Author: AIN Author

ತನ್ನ ಗ್ರಾಹಕರಿಗೆ ಭಾರತೀಯ ಅಂಚೆ ಇಲಾಖೆ ಹೊಸ ಯೋಜನೆ ಪರಿಚಯಿಸುವ ಮೂಲಕ ಸಿಹಿ ಸುದ್ದಿ ನೀಡಿದೆ. ಹೌದು, ಕೇವಲ 1500 ರೂಗಳನ್ನು ಠೇವಣಿ ಮಾಡುವ ಮೂಲಕ 35 ಲಕ್ಷ ರೂಪಾಯಿ ವರೆಗೆ ಗಳಿಸುವ ಅವಕಾಶ ಈ ಯೋಜನೆಯಲ್ಲಿದೆ..ಈ ಯೋಜನೆಯಡಿ ಯಾರು ಹೂಡಿಕೆ ಮಾಡಬೇಕು ಎಂಬ ಮಾಹಿತಿ ಇಲ್ಲಿದೆ. ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ನೀವು ಪೋಸ್ಟ್ ಆಫೀಸ್ ಜಾರಿಗೊಳಿಸಿರುವ ಈ ಹೊಸ ಹೂಡಿಕೆ ಯೋಜನೆಯ ಲಾಭವನ್ನು ಬಳಸಿಕೊಳ್ಳಬಹುದು. ತಿಂಗಳಿಗೆ ಕೇವಲ 1500 ರೂಪಾಯಿಗಳ ಹೂಡಿಕೆಯಲ್ಲಿ ನೀವು 35 ಲಕ್ಷ ರೂಪಾಯಿಗಳನ್ನು ಗಳಿಸಬಹುದಾಗಿದೆ. ಹಾಗಾದ್ರೆ ಈ ಯೋಜನೆಯಿಂದ ಸಿಗುವ ಲಾಭವೇನು ಎಂದು ತಿಳಿಯುವುದಾದ್ರೆ. ಭಾರತೀಯ ಅಂಚೆ ಹಲವು ರೀತಿಯ ಹೂಡಿಕೆ ಅವಕಾಶಗಳನ್ನು ನೀಡುತ್ತದೆ. ಹೂಡಿಕೆದಾರರು ಕೇವಲ 1500 ರೂಗಳನ್ನು ಠೇವಣಿ ಮಾಡಬಹುದು ಮತ್ತು ರೂ 35 ಲಕ್ಷದವರೆಗೆ ಗಳಿಸಬಹುದು. ಈ ಯೋಜನೆಯನ್ನು ‘ಗ್ರಾಮ ಸುರಕ್ಷಾ ಯೋಜನೆ’ ಎಂದು ಕರೆಯಲಾಗುತ್ತದೆ. ಒಂದೊಮ್ಮೆ ನೀವು 19 ವರ್ಷ ವಯಸ್ಸಿನವರಾಗಿದ್ದರೆ ಹೆಚ್ಚು ಲಾಭವನ್ನು ತರಲಿದೆ. 19 ರಿಂದ 55…

Read More

ಬೆಂಗಳೂರು, ಡಿಸೆಂಬರ್ 30: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. https://ainlivenews.com/this-time-new-year-celebration-channels-in-pakistan-do-you-know-why/ ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು. ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಅಂಬೇಡ್ಕರ್ ಅವರು ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದಿದ್ದರು. ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವ ನಿಲ್ಲಬೇಕು ಎಂದು ಪ್ರತಿಪಾದಿಸಿದ್ದರು. ಹಿಂದುಳಿದವರಿಗೆ ಆರ್ಥಿಕ , ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ ಎಂದರು. ಹೋರಾಟಗಳು…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ಮೀನಾಮೇಷ ಎಣಿಸುತ್ತಿದೆ. ಆದರೆ ʼರಾಜಕೀಯ ಗಂಜಿ ಕೇಂದ್ರʼಗಳನ್ನು ಯಥೇಚ್ಚವಾಗಿ ಸೃಷ್ಟಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬರದ ನಡುವೆಯೂ ಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ಕರುಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ರಮವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಈ ಸರಕಾರ ರೈತರನ್ನು ಬಹಳ ಕೇವಲವಾಗಿ ನಡೆಸಿಕೊಳ್ಳುತ್ತಿದೆ. ಆದರೆ, ಅಧಿಕಾರನ್ನು ಭರ್ಜರಿಯಾಗಿ ಅನುಭವಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಸಲಹೆಗಾರರನ್ನು ನೇಮಕ ಮಾಡಿಕೊಂಡಿರುವ ಸಿಎಂಗೆ ಹ್ಯಾಟ್ಸಾಫ್ ಎಂದ ಹೆಚ್ಡಿಕೆ ಅವರು; ಸಿಎಂ ಅವರು ಬಿ.ಆರ್.ಪಾಟೀಲ್ ಅವರನ್ನು ಸಲಹೆಗಾರರನ್ನಾಗಿ ನೆಮಕ ಮಾಡಿಕೊಂಡಿದ್ದಾರೆ. ಬಸವರಾಜ ರಾಯರೆಡ್ಡಿ ಅವರಿಗೆ ಆರ್ಥಿಕ ಸಲಹೆಗಾರರು ಎಂದು ಮಾಡಿ ಸಂಪುಟ ದರ್ಜೆ ನೀಡಿದ್ದಾರೆ. https://ainlivenews.com/this-time-new-year-celebration-channels-in-pakistan-do-you-know-why/ ಹಾಗೆಯೇ, ರಾಜ್ಯದ 3ನೇ ಆಡಳಿತ ಸುಧಾರಣಾ ಆಯೋಗಕ್ಕೆ ಆರ್.ವಿ.ದೇಶಪಾಂಡೆ ಅವರಿಗೆ…

Read More

ಬೆಂಗಳೂರು: ಇಂಗ್ಲಿಷ್ ನಾಮಫಲಕಗಳ ವಿರುದ್ಧ ಕರವೇ ಕಾರ್ಯಕರ್ತರ ಆಕ್ರೋಶ ಮುಂದುವರಿದಿದೆ.  ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಗೋಪಾಲನ್ ಆರ್ಕೇಡ್ ಮಾಲ್  ಗೆ ಆಟೋದಲ್ಲಿ ಬಂದ ಕುಮಾರ್ ಎಂಬ ಕರವೇ ಕಾರ್ಯಕರ್ತ ಇಂಗ್ಲೀಷ್ ನಲ್ಲಿ ಹಾಕಿದ್ದ  ಫ್ಲೆಕ್ಸ್ ಗಳನ್ನು ಹರಿದು  ಆಕ್ರೋಶ ವ್ಯಕ್ತಪಡಿಸಿದ್ದಾರೆ. https://ainlivenews.com/this-time-new-year-celebration-channels-in-pakistan-do-you-know-why/ ಅಲ್ಲದೆ, ನಾರಾಯಣ ಗೌಡರು ಅರೆಸ್ಟ್ ಆಗಿರಬಹುದು,ಆದರ ಕಾರ್ಯಕರ್ತರು ನಾವಿದ್ದೀವಿ. ಇಂಗ್ಲಿಷ್ ನಾಮಫಲಕ ಚೇಂಜ್ ಮಾಡದಿದ್ರೆ ನಿಮಗೆಲ್ಲಾ ಇದೆ ಅಂತ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.

Read More

ಬೆಂಗಳೂರು: “ಬೆಂಗಳೂರಿನಲ್ಲಿ ಮುಂದಿನ ಜನವರಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಸರ್ಕಾರ ನಿರ್ಧರಿಸಿದೆ. ನಂತರದ ದಿನಗಳಲ್ಲಿ ಪ್ರತಿ ಜಿಲ್ಲಾ ಮತ್ತು ವಲಯವಾರು ಉದ್ಯೋಗ ಮೇಳ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಉದ್ಯೋಗ ಮೇಳ ಕುರಿತ ಸಭೆಯ ನಂತರ ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, “ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ, ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ಉದ್ಯೋಗ ಸೃಷ್ಟಿಯ ಬಗ್ಗೆ ವಿಸ್ತೃತ ಚರ್ಚೆಯನ್ನು ಸಭೆಯಲ್ಲಿ ನಡೆಸಲಾಯಿತು. https://ainlivenews.com/this-time-new-year-celebration-channels-in-pakistan-do-you-know-why/ ಕರ್ನಾಟಕ ಮತ್ತು ಹೊರ ರಾಜ್ಯಗಳಲ್ಲಿ ನಮ್ಮ ಕನ್ನಡಿಗರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗ ದೊರಕುವಂತಾಗಬೇಕು. ಐಟಿ- ಬಿಟಿ, ಹೋಟೆಲ್, ಉತ್ಪಾದನಾ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ಯುವಕ- ಯುವತಿಯರಿಗೆ ಹೆಚ್ಚಿನ ಅವಕಾಶ ಸಿಗುವಂತಾಗಬೇಕು. ಆದ ಕಾರಣ ಕೌಶಲ್ಯ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎನ್ನುವ ಸಲಹೆ ಸಭೆಯಲ್ಲಿ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದ ರೂಪುರೇಷೆಗಳನ್ನು ಶೀಘ್ರದಲ್ಲೇ…

Read More

ಬಳ್ಳಾರಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೇ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ ಎಂದು ಖರ್ಗೆ ಪರ ಸಚಿವ ನಾಗೇಂದ್ರ ಬ್ಯಾಟಿಂಗ್ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಮಾಡೋದು, ದಲಿತ ಪ್ರಧಾನಿ ಮಾಡೋದು ಇಂಡಿಯಾ ಒಕ್ಕೂಟದ ಉದ್ದೇಶ. ಹೀಗಾಗಿ ಒಕ್ಕೂಟದಿಂದ ಖರ್ಗೆ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಪ್ರಸ್ತಾಪ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದಾರೆ. ಅದು ಅವರ ಅಭಿಪ್ರಾಯ. ಸ್ವಇಚ್ಛೆಯಿಂದ ಸಿದ್ದರಾಮಯ್ಯ ಅವರು ಹಾಗೆ ಹೇಳಿರಬಹುದು. ಅದು ಅವರ ಇಚ್ಛೆ ಎಂದರು. ನನಗೂ ಖರ್ಗೆ ಪ್ರಧಾನಿ ಆಗಬೇಕೆಂದಿದೆ. ಅದರ ಜೊತೆಗೆ ಯುವಕರ ಕಣ್ಮಣಿಯಾಗಿರೋ ರಾಹುಲ್ ಗಾಂಧಿ ಕೂಡಾ ಪ್ರಧಾನಿಯಾಗಬೇಕು ಎನ್ನುವುದು ಇದೆ. ಭಾರತ ಜೋಡೋ ಯಾತ್ರೆಯಲ್ಲಿ ಏಳು ಸಾವಿರ ಕಿ.ಮೀ ಪಾದಯಾತ್ರೆ ಮಾಡಿ ಜನಮನ ಗೆದ್ದಿದ್ದಾರೆ. ಇಂಡಿಯಾ ಒಕ್ಕೂಟದ ವ್ಯವಸ್ಥೆಯಲ್ಲಿ ಬೇರೆ ಬೇರೆ ಅಂಗಪಕ್ಷದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಬೇಕು. ಮಮತಾ ಬ್ಯಾನರ್ಜಿ, ಕೇಜ್ರಿವಾಲ್ ಕೂಡ ಖರ್ಗೆಯನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು. 

Read More

ಹುಬ್ಬಳ್ಳಿ;ಕರ್ನಾಟಕ ವಿಧಾನ ಸಭೆಯ ಸದಸ್ಯರನ್ನು ಶಾಸಕರೆಂದು ಸಂಭೋದಿಸುವ ರೀತಿಯಲ್ಲಿ ವಿಧಾನ ಪರಿಷತ್ತಿನ ಸದಸ್ಯರನ್ನು ಸಹ ಶಾಸಕರೆಂದು ಸಂಭೋದಿಸುವುದರ ಜೊತೆಗೆ ಸರ್ಕಾರದ ಆಮಂತ್ರಣ ಪತ್ರಿಕೆಗಳಲ್ಲಿ ಇದೇ ರೀತಿ ಉಲ್ಲೇಖಿಸಿ ಶಿಷ್ಠಾಚಾರ ನಿಯಮವನ್ನು ಪಾಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವೊಂದನ್ನು ಬರೆದಿರುವ ಸಭಾಪತಿ ಬಸವರಾಜ ಹೊರಟ್ಟಿ, ಕರ್ನಾಟಕ ರಾಜ್ಯದ ವಿಧಾನ ಮಂಡಲದಲ್ಲಿ ವಿಧಾನ ಪರಿಷತ್ತು ಹಾಗೂ ವಿಧಾನ ಸಭೆ ಎಂದು ಎರಡು ಪ್ರತ್ಯೇಕ ಶಾಸನ ಸಭೆಗಳಿವೆ. ಚಿಂತಕರ ಚಾವಡಿ, ಪ್ರಾಜ್ಞರ ಮನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಧಾನ ಮಂಡಲದ ಮೇಲ್ಮನೆಯಾಗಿರುವ ವಿಧಾನ ಪರಿಷತ್ತಿನಲ್ಲಿ ೭೫ ಜನ ಸದಸ್ಯರಿದ್ದು, ಪದವೀಧರರು, ಶಿಕ್ಷಕರು, ಸ್ಥಳೀಯ ಸಂಸ್ಥೆಗಳಿAದ ಚುನಾಯಿತರಾದವರು, ವಿಧಾನ ಸಭೆಯಿಂದ ನಾಮ ನಿರ್ದೇಶಿತರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರುಗಳು ಸದರಿ…

Read More

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಉದ್ಭವ ಮೂರ್ತಿ ಶ್ರೀ ಮಾರುತೇಶ್ವರನ ಕಾರ್ತಿಕೋತ್ಸ ನಿಮಿತ್ಯ ರಾತ್ರಿಯಿಂದಲೇ ಭಕ್ತ ಸಾಗರ ಹರಿದು ಬರುತ್ತಿದೆ. ಕಾರ್ತಿಕೋತ್ಸವ ನಿಮಿತ್ಯ ಇಂದು ಮುಂಜಾನೆ ಶ್ರೀ ಮಾರುತೇಶ್ವರನಿಗೆ ರುದ್ರಾಭಿಷೇಕದ ವಿಶೇಷ ಪೂಜೆ ನೆರೆವೆರಿತು. ಭಕ್ತರು ರಾತ್ರಿ 1 ಗಂಟೆಯಿಂದಲೆ ದೀಡ ನಮಸ್ಕಾರ ಹಾಕುವ ಮೂಲಕ ಶ್ರೀ ಮಾರುತೇಶ್ವರನಿಗೆ ಹರಕೆ ಸಲ್ಲಿಸುತ್ತಿರುವುದು ವಿಶೇಷ..ಬಂಡಿಗಣಿಯ ಮಠದ ವತಿಯಿಂದ ದೇವಸ್ಥಾಕ್ಕೆ ಬರುವ ಎಲ್ಲ ಭಕ್ತಾದಿಗಳಿಗೆ ಶ್ರೀ ಚಕ್ರವರ್ತಿ ಅನ್ನ ದಾನೇಶ್ವರ ಸ್ವಾಮೀಜಿಯವರು ಅನ್ನ ಪ್ರಸಾದದ ವ್ಯವಸ್ಥೆ ಮಾಡಿಸಿದ್ದಾರೆ. ಇಂದು ಸಾಂಯಕಾಲ ದೀಪೋತ್ಸವ ಹಾಗೂ ಶ್ರೀ ಕೃಷ್ಣ ಪಾರಿಜಾತ ಬಯಲಾಟ ಜರುಗಲಿದೆ ಪ್ರಕಾಶ ಕುಂಬಾರ ಬಾಗಲಕೋಟೆ

Read More

ಕಲಘಟಗಿ: ತಾಲೂಕಿನ ತಾವರಗೇರಿ ಗ್ರಾಮದಲ್ಲಿ ಶ್ರೀ ಸಿದ್ಧಾರೂಢ ಸತ್ಸಂಗ ಬಳಗ ಕಲಘಟಗಿ, ತಾವರಗೇರಿ ಹಾಗೂ ಯಲವಧಾಳ ವತಿಯಿಂದ ಬೀದರನ ಶ್ರೀ ಚಿದಂಬರಾಶ್ರಮ ಸಿದ್ಧಾರೂಢ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ೮೦ನೇ ಜಯಂತ್ಯುತ್ಸವ ಅದ್ದೂರಿಯಾಗಿ ನಡೆಯಿತು. ವಿವಿಧ ಗ್ರಾಮಗಳ ಹದಿನೈದು ಕುಟುಂಬಗಳ ಸದಸ್ಯರು ತುಲಾಭಾರ ಸೇವೆ ಸಲ್ಲಿಸಿದರು. ಬೀದರನ ಶ್ರೀ ಚಿದಂಬರಾಶ್ರಮ ಸಿದ್ಧಾರೂಢ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಮೆರವಣಿಗೆ, ನವದಾನ ಅರ್ಪಣೆ, ತೊಟ್ಟಿಲೋತ್ಸವ, ಉಡಿ ತುಂಬುವುದು ಸೇರಿದಂತೆ ಸಂಗೀತ ಕಾರ್ಯಕ್ರಮಗಳು ನಡೆದವು. ನಂತರ ಬೀದರನ ಶ್ರೀ ಚಿದಂಬರಾಶ್ರಮ ಸಿದ್ಧಾರೂಢ ಮಠದ ಡಾ.ಶಿವಕುಮಾರ ಸ್ವಾಮೀಜಿ ಆಶೀರ್ವಚನ ನೀಡಿದರು. ಕಲಬುರಗಿ ಶ್ರೀ ಸಿದ್ಧಾರೂಢ ಆಶ್ರಮದ ಮಾತೋಶ್ರೀ ಲಕ್ಷ್ಮೀ ತಾಯಿ, ತಾವರಗೇರಿ ಶ್ರೀ ಸಿದ್ಧಾರೂಢ ಮಠದ ನಿರ್ಗುಣಾನಂದ ಸ್ವಾಮೀಜಿ, ಬೀದರ ಶ್ರೀ ಸಿದ್ಧಾರೂಢ ಆಶ್ರಮದ ಮಾತೋಶ್ರೀ ಸಂಗೀತಾ ತಾಯಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮಕ್ಕೆ ಕಲಘಟಗಿ, ತಾವರಗೇರಿ, ಯಲವಧಾಳ, ಅರಳಿಹೊಂಡ, ಆಲದಕಟ್ಟಿ, ಮುಕ್ಕಲ್ಲ, ಬಮ್ಮಿಗಟ್ಟಿ, ನೆಲ್ಲಿಹರವಿ, ಸೊಮನಕೊಪ್ಪ, ಮಡಕಿಹೊನ್ನಳ್ಳಿ, ಬೇಗೂರ, ಧೂಳಿಕೊಪ್ಪ, ಹಿರೇಹೊನ್ನಳ್ಳಿ, ಬಗಡಗೇರಿ, ಕಾಮಧೇನು, ಹುಲ್ಲಂಬಿ, ಕುರವಿನಕೊಪ್ಪ, ಉಗ್ನಿಕೇರಿ,…

Read More

ಗದಗ: ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಾಯಿತು. ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಾಗಿದ್ದು, ಸಭೆಯಲ್ಲಿ ಬೆಳೆ ವಿಮೆ ವಿಚಾರವಾಗಿ ಚರ್ಚೆ ನಡೆಸಲಾಯಿತು. ಬೆಳೆ ವಿಮೆ ಪಾವತಿಸಿದ ಎಲ್ಲ ಅರ್ಹ ರೈತರಿಗೂ ಬೆಳೆ ವಿಮೆ ಯೋಜನೆ ಪರಿಹಾರ ದೊರಕಿಸಲು ಕ್ರಮಕ್ಕೆ ಸೂಚನೆ ನೀಡಿದರು. ಇನ್ನೂ ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ ಸಿ ಪಾಟೀಲ್, ಶಾಸಕ ಜಿ ಎಸ್ ಪಾಟೀಲ್, ಚಂದ್ರು ಲಮಾಣಿ, ವಿ. ಪ. ಸದಸ್ಯ ಎಸ್ ವಿ ಸಂಕನೂರ  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ ಸಿಖಾ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಎಸ್ಪಿ ಬಿ ಎಸ್ ನೇಮಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

Read More