Author: AIN Author

ಬೀದರ್- ಅನೈತಿಕ ಸಂಬಂಧದ ಹಿನ್ನೆಲೆ, ತನ್ನ ಮಿಂಡನ ಜೊತೆ ಸೇರಿ ಖತರ್ನಾಕ್ ಆಂಟಿಯೊಬ್ಬಳು ಗಂಡನ ಕೊಲೆ ಮಾಡಿಸಿರುವ ಘಟನೆ ಬೀದರ್ ನಲ್ಲಿ ಜರುಗಿದೆ. ಅದರ ಒಂದು ರಿಪೋರ್ಟ್ ಇಲ್ಲಿದೆ ನೋಡಿ. ಹೌದು ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಿಂಡನ ಜೊತೆ ಸೇರಿಕೊಂಡು ತಾಳಿ ಕಟ್ಟಿದ ಗಂಡನನ್ನೇ ಖತರ್ನಾಕ್ ಲೇಡಿ ಕೊಲೆ ಮಾಡಿರುವ ಘಟನೆ ಜರುಗಿದೆ. ಘಟನೆ ಸಂಬಂಧ ಮೃತನ ಹೆಂಡತಿ ಹಾಗೂ ಆಕೆಯ ಪ್ರಿಯಕರನ್ನು ಬೀದರ್ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನವೆಂಬರ್ 11ರ 2023ರಂದು ಬೀದರ್ ತಾಲೂಕಿನ ಪೊಮಾ ತಾಂಡಾ- ಅಲಿಯಂಬರ್ ನಡುವಿನ ರಸ್ತೆಯ ಬ್ರಿಡ್ಜ್ ಬಳಿ ಅಮಿತ್ ಎಂಬಾತನ ಮೃತದೇಹ ಪತ್ತೆಯಾಗಿರುತ್ತದೆ. ಪೊಮಾ ತಾಂಡಾದ ರವಿ ಪಾಟೀಲ್ ಫಾರ್ಮ್ ಹೌಸ್ಗೆ ಹೋಗಿ ವಾಪಸಾಗುತ್ತಿದ್ದ ವೇಳೆ ದ್ವಿಚಕ್ರ ವಾಹನದ ಮೇಲೆ ಬರುತ್ತಿದ್ದ ಅಮಿತ್ಗೆ ರಾಡ್ ನಿಂದ ಹೊಡೆದು ಕೊಲೆ ಮಾಡಿರುತ್ತಾರೆ,. ಕೊಲೆ ಮಾಡಿ ಅಪಘಾತದ ರೀತಿಯಲ್ಲಿ ಬಿಂಬಿಸಲು ಅಮಿತ್ ಪತ್ನಿಯ ಪ್ರೀಯಕರ ರವಿ ಪಾಟೀಲ್ ಸಂಚು ರೂಪಿಸಿರುತ್ತಾನೆ,. ಕೊಲೆಯ ಸಂಚು ರೂಪಿಸಿದ…

Read More

ನೆಲಮಂಗಲ : ರಾಜ್ಯದಲ್ಲಿರುವ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆಯನ್ನು ಸಹ ನಡೆಸಿದ್ದೆವು. ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಗಮನಕ್ಕೆ ತರಲಾಗಿದ್ದು. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮ ಸಮಸ್ಯೆ ಬಗೆಹರಿಯದಿದ್ದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಹೇಳಿಕೆ ನೀಡಿದರು. ನೆಲಮಂಗಲ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಕೆಡಬ್ಲ್ಯೂ ಜೆ ವಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ನೂತನ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಹಾಗೂ 2ನೇ ರಾಜ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಜನವರಿ ತಿಂಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಪಿಟಿಷನ್, ಸಿಎಂ ಸಿದ್ದರಾಮಯ್ಯ ವಿರುದ್ಧ ಪಿಐಎಲ್ ಸೇರಿದಂತೆ ಮಾನ್ಯತಾ ಪತ್ರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ವಾರ್ತಾ ಇಲಾಖೆಯ ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟ ಹಮ್ಮಿಕೊಳ್ಳಲಾಗು ವುದು ಎಂದು ಹೇಳಿದರು ರಾಜ್ಯದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಮತ್ತು 800ಕ್ಕೂ ಅಧಿಕ…

Read More

ಬೆಂಗಳೂರು :- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು. ಹಾಸನದ ಅರೆಮಾದನಹಳ್ಳಿಯ ವಿಶ್ವಕರ್ಮ ಜಗದ್ಗುರು ಪೀಠಾಧಿಪತಿ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಇಲಾಖೆ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಸೇರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Read More

ವಿಜಯ ರಾಘವೇಂದ್ರ ಅಭಿನಯದ 50ನೇ ಚಿತ್ರ ಸೀತಾರಾಮ್ ಬಿನೋಯ್ ಎಂಬ ಕ್ರೈಂ ಥ್ರಿಲ್ಲರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಈದೀಗ ಮತ್ತೊಂದು ವಿಭಿನ್ನ ಕಥಾ ಹಂದರದ ಕೇಸ್ ಆಫ್ ಕೊಂಡಾಣ ಎಂಬ ಹೈಪರ್ ಲಿಂಕ್ ಇನ್ವೆಸ್ಟಿಗೇಷನ್ ಚಿತ್ರವನ್ನು ತೆರೆಗೆ ತರಲು ಸಿದ್ಧವಾಗಿದ್ದಾರೆ. ಚಿತ್ರವು ಸಂಪೂರ್ಣ ಬೆಂಗಳೂರಿನಲ್ಲಿ ನಡೆಯುವ ಕಥೆಯಾಗಿದ್ದು ಆರಂಭದಲ್ಲಿ ಮೂರು ಕಥೆಗಳು ಪ್ರಯಾಣ ಮುಂದುವರಿಸುತ್ತಾ ಕೊನೆಯಲ್ಲಿ ಹೇಗೆ ಎಲ್ಲವೂ ಒಂದು ಕಡೆ ಸೇರುತ್ತವೆ ಎನ್ನುವುದು ವಿಭಿನ್ನ. ಚಿತ್ರದ ಶೇಕಡಾ 80 ಭಾಗ ಒಂದು ರಾತ್ರಿಯಲ್ಲಿ ನಡೆಯುವ ಘಟನೆಯಾಗಿದೆ. ಬೆಂಗಳೂರಿನ ಕೊಂಡಾಣ ಎನ್ನುವ ಕಾಲ್ಪನಿಕ ಸ್ಥಳದಲ್ಲಿ ಆ ರಾತ್ರಿ ನಡೆಯುವ ಘಟನೆ ಯಾದರೂ ಏನು ಎನ್ನುವ ಎಲ್ಲಾ ಪ್ರಶ್ನೆಗಳಿಗೂ ಜನವರಿ 26 ಉತ್ತರ ಸಿಗಲಿದೆ. ಹಿಂದೆಂದೂ ಕಾಣಿಸಿಕೊಳ್ಳದ ರೀತಿಯಲ್ಲಿ ವಿಜಯ ರಾಘವೇಂದ್ರ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಎಮೋಷನ್, ಕ್ರೈಂ, ಆಕ್ಷನ್, ಇರುವುದರ ಜೊತೆಗೆ ಪ್ರೇಕ್ಷಕರನ್ನು ಹಿಡಿದು ಕೂರಿಸುವ ಚಿತ್ರಕಥೆ ಇದೆ. ವಿಜಯ ರಾಘವೇಂದ್ರ, ಭಾವನಾ ಮೆನನ್,…

Read More

ಕೊಡಗು:- ನನ್ನ ತಮ್ಮನ ಬಂಧನ ವಿಚಾರದಲ್ಲಿ ರಾಜಕಾರಣ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಧು ಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣ ಮುಚ್ಚಲು, ಮಾಧ್ಯಮಗಳ ಗಮನ ಬೇರೆಡೆ ಸೆಳೆದು ವಿಷಯಾಂತರ ಮಾಡಲು ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದೀರಾ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯನವರಿಗೆ 2024 ಲೋಕಸಭೆ ಚುನಾವಣೆಯಲ್ಲಿ ಕೊಡಗು ಮೈಸೂರು ಕ್ಷೇತ್ರದಲ್ಲಿ ಅವರ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲ್ಲ ಅಂತ ಗೊತ್ತಿದೆ. ಪ್ರತಾಪ್ ಸಿಂಹನನ್ನು ರಾಜಕೀಯವಾಗಿ ಮುಗಿಸಬೇಕು, ಟೆಕೆಟ್ ತಪ್ಪಿಸಬೇಕು. ಇಲ್ಲದಿದ್ದರೆ ಪ್ರತಾಪ್ ಸಿಂಹ ವಿರುದ್ಧ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲ್ಲ. ಹಾಗಾಗಿ ನನ್ನನ್ನು ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

Read More

ಬೆಂಗಳೂರು:- ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಹಾವೇರಿಯಲ್ಲಿ ಅಲ್ಲಲ್ಲಿ ಹಗುರ ಮಳೆ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಶಿವನೊಗ್ಗ, ಹಾಸನ, ಚಿಕ್ಕಮಗಳೂರಲ್ಲೂ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More

ಬೆಂಗಳೂರು, ಜನವರಿ 01: ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024 ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಿದೆ ಎಂದರು. ರಾಜ್ಯದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಇಂದು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಪ್ರಕೃತಿ ಸಹಾಯವಿಲ್ಲದಿದ್ದರೆ, ಸರ್ಕಾರ ಏನು ಪರಿಹಾರ ಕೊಟ್ಟರು ಸಾಕಾಗುವುದಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈ ವೈಪರೀತ್ಯ ಕಾಣುತ್ತಿದ್ದೇವೆ. ಮುಂಗಾರಿನಲ್ಲಿ ಒಳ್ಳೆ ಮಳೆಯಾಗುವ ನಿರೀಕ್ಷೆ ಇದೆ. 2024 ರಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಮಾಡುವುದಾಗಿ ತಿಳಿಸಿದರು. ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆ:- ಅಭಿವೃದ್ಧಿ ನಿರೀಕ್ಷಿತ ಫಲ ಕಾಣಲು ಸಮೃದ್ಧಿಯಾಗಿ ಮಳೆಯಾಗಲಿ. ಶೇ. 60 ಕ್ಕೂ ಹೆಚ್ಚು ಜನ ವ್ಯವಸಾಯದ ಮೇಲೆ ಅವಲಂಬಿತರಾಗಿದ್ದಾರೆ. ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ…

Read More

ಬೆಂಗಳೂರು:- ವಿಲ್ಸನ್‍ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಧಾಮ ನಗರದಲ್ಲಿ ವೈಯಕ್ತಿಕ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ವರ್ಷಿಣಿ(21) ಮೃತ ದುರ್ದೈವಿ. ಪೋಷಕರೊಂದಿಗೆ ವಾಸವಿದ್ದ ವರ್ಷಿಣಿ, ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದರು. ಡಿ.31ರ ರವಿವಾರ ರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವುದೇ ಡೆತ್‍ನೋಟ್ ಲಭ್ಯವಾಗಿಲ್ಲ. ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆ ಹಾದಿ ಹಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಫೋಟೋಗ್ರಫಿಯಲ್ಲಿ ಆಸಕ್ತಿ ಹೊಂದಿದ್ದ ವರ್ಷಿಣಿ ಹೊಸ ವರ್ಷ ಸಂಭ್ರಮದ ಫೋಟೋ ತೆಗೆಯಲು ಸಿದ್ದತೆ ನಡೆಸಿದ್ದಳು ಎಂದು ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Read More

ಬೆಂಗಳೂರು:- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿದೆ. ಇಂದು 296 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, ಒಬ್ಬ ಸೋಂಕಿಗೆ ಬಲಿಯಾಗಿದ್ದಾನೆ. 50 ಜನರು ಗುಣಮುಖರಾಗಿದ್ದಾರೆ. 24 ಗಂಟೆಗಳಲ್ಲಿ 5,021 ಜನರಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. 20 ಜನ ಸೋಂಕಿತರು ಐಸಿಯುನಲ್ಲಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1245 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Read More

ಬೆಂಗಳೂರು:- ಯುವನಿಧಿ ಯೋಜನೆಗೆ ಈವರೆಗೆ 19,392 ಅಭ್ಯರ್ಥಿಗಳ ನೋಂದಣಿ ಆಗಿದೆ. ಡಿ.26 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದರು. ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ದಾಖಲು ನಡೆಯುತ್ತಿದ್ದು, ಯಾವುದೇ ಅಡಚಣಿ ಇಲ್ಲದೇ ಅಭ್ಯರ್ಥಿಗಳಿಗೆ ನೋಂದಣಿ ಅವಕಾಶ ಮಾಡಿಕೊಡಲಾಗಿದೆ. ಬೆಳಗಾವಿ 2316, ಬೆಂಗಳೂರು ನಗರ 1974, ರಾಯಚೂರು 1126 ಮೊದಲ ಮೂರು ಜಿಲ್ಲೆಗಳಾಗಿವೆ. ಕೊಡಗು 54, ಚಾಮರಾಜನಗರ 95 ಕಡಿಮೆ ನೋಂದಣಿಯಾಗಿವೆ.

Read More