ಬೆಂಗಳೂರು:- ಹೊಸವರ್ಷಾಚರಣೆಗೆ ಕೆಲವೇ ಗಂಟೆಗಳು ಬಾಕಿ ಇದ್ದು, ನ್ಯೂ ಇಯರ್ ಸೆಲಬ್ರೇಶನ್ಗೆ ಐಟಿ ಸಿಟಿ ಮಂದಿ ಸಜ್ಜಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಐಟಿ ಮಂದಿಯ ಸೆಲಬ್ರೇಶನ್ ಗೆ ಸಿದ್ಧತೆ ನಡೆಸಲಾಗಿದ್ದು, ಮದುವಣಗಿತ್ತಿಯಂತೆ ಹೋಟೆಲ್ ಹಾಗೂ ಪಬ್ ಗಳು ಸಜ್ಜಾಗಿವೆ. ಹೋಟೆಲ್ ಹಾಗೂ ಪಬ್ ಗಳಲ್ಲಿ ವಿಶೇಷ ಲೈಟಿಂಗ್, ಡೆಕೊರೇಷನ್ ಮಾಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನತೆ ಸೇರಲಿದೆ. ಹೊಸವರ್ಷವನ್ನ ಸಂಭ್ರಮಿಸೋಕೆ ಐಟಿ ಮಂದಿ ತುದಿಗಾಲಿನಲ್ಲಿ ನಿಂತಿದ್ದು, ಈಗಾಗಲೇ ಎಲೆಕ್ಟ್ರಾನಿಕ್ ಸಿಟಿಯತ್ತ ಜನತೆ ಆಗಮಿಸುತ್ತಿದ್ದಾರೆ. ಅತಿಹೆಚ್ಚು ಐಟಿಬಿಟಿ ಕಂಪನಿಗಳಿರುವ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸಾವಿರಾರು ಸಂಖ್ಯೆಯ ಜನ ಸೇರಲಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಜನಸಾಗರ ತುಂಬಿದ್ದು, ಈಗಾಗಲೇ ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದೆ. ಹೋಟೆಲ್, ಪಬ್ ಗಳತ್ತ ನ್ಯೂ ಇಯರ್ ಸೆಲಬ್ರೇಷನ್ಗೆ ಜನತೆ ತೆರಳುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಗಲ್ಲಿ ಗಲ್ಲಿಗಳಲ್ಲೂ ಜನವೋ ಜನ ತುಂಬಿದೆ.
Author: AIN Author
ಬೆಂಗಳೂರು:- ಗರ್ಲ್ ಫ್ರೆಂಡ್ ಜೊತೆ ಅಸಭ್ಯ ವರ್ತಿಸಿದ ಅಪರಿಚಿತ ವ್ಯಕ್ತಿಗೆ ಪ್ರಿಯತಮ ಧರ್ಮದೇಟು ಕೊಟ್ಟಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಹೊಸ ವರ್ಷದ ಹಿನ್ನೆಲೆ, ಗರ್ಲ್ ಫ್ರೆಂಡ್ ಜೊತೆ ಬ್ರಿಗೇಡ್ ರಸ್ತೆಗೆ ಯುವಕ ಬಂದಿದ್ದ. ನೂಕು ನುಗ್ಗಲಿನಲ್ಲಿ ಅಪರಿಚಿತ ವ್ಯಕ್ತಿ ಗರ್ಲ್ ಫ್ರೆಂಡ್ ಮುಟ್ಟಿದ ಆರೋಪ ಕೇಳಿ ಬಂದಿದೆ. ತನ್ನ ಹುಡುಗಿ ಮುಟ್ಟಿದವನಿಗೆ ಬಾಯ್ ಫ್ರೆಂಡ್ ಧರ್ಮದೇಟು ಕೊಟ್ಟಿದ್ದಾನೆ. ಪೊಲೀಸ್ರ ಮದ್ಯಪ್ರವೇಶದಿಂದ ಗಲಾಟೆ ಹತೋಟಿಗೆ ಬಂದಿದೆ. ಬ್ರಿಗೇಡ್ ರಸ್ತೆಯಲ್ಲಿ ಘಟನೆ ಜರುಗಿದೆ.
ಕಲಬುರ್ಗಿ:- ಹೊಸವರ್ಷಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ನೂತನ ವರ್ಷ ಬರಮಾಡಿಕೊಳ್ಳಲು ಕೆಲವೇ ಗಂಟೆಗಳು ಬಾಕಿ ಇದೆ. ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ನೂತನ ವರ್ಷ ಬರಮಾಡಿಕೊಳ್ಳಲು ಸಕಲ ಸಿದ್ಧತೆ ನಡೆದಿದೆ. ಅದರಂತೆ ಹೊಸ ವರ್ಷದ ಸ್ವಾಗತಕ್ಕೆ ಕಲಬುರಗಿ ನಗರ ಸಜ್ಜಾಗಿದ್ದು, ಬಗೆ ಬಗೆ ಕೇಕ್ ಗಳು ಕಣ್ಮಣ ಸೆಳೆಯುತ್ತಿದೆ. ಕಲಬುರಗಿ ನಗರದ ವಿವಿಧ ಬೇಕರಿಗಳಲ್ಲಿ ಡಿಫ್ರೆಂಟ್ ಕೆಕ್ ತಯಾರಿಸಲಾಗಿದ್ದು, ನೋಡುಗರನ್ನು ಕಣ್ಮನ ಸೆಳೆದಿದೆ.
ವಿಜಯಪುರ:- ಹೊಸ ವರ್ಷಾಚರಣೆ ಹಿನ್ನಲೆ ವಿಜಯಪುರದಲ್ಲಿ ಬಿಗಿ ಪೋಲಿಸ್ ಬಂದೋ ಬಸ್ತ ನಿಯೋಜನೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾ ಎಸ್ ಪಿ ಋಷಿಕೇಶ ಸೋನಾವಣೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಇಂದು ಸಂಜೆಯಿಂದಲೇ ಪೋಲಿಸ್ ರೌಂಡ್ಸ್ ಮಾಡಲಾಗುತ್ತದೆ. ಕೆಲವೆಡೆ ಒಳಾಂಗಣ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಂತಹ ಜಾಗದಲ್ಲಿ ಬ್ಯಾರಿಕೇಡ್ ಹಾಕಿ ಬಿಗಿ ಪೋಲಿಸ್ ಬಂದೋ ಬಸ್ತ ನಿಯೋಜನೆ ಮಾಡಲಾಗಿದೆ. ಕುಡಿದು ವಾಹನ ಚಲಾವಣೆ ಮಾಡುವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವದು. ರಾತ್ರೀ ತ್ರೀಬಲ್ ರೈಡಿಂಗ್ ವಾಹನ ಸವಾರರ ಮೇಲೆ ಕೇಸ್ ಹಾಕುವದರ ಜೊತೆಗೆ ಅಂತಹ ವಾಹನಗಳನ್ನು ಸೀಜ್ ಮಾಡುತ್ತೇವೆ. ಯಾವದಾದರೂ ಬಡಾವಣೆಯಲ್ಲಿ ಶಬ್ದ ಮಾಲಿನ್ಯ ಉಂಟು ಮಾಡಿದರೆ ಯಾರಾದರೂ ದೂರು ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುವದು. ಜಿಲ್ಲೆಯಾದ್ಯಂತ ಅಧಿಕಾರಿಗಳು ನಿರಂತರ ರೌಂಡ್ಸ್ ನಲ್ಲಿರುತ್ತಾರೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಕ್ರಮ ಜರುಗಿಸಲಾಗುವದು. ಪ್ರತಿ ಸ್ಟೇಷನ್ ವ್ಯಾಪ್ತಿಯಲ್ಲಿ ಬಂದೋ ಬಸ್ತ ನಿಯೋಜನೆ ಮಾಡಲಾಗಿದ್ದು ನಗರ ಪ್ರದೇಶದಲ್ಲಿ ಹೆಚ್ಚಿನ ಬಂದೋ ಬಸ್ತ…
ಬೆಳಗಾವಿ:- ಮಾಜಿ ಸಚಿವ ಲಕ್ಷ್ಮಣ ಸವದಿ ಅವರಿಗೆ ಬಹಿರಂಗವಾಗಿ ಅವಾಚ್ಯ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೋಗೇರಿ ಪುರಸಭೆ ಸದಸ್ಯ ರವಿ ಠಕ್ಕನವರನ್ನು ಅರೆಸ್ಟ್ ಮಾಡಲಾಗಿದೆ. ಇನ್ನೂ ರವಿ ಠಕ್ಕನ್ನವರ ಬಂಧನ ಹಿನ್ನೆಲೆಯಲ್ಲಿ ಮಾಜಿ ಶಾಸಕ ಪಿ. ರಾಜೀವ್ ಹಾಗೂ ಹಾರೋಗೇರಿ ಠಾಣೆ ಪಿಎಸ್ಐ ಗಿರಿಮಲ್ಲ ಉಪ್ಪಾರ್ ನಡುವೆ ಠಾಣೆಯಲ್ಲಿ ಮಾತಿನ ಚಕಮಕಿ ನಡೆದಿದೆ. ಹಾರೋಗೇರಿ ಪೊಲೀಸ್ ಠಾಣೆಯಲ್ಲೇ ಪಿ ರಾಜೀವ್ ಮತ್ತು ಪಿಎಸ್ ಐ ವಾಗ್ವಾದ ನಡೆದಿದ್ದು, ಯಾವುದೇ ಕೇಸ್ ದಾಖಲು ಇಲ್ಲದೆ ಪುರಸಭೆ ಸದಸ್ಯ ರವಿ ಠಕ್ಕನವರ ಬಂಧನ ಮಾಡಿದ್ದೀರೆಂದು ಪಿಎಸ್ಐ ಉಪ್ಪಾರ್ ವಿರುಧ್ಧ ಪಿ ರಾಜೀವ್ ಗರಂ ಆಗಿದ್ದಾರೆ. ಹಾರೂಗೇರಿ ಪೋಲಿಸ್ ಠಾಣೆಯಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಇತ್ತು. ಲಕ್ಷ್ಮಣ ಸವದಿಯವರಗೆ ಕ್ಷಮೆ ಕೇಳಿ ಅಂತಾ ಪುರಸಭೆ ಸದಸ್ಯ ರವಿ ಠಕ್ಕನವರಿಗೆ PSI ಅವಾಜ್ ಹಾಕಿದ್ದಾರೆ. ಹಾಗೂ ಇದೇ ವೇಳೆ ಹಿರಿಯ ಅಧಿಕಾರಿಗಳನ್ನು ಬಿಜೆಪಿಯ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ…
ದಾವಣಗೆರೆ:- ನಮ್ಮ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಮಯದಲ್ಲಿ 40 ಸಾವಿರ ಕೋಟಿ ಅವ್ಯವಹಾರ ಆಗಿದ್ರೆ ನಾನೆ ರಾಜೀನಾಮೆ ಕೊಡುತ್ತೇನೆ ಎಂದು ಮಾಜಿ ಸಚಿವ MP ರೇಣುಕಾಚಾರ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಶಾಸಕ ಯತ್ನಾಳ್ ಆರೋಪದಲ್ಲಿ ಯಾವುದೇ ಹುರಳಿಲ್ಲ. 40 ಸಾವಿರ ಕೋಟಿ ಅವ್ಯವಹಾರ ಆಗಿದ್ರೆ ನಾನೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲ್ ಹಾಕಿದರು. ಕೋವಿಡ್ ನಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ 40 ಸಾವಿರ ಕೋಟಿ ಹಗರಣ ನಡೆದಿದೆ ಎಂದಿದ್ದಾರೆ. ಆಗ ಇವರು ಶಾಸಕರಾಗಿದ್ದರು. ನಾವು ಕೂಡ ಯಾವುದಕ್ಕೆ ಎಷ್ಟೆಷ್ಟು ಖರ್ಚಾಗಿದೆ ಎಂದು ಸದನದಲ್ಲಿಯೇ ದಾಖಲೆ ತೋರಿಸಿದ್ದೇವೆ. ಯತ್ನಾಳ ಆಗ ಯಾಕೆ ಹೇಳಲಿಲ್ಲ, ಈಗ ಆರೋಪ ಮಾಡುತ್ತಿದ್ದಾರೆ. ಇವರು ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಡಬೇಕು. ವಿಜಯಪುರದಲ್ಲಿ ಪ್ರಭಾವಿ ಸಚಿವರ ಜೊತೆ ಒಪ್ಪಂದ ಆಗಿದೆ. ಈ ಸರ್ಕಾರದಲ್ಲಿ ಕೆಲಸ ಮಾಡಿಕೊಂಡು ಆರೋಪ ಮಾಡೋದು ಬಿಡಬೇಕು. ದಾಖಲೆ ಸಮೇತ ಚರ್ಚೆಗೆ ಬನ್ನಿ ನಾನು ಬರ್ತೀನಿ ಎಂದು ಯತ್ನಾಳಗೆ ಎಂಪಿ ರೇಣುಕಾಚಾರ್ಯ ಸವಾಲ್…
ಬೆಂಗಳೂರು:- ಹೊಸವರ್ಷಾಚರಣೆಗೆ ಕೆಲವೇ ಕ್ಷಣಗಳು ಬಾಕಿ ಇದ್ದು, ಎಂಜಿ ರಸ್ತೆ, ಬ್ರೀಗೆಡ್ ರಸ್ತೆ, ಚರ್ಚ್ ಸ್ಟ್ರೀಟ್ ನಲ್ಲಿ ಹೀಗಾಗಲೇ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ, ಪೊಲೀಸರು ಚರ್ಚ್ ಸ್ಟ್ರೀಟ್ ರಸ್ತೆ ಕ್ಲೋಸ್ ಮಾಡಿದ್ದಾರೆ. ಎಲ್ಲೆಲ್ಲೂ ಪೊಲೀಸ್ ಸರ್ಪಗಾವಲು ಇದೆ. ದೀಪಾಲಂಕರದಿಂದ ಬ್ರೀಗೆಡ್ ರೋಡ್ ಜಗಮಗಿಸುತ್ತಿದ್ದು, ಇನ್ನೂ ನ್ಯೂ ಇಯರ್ ಸೆಲೆಬ್ರೆಶನ್ ಗೆ ಜನತೆ ಆಗಮಿಸುತ್ತಿದ್ದಾರೆ. ಇನ್ನೂ ಹೆಚ್ಚು ಜನ ಆಗಮಿಸುವ ಹಿನ್ನೆಲೆ, ಸಂಚಾರಿ ಪೊಲೀಸರು ಬ್ರೀಗೆಡ್ ರಸ್ತೆ ಕ್ಲೋಸ್ ಮಾಡಿದ್ದಾರೆ.
ಬಾಗಲಕೋಟೆ:- ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ ವತಿಯಿಂದ ಹೋರಾಟ ಮಾಡಲಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರೈತರದ್ದೂ ಸೇರಿದಂತೆ ಯಾವುದೇ ಸಮಸ್ಯೆಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ ಹೋರಾಟ ರೂಪಿಸಲಾಗುವುದು ಎಂದರು. ರಾಜ್ಯದಲ್ಲಿ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಬರದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬರಕ್ಕೂ, ನಮಗೂ ಸಂಬಂಧವಿಲ್ಲ ಎಂಬಂತಿದ್ದಾರೆ. ಇದೊಂದು ರೈತ ವಿರೋಧಿ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು. ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ನಾಮಕವಾಸ್ತೆ ಚರ್ಚೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಸಚಿವ ಶಿವಾನಂದ ಪಾಟೀಲ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಒಂದು ರೂಪಾಯಿ ಅನುದಾನ ನೀಡದ್ದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಾಂಗ್ರೆಸ್ ಶಾಸಕರು ತಲೆ ಎತ್ತಿ ತಿರುಗದಂತಾಗಿದೆ. ಬಿಜೆಪಿ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೂ ಅನುದಾನ ಸಿಕ್ಕಿಲ್ಲ. ಅಲ್ಪಸಂಖ್ಯಾತರಿಗೆ ₹10…
ಬೆಂಗಳೂರು, ಡಿ.31:”ಪತ್ರಿಕೋದ್ಯಮದ ಘನತೆ, ಗೌರವ ಕಾಪಾಡಿಕೊಳ್ಳಿ. ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಿಮ್ಮ ಲೇಖನಿ ಬಳಸಿ. ವ್ಯಾಪಾರಸ್ಥರ ಲಾಭಕ್ಕೆ ತಲೆಬಾಗಬೇಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಸಮಾರಂಭದಲ್ಲಿ “ವರ್ಷದ ವ್ಯಕ್ತಿ” ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ಆಯಾ ವರ್ಷ ಪ್ರಭಾವ ಬೀರುವ ವ್ಯಕ್ತಿಗಳನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದೀರಿ ಎಂದು ಭಾವಿಸಿದ್ದೇನೆ. ಜಾಫರ್ ಷರೀಫ್ ಅವರು ರೈಲ್ವೆ ಸಚಿವರಾಗಿದ್ದಾಗ ನಾನು ವಿದ್ಯಾರ್ಥಿ ನಾಯಕನಾಗಿ ರೈಲು ತಡೆದು ಚಳುವಳಿ ಮಾಡಿದ್ದ ಫೋಟೋ ಕಾಣಿಕೆಯೊಂದಿಗೆ ನನಗೆ ವರ್ಷದ ವ್ಯಕ್ತಿ ಪ್ರಶಸ್ತಿ ನೀಡಿದ್ದೀರಿ. 43 ವರ್ಷಗಳ ರಾಜಕೀಯ ಜೀವನದಲ್ಲಿ ಎಂದೂ ಕೂಡ ಸನ್ಮಾನ ಒಪ್ಪಿ, ಮಾಡಿಸಿಕೊಂಡಿರಲಿಲ್ಲ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಬಿಟ್ಟು ನಮ್ಮ ಬದುಕಿಲ್ಲ. ಹೀಗಾಗಿ ನಾನು ಒಪ್ಪಿ ಈ ಗೌರವ ಸ್ವೀಕರಿಸಿದ್ದೇನೆ. ನೀವು ಒಳ್ಳೆಯದಾದರೂ ಹೇಳಿ, ಕೆಟ್ಟದಾದರೂ ಹೇಳಿ. ಸಂಸಾರದಂತೆ ನಿಮ್ಮ ಜತೆ ಬದುಕಬೇಕು. ನೀವು ನನಗೆ ಕನಕಪುರದ ಬಂಡೆ ಎಂದು ಬಿರುದು…
ಬೆಂಗಳೂರು:- ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯಲ್ಲ ಎಂದು ಮಾಜಿ ಸಚಿವ ಸೋಮಣ್ಣ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪಕ್ಷದ ನಾಯಕರು ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧ. ‘ಆಂತರಿಕ ಹೊಂದಾಣಿಕೆ’ಯಿಂದ ನಾನು ಸಾಕಷ್ಟು ನೊಂದಿದ್ದೇನೆ.ನನ್ನ ಮೇಲೆ ಪ್ರಹಾರವಾಗಿದೆ. ಯಾರೋ ನನಗೆ ಮಾಟ ಮಾಡಿಸಿರಬಹುದೇನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಯೊಳಗೆ ಬಿದ್ದೆ ಎಂದು ಮತ್ತೊಮ್ಮೆ ಅಸಮಾಧಾನ ಹೊರಹಾಕಿದರು. ಜನವರಿ 7 ಅಥವಾ 8 ರಂದು ದೆಹಲಿಗೆ ತೆರಳಿ ಬಿಜೆಪಿಯ ಹಿರಿಯ ನಾಯಕರ ಬಳಿ ನನ್ನ ‘ಸಂಕಟ’ಗಳನ್ನು ತಿಳಿಸುವುದಾಗಿ ಹೇಳಿದರು. ನನ್ನ ವಿಚಾರದಲ್ಲಿ ಬದಲಾವಣೆಯಾಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು. ಪಕ್ಷದ ವರಿಷ್ಠರು ಏನೇ ನಿರ್ಧಾರ ತೆಗೆದುಕೊಂಡರೂ ನಾನು ಅದನ್ನು ಅನುಸರಿಸುತ್ತೇನೆ, ಆದರೆ ಆಂತರಿಕ ಹೊಂದಾಣಿಕೆಯಿಂದ ನಾನು ಅನುಭವಿಸಿದ ರೀತಿಯಲ್ಲಿ ಯಾರೂ ತೊಂದರೆ ಅನುಭವಿಸಬಾರದು ಎಂದರು.ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಪಕ್ಷವನ್ನು ಸರ್ವೋಚ್ಚ ಸ್ಥಾನದಲ್ಲಿ ನೋಡುತ್ತೇನೆ, ನಾಯಕರ ನಿರ್ದೇಶನಗಳಿಗೆ ಹೆಚ್ಚಿನ ಗೌರವವನ್ನು ಹೊಂದಿದ್ದೇನೆ ಎಂದು ಹೇಳಿ ಪಕ್ಷ ತೊರೆಯುವುದಿಲ್ಲ ಎಂಬ ಸಂದೇಶ ರವಾನಿಸಿದರು.