Author: AIN Author

ಬೆಂಗಳೂರು: ಟೀ ಕುಡಿಯಲು ಬೇಕರಿ ಬಳಿ ಬಂದಿದ್ದ ರೌಡಿಶೀಟರ್‌ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ (Bengaluru) ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ. ಸಹದೇವ್ ಕೊಲೆಯಾದ ರೌಡಿಶೀಟರ್. ರಾತ್ರಿ 9:30 ರ ಸುಮಾರಿಗೆ ಸಹದೇವ್‌ ಹತ್ಯೆಯಾಗಿದೆ. ಈತ ಕೋಣನಕುಂಟೆ ಠಾಣೆ ವ್ಯಾಪ್ತಿಯ ರೌಡಿಶೀಟರ್‌ ಆಗಿದ್ದ. ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಟೀ ಕುಡಿಯಲು ಬೇಕರಿ ಬಳಿ ರೌಡಿಶೀಟರ್‌ ಸಹದೇವ್‌ ಬಂದಿದ್ದ. ಈ ವೇಳೆ ಮೂರು ಬೈಕ್‌ನಲ್ಲಿ ಬಂದಿದ್ದ ಆರು ಮಂದಿ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.

Read More

ಬೆಂಗಳೂರು: ರಾಜಕೀಯ ಬೆಳವಣಿಗೆಯೊಂದರಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ  (Tejaswi Surya) ಅವರು ಇಂದು ದಿಢೀರ್ ಆಗಿ ಭೇಟಿಯಾಗಿದ್ದಾರೆ. ಈ ಸಂಬಂಧ ಡಿಕೆಶಿ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದಾರೆ. ಜೊತೆಗೆ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಅವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದರು ಎಮದು ಬರೆದುಕೊಂಡಿದ್ದಾರೆ.

Read More

ಬೆಂಗಳೂರು: ಆಮ್ ಆದ್ಮಿ ಪಕ್ಷವು ಕಳೆದ ಮೂರು ದಿವಸಗಳ ಹಿಂದೆ ಪತ್ರಿಕಾಗೋಷ್ಠಿಯನ್ನು ನಡೆಸಿ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಯ 140 ಕೋಟಿ ಬೃಹತ್ ಹಗರಣವನ್ನು ಬಯಲು ಗೆಳೆದಿತ್ತು ಈ ಸಂಬಂಧ 330 ಪುಟಗಳ ದಾಖಲೆಯನ್ನು ಸಹ ಬಹಿರಂಗಗೊಳಿಸಿತ್ತು. ಅಕ್ರಮ ಕೋವಿಡ್ ಟೆಸ್ಟ್ ಗಳನ್ನು ಮಾಡಿ ನೂರಾರು ಕೋಟಿ ಅಕ್ರಮ ಅವ್ಯವಹಾರಗಳನ್ನು ನಡೆಸಿದ ಹಗರಣವನ್ನು ಬಯಲು ಮಾಡಲಾಗಿತ್ತು. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ. ಟಿ. ನಾಗಣ್ಣ “ಪಕ್ಷದ ಕಾನೂನು ಘಟಕವು ಈ ಬೃಹತ್ ಹಗರಣದ ರೂವಾರಿ ಹಾಗೂ ಪ್ರಮುಖ ಆರೋಪಿ ಅಂದಿನ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಸುಧಾಕರ್, ಕಿದ್ವಾಯಿ ಗ್ರಂಥೀ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ. ರಾಮಚಂದ್ರ ಹಾಗೂ ಬಿಎಂಎಸ್ ಸಂಸ್ಥೆಯ ಮಾಲೀಕ ಎಸ್ ಪಿ ರಕ್ಷಿತ್ ರವರ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಐಸಿಎಂಆರ್) ದೂರನ್ನು ನೀಡಲಾಗಿದೆ. ಈ ಕೂಡಲೇ ಕಿದ್ವಾಯಿ ಸ್ಮಾರಕ ಗ್ರಂಥಿ ಕ್ಯಾನ್ಸರ್ ಆಸ್ಪತ್ರೆ ಹಾಗೂ ಆರೋಪಿತ…

Read More

ಬೆಂಗಳೂರು : ರಾಜ್ಯದಲ್ಲಿ ಪಂಪ್ಡ್ ಸ್ಟೋರೇಜ್, ಹೈಡ್ರೋ, ಸೋಲಾರ್ ಸೇರಿದಂತೆ 15,000 ಕೋಟಿ ರೂ. ಮೊತ್ತದ ವಿವಿಧ ವಿದ್ಯುತ್ ಯೋಜನೆಗಳನ್ನು ಕೈಗೊಳ್ಳುವ ಸಂಬಂಧ ಕೇಂದ್ರ ಸರ್ಕಾರ ಸ್ವಾಮ್ಯದ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ ಜತೆ ರಾಜ್ಯ ಸರ್ಕಾರ ಸಹಿ ಹಾಕಿದೆ. ಇಂಧನ ಸಚಿವ ಕೆ ಜೆ ಜಾರ್ಜ್ ಅವರ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಪರವಾಗಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ಟಿಹೆಚ್‌ಡಿಸಿಎಲ್‌ ತಾಂತ್ರಿಕ ನಿರ್ದೇಶಕ ಭೂಪೇಂದ್ರ ಗುಪ್ತ ಅವರು ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು. “ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಗಳನ್ನು ಪರಿಹರಿಸಲು ಈ ಒಪ್ಪಂದ ಪೂರಕವಾಗಿದ್ದು, ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ಎಲ್ಲ ರೀತಿಯ ಸಹಕಾರ ನೀಡಲು ರಾಜ್ಯ ಸರ್ಕಾರ ಬದ್ಧ,” ಎಂದು ಇಂಧನ ಸಚಿವರು ತಿಳಿಸಿದರು. “ದಿಲ್ಲಿಯಲ್ಲಿ ಈ ಹಿಂದೆ ಕೇಂದ್ರ ಇಂಧನ ಸಚಿವ ಆರ್‌ಕೆ ಸಿಂಗ್ ಮತ್ತು ಟಿಹೆಚ್‌ಡಿಸಿಎಲ್‌ನ ಸಿಎಂಡಿ ಆರ್.ಕೆ. ವಿಷ್ಣೋಯ್…

Read More

ಕೋಲಾರ: ಅಪ್ರಾಪ್ತ ಬಾಲಕ ಕಾರ್ತಿಕ್‌ ಸಿಂಗ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ‌ ಪೊಲೀಸರು ಫೈರಿಂಗ್‌ ಮಾಡಿರುವಂತಹ ಘಟನೆ ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಗ್ರಾಮದ ಬಳಿ ನಡೆದಿದೆ. ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಮುಳಬಾಗಿಲು ಸಬ್ಇನ್ಪೆಕ್ಟರ್ ವಿಠಲ್ ತಳವಾರ್ ಅವರಿಂದ ಆರೋಪಿಗಳ ಎರಡೂ ಕಾಲುಗಳಿಗೆ ಫೈರಿಂಗ್‌ ಮಾಡಿದ್ದಾರೆ. ಹಲ್ಲೆ ನಡೆಸಿದ್ದರಿಂದ ಪಿಎಸ್ಐ, ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು, ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಹುಬ್ಬಳ್ಳಿ : ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಣ್ಣಪ್ಪಿಸಿ ತಿರುಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಬಕಾರಿ ಪ್ರಕರಣದಲ್ಲಿ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಹಾಗೂ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಜನತಾ ಬಜಾರ ಬಳಿಯ ಚಾಂಗದೇವ ಮಹಾರಾಜ ಗುಡಿ ಹತ್ತಿರ ಮುಕುಂದಪ್ಪ ನಾರಾಯಣ ಓತಾಲಿ (ಹೊರಾಲಿ) ಎಂಬಾತನನ್ನು ಬಂಧಿಸಲಾಗಿದೆ. ಮತ್ತೋರ್ವ ಮಹಿಳೆ ಬಂಧನ 2010 ರಲ್ಲಿ ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ತನ್ನ ನಾಲ್ಕು ವರ್ಷದ ಮೊಮ್ಮಗಳನ್ನು ಬಸ್ ಹತ್ತಿಸಿ ಬಿಟ್ಟು ಹೋಗಿದ್ದ ಗದಗ- ಬೆಟಗೇರಿ ನಿವಾಸಿ ಖಾಸಿಬಾಯಿ ಮುತಗಾರ ಎಂಬಾಕೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ- ಬೆಟಗೇರಿ ನಿವಾಸಿ ಖಾಸಿಬಾಯಿ ಚನ್ನಾಪೂರ ಗ್ರಾಮದ ಬಸ್ ನಿಲ್ದಾಣದಲ್ಲಿ ತನ್ನ 4 ವರ್ಷದ ಮೊಮ್ಮಗಳನ್ನು ದುರುದ್ದೇಶದಿಂದ ಬಸ್ಸಿನಲ್ಲಿ ಹತ್ತಿಸಿ ಬಿಟ್ಟು ಹೋಗಿದ್ದಳು. ನಂತರ ಈ ಪ್ರಕರಣದ ವಿಚಾರಣಾ ಅವಧಿಯಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಪರಾರಿಯಾಗಿದ್ದಳು. ಪೊಲೀಸರ ಕಣ್ಣಪ್ಪಿಸಿ ಅಡ್ಡಾಡುತ್ತಿದ್ದ ಮಹಿಳೆಯ ಪತ್ತೆಗೆ ಒಂದು ವಿಶೇಷ ತಂಡ…

Read More

ಬೆಂಗಳೂರು: ನವೆಂಬರ್ 9 ರಂದು ಅರಮನೆ ಮೈದಾನದಲ್ಲಿ ಸೇವಾದಳದ ಶತಮಾನೋತ್ಸವ (Seva Dal Centenary) ಹಾಗೂ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ (Saleem Ahmed) ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾದ ಲಾಲ್ ಜಿ ಧ್ವಜಾರೋಹಣ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸಚಿವರು, ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಇದೇ ತಿಂಗಳ 28 ರಂದು ಸೇವಾದಳ 100 ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ಮೂಲಕ ಸೇವಾದಳದ ಇತಿಹಾಸದ ಬಗ್ಗೆ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸೇವಾದಳದ 3 ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸೇವಾದಳ ಯಾವ ರೀತಿ ಕೆಲಸ ಮಾಡಬೇಕು, ಲೋಕಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ…

Read More

ತುಮಕೂರು: ಕೋಟ್ಯಾಂತರ ರೂ ಮೌಲ್ಯದ ಜಾಗ್ವಾರ್ ಕಾರಿಗೆ ಬೆಂಕಿ ಬಿದ್ದರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಮದುವೆಗೆಂದು ಕುಣಿಗಲ್ ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪಕ್ಕೆ ಬಂದಿದ್ದ ಕಾರು ಆಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕದಳದಿಂದ ಬೆಂಕಿ‌ನಂದಿಸುವ ಕಾರ್ಯ ನಡೆದಿದ್ದು, ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬೆಂಗಳೂರು : ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ ಎಂದು ಸಚಿವ ಡಾ.ಹೆಚ್​.ಸಿ. ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಶಾಸಕ ಯತ್ನಾಳ್ ಅವರೇ, ಮಾನವೀಯ ಸಹಾಯದ ವಿಷಯದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ನಿಮ್ಮ ಈ ರೋಷಾವೇಷವನ್ನು, ನಿಮ್ಮ ಹೈಕಮಾಂಡ್ ಮುಂದೆ ರಾಜ್ಯಕ್ಕೊಬ್ಬ ವಿಪಕ್ಷೀಯ ನಾಯಕನ ಸ್ಥಾನವನ್ನು ಆರಿಸುವುದಕ್ಕಾಗಿ ಬಳಸಿಕೊಳ್ಳಿ. ಇಲ್ಲವೇ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ಕೇಳುವುದಕ್ಕಾದರೂ ಬಳಸಿ. ಸುಮ್ಮನೇ ಕಾಲಹರಣ ಮಾಡಬೇಡಿ ಎಂದು ಕುಟುಕಿದ್ದಾರೆ. ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ. ಆದರೆ, ಹಿಂದೆ Hip joint knee ತೊಂದರೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ…

Read More

ತುಮಕೂರು: ಕ್ರೂಸರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ತುಮಕೂರು ತಾಲೂಕಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಗಂಗಾವತಿ ಮೂಲದ ಶಂಕರ್​(35), ಸತೀಶ್​(40) ಮೃತರು. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕರಿಗೆ ಕಮಿಷನ್‌ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಕೋರ ಸಮೀಪ ಕ್ರೂಸರ್‌ ಕಾರಿನ ಹಿಂಬದಿಯ ಟೈಯರ್‌ ಪಂಚ್ಚರ್‌ ಆಗಿತ್ತು. ಹೀಗಾಗಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಟೈಯರ್‌ ಬದಲಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More