Author: AIN Author

ವಿಜಯಪುರ;- ಜಿಪಿಟಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ವಿಜಯಪುರ ನಗರದ ಡಿಡಿಪಿಐ ಕಚೇರಿಯ ಎದುರು ಅಭ್ಯರ್ಥಿಗಳ ಪ್ರತಿಭಟನೆ ನಡೆಸಿದರು. 2022ನೇ ಸಾಲಿನ ಜಿಪಿಟಿ ಶಿಕ್ಷಕರ ನೇಮಕಾತಿಯಲ್ಲಿ ಸಾಮನ್ಯ ವರ್ಗ, ಕೆಟಗರಿಯಲ್ಲಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅಲ್ಲದೇ, ಕೆಲವೊಂದು ಸಮಸ್ಯೆಗಳು ನಮಗೆ ತಿಳಿಸದೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೇಮಕಾತಿ ಆದೇಶ ಪ್ರತಿ ನೀಡುತ್ತಿಲ್ಲ ಎಂದು ಆರೋಪಿಸಿದರು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ತಕ್ಷಣವೇ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಡಿಡಿಪಿಐ ಮ‌ೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Read More

ಕಲಬುರ್ಗಿ;- ಬರದಿಂದ ಕಂಗೆಟ್ಟ ಕಲಬುರಗಿಯಲ್ಲಿ ಇವತ್ತು ಮಳೆಯಾಗಿದೆ. ವಿಚಿತ್ರ ಅಂದ್ರೆ ಮಟಮಟ ಮಧ್ಯಾನವೇ ಅದೂ ಬಿಸಿಲಿನಲ್ಲಿಯೇ ಮಳೆ ಬಂದಿದ್ದು ಜನರಿಗೆ ಆಶ್ಚರ್ಯವಾಗಿದೆ. ಆರಂಭದಲ್ಲಿ ಎಲ್ಲೆಡೆ ಮೋಡಕವಿದ ವಾತಾವರಣವಿತ್ತು. ಆದ್ರೆ ಮಳೆ ಕೈಕೊಟ್ಟಿದೆ.ಹೀಗಾಗಿ ಬರಲು ಸಾಧ್ಯವೇ ಇಲ್ಲ ಅಂತ ಜನ ಮಾತಾಡಿಕೊಳ್ಳುತಿದ್ರು. ಇದೇವೇಳೆ ಏಕಾಎಕಿ ಮಳೆ ಬಂದು ಧರೆ ತಂಪಾಗಿಸಿತು.. ಜಗತ್ ಬಡಾವಣೆ ರಾಘವೇಂದ್ರ ಕಾಲನಿ ಸೇರಿ ಹಲವು ಏರಿಯಾಗಳಲ್ಲಿ ವರುಣ ಚನ್ನಾಗಿಯೇ ದರ್ಶನಕೊಟ್ಟಿದ್ದಾನೆ. ಮೂಲಗಳ ಪ್ರಕಾರ ಇನ್ನೆರಡು ದಿನವೂ ಮಳೆ ಸುರಿಯುವ ಸಾಧ್ಯತೆಗಳಿದೆ ಎನ್ನಲಾಗಿದೆ..

Read More

ದಾವಣಗೆರೆ ;-ಇಬ್ಬರು ಯುವಕರ ನಡುವೆ ಕ್ಷುಲಕ‌ ಕಾರಣಕ್ಕೆ ಜಗಳವಾಗಿರುವ ಘಟನೆ ದಾವಣಗೆರೆ ನಗರದ ವಸಂತ ಚಿತ್ರಮಂದಿರದಲ್ಲಿ ಜರುಗಿದೆ. ಜಗಳದಲ್ಲಿ ಕೈಗೆ ಬಾಯಿಯಿಂದ ಯುವಕ ಕಚ್ಚಿದ್ದಾನೆ. ಲೋಕೇಶ್ ಗಾಯಗೊಂಡ ಯುವಕ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದಾರೆ. ಸಚಿನ್ ಬನ್ನಿಕಟ್ಟಿ ಎನ್ನುವರ ಜೊತೆ ಲೋಕೇಶ್ ಜಗಳವಾಡಿದ್ದ. ವಾಗ್ವಾದ ಮಾಡುತ್ತಾ ಲೋಕೇಶ್ ಮೇಲೆ ಸಚಿನ್ ಹಲ್ಲೆ ನಡೆಸಿದ್ದ. ಹಳೇ ದ್ವೇಷದ ಹಿನ್ನಲೆ ಇಬ್ಬರಿಗೂ ವಾಗ್ವಾದ ನಡೆದಿದೆ. ಜಗಳದಲ್ಲಿ ಕೈಗೆ ಬಾಯಿಯಿಂದ ಕಚ್ಚಿ ಸಚಿನ್ ಗಾಯಗೊಳಿಸಿದ್ದಾನೆ ಎನ್ನಲಾಗಿದೆ. ಬಸವನಗರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಜರುಗಿದೆ.

Read More

ಹುಬ್ಬಳ್ಳಿ: ಮತಾಂತರ ಮಾಡುವವರ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿವೆ ಯಾವ ಹಂತದಲ್ಲಿ ಎಂದರೆಊರು, ಊರು, ಮನೆ ಮನೆಗಳಲ್ಲಿ ಮತಾಂತರ ನಡೆತಾ ಇದ್ದು2-3 ದಿನಗಳಲ್ಲಿ ಎರಡು ಮೂರು ಪ್ರಕರಣ ಬೆಳಕಿಗೆ ಬಂದಿವೆ. ರಾಜ್ಯದಒಂದು ಚಿಕ್ಕಬಳ್ಳಾಪುರ ಚೌಳೂರಿನಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದ್ದು ಇನ್ನೊಂದು ಚಿತ್ರದುರ್ಗ ಜಿಲ್ಲೆಯಲ್ಲಿಯೂ ಮತಾಂತರ ಮಾಡಲಾಗಿದೆ. ಅಬ್ಬಾಸ್ ಅಂತಾ ಹೆಸರಿನಿಂದ ಮತಾಂತರ ನಡೆಸಲಾಗಿದೆ. ಚಿತ್ರದುರ್ಗದಲ್ಲಿ ಕುರುಬು ಸಮಾಜದ ಯುವಕನನ್ನ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದ್ದು, ಇದೊಂದು ಅಕ್ಷ್ಯಮ್ಯ ಅಪರಾಧ. ಮುಸ್ಲಿಂ, ಕ್ರಿಶ್ಚಿಯನ್ ಧರ್ಮವರಿಗೆ ನಾವು ವಾಸಸಲಿಕ್ಕೆ ಕೊಡಲಾಗಿದೆ ಮತಾಂತರ ಮಾಡಲು ಅಲ್ಲ. ಕಾನೂನು ಉಲ್ಲಂಘನೆ ಮಾಡಿ ಮತಾಂತರ ಮಾಡಲಾಗಿದೆ. ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಸ್ಲಿಂ, ಕ್ರಿಶ್ಚಿಯನ್ ಧರ್ಮ ದವರು ಸಂಘರ್ಷಕ್ಕೆ ಇಳಿಯುವ ಮನಸ್ಥಿತಿ ಇದೆಕಾಂಗ್ರೆಸ್ ಅಧಿಕಾರಕ್ಕೆ ಬಂದ…

Read More

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಸರಿಯಾದ ಸಮಯಕ್ಕೆ ಮಳೆ ಬಾರದ ಹಿನ್ನೆಲೆ 16,952 ಹೆಕ್ಟೇರ್ ನಷ್ಟು ಬೆಳೆ ನಾಶವಾಗಿದ್ದು, ಮಳೆಯನ್ನೇ ನೆಚ್ಚಿಕೊಂಡು ರೈತರು‌ ಸಾವಿರಾರು ರೂಪಾಯಿ ವ್ಯಯ ಮಾಡಿ ಬೆಳೆದಿದ್ದ ಬೆಳೆ ನಾಶವಾಗಿದೆ. ಅಲ್ಪ ಮಳೆಯಿಂದಾಗಿ ರಾಗಿ, ಜೊಳ ಸೇರಿದಂತೆ ಇತರೆ ಬೆಳೆಗಳಿಗೆ ಕಳೆ ಬಂದಿತ್ತು, ಆದರೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸಂಪೂರ್ಣ ಬೆಳೆ ನೆಲಕಚ್ಚಿ ರೈತರನ್ನ ಸಂಕಷ್ಟದ ದವಡೆಗೆ ನೂಕಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು. ಇಂದು ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಜೊತೆ ದೊಡ್ಡಬಳ್ಳಾಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಬರ ವೀಕ್ಷಣೆಯನ್ನ ಮಾಡಿ ಮಾತನಾಡಿದ ಅವರು, ಬರ ಘೋಷಣೆ ಮಾಡಿ ಬರ ಪರಿಹಾರವೆಂದು ಇಡೀ ರಾಜ್ಯಕ್ಕೆ 342 ಕೋಟಿ ರೂ.‌ ರಾಜ್ಯ ಸರ್ಕಾರದಿಂದ ಬಿಡುಗಡೆ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ‌ ಕೇವಲ 1ಕೋಟಿ ಮಾತ್ರ ಬಿಡುಗಡೆ ಆಗಿದೆ. ಈ ಪರಿಹಾರ ಯಾವುದಕ್ಕೂ ಸಾಗಾವುದಿಲ್ಲ, 15-20ಕೋಟಿ ಬೇಕಾಗಿದೆ ಎಂದರು. ಬರ ಘೋಷಣೆ ಮಾಡುವುದಕ್ಕಿಂತ ಮೊದಲು…

Read More

ದೆಹಲಿ;- ಕರ್ನಾಟಕ ಜಗಳಕ್ಕೆ ಮಾದರಿ ಎಂದು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದ ಚುನಾವಣಾ ಪ್ರಚಾರದ ವೇಳೆ ಹೇಳಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿಗಳು ನಮ್ಮನ್ನು ನೆನೆಸಿಕೊಳ್ಳುತ್ತಿದ್ದಾರಲ್ಲಾ ಅಷ್ಟೇ ಸಾಕು. ನಮ್ಮ ಗ್ಯಾರಂಟಿ, ಕೆಲಸ, ಒಗ್ಗಟ್ಟು ಅವರ ನಿದ್ರೆ ಕೆಡಿಸಿದೆ. ಇದು ಸಂತೋಷದ ವಿಚಾರ, ಅವರಿಗೆ ಅಭಿನಂದನೆಗಳು. ಅದಕ್ಕೆ ಮುಖ್ಯಮಂತ್ರಿ ಏನು ಉತ್ತರ ಕೊಡಬೇಕೋ ಕೊಟ್ಟಿದ್ದಾರೆ ಎಂದು ಹೇಳಿದರು. ಇನ್ನೂ ಬಿಜೆಪಿ ಅವರ ಪಕ್ಷದ, ನಾಯಕತ್ವದ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಅದನ್ನು ಹೊರಗೆ ಹೇಳಿಕೊಳ್ಳಲು ಆಗದೆ, ಇಂತಹ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಯಾರೋ ಬಂದಂತೆ, ಹೋದಂತೆ ಮಾಡಿ ಹೇಳಿಕೆ ನೀಡುತ್ತಿದ್ದಾರೆ. ಕ್ಷೇತ್ರದ ಕೆಲಸಗಳಿಗೆ, ಕುಶಲೋಪರಿ ವಿಚಾರಿಸಲು ಅನೇಕರು ಬಂದಿರುತ್ತಾರೆ. ಆದರೆ ಮನೆಯಿಂದ ಹೊರಗೆ ಬಂದು ರಾಜಕೀಯ ವಿಚಾರಕ್ಕೆ ಬಂದಿದ್ದೇ ಎಂದು ಮಾಧ್ಯಮಗಳ ಮುಂದೆ ಹೇಳುತ್ತಾರೆ. ಚಲಾವಣೆಯಲ್ಲಿ ಇರಬೇಕಾದ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರು.

Read More

ರಾಯಬಾಗ;- ದಲಿತ ಕೆರಿಯನ್ನ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕಡೆಗಣಿಸುತ್ತಿರುವ ಎಂದು ಆರೋಪ ಕೇಳಿ ಬಂದಿದೆ ರಾಯಬಾಗ ಪಟ್ಟಣದ ದಲಿತ ಕೇರಿಯನ್ನ ಕಡೆಗಣನೆ ಮಾಡುತ್ತಿರುವುದು ಜನರು ಅಧಿಕಾರಿಗಳ ಮೇಲೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು ಕಾಲೋನಿ ತುಂಬಾ ಗಟಾರು ಸ್ವಚ್ಛತೆ ಇಲ್ಲದೆ ಮಾರಕವಾದ ರೋಗಗಳು ಹೆಚ್ಚುತ್ತಿವೆ ಕೆಟ್ಟ ದುರ್ವಾಸನೆ ಬೀರುತ್ತಿದೆ ಅಲ್ಲೇ ಸರ್ಕಾರಿ ಶಾಲೆ ಇದ್ದು ಸ್ವಚ್ಛತೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿರುವುದು ಸ್ಥಳೀಯ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Read More

ಬೆಂಗಳೂರು;- ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರಿಗೆ ಬೆಂಗಳೂರಿನ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅರ್ಜಿ ಆಲಿಸಿದ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಮುರುಘಾ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರ ಪೀಠ ಈ ಆದೇಶ ನೀಡಿದೆ. ವಿಸ್ತೃತವಾದ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಆದೇಶದಿಂದಾಗಿ ಕಳೆದ ಒಂದು ವರ್ಷದಿಂದ ಜೈಲಿನಲ್ಲಿರುವ ಶ್ರೀಗಳಿಗೆ ಕೊಂಚ ರಿಲೀಫ್​ ಸಿಕ್ಕಂತಾಗಿದೆ. ಅರ್ಜಿ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ ದೂರು ಸಲ್ಲಿಸಲು ಸಂತ್ರಸ್ತರಿಗೆ ನೆರವಾಗಿದ್ದ ಒಡನಾಡಿ ಸೇವಾ ಸಂಸ್ಥೆಯ ಪರವಾಗಿ ವಕೀಲ ಡಿ.ಸಿ. ಶ್ರೀನಿವಾಸ್‌, ಆರೋಪಿ ಶ್ರೀಗಳು ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಅವರಿಗೆ ಜಾಮೀನು ನೀಡಿದರೆ ಪ್ರಕರಣದಲ್ಲಿನ ಸಂತ್ರಸ್ತರಾದ ಬಡ ಮಕ್ಕಳಿಗೆ ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಶರಣರು ತಮ್ಮನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂಬುದಾಗಿ ಸಂತ್ರಸ್ತರು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಮುಂದೆ ಸ್ವಯಂಕೃತ ಹೇಳಿಕೆ ದಾಖಲಿಸಿದ್ದಾರೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಬೇಕು…

Read More

ಬೆಂಗಳೂರು;- ನನ್ನ ವಿರುದ್ಧ ಕೇಳಿಬಂದ ಆರೋಪ ಸಾಬೀತಾದರೆ ಹುದ್ದೆ ತೊರೆಯುತ್ತೇನೆ ಎಂದು ಸಿ ಎಸ್ ಷಡಕ್ಷರಿ ಹೇಳಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ತಮ್ಮ ವರ್ಗಾವಣೆ ಕುರಿತಂತೆ ಮಾತನಾಡಿದ ಅವರು, ನನ್ನ ವಿರುದ್ಧ ಕೇಳಿಬಂದಿರುವ ಆರೋಪಗಳ ಅಧಿಕೃತ ದಾಖಲಾತಿ ತೋರಿಸಲಿ. ಒಂದೊಮ್ಮೆ ತಪ್ಪು ಎಸಗಿರುವುದು ಸಾಬೀತಾದರೆ ಹುದ್ದೆಯನ್ನೇ ತೊರೆಯುತ್ತೇನೆ ಎಂದು ಸವಾಲು ಕೂಡಾ ಹಾಕಿದ್ದಾರೆ. ಈ ವರ್ಗಾವಣೆ ಬಗ್ಗೆ ಮುಖ್ಯಮಂತ್ರಿ ಅವರನ್ನ ಭೇಟಿಯಾಗಿ ಮಾತನಾಡುತ್ತೇನೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಕ್ಷರಿ ಅವರನ್ನು ಕೋಲಾರ ಜಿಲ್ಲೆಯಲ್ಲಿ ಖಾಲಿ ಇದ್ದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆಗೊಳಿಸಿ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ (ಆಡಳಿತ ಮತ್ತು ಮುಂಗಡಗಳು ವಿಭಾಗ) ಆದೇಶಿಸಿದ್ದರು. ಸರ್ಕಾರದ ಈ ಆದೇಶ ಹೊರ ಬೀಳುತ್ತಿದ್ದಂತೆ ಬೆನ್ನಲ್ಲೇ ಪರ-ವಿರೋಧ ಬಗ್ಗೆ ಚರ್ಚೆಯಾಗುತ್ತಿದೆ.‌ ಈ ಬಗ್ಗೆ ಈಟಿವಿ ಭಾರತದೊಂದಿಗೆ…

Read More

ಹಾಸನ: ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ವೈದ್ಯರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಹಾಸನ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. https://ainlivenews.com/knee-pain-treatment-joint-pain-treatment/ ಜಿಲ್ಲೆಯಲ್ಲಿ ವೈದ್ಯರ ಹುದ್ದೆ ಖಾಲಿ ಕುರಿತು ಪ್ರಶ್ನೆಗೆ ಉತ್ತರಿಸದ ಸಿಎಂ ‘ ರಾಜ್ಯದ ಎಲ್ಲ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆ ಭರ್ತಿಗೆ ಮಾಡಿಕೊಳ್ಳುವುದಾಗಿ ಹೇಳಿದರು. ಜೊತೆಗೆ ಬಹಳ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಇರುವುದಿಲ್ಲ, ಯಾವುದೇ ಅಧಿಕಾರಿಗಳು ಕೂಡ ತಮ್ಮ ಕೇಂದ್ರ ಸ್ಥಾನದಲ್ಲಿ ಇರಬೇಕು ಎಂದರು.

Read More