ಬೀದರ್ : ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿಯನ್ನೇ (Husband) ಸಂಚು ರೂಪಿಸಿ ಪತ್ನಿ (Wife) ಹಾಗೂ ಪ್ರಿಯಕರ ಸೇರಿ ಕೊಲೆ ಮಾಡಿದ ಪ್ರಕರಣವನ್ನು ಕೊನೆಗೂ ಬೀದರ್ ಪೊಲೀಸರು (Bidar Police) ಬೇಧಿಸಿದ್ದಾರೆ. ಅಮಿತ್ ಕೊಲೆಯಾಗಿದ್ದು, ಪೊಲೀಸರು ಈಗ ಪತ್ನಿ ಚೈತ್ರಾ, ಆಕೆಯ ಗೆಳೆಯ ರವಿ ಪಾಟೀಲ್ ಅಲ್ಲದೇ ಕೃತ್ಯಕ್ಕೆ ಸಹಕಾರ ನೀಡಿದ ಸಿಕ್ಕಿಂದರ್ ಶಾಹಾ, ವೆಂಕಟ್ ಗಿರಿಮಾತೆ ಮತ್ತು ಆಕಾಶ್ ಅವರನ್ನು ಬಂಧಿಸಿದ್ದಾರೆ. ಏನಿದು ಪ್ರಕರಣ? ನವೆಂಬರ್ 11 ರಂದು ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದ ಬಳಿ ಅಮಿತ್ ಶವ ಪತ್ತೆಯಾಗಿತ್ತು. ಇದನ್ನು ಅಪಘಾತ ಎಂಬಂತೆ ಬಿಂಬಿಸಲಾಗಿತ್ತು. ಆದರೆ ಮೃತದೇಹ ನೋಡಿದಾಗ ಪೊಲೀಸರಿಗೆ ಅನುಮಾನ ವ್ಯಕ್ತವಾಗಿತ್ತು. ತನಿಖೆಗೆ ಇಳಿದ ಪೊಲೀಸರಿಗೆ ಶವ ಪತ್ತೆಯಾದ ಜಗದಲ್ಲಿ ಸಕ್ರಿಯವಾಗಿದ್ದ ಮೊಬೈಲ್ ನಂಬರ್ ಪತ್ತೆಹಚ್ಚಿದ್ದಾರೆ. ಬಳಿಕ ಸಿಕ್ಕಿಂದರ್ ಶಾಹಾ, ವೆಂಕಟ್ ಗಿರಿಮಾತೆ ಮತ್ತು ಆಕಾಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ರವಿ ಪಾಟೀಲ್ ಇವರಿಗೆ ಮುಂಗಡವಾಗಿ ಹಣ ನೀಡಿ ಕೃತ್ಯ ನಡೆಸಿ ವಿಚಾರಣೆಯನ್ನು…
Author: AIN Author
ಬಿಗ್‌ಬಾಸ್ (Bigg Boss Kannada) ಮನೆಯ ಸದಸ್ಯರೆಲ್ಲರೂ ಜಿದ್ದಿಗೆ ಬಿದ್ದವರಂತೆ, ಟಾಸ್ಕ್, ಅಗ್ರೆಶನ್, ಪಾಲಿಟಿಕ್ಸ್, ನಾಮಿನೇಷನ್ ಎಂದೆಲ್ಲ ಪರಸ್ಪರ ದೂಷಣೆಯಲ್ಲಿ, ಹಗ್ಗಜಗ್ಗಾಟದಲ್ಲಿ ತೊಡಗಿಕೊಂಡಿದ್ದರೆ, ‘ನನ್ನ ದಾರಿಯೇ ಬೇರೆ’ ಎನ್ನುವಂತೆ ಶಾಂತರಾಗಿ, ಮನೆಯವರಿಗೆಲ್ಲ ಹಿರಿಯಕ್ಕನಾಗಿ, ಎಲ್ಲರಿಗೂ ಬುದ್ಧಿ ಹೇಳಿ ಸಮಾಧಾನ ಮಾಡುತ್ತ, ನಾಮಿನೇಷನ್ ಮಾಡುವಾಗಲೂ ಅಷ್ಟೇ ಸಂಯಮದಿಂದ ಅಭಿಪ್ರಾಯ ತಿಳಿಸುತ್ತ ಬಂದವರು ಸಿರಿ. ‘ಬಿಗ್‌ಬಾಸ್ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿದ್ದಾರೆ ಸಿರಿ (Siri). ತಮ್ಮ ಸಂಯಮ, ಸಮತೂಕದ ವ್ಯಕ್ತಿತ್ವದಿಂದ ಬಿಗ್‌ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳ ನೆಚ್ಚಿನ ‘ಅಕ್ಕ’ನಾಗಿದ್ದ ಸಿರಿ, ಈ ವಾರ ಮನೆಯಿಂದ ಹೊರಗೆ ಬಂದಿದ್ದಾರೆ. ಬಿಗ್‌ಬಾಸ್ ಪ್ರಯಾಣ ಮುಗಿಸಿದ ತಕ್ಷಣ JioCinemaಗೆ ನೀಡಿದ್ದ ಎಕ್ಸ್‌ಕ್ಲ್ಯೂಸಿವ್ ಸಂದರ್ಶನದಲ್ಲಿ ಅವರು ಈ ಪ್ರಯಾಣದ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ಅದರ ಅಕ್ಷರರೂಪ ಇಲ್ಲಿದೆ. ನಾನು ನಿಮ್ಮ ಪ್ರೀತಿಯ ಸಿರಿ. ಬಿಗ್‌ಬಾಸ್ ಕನ್ನಡ ಸೀಸನ್…
ಬೆಳಗಾವಿ: ಮುಂದಿನ ಚುನಾವಣೆಗೆ ನನ್ನ ಮಗನಿಗೆ ಟಿಕೆಟ್ ಪಡೆಯೋಕೆ ಪ್ರಯತ್ನಿಸುತ್ತಿದ್ದೇನೆ. ಟಿಕೆಟ್ ಕೊಟ್ಟರೇ ಹಾವೇರಿಯಿಂದ ಸ್ಪರ್ಧಿಸುತ್ತಾನೆ ಎಂದು ಕೆ.ಎಸ್ ಈಶ್ವರಪ್ಪ (KS Eshwarappa) ಹೇಳಿದ್ದಾರೆ. ಬೆಳಗಾವಿ (Belagavi) ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಮುಂದಿನ ಚುನಾವಣೆಗೆ ನನ್ನ ಮಗ ಕಾಂತೇಶ್‌ಗೆ ಟಿಕೆಟ್ ಪಡೆಯಬೇಕು ಅಂತ ಪ್ರಯತ್ನಿಸುತ್ತಿದ್ದೇನೆ. ಟಿಕೆಟ್ ಕೊಟ್ಟರೆ ಚುನಾವಣೆಗೆ ನಿಲ್ಲಿಸುತ್ತೇನೆ. ಹಾವೇರಿಯಿಂದ ಕಾಂತೇಶ್ ಸ್ಪರ್ಧೆ ಮಾಡ್ತಾನೆ ಎಂದು ಹೇಳಿದ್ದಾರೆ. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, https://ainlivenews.com/wedding-in-bollywood-yard-busy-actor-aamir-khan-at-daughters-wedding/ ಸಿದ್ದರಾಮಯ್ಯ (Siddaramaiah) ಅವರು ಅಹಿಂದ ಅಂತ ಹೋಗುತ್ತಿದ್ದರು. ಆದ್ರೆ ಹಿಂದುಳಿದವರು, ದಲಿತರು ಕೈಬಿಟ್ಟರು, ಇನ್ನು ಉಳಿದಿರೋದು ಅಲ್ಪಸಂಖ್ಯಾತರು (Muslims) ಮಾತ್ರ. ಅವರನ್ನೇ ಬಳಸಿಕೊಂಡು ರಾಜಕೀಯ ಮಾಡಬೇಕು ಅನ್ನೋದು ಸಿದ್ದರಾಮಯ್ಯರ ಲೆಕ್ಕ. ದೇಶದ್ರೋಹಿಗಳಿಗೆ ತೃಪ್ತಿ ಆಗುವ ರೀತಿಯಲ್ಲಿ ಸಿದ್ದರಾಮಯ್ಯ ಮಾತಾಡ್ತಾರೆ ಎಂದಿದ್ದಾರೆ.
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾನೆಲ್‌ನಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ಕೇಳಿ ಸಿಬಿಐನಿಂದ ನೋಟಿಸ್ ಜಾರಿ ಮಾಡಲಾಗಿದೆ. ಕೇರಳ ಮೂಲದ ಜೈಹಿಂದ್ ಚಾನೆಲ್‌ಗೆ ಸಿಬಿಐ ನೋಟಿಸ್ ಜಾರಿ ಮಾಡಲಾಗಿದೆ. ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಬಿಎಸ್ ಶಿಜು ಅವರಿಗೆ ಸಿಬಿಐನ ಬೆಂಗಳೂರು ಕಚೇರಿಯಿಂದ ಈ ನೋಟಿಸ್ ಅನ್ನು ಜಾರಿ ಮಾಡಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ಜನವರಿ 11 ರಂದು ಬೆಂಗಳೂರಿನಲ್ಲಿರುವ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಲಾಗಿದೆ. ಅಪರಾಧ ದಂಡ ಸಂಹಿತೆಯ ಸೆಕ್ಷನ್ 91 ಪ್ರಕಾರ ನೋಟಿಸ್ ಕಳುಹಿಸಲಾಗಿದೆ. ಡಿ.ಕೆ. ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳ ವಿವರ ಮತ್ತು ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ವಿವರ ನೀಡಬೇಕು. ಇಷ್ಟೇ ಅಲ್ಲದೆ, ಜೈಹಿಂದ್ ಹೆಸರಿನಲ್ಲಿ ಅವರು ಮಾಡಿದ ಬ್ಯಾಂಕ್ ವಹಿವಾಟುಗಳ ವಿವರಗಳು, ಲೆಡ್ಜರ್ ಖಾತೆಗಳು,…
ಪಣಜಿ: ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಭಗವಂತ ಶಿವನ (Lord Shiva) ಚಿತ್ರಗಳನ್ನು ಪ್ರದರ್ಶಿಸಿ ದೇವರಿಗೆ ಅಪಮಾನಿಸಿದ್ದಾರೆ ಎಂದು ಆರೋಪಿಸಿ ಇಲ್ಲಿನ ಸನ್‌ಬರ್ನ್ ಇಡಿಎಂ ಉತ್ಸವದ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ (Congress) ಮತ್ತು ಆಮ್ ಆದ್ಮಿ ಪಕ್ಷ (AAP) ಒತ್ತಾಯಿಸಿದೆ. ಸನ್‌ಬರ್ನ್ ಸಂಘಟಕರ ವಿರುದ್ಧ ಕಾಂಗ್ರೆಸ್ ಮುಖಂಡ ವಿಜಯ್ ಭಿಕೆ, ಮಾಪುಸಾದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಎಎಪಿ ಗೋವಾ ಮುಖ್ಯಸ್ಥ ಅಮಿತ್ ಪಾಲೇಕರ್ ಅವರು, ಸನಾತನ ಧರ್ಮವನ್ನು ಅಪಮಾನಿಸಿದವರ ವಿರುದ್ಧ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಆಗ್ರಹಿಸಿದ್ದಾರೆ. ಮಾಪುಸಾ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, ಕಾಂಗ್ರೆಸ್ ನಾಯಕ ವಿಜಯ್ ಭಿಕೆ, ಈ ಉತ್ಸವದಲ್ಲಿ ಮದ್ಯಪಾನ, https://ainlivenews.com/wedding-in-bollywood-yard-busy-actor-aamir-khan-at-daughters-wedding/ ನಿಷೇಧಿತ ಪದಾರ್ಥಗಳ ಸೇವನೆ ಸೇರಿದಂತೆ ಅಕ್ರಮ ಚಟುವಟಿಕೆಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲಿ ದೇವ ಶಿವನ ಚಿತ್ರಗಳನ್ನು ಬಳಿಸಿ, ಸಂಘಟಕರು ಉದ್ದೇಶಪೂರ್ವಕವಾಗಿ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಅವಮಾನಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್‌ನಿಂದ ದೂರು ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು…
ದರ್ಶನ್ (Darshan) ನಟನೆಯ ಕಾಟೇರ (Katera) ಸಿನಿಮಾ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಅಲ್ಲದೇ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗುತ್ತಿದೆ. ಸಿನಿಮಾ ರಂಗದ ಅನೇಕ ಗಣ್ಯರಷ್ಟೇ ಅಲ್ಲ, ರಾಜಕಾರಣಿಗಳು ಕೂಡ ಸಿನಿಮಾ ವೀಕ್ಷಿಸಿ ಮೆಚ್ಚುಗೆಯನ್ನು ಸೂಚಿಸುತ್ತಿದ್ದಾರೆ. ಕಾಟೇರ ಸಿನಿಮಾ ವೀಕ್ಷಣೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi), ದರ್ಶನ್ ನಟನೆಗೆ ಫುಲ್ ಫಿದಾ ಆಗಿದ್ದಾರೆ. ಚಿತ್ರತಂಡಕ್ಕೂ ಶುಭಾಶಯ ತಿಳಿಸಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಜೋಶಿ, ‘ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಕ್‌ಲೈನ್ ವೆಂಕಟೇಶ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಕಾಟೇರ ಚಲನಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು. ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ ಅಚ್ಚುಕಟ್ಟಾಗಿ ಅದ್ಭುತವಾಗಿ ತೋರಿಸಲಾಗಿದೆ. ದರ್ಶನ್ ಅವರ ಅದ್ಭುತ ನಟನೆ ಅಭಿಮಾನಿಗಳನ್ನು ಚಲನಚಿತ್ರ ಪ್ರಿಯರನ್ನು ಮತ್ತೊಮ್ಮೆ ರಂಜಿಸುವುದರ ಜೊತೆಗೆ ಹೊಸ ಸಂದೇಶವನ್ನು ಸಾರಿದ್ದಾರೆ. ಚಲನಚಿತ್ರ ಯಶಸ್ಸು ಕಾಣಲಿ ಎಂದು ಕಾಟೇರ…
ಬೆಂಗಳೂರು: ಹೊಸ ವರ್ಷದಂದು ರಾಜ್ಯದ ಜನತೆ ದೇವರ ಮೊರೆ ಹೋಗಿದ್ದಾರೆ. ವರ್ಷದ ಮೊದಲ ದಿನದಂದು ಎಲ್ಲಾ ದೇಗುಗಳಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದೆ. ಬೆಂಗಳೂರಿನ ದೇಗುಲಗಳಲ್ಲಿ ಭಕ್ತರ ಸಂಖ್ಯೆ ಇಂದು ಹೆಚ್ಚಾಗುತ್ತಿದೆ. ಬೆಂಗಳೂರಿನ ಶಕ್ತಿ ದೇವತೆ ಅಣ್ಣಮ್ಮ ದೇವಿಗೆ ವಿಶೇಷ ಅಲಂಕಾರ, ಪೂಜೆ ನಡೆಯುತ್ತಿದೆ. ಈ ವರ್ಷ ಒಳ್ಳೆಯದಾಗಲಿ ಅಂತಾ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಾಡುಮಲ್ಲೇಶ್ವರ ದೇಗುಲದಲ್ಲೂ ಜನಸಾಗರ ಇದೆ. ಮಧ್ಯಾಹ್ನ 1 ಗಂಟೆಗೆ ಕ್ಲೋಸ್ ಆಗುತ್ತಿದ್ದ ದೇಗುಲ ಇಂದು 2:30ರವರೆಗೆ ಇರಲಿದೆ. ಭಕ್ತರ ಸಂಖ್ಯೆ ಹೆಚ್ಚಳವಾಗಿದ್ರಿಂದ ದೇಗುಲದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಘಾಟಿ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ ನೆರೆದಿದ್ದು, ಬೆಳ್ಳಂಬೆಳಗ್ಗೆಯಿಂದ ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ಜನ ನಿಂತಿದ್ದಾರೆ.
ಜಮ್ಮು-ಕಾಶ್ಮೀರ: ಅಯೋಧ್ಯೆ ರಾಮ ಮಂದಿರವು (Ayodhya Ram Mandir) ಇನ್ನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗುತ್ತಿದೆ. ಈ ಮಂದಿರಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ (Farooq Abdullah) ಹೇಳಿದ್ದಾರೆ. ಅಯೋಧ್ಯೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಕಠಿಣ ಪರಿಶ್ರಮದಿಂದ ಇಂದು ರಾಮಮಂದಿರವು (Ayodhya Ram Temple) ತಲೆ ಎತ್ತಿ ನಿಂತಿದೆ. ಭಗವಾನ್ ರಾಮನು ಹಿಂದೂಗಳಿಗೆ ಮಾತ್ರ ಸೇರಿದವರಲ್ಲ, ಅವರು ಪ್ರಪಂಚದ ಎಲ್ಲರಿಗೂ ಸೇರಿದವರು ಎಂದು ಹೇಳಲು ಇಚ್ಛಿಸುತ್ತೇನೆ. ಪುಸ್ತಕಗಳಲ್ಲಿಯೂ ಇದನ್ನೇ ಬರೆಯಲಾಗಿದೆ ಎಂದು ಹೇಳಿದರು. https://ainlivenews.com/the-center-has-declared-a-canadian-born-criminal-as-a-terrorist/ ಭಗವಾನ್ ರಾಮ ಸಹೋದರತ್ವ, ಪ್ರೀತಿ ಮತ್ತು ಏಕತೆಯ ಬಗ್ಗೆ ಮಾತನಾಡಿದ್ದಾರೆ. ಅವರು ಯಾವತ್ತೂ ಭಾಷೆ ಹಾಗೂ ಧರ್ಮದ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಪ್ರೀತಿ ಹಾಗೂ ಒಗ್ಗಟ್ಟಿನಿಂದ ಬಾಳಬೇಕು ಎಂದು ಇಡೀ ಜಗತ್ತಿಗೆ ಸಾರಿದವರಾಗಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ತಿಳಿಸಿದರು.
ಅಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ ಹಾಸ್ಯ ಪ್ರಧಾನ ಕಥಾಹಂದರದ ಚಿತ್ರ ಈ ವಾರ ಬಿಡುಗಡೆಗೆಯಾಗಲಿದೆ. ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ. ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ ಟೈನರ್, ಕಥಾಹಂದರ ಹೊಂದಿರುವ ಚಿತ್ರ ಇದಾಗಿದ್ದು, ಕುಟುಂಬ ಸಮೇತ ಕುಳಿತು ವೀಕ್ಷಿಸುವಂಥ ಅನ್ ಲಿಮಿಟೆಡ್ ಕಾಮಿಡಿ ಜೊತೆಗೆ ಡಿಫರೆಂಟ್ ಕಾನ್ಸೆಪ್ಟ್ ಇದರಲ್ಲಿದೆ. ಜಗಪ್ಪ, ಸುಶ್ಮಿತ, ಸೀರುಂಡೆ ರಘು, ಗಜೇಂದ್ರ, ಗಜೇಂದ್ರ, ರಾಘವಿ ಸೇರಿದಂತೆ ಗಿಚ್ಚಿ ಗಿಲಿ ಗಿಲಿ, ಮಜಾಭಾರತ, ಕಾಮಿಡಿ ಕಿಲಾಡಿಗಳು, ಕಾರ್ಯಕ್ರಮದ ಅನೇಕ ಕಲಾವಿದರು ಅಲ್ಲದೆ ಯಶಸ್ವಿನಿ, ಚಂದನ, ಶರಣ್ಯರೆಡ್ಡಿ ಮುಂತಾದವರು ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಬಾಲು ಕ್ಯಾಮೆರಾ ವರ್ಕ್, ಅಲೆಕ್ಸ್ ಕಲಾವಿದರ ಸಂಗೀತ, ಅರುಣ ಪ್ರಸಾದ್, ವೇಂಪಲ್ಲಿ ಬಾಲಾಜಿ ಸಾಹಿತ್ಯ, ಗಣೇಶ್, ಸದಾಶಿವ ಅವರ ನೃತ್ಯ ನಿರ್ದೇಶನ…
ಬೆಂಗಳೂರು: ಹೊಸ ವರ್ಷದಲ್ಲಿ ದಾಖಲೆ ಬರೆದ ನಮ್ಮ ಮೆಟ್ರೋ ನ್ಯೂ ಇಯರ್ ಸಂಭ್ರಮದಲ್ಲಿ ದಾಖಲೆ ಮಟ್ಟದ ಆದಾಯ ಹರಿದು ಬಂದಿದೆ. ನಮ್ಮ ಮೆಟ್ರೋ ಸಂಚಾರದಲ್ಲಿ ಹೊಸ ವರ್ಷದ ಹಿನ್ನೆಲೆ ಡಿ.31ರಂದು ಒಂದೇ ದಿನ ಬೆಳಗ್ಗೆಯಿಂದ ರಾತ್ರಿವರೆಗೆ 6.50 ಲಕ್ಷ ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಈ ಮೂಲಕ ಒಂದೇ ದಿನದಲ್ಲಿ ನಮ್ಮ ಬಿಎಂಆರ್‌ಸಿಎಲ್ ಸಂಸ್ಥೆಗೆ ಬರೋಬ್ಬರಿ 1.70 ಕೋಟಿ ರೂ. ಆದಾಯ ಬಂದಿದೆ. ಡಿಸೆಂಬರ್ 31 ರಂದು ಒಂದೇ ದಿನ ದಾಖಲೆ ಬರೆದ ಮೆಟ್ರೋ ರೈಡರ್ ಶಿಪ್ ಹಾಗೂ ಮೆಟ್ರೋ ಆದಾಯ ಹೆಚ್ಚಳವಾಗಿದೆ. ಮೆಟ್ರೋ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಹೆಚ್ಚಿನ ಆದಾಯ ಹಾಗೂ ಪ್ರಯಾಣಿಕರು ಸಂಚಾರ ಮಾಡಿದ ದಾಖಲೆ ನಿರ್ಮಾಣವಾಗಿದೆ. ಡಿ.31 ರಂದು ಮೆಟ್ರೋದಲ್ಲಿ 6. 50 ಲಕ್ಷ ಪ್ರಯಾಣಿಕರ ಸಂಚಾರ ಮಾಡಿದ್ದಾರೆ. ಈ ಪ್ರಯಾಣಿಕರ ಸಂಚಾರದಿಂದ ಒಂದೇ ದಿನದಲ್ಲಿ ಬರೀಬ್ಬರಿ 1.70 ಕೋಟಿ ರೂ. ಆದಾಯ ಗಳಿಸಿದೆ. ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆ ಮಧ್ಯ ರಾತ್ರಿ 2 ಗಂಟೆಯವರೆಗೂ ಮೆಟ್ರೋ…