ರಾಯಚೂರು: ಹೊಸ ವರ್ಷಾಚರಣೆ ವೇಳೆ ನಗರದ ಪ್ರೌಢ ಶಾಲಾ ವಿದ್ಯಾರ್ಥಿಗಳು ಶಾಲೆಯ ಹೊರಗಡೆ ಏರ್ ಗನ್, ಬಟನ್ ಚಾಕು, ಪಂಚ್, ಬೆತ್ತ ಹಿಡಿದು ಹೊಡೆದಾಡಿಕೊಂಡಿರುವ ಘಟನೆ ವರದಿಯಾಗಿದೆ. ನಗರದ ಜ್ಯೋತಿ ಕಾಲೊನಿಯ ಖಾಸಗಿ ಶಾಲೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಶಾಲೆಯ ಗೇಟ್ ಹೊರಗೆ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿ ಕೈ ಬೆರಳಿಗೆ ಗಾಯವಾಗಿವೆ. ಮಕ್ಕಳ ಈ ರೀತಿಯ ಹೊಡೆದಾಟದಿಂದ ಪೋಷಕರು ಆತಂಕಗೊಂಡಿದ್ದಾರೆ. ಹೊರಗಡೆಯ ಹುಡುಗರನ್ನು ಸಹ ಕರೆಯಿಸಿ ವಿದ್ಯಾರ್ಥಿಗಳು ಅಸ್ತ್ರಗಳ ಬಳಕೆಗೆ ಮುಂದಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ನಗರದ ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆಗೆ ಸಂಬಂಧಿಸಿ 7ನೇ ತರಗತಿಯ ಒಬ್ಬ ವಿದ್ಯಾರ್ಥಿಯನ್ನು ಠಾಣೆಗೆ ಕರೆಸಿದ್ದಾರೆ ಎಂಬ ಎಂದು ಹೇಳಲಾಗಿದೆ. ಆದರೆ ಬಾಲಾಪರಾಧ ಪ್ರಕರಣವಾಗಿರುವುದರಿಂದ ಮುಂದಿನ ಕ್ರಮದ ಬಗ್ಗೆ ಪೊಲೀಸ್ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ
Author: AIN Author
ಚಿಕ್ಕೋಡಿ: ಮುಸ್ಲಿಮರು ಎಲ್ಲೆಲ್ಲಿ ದೇವಸ್ಥಾನ ಒಡೆದು ಮಸೀದಿ ನಿರ್ಮಿಸಿದ್ದೀರಿ. ಮರ್ಯಾದೆಯಿಂದ ಮಸೀದಿಗಳನ್ನ ತೆಗೆದುಕೊಳ್ಳಿ. ಇಲ್ಲವಾದಲ್ಲಿ ಹಿಂದೂ ಸಮಾಜ ಮಸೀದಿಗಳನ್ನ ಒಡೆದು ಪುಡಿ ಪುಡಿ ಮಾಡುತ್ತದೆ ಎಂದು ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಶ್ರೀರಾಮಸೇನೆಯಿಂದ ಆಯೋಜನೆ ಮಾಡಿದ್ದ ‘ಮೋದಿ ಗೆಲ್ಲಿಸಿ.. ಭಾರತ ಉಳಿಸಿ’ ಅಭಿಯಾನ ಉದ್ಘಾಟಿಸಿ ಮಾತನಾಡಿದ ಮಾಜಿ ಡಿಸಿಎಂ ಈಶ್ವರಪ್ಪ, ಮಧುರಾ, ಕಾಶಿ ದೇವಸ್ಥಾನಗಳ ಕಾರ್ಯ ಸರ್ವೆ ಮಾಡುತ್ತೇವೆ. ಕೋರ್ಟ್ ಮುಖಾಂತರ ಸರ್ವೆ ನಡೆಯುತ್ತಿದೆ. ಕಾಶಿ ವಿಶ್ವನಾಥ ಮಧುರಾ ಶ್ರೀಕೃಷ್ಣ ದೇವಸ್ಥಾನವೂ ಶೀಘ್ರದಲ್ಲಿ ನಿರ್ಮಾಣ ಆಗುತ್ತವೆ ಎಂದು ತಿಳಿಸಿದ್ದಾರೆ. https://ainlivenews.com/curry-leaves-are-good-for-cooking-and-good-for-health-this-has-many-benefits/ ದೇಶದಲ್ಲಿ ಶ್ರೀರಾಮನ ಬಗ್ಗೆ ಚರ್ಚೆ ಆಗುತ್ತಿದೆ. ನಮ್ಮನ್ನ ವಿರೋಧ ಮಾಡಿದವರ ಹೊಟ್ಟೆಯಲ್ಲಿ ಕಸವಿಸಿ ಆಗುತ್ತಿದೆ. ಪಾಕಿಸ್ತಾನ ಸೇರಿ ಅಖಂಡ ಭಾರತ ನಿರ್ಮಾಣಕ್ಕೆ ಜೈ ಶ್ರೀರಾಮ ಘೋಷಣೆ ದೇಶದಲ್ಲಿ ಮತ್ತೆ ಕೇಳಿ ಬರುತ್ತಿದೆ. ಪಾಕಿಸ್ತಾನ ದೇಶದವರು ಮೋದಿ ಪ್ರಧಾನಿ ಆಗಿ ಬರಲಿ ಎಂದು ಬಯಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ನಗರ ಉಸ್ತುವಾರಿ ಸಚಿವರು ಡಿಕೆ ಶಿವಕುಮಾರ್ ಅವರು ಹಾಗಾಗಿ ಅವರನ್ನು ಭೇಟಿಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿದೆ ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೇಳಿಕೆ ನೀಡಿದರು. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಅಭಿವೃದ್ಧಿ ಆಗಲಿ, ನಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತನಾಡಿದ್ದೇನೆ ಂದರು. ಹೊಸ ವರ್ಷದಂದು ಬಿಜೆಪಿ ಶಾಸಕರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸೋಮಶೇಖರ್ ಬೇರೆ ಬಿಜೆಪಿ ಶಾಸಕರು ರಾತ್ರಿ ಬಂದು ಭೇಟಿ ಮಾಡಿ ಹೋಗ್ತಾರೆ ಮಾಧ್ಯಮಗಳ ಕಣ್ಣುತಪ್ಪಿಸಿ ಬರ್ತಾರೆ ನಾನು ಹಗಲು ಹೊತ್ತಲ್ಲಿ ರಾಜಾರೋಷವಾಗಿ ಬರ್ತೆನೆ ರಾಜಾರೋಷವಾಗಿ ಬಂದು ಮಾತನಾಡಿಕೊಂಡು ಹೋಗುತ್ತೇನೆ ಯಾವುದೇ ಮುಚ್ಚುಮರೆ ಇಲ್ಲ ಪದೆ ಪದೇ ಡಿಸಿಎಂ ಭೇಟಿಗೆ ಸೋಮಶೇಖರ್ ಕಾರವಾಗಿ ಉತ್ತರ ನೀಡಿದರು.
ಬೆಂಗಳೂರು: ವಿಜಯೇಂದ್ರ ಬರ ಅಧ್ಯಯನ ವಿಚಾರ ಬಗ್ಗೆ ಸಚಿವ ಚಲುವರಾಯಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ತಮಾಷೆಯೊ, ಸೀರಿಯಸ್ಸೋ ನನಗೆ ಗೊತ್ತಿಲ್ಲ ನಾವು ಕಳೆದ 3 ತಿಂಗಳಿಂದ ಕೇಂದ್ರ ಸರ್ಕಾರದ ಜೊತೆ ಸಂಪರ್ಕದಲ್ಲಿ ಇದ್ದೇನೆ ಮುಖ್ಯಮಂತ್ರಿಗಳು ಸುಮಾರು 10 ಕ್ಕೂ ಹೆಚ್ಚು ಪತ್ರ ಬರೆದಿದ್ದಾರೆ ನಾನು, ಕೃಷ್ಣಬೈರೇಗೌಡರು 3-4 ಭಾರಿ ಹೋಗಿದ್ದೇವೆಎಂದು ಹೇಳಿದರು. ಮೋದಿಯವರ ಭೇಟಿಗೆ ಅವಕಾಶ ಕೊಟ್ಟಾಗ ಎಲ್ಲಾ ಮಾಹಿತಿ ಕೊಟ್ಟು, ಮನವಿ ಮಾಡಿ ಬಂದಿದ್ದೀವಿ ಕೇಂದ್ರ ಸರ್ಕಾರದ ಅಧಿಕಾರಿಗಳು ಎಲ್ಲಾ ಪ್ರೊಸೆಸ್ ಮುಗಿಸಿ ವರದಿಯನ್ನು ಕೇಂದ್ರದ ಮಂತ್ರಿಗಳಿಗೆ ಕೊಟ್ಟಿದ್ದಾರೆ ಮಂತ್ರಿಗಳು ಅರ್ಧ ಗಂಟೆ ಮೀಟಿಂಗ್ ಮಾಡಿ ಬರ ಪರಿಹಾರವನ್ನು ಘೋಷಣೆ ಮಾಡಬೇಕು ಇದನ್ನ ಕೇಂದ್ರಕ್ಕೆ ಹೋಗಿ ಮಾಡಿಸೋದು ಬಿಟ್ಟು ಇಲ್ಲೇನು ಕೆಲಸ ಇರುತ್ತೆ ಇವರಿಗೆ ಕೇಂದ್ರದ ಟೀಂ ಬಂದು ರಿಪೋರ್ಟ್ ಕೊಟ್ಟಾಗಿದೆ, ಇವರು ಯಾರಿಗೆ ರಿಪೋರ್ಟ್ ಕೊಡ್ತಾರೆ ಕೇಂದ್ರದಲ್ಲಿ ಮನವಿ ಮಾಡೋದು ಬಿಟ್ಟು ಇಲ್ಲಿ ಪ್ರವಾಸ ಮಾಡ್ತಿದ್ದಾರೆ ಒಂದಷ್ಟು ಪ್ರಚಾರಕ್ಕೆ ಹೋಗ್ತಿರಬಹುದು,…
ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷಾಚರಣೆ ಜೋರಾಗಿಯೇ ನಡೆದಿದೆ. ವರ್ಷಾಂತ್ಯದ ದಿನ ಭಾರಿ ಪ್ರಯಾಣದಲ್ಲಿ ಮದ್ಯ ದ ಹೊಳೆಯೇ ಹರಿದಿದೆ. ಈ ಮೂಲಕ ಮದ್ಯಪ್ರಿಯರು ಅಬಕಾರಿ ಇಲಾಖೆಗೆ ಆದಾಯ ಗಿಫ್ಟ್ ನೀಡಿದ್ದು,ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಶೇ 15 ಪರ್ಸೆಂಟ್ ರಷ್ಟು ಹೆಚ್ಚುವರಿ ಆದಾಯ ತಂದುಕೊಟ್ಟಿದ್ದಾರೆ.ಮದ್ಯ ಸೇವಿಸುವವರಲ್ಲಿ ಸಿಟಿ ಮಂದಿ, ಈ ಬಾರಿ ಮುನ್ನಡೆ ಕಾಯ್ದುಕೊಂಡಿದ್ದು, ಹೆಚ್ಚುವರಿ ಮದ್ಯ ಮಾರಾಟವಾಗಿದೆ ಅನ್ನೋ ಮಾಹಿತಿ ಅಬಕಾರಿ ಇಲಾಖೆ ಬಿಡುಗಡೆ ಮಾಡಿದೆ. 2023ಕ್ಕೆ ಬಾಯ್ ಹೇಳಿ.. 2024ಕ್ಕೆ ಕಾಲಿಟ್ಟಾಗಿದೆ.. ಹೊಸ ವರ್ಷವನ್ನು ಹೊಸ ಹುರುಪಿನೊಂದಿಗೆ ಜನ ಸ್ವಾಗತಿಸಿದರು. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ ಸದ್ದು ಮುಗಿಲು ಮುಟ್ಟಿತ್ತು. ರಾಜ್ಯದೆಲ್ಲೆಡೆ ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮ ಕಳೆಗಟ್ಟಿತ್ತು. ಆದ್ರೆ ಈ ಬಾರಿ ನ್ಯೂ ಇಯರ್ ವೇಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮದ್ಯದ ಹೊಳೆಯೇ ಹರಿದಿದೆ. ಹೌದು.. ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡಿರುವ ಮದ್ಯಪ್ರಿಯರು ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಭರ್ಜರಿ ಕಿಕ್ ಕೊಟ್ಟಿದ್ದಾರೆ. 2023ರ…
ಬೆಂಗಳೂರು: ಹೊಸ ವರ್ಷ 2024 (New Year 2024) ಕರ್ನಾಟಕದ (Karnataka) ಜನತೆ ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜನರು ಕುಣಿದು ಕುಪ್ಪಳಿಸಿ 2023ಕ್ಕೆ ಗುಡ್‌ಬೈ ಹೇಳಿ 2024 ಸ್ವಾಗತಿಸಿದ್ದಾರೆ. ಬೆಂಗಳೂರಿನ (Bengaluru) ಪ್ರಮುಖ ಸ್ಥಳಗಳಾದ ಎಂಜಿರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರದ ಸ್ಟ್ರೀಟ್‌ಗಳು ಕಲರ್‌ಫುಲ್ ಆಗಿತ್ತು. ಕೆಲವೊಂದಿಷ್ಟು ಸಣ್ಣಪುಟ್ಟ ಗಲಾಟೆಗಳು ಕೂಡ ನಡೆದಿದ್ದು, ಪೊಲೀಸರು (Police) ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪ್ರತಿ ವರ್ಷದಂತೆ ಭಾನುವಾರ ರಾತ್ರಿ ಬೆಂಗಳೂರಿನ ಎಲ್ಲಾ ಫ್ಲೈ ಓವರ್‌ಗಳನ್ನು ಬಂದ್ ಮಾಡಲಾಗಿದೆ. ಬ್ರಿಗೇಡ್ ರಸ್ತೆಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಥಳಿಸಿ ಸ್ಥಳೀಯರು ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ. ಈ ವೇಳೆ ಪೊಲೀಸರು ಮುಂದೆ ಕಳ್ಳ ಕೈ ಮುಗಿದು ಬೇಡಿಕೊಂಡಿದ್ದಾನೆ. ನಂತರ ಮೊಬೈಲನ್ನು ಯುವಕನಿಗೆ ಪೊಲೀಸರು ಹಸ್ತಾಂತರಿಸಿದರು ಕೋರಮಂಗಲದಲ್ಲಿ ಯುವತಿಯೊಬ್ಬಳು ಎಣ್ಣೆ ಮತ್ತಿನಲ್ಲಿ ತೂರಾಡಿದ್ದಾಳೆ. ಈ ವೇಳೆ ನಾಲ್ಕು ಮಂದಿ ಮಹಿಳಾ…
ಬೆಂಗಳೂರು: ಶನಿವಾರ ತಡರಾತ್ರಿ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder) ಮಾಡಿರುವ ಘಟನೆ ಬೆಂಗಳೂರಿನ (Bengaluru) ಹನುಮಂತ ನಗರದ (Hanumanth Nagar) 80 ಅಡಿ ರಸ್ತೆಯಲ್ಲಿ ನಡೆದಿದೆ. ವಿಜಯ್ (21) ಹತ್ಯೆಯಾದ ಯುವಕ. ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕನನ್ನು ಹತ್ಯೆಗೈದಿದ್ದಾರೆ. ಈ ಕುರಿತು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಹನುಮಂತ ನಗರದ ಶ್ರೀನಿವಾಸ ನಗರ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಆಟೋದಲ್ಲಿ ಬಂದ ದುಷ್ಕರ್ಮಿಗಳು ಯುವಕನ ಮೇಲೆ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ನಿಗಮ ಮಂಡಳಿಗಳಲ್ಲಿ (Corporation Board) ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ಬೆಂಗಳೂರಿನ (Bengaluru) ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲಾ ನಾಯಕರು ಕೂತು ಚರ್ಚೆ ಮಾಡುತ್ತೇವೆ. ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡಾ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿರುತ್ತಾರೆ. ಅದಕ್ಕಾಗಿ ಎಲ್ಲರ ಜೊತೆ ಚರ್ಚೆ ಮಾಡಬೇಕು. ಸಂಕ್ರಾಂತಿ ಹಬ್ಬದ ವೇಳೆಗೆ ನಿಗಮ ಮಂಡಳಿ ನೇಮಕ ಆಗಬಹುದು ಎನ್ನುವ ನಿರೀಕ್ಷೆ ಇದೆ ಎಂದರು ಜನಸಾಮಾನ್ಯರು ತಮ್ಮ ಕಷ್ಟಗಳನ್ನು ತೆಗೆದುಕೊಂಡು ನಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ. ಅವರ ಕಷ್ಟಗಳನ್ನು ಕೇಳಲು ನಾವೇ ಅವರ ಬಳಿ ಹೋಗಬೇಕು. ಅವರ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದಿನ ತಿಂಗಳು ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ…
2024 ಹೊಸ ವರ್ಷ ಪ್ರಾರಂಭವಾಗಿದೆ. ಹೊಸ ಭರವಸೆ, ಹೊಸ ಹೊಸ ಕನಸುಗಳೊಂದಿಗೆ ಹೊಸ ವರ್ಷವನ್ನು ಇಡೀ ವಿಶ್ವ ಸ್ವಾಗತಿಸಿದೆ. ಮನುಕುಲಕ್ಕೆ ದೊಡ್ಡ ಪಾಠ ಹೇಳಿಕೊಟ್ಟ 2023ಗೆ ಧನ್ಯವಾದ ಹೇಳಿ, ಮತ್ತೆ ಅಂತ ವರ್ಷ ಮರುಕಳುಹಿಸದಿರಲಿ ಎಂದು ಪ್ರಾರ್ಥಿಸುತ್ತಾ ಎಲ್ಲರೂ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಇಂದು ಎಲ್ಲೆಲ್ಲೂ ಹೊಸ ವರ್ಷದ ಶುಭಾಶಯಗಳೇ ಹರಿದಾಡುತ್ತಿದೆ. ಎಲ್ಲರೂ ಹೊಸ ವರ್ಷಕ್ಕೆ ಶುಭಾಶಯಗಳನ್ನು ತಿಳಿಸುತ್ತಾ ಆನಂದಿಸುತ್ತಿದ್ದಾರೆ. ಸ್ಯಾಂಡಲ್ ವುಡ್ ನಟರು ಸಹ ಅಭಿಮಾನಿಗಳಿಗೆ ಹೊಸ ವರ್ಷಕ್ಕೆ ಪ್ರೀತಿಯ ಶುಭಾಶಯ ಕೋರುತ್ತಿದ್ದಾರೆ. ಅಂದ ಹಾಗೆ ಸ್ಯಾಂಡಲ್ವುಡ್ ರಾಕಿಂಗ್ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್ ಹೊಸ ವರ್ಷಕ್ಕೆ ವಿಭಿನ್ನವಾಗಿ ಅಭಿಮಾನಿಗಳಿಗೆ ಶುಭಾಶಯ ಕೋರಿದ್ದಾರೆ.ರಾಧಿಕಾ ಪಂಡಿತ್ ಇನ್ಸ್ಟಾಗ್ರಾಂನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ಮಕ್ಕಳಾದ ಐರಾ ಮತ್ತು ಯಥರ್ವ್ ಜೊತೆಗೆ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ವೈರಲ್ ಆಗಿದೆ. ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾ ಖಾತೆಯಲ್ಲಿ, ಪರಿಧಿಯೇ ಇಲ್ಲದ ಪ್ರೀತಿ, ನಿಷ್ಕಲ್ಮಶ…
ಬೆಂಗಳೂರು: ಯಾರೋ ನನಗೆ ಮಾಟ ಮಾಡಿಸಿದ್ರೇನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಬಿಜೆಪಿ ಮಾಜಿ ಸಚಿವ ವಿ.ಸೋಮಣ್ಣ (V Somanna) ಸ್ವಪಕ್ಷೀಯರ ವಿರುದ್ಧ ಮತ್ತೆ ಬೇಸರ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿಂದು (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಅನ್ಯಾಯ ಆಗಿದೆ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ಗೋವಿಂದರಾಜನಗರ ಕ್ಷೇತ್ರ ಬಿಡಬಾರದಿತ್ತು. ಆಗ ಯಾರಾದ್ರು ನನಗೆ ಮಾಟ ಮಂತ್ರ ಮಾಡಿಸಿದ್ದರೇನೋ, ಕ್ಷೇತ್ರ ಬಿಟ್ಟೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು. ಜನವರಿ 9ಕ್ಕೆ ದೆಹಲಿಯಲ್ಲಿ (New Delhi) ವರಿಷ್ಠರ ಭೇಟಿ ಆಗುತ್ತೇನೆ, ನನಗೆ ಆದ ಅನ್ಯಾಯವನ್ನ ವರಿಷ್ಠರ ಬಳಿ ಹೇಳುತ್ತೇನೆ. ನರೇಂದ್ರ ಮೋದಿ (Narendra Modi) ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಹೇಳಿದ್ದಾರೆ. ನನಗೆ ನೇರವಾಗಿ ತೊಂದರೆ ಆಗಿದೆ. ಯಾರು ಕಾರಣವೋ ಅವರನ್ನ ಕೂರಿಸಿ ಮಾತುಕತೆ ನಡೆಸಲಿ. ಇದನ್ನ ಸರಿಪಡಿಸಿ ಎಂದು ಹೈಕಮಾಂಡ್ ನಾಯಕರ ಬಳಿ ಕೇಳಿದ್ದೇನೆ. ಯಾರಿಂದ ತೊಂದರೆ…