Author: AIN Author

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರಾ ಸಿನಿಮಾಗೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ದಿನ ಈ ಚಿತ್ರ 19.79 ಕೋಟಿ ರೂಪಾಯಿ ಗಳಿಕೆ ಮಾಡಿತು. ಎರಡನೇ ದಿನ ಈ ಸಿನಿಮಾ 17.35 ಕೋಟಿ ರೂಪಾಯಿ ಬಾಚಿಕೊಂಡಿತು. ಮೂರನೇ ದಿನ ಈ ಚಿತ್ರ 20.94 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ವಿಷಯವನ್ನ ಕಾಟೇರ ಚಿತ್ರತಂಡವೇ ಅನೌನ್ಸ್ ಮಾಡಿದೆ. ಅಲ್ಲಿಗೆ ಕಾಟೇರ ನಾಲ್ಕು ದಿನದ ಒಟ್ಟು ಕಲೆಕ್ಷನ್ 60 ಕೋಟಿ ದಾಟಿದೆ. ತರುಣ್ ಸುಧೀರ್ ನಿರ್ದೇಶನದ ಕಾಟೇರ ಸಿನಿಮಾವನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಲ್ಲಿ ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಸಾಥ್ ನೀಡಿದ್ದಾರೆ. ಕಾಟೇರ ಸಿನಿಮಾದ ಪ್ರಲ್ಹಾದ್ ಜೋಶಿ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ಕಾಟೇರ ಬಿಗ್ ಹಿಟ್ ಅಗ್ತಿರೋದಕ್ಕೆ ಮೈನ್ ರೀಸನ್ ಸಿನಿಮಾದ ಸ್ಟೋರಿ. ಉಳುವವನೇ ಭೂ ವಡೆಯ ಕಥೆಗೆ ಲಿಂಗ್ ಕೊಟ್ಟು ಮಾಸ್ ಎಲಿಮೆಂಟ್ಸ್ ಇಟ್ಟು ಸ್ಟೋರಿ ಬರೆದ್ದಾರೆ. ಈ ಕಥೆ 70ರ ದಶಕದಲ್ಲಿ ನಡೆಯುತ್ತೆ.…

Read More

ವಿಜಯಪುರ: ಬಣಜಿಗರು ಸ್ವಾಭಿಮಾನಿಗಳು. ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಅದನ್ನು ಧೈರ್ಯದಿಂದ ಎದುರಿಸುವ ಶಕ್ತಿ ಅವರಿಗಿದೆ. ನನಗೆ ಟಿಕೆಟ್ ತಪ್ಪಿಸಿದ ವೇಳೆ ಇಡೀ ರಾಜ್ಯದಲ್ಲಿನ ನಮ್ಮ ಸಮಾಜದ ಬೆಂಬಲ ನೀಡಿದರು. ಅದನ್ನು ನಾನು ಮರೆಯಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್‌ ಶೆಟ್ಟರ್‌ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕಾರಣ ಇಲ್ಲದೆಯೆ ನನಗೆ, ಮಹದೇವಪ್ಪ ಯಾದವಾಡ ಅವರಿಗೆ ಟಿಕೆಟ್ ತಪ್ಪಿಸಿದರು.  ನಮ್ಮ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ನಾವು ಸುಮ್ಮನಿರುವುದಿಲ್ಲ ಎಂಬುದನ್ನು ಚುನಾವಣೆಯಲ್ಲಿ ತೋರಿಸಿದ್ದಾರೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು. https://ainlivenews.com/curry-leaves-are-good-for-cooking-and-good-for-health-this-has-many-benefits/ ಮುಂದಿನ ದಿವಸದಲ್ಲಿ ಸರಿಯಾದ ದಾರಿಯಲ್ಲಿ ಹೋಗಬೇಕು. ಇಲ್ಲದಿದ್ದರೆ ಇದೇ ರೀತಿ ಪೆಟ್ಟು ಬೀಳುತ್ತವೆ ಎಂದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದರು. ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಬಣಜಿಗ ಸಮಾಜಕ್ಕೆ ಶಿಕ್ಷಣದಲ್ಲಿ ೨ಎ ಮೀಸಲಾತಿ ನೀಡಿದೆ. ನನಗೆ ಕೊಟ್ಟ ಅಧಿಕಾರದಲ್ಲಿ ಸಮಾಜದ ಮತ್ತು ನಾಡಿಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದು ತೃಪ್ತಿ ತಂದಿದೆ ಎಂದರು.

Read More

ಶಿವಮೊಗ್ಗ:- ತೀರ್ಥಹಳ್ಳಿಯ ‌ನ್ಯಾಷನಲ್ ಸಂಸ್ಥೆ ಮೇಲೆ ಇಡಿ ದಾಳಿ ನಡೆಸಿದೆ. ಸುಲೈಮಾನ್ ಎಂಬುವರಿಗೆ ಸೇರಿದ ‌ನ್ಯಾಷನಲ್ ಸಂಸ್ಥೆ ಇದಾಗಿದ್ದು, ಇಂದು ED ದಾಳಿ ಮಾಡಿದೆ. ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ಅವರ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Read More

ಹಾಸನ: ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದ ಪ್ರಜ್ವಲ್‌ ರೇವಣ್ಣ ಸ್ಪರ್ಧೆ ಮಾಡುವ ವಿಚಾರ ಇನ್ನೂ ಸ್ಪಷ್ಟವಾಗಿಲ್ಲ. ನಮ್ಮ ಪಕ್ಷ ಅದನ್ನು ಇನ್ನೂ ಘೋಷಿಸಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಹೇಳಿದರು. ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ಹೆಸರು ಘೋಷಿಸಿರುವ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. https://ainlivenews.com/curry-leaves-are-good-for-cooking-and-good-for-health-this-has-many-benefits/ ‘ರಾಜಕೀಯವಾಗಿ ಎನ್‌ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಒಂದು ಭಾಗವಾಗಿ ಬಂದಿದೆ. ಆದರೆ ಇವರೇ ಅಭ್ಯರ್ಥಿ ಎಂಬುದನ್ನು ಘೋಷಿಸಿಲ್ಲ’ ಎಂದರು. ಹಾಸನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳೂ ಇದ್ದಾರೆ. ಅಂತೆಯೇ ಸಹಜವಾಗಿ ಜೆಡಿಎಸ್‌ನವರೂ ಟಿಕೆಟ್‌ ಬಯಸಿರಬಹುದು. ವಾಸ್ತವವಾಗಿ ಹಾಸನ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವಿನ ವಾತಾವರಣವಿದೆ. ಸರ್ವೆ ರಿಪೋರ್ಟ್‌ ಸಹ ಅದನ್ನೇ ಹೇಳುತ್ತಿದೆ. ಕಳೆದ ಬಾರಿ ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಇದ್ದರು. ಜೆಡಿಎಸ್‌ – ಬಿಜೆಪಿ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿ ಮತಗಳು…

Read More

ಕಲಬುರಗಿ:- ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬ ಬರ್ಬರವಾಗಿ ಹತ್ಯೆಯಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಮಲಾಪುರ ತಾಲೂಕಿನ ಓಕಳಿ ಗ್ರಾಮದ ಬಳಿ ಘಟನೆ ನಡೆದಿದ್ದು ಜೇವರ್ಗಿ ಮೂಲದ ಅಂಬಾರಾಯ ಹತ್ಯೆಯಾದ ದುರ್ದೈವಿ ಯುವಕ ಎನ್ನಲಾಗಿದೆ. ಹೆಂಡತಿಯ ತವರೂರು ಬೆಳಕೋಟಾದಲ್ಲಿ ವಾಸವಿದ್ದ ಅಂಬಾರಾಯ ಡಿಸೆಂಬರ್ 29 ರಂದು ನಾಪತ್ತೆಯಾಗಿದ್ದ. ಬರೋಬ್ಬರಿ ನಾಲ್ಕು ದಿನಗಳ ಬಳಿದ ಮೃತದೇಹ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಕಮಲಾಪುರ ಪೋಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ..

Read More

ಚಾಮರಾಜನಗರ:- ಹೊಸ ವರ್ಷದಂದು ಮಲೆಮಹದೇಶ್ವರನಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಪೂಜೆ ಸಲ್ಲಿಸಿದ್ದಾರೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ ಅವರು, 2024 ರ ಜನವರಿ 1 ರಂದು ರಾತ್ರಿ ಮಲೆಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಪವಾಡ ಪುರುಷ ಮಾದಪ್ಪನಿಗೆ ಹೊಸ ವರ್ಷದಂದು ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಸಚಿವ ಕೆ.ವೆಂಕಟೇಶ್ ಅವರು, ಇಂದು ಬೆಳಿಗ್ಗೆ ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮದ್ಯಾಹ್ನ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಮಧ್ಯಾಹ್ನ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

Read More

ಅಯೋಧ್ಯೆ: 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ (Sri Ram Mandir) ಉದ್ಘಾಟನೆ ನೆರವೇರಲಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ರಾಮಲಲ್ಲಾನ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ. ಹೌದು. ಜನವರಿ 22 ರಂದು ಅಯೋಧ್ಯೆಯ (Ayodhya) ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಪ್ರಾಣ ಪ್ರತಿಷ್ಠಾಪನೆಗಾಗಿ ನೇಪಾಳ ವಿವಿಧ ರೀತಿಯ ಆಭರಣಗಳು, ವಸ್ತುಗಳು, ವಸ್ತ್ರ ಹಾಗೂ ಸಿಹಿ ತಿನಿಸುಗಳು ಸೇರಿ ಹಲವು ಸ್ಮರಣಿಕೆಗಳನ್ನು ಕಳುಹಿಸಲು ಸಜ್ಜಾಗಿದೆ. ಇದರೊಂದಿಗೆ ರಾಮಲಲ್ಲಾನ ಜಲಾಭಿಷೇಕಕ್ಕೆ ನೇಪಾಳದ ಪವಿತ್ರ ನದಿಗಳಿಂದಲೇ (Nepal Rivers Water) ನೀರನ್ನು ತರಿಸಿರುವುದು ವಿಶೇಷ, ಇದಕ್ಕೆ ಕಾರಣವೂ ಇದೆ. ನೇಪಾಳ ನದಿಗಳ ನೀರು ಏಕೆ? ಅಯೋಧ್ಯೆಗೂ, ನೆರೆಯ ರಾಷ್ಟ್ರ ನೇಪಾಳಕ್ಕೂ ವಿಶೇಷ ಸಂಬಂಧವಿದೆ. ನೇಪಾಳದಲ್ಲಿ ಜನಿಸಿದ ಸೀತಾಮಾತೆಯನ್ನು ಭಗವಾನ್ ಶ್ರೀರಾಮನು ವರಿಸಿದ್ದ. ಅಂದಿನಿಂದ ಭಾರತ-ನೇಪಾಳದ ಸಂಬಂಧವಿದೆ, ಇದನ್ನು ರೋಟಿ-ಭೇಟಿ ಸಂಬಂಧ ಅಂತಲೂ ಕರೆಯುತ್ತಾರೆ.…

Read More

ಕಲಬುರ್ಗಿ:- ಮಂಗಗಳ ಹಾವಳಿ ಹೆಚ್ಚಾಗಿದ್ದು ದಾಳಿಗೆ ಓರ್ವ ಬಾಲಕ ಸೇರಿ ಮೂವರು ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಬಳವಡಗಿ ಕೊಂಚೂರು ಕಡಬೂರು ಗ್ರಾಮಗಳಲ್ಲಿ ವಾನರ ಸೇನೆ ಅಟ್ಟಹಾಸ ತೋರಿಸುತ್ತಿದೆ.. ಬಳವಡಗಿಯಲ್ಲಿ ಹೊಲಕ್ಕೆ ಹೊರಟಿದ್ದ ಸುಭಾಸ್ ಎಂಬಾತನ ಮೇಲೆ ಹಾಗು ಮನೆಯಿಂದ ಹೊರಗಡೆ ಬಂದಿದ್ದ 16 ವರ್ಷದ ನಿಖಿಲ್ ಎಂಬಾತನ ಮೇಲೆ ಮಂಗಗಳ ಗ್ಯಾಂಗ್ ಅಟ್ಯಾಕ್ ಮಾಡಿದೆ.. ಇದೇವೇಳೆ ಓರ್ವ ಮಹಿಳೆಗೂ ಮಂಗಗಳು ತಲೆಗೆ ಗಾಯಗೊಳಿಸಿವೆ. ಹೀಗಾಗಿ ಮನೆಯಿಂದ ಹೊರಬರಲು ಜನ ಆತಂಕಗೊಂಡಿದ್ದು ಕೋತಿಗಳ ಕಾಟ ತಪ್ಪಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ…

Read More

ಬೆಂಗಳೂರು:- ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕ್ಕೆ ಆಗಮಿಸಿದ್ದ 15 ಅಂತಾರಾಷ್ಟ್ರೀಯ ಪ್ರಯಾಣಿಕರಿಂದ ಕಳೆದ ಐದು ದಿನಗಳ ಅವಧಿಯಲ್ಲಿ ಎರಡು ಕೋಟಿ ರೂಪಾಯಿ ಮೌಲ್ಯದ 3.31 ಕೆಜಿ ಚಿನ್ನವನ್ನು ಏರ್‌ಪೋರ್ಟ್ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕರು ಬಟ್ಟೆಯಲ್ಲಿ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದರು. ಕೌಲಾಲಂಪುರ್​, ಜೆಡ್ಡಾ, ಶಾರ್ಜಾ ಮತ್ತು ಬ್ಯಾಂಕಾಕ್​ನಿಂದ ಬಂದ ಪ್ರಯಾಣಿಕರು ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದರು. ಇನ್ನು ಸಿಕ್ಕಬಿದ್ದ ಪ್ರಯಾಣಿಕರಲ್ಲಿ 10 ಜನ ಮಹಿಳೆಯರು ಸೇರಿದ್ದಾರೆ ಎಂದು ಕಸ್ಟಮ್ಸ್‌ ಮೂಲಗಳು ತಿಳಿಸಿವೆ. ಗುರುವಾರ ನಾಲ್ವರು ಪುರುಷ ಪ್ರಯಾಣಿಕರಿಂದ 1.9 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಯಿತು. ಅವರಲ್ಲಿ ಇಬ್ಬರು ಬ್ಯಾಂಕಾಕ್‌ನಿಂದ ಆಗಮಿಸಿದ್ದರು. ಬ್ಯಾಂಕಾಕ್‌ನಿಂದ ಬಂದ ಇಬ್ಬರು ಪ್ರಯಾಣಿಕರು, ಮುಂಬೈ ಮೂಲದವರು. ರಾತ್ರಿ 11.30 ರ ಹೊತ್ತಿಗೆ TG 325 ವಿಮಾನದ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಪ್ರತಿಯೊಬ್ಬರೂ 734 ಗ್ರಾಂನ ಚಿನ್ನದ ಸರ ತಂದಿದ್ದರು. ಒಬ್ಬ ಪ್ರಯಾಣಿಕ ಚಿನ್ನವನ್ನು ಕರವಸ್ತ್ರದಲ್ಲಿ ಬಚ್ಚಿಟ್ಟುಕೊಂಡಿದ್ದರೇ, ಮತ್ತೊಬ್ಬನು ಜೇಬಿನಲ್ಲಿ ಇಟ್ಟುಕೊಂಡಿದ್ದನು. ಇಬ್ಬರ ಬಳಿ ಇದ್ದ ಚಿನ್ನವನ್ನು…

Read More

ಬೆಂಗಳೂರು:- ಗುತ್ತಿಗೆ ಅವಧಿಗೂ ಗ್ರ್ಯಾಚ್ಯುಟಿ ಪಾವತಿಸಬೇಕು ಎಂದು ಬೆಂಗಳೂರು ಹೈಕೋರ್ಟ್ ಹೇಳಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಿವೃತ್ತ ಸರಕಾರಿ ಶಾಲಾ ಶಿಕ್ಷಕ ಬಸವೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶವನ್ನು ನೀಡಿದೆ. ಗ್ರಾಚ್ಯುಟಿ ಮಿತಿ ಏರಿಕೆ ಆದೇಶ ಇನ್ನಷ್ಟು ವಲಯಕ್ಕೆ ವಿಸ್ತರಣೆ ಹೈಕೋರ್ಟ್ ಏನು ಹೇಳಿದೆ? ಅರ್ಜಿದಾರರಿಗೆ 50 ಸಾವಿರ ರೂ. ವ್ಯಾಜ್ಯ ವೆಚ್ಚ ಸೇರಿದಂತೆ ಒಟ್ಟು 2.44 ಲಕ್ಷ ರೂ. ಗ್ರ್ಯಾಚ್ಯುಟಿ ಪಾವತಿ ಮಾಡುವಂತೆ ಸರ್ಕಾರಕ್ಕೆ ಆದೇಶ ನೀಡಿ ಅರ್ಜಿಯನ್ನು ವಿಲೇವಾರಿ ಮಾಡಿದೆ. ಗ್ರಾಚ್ಯುಟಿ ಎಂದರೇನು? ಗ್ರಾಚ್ಯುಟಿ ಲೆಕ್ಕ ಹಾಕುವುದು ಹೇಗೆ? “ಗ್ರ್ಯಾಚ್ಯುಟಿ ಪಾವತಿ ಸಂಬಂಧ ಗ್ರ್ಯಾಚ್ಯುಟಿ ಪಾವತಿ ಕಾಯಿದೆ 1972 ಕಾಯಂ ಸರಕಾರಿ ನೌಕರ ಮತ್ತು ಗುತ್ತಿಗೆ ನೌಕರರ ನಡುವೆ ಯಾವುದೇ ವ್ಯತ್ಯಾಸವನ್ನು ಮಾಡುವುದಿಲ್ಲ. ಹಾಗಾಗಿ 75 ವರ್ಷದ ನಿವೃತ್ತ ಸರ್ಕಾರಿ ನೌಕರರಾಗಿರುವ ಅರ್ಜಿದಾರರಿಗೆ ನಾಲ್ಕು ವಾರದಲ್ಲಿ ಬಾಕಿ ಇರುವ ಗ್ರ್ಯಾಚ್ಯುಟಿ ಹಣವನ್ನು ಪಾವತಿಸಬೇಕು” ಎಂದು ಕೋರ್ಟ್ ಆದೇಶಿಸಿದೆ ಸುಪ್ರೀಂಕೋರ್ಟ್…

Read More