ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆಯೇ ಮೊದಲ ದಿನವೇ ಡಬಲ್ ಮರ್ಡರ್ (Double murder) ನಡೆದಿದೆ. ಹನುಮಂತ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀನಿವಾಸ ನಗರದಲ್ಲಿ ಭಾನುವಾರ ರಾತ್ರಿ ಯುವಕನ ಕೊಲೆಯಾಗಿದೆ. ಬನಶಂಕರಿ ಮೂಲದ ವಿಜಯ(21)ಹತ್ಯೆಯಾದ ಯುವಕ. ಆತನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿದ ದುಷ್ಕರ್ಮಿಗಳು ರಸ್ತೆ ಬದಿ ಎಸೆದು ಪರಾರಿಯಾಗಿದ್ದಾರೆ. ಭಾನುವಾರ ರಾತ್ರಿ 1 ಗಂಟೆ ಸುಮಾರಿಗೆ ಈ ಕೊಲೆ ನಡೆದಿದೆ. ವಿಜಯ್ ಅವರನ್ನು ಸ್ನೇಹಿತರೇ ಹತ್ಯೆಯಾಗಿರುವ ಶಂಕೆ ಇದೆ. ಅವರೆಲ್ಲ ಸೇರಿ ವಿಜಯ್‌ನನ್ನು ಕೊಂದು ಶ್ರೀನಿವಾಸ್ ನಗರ ಬಸ್ ನಿಲ್ದಾಣದ ಮುಂದೆ ಬಿಸಾಕಿ ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Author: AIN Author
ಸಿಡ್ನಿ: ಆಸೀಸ್ ಆಟಗಾರ ಡೇವಿಡ್ ವಾರ್ನರ್ (David Warner) ಅವರು ಏಕದಿನ ಕ್ರಿಕೆಟ್‌ಗೆ ವಿದಾಯ (ODI retirement) ಘೋಷಿಸಿದ್ದಾರೆ. ಈ ಮೂಲಕ ಹೊಸ ವರ್ಷದ ಆರಂಭದಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ವಾರ್ನರ್ ಶಾಕ್ ನೀಡಿದ್ದಾರೆ. ಜನವರಿ 3 ರಂದು ಸಿಡ್ನಿಯಲ್ಲಿ ಪಾಕಿಸ್ತಾನದ (Pakistan) ವಿರುದ್ಧ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯವು ವೃತ್ತಿ ಜೀವನದ ಕೊನೆಯ ಟೆಸ್ಟ್ ಪಂದ್ಯವಾಗಲಿದೆ ಎಂದು ವಾರ್ನರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ದೃಷ್ಟಿಯಿಂದ ವಾರ್ನರ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 565 ರನ್ ಗಳಿಸಿ ಆಸ್ಟ್ರೇಲಿಯಾ ಟ್ರೋಫಿ ಗೆಲ್ಲುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ವಾರ್ನರ್, ಒಟ್ಟಾರೆ 161 ಏಕದಿನ ಪಂದ್ಯಗಳಿಂದ 6932 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದರೂ 2025 ರಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದಾಗಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಹೇಳಿದ್ದಾರೆ. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ಸಲುವಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಏಕದಿನ ವಿಶ್ವಕಪ್ ಟೂರ್ನಿಯ ಸಮಯದಲ್ಲೇ ನಾನು…
ಬೆಳಗಾವಿ: ಬೆಳಗಾವಿಯಲ್ಲಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ. ಹೌದು ಹೊಸ ವರ್ಷದ ಸಂದರ್ಭದಲ್ಲೇ ಗಡಿಜಿಲ್ಲೆ ಬೆಳಗಾವಿಯಲ್ಲಿ ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ದರ್ಪ ಮೆರೆದಿದ್ದಾರೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. https://ainlivenews.com/the-center-has-declared-a-canadian-born-criminal-as-a-terrorist/ ಪುಂಡರ ಈ ಕೃತ್ಯಕ್ಕೆ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಹೋರಾಟಗಾರರು ಮನವಿ ಮಾಡಿದ್ದಾರೆ. ಇನ್ನು ಎರಡು ವರ್ಷದ ಹಿಂದೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿಯಲ್ಲಿ ಕನ್ನಡ ಬಾವುಟ ಸುಟ್ಟು ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸಗಣಿ ಮೆತ್ತಿದ್ದ ಘಟನೆ ನಡೆದಿತ್ತು.
ಚಿತ್ರದುರ್ಗ: ಈ ಹಿಂದಿನ ಚುನಾವಣೆ ವೇಳೆ ಪುಲ್ವಾಮಾ (Pulwama) ಘಟನೆ ತೋರಿಸಿದ್ದರು. ಈಗ ರಾಮನ (Rama) ಫೋಟೋ ಹಿಡಿದಿದ್ದಾರೆ ಎಂದು ಸಾಂಖಿಕ ಸಚಿವ ಡಿ.ಸುಧಾಕರ್ (D Sudhakar) ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಚಿತ್ರದುರ್ಗದ ಡಿಸಿಸಿ ಬ್ಯಾಂಕ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ (Ayodhya Ram Mandir) ಉದ್ಘಾಟನೆ ಒಂದು ಸ್ಟಂಟ್. ಜನರು ದಡ್ಡರಿಲ್ಲ, ಎರಡು ಸಲ ಮೂರ್ಖರಾಗಿದ್ದೀವಿ. ಮತ್ತೆ ಮೂರನೇ ಸಲ ಮೂರ್ಖರಾಗಲ್ಲ ಆಗಲ್ಲ ಎಂಬ ಭರವಸೆಯಿದೆ ಎಂದರು. https://ainlivenews.com/the-center-has-declared-a-canadian-born-criminal-as-a-terrorist/ ಲೋಕಸಭಾ ಚುನಾವಣೆಯ (Loksabha Election) ಹಿನ್ನೆಲೆಯಲ್ಲಿ ರಾಮಮಂದಿರ ಉದ್ಘಾಟನೆ ಎಂಬುದು ಸತ್ಯ. ರಾಮಮಂದಿರಕ್ಕೆ ನಾನು, ಶಾಸಕ ರಘುಮೂರ್ತಿ ದುಡ್ಡು ಕೊಟ್ಟಿದ್ದೇವೆ. ಹಿಂದೆಲ್ಲಾ ಇಟ್ಟಿಗೆ ಸಹ ನಾವೆಲ್ಲಾ ನೀಡಿದ್ದೇವೆ. ರಾಮ ಎಲ್ಲರಿಗೂ ದೇವರು, ಚುನಾವಣೆ ವೇಳೆ ದೇಗುಲ ಉದ್ಘಾಟನೆ ಗಿಮಿಕ್ ಎಂದು ವಾಗ್ದಾಳಿ ನಡೆಸಿದರು.
ತಿರುವನಂತಪುರಂ: ಕೇರಳದಲ್ಲಿ ಪಾದ್ರಿ ಸೇರಿ 50 ಕ್ರಿಶ್ಚಿಯನ್ ಕುಟುಂಬಗಳು (Christian family) 2023ರ ಡಿಸೆಂಬರ್ 30ರಂದು ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಅಲ್ಲಿನ ಬಿಜೆಪಿ (BJP) ಘಟಕವು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಕೇಂದ್ರ ಸಚಿವ ವಿ. ಮುರಳೀಧರನ್ ಅವರ ನೇತೃತ್ವದಲ್ಲಿ ಕೇರಳದ ಪತ್ತನಂತಿಟ್ಟ ಜಿಲ್ಲೆ ನೀಲಕ್ಕಲ್ ಭದ್ರಾಸನಂನ ಆರ್ಥೋಡಾಕ್ಸ್ ಚರ್ಚ್ ಕಾರ್ಯದರ್ಶಿ ಫಾಧರ್ ಶೈಜು ಕುರಿಯನ್ ಸೇರಿ ಸುಮಾರು 50 ಕುಟುಂಬಗಳು ಕಮಲ ಪಳಯ ಸೇರಿಕೊಂಡಿವೆ ಎನ್ನಲಾಗಿದೆ. https://ainlivenews.com/the-center-has-declared-a-canadian-born-criminal-as-a-terrorist/ ಕೇರಳದಲ್ಲಿ ಕ್ರಿಶ್ಚಿಯನ್ನರ ವಿಶ್ವಾಸ ಗಳಿಸಲು ಬಿಜೆಪಿ ಸ್ನೇಹಯಾತ್ರೆ ಕಾರ್ಯಕ್ರಮ ಆಯೋಜಿಸುವಂತೆ ಬಿಜೆಪಿ ಸೇರ್ಪಡೆಯಾದವರು ತಿಳಿಸಿದ್ದಾರೆ. ಇನ್ನು ಕ್ರಿಶ್ಚಿಯನ್ ಕುಟುಂಬಗಳು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಗಳು ಬಂದಿವೆ. ಕಾಂಗ್ರೆಸ್ ಹಾಗೂ ಸಿಪಿಎಂ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಜೊತೆಗೆ ಹೀಗೆ ಮುಂದುವರಿಸಿದರೆ ತಕ್ಕ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂಬುದಾಗಿಯೂ ಬಿಜೆಪಿ ಎಚ್ಚರಿಕೆ ನೀಡಿದೆ.
ಹಾಸನ: ಸತ್ಯಕ್ಕೆ ಜಯ ಸಿಕ್ಕಿದೆ. ನನಗೆ ನ್ಯಾಯ ಸಿಗಲು ನೀವೆಲ್ಲರೂ ಸಹಕಾರ ಕೊಟ್ಟಿದ್ದೀರಿ. ನನಗೆ ತುಂಬಾ ಖುಷಿಯಾಗಿದೆ ಎಂದು ಸಂಸದ ಪ್ರತಾಪ್ ಸಿಂಹ (Prathap Simha) ಅವರ ಸಹೋದರ ವಿಕ್ರಂ ಸಿಂಹ (Vikram Simha) ಹೇಳಿಕೆ ನೀಡಿದ್ದಾರೆ. ಮರಗಳ್ಳತನ ಪ್ರಕರಣದಲ್ಲಿ ಜಾಮೀನು (Bail) ಮಂಜೂರಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಬರೀ ಬೆಳೆ ಬೆಳೆಯಲು ಹೋದವನು. ಆ ಬೆಳೆ ಬೆಳೆಯಲು ಹೋದವನಿಗೆ ಈ ತರಹದ ಆರೋಪಗಳನ್ನು ಎದುರಿಸಬೇಕಾಗಿ ಬಂತು. ಇದೆಲ್ಲಾ ಒಂದು ರೀತಿಯ ರಾಜಕೀಯ ಪಿತೂರಿ. ಸತ್ಯಕ್ಕೆ ಜಯ ನ್ಯಾಯಾಲಯದಲ್ಲಿ ಸಿಕ್ಕಿದೆ ಎಂದರು. ಇದರ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ನಾನು ನ್ಯಾಯದ ದಾರಿಯಲ್ಲಿದ್ದೇನೆ. ನಿಮ್ಮೆಲ್ಲರ ಸಹಕಾರದಿಂದ ಜಾಮೀನು ಸಿಕ್ಕಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. https://ainlivenews.com/the-center-has-declared-a-canadian-born-criminal-as-a-terrorist/ ನನಗೆ ನ್ಯಾಯ ಸಿಗುತ್ತೆಯೆಂಬ ಭರವಸೆಯಿದೆ ಎಂದು ಹೇಳಿದರು. ಭಾನುವಾರ ರಜಾ ಹಿನ್ನೆಲೆ ವಿಕ್ರಂ ಸಿಂಹ ಅವರನ್ನು ಹಾಸನದ ಬೇಲೂರಿನಲ್ಲಿರುವ ನ್ಯಾಯಾಧೀಶರ ನಿವಾಸದ ಮುಂದೆ ಅರಣ್ಯ ಅಧಿಕಾರಿಗಳು ಹಾಜರುಪಡಿಸಿದ್ದರು. ಜೆಎಂಎಫ್‌ಸಿ ನ್ಯಾಯಾಧೀಶರಾದ ಪ್ರಕಾಶ್…
ಬೆಂಗಳೂರು: ಹೊಸವರ್ಷ ಆಚರಣೆ ಸಂದರ್ಭದಲ್ಲಿ ರಸ್ತೆಗಳಲ್ಲಿದ್ದ ಕಸ-ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸುರುವ ಬಗ್ಗೆ ನಗರದಲ್ಲಿ ಪೂರ್ವ ವಲಯ ವ್ಯಾಪ್ತಿಯಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 8 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಹೊಸ ವರ್ಷಾಚರಣೆಯ ಹಿನ್ನೆಲೆ ನಗರದ ಸಿಬಿಡಿ ರಸ್ತೆಗಳಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರಿಸಿಡೆನ್ಸಿ ರಸ್ತೆ, ರಿಚ್‌ಮಂಡ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕಸ್ತೂರ್ ಬಾ ರಸ್ತ್ತೆ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ಮುಂಜಾನೆ 3.30ರಿಂದ ಸ್ವಚ್ಛತಾ ಕಾರ್ಯ ಆರಂಭಿಸಿ ಬೆಳಗ್ಗೆ 6.30ರ ವೇಳೆಗೆ ಪೂರ್ಣಗೊಳಿಸಿ ಸುಮಾರು 8 ಮೆ. ಟನ್ ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಿ ರಸ್ತೆಗಳನ್ನು ಸ್ವಚ್ಛಗೊಳಿಸಿ ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸ್ವಚ್ಛತಾ ಕಾರ್ಯವು ಶಾಂತಿನಗರ ವಿಭಾಗದ ಘನತ್ಯಾಜ್ಯ ವಿಭಾಗದಿಂದ ಮಾಡಲಾಗಿದ್ದು, 3 ಮೇಲ್ವಿಚಾರಕರು, 80ಕ್ಕೂ ಹೆಚ್ಚು ಪೌರಕಾರ್ಮಿಕರು ಸ್ವಚ್ಛತಾ ಕಾರ್ಯವನ್ನು ಮಾಡಿದರು. ಸ್ಥಳದಲ್ಲಿ 1 ಕಾಂಪ್ಯಾಕ್ಟರ್ ಹಾಗೂ 7 ಆಟೋ ಟಿಪ್ಪರ್ ಗಳಿದ್ದವು. ಸಿಬಿಡಿ ರಸ್ತೆಗಳು ಹಾಗೂ ಪಾದಚಾರಿ…
ಬೆಂಗಳೂರು: ಯುವತಿಯೊಬ್ಬಳು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಧಾಮನಗರದಲ್ಲಿ ನಡೆದಿದ್ದು, ಈ ಮೂಲಕ ವರ್ಷದ ಮೊದಲ ದಿನವೇ ಸಾವಿನ ಸುದ್ದಿ ಬರೆಯುವಂತಾಗಿದೆ. ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು (Police) ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಮದುವೆ ವಿಚಾರವಾಗಿ ಕೆಲ ದಿನಗಳಿಂದ ಸುದ್ದಿಯಾಗಿತ್ತು. ಐಶ್ವರ್ಯಾ ತನ್ನ ಅತ್ತೆಯ ಮನೆಯಾದ ಜಲ್ಸಾದಿಂದ ಹೊರಬಂದು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ, ಆದರೆ ಮಗಳು ಆರಾಧ್ಯ ಅವರ ಶಾಲಾ ವಾರ್ಷಿಕ ಸಮಾರಂಭದಲ್ಲಿ ಅಭಿಷೇಕ್ ಅವರ ಅನುಪಸ್ಥಿತಿಯು ಅವರ ಪ್ರತ್ಯೇಕತೆಯ ಬಗ್ಗೆ ಊಹಾಪೋಹಗಳನ್ನು ಹೆಚ್ಚಿಸಿದೆ. ನೆಟಿಜನ್‌ಗಳು ಈಗ ಅಭಿಷೇಕ್‌ನ ಹಳೆಯ ವೀಡಿಯೊವನ್ನು ಕಂಡುಕೊಂಡಿದ್ದಾರೆ, ಇದು ಐಶ್ವರ್ಯಾ ತನ್ನ ಅತ್ತೆಯ ಮನೆಯಿಂದ ಹೊರಬಂದ ವರದಿಗಳಿಗೆ ವಿರುದ್ಧವಾಗಿದೆ. “ಸರಿ.. ನಾನು ವಿಚ್ಛೇದನ ಪಡೆಯುತ್ತಿದ್ದೇನೆ. ಇದನ್ನು ನನಗೆ ಹೇಳಿದ್ದಕ್ಕಾಗಿ ಧನ್ಯವಾದಗಳು! ಹಾಗೆಯೇ ನಾನು ಯಾವಾಗ ಮರುಮದುವೆಯಾಗುತ್ತೇನೆ ಎಂದು ಹೇಳಬಲ್ಲಿರಾ? ಧನ್ಯವಾದಗಳು,” ಎಂದು ಟ್ವೀಟ್ ಮಾಡಿದ್ದಾರೆ. ನನಗೆ ಮತ್ತು ಐಶ್ವರ್ಯರಿಗೆ ನಮ್ಮ ಜೀವನವನ್ನು ಹೇಗೆ ನಡೆಸಬೇಕೆಂದು ತಿಳಿದಿದೆ. ಮೂರನೇ ವ್ಯಕ್ತಿಗೆ ಅದರ ಬಗ್ಗೆ ತಿಳಿಸಲು ಅವಕಾಶವಿಲ್ಲ. ನಾನು ಅವಳನ್ನು ಎಷ್ಟು ಪ್ರೀತಿಸುತ್ತೇನೆ ಮತ್ತು ಅವಳು ನನ್ನನ್ನು ಎಷ್ಟು ಪ್ರೀತಿಸುತ್ತಾಳೆಂದು ನನಗೆ ತಿಳಿದಿದೆ. ಇತ್ತೀಚೆಗೆ, ಅಮಿತಾಬ್ ಬಚ್ಚನ್ ಇನ್‌ಸ್ಟಾಗ್ರಾಮ್‌ನಲ್ಲಿ ಐಶ್ವರ್ಯಾ ರೈ ಅವರನ್ನು ಅನ್‌ಫಾಲೋ ಮಾಡಿದ್ದಾರೆ ಎಂಬ…
ದಕ್ಷಿಣ ಆಫ್ರಿಕಾ: ರೋಹಿತ್ ಶರ್ಮಾ ಹಾಗೂ ಅವರ ಪತ್ನಿ ರಿತಿಕಾ ತಮ್ಮ ಮಗಳು ಸಮೈರಾ ಶರ್ಮಾ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. https://www.instagram.com/reel/C1d8RrJLuvR/?utm_source=ig_web_copy_link ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಹಿಟ್‌ಮ್ಯಾನ್ ಅಲ್ಲೇ ಮಗಳ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಮೈರಾ ಅವರೊಂದಿಗೆ ಹುಟ್ಟುಹಬ್ಬದ ಕೇಕ್ ಕತ್ತರಿಸಿದರು. ವಿಶೇಷ ಎಂದರೆ ರೋಹಿತ್ ತನ್ನ ಮುದ್ದು ಮಗಳ ಹುಟ್ಟಿದ ದಿನದಂದು ಚಿಕ್ಕ ಮಗುವಿನಂತೆ ಆಟವಾಡಿ ಸಂಭ್ರಮಿಸಿದ್ದಾರೆ. ಸಮೀರ ಜೊತೆಗೆ ಟಾಯ್ ಟ್ರೈನ್ ನಲ್ಲಿ ಸವಾರಿ ಮಾಡಿದ ರೋಹಿತ್ ಮಗಳ ಜೊತೆಗೆ ಕಣಿದು ಕುಪ್ಪಳಿಸಿದ್ದಾರೆ. ಹುಟ್ಟುಹಬ್ಬದ ಪಾರ್ಟಿಯ ವಿಡಿಯೋವನ್ನು ರಿತಿಕಾ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ರೋಹಿತ್ ಮಗಳ ಹುಟ್ಟುಹಬ್ಬಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆಗುತ್ತಿವೆ. ಸಮೀರಾಗೆ ಅಭಿಮಾನಿಗಳು ಮತ್ತು ನೆಟಿಜನ್‌ಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.