Author: AIN Author

ದಾವಣಗೆರೆ: ” ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯು ಹಲವು ನ್ಯೂನತೆಗಳಿಂದ ಕೂಡಿದೆ. ಯಾವುದೇ ಕಾರಣಕ್ಕೂ ಈಗಿನ ವರದಿ ಒಪ್ಪುವುದಿಲ್ಲ ” ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮದೇ ಸರಕಾರದ ವಿರುದ್ಧ ಸಿಡಿಮಿಡಿಗೊಂಡರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮುದಾಯದ ಮನೆ ಮನೆಗೂ ಹೋಗಿ ಸಮೀಕ್ಷೆ ಮಾಡಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ ಎಂದು ಆರೋಪಿಸಿದರು.  ” ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯಿತ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಇದರಿಂದ ಸಮಾಜಕ್ಕೆ ತೀವ್ರ ಸ್ವರೂಪದ ನಷ್ಟವಾಗಲಿದೆ. ಜನಗಣತಿಯ ಅಂಕಿ – ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಹೀಗಾಗಿ, ಮತ್ತೊಮ್ಮೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿಸಬೇಕು,” ಎಂದು ಆಗ್ರಹಿಸಿದರು. ”ವೀರಶೈವ ಲಿಂಗಾಯಿತ ಸಮುದಾಯವು ಎಲ್ಲರ ಒಳಿತನ್ನೂ ಬಯಸುತ್ತದೆ. ನಾವು ಜಾತಿ ಗಣತಿಯ ವಿರೋಧಿಗಳಲ್ಲ. https://ainlivenews.com/knee-pain-treatment-joint-pain-treatment/ ಆದರೆ, ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಯ. ಈಗಾಗಲೇ 8 ವರ್ಷದಷ್ಟು ಹಳೆಯದಾಗಿರುವ ವರದಿಯು ಹಲವು…

Read More

ಬೆಂಗಳೂರು:- ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಕ್ಯೂಆರ್ ಕೋಡ್ ಮೂಲಕ ಹೆಚ್ಚಿನ ಟಿಕೆಟ್ ಖರೀದಿಗೆ ಅವಕಾಶ ಕಲ್ಪಿಸಿದೆ. ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆ ನ. 16ರಿಂದ ಏಕಕಾಲಕ್ಕೆ 6 ಕ್ಯೂಆರ್ ಕೋಡ್ ಟಿಕೇಟ್ ಖರೀದಿಸುವ ವ್ಯವಸ್ಥೆ ಮಾಡಲಾಗಿದೆ. ನಮ್ಮ ಮೆಟ್ರೋ ಆಯಪ್, ವಾಟ್ಸಾಪ್, ಪೇಟಿಎಂ, ಯಾತ್ರಾ ಆಯಪ್ ಗಳಲ್ಲಿ ಕ್ಯೂಆರ್ ಕೋಡ್ ಮೂಲಕ ಪ್ರಸ್ತುತ ಒಂದು ಟಿಕೆಟ್ ಖರೀದಿಗೆ ಮಾತ್ರ ಅವಕಾಶ ಇತ್ತು. ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಈ ಅಪ್ಡೇಟ್ ಮಾಡಲಾಗಿದೆ. ಪ್ರಯಾಣಿಕರು ಪ್ರವೇಶ ಮತ್ತು ನಿರ್ಗಮನದ ಸಂದರ್ಭದಲ್ಲಿ ಎಫ್.ಸಿ. ಗೇಟ್ ಬಳಿ ಆರು ಜನ ಪ್ರಯಾಣಿಕರಿಗೆ ಒಂದೇ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದು. ಇದರಿಂದಾಗಿ ಟಿಕೆಟ್ ಕೌಂಟರ್ ನಲ್ಲಿ ಸರತಿ ಸಾಲು ನಿಯಂತ್ರಿಸಲು ತಪ್ಪುತ್ತದೆ. ಇನ್ನೂ ಕ್ಯೂಆರ್ ಕೋಡ್ ಟಿಕೆಟ್ ಮೇಲೆ ಶೇ. 5 ರಷ್ಟು BMRCL ರಿಯಾಯಿತಿ ನೀಡಿದೆ.

Read More

ಚಾಮರಾಜನಗರ:- ಬಿ.ವೈ ವಿಜಯೇಂದ್ರ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಹಿನ್ನಲೆ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚಾಮರಾಜನಗರ ಜಿಲ್ಲಾ ಕೇಂದ್ರದ ಭುವನೇಶ್ವರಿ ವೃತ್ತದಲ್ಲಿ ಪಟಾಕಿ ಸಿಡಿಸಿ,ಸಿಹಿ ವಿತರಿಸಿ ಸಂಭ್ರಮಿಸಿದ್ದಾರೆ. ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷ ಮೂಡ್ಲೂಪುರ ನಂದೀಶ್ ನೇತೃತ್ವದಲ್ಲಿ ಅಭಿಮಾನಿಗಳಿಂದ ಸಂಭ್ರಮ ಮನೆ ಮಾಡಿದೆ. ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿ.ಎಂ ಯಡಿಯೂರಪ್ಪಗೆ ಜೈಕಾರ ಘೋಷಣೆ ಮೊಳಗಿದೆ. ಮಾಜಿ ಸಿ.ಎಂ.ಬಿಸವೈ ಹಾಗೂ ವಿಜಯೇಂದ್ರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

Read More

ಗದಗ: ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪರಿಹಾರ ಸಿಗದೆ ಇರುವ ಹಿನ್ನೆಲೆಯಲ್ಲಿ ಕೇಂದ್ರದ ನಡೆಗೆ ಸಚಿವ ಸಂಪುಟದಲ್ಲಿ ಖಂಡನೆ ವ್ಯಕ್ತಪಡಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಬರ ಪರಿಹಾರದ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ವಿಸ್ತೃತ ವಾಗಿ ಚರ್ಚೆ ಮಾಡಿದ್ವಿ. ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದ್ದೆವು. ಆದರೆ ಇದುವರೆಗೂ ಕೇಂದ್ರ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಇವತ್ತಿನ ಸಭೆಯಲ್ಲಿ ಕೇಂದ್ರ ಸರ್ಕಾರದ ನಡೆ ವಿರುದ್ಧ ಖಂಡನೆ ವ್ಯಕ್ತಪಡಿಸಿದ್ದೀವಿ ಎಂದರು. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರ ಗಳಲ್ಲಿ ಬರಗಾಲ ಪರಿಹಾರದ ಕೆಲಸಗಳು ಶುರುವಾಗಬೇಕು. ಈಗಾಗಲೇ 700-800 ಕೋಟಿ ಜಿಲ್ಲಾಧಿಕಾರಿ ಗಳ ಅಕೌಂಟ್ ನಲ್ಲಿದೆ. ಬರಗಾಲ ನಿರ್ವಹಣೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸಿಎಂ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದರು. https://ainlivenews.com/knee-pain-treatment-joint-pain-treatment/ ಹಣಕಾಸು ರಿಲೀಸ್ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ವಿರೋಧ ಪಕ್ಷಗಳು ಒತ್ತಾಯ ಮಾಡ್ತಿಲ್ಲ.…

Read More

ಕಲಬುರಗಿ:- ಇಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ ಪಿನ್ ಬಂಧಿಸಿದ್ದೂ ಆಯ್ತು ಮಹಾರಾಷ್ಟ್ರದಿಂದ ಕಲಬುರಗಿಗೆ ಕರೆತಂದಿದ್ದೂ ಆಯ್ತು.. ಇದೀಗ ಕಾನೂನು ಪ್ರಕ್ರಿಯೆ ಕೈಗೊಳ್ಳಲು ಅಶೋಕ ನಗರ ಪೋಲೀಸರು ಸಿದ್ಧತೆ ನಡೆಸಿದ್ದಾರೆ. ಇದೆಲ್ಲದರ ಜೊತೆಗೆ ಸ್ಪಾಟ್ ಮಹಜರು ಮತ್ತು ಮೆಡಿಕಲ್ ಚಕಪ್ ಮಾಡಿಸಲು ತಯಾರು ಮಾಡಿಕೊಂಡಿದ್ದಾರೆ. ಹೀಗೆ ಹಂತ ಹಂತವಾಗಿ ಎಲ್ಲವೂ ಅಂದುಕೊಂಡಂತೆ ಆದ್ರೆ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಬಲೆಗೆ ಬೀಳುವ ಸಾಧ್ಯತೆಗಳಿವೆ..

Read More

ಬೆಂಗಳೂರು:- ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಶಿಕಾರಿಪುರ ಕ್ಷೇತ್ರದ ಶಾಸಕ ವಿಜಯೇಂದ್ರ ಅವರಿಗೆ ರಾಜ್ಯ ಕಾಂಗ್ರೆಸ್​ ಘಟಕ ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ಟೀಕಿಸಿದೆ. ಯಡಿಯೂರಪ್ಪನವರ ಮಗ ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಅವರಿಗೆ ಅಭಿನಂದನೆಗಳು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದೆ. ಇತ್ತ ರಾಜ್ಯ ಕಾಂಗ್ರೆಸ್​ ಘಟಕದ ಟ್ವೀಟ್​ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದ್ದು, ದಶಕಗಳಿಂದ ಒಂದು ಕುಟುಂಬಕ್ಕೆ ಜೀತ ಮಾಡುತ್ತಿರುವ ಪಕ್ಷದ ರಾಜ್ಯ ಘಟಕವೊಂದು ಈ ಮಾತು ಆಡುತ್ತಿರುವುದನ್ನೂ ನಂಬಬೇಕು ಎಂದು ನೆಟ್ಟಿಗರು ತಿರುಗೇಟು ನೀಡಿದ್ದಾರೆ.

Read More

ಶಿವಮೊಗ್ಗ: ಮಳೆ ಕೊರತೆಯಾಗಿ ಬೆಳೆ ಹಾನಿ ಆಗಿರುವುದಕ್ಕೆ ಎನ್‌ಡಿಆರ್‌ಎಫ್‌ ನಿಯಮದಂತೆ ಕೇಂದ್ರ ಸರಕಾರ ಪರಿಹಾರ ನೀಡುತ್ತಿದೆ. ಅದಕ್ಕೆ ರಾಜ್ಯದ ಪಾಲು ನೀಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಕೇಂದ್ರದ ವಿರುದ್ಧ ಸಿಎಂ ಮಾಡುತ್ತಿರುವ ಆರೋಪ ನಿರಾಧಾರ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಶಿಕಾರಿಪುರ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಬಿ. ವೈ. ರಾಘವೇಂದ್ರ, ಸಿಎಂ ಸಿದ್ದರಾಮಯ್ಯ ಸಾರಥ್ಯದ ರಾಜ್ಯ ಸರ್ಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ಎಷ್ಟು ಅನುದಾನ ನೀಡಲಾಗಿತ್ತು. ಎನ್‌ಡಿಎ ಸರ್ಕಾರ ಎಷ್ಟು ಅನುದಾನ ನೀಡಿದೆ ಎಂದು ವಿವರಿಸಿದ ಬಿ. ವೈ. ರಾಘವೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಎಷ್ಟು ಹಣ ರೈತರಿಗೆ ತಲುಪಿತ್ತು ಹಾಗೂ ಈಗಿನ ಕಾಂಗ್ರೆಸ್ ಸರ್ಕಾರ ಎಷ್ಟು ಅನುದಾನ ನೀಡ್ತಿದೆ ಎಂದು ಅಂಕಿ ಅಂಶ ಸಮೇತ ವಿವರಿಸಿದ್ದಾರೆ. https://ainlivenews.com/knee-pain-treatment-joint-pain-treatment/ ಶಿವಮೊಗ್ಗ ಜಿಲ್ಲೆಯಲ್ಲಿ ಬರದಿಂದ ಅಂದಾಜು 80 ಸಾವಿರ ಹೆಕ್ಟೆರ್‌ ಬೆಳೆ ಹಾನಿ ಆಗಿದ್ದು ಎನ್‌ಡಿಆರ್‌ಎಫ್‌ ನಿಯಮದಂತೆ 80…

Read More

ಕೋಲಾರ:- ಹೃದಯಾಘಾತದಿಂದ ಕಾಂಗ್ರೆಸ್ ನ ಮಾಜಿ ಶಾಸಕ ಸಿ.ವೆಂಕಟೇಶಪ್ಪ ನಿಧನ ಹೊಂದಿದ್ದಾರೆ. ಕಳೆದ ವೆಂಕಟೇಶಪ್ಪ ಅವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋಲಾರ ನಗರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸಲದೆ ವೆಂಕಟೇಶಪ್ಪ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಿ.ವೆಂಕಟೇಶಪ್ಪ ಅವರು 1978,1983, 1999 ರಲ್ಲಿ ಶಾಸಕರಾಗಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದರು. ಸಿ.ವೆಂಕಟೇಶಪ್ಪ ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬುವನಹಳ್ಳಿ ಗ್ರಾಮದವರಾಗಿದ್ದಾರೆ. ಮೃತರ ಪಾರ್ಥೀವ ಶರೀರ ಸ್ವಗ್ರಾಮ ರವಾನೆ ಮಾಡಲಾಗಿದೆ. ಸಿ.ವೆಂಕಟೇಶಪ್ಪ ಅವರು ಆಗಿನ ಬೇತಮಂಗಲ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ವೆಂಕಟೇಶಪ್ಪ ಅಪಾರ ಅಭಿಮಾನಿಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Read More

ಬೆಂಗಳೂರು:- ನಾಡಿನಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಪಟಾಕಿ ಮಾರಾಟ ಮಾಡಲು ರೂಲ್ಸ್ ಮೇಲೆ ರೂಲ್ಸ್ ಜಾರಿಗೆ ತರಲಾಗುತ್ತಿದೆ. ನಗರದ 63 ಮೈದಾನಗಳಲ್ಲಿ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಅನಧಿಕೃತವಾಗಿ ಪಟಾಕಿ ಮಾರಾಟ ಮಾಡಿದ್ರೆ ಕೇಸ್ ಬೀಳಲಿದೆ. ಪಟಾಕಿ ಮಳಿಗೆಗೆ ಒಟ್ಡು 912 ಅರ್ಜಿ ಸಲ್ಲಿಕೆಯಾಗಿತ್ತು. ಆದರೆ ಸದ್ಯ 63 ಮೈದಾನಗಳಲ್ಲಿ ಮಾತ್ರ ಮಾರಾಟ ಮಾಡಬೇಕು. ಪಟಾಕಿ ಮಾರಲು ಕೆಳಕಂಡ ರೂಲ್ಸ್ ಅನ್ವಯ: -ಹಸಿರು ಪಟಾಕಿ ಮಾರುವುದು ಕಡ್ಡಾಯ, -ಹಸಿರು ಪ್ಯಾಕೆಟ್‌ಗಳ ಮೇಲೆ ಹಸಿರು ಪಟಾಕಿ ಚಿಕ್ಕ ಕ್ಯೂಆರ್ ಕೋಡ್ ಕಡ್ಡಾಯ -ಮಳಿಗೆಗಳ ವಿಸ್ತೀರ್ಣ 10×10 ಅಡಿ ಸೀಮಿತ -ನಿಗದಿಗಿಂತ ಹೆಚ್ಚು ಪ್ರಮಾಣದ ಪಟಾಕಿ ದಾಸ್ತಾನು ಮಾಡುವಂತಿಲ್ಲ -ಸಾಧ್ಯವಾದಷ್ಟೂ ಬೆಂಕಿ ತಡೆಯುವ ಉಪಕರಣಗಳನ್ನೇ ಬಳಸಿ ಮಳಿಗೆ ನಿರ್ಮಿಸಬೇಕು -ಮಳಿಗೆ ಮುಂಭಾಗ ಹಾಗೂ ಹಿಂಭಾಗ ಪ್ರವೇಶಿಸುವ ಅವಕಾಶ ಇರಬೇಕು -ಪ್ರತಿ ಮಾರಾಟ ಮಳಿಗೆಗೆ 3 ಮೀಟರ್ ಅಂತರ ಕಡ್ಡಾಯ -ಪರವಾನಗಿ ಪತ್ರ ಮಳಿಗೆಯಲ್ಲಿ ಪ್ರದರ್ಶಿಸಬೇಕು -ಪರವಾನಗಿದಾರರು ಮಳಿಗೆಯಲ್ಲಿ ಕಡ್ಡಾಯವಾಗಿ ಇರಬೇಕು.…

Read More

ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳು ಮಾಲಿನ್ಯ ನಿಯಂತ್ರಣಕ್ಕೆ ಪ್ರಾಯೋಗಿಕ ಪರಿಹಾರಗಳೊಂದಿಗೆ ಮುಂದಿನ ವಿಚಾರಣೆಗೆ ಬರಬೇಕು. ಇಲ್ಲಿಯ ಜನರನ್ನು ಸಾಯಲು ನಾವು ಅನುಮತಿಸುವುದಿಲ್ಲ. ಮುಖ್ಯ ಕಾರ್ಯದರ್ಶಿಗಳು ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅವರನ್ನು ಕೋರ್ಟಿಗೆ ಕರೆಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ (Supreme Court) ಎಚ್ಚರಿಕೆ ನೀಡಿದೆ. ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ಮುಂದುವರಿಸಿದ ಸುಪ್ರೀಂಕೋರ್ಟ್, ಮಾಲಿನ್ಯ ನಿಯಂತ್ರಣಕ್ಕೆ ನೀವು ಬೇಕಾದುದನ್ನು ಮಾಡಿ, ನಾವು ಏನನ್ನೂ ಹೇಳುತ್ತಿಲ್ಲ ಅಥವಾ ಯಾವುದೇ ನಿರ್ದೇಶನವನ್ನು ನೀಡುತ್ತಿಲ್ಲ. ನೀವೂ ಏನು ಮಾಡದಿದ್ದರೆ ನಾವು ಏನಾದರೂ ಮಾಡಬೇಕಾಗುತ್ತದೆ ಎಂದು ಸರ್ಕಾರಗಳ ವಿರುದ್ಧ ಛೀಮಾರಿ ಹಾಕಿತು. ಕೃಷಿ ತಾಜ್ಯ ಸುಡುವುದು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ. ಅದು ಕೂಡಲೇ ನಿಲ್ಲಬೇಕು. https://ainlivenews.com/knee-pain-treatment-joint-pain-treatment/ ನಾವು ಮಧ್ಯಪ್ರವೇಶಿಸಿದ ನಂತರವೇ ಕೆಲಸಗಳು ಏಕೆ ನಡೆಯುತ್ತವೆ? ಸೂಕ್ತ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಬಿಡುವುದಾಗಿ ನ್ಯಾಯಾಲಯ ಹೇಳಿದೆ. ವಿಚಾರಣೆ ವೇಳೆ ದೆಹಲಿಯಲ್ಲಿ (New Delhi) ಜಾರಿ ಮಾಡಿದ್ದ ಸಮ ಬೆಸ ಯೋಜನೆ ಯಶಸ್ವಿಯಾಗಿದೆ ಎಂದು ಸರ್ಕಾರ ಹೇಳಿದೆ. ಬೆಸ-ಸಮ ಯೋಜನೆಯು ರಸ್ತೆ…

Read More