Author: AIN Author

ನಟ ಜಗ್ಗೇಶ್ (Jaggesh) ಅನಾರೋಗ್ಯದಿಂದ ಬಳಲುತ್ತಿದ್ದಾರಂತೆ. ಏಳು ದಿನಗಳಿಂದ ಅವರು ಜ್ವರದಿಂದ ಬಳಲುತ್ತಿದ್ದು, ಹಾಸಿಗೆಯಿಂದ ಏಳಕ್ಕೂ ಆಗದೇ ಇರುವಂತಹ ಸ್ಥಿತಿಯಲ್ಲಿದ್ದಾರೆ. ತಮಗೆ ಹೀಗೆ ಆಗಿದ್ದು ಯಾಕೆ ಎನ್ನುವುದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಜೊತೆಗೆ ಮನವಿಯೊಂದನ್ನು ಮಾಡಿದ್ದಾರೆ. ನನ್ನನ್ನು ಗೀತಾ ಅವರು ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಅವರ ಆಹ್ವಾನವನ್ನು ಮನ್ನಿಸಿ ಅಲ್ಲಿಗೆ ಹೋದೆ. ಸಾಕಷ್ಟು ಜನರು ಆ ಕಾರ್ಯಕ್ರಮದಲ್ಲಿ ಭಾಗಿಯಾದ್ದರು. ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಬಂದರು. ಫೋಟೋ ಬೇಡ ಅಂತಾ ಹೇಳಿದರೆ ಕಷ್ಟ, ಮಾಸ್ಕ್ (Mask)ಹಾಕಿದರೆ ಮತ್ತೊಂದು ರೀತಿ ತಿಳಿದುಕೊಳ್ಳುತ್ತಾರೆ ಅಂತ ಕೇಳಿದವರಿಗೆಲ್ಲ ಫೋಟೋ ನೀಡಿದೆ. https://www.instagram.com/reel/C1eDVxGP0kY/?utm_source=ig_embed&utm_campaign=loading  ಯಾರೋ ಪುಣ್ಯಾತ್ಮರು ನನಗೆ ಅನಾರೋಗ್ಯವನ್ನು ಗಿಫ್ಟ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ದಯವಿಟ್ಟು ಯಾರಿಗಾದರೂ ಶೀತ, ಜ್ವರ, ಅನಾರೋಗ್ಯವಿದ್ದರೆ ಮನೆಯಲ್ಲಿ ಇರಿ. ಹೀಗೆ ಕಾರ್ಯಕ್ರಮಕ್ಕೆ ಬಂದು ಬೇರೆಯವರಿಗೆ ತೊಂದರೆ ಕೊಡಬೇಕು. ದಯವಿಟ್ಟು ಮಾಸ್ಕ್ ಹಾಕಿಕೊಳ್ಳಿ ಎಂದು ಹಲವಾರು ಸಲಹೆಗಳನ್ನು ನೀಡಿದ್ದಾರೆ ಜಗ್ಗೇಶ್.

Read More

ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಪ್ರೀ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗುತ್ತಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ. ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ.

Read More

ರಾಯಚೂರು:-ಸಿಂಧನೂರ ತಾಲೂಕಿನಲ್ಲಿ ಈಗಾಗಲೆ ಶೇ.80ರಷ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಕ್ಕಿದೆ. ಇನ್ನುಳಿದ ಪ್ರದೇಶವನ್ನು ಸಹ ನೀರಾವರಿ ವ್ಯಾಪ್ತಿಗೊಳಪಡಿಸಲು ಒತ್ತು ಕೊಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಹೇಳಿದರು. ಪಟ್ಟಣದ ಕುಷ್ಟಗಿ ರಸ್ತೆಯಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ  ನಡೆದ ಮಹತ್ವದ ತಿಮ್ಮಾಪುರ ಏತ ನೀರಾವರಿ ಯೋಜನೆಯ ಲೋಕಾರ್ಪಣೆ, ಜಲಜೀವನ ಮಿಷನ್ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಸರ್ಕಾರಿ ಪದವಿ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಮತ್ತು ಕರ್ನಾಟಕ ಸಂಭ್ರಮ-50ರ ರಥಯಾತ್ರೆಗೆ ಚಾಲನೆ ಮತ್ತು ಸಿಂಧನೂರ ವಿಧಾನಸಭಾ ಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭಕ್ಕೆ ಸಂವಿಧಾನ ಪೀಠಿಕೆ ಓದುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ 27,000 ಎಕರೆ ಪ್ರದೇಶಕ್ಕೆ ನೀರು ಸಿಗುತ್ತಿರಲಿಲ್ಲ. ಈ ಭಾಗದ ಜನರು ಶಾಸಕರಾದ ಹಂಪನಗೌಡ ಬಾದರ್ಲಿ ಅವರ ಮೇಲೆ ಒತ್ತಡ ಹಾಕಿ ತಮಗೆ ನೀರು ಕೊಡಿ ಎಂದು…

Read More

ರಾಯಚೂರು:- ಇಡೀ ರಾಜ್ಯದಲ್ಲಿಯೇ ಅತೀ ಹೆಚ್ಚು ನೀರಾವರಿ ಪ್ರದೇಶ ಹೊಂದಿರುವ ಮತ್ತು ಅಭಿವೃದ್ಧಿಯಲ್ಲಿ ಮಂಚೂಣಿಯಲ್ಲಿರುವ ಸಿಂಧನೂರ ತಾಲೂಕನ್ನು ನೂತನ ಜಿಲ್ಲೆಯನ್ನಾಗಿ ಘೋಷಿಸಿ ಮೇಲ್ದರ್ಜೇಗೇರಿಸಬೇಕು ಎಂದು ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಹೇಳಿದರು. ಸಿಂಧನೂರ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಡಿಸೆಂಬರ್ 30 ರಂದು ನಡೆದ ಮಹತ್ವದ ತಿಮ್ಮಾಪುರ ಏತ ನೀರಾವರಿ ಯೋಜನೆಯ ಲೋಕಾರ್ಪಣೆ, ಜಲಜೀವನ ಮಿಷನ್ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಸರ್ಕಾರಿ ಪದವಿ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಮತ್ತು ಕರ್ನಾಟಕ ಸಂಭ್ರಮ-50ರ ರಥಯಾತ್ರೆಗೆ ಚಾಲನೆ ಮತ್ತು ಸಿಂಧನೂರ ವಿಧಾನಸಭಾ ಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಿಮ್ಮಾಪುರ ಏತ ನೀರಾವರಿ ಯೋಜನೆಯು ಕಲಬುರಗಿ ವಿಭಾಗದಲ್ಲಿಯೇ ಅತ್ಯಂತ ಮಹತ್ವದ ಯೋಜನೆ ಯಾಗಿದೆ. ಈ ಯೋಜನೆಗೆ ಈ ಹಿಂದೆ ಅಡಿಗಲ್ಲು ಹಾಕಿದ್ದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ನವರೇ ಮತ್ತೀಗ ಲೋಕಾರ್ಪಣೆ…

Read More

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸುನಾಮಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಮೋದಿ ಅವರ ಸುನಾಮಿ ಇದೆ. ದೇಶದ ಜನ ಮೋದಿ ಅವರ ಅಧಿಕಾರದಲ್ಲಿ ಹೊಸ ಕನಸು ಕಾಣುತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ 25 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಮೋದಿ ಸುನಾಮಿ ತಡೆಯಲು ಯಾರಿಂದಲೂ ಆಗಲ್ಲ. ಯಾವ ಗೋಡೆ ಡ್ಯಾಂ ಸಹ ಈ ಸುನಾಮಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಒಂದು ಸೀಟ್ ಕಡಿಮೆ ಆದರೂ ರಾಜಸ್ಥಾನ ಆಗುವ ಬಗ್ಗೆ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದರು, ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ. ನಮ್ಮ ಅಧ್ಯಕ್ಷರು 28 ಸ್ಥಾನ ಬರುವುದಾಗಿ ಹೇಳಿದ್ದಾರೆ ಎಂದರು.  https://ainlivenews.com/16-days-bank-holiday-in-january-2024/ ಇದೇ ವೇಳೆ 9 ಮಂದಿ ಕಾಂಗ್ರೆಸ್ ಸಚಿವರು ಲೋಕಸಭಾ ಚುನಾವಣೆ (Loksabha Election) ನಿಲ್ಲಲು ಹಿಂದೇಟು ಹಾಕುತ್ತಾರೆ ಎಂಬ ವಿಚಾರದ ಕುರಿತು ಮಾತನಾಡಿದ ಸೂರ್ಯ, ಸದ್ಯ ಮೋದಿ…

Read More

ಬೀದರ್: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ ಗೆ ಹಿಂದುಗಡೆಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ‌ ವಸತಿ ನಿಲಯ ಮೇಲ್ವಿಚಾರಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೀದರ್‌ ತಾಲೂಕಿನ ಹೊನ್ನಿಕೇರಿ ಕ್ರಾಸ್‌ ಬಳಿ ನಿನ್ನೆ ಸಂಜೆ ನಡೆದಿದೆ. ಅಪಘಾತದಲ್ಲಿ ಸಾವನಪ್ಪಿದ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಾರ್ಡನ್ ದೇಸುರಾವ ರಾಠೋಡ್ (40) ಮೂಲತಃ ಚಿಂಚೋಳಿ ತಾಲೂಕಿನವರಾಗಿದ್ದು ಕರ್ತವ್ಯ ನಿಮಿತ್ತ ಬೀದರ್‌ ನಲ್ಲಿ ನೆಲೆಸಿದ್ದರು.. https://ainlivenews.com/lemon-juice-is-also-poisonous-if-consumed-excessively/ ಕರ್ತವ್ಯ ಮುಗಿಸಿಕೊಂಡು ಭಾಲ್ಕಿಯಿಂದ ಬೀದರ್ ನಗರಕ್ಕೆ ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತ  ಭಾಲ್ಕಿ ತಾಲೂಕಿನ ಲಖನಗಾಂವ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಾರ್ಡನ್   ಹಾಗೂ ಭಾಲ್ಕಿ ಪಟ್ಟಣದ ವಸತಿ ನಿಲಯದ ಪ್ರಭಾರಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ: ಭಾರತದ ಕುಸ್ತಿಪಟುಗಳು ತಮ್ಮ ಪ್ರಶಸ್ತಿ ವಾಪ್ಸಿ ಅಭಿಯಾನವನ್ನು ಮುಂದುವರಿಸಿದ್ದಾರೆ. ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ನವದೆಹಲಿಯ ಕರ್ತವ್ಯ ಪಥದ ಮಾರ್ಗದಲ್ಲೇ ಖೇಲ್‌ ರತ್ನ, ಅರ್ಜುನ ಪ್ರಶಸ್ತಿಯನ್ನು ಬಿಟ್ಟು ಹೋಗಿದ್ದಾರೆ. ಪ್ರಧಾನಿ ಕಚೇರಿಗೆ ಹೋಗದಂತೆ ದೆಹಲಿ ಪೊಲೀಸರು ತಡೆದಿದ್ದರಿಂದ ಕುಸ್ತಿಪಟು ಹೀಗೆ ಮಾಡಿದ್ದಾರೆ ಎನ್ನಲಾಗಿದೆ. ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಪ್ರಧಾನಿಗೆ ಬಹಿರಂಗ ಪತ್ರದಲ್ಲಿ ಪ್ರಶಸ್ತಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಪ್ರಕಟಿಸಿದ್ದರು. ಇದಕ್ಕೂ ಮುಂಚೆ, ಸಾಕ್ಷಿ ಮಲಿಕ್ ಅವರು ಕುಸ್ತಿಗೆ ಕಣ್ಣೀರ ವಿದಾಯ ಹೇಳಿದ್ದರು. ಇದಾದ ಕೆಲವು ದಿನಗಳ ನಂತರ ಬಜರಂಗ್ ಪುನಿಯಾ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದರು.  https://twitter.com/BajrangPunia/status/1741073208776986961?ref_src=twsrc%5Etfw%7Ctwcamp%5Etweetembed%7Ctwterm%5E1741073208776986961%7Ctwgr%5E4a44e1b1e4aaf34af60a615a16256f4230f51296%7Ctwcon%5Es1_&ref_url=https%3A%2F%2Fpublictv.in%2Fwrestler-vinesh-phogat-leaves-khel-ratna-arjuna-award-on-kartavya-path%2F ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷರಾಗಿದ್ದಾಗ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಈ ಮೂವರು ಕುಸ್ತಿಪಟುಗಳು ಮುಂಚೂಣಿಯಲ್ಲಿದ್ದರು. ಬಿಜೆಪಿ ಸಂಸದರ ವಿರುದ್ಧ ಹಲವಾರು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಕುಸ್ತಿಪಟು ಫೋಗಟ್‌, 2020 ರಲ್ಲಿ ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನ…

Read More

ಕಚ್ಚಾ ತೈಲ ಬೆಲೆ ಏರಿಕೆ, ಇಳಿಕೆ ಆಧಾರದ ಮೇಲೆ ಪೆಟ್ರೋಲ್‌, ಡೀಸೆಲ್‌ ಬೆಲೆ ವ್ಯತ್ಯಾಸವಾಗುತ್ತದೆ. ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಏರಿಕೆ – ಇಳಿಕೆಯಾಗುತ್ತಿದೆ. ಇದೇ ರೀತಿ, ರಾಜ್ಯದಲ್ಲೂ ಬೆಂಗಳೂರು ಹೊರತುಪಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆ ನಗರಗಳಲ್ಲಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಲೇ ಇರುತ್ತದೆ.  ದೇಶದ ನಾಲ್ಕು ಮಹಾನಗರಗಳಾದ ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ ಮತ್ತು ಅವುಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು. https://ainlivenews.com/16-days-bank-holiday-in-january-2024/ ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. – ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03…

Read More

ಹಾಸನ: ಬಟ್ಟೆ ಧರಿಸುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಕಲಹ ನಡೆದಿದೆ. ಈ ವೇಳೆ ಪತಿಯೇ ಪತ್ನಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ (Arsikere) ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿ. ಜೀವನ್‌, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ ಮದುವೆ ಯಾಗಿದ್ದರು (Love Marriage). ಕಳೆದ 6 ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದಾ ಮಾಡ್ರನ್‌ ಡ್ರೆಸ್‌ ಧರಿಸುತ್ತಿದ್ದ ಜ್ಯೋತಿ ಬೋಲ್ಡ್‌ ಆಗಿ ಇರುತ್ತಿದ್ದರು. ಇದೇ ಕಾರಣಕ್ಕೆ ಪತಿ ಜೀವನ್‌ ಕೋಪಗೊಂಡಿದ್ದ, ಅನುಮಾನ ಪಟ್ಟು ಜಗಳವಾಡಿದ್ದ. https://ainlivenews.com/16-days-bank-holiday-in-january-2024/ ಶನಿವಾರ ಸಂಜೆಯು ಸಹ ಮಾಡ್ರನ್‌ ಡ್ರೆಸ್‌ ಹಾಕಿಕೊಂಡು ಜ್ಯೋತಿ ಹೊರಗೆ ಹೊರಟಿದ್ದಳು. ಆಗಲೂ ಜೀವನ್‌ ವಿರೋಧಿಸಿದ್ದ, ಕೊನೆಗೆ ಬೈಕ್‌ನಲ್ಲಿ ಡ್ರಾಪ್‌ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ ಜೀವನ್‌ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನ…

Read More

ಹಿರಿಯ ನಟಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ (Aradhanaa Ram) ನಟಿಸಿರೋ ‘ಕಾಟೇರ’ (Katera) ಸಿನಿಮಾ ಬಿಡುಗಡೆಯಾಗಿದೆ. ದರ್ಶನ್‌ಗೆ (Darshan) ಜೋಡಿಯಾಗಿ ಪ್ರಭಾ ಪಾತ್ರಕ್ಕೆ ಜೀವ ತುಂಬಿರೋ ಮಗಳ ನಟನೆ ನೋಡಿ ಮಾಲಾಶ್ರೀ ಕಣ್ಣೀರಿಟ್ಟಿದ್ದಾರೆ. ‘ಕಾಟೇರ’ ಸಿನಿಮಾವನ್ನು ಮಗಳ ಜೊತೆಯೇ ಮಾಲಾಶ್ರೀ (Malashree) ವೀಕ್ಷಿಸಿ ಸಿನಿಮಾ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತುಂಬಾ ಖುಷಿ ಆಗಿದೆ ಮಗಳ ಆ್ಯಕ್ಟಿಂಗ್ ನೋಡಿ, ಏನು ಹೇಳಬೇಕು ಗೊತ್ತಾಗುತ್ತಿಲ್ಲ. ಒಂದೇ ಸಿನಿಮಾದಲ್ಲಿ ಎಲ್ಲಾ ತರಹ ನಟಿಸಿ ತೋರಿದ್ದಾಳೆ. ತುಂಬಾ ಖುಷಿ ಆಗ್ತಿದೆ. ಅವಳಿಗೆ ಸಿನಿಮಾರಂಗದಲ್ಲಿ ಫ್ಯೂಚರ್ ಇದೆ ಎಂದು ಮಾಲಾಶ್ರೀ ಭಾವುಕರಾಗಿದ್ದಾರೆ. https://ainlivenews.com/16-days-bank-holiday-in-january-2024/ ಅಮ್ಮನ ಹೊರತಾಗಿ ಪ್ರೇಕ್ಷಕಿಯಾಗಿ ಹೇಳಬೇಕು ಅಂದರೆ ಮಗಳ ನಟನೆಗೆ ನೂರಕ್ಕೆ ನೂರು ಮಾರ್ಕ್ಸ್ ಕೊಡುತ್ತೀನಿ. ಎಲ್ಲಾ ದೃಶ್ಯಕ್ಕೂ ಜೀವ ತುಂಬಿದ್ದಾಳೆ ಆರಾಧನಾ. ಹೆಮ್ಮೆ ಆಗುತ್ತಿದೆ ಎಂದು ಮಗಳಿಗೆ ಮಾಲಾಶ್ರೀ ಮುತ್ತಿಟ್ಟಿದ್ದಾರೆ. ಅಮ್ಮಾ ಅಳೋದು ನೋಡಿ ನನಗೂ ಅಳು ಬರುತ್ತಿದೆ. ಕಾಟೇರ ಬಿಗ್ ಪ್ರಾಜೆಕ್ಟ್‌ನಲ್ಲಿ ನನಗೆ ಅವಕಾಶ ಕೊಟ್ಟಿದ್ದಕ್ಕೆ ಇಡೀ ತಂಡಕ್ಕೆ ಧನ್ಯವಾದಗಳು. ಮೊದಲ…

Read More