ಮೈಸೂರು:- ಇಂದು ರಾಜ್ಯಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು ಭಕ್ತ ಸಾಗರವೇ ಹರಿದು ಬರುತ್ತಿದೆ. H ಇನ್ನೂ ಮುಂಜಾನೆಯೇ ಭಕ್ತಿಯಿಂದ ದೇವಾಲಯಗಳಿಗೆ ಭೇಟಿ ನೀಡಿ ವರ್ಷದ ಮೊದಲ ದಿನವನ್ನು ಜನ ಪ್ರಾರಂಭಿಸುತ್ತಿದ್ದಾರೆ. ಹೊಸ ವರ್ಷಕ್ಕೆ ಮೈಸೂರಿನ ವಿಜಯನಗರ ಲೇಔಟ್ಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತ ಸಾಗರವೇ ಕಂಡು ಬಂದಿದೆ.
Author: AIN Author
ಮತ್ತೆ ಹೊಸ ವರ್ಷ ಬಂದಿದೆ. ಮತ್ತೆ ಎನ್ನುವುದೇ ಹೊಸ ಒಲವಿನ ಸಂಕೇತ. ಹೊಸದು ಯಾವಾಗಲೂ ಹೊಸದೇ. ಹಾಗಾಗಿ ಹಳೆಯ ಹಾಳೆಯ ಹರಿದು, ಹೊಸ ನೂಲು ಹೊಸೆದು, ಹೊಸ ಕನಸುಗಳ ಜೊತೆ ಹೆಜ್ಜೆ ಹಾಕೋಣ. ಆ ಹೆಜ್ಜೆಗಳು ಸದಾ ಹೊಸ ಹಾದಿಯನ್ನೇ ಹುಡುಕುತಿರಲಿ ಎಂದು ಪ್ರಾರ್ಥಿಸೋಣ. 2023ನ್ನೂ ಸ್ವಾಗತಿಸಿ ಸಂಭ್ರಮಿಸಿದ ನೆನಪೇ ಇನ್ನೂ ಕಳೆದಿಲ್ಲ… ಈಗ 2024ಕ್ಕೆ (New Year 2024) ಹೆಜ್ಜೆ ಇಟ್ಟಿದ್ದೇವೆ. ಈಗಾಗಲೇ ಗೋಡೆಗಳ ಮೇಲೆ ಹೊಸ ಕ್ಯಾಲೆಂಡರ್ ತೂಗಿ ಹಾಕಲಾಗಿದೆ. ಅದು ಕೇವಲ ಅಂಕಿ ಸಂಖ್ಯೆಗಳ ಕ್ಯಾಲೆಂಡರ್ ಆಗದೇ, ಅಸಂಖ್ಯೆ ಕನಸುಗಳು ತೂಗುಯ್ಯಾಲಿ ಆಗಲಿ ಎಂದು ಬಯಸೋಣ. ಕಳೆದ ವರ್ಷ ಏನೇ ಕಹಿ ಘಟನೆ ನಡೆದಿದ್ದರೂ ಈಗ ಕ್ಯಾಲೆಂಡರ್‌ನಂತೆ ಆ ಕಹಿ ಘಟನೆಗಳ ಜಾಗಕ್ಕೆ ಹೊಸ ಉತ್ಸಾಹವನ್ನೂ ತೂಗಿ ಹಾಕಿ, ಹೊಸ ತೊಟ್ಟಿಲೊಳಗೆ ಭರವಸೆಯನ್ನು ತೂಗೋಣ. ಗತಿಸಿದ ವರ್ಷ ಎಷ್ಟೋ ನೋವು ಹಾಗೂ ನಲಿವುಗಳನ್ನು ಕೊಟ್ಟಿರಬಹುದು, ಆದರೆ ಈಗ ನಮಗೆ ಸಾಗಲು ಬೇಕಿರುವುದು ನಲಿವಿನ ಇಂಧನ ಮಾತ್ರ. ಹಾಗೇಯೇ…
ಉಡುಪಿ: ಅಯೋಧ್ಯೆಯಲ್ಲಿ (Ayodhya Ram Mandir) ಜನವರಿ 22ರಂದು ನಡೆಯುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನವರು (Congress) ಬರುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಒಂದು ವೇಳೆ ಕಾರ್ಯಕ್ರಮಕ್ಕೆ ಗೈರಾದರೆ ದೇಶಕ್ಕೆ ಮತ್ತು ನಮ್ಮ ಶ್ರದ್ದೆಗೆ ಅವರು ಮಾಡಿವ ಅವಮಾನವಾಗುತ್ತದೆ. ಹೀಗಾಗಿ ಕಾಂಗ್ರೆಸ್ ನಾಯಕರು ಬರುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದರು. https://ainlivenews.com/16-days-bank-holiday-in-january-2024/ ರಾಮಮಂದಿರದ ಪ್ರತಿಷ್ಠಾಪನೆಯಲ್ಲಿ ದೇಶದ ಎಲ್ಲರೂ ಭಾಗವಹಿಸಬೇಕು. ಎಲ್ಲರೂ ರಾಮನ ದರ್ಶನ ಮಾಡಬೇಕು, ಇದು ನಮ್ಮ ಅಸ್ಮಿತೆಯ ಪ್ರಶ್ನೆಯಾಗಿದೆ. ಗುಲಾಮಗಿರಿಯನ್ನು ಹೋಗಲಾಡಿಸಬೇಕು. ಪಕ್ಷ ರಾಜಕಾರಣ ಬಿಟ್ಟು ಧರ್ಮವನ್ನು ಬಿಟ್ಟು ಎಲ್ಲರೂ ಇದರಲ್ಲಿ ಭಾಗವಹಿಸಬೇಕು ಎಂದು ಅವರು ಕೇಳಿಕೊಂಡರು. ಕಾಂಗ್ರೆಸ್ 70 ವರ್ಷದಿಂದ ಅಯೋಧ್ಯೆಯ ವಿರುದ್ಧ ಹೋರಾಟ ಮಾಡಿತ್ತು. ಕಾಂಗ್ರೆಸ್ ನ ಕಪಿಲ್ ಸಿಬಲ್ (Kapil Sibal) ಅಯೋಧ್ಯೆಯ ವಿರುದ್ಧ ಕೋರ್ಟ್ ನಲ್ಲಿ ವಾದ ಮಾಡುತ್ತಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ಆಗಬಾರದು ಎಂದು ಕಾಂಗ್ರೆಸ್ ಉದ್ದೇಶವಾಗಿತ್ತು. ಅಲ್ಪಸಂಖ್ಯಾತರಿಗೆ…
ದೇವನಹಳ್ಳಿ:- ಹೊಸ ವರ್ಷಾಚರಣೆ ಹಿನ್ನಲೆ ನಂದಿಬೆಟ್ಟಕ್ಕೆ ತೆರಳಲು ಸಾವಿರಾರು ಜನ ಬೈಕ್ ಸವಾರರು ಕಾದು ಕುಳಿತ ದೃಶ್ಯ ಸೆರೆಯಾಗಿದೆ. ಮದ್ಯರಾತ್ರಿ 3ಗಂಟೆಯಿಂದ ನಂದಿಬೆಟ್ಟ ಪ್ರವೇಶದ ಚಕ್ ಪೋಸ್ಟ್ ನಲ್ಲಿ ಸಾವಿರಾರು ಬೈಕ್ ಸವಾರರು ಕಾದು ಕುಳಿತಿದ್ದರು. ಏಕಾಏಕಿ ಸಾವಿರಾರು ಬೈಕ್ಸ್ ಒಟ್ಟಿಗೆ ಬಂದ ಹಿನ್ನಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ನಂದಿಬೆಟ್ಟದ ಮೇಲೆ ಸೂರ್ಯೋದಯ ನೋಡಲು ಸಾವಿರಾರು ಜನ ಆಗಮಿಸಿದ್ದಾರೆ. ಬೆಳಗ್ಗೆ 6ಗಂಟೆಯವರೆಗೂ ನಂದಿಬೆಟ್ಟಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಮೋಜು ಮಸ್ತಿ ಹೆಸರಲ್ಲಿ ಅನಾಹುತಗಳಾಗ್ತವೆ ಎಂಬ ಕಾರಣಕ್ಕೆ ನಂದಿಬೆಟ್ಟ ಪ್ರವೇಶಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಢಳಿತ ನಿರ್ಬಂಧ ವಿಧಿಸಿತ್ತು. ಇಂದು ಬೆಳಗ್ಗೆ 6ಗಂಟೆಯವರೆಗೂ ಇದ್ದ ನಿರ್ಬಂಧ ತೆರವು ಹಿನ್ನಲೆ, ಏಕಾಏಕಿ ಸಾವಿರಾರು ಬೈಕ್ಗಳಲ್ಲಿ ಸವಾರರು ನಂದಿಬೆಟ್ಟ ಪ್ರವೇಶಿಸಿದ್ದಾರೆ.
ಮೈಸೂರು : ಹಿಂದಿನ ಸರ್ಕಾರದಲ್ಲಿಯೇ ಚಾಮುಂಡಿಬೆಟ್ಟಕ್ಕೆ ರೋಪ್ ವೇ ಬೇಡವೆಂದು ನಿರ್ಣಯಿ ಸಲಾಗಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮುಂಡಿಬೆಟ್ಟ ಒಂದು ಧಾರ್ಮಿಕ ಕ್ಷೇತ್ರ. ಅಲ್ಲಿಗೆ ರೋಪ್ ವೇ ಬೇಡ ಎಂದು ಶಾಸಕ ಜಿ.ಟಿ. ದೇವೇಗೌಡರ ಸಮ್ಮುಖದಲ್ಲಿ ಸಭೆ ನಡೆಸಿ ಯಾವ ಕಾರಣಕ್ಕೆ ರೋಪ್ ವೇ ಬೇಡ ಎಂಬ ಮಾಹಿತಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿತ್ತು. ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ರೂಪ್ ವೇ ನಿರ್ಮಿಸುವುದಿಲ್ಲ ಎಂದು ಪ್ರಕಟಿಸಿರುವುದಾಗಿ ತಿಳಿಸಿದರು. https://ainlivenews.com/16-days-bank-holiday-in-january-2024/ ದೇವರ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ಹೋಗುತ್ತಾರೆ. ಬೆಟ್ಟದ ಮೇಲಿಂದ ಯಾವುದೇ ವ್ಯೂ ಪಾಯಿಂಟ್ ಇಲ್ಲ. ಚಾಮುಂಡಿಬೆಟ್ಟದ ಬದಲು ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಿಸಬಹುದು. ಚಾಮರಾಜನಗರದ ಯಾವುದಾದರೂ ಗುಡ್ಡಕ್ಕೆ ರೋಪ್ ವೇ ನಿರ್ಮಿಸಿದರೆ ಅಲ್ಲಿನ ಪ್ರವಾಸೋದ್ಯ ಮವಾದರೂ ಅಭಿವೃದ್ಧಿ ಆಗುತ್ತದೆ ಎಂದರು.
ಬೆಂಗಳೂರು:- ಡಿಸೆಂಬರ್ 21 ರಿಂದ, ಪೊಲೀಸರು ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ವಾಹನ ಚಾಲಕರು ಮತ್ತು ದ್ವಿಚಕ್ರ ವಾಹನ ಸವಾರರ ತಪಾಸಣೆ ನಡೆಸುತ್ತಿದ್ದಾರೆ. ಸಂಚಾರ ಪೊಲೀಸರ ನಾಲ್ಕು ವಿಭಾಗಗಳಾದ್ಯಂತ, ಡಿಸೆಂಬರ್ 30 ರವರೆಗೆ 27,280 ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲಿಸಲಾಗಿದ್ದು, ಮದ್ಯದ ಅಮಲಿನಲ್ಲಿ ಕಂಡುಬಂದ ಮತ್ತು ಕಾನೂನುಬದ್ಧ ರಕ್ತದ ಆಲ್ಕೋಹಾಲ್ ಸಾಂದ್ರತೆಯ ಮಿತಿಯನ್ನು ಉಲ್ಲಂಘಿಸಿದ ಒಟ್ಟು 717 ಸವಾರರು ಅಥವಾ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಕ್ಷಿಣ ವಿಭಾಗದ ಅಂಕಿಅಂಶಗಳು ದಕ್ಷಿಣ ವಿಭಾಗವೊಂದರಲ್ಲೇ ಡಿಸೆಂಬರ್ 29ರವರೆಗೆ ಸಂಚಾರ ಪೊಲೀಸರು 4,381 ವಾಹನಗಳ ತಪಾಸಣೆ ನಡೆಸಿ ಪಾನಮತ್ತ ಚಾಲಕರ ವಿರುದ್ಧ 167 ಪ್ರಕರಣಗಳನ್ನು ದಾಖಲಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಪೊಲೀಸ್ ಮಿತಿಯಲ್ಲಿ ಅತಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 154 ವಾಹನಗಳನ್ನು ಪರಿಶೀಲಿಸಿದ ನಂತರ 30 ಪ್ರಕರಣಗಳು ದಾಖಲಾಗಿದ್ದು, ಸುಮಾರು 19.5% ರಷ್ಟು ಧನಾತ್ಮಕ ಪ್ರಕರಣಗಳು ದಾಖಲಾಗಿವೆ. ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣಗಳು ಅತ್ಯಧಿಕವಾಗಿವೆ. ಡಿಸೆಂಬರ್ 20 ಮತ್ತು 29 ರ…
ಬಳ್ಳಾರಿ:- 2024ರ ಹೊಸ ವರ್ಷಾಚರಣೆ ಹಿನ್ನಲೆ, ಯುವಕರು ಕುಣಿದು ಕುಪ್ಪಳಿಸಿದ್ದಾರೆ. ಹೊಸ ವರ್ಷ ಸ್ವಾಗತಿಸಲು ಬಳ್ಳಾರಿಯಲ್ಲಿ ಯುವಕರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಬಳ್ಳಾರಿಯ ಚೈತನ್ಯ ಕಾಲೇಜಿನ ಆವರಣದಲ್ಲಿ ಯುವಕರು ನೃತ್ಯ ಮಾಡಿದ್ದು, ಕಾಲೇಜಿನ ಆವರಣಲ್ಲಿ ಯುವಕರು ಕುಣಿದು ಕುಪ್ಪಳಿಸಿದ್ದಾರೆ. ಕನ್ನಡ, ಹಿಂದಿ, ತೆಲುಗು ಸಿನಿಮಾ ಸಾಂಗ್ಸ್ ಗೆ ಯುವಕರು ನೃತ್ಯ ಮಾಡಿದ್ದಾರೆ. ಡಿಜಿ ಹಾಡಿಗೆ ವಿದ್ಯಾರ್ಥಿಗಳು ಭರ್ಜರಿ ಸ್ಟೆಪ್ ಹಾಕಿದ್ದಾರೆ.
ನಾವು ಮಾಡುವ ಎಲ್ಲಾ ಅಡುಗೆಯಲ್ಲಿ ಬಹುತೇಕ ಬೆಳ್ಳುಳ್ಳಿಯನ್ನು ಬಳಸುತ್ತೇವೆ. ಬೆಳ್ಳುಳ್ಳಿ ಹಾಕಿದರೆ ಅದರ ರುಚಿಯೇ ಬೇರೆ. ಇದು ಹೃದಯದ ಆರೋಗ್ಯವನ್ನು ಸುಧಾರಿಸುವುದಲ್ಲದೆ, ಜೀರ್ಣಕಾರಿ ಸಮಸ್ಯೆಗಳನ್ನು ತಡೆಯುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ. ಬೆಳ್ಳುಳ್ಳಿಯಲ್ಲಿ ಅಲಿಸಿನ್ ಸಮೃದ್ಧವಾಗಿದೆ. ಆಯುರ್ವೇದದಲ್ಲಿ ಬೆಳ್ಳುಳ್ಳಿಗೂ ಉತ್ತಮ ಮಹತ್ವವಿದೆ. ಬೆಳ್ಳುಳ್ಳಿ ಅದ್ಭುತ ಔಷಧೀಯ ಗುಣಗಳನ್ನು ಹೊಂದಿದೆ. ಈಗ ಪ್ರತಿದಿನ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ. ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು: ಕಾರ್ಬೋಹೈಡ್ರೇಟ್‌ಗಳು, ಕ್ಯಾಲೋರಿಗಳು, ಡೈಟರಿ ಫೈಬರ್, ಸಕ್ಕರೆ ಅಂಶಗಳು, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಸಿ, ಜಿಂಗ್, ಐರನ್, ಪೊಟ್ಯಾಸಿಯಮ್, ಮೆಗ್ನೀಸಿಯಮ್ ವಿಟಮಿನ್ ಕೆ ಇರುತ್ತವೆ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸಿದರೆ ಈ ವಿಟಮಿನ್ ಗಳು ಮತ್ತು ಮಿನರಲ್ ಗಳು ಹೆಚ್ಚಿನ ಪ್ರಮಾಣದಲ್ಲಿ ದೊರೆಯುತ್ತವೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಜರ್ನಲ್ ಆಫ್ ಕ್ಲಿನಿಕಲ್ ಮತ್ತು ಟ್ರಾನ್ಸ್ಲೇಶನಲ್ ರಿಸರ್ಚ್‌ನಲ್ಲಿ 2021 ರ ಸಮೀಕ್ಷೆಯ ಪ್ರಕಾರ, ಬೆಳ್ಳುಳ್ಳಿ ತಿನ್ನುವುದರಿಂದ ಬಿಳಿ ರಕ್ತ ಕಣಗಳ ಮಟ್ಟವನ್ನು ಪುನಃಸ್ಥಾಪಿಸಲು ಸಹಾಯ ಮಾಡುತ್ತದೆ. ಆಲ್ಝೈಮರ್ನ್ ಬರದಂತೆ ತಡೆಗಟ್ಟುತ್ತದೆ…
ಮುಂಬೈ: ಬಿಜೆಪಿಯು (BJP) ಚುನಾವಣೆಗೆ ಭಗವಾನ್ ರಾಮನೇ (Lord Rama) ನಮ್ಮ ಅಭ್ಯರ್ಥಿ ಎಂದು ಘೋಷಿಸುವುದು ಮಾತ್ರ ಉಳಿದಿದೆ ಎಂದು ಹೇಳುವ ಮೂಲಕ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ (Sanjay Raut) ಟೀಕಿಸಿದ್ದಾರೆ. ಅಯೋಧ್ಯೆಯ ರಾಮಜನ್ಮಭೂಮಿ (Ayodhya Ram Mandir) ದೇಗುಲದ ಉದ್ಘಾಟನಾ ಸಮಾರಂಭದ ಆಹ್ವಾನದ ಕುರಿತು ಪ್ರತಿಕ್ರಿಯಿಸಿದ ಅವರು, ರಾಮನ ಹೆಸರಿನಲ್ಲಿ ರಾಜಕೀಯ ಮಾಡಲಾಗುತ್ತಿದೆ. ಸದ್ಯ ಬಿಜೆಪಿಯವರು ರಾಮನೇ ನಮ್ಮ ಚುನಾವಣೆಯ ಅಭ್ಯರ್ಥಿ ಎಂದು ಹೇಳುವುದು ಒಂದೇ ಬಾಕಿಯಿರುವುದು ಎಂದು ಅವರು ವಾಗ್ದಾಳಿಗಳನ್ನು ನಡೆಸಿದ್ದಾರೆ. https://ainlivenews.com/16-days-bank-holiday-in-january-2024/ ಇದೇ ವೇಳೆ ಕಾಂಗ್ರೆಸ್ (Congress) ಝೀರೋದಿಂದ ಆರಂಭವಾಗಬೇಕು ಎಂಬ ತಮ್ಮ ಮೇಲಿನ ಆರೋಪದ ಕುರಿತು ಮಾತನಾಡಿ, ಕಾಂಗ್ರೆಸ್ ಶೂನ್ಯ ಎಂದು ನಾನು ಹೇಳಿಲ್ಲ. ಕಾಂಗ್ರೆಸ್‌ಗೆ ಮಹಾರಾಷ್ಟ್ರದಲ್ಲಿ ಒಬ್ಬನೇ ಒಬ್ಬ ಸಂಸದ ಇಲ್ಲ. ನಮ್ಮಲ್ಲಿ 18 ಸಂಸದರಿದ್ದು, ಅದರಲ್ಲಿ ಕೆಲವರು ಹೋಗಿದ್ದಾರೆ. ಈಗ ನಮ್ಮಲ್ಲಿ 6 ಸಂಸದರಿದ್ದಾರೆ ಎಂದರು.
ಬೆಂಗಳೂರು:- ಬೆಂಗಳೂರಿನ ಮಾಲ್ ಆಫ್ ಏಷ್ಯಾ ವಿರುದ್ಧ ಕ್ರಮ ಬೇಡ ಎಂದು ಹೈಕೋರ್ಟ್ ಹೇಳಿದೆ. ಒಂದು ದಿನದ ಮಟ್ಟಿಗೆ ಮಾಲ್ ಅನ್ನು ಮುಚ್ಚಲಾಗುವುದು ಎಂಬ ಮಾಲ್ ಆಫ್ ಏಷ್ಯಾದ ಪರ ವಕೀಲರ ಭರವಸೆ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಮಾಲ್ ವಿರುದ್ದ ಕ್ರಮಕ್ಕೆ ಮುಂದಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ಪ್ರಶ್ನಿಸಿ ಫೀನಿಕ್ಸ್ ಮಾಲ್ ಆಫ್ ಏಷ್ಯಾದ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಭಾನುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಜೆ. ಎಸ್. ಕಮಲ್ ಅವರಿದ್ದ ವಿಶೇಷ ಪೀಠದ ಮುಂದೆ ಮಾಲ್ ಪರ ವಕೀಲರು ಮಾಹಿತಿ ನೀಡಿದರು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಾಲ್ ಆಡಳಿತವು ಮಾಲ್ ಒಂದು ದಿನದ ಮಟ್ಟಿಗೆ ಮುಚ್ಚಲಾಗುವುದು. ಜತೆಗೆ, ಪೊಲೀಸ್ ಆಯುಕ್ತರ ಆದೇಶದಲ್ಲಿ ತಿಳಿಸಿರುವ ಸಮಸ್ಯೆಗಳಿಗೆ ಸೌಹಾರ್ದಯುತವಾಗಿ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮಾಲ್ ಪರ ವಕೀಲರು ಭರವಸೆ ನೀಡಿದರು. ಈ ಅಂಶ…