ಕಲಬುರಗಿ:- ಜಿಲ್ಲೆಯ ಜನತೆ ಹೊಸ ವರ್ಷವನ್ನು ಭರ್ಜರಿ ವೆಲ್ ಕಮ್ ಮಾಡಿದ್ದಾರೆ. ಕುಣಿದು ಕುಪ್ಪಳಿಸಿ 2024 ಕ್ಕೆ ಬಿಸಿಲೂರ ಜನ ಸ್ವಾಗತ ಮಾಡಿದ್ದಾರೆ. ರಂಗುರಂಗಿನ ಬೆಳಕಲ್ಲಿ ಎಂಜಾಯ್ ಮಾಡಿ ಸೌಂಡ್ ಜೊತೆ ಸ್ಟೆಪ್ಸ್ ಹಾಕಿದ್ದಾರೆ. ನಗರದ ಹೋಟಲ್ ಗಳಲ್ಲಿ ಸೇರಿ ಎಲ್ಲೆಡೆ ನೂತನ ವರ್ಷದ ಕಲರವ ರಂಗೇರಿತ್ತು.
Author: AIN Author
ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್‍ನ (Wrestling Federation of India) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ನಿವಾಸದಲ್ಲಿದ್ದ ಕಚೇರಿಯನ್ನು ನವದೆಹಲಿಯ ಹರಿ ನಗರಕ್ಕೆ ಸ್ಥಳಾಂತರಿಸಲಾಗಿದೆ. ಸಂಜಯ್ ಸಿಂಗ್ ಮುಖ್ಯಸ್ಥರಾಗಿ ಆಯ್ಕೆಯಾದ ಮೂರು ದಿನಗಳ ನಂತರವೂ ಬ್ರಿಜ್ ಭೂಷಣ್ ಅವರ ನಿವಾಸದಿಂದ ಕಚೇರಿ ನಡೆಯುತ್ತಿರುವುದಕ್ಕೆ ಕ್ರೀಡಾ ಸಚಿವಾಲಯವು ಇತ್ತೀಚೆಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಅಲ್ಲದೇ ಹೊಸದಾಗಿ ರಚಿಸಲಾದ ಡಬ್ಲ್ಯುಎಫ್‍ಐ ಸಮಿತಿಯನ್ನು ಡಿ.24 ರಂದು ಅಮಾನತುಗೊಳಿಸಲು ಇದು ಒಂದು ಕಾರಣ ಎಂದು ಉಲ್ಲೇಖಿಸಲಾಗಿದೆ ಫೆಡರೇಶನ್‍ನ ವ್ಯವಹಾರವನ್ನು ಮಾಜಿ ಪದಾಧಿಕಾರಿಗಳ (ಬ್ರಿಜ್ ಭೂಷಣ್) ನಿಯಂತ್ರಣದ ಸ್ಥಳದಿಂದ ನಡೆಸಲಾಗುತ್ತಿದೆ. ಆಟಗಾರರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಹಾಗೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಇದು ಸರಿಯಾದ ನಡೆಯಲ್ಲ. ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣದಲ್ಲಿದೆ. ಇದು ಕ್ರೀಡಾ ಸಂಹಿತೆಗೆ ಅನುಗುಣವಾಗಿಲ್ಲ ಎಂದು ಸಚಿವಾಲಯದ ಪತ್ರದಲ್ಲಿ ತಿಳಿಸಿದೆ. ಬ್ರಿಜ್ ಭೂಷಣ್ ಅವರ ಆಪ್ತ ಸಹಾಯಕ ಸಂಜಯ್…
ಪೋರ್ಟ್ ಲೂಯಿಸ್: ಪ್ರಧಾನಿ ನರೇಂದ್ರ ಮೋದಿಯವರಿಂದ ಮಾತ್ರ ಅಯೋಧ್ಯೆಯನ್ನು ಮತ್ತೆ ಬೆಳಕಿಗೆ ತರುವಲ್ಲಿ ಸಾಧ್ಯವಾಯಿತು. ಹೀಗಾಗಿ ಮೋದಿಯವರ ಮೇಲೆ ನಮಗೆ ವಿಶೇಷ ಗೌರವ ಇದ್ದು, ನಿಜಕ್ಕೂ ನಾವು ಹೆಮ್ಮೆಪಡುತ್ತೇವೆ ಎಂದು ಮಾರಿಷಸ್ ಸಂಸದ (Mauritius MP) ಮಹೇಂದ್ ಗಂಗಾಪ್ರಸಾದ್ (Mahend Gungapersad) ಹೇಳಿದ್ದಾರೆ. 2024ರ ಜನವರಿ 22 ರಂದು ನಾವು ಅಯೋಧ್ಯೆಯಲ್ಲಿ ರಾಮಮಂದಿರವನ್ನು (Ayodhya Ram Mandir) ಉದ್ಘಾಟಿಸಲಿದ್ದೇವೆ. ಇಂದು ಭಗವಾನ್ ರಾಮನು ಜನಿಸಿದ ಸ್ಥಳದಲ್ಲಿ ತನ್ನ ದೇವಾಲಯವನ್ನು ಹೊಂದಿ ದ್ದಾನೆ. ಈ ಸಮಯದಲ್ಲಿ ಭಾರತದಲ್ಲಿರಲು ನನಗೆ ತುಂಬಾ ಸಂತೋಷವಾಗಿದೆ. ನಿಮ್ಮಲ್ಲಿ ಹೆಚ್ಚಿನ ವರಿಗೆ ಊಹಿಸಲೂ ಸಾಧ್ಯವಿಲ್ಲ ಅಷ್ಟೊಂದು ಭಾರತದ ಬಗ್ಗೆ ನಾನು ಹೆಮ್ಮೆಪಡುತ್ತೇನೆ ಎಂದಿದ್ದಾರೆ. https://ainlivenews.com/16-days-bank-holiday-in-january-2024/ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತದ ಚಿತ್ರಣವನ್ನು ಪರಿವರ್ತಿಸಿದ್ದಾರೆ. ಈ ಮೂಲಕ ಇಂದು ಇಡೀ ವಿಶ್ವದ ಜನ ಭಾರತದತ್ತ ತಿರುಗಿ ನೋಡುತ್ತಿದ್ದಾರೆ. ಮೋದಿಯವರ ದೂರದೃಷ್ಟಿ ಮತ್ತು ನಾಯಕತ್ವದಿಂದಾಗಿ ಈ ನವ ಭಾರತ ಸಾಧ್ಯವಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಅವರ ಅಧಿಕಾರಾವಧಿಯಲ್ಲಿ ಭಾರತವು…
ಬೆಂಗಳೂರು:- ನಗರದ ಹನುಮಂತ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀನಿವಾಸ ನಗರದಲ್ಲಿ ಭಾನುವಾರ ರಾತ್ರಿ ಯುವಕನ ಕೊಲೆಯಾಗಿದೆ. ಬನಶಂಕರಿ ಮೂಲದ ವಿಜಯ(21)ಹತ್ಯೆಯಾದ ಯುವಕ. ಆತನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿದ ದುಷ್ಕರ್ಮಿಗಳು ರಸ್ತೆ ಬದಿ ಎಸೆದು ಪರಾರಿಯಾಗಿದ್ದಾರೆ. ಭಾನುವಾರ ರಾತ್ರಿ 1 ಗಂಟೆ ಸುಮಾರಿಗೆ ಈ ಕೊಲೆ ನಡೆದಿದೆ. ವಿಜಯ್ ಅವರನ್ನು ಸ್ನೇಹಿತರೇ ಹತ್ಯೆಯಾಗಿರುವ ಶಂಕೆ ಇದೆ. ಅವರೆಲ್ಲ ಸೇರಿ ವಿಜಯ್‌ನನ್ನು ಕೊಂದು ಶ್ರೀನಿವಾಸ್ ನಗರ ಬಸ್ ನಿಲ್ದಾಣದ ಮುಂದೆ ಬಿಸಾಕಿ ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರು:- ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ನಾಲ್ವರು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ರಿಲೀಸ್ ಮಾಡಲಾಗಿದೆ. ಕರವೇ ಬೆಂಗಳೂರು ನಗರದ ಯುವ ಘಟಕದ ಅಧ್ಯಕ್ಷ ಕಾರ್ತಿಕ್‍ಗೌಡ, ಉಪಾಧ್ಯಕ್ಷ ಶರತ್, ಕಾರ್ಯಕರ್ತ ಹೇಮಂತ್‍ರಾಜ್ ಹಾಗೂ ಕರವೇ ಗೋವಿಂದರಾಜನಗರ ಕ್ಷೇತ್ರದ ಅಧ್ಯಕ್ಷ ಲೋಕೇಶ್‍ಗೌಡ ಎಂಬುವವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯಿಸಿ ಪ್ರತಿಭಟನಾ ರ್ಯಾಲಿ ನಡೆಸಿದ್ದರು. ಅಂಗಡಿ ಮುಂಗಟ್ಟುಗಳು ನಾಮಫಲಕಗಳು ಶೇ.60ರಷ್ಟು ಕನ್ನಡದಲ್ಲಿ ಇರಬೇಕೆಂದು ಆಗ್ರಹಿಸಿದ್ದರು. ಅಲ್ಲದೇ ರ್ಯಾಲಿ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಅಂಗಡಿಗಳ ಬೋರ್ಡ್‍ಗಳನ್ನು ಕಿತ್ತೆಸೆಯಲಾಗಿತ್ತು.
ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಎಲ್‌ಪಿಜಿ ಸಿಲಿಂಡರ್ (Cylinder) ಬೆಲೆ ಭಾರೀ ಇಳಿಕೆಯಾಗಿದೆ. ಜನವರಿ 1ರಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ದೇಶದ ಕೆಲವು ನಗರಗಳಲ್ಲಿ ತುಸು ಕಡಿಮೆಯಾಗಿದೆ. ತೈಲ ಕಂಪನಿಗಳು (Oil Marketing Companies) ವಾಣಿಜ್ಯ ಬಳಕೆಯ (Commercial LPG) 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಭಾರತೀಯ ತೈಲ ಕಂಪನಿಗಳು ಈ ಹಿಂದೆ ಡಿಸೆಂಬರ್ 22 ರಂದು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿದ್ದವು. ಅದಕ್ಕೂ ಮುನ್ನ ಡಿಸೆಂಬರ್ 1ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು ಅಗ್ಗವಾಗಿದ್ದವು. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಹದಿನೈದು ದಿನಗಳಿಗೊಮ್ಮೆ ಎಲ್‌ಪಿಜಿ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಣೆ ಮಾಡುತ್ತವೆ. ಬೆಲೆ ಇಳಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,755.50 ರೂ. ಆಗಿದೆ. ಈ ಮೊದಲು ಈ ದರ 1,757 ರೂ. ಇತ್ತು.…
ಚಿಕ್ಕೋಡಿ: ಮುಸ್ಲಿಂ, ಕ್ರೈಸ್ತ ಸಮುದಾಯಗಳಿಂದ ಕೇರಳದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಶೋಷಣೆಯಾಗುತ್ತಿದೆ ಎಂದು ಶ್ರೀರಾಮಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಆರೋಪಿಸಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ತಿರುಪತಿ ತಿಮ್ಮಪ್ಪನಷ್ಟೇ ಪ್ರಖ್ಯಾತಿ ಪಡೆದಿರುವ ಅಯ್ಯಪ್ಪ ದೇವಸ್ಥಾನವು ಇದೆ. ಆರು ರಾಜ್ಯಗಳಿಂದ ಐದು ಕೋಟಿ ಜನರು ಅಲ್ಲಿ ಭೇಟಿ ನೀಡ್ತಾರೆ. ಮೂರು ಸಾವಿರ ಕೋಟಿ ರೂ.ಗಿಂತಲೂ ಆದಾಯ ಜಾಸ್ತಿ ಇದೆ ಎಂದು ತಿಳಿಸಿದ್ದಾರೆ. ಪಾರ್ಕಿಂಗ್ ಒಂದು ಕೋಟಿ ವಾಹನಗಳಾಗುತ್ತವೆ. ಒಂದು ವೆಹಿಕಲ್‌ಗೆ ನಲವತ್ತು ರೂಪಾಯಿ ತೆಗೆದುಕೊಳ್ತಾರೆ. https://ainlivenews.com/16-days-bank-holiday-in-january-2024/ ಎಲ್ಲ ಮೂಲಗಳಿಂದ ಮೂರು ಸಾವಿರ ಕೋಟಿಗಿಂತಲೂ ಅಧಿಕವಾಗುತ್ತದೆ. ಕೇರಳದಲ್ಲಿರುವ ಸರ್ಕಾರ ನಾಸ್ತಿಕ ಸರ್ಕಾರ. ದೇವರನ್ನು ನಂಬದಂತಹ ಸರ್ಕಾರ ಐದು ಕೋಟಿ ಭಕ್ತರಿಗೆ ಅನುಕೂಲವಾಗುವಂತಹ ಸೌಕರ್ಯ ಒದಗಿಸಿಕೊಡ್ತಿಲ್ಲ. ಕೇರಳ ಸರ್ಕಾರ ದೇವಸ್ಥಾನದ ಆದಾಯವನ್ನು ತಮ್ಮ ಉಪಯೋಗಕ್ಕೆ ಬಳಸಿಕೊಳ್ಳು ತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿಸೆಂಬರ್ ಕೊನೆಯ ದಿನ ಗಡಿಯಾರ 12 ಗಂಟೆ ಸೂಚಿಸುತ್ತಿದ್ದಂತೆ ವಿಶ್ವಾದ್ಯಂತ ಸಂಭ್ರಮ ಮನೆ ಮಾಡುತ್ತದೆ. ಬಾನಂಗಳದಲ್ಲಿ ಬೆಳಕಿನ ಚಿತ್ತಾರ ಮೂಡುತ್ತ ಪಟಾಕಿಗಳ ಸದ್ದು ಕೇಳಿ ಬರುತ್ತಿದೆ. ಎಲ್ಲಾ ನಗರಗಳಲ್ಲೂ ಹಗಲಿನ ವಾತಾವರಣ ಮೂಡಿತ್ತು.ಯಾಕೆಂದರೆ ಇದು ಹೊಸ ವರ್ಷಾಚರಣೆಯ ಸಡಗರ. ಹೀಗೆ ಜಗತ್ತು 2023ಕ್ಕೆ ವಿದಾಯ ಹೇಳಿ ಉಜ್ವಲ ಭವಿಷ್ಯದ ಭರವಸೆಯೊಂದಿಗೆ 2024ರ ಹೊಸ ವರ್ಷವನ್ನು ಸ್ವಾಗತಿಸಲಾಗಿದೆ. ಜನವರಿ 1ರಂದೇ ವರ್ಷಾಚರಣೆ ಯಾಕೆ? ಕ್ರಿ.ಪೂ. 45ರಲ್ಲಿ ಜನವರಿ 1 ಅನ್ನು ಮೊದಲ ಬಾರಿಗೆ ಹೊಸ ವರ್ಷದ ಪ್ರಾರಂಭವೆಂದು ಆಚರಿಸಲಾಯಿತು ಎಂದು ಇತಿಹಾಸ ಹೇಳುತ್ತದೆ. ಅದಕ್ಕೂ ಮೊದಲು ರೋಮನ್ ಕ್ಯಾಲೆಂಡರ್ ಪ್ರಕಾರ ಮಾರ್ಚ್ ಅನ್ನು ವರ್ಷಾರಂಭ ಎಂದು ಪರಿಗಣಿಸಲಾಗುತ್ತಿತ್ತು. ರೋಮನ್ ಕ್ಯಾಲೆಂಡರ್ ಪ್ರಕಾರ ವರ್ಷಕ್ಕೆ 355 ದಿನಗಳು. ರೋಮನ್ ಸರ್ವಾಧಿಕಾರಿ ಜ್ಯೂಲಿಯಸ್ ಸೀಸರ್ ಅಧಿಕಾರಕ್ಕೆ ಬಂದ ನಂತರ ಕ್ಯಾಲೆಂಡರ್ ಅನ್ನು ಬದಲಾಯಿಸಿ ಜನವರಿ 1 ಅನ್ನು ವರ್ಷದ ಮೊದಲ ದಿನವನ್ನಾಗಿಸಿದರು. ರೋಮನ್ ದೇವತೆ ಜಾನುಸ್‌ನ ಗೌರವಾರ್ಥ ಮೊದಲ ತಿಂಗಳಿಗೆ ಜನವರಿ ಎಂದು ಹೆಸರಿಡಲಾಗಿತ್ತು ಎನ್ನುತ್ತದೆ…
ಬಾಲಿವುಡ್ (Bollywood) ಖ್ಯಾತ ನಟ ಆಮೀರ್ ಖಾನ್ (Aamir Khan) ಮಗಳ ಮದುವೆ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಇರಾ ಮದುವೆ ಶಾಸ್ತ್ರಗಳು ನಡೆದಿದ್ದು, ಎರಡೂ ಕುಟುಂಬಗಳು ಭಾಗಿಯಾಗಿವೆ. ಇರಾ ಖಾನ್ (Ira Khan) ಮದುವೆ ಜನವರಿ 3ರಂದು ಅದ್ಧೂರಿಯಾಗಿ ನಡೆಯಲಿದ್ದು, ಅದಕ್ಕೂ ಮುನ್ನ ಮದುವೆ ಶಾಸ್ತ್ರಗಳು ನಡೆಯುತ್ತಿವೆ. ಈ ಕುರಿತಂತೆ ಸ್ವತಃ ಇರಾ ಖಾನ್ ಅವರೇ ಕೆಲ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದ್ದಾರೆ. ಅಕ್ಟೋಬರ್ 3ರಂದು ಇರಾ ಮತ್ತು ನೂಪುರ್ ಶಿಖಾರೆ ರಿಜಿಸ್ಟರ್ ಮದುವೆ (Marriage) ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಮನೆಯವರು ಅವಕಾಶ ಕೊಡದೇ ಸಾಂಪ್ರದಾಯಿಕವಾಗಿ ನೂಪುರ್ ಮನೆಯಲ್ಲಿ ಮದುವೆ ನಡೆಯಲಿದೆ. ಜನವರಿ ಅಥವಾ ಫೆಬ್ರವರಿಯಲ್ಲಿ ಹೊಸ ಬದುಕಿಗೆ ಕಾಲಿಡಲಿದ್ದಾರೆ ಎಂದು ಸ್ವತಃ ಆಮೀರ್ ಖಾನ್ ಹೇಳಿಕೊಂಡಿದ್ದರು. ಅದರಂತೆ ಜನವರಿ 3ಕ್ಕೆ ಮದುವೆ ಫಿಕ್ಸ್ ಆಗಿದೆ. ಕಳೆದ ವರ್ಷ ನವೆಂಬರ್ ನಲ್ಲಿ ನಿಶ್ಚಿತಾರ್ಥ (Engaged) ಮಾಡಿಕೊಂಡು, ತನ್ನ ಪ್ರಿಯಕರಿಗೆ ಉಂಗುರ ತೊಡಿಸಿ, ಮುತ್ತಿಡುವ…
ರಾಜ್ಯಾದ್ಯಂತ ಕಾಟೇರ ಸಿನಿಮಾದ ಅಬ್ಬರ ಜೋರಾಗಿದೆ. ಸಿನಿಮಾ, ನಟನೆ, ಸಂಭಾಷಣೆ, ನಿರ್ದೇಶನ ಹೀಗೆ ಎಲ್ಲದರಲ್ಲೂ ಸಿನಿಮಾ ಪಾಸ್ ಅನಿಸಿಕೊಂಡಿದೆ. ಅದರಲ್ಲೂ ದರ್ಶನ್ ಅಭಿಮಾನಿಗಳು ಚಿತ್ರವನ್ನು ತಲೆಮೇಲೆ ಹೊತ್ತುಕೊಂಡು ಮೆರೆಸುತ್ತಿದ್ದಾರೆ. ಹಾಗಾಗಿ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿಸ್ (Celebrities)ಎಂದು ಕರೆಯುವ ದರ್ಶನ್ ಸೋಷಿಯಲ್ ಮೀಡಿಯಾ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ ಆಶೀರ್ವಾದಕ್ಕೆ ಕೊನೆಯೆಲ್ಲಿ. ಧನೋಸ್ಮಿ ಸೆಲೆಬ್ರಿಟಿಸ್. ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ ಎಂದು ದರ್ಶನ್ ಬರೆದುಕೊಂಡಿದ್ದಾರೆ. ಜೊತೆಗೆ ಸಿನಿಮಾದ ಜೀವಾಳದಂತಿರುವ ಅವರ ಮತ್ತೊಂದು ಗೆಟಪ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿದೆ. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.