Author: AIN Author

ಮಂಡ್ಯ :- ಹೈಕಮಾಂಡ್‌ ಸೂಚನೆ ಮೇರೆಗೆ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರವೇ ಹೊರತು ಇದರಲ್ಲಿ ಯಾರದ್ದೇ ಹಸ್ತಕ್ಷೇಪ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಸ್ಪಷ್ಟಪಡಿಸಿದರು. ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಸಿದ್ದೇಗೌಡನದೊಡ್ಡಿ, ಹರಕನಹಳ್ಳಿ ಹಾಗೂ ಚಾಕನಕೆರೆ ಗ್ರಾಮಗಳಲ್ಲಿ ಗುರುವಾರ ಬರಪರಿಸ್ಥಿತಿ ಅಧ್ಯಯನ ಹಾಗೂ ರೈತ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸೋಮವಾರವಷ್ಟೆ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ ಬಳಿಕ ಬರ ಅಧ್ಯಯನ ಪ್ರವಾಸದಲ್ಲಿ ಭಾಗಿಯಾಗಿದ್ದ ಅವರು, ಮನುಷ್ಯನಿಗೆ ಕೆಲವು ಇತಿಮಿತಿ ಇರಬೇಕು. ಮೂವತ್ತು ವರ್ಷದಿಂದ ಪಕ್ಷ ನನಗೆ ಎಲ್ಲ ಸ್ಥಾನಮಾನ ಕೊಟ್ಟಿದೆ. ಪಕ್ಷದಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದೆ, ಕೇಂದ್ರ ಸರ್ಕಾರದಲ್ಲಿ ಏಳು ವರ್ಷ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಕೆಲಸ ಮಾಡಿದ್ದೇನೆ. ರಾಜ್ಯದ ಮುಖ್ಯಮಂತ್ರಿಯೂ ಆಗಿದ್ದೆ. ರಾಜ್ಯಾಧ್ಯಕ್ಷನಾಗಿ ಪಕ್ಷವನ್ನು ಮುನ್ನೆಡೆಸಿದ್ದೇನೆ ರಾಜಕೀಯದಲ್ಲಿ ಇಷ್ಟು ಮಾತ್ರ ಸಾಕಲ್ಲವೇ ಎಂದು ಪ್ರಶ್ನಿಸಿದರು. ರಾಜಕಾರಣಕ್ಕೆ ಪ್ರವೇಶಿಸಿದ 25 ವರ್ಷದ ನಂತರ ಚುನಾವಣಾ…

Read More

ಗದಗ;- ಟೈರ್ ಬಸ್ಟ್ ಹಿನ್ನೆಲೆ ಲಾರಿ ಹೊತ್ತಿ ಉರಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ. ತಕ್ಷಣ ಕಾರ್ಯಪ್ರವೃತ್ತರಾಗಿ ಸಹಾಯಕ್ಕೆ ಸ್ಥಳೀಯರು ಧಾವಿಸಿದ್ದಾರೆ. ಬೆಂಕಿ ನಂದಿಸೋ ಕಾರ್ಯಕ್ಕೆ ಸ್ಥಳೀಯರು ಮುಂದಾಗಿದ್ದಾರೆ. ಅದೃಷ್ಟವಶಾತ್ ಚಾಲಕ ಬಚಾವ್ ಆಗಿದ್ದು ನಂತರ ಬಂದ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸೋ ಕಾರ್ಯ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ಬೆಂಗಳೂರು;- ವಿವಿಧ ಯೋಜನೆಯಡಿ ಪಿಂಚಣಿಗಳನ್ನು ಪಡೆಯುವ ಫಲಾನುಭವಿಗಳಿಗೆ ಮಹತ್ವದ ಸೂಚನೆಯೊಂದಿದೆ. ಫಲಾನುಭವಿಗಳ ಬ್ಯಾಂಕ್/ ಅಂಚೆ ಇಲಾಖೆಯ ಉಳಿತಾಯ ಖಾತೆಗೆ ಎನ್‍ಪಿಸಿಐ ಲಿಂಕ್ ಕಡ್ಡಾಯವಾಗಿದೆ. ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಗಳನ್ನು ಫಲಾನುಭವಿಗಳಿಗೆ ಆಧಾರ್ ಆಧಾರಿತ ನೇರ ಹಣ ಸಂದಾಯ (ಡಿಬಿಟಿ) ಯೋಜನೆ ಮೂಲಕ ಪಾವತಿಸಲಾಗುತ್ತಿದೆ. ಇದಕ್ಕಾಗಿ ಕಡ್ಡಾಯವಾಗಿ ಫಲಾನುಭವಿಗಳ ಬ್ಯಾಂಕ್/ ಅಂಚೆ ಇಲಾಖೆಯ ಉಳಿತಾಯ ಖಾತೆಗೆ ಎನ್‍ಪಿಸಿಐ ಲಿಂಕ್ ಮಾಡಬೇಕು ಎಂದು ಹೇಳಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಗಳಾದ ವೃದ್ದಾಪ್ಯ ಯೋಜನೆ, ವಿಧವಾ ಯೋಜನೆ, ಅಂಗವಿಕಲ ಯೋಜನೆ, ಸಂಧ್ಯಾ ಸುರಕ್ಷಾ ಯೋಜನೆ, ಮನಸ್ವಿನಿ ಯೋಜನೆ, ಮೈತ್ರಿ ಯೋಜನೆಗಳ ಮಾಸಿಕ ಪಿಂಚಣಿಯನ್ನು ಡಿಬಿಟಿ ಮೂಲಕ ಪಾವತಿಸಲು ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಬ್ಯಾಂಕ್/ ಅಂಚೆ ಖಾತೆಗೆ ಎನ್‍ಪಿಸಿಐ ಲಿಂಕ್ ಆಗದ ಫಲಾನುಭವಿಗಳ ಪಟ್ಟಿಯು ಆಧಾರ್ ಗ್ರಾಮ ಆಡಳಿತಾಧಿಕಾರಿ (ವಿಎ) ಕಚೇರಿಯಲ್ಲಿರುತ್ತದೆ. ಫಲಾನುಭವಿಗಳು ವಿಎ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಲು ಮನವಿ ಮಾಡಲಾಗಿದೆ. ಒಂದು ವೇಳೆ ನಿಮ್ಮ ಖಾತೆಯು ಎನ್‍ಪಿಸಿಐ ಲಿಂಕ್ ಆಗದಿದ್ದಲ್ಲಿ ಕೂಡಲೇ ತಮ್ಮ ಆಧಾರ್…

Read More

ನೆಲಮಂಗಲ: ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಲೋಕೇಶ್ ಮನೆಯ ಮುಂದೆ ರಾತ್ರಿ ಸಾಕು ಕೋಳಿಗಳ ಮೇಲೆ ದಾಳಿ ನಡೆದಿದ್ದು, ನೆಲಮಂಗಲ ತಾಲೂಕಿನ ಗೊರವನಹಳ್ಳಿ ಗ್ರಾಮದ ಬಳಿ ಘಟನೆ ಜರುಗಿದೆ. ಮನೆಯ ಸಿಸಿಟಿವಿ ಕ್ಯಾಮರದಲ್ಲಿ ಚಿರತೆಯ ದಾಳಿಯ ದೃಶ್ಯ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Read More

ನೆಲಮಂಗಲ: ಖದೀಮರು ಮಂಕಿ ಕ್ಯಾಪ್ ಹಾಕಿಕೊಂಡು ಎಟಿಎಂ ದರೋಡೆಗೆ ಯತ್ನಿಸಿದ ಘಟನೆ ನೆಲಮಂಗಲ ತಾಲೂಕಿನ ಕುಲವನಹಳ್ಳಿಯಲ್ಲಿ ಘಟನೆ ಜರುಗಿದೆ. ನಾಲ್ಕೈದು ಮಂದಿಯಿಂದ ಎಟಿಎಂ ದರೋಡೆ ನಡೆದಿದೆ. ಕೆನರಾ ಬ್ಯಾಂಕ್ ಗೆ ಸೇರಿದ ಎಟಿಎಂ ಇದಾಗಿದ್ದು, ಕಳ್ಳರ ಕರಾಮತ್ತು ಬ್ಯಾಂಕ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಾರೆಯ ಮೂಲಕ ಬಾಗಿಲು ಮೀಟಲು ಯತ್ನ ವಿಫಲವಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ;- ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಾ ಬಳಿ ಜರುಗಿದೆ. ಟ್ಯಾಂಕರ್& ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ನಾಲವಾರ ಗ್ರಾಮದವರಾಗಿದ್ದು, ಸ್ಥಳಕ್ಕೆ ವಾಡಿ ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದಾರೆ. ಮೃತರನ್ನು ನಸೀಮಾ ಬೇಗಂ, ಬಿಬಿ ಫಾತೀಮಾ, ಹಾಬುಬಕರ್, ಬಿಬಿ ಮರಿಯಮ್ಮ, ಮಹ್ಮದ್ ಪಾಶಾ, ಆಟೋ ಚಾಲಕ ಬಾಬಾ ಎಂದು ಹೇಳಲಾಗಿದೆ.

Read More

ಬೆಂಗಳೂರು;- ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ, ಬೊಮ್ಮನಹಳ್ಳಿ, ಪಶ್ಚಿಮ, ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ ಹಾಗೂ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ. ಮಹದೇವಪುರ ವಲಯ: ಮಹದೇವಪುರ ವಿಭಾಗ ವ್ಯಾಪ್ತಿಯಲ್ಲಿನ ಸ್ಥಳೀಯ Resident Welfare Association ಹಾಗೂ Mahadevapura Traders Associations ರವರ ಮನವಿಯಂತೆ ಹಾಗೂ ಮಾನ್ಯ ಉಚ್ಚ ನ್ಯಾಯಾಲಯದ ಹೊರಡಿಸಿರುವ ಆದೇಶದನುಸಾರ ಇಂದು ಮಹದೇವಪುರ ವಿಭಾಗ ವ್ಯಾಪ್ತಿಯ ಇಬ್ಬಲೂರಿನಿಂದ ಕಾಡುಬಿಸನಹಳ್ಳಿ, ಕಾರ್ತಿಕ್‌ನಗರ ಮಾರ್ಗವಾಗಿ ಲೌರಿ ಜಂಕ್ಷನ್ ವರೆಗೆ ಸುಮಾರು 4.00 ಕಿ.ಮೀ ರಷ್ಟು ಹಾಗೂ ಲೌರಿ ಜಂಕ್ಷನ್‌ನಿಂದ ಗರುಡಾಚಾರ್‌ಪಾಳ್ಯ ಮೆಟ್ರೋ ನಿಲ್ದಾಣ, ಶಾಂತಿನಿಕೇತನ, ಬಿಪಿಎಲ್ ಮೆಟ್ರೋ ನಿಲ್ದಾಣದವರೆಗೆ ಸುಮಾರು 3.00 ಕಿ.ಮೀ ರಷ್ಟು, ಹೆಚ್.ಎ.ಎಲ್ ಅಂಡರ್‌ಪಾಸ್‌, ಸುರಂಜನ್‌ದಾಸ್ ಜಂಕ್ಷನ್‌ನಿಂದ ಯಮಲೂರು ಜಂಕ್ಷನ್, ಯಶೋಮತಿ ಆಸ್ಪತ್ರೆ, ಸಿದ್ದಾಪುರ ಜಂಕ್ಷನ್, ವರ್ತೂರು ಕೋಡಿ, ಸ್ವಸ್ತಾ ಆಸ್ಪತ್ರೆ, ಹೋಪ್‌ಫಾರಂ ಮಾರ್ಗವಾಗಿ ಸಾಯಿಬಾಬಾ ಜಂಕ್ಷನ್ ವರೆಗೆ ಸುಮಾರು 3.00 ಕಿ.ಮೀ ರಷ್ಟು ರಸ್ತೆಯಲ್ಲಿನ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಚರಣೆಯನ್ನು ನಡೆಸಲಾಗಿದ್ದು, ಪಾದಚಾರಿ…

Read More

ಮೊದಲು ತುಕಾಲಿ ಸಂತೋಷ್‌ ಅವರ ಹಾಸ್ಯದ ಹೊನಲಿನ ಝಲಕ್‌ ಕೊಟ್ಟಿದ್ದ JioCinema ಇದೀಗ ಟಾಸ್ಕ್‌ ಕ್ಲ್ಯಾಶ್‌ ಅನ್ನು ಕಾಣಿಸಿದೆ. ನಿನ್ನೆ ಎದುರಾಳಿ ತಂಡದ ಸ್ಫರ್ಧಿಗಳ ಮುಖದ ಮೇಲೆ ವಿವಿಧ ಭಾವಗಳನ್ನು ಮೂಡಿಸುವ ಟಾಸ್ಕ್‌ ಅನ್ನು ಬಿಗ್‌ಬಾಸ್ ನೀಡಿದ್ದರು. ಹಾಗೆ ನೋಡಿದರೆ ಕೃತಕವಾಗಿ ಪ್ರಯತ್ನಿಸಿ ಆಯಾ ಭಾವವನ್ನು ಮೂಡಿಸಲು ಯಾರೂ ಯಶಸ್ವಿಯಾಗಿರಲಿಲ್ಲ. ಆದರೆ ಇಂದಿನ ಟಾಸ್ಕ್‌ನಲ್ಲಿ ತುಂಬ ಸಹಜವಾಗಿಯೇ ಎಲ್ಲ ಭಾವಗಳೂ ವ್ಯಕ್ತವಾಗುತ್ತಿರುವ ಹಾಗಿದೆ. ಒಂದು ಪ್ಲ್ಯಾಸ್ಟಿಕ್‌ ಬಾಕ್ಸ್‌ನ ಎರಡೂ ಬದಿಯಲ್ಲಿ ಹಗ್ಗಗಳಿಂದ ಕಟ್ಟಲಾಗಿದೆ. ಅದನ್ನು ಎರಡು ಸ್ಪರ್ಧಿಗಳ ಸೊಂಟಕ್ಕೆ ಬಿಗಿಯಲಾಗಿದೆ. ಅದನ್ನು ಇಟ್ಟುಕೊಂಡು ಓಡುವ ಟಾಸ್ಕ್‌ ಅನ್ನು ಬಿಗ್‌ಬಾಸ್‌ ಮನೆಯ ಸ್ಪರ್ಧಿಗಳಿಗೆ ನೀಡಿರುವಂತಿದೆ. ಈ ಟಾಸ್ಕ್‌ನಲ್ಲಿಯೇ ಪರಸ್ಪರ ತಳ್ಳಿಕೊಳ್ಳುವ, ಕಿರುಚಾಡಿಕೊಳ್ಳುವ ಸನ್ನಿವೇಶಗಳು ಸೃಷ್ಟಿಯಾಗಿವೆ. ವಿನಯ್-ಕಾರ್ತಿಕ್‌ ನಡುವೆ ತಳ್ಳಾಡುವಿಕೆಗಳು ನಡೆದಿದ್ದರೆ, ಸಂಗೀತಾ ಅವರನ್ನು ಪರೋಕ್ಷವಾಗಿ ಅಣುಕಿಸುವ ಮೂಲಕ ವಿನಯ್‌ ಇನ್ನಷ್ಟು ಕೆಣಕಿದ್ದಾರೆ. ಮತ್ತದೇ ‘ಫೇರ್‍ ಗೇಮ್‌’ ಚರ್ಚೆ ಏರುದನಿಯಲ್ಲಿಯೇ ಮುನ್ನೆಲೆಗೆ ಬಂದಿದೆ. ಅಷ್ಟಕ್ಕೂ ಈ ಟಾಸ್ಕ್‌ನ ಸ್ವರೂಪವೇನು? ಸ್ಪರ್ಧಿಗಳು ಜಿದ್ದಾಜಿದ್ದಿಗೆ ಬಿದ್ದು ಜಗಳವಾಡಲು…

Read More

ಕಳೆದ ಕೆಲವು ದಿನಗಳಿಂದ ತುಕಾಲಿ ಸಂತೋಷ್‌ ಗಂಭೀರವಾಗಿಬಿಟ್ಟಿದ್ದರು. ಮೊದಲ ವಾರದಲ್ಲಿ ಅವರು ಮಾಡಿದ ಕಾಮಿಡಿಯ ಕ್ವಾಲಿಟಿ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಅವರೇ ತರಾಟೆಗೆ ತೆಗೆದುಕೊಂಡಿದ್ದರು. ‘ನಿಮ್ಮ ಕಾಮಿಡಿ ಬೇರೆಯವರ ಮನಸ್ಸನ್ನು ನೋಯಿಸುತ್ತದೆ’ ಎಂಬ ಮಾತು ಪದೇ ಪದೇ ಮನೆಮಂದಿಯ ಬಾಯಲ್ಲಿ ಬರುತ್ತಿತ್ತು. ಇದರಿಂದ ಹಾಸ್ಯ ಮಾಡಲೇ ಹಿಂಜರಿಯುತ್ತಿದ್ದ ತುಕಾಲಿ ಅವರು ಗಂಭೀರವಾಗಿಬಿಟ್ಟಿದ್ದರು. ಮನೆಯೊಳಗಿನ ಸನ್ನಿವೇಶಗಳು, ಟಾಸ್ಕ್‌ಗಳು ಮತ್ತು ಜಗಳಗಳೂ ಅವರು ಗಂಭೀರವಾಗಲು ಕಾರಣವಿರಬಹುದು. ಆದರೆ ಈವತ್ತು ಬಿಗ್‌ಬಾಸ್‌ ಮನೆಯಲ್ಲಿ ಮತ್ತೆ ನಗೆಯ ಹೊನಲು ಹರಡಿದೆ. ಆ ನಗೆಯ ಅಲೆಯಲ್ಲಿ ಮನೆಯ ಸದಸ್ಯರು ಪರಸ್ಪರ ಭಿನ್ನಾಭಿಪ್ರಾಯಗಳನ್ನು ಮರೆತು ನಕ್ಕು ನಲಿದಿದ್ದಾರೆ. ಆ ನಗುವಿಗೆ ಕಾರಣವಾದವರು ತುಕಾಲಿ ಸಂತೋಷ್. ಈವತ್ತಿನ ಎಪಿಸೋಡ್ ಸಖತ್ ಎಂಟರ್‍ಟೈನಿಂಗ್ ಆಗಿರುತ್ತದೆ ಎಂಬುದರ ಸೂಚನೆ JioCinema ಬಿಡುಗಡೆ ಮಾಡಿರುವ ಬೆಳಗಿನ ಪ್ರೋಮೊದಲ್ಲಿಯೇ ಸಿಕ್ಕಿದೆ. ‘ಬಾರೇ ರಾಜಕುಮಾರಿ’ ಎಂದು ಕಾರ್ತಿಕ್ ಅವರು ತುಕಾಲಿ ಸಂತೋಷ್ ಹೆಗಲ ಮೇಲೆ ಕೈ ಹಾಕಿ ಕರೆದುಕೊಂಡು ಬಂದಾಗ ಇಡೀ ಮನೆಯೇ ದಂಗಾಬಿಟ್ಟಿತ್ತು. ಯಾಕೆಂದರೆ ತುಕಾಲಿ…

Read More

ಬೆಂಗಳೂರು:- ನಗರದ ಹಲವೆಡೆ ರಾತ್ರಿ ಧಾರಾಕಾರ ಮಳೆಯಾಗಿದೆ. ಪ್ರಮುಖ ರಸ್ತೆ ಹಾಗೂ ಜಂಕ್ಷನ್‌ಗಳಲ್ಲಿ ಹೊಳೆಯಂತೆ ಮಳೆ ನೀರು ಹರಿಯಿತು. ಬೆಂಗಳೂರಿನ ಸಹಕಾರ ನಗರ ವ್ಯಾಪ್ತಿಯಲ್ಲಿ ‌ಸುರಿದ ಭಾರಿ ಮಳೆಯಿಂದ ಹಲವು ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿ ಸಮಸ್ಯೆ ಸೃಷ್ಟಿಸಿತ್ತು. ಮನೆಗಳಲ್ಲಿದ್ದ ಸಾಮಗ್ರಿ ನೀರಿನಲ್ಲಿ ತೊಯ್ದವು. ಸ್ಥಳಕ್ಕೆ ಬಂದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದರು. ಭಾರಿ ಮಳೆ ಸುರಿದ ವೇಳೆ ಮನೆಗಳಿಗೆ ನೀರು ನುಗ್ಗುವುದು ಸಾಮಾನ್ಯ ಸಂಗತಿಯಾಗಿದೆ. ಬಿಬಿಎಂಪಿ ಶಾಶ್ವತವಾಗಿ ಸಮಸ್ಯೆ ಪರಿಹರಿಸುತ್ತಿಲ್ಲ. ಸಮಸ್ಯೆಯಾದಾಗ‌ ಮಾತ್ರ ‌ಅಧಿಕಾರಿಗಳು ಈ ಪ್ರದೇಶಕ್ಕೆ ಭೇಟಿ ‌ನೀಡುತ್ತಾರೆ. ಬಳಿಕ ಈ ಪ್ರದೇಶಕ್ಕೆ ಬರುವುದಿಲ್ಲ ಎಂದು ಆಪಾದಿಸಿದರು. ಪೀಣ್ಯ, ಯಶವಂತಪುರ, ಶೇಷಾದ್ರಿಪುರ, ಮೆಜಿಸ್ಟಿಕ್, ಆಡುಗೋಡಿ, ಇಂದಿರಾನಗರ, ಹೆಬ್ಬಾಳ, ಯಲಹಂಕ, ರಾಜಾಜಿನಗರ ಭಾಗದಲ್ಲಿ ‌ಮಳೆಯಾಗಿದೆ. ಬುಧವಾರ ಸಹ ಕೆಲವು ಕೆಳಸೇತುವೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು. ಮಳೆ ಹಾಗೂ ಗಾಳಿಯ ಅಬ್ಬರಕ್ಕೆ ಜಾಲಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜರತ್ನಂ ವೃತ್ತದಲ್ಲಿ…

Read More