್ವಜನಿಕರು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಪ್ರಯಾಣ ಸಾಧ್ಯವಾದಷ್ಡು ಕಡಿಮೆ ಮಾಡಿದ್ರೆ ಉತ್ತಮ. ಈಗಾಗಲೇ ಅಗತ್ಯ ಬಂದೋಬಸ್ತ್ ಕಲ್ಪಿಸಿ ಯಾವುದೇ ರೀತಿಯ ಸಂಚಾರ ದಟ್ಡಣೆ ಆಗದಂತೆ ಕ್ರಮವಹಿಸಲಾಗಿದೆ ಎಂದರು. ಬೆಂಗಳೂರಲ್ಲಿ ಒಟ್ಟು ಐದು ಪಂದ್ಯ ನಿಗದಿಯಾಗಿತ್ತು. ಈಗಾಗಲೇ ನಾಲ್ಕು ಪಂದ್ಯಗಳು ಮುಗಿದಿದೆ, ಐದನೇ ಮತ್ತು ಕೊನೆಯ ಪಂದ್ಯ ಭಾರತ-ನೆದರ್ಲ್ಯಾಂಡ್ ನಡುವೆ ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಚಿನ್ನಸ್ವಾಮಿ‌ ಸ್ಟೇಡಿಯಂ ಸುತ್ತ-ಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 9 ಜನ ಎಸಿಪಿ, 28 ಇನ್ಸ್ ಪೆಕ್ಟರ್, 86 ಜನ ಪಿಎಸ್‌ಐ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು…

Read More

ಹಾಸನ :- ಪಕ್ಷ ಕಟ್ಟುವ ಕುರಿತು ಹಾಸನಾಂಬೆ ಎದುರು ಪ್ರತಿಜ್ಞೆ ಮಾಡಿದ್ದೇವೆ ಎಂದು GT ದೇವೇಗೌಡ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹಾಸನಾಂಬೆ ಎದುರು ಪಕ್ಷ ಬಿಡಲ್ಲ ಎಂದು ಜೆಡಿಎಸ್‌ ಶಾಸಕರು ಆಣೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಹಾಸನಾಂಬೆ ಎದುರು ನಾವ್ಯಾರು ಆಣೆ ಮಾಡಿಲ್ಲ, ಪಕ್ಷ ಕಟ್ಟುವ ಕುರಿತು ಪ್ರತಿಜ್ಞೆ ಮಾಡಿದ್ದೇವೆ ಎಂದರು. ಜೆಡಿಎಸ್ ನಾಯಕರು ಯಾರು ಪಕ್ಷ ಬಿಡುವುದಿಲ್ಲ. ಲಕ್ಷಾಂತರ ಜನರು ಬರುವ ತಾಯಿ ಎದುರು ಆಣೆ – ಪ್ರಮಾಣ ಸಾಧ್ಯವಾ? ನಾವೆಲ್ಲರೂ ಕೂಡ ನಮ್ಮ ಮನಸಿನಲ್ಲಿರುವುದನ್ನು ಕೇಳಿಕೊಂಡಿದ್ದೇವೆ‌. ರಾಜ್ಯದಲ್ಲಿ ಪಕ್ಷ ಬಲವರ್ಧನೆ, ಕುಮಾರಸ್ವಾಮಿಯನ್ನು ಸಿಎಂ ಮಾಡುವುದು ನಮ್ಮ ಗುರಿ. ಆ ಕುರಿತು ನಾವು ಸಂಘಟನಾತ್ಮಕವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆ ವಿಚಾರವಾಗಿ ಮಾತನಾಡಿ, ಬಿ ವೈ ವಿಜಯೇಂದ್ರ ಪ್ರಬಲ ಸಮುದಾಯದ ನಾಯಕ. ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದು ಒಳ್ಳೆಯ ಬೆಳವಣಿಗೆ. ಯಡಿಯೂರಪ್ಪ ಸಿಎಂ ಆಗಬೇಕು ಅಂತ 50…

Read More

ಮೈಸೂರು:- ಬಿ.ವೈ. ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ನೀಡಿದ್ದು ಒಳ್ಳೆಯ ಬೆಳವಣಿಗೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಯುವ ನಾಯಕ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿರುವುದು ಒಳ್ಳೆಯ ಬೆಳವಣಿಗೆ. ಎಲ್ಲ ಕ್ಷೇತ್ರದಲ್ಲೂ ಯುವಕರಿಗೆ ಮಣೆ ಹಾಕಲಾಗುತ್ತಿದೆ. ವಿಜಯೇಂದ್ರ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದವರು’ ಎಂದರು. ಬಿ.ಎಸ್. ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ. ಅವರ ಅನುಭವ- ಮಾರ್ಗದರ್ಶನ ವಿಜಯೇಂದ್ರ ಅವರಿಗೆ ಸಿಗುವುದರಿಂದ ಸಂಘಟನೆಯಲ್ಲಿ ಯಶಸ್ವಿಯಾಗುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ‘ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲೇ ನಾವೆಲ್ಲರೂ ಗೆದ್ದು ಬಂದಿದ್ದೇವೆ. ಮುಂದಿನ ಚುನಾವಣೆಯಲ್ಲೂ ಅವರ ಹೆಸರಿನಲ್ಲೇ ಗೆಲ್ಲಲಿದ್ದೇವೆ. ಬಿಜೆಪಿ ಬಹುಮತ ಗಳಿಸಲಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ’ ಎಂದರು.

Read More

ಮೈಸೂರು:- ನಾನು ವಿಪಕ್ಷ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸೂಕ್ತ ವ್ಯಕ್ತಿಯನ್ನು ನಮ್ಮ ನಾಯಕರು ನೇಮಿಸುತ್ತಾರೆ. ಬಿಜೆಪಿಯ ಶಾಸಕರೆಲ್ಲರೂ ಆಕಾಂಕ್ಷಿಯಾಗಿದ್ದಾರೆ. ನಮ್ಮಲ್ಲೇ ಬೇಕಾದಷ್ಟು ನಾಯಕರಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಆಗಿರಬಹುದು. ಹಾಗೆಂದ ಮಾತ್ರಕ್ಕೆ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾ‌ನ ಕೊಡಬೇಕೆಂದೇನಿಲ್ಲ’ ಎಂದರು. ‘ಬಿ.ವೈ. ವಿಜಯೇಂದ್ರ ಯುವಕ. ಪಕ್ಷವನ್ನು ಸಮರ್ಥವಾಗಿ ಕಟ್ಟುತ್ತಾರೆ. ಸಾಕಷ್ಟು ಜನ ಆಕಾಂಕ್ಷಿಗಳಿದ್ದರು. ಅದರಲ್ಲಿ ಹಿರಿಯರೂ ಇದ್ದರು. ಆದರೆ, ಕಿರಿಯರಿಗೆ ಕೊಡಬಾರದು ಎಂದೇನಿಲ್ಲ. ವಿ.ಸೋಮಣ್ಣ ಪ್ರಭಾವಿ ನಾಯಕರು. ಅವರಿಗೂ ಎಲ್ಲ ರೀತಿಯ ಅರ್ಹತೆ ಇತ್ತು. ಸಿ.ಟಿ. ರವಿ ಅವರಿಗೂ ಪಕ್ಷ ಅನೇಕ ಹುದ್ದೆಗಳನ್ನು ನೀಡಿದೆ. ಒಂದು ಹುದ್ದೆಯನ್ನು ಎಲ್ಲರಿಗೂ ಕೊಡಲಾಗದು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರಬೇಕಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು. ಲೋಕಸಭಾ ಚುನಾವಣೆ ಬಳಿಕ ನಾವೇನು ರಾಜ್ಯ ಸರ್ಕಾರ ಬೀಳಿಸುವುದಿಲ್ಲ. ಅವರ ಪಕ್ಷದವರಿಂದಲೇ ಸರ್ಕಾರ ಬೀಳಲಿದೆ’ ಎಂದರು.

Read More

ವಿಜಯವಾಡ:-ರಾಜಕೀಯದಲ್ಲಿ ಯಾರೂ ಶಾಶ್ವತವಾಗಿರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೇರು ಮಟ್ಟದಿಂದ ಪಕ್ಷವನ್ನು ಸದೃಢವಾಗಿ ಕಟ್ಟಬಹುದು, ಕಾರ್ಯಕರ್ತರು ಬಲಿಷ್ಠರಾಗಿದ್ದರೆ ಪಕ್ಷ ಸದೃಢವಾಗಿರುತ್ತದೆ. ರಾಜಕೀಯದಲ್ಲಿ ಯಾರೂ ಕೂಡಾ ಶಾಶ್ವತವಾಗಿರಲು ಸಾಧ್ಯವಿಲ್ಲ ಎಂದರು. ತೆಲಂಗಾಣ ಚುನಾವಣೆಗಾಗಿ ನಾನು ಇಲ್ಲಿಗೆ ಬಂದಿದ್ದೇನೆ.ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿದೆ. ತೆಲಂಗಾಣದಲ್ಲಿ ಬದಲಾವಣೆ, ಹೊಸ ಸರ್ಕಾರ ರಚನೆ ಬಗ್ಗೆ ದೊಡ್ಡ ಅಲೆ ಇದೆ. ಎಲ್ಲಾ ರಾಜಕೀಯ ಪಕ್ಷಗಳ ಮೂಲ ಬೇರು ಕಾಂಗ್ರೆಸ್ ಪಕ್ಷವೇ ಆಗಿದೆ. ಅವರು ಬೇರೆ ಏನನ್ನೇ ಹೇಳಲಿ. ವೈಎಸ್ ಆರ್ ಕಾಂಗ್ರೆಸ್ ಕೂಡಾ ಏಕೆ ಕಾಂಗ್ರೆಸ್ ಅಂತಾ ಹೆಸರು ಇಟ್ಟುಕೊಂಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಈ ದೇಶವನ್ನು ಒಗ್ಗೂಡಿಸಿದ ಪಕ್ಷ ಕಾಂಗ್ರೆಸ್ ಎಂದು ತಿಳಿಸಿದರು.

Read More