ಬಳ್ಳಾರಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೇ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ ಎಂದು ಖರ್ಗೆ ಪರ ಸಚಿವ ನಾಗೇಂದ್ರ ಬ್ಯಾಟಿಂಗ್ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಮಾಡೋದು, ದಲಿತ ಪ್ರಧಾನಿ ಮಾಡೋದು ಇಂಡಿಯಾ ಒಕ್ಕೂಟದ ಉದ್ದೇಶ. ಹೀಗಾಗಿ ಒಕ್ಕೂಟದಿಂದ ಖರ್ಗೆ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಪ್ರಸ್ತಾಪ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದಾರೆ. ಅದು ಅವರ ಅಭಿಪ್ರಾಯ. ಸ್ವಇಚ್ಛೆಯಿಂದ ಸಿದ್ದರಾಮಯ್ಯ ಅವರು ಹಾಗೆ ಹೇಳಿರಬಹುದು. ಅದು ಅವರ ಇಚ್ಛೆ ಎಂದರು. ನನಗೂ ಖರ್ಗೆ ಪ್ರಧಾನಿ ಆಗಬೇಕೆಂದಿದೆ. ಅದರ ಜೊತೆಗೆ ಯುವಕರ ಕಣ್ಮಣಿಯಾಗಿರೋ ರಾಹುಲ್ ಗಾಂಧಿ ಕೂಡಾ ಪ್ರಧಾನಿಯಾಗಬೇಕು ಎನ್ನುವುದು ಇದೆ. ಭಾರತ ಜೋಡೋ ಯಾತ್ರೆಯಲ್ಲಿ ಏಳು ಸಾವಿರ ಕಿ.ಮೀ ಪಾದಯಾತ್ರೆ ಮಾಡಿ ಜನಮನ ಗೆದ್ದಿದ್ದಾರೆ. ಇಂಡಿಯಾ ಒಕ್ಕೂಟದ ವ್ಯವಸ್ಥೆಯಲ್ಲಿ ಬೇರೆ ಬೇರೆ ಅಂಗಪಕ್ಷದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಬೇಕು. ಮಮತಾ ಬ್ಯಾನರ್ಜಿ, ಕೇಜ್ರಿವಾಲ್ ಕೂಡ ಖರ್ಗೆಯನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು.
Author: AIN Author
ಹುಬ್ಬಳ್ಳಿ;ಕರ್ನಾಟಕ ವಿಧಾನ ಸಭೆಯ ಸದಸ್ಯರನ್ನು ಶಾಸಕರೆಂದು ಸಂಭೋದಿಸುವ ರೀತಿಯಲ್ಲಿ ವಿಧಾನ ಪರಿಷತ್ತಿನ ಸದಸ್ಯರನ್ನು ಸಹ ಶಾಸಕರೆಂದು ಸಂಭೋದಿಸುವುದರ ಜೊತೆಗೆ ಸರ್ಕಾರದ ಆಮಂತ್ರಣ ಪತ್ರಿಕೆಗಳಲ್ಲಿ ಇದೇ ರೀತಿ ಉಲ್ಲೇಖಿಸಿ ಶಿಷ್ಠಾಚಾರ ನಿಯಮವನ್ನು ಪಾಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವೊಂದನ್ನು ಬರೆದಿರುವ ಸಭಾಪತಿ ಬಸವರಾಜ ಹೊರಟ್ಟಿ, ಕರ್ನಾಟಕ ರಾಜ್ಯದ ವಿಧಾನ ಮಂಡಲದಲ್ಲಿ ವಿಧಾನ ಪರಿಷತ್ತು ಹಾಗೂ ವಿಧಾನ ಸಭೆ ಎಂದು ಎರಡು ಪ್ರತ್ಯೇಕ ಶಾಸನ ಸಭೆಗಳಿವೆ. ಚಿಂತಕರ ಚಾವಡಿ, ಪ್ರಾಜ್ಞರ ಮನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಧಾನ ಮಂಡಲದ ಮೇಲ್ಮನೆಯಾಗಿರುವ ವಿಧಾನ ಪರಿಷತ್ತಿನಲ್ಲಿ ೭೫ ಜನ ಸದಸ್ಯರಿದ್ದು, ಪದವೀಧರರು, ಶಿಕ್ಷಕರು, ಸ್ಥಳೀಯ ಸಂಸ್ಥೆಗಳಿAದ ಚುನಾಯಿತರಾದವರು, ವಿಧಾನ ಸಭೆಯಿಂದ ನಾಮ ನಿರ್ದೇಶಿತರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರುಗಳು ಸದರಿ…
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಉದ್ಭವ ಮೂರ್ತಿ ಶ್ರೀ ಮಾರುತೇಶ್ವರನ ಕಾರ್ತಿಕೋತ್ಸ ನಿಮಿತ್ಯ ರಾತ್ರಿಯಿಂದಲೇ ಭಕ್ತ ಸಾಗರ ಹರಿದು ಬರುತ್ತಿದೆ. ಕಾರ್ತಿಕೋತ್ಸವ ನಿಮಿತ್ಯ ಇಂದು ಮುಂಜಾನೆ ಶ್ರೀ ಮಾರುತೇಶ್ವರನಿಗೆ ರುದ್ರಾಭಿಷೇಕದ ವಿಶೇಷ ಪೂಜೆ ನೆರೆವೆರಿತು. ಭಕ್ತರು ರಾತ್ರಿ 1 ಗಂಟೆಯಿಂದಲೆ ದೀಡ ನಮಸ್ಕಾರ ಹಾಕುವ ಮೂಲಕ ಶ್ರೀ ಮಾರುತೇಶ್ವರನಿಗೆ ಹರಕೆ ಸಲ್ಲಿಸುತ್ತಿರುವುದು ವಿಶೇಷ..ಬಂಡಿಗಣಿಯ ಮಠದ ವತಿಯಿಂದ ದೇವಸ್ಥಾಕ್ಕೆ ಬರುವ ಎಲ್ಲ ಭಕ್ತಾದಿಗಳಿಗೆ ಶ್ರೀ ಚಕ್ರವರ್ತಿ ಅನ್ನ ದಾನೇಶ್ವರ ಸ್ವಾಮೀಜಿಯವರು ಅನ್ನ ಪ್ರಸಾದದ ವ್ಯವಸ್ಥೆ ಮಾಡಿಸಿದ್ದಾರೆ. ಇಂದು ಸಾಂಯಕಾಲ ದೀಪೋತ್ಸವ ಹಾಗೂ ಶ್ರೀ ಕೃಷ್ಣ ಪಾರಿಜಾತ ಬಯಲಾಟ ಜರುಗಲಿದೆ ಪ್ರಕಾಶ ಕುಂಬಾರ ಬಾಗಲಕೋಟೆ
ಕಲಘಟಗಿ: ತಾಲೂಕಿನ ತಾವರಗೇರಿ ಗ್ರಾಮದಲ್ಲಿ ಶ್ರೀ ಸಿದ್ಧಾರೂಢ ಸತ್ಸಂಗ ಬಳಗ ಕಲಘಟಗಿ, ತಾವರಗೇರಿ ಹಾಗೂ ಯಲವಧಾಳ ವತಿಯಿಂದ ಬೀದರನ ಶ್ರೀ ಚಿದಂಬರಾಶ್ರಮ ಸಿದ್ಧಾರೂಢ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ೮೦ನೇ ಜಯಂತ್ಯುತ್ಸವ ಅದ್ದೂರಿಯಾಗಿ ನಡೆಯಿತು. ವಿವಿಧ ಗ್ರಾಮಗಳ ಹದಿನೈದು ಕುಟುಂಬಗಳ ಸದಸ್ಯರು ತುಲಾಭಾರ ಸೇವೆ ಸಲ್ಲಿಸಿದರು. ಬೀದರನ ಶ್ರೀ ಚಿದಂಬರಾಶ್ರಮ ಸಿದ್ಧಾರೂಢ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಮೆರವಣಿಗೆ, ನವದಾನ ಅರ್ಪಣೆ, ತೊಟ್ಟಿಲೋತ್ಸವ, ಉಡಿ ತುಂಬುವುದು ಸೇರಿದಂತೆ ಸಂಗೀತ ಕಾರ್ಯಕ್ರಮಗಳು ನಡೆದವು. ನಂತರ ಬೀದರನ ಶ್ರೀ ಚಿದಂಬರಾಶ್ರಮ ಸಿದ್ಧಾರೂಢ ಮಠದ ಡಾ.ಶಿವಕುಮಾರ ಸ್ವಾಮೀಜಿ ಆಶೀರ್ವಚನ ನೀಡಿದರು. ಕಲಬುರಗಿ ಶ್ರೀ ಸಿದ್ಧಾರೂಢ ಆಶ್ರಮದ ಮಾತೋಶ್ರೀ ಲಕ್ಷ್ಮೀ ತಾಯಿ, ತಾವರಗೇರಿ ಶ್ರೀ ಸಿದ್ಧಾರೂಢ ಮಠದ ನಿರ್ಗುಣಾನಂದ ಸ್ವಾಮೀಜಿ, ಬೀದರ ಶ್ರೀ ಸಿದ್ಧಾರೂಢ ಆಶ್ರಮದ ಮಾತೋಶ್ರೀ ಸಂಗೀತಾ ತಾಯಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮಕ್ಕೆ ಕಲಘಟಗಿ, ತಾವರಗೇರಿ, ಯಲವಧಾಳ, ಅರಳಿಹೊಂಡ, ಆಲದಕಟ್ಟಿ, ಮುಕ್ಕಲ್ಲ, ಬಮ್ಮಿಗಟ್ಟಿ, ನೆಲ್ಲಿಹರವಿ, ಸೊಮನಕೊಪ್ಪ, ಮಡಕಿಹೊನ್ನಳ್ಳಿ, ಬೇಗೂರ, ಧೂಳಿಕೊಪ್ಪ, ಹಿರೇಹೊನ್ನಳ್ಳಿ, ಬಗಡಗೇರಿ, ಕಾಮಧೇನು, ಹುಲ್ಲಂಬಿ, ಕುರವಿನಕೊಪ್ಪ, ಉಗ್ನಿಕೇರಿ,…
ಗದಗ: ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಾಯಿತು. ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಾಗಿದ್ದು, ಸಭೆಯಲ್ಲಿ ಬೆಳೆ ವಿಮೆ ವಿಚಾರವಾಗಿ ಚರ್ಚೆ ನಡೆಸಲಾಯಿತು. ಬೆಳೆ ವಿಮೆ ಪಾವತಿಸಿದ ಎಲ್ಲ ಅರ್ಹ ರೈತರಿಗೂ ಬೆಳೆ ವಿಮೆ ಯೋಜನೆ ಪರಿಹಾರ ದೊರಕಿಸಲು ಕ್ರಮಕ್ಕೆ ಸೂಚನೆ ನೀಡಿದರು. ಇನ್ನೂ ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ ಸಿ ಪಾಟೀಲ್, ಶಾಸಕ ಜಿ ಎಸ್ ಪಾಟೀಲ್, ಚಂದ್ರು ಲಮಾಣಿ, ವಿ. ಪ. ಸದಸ್ಯ ಎಸ್ ವಿ ಸಂಕನೂರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ ಸಿಖಾ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಎಸ್ಪಿ ಬಿ ಎಸ್ ನೇಮಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ಹುಬ್ಬಳ್ಳಿ: ಇಲ್ಲಿಯ ಕೊಯಿನ್ ರಸ್ತೆಯ ಮಲಬಾರ್ ಗೋಲ್ಡ್ ಅಂಗಡಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ ಮಾಡಿದ್ದ ಅಂತಾರಾಜ್ಯ ಕಳ್ಳನನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 1 ಲಕ್ಷ ರೂ. ಮೌಲ್ಯದ 14.21 ಗ್ರಾಂ ತೂಕದ ಬಂಗಾರದ ಉಂಗುರ ಜಪ್ತಿ ಮಾಡಿದ್ದಾರೆ. ಬೆಂಗಳೂರು ಮೂಲದ ಖಾದರ್ ತನ್ವೀರ್ ಪಾಷಾ (60) ಬಂಧಿತ. ಗ್ರಾಹಕರ ಸೋಗಿನಲ್ಲಿ ಬಂದು ಅಂಗಡಿಯ ಸೇಲ್ಸ್ಸ್‌ಮನ್‌ನ ಗಮನ ಬೇರೆ ಕಡೆ ಸೆಳೆದು 1 ಲಕ್ಷ ರೂ ಮೌಲ್ಯದ 14.21 ಗ್ರಾಂ ತೂಕದ ಬಂಗಾರದುಂಗುರ ಕಳ್ಳತನ ಮಾಡಿ, ಅದೇ ಸ್ಥಳದಲ್ಲಿ ತಾನು ತೆಗೆದುಕೊಂಡು ಬಂದಿದ್ದ ಹಿತ್ತಾಳೆ ಉಂಗುರವಿಟ್ಟು ಎಸ್ಕೇಪ್ ಆಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಶಹರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಎಂ.ಎಂ. ತಹಸೀಲ್ದಾರ್ ನೇತೃತ್ವದ ವಿಶೇಷ ತಂಡ, ಆರೋಪಿಯ ಜಾಡು ಹಿಡಿದು ರಾಜ್ಯದ ರಾಜಧಾನಿಗೆ ತೆರಳಿತ್ತು. ಬೆಂಗಳೂರಿನ ಆನಂದ ನಗರದಲ್ಲಿ ಆರೋಪಿ ಇರುವಿಕೆ ಪತ್ತೆ ಹಚ್ಚಿದ ತಂಡ, ಖಡ್ಡಾಕ್ಕೆ ಕೆಡವಿತ್ತು. ಬಂಧಿತನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಹುಬ್ಬಳ್ಳಿ: ಮುಸ್ಲಿಮರು ಕೂಡ ಭಾರತದ ಪ್ರಜೆಗಳು ಅವರ ಬಗ್ಗೆ ಬಿಜೆಪಿಗೆ ಗೌರವವಿದೆ. ಆದರೆ ಕಾಂಗ್ರೆಸ್ ತುಷ್ಟಿಕರಣ ಮಾಡುತ್ತಿದೆ. ವೋಟ್ ಬ್ಯಾಂಕಿಗಾಗಿ ರಾಮನ ಅಸ್ತಿತ್ವವನ್ನು ಪ್ರಶ್ನಿಸಿದವರು ಕಾಂಗ್ರೆಸ್ಸಿಗರು. ರಾಮ ಮಂದಿರದಲ್ಲಿ ಯಾವುದೇ ರಾಜಕಾರಣದ ವಿಷಯವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶ್ರೀರಾಮನ ಬಗ್ಗೆ ಹಾಗೂ ಶ್ರೀರಾಮನ ಅಸ್ತಿತ್ವದ ಬಗ್ಗೆ ಪ್ರಶ್ನಿಸುವ ಕ್ಷುಲ್ಲಕ ಕಾರ್ಯವನ್ನು ಮಾಡುವ ಮೂಲಕ ಕಾಂಗ್ರೆಸ್ ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದರು. ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜೋಶಿ ಕಿಡಿ ಕಾರಿದ್ದು, ನಾನು ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಇರಲಿಲ್ಲ. ಆದರೆ ಯಾರು ಸಹ ಬಹಿರಂಗ ಹೇಳಿಕೆಗಳನ್ನು ನೀಡಬಾರದು. ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಕೂಡಲೆ ಬಹಿರಂಗ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಯತ್ನಾಳ ಹೇಳಿಕೆಯಿಂದ ಪಕ್ಷಕ್ಕೆ ಆಗ್ತಿರೋ ಡ್ಯಾಮೇಜ್…
ದಾವಣಗೆರೆ: 2ಎ ಮೀಸಲಾತಿಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದ ಜಯಮೃತ್ಯುಂಜ ಶ್ರೀ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಕೈ ಬಿಟ್ಟಿದ್ದಾರೆ. ಗಡುವು ಕೇಳಿರುವ ಸಿಎಂ ಸಿದ್ದರಾಮಯ್ಯ ಆದ್ದರಿಂದ ಮುತ್ತಿಗೆಗೆ ತಾತ್ಕಾಲಿಕೆ ತಡೆ ನೀಡಿದ್ದೇವೆ ಎಂದ ಸ್ವಾಮೀಜಿ ಹೇಳಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಜ.20 ರೊಳಗೆ ಇರುವ ಕಾನೂನು ಪ್ರಕ್ರಿಯೆ ಮುಗಿಸಬೇಕು. ಮುಗಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಸಮಾಜದ ಮುಖಂಡರು ಮತ್ತು ಸಿಎಂ ಮಾತು ಕೇಳಿ ಮುತ್ತಿಗೆ ಮುಂದೂಡಿದ್ದೇವೆ. ಇದರಲ್ಲಿ ಸಿಎಂ ತಮ್ಮ ಮಾತನ್ನ ಉಳಿಸಿಕೊಳ್ಳಬೇಕು. ಮಾತಿಗೆ ತಪ್ಪದಿರುವುದೇ ನಿಮ್ಮ ವ್ಯಕ್ತಿತ್ವಕ್ಕೆ ಮೇರುಗನ್ನಡಿ. ಇಲ್ಲದಿದ್ದರೆ ಮುಂದಿನ ತೀರ್ಮಾಣ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇನ್ನೂ ಈ ಬಗ್ಗೆ ಚರ್ಚಿಸಿಲು ಕೂಡಲಸಂಗಮದಲ್ಲಿ ಸಮಾಜದ ಮುಖಂಡರ ಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲ ಮುಖಂಡರು ಸೇರಿ ಒಂದು ನಿರ್ಧಾರಕ್ಕೆ ಬರುತ್ತೇವೆ. ಸಭೆಯಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಲು ನಿರ್ಧಾರ ತೆಗೆದುಕೊಳ್ಳಲಾಗುವುದು. ಒಳಪಂಗಡಗಳು ನಾವೆಲ್ಲ ಸೇರಿ ಸರ್ಕಾರದ ಗಮನ ಸೆಳೆಯೋಣ ಎಂದು ದಾವಣಗೆರೆಯಲ್ಲಿ ಜಯಮೃತ್ಯುಂಜಯ ಶ್ರೀಗಳು ಹೇಳಿದರು.
ಬಿಗ್ ಬಾಸ್ ಶುರುವಿಗೆ ಇಡೀ ಮನೆಯನ್ನು ಆವರಿಸಿಕೊಂಡಿದ್ದು ನಮ್ರತಾ. ಪುರುಷರ ಸರಿ ಸಮಾನವಾಗಿ ನಿಂತುಕೊಂಡು ನಮ್ರತಾ ಫೈಟ್ ಕೊಡುತ್ತಾರೆ ಎಂದೇ ನಂಬಲಾಗಿತ್ತು. ಆದರೆ, ಬರ್ ಬರ್ತಾ ನಮ್ರತಾ ಚಾರ್ಮ್ ಕಳೆದುಕೊಂಡರು. ಹೊಂದಾಣಿಕೆಯ ಆಟ ಆಡಲು ಶುರು ಮಾಡಿದರು. ಆದ್ರೆ ಈಗ ಈಗ ಆಟ ಶುರು ಮಾಡಿದ್ದಾರೆ. ಕ್ಯಾಪಟ್ನ್ಸಿ ಟಾಸ್ಕ್ ಆಗಿ ಕ್ಯಾಪ್ಟನ್ ಆಗಿದ್ದರು. ಈಗ ನಮ್ರತಾ ಕೂಡ ಇತ್ತೀಚೆಗೆ ಮೆಚ್ಚುಗೆ ಪಡೆಯುತ್ತಿದ್ದಾರೆ. ಕಾರ್ತಿಕ್ ಅವರು ಮೊದಲಿನಿಂದಲೂ ನಮ್ರತಾ ಜೊತೆ ಕ್ಲೋಸ್ ಆಗೋಕೆ ಪ್ರಯತ್ನಿಸಿದ್ದರು. ಸ್ನೇಹಿತ್ ಹೋದ ಮೇಲೆ ಇಬ್ಬರ ಮಧ್ಯೆ ಒಳ್ಳೆಯ ರ‍್ಯಾಪೋ ಬೆಳೆಯುತ್ತಿದೆ. ಕಾರ್ತಿಕ್ ಹಾಗೂ ನಮ್ರತಾ ಕ್ಲೋಸ್ ಆಗುತ್ತಿದ್ದಾರೆ. ಈಗ ಇಬ್ಬರೂ ಓಪನ್ ಆಗಿ ಫ್ಲರ್ಟ್ ಮಾಡಿದ್ದಾರೆ. ಇದು ಸಖತ್ ಫನ್ನಿ ಆಗಿತ್ತು. ನಮ್ರತಾ ಜೊತೆ ಡೇಟ್ಗೆ ಹೋಗಬೇಕು ಎಂಬುದು ಕಾರ್ತಿಕ್ ಕನಸು. ಮೊದಲಿನಿಂದಲೂ ಈ ಬಗ್ಗೆ ಮಾತನಾಡುತ್ತಲೇ ಬರುತ್ತಿದ್ದಾರೆ. https://ainlivenews.com/dont-be-fooled-by-lychee-the-benefits-of-eating-this-fruit-are-not-one-or-two/ ಇದನ್ನು ನಮ್ರತಾ ಹಾಗೂ ಕಾರ್ತಿಕ್ ಇಬ್ಬರೂ ಫನ್ ಆಗಿಯೇ ಸ್ವೀಕರಿಸಿದ್ದಾರೆ. ತಮ್ಮ ತಾಯಿ ಬಂದಾಗಲೂ ಕಾರ್ತಿಕ್ ಈ ವಿಚಾರ ತೆಗೆದಿದ್ದರು.…
ತುಮಕೂರು: ತುಮಕೂರು ತಾಲೂಕಿನ ಹೊನಸಿಗೆರೆ ಗ್ರಾಮದ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಎಗ್ಗಿಲ್ಲದೇ ಸಾಗಿದೆ. ಈ ಕೆರೆ ಪ್ರಾತ್ರದಲ್ಲಿ ಯಾವುದೇ ಮಣ್ಣು ಟೆಂಡರ್ ಇಲ್ಲ. ಇಲ್ಲಿ ನಡೀಯುತ್ತಿರೋಮಣ್ಣು ಗಣಿಗಾರಿಕೆ ಸಂಪೂರ್ಣ ಅಕ್ರಮವಾಗಿದೆ. ಹಗಲು ರಾತ್ರಿ ಎನ್ನದೇ ದಂಧೆಕೋರರು ಕೆರೆ ಒಡಲು ಬಗೆದು ಮರಳು ಹೆಕ್ಕುತ್ತಿದ್ದಾರೆ. ಕೆಲ ಸ್ಥಳೀಯರು ಜೆಸಿಬಿಗಳು ಹಾಗೂ ಟ್ರಾಕ್ಟರ್ ಗಳನ್ನ ಇಟ್ಟು ಕೆರೆಯಲ್ಲಿ ಮಣ್ಣು ಸಾಗಾಟ ಮಾಡುತ್ತಿದ್ದಾರೆ. ಎಲ್ಲ ಕಾನೂನುಗಳು ಗಾಳಿಗೆ ತೂರಿ ಎಗ್ಗಿಲ್ಲದೇ ಅಕ್ರಮ ಮಣ್ಣು ಗಣಿಗಾರಿಕೆ ನಡೆದ್ರೂ ಗಣಿ ಹಾಗೂ ಕಂದಾಯ ಇಲಾಖೆ ಡೋಂಟ್ ಕೇರ್ ಅಂತಿವೆ. ಇದು ರೈತರು, ನದಿ ಪಾತ್ರದ ಗ್ರಾಮಗಳ ಜನ್ರ ಆಕ್ರೋಶಕ್ಕೆ ಕಾರಣವಾಗಿದೆ.