Author: AIN Author

ಬೆಂಗಳೂರು: ಆನೇಕಲ್ ತಾಲೂಕಿನ ಗಟ್ಟಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಇಂದು ಮುಂಜಾನೆ ನಾಲ್ಕು ಗಂಟೆಗೆ ಹುಸ್ಕೂರು ಗ್ರಾಮದಲ್ಲಿ ಮತ್ತೆ ಕಾಣಿಸಿಕೊಂಡಿದೆ ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ..ಆನೇಕಲ್ ತಾಲೂಕಿನ‌ ಹುಸ್ಕೂರು ಮದ್ದೂರಮ್ಮ ದೇವಾಲಯದ ಹಿಂಬದಿ‌ ರಸ್ತೆಯಲ್ಲಿ ಇಂದು ‌ನಸುಕಿನ ಜಾವ ತೆರಳುತ್ತಿದ್ದ ಬೈಕ್ ಸವಾರನಿಗೆ ಚಿರತೆ ಕಾಣಿಸಿದೆ. ಕೂಡಲೇ ಮೊಬೈಲ್​ನಲ್ಲಿ ಚಿರತೆ ಫೋಟೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ .. ಇನ್ನು ಸಾಮಾಜಿಕ ಜಾಲತಾಣದಲ್ಲಿ ಚಿರತೆ ಫೋಟೋ ವೈರಲ್​ ಆಗುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೋನ್​​ ಇಟ್ಟಿದ್ದಾರೆ. ಕಳೆದ ವಾರವಷ್ಟೇ ಚಿರತೆಯೊಂದು ಕೋಳಿಯನ್ನು ಬೇಟೆಯಾಡಿ‌ ತಿಂದ ದೃಶ್ಯ ಸಿಸಿ‌ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಕಳೆದ ವಾರ ಗಟ್ಟಹಳ್ಳಿ, https://ainlivenews.com/krishna-stone-from-mysore-is-used-to-carve-sri-rama-idol/ ಹುಸ್ಕೂರು, ಕನ್ನಲ್ಲಿ ಭಾಗದಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿತ್ತು. ಈಗ ಪ್ರತ್ಯಕ್ಷವಾಗಿರುವುದು ಅದೇ ಚಿರತೆ ಎಂದು ಅಂದಾಜಿಸಲಾಗಿದೆ. ಚಿರತೆ ಕಂಡು ಬಂದ ಪ್ರದೇಶದಲ್ಲಿ 400 ಎಕರೆ ಸಿಲ್ಕ್ ಫಾರ್ಮ್ ಇದ್ದು, ಚಿರತೆಯ ಚಲನವಲನ ಕಂಡು ಹಿಡಿಯಲು ಅನುಕೂಲವಾಗಲಿದೆ. ಹಾಗೆಯೇ,…

Read More

ಬೆಂಗಳೂರು: ಹೊಸ ವರ್ಷವನ್ನು ಹರ್ಷದಿಂದ ಬರ ಮಾಡಿಕೊಳ್ಳಬೇಕು ಎಂದುಕೊಂಡವರಿಗೆ ಕೊರೋನ ಅಡ್ಡಲಾಗಿನಿಂತಿದೆ. ಈಗಾಗಲೇ ಜೆಎನ್.1 ಉಪತಳಿ ಹಾವಳಿ ಇಡುತ್ತಿದ್ದು ಆರೋಗ್ಯ ಇಲಾಖೆ ಕೂಡ ಕೊರೋನಾವನ್ನು ಕಟ್ಟಿಹಾಕಲು ಕಸರತ್ತು ನಡೆಸುತ್ತಿದೆ. ಕರ್ನಾಟಕದಲ್ಲಿ ಏಕಾಏಕಿಯಾಗಿ ಉಪತಳಿಯ ಹಾವಳಿ ಸ್ಫೋಟವಾಗಿದೆ. ಆದರೆ ಅದೃಷ್ಟ ವಶಾತ್ ಆಸ್ಪತ್ರೆಯ ದಾಖಲಾತಿಯಲ್ಲಿ ಏರಿಕೆಯಾಗದೆ, ಬಹುತೇಕ ಸೋಂಕಿತರು ಮನೆಯಲ್ಲಿಯೇ ಐಸೋಲೇಟ್ ಆಗಿದ್ದಾರೆ. ಹೋಮ್ ಐಸೋಲೇಷನ್ ನಲ್ಲಿರೋರಿಗೆ ಬಿಬಿಎಂಪಿ ಆರೋಗ್ಯ ಇಲಾಖೆ ಔಷಧದ ಕಿಟ್ ಗಳನ್ನು ಅಗತ್ಯ ಬಿದ್ದಲ್ಲಿ ಮನೆಗೆ ಕಳುಹಿಸುವ ಕೆಲಸ ಮಾಡುತ್ತಿದೆ. https://ainlivenews.com/krishna-stone-from-mysore-is-used-to-carve-sri-rama-idol/ ಪ್ಯಾರಸೆಟಮಲ್,ಆಂಟಿಬಯೋಟಿಕ್, ಜಿಂಕ್ ಮಾತ್ರೆ,ಮಾಸ್ಕ್ ಗಳನ್ನು ಒಳಗೊಂಡಿರುವ ಕಿಟ್ ಗಳನ್ನು ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಸೋಂಕಿತರ ಜೊತೆ ಟೆಲಿ ಕನ್ಸಲ್ಟಿಂಗ್ ಮೂಲಕ ನಿರಂತರ ಸಂಪರ್ಕವನ್ನು ಮಾಡಲಾಗುತ್ತಿದೆ. ತುರ್ತು ಔಷಧ ಅಗತ್ಯ ಬಿದ್ದರೆ ವೈದ್ಯರನ್ನು ಮನೆಗೆ ಕಳುಹಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆದರೆ ಈಗ ಹೊಸ ವರ್ಷದ ಆಚರಣೆಗೆ ಸದ್ಯ ಯಾವುದೇ ನಿಯಮಾವಳಿ ನೀಡಿಲ್ಲವಾದರೂ ಕೊನೆಕ್ಷಣದಲ್ಲಿ ಯಾವುದೇ ಬದಲಾವಣೆ ಆದರೂ ಆಶ್ಚರ್ಯ ಇಲ್ಲ.

Read More

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಪಾರ್ಟಿ ಮುಗಿಸಿ ತೆರಳುವ ಜನರಿಗಾಗಿಯೇ ಬಿಎಂಟಿಸಿ ಡಿಸೆಂಬರ್ 31ರಂದು ವಿಶೇಷ ಬಸ್‌ಗಳನ್ನು ಓಡಿಸುತ್ತಿದೆ. ಬಿಎಂಟಿಸಿ  ಎಂ. ಜಿ. ರಸ್ತೆ/ ಬ್ರಿಗೇಡ್ ರಸ್ತೆಯಿಂದ ವಿವಿಧ ಪ್ರದೇಶಗಳಿಗೆ ಈ ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ. ಡಿಸೆಂಬರ್ 31ರ ರಾತ್ರಿ 11 ಗಂಟೆಯಿಂದ ಜನವರಿ 1ರ 2 ಗಂಟೆಯ ತನಕ ಬಸ್‌ಗಳು ಸಂಚಾರ ನಡೆಸಲಿವೆ. ಬಿಎಂಟಿಸಿ ಡಿಸೆಂಬರ್ 31ರಂದು ಎಂ. ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಭಾಗವಹಿಸುವ ಜನರಿಗೆ ಅನುಕೂಲವಾಗುವಂತೆ ಬೇಡಿಕೆಗೆ ಅನುಗುಣವಾಗಿ ಬಿಎಂಟಿಸಿ ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೇ ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ/ ಜಂಕ್ಷನ್‌ಗಳಾದ ಯಲಹಂಕ, ಇಂದಿರಾನಗರ, ಕೋರಮಂಗಲ, ಶಾಂತಿನಗರ, ಬನಶಂಕರಿ, ಜಯನಗರ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಕಾಡುಗೋಡಿ, ನಾಗಸಂದ್ರ, ಹೆಬ್ಬಾಳ, ಸೆಂಟ್ರಲ್ ಸಿಲ್ಕ್ ಬೋರ್ಡ್‌ ಗಳಿಂದಲೂ ಬಸ್ ಸಂಚಾರಕ್ಕೆ ಬಿಎಂಟಿಸಿ ಕ್ರಮ ಕೈಗೊಂಡಿದೆ. ಬಸ್ ಮಾರ್ಗ, ಸಂಖ್ಯೆಗಳು…

Read More

ಬೆಂಗಳೂರು: ಶೇ.77ರಷ್ಟು ಜನರು ತಮ್ಮ ಹಣವನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡುವ ಮೂಲಕ ಉಳಿತಾಯ ಮಾಡಲು ಮುಂದಾಗಿದ್ದರೆ, ಶೇ.21ರಷ್ಟು ಜನರು ಚಿನ್ನದ ಮೇಲೆ ಹೂಡಿಕೆ ಮಾಡುವ ಮೂಲಕ ಗಳಿಕೆಯ ಉಳಿತಾಯ ಮಾಡಲು ಒಲವು ತೋರಿದ್ದಾರೆ. ಈ ಪೈಕಿ ಕರ್ನಾಟಕದ ಬೆಂಗಳೂರಿನಲ್ಲಿ ಚಿನ್ನದ ಮೇಲಿನ ಹೂಡಿಕೆ ಪ್ರಮಾಣ ಶೇ.69ರಷ್ಟಿದ್ದು, ಇದು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಉಳಿದಂತೆ ತಿರುವನಂತಪುರಂ ಶೇ.66ರೊಂದಿಗೆ 2ನೇ ಸ್ಥಾನದಲ್ಲಿದೆ ಎಂದು ವರದಿಯೊಂದು ಹೇಳಿದೆ. ನಡೆಸಿದ ವಾರ್ಷಿಕ ವೈಯಕ್ತಿಕ ಹಣಕಾಸು ಸಮೀಕ್ಷೆಯಲ್ಲಿ ಈ ಮಾಹಿತಿ ತಿಳಿದು ಬಂದಿದ್ದು ಈ ಪೈಕಿ ಭಾರತದಲ್ಲಿ ಐಷಾರಾಮಿ ಜೀವನ ನಡೆಸುತ್ತಿರುವ ಕುಟುಂಬಗಳ ಪ್ರಮಾಣವು 2022ರಲ್ಲಿನ ಶೇ.3ರಿಂದ 2023ರಲ್ಲಿ ಶೇ.5ಕ್ಕೆ ಏರಿಕೆಯಾಗಿದೆ. https://ainlivenews.com/krishna-stone-from-mysore-is-used-to-carve-sri-rama-idol/ ಅಲ್ಲದೇ 2023ರಲ್ಲಿ ದೇಶದಲ್ಲಿ ಶೇ.27ರಷ್ಟು ಕುಟುಂಬಗಳು ಜೀವ ವಿಮೆ ಪಾಲಿಸಿಗಳನ್ನು ಹೊಂದಿವೆ. ಇದು 2019ರ ಶೇ.19ರಷ್ಟಕ್ಕೆ ಹೋಲಿಸಿದರೆ ಅಧಿಕವಾಗಿದೆ. ಸಮೀಕ್ಷೆಯ ಪ್ರಕಾರ ಶೇ.53ರಷ್ಟು ಕುಟುಂಬಗಳು ಯಾವುದೇ ಆರೋಗ್ಯ ವಿಮೆ ಹೊಂದಿಲ್ಲ, ಷೇರು ಮಾರುಕಟ್ಟೆ ಹೂಡಿಕೆದಾರರ ಪ್ರಮಾಣ ಶೇ.9ಕ್ಕೆ ಏರಿದೆ, ಶೇ.10ರಷ್ಟು ಭಾರತೀಯ ಕುಟುಂಗಳು ಮ್ಯೂಚುವಲ್‌…

Read More

ಕಚ್ಚಾ ತೈಲ ಬೆಲೆ ಏರಿಕೆ, ಇಳಿಕೆ ಆಧಾರದ ಮೇಲೆ ಪೆಟ್ರೋಲ್‌, ಡೀಸೆಲ್‌ ಬೆಲೆ ವ್ಯತ್ಯಾಸವಾಗುತ್ತದೆ. ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಏರಿಕೆ – ಇಳಿಕೆಯಾಗುತ್ತಿದೆ. ಇದೇ ರೀತಿ, ರಾಜ್ಯದಲ್ಲೂ ಬೆಂಗಳೂರು ಹೊರತುಪಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆ ನಗರಗಳಲ್ಲಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಲೇ ಇರುತ್ತದೆ.  ಇನ್ನು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ (Petrol) – ಡೀಸೆಲ್ (Diesel) ಬೆಲೆ ವಿವರ ಹೀಗಿದೆ ನೋಡಿ..  ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌ ದರ: ಬಾಗಲಕೋಟೆ – ರೂ. 102.27 ಬೆಂಗಳೂರು – ರೂ. 101.94 ಬೆಂಗಳೂರು ಗ್ರಾಮಾಂತರ – ರೂ. 102.07 ಬೆಳಗಾವಿ – ರೂ. 101.76 ಬಳ್ಳಾರಿ – ರೂ. 103.61 ಬೀದರ್ – ರೂ. 102.28 ವಿಜಯಪುರ – ರೂ. 101.72 ಚಾಮರಾಜನಗರ – ರೂ. 102.10 ಚಿಕ್ಕಬಳ್ಳಾಪುರ – ರೂ. 101.69 ಚಿಕ್ಕಮಗಳೂರು – ರೂ.…

Read More

ಬೆಂಗಳೂರು: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇದೆ. ಅದು ಯಾವಗ ನಿಲ್ಲುತ್ತದೆ. ಅನ್ನೂವುದೆ ಈಗಿನ ಪ್ರಶ್ನೆಯಾಗಿದೆ.  ಹೌದು ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಮಲ ತಂದೆಗೆ 20 ವರ್ಷ ಜೈಲು, ಹತ್ತು ಸಾವಿರ ರೂ. ದಂಡ ವಿಧಿಸಿ ನಗರದ 2ನೇ ತ್ವರಿತ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ. ವೆಂಕಟೇಶ್‌ (48) ಶಿಕ್ಷೆಗೆ ಗುರಿಯಾದವನು. ಸಿಡೇದಹಳ್ಳಿ ನಿವಾಸಿ ವೆಂಕಟೇಶ್‌ ತನ್ನ 2ನೇ ಪತ್ನಿಯ 14 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಸಂತ್ರಸ್ತೆ 2013ರ ಫೆಬ್ರವರಿ 22ರಂದು ಪೀಣ್ಯ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ವೆಂಕಟೇಶ್‌ನನ್ನು ಬಂಧಿಸಿ ಜೈಲಿಗೆ ಕಳಿಸಿದ್ದರು. ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಪೋಕ್ಸೋ ಕಾಯಿದೆಯನ್ವಯ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. https://ainlivenews.com/good-news-for-metro-commuters-trains-will-run-till-2-15-midnight-on-new-years-day/ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎ.ಜಿ ಗಂಗಾಧರ್‌, ಅಪರಾಧಿ ವೆಂಕಟೇಶ್‌ಗೆ 20 ವರ್ಷ ಜೈಲು, 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಜತೆಗೆ, ಸಂತ್ರಸ್ತೆಗೆ 4 ಲಕ್ಷ ರೂ.…

Read More

ನಟ, ರಾಜಕಾರಣಿ ವಿಜಯಕಾಂತ್ ಅವರ ಅಂತಿಮ ದರ್ಶನಕ್ಕೆ ಬಂದಿದ್ದ ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದಿರುವ ಘಟನೆ ನಡೆದಿದೆ. ಅಂತಿಮ ದರ್ಶನ ಪಡೆದ ಬಳಿಕ ತಮ್ಮ ಕಾರಿನತ್ತ ಹೊರಟಿದ್ದ ವಿಜಯ್ (Vijay) ಮೇಲೆ ಚಪ್ಪಲಿ (Cheppali) ತೂರಿ ಬಂದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. https://twitter.com/iam_K_A/status/1740626989462217094?ref_src=twsrc%5Etfw%7Ctwcamp%5Etweetembed%7Ctwterm%5E1740626989462217094%7Ctwgr%5E7999e2402774ac1e9e3756276bd039febff2e250%7Ctwcon%5Es1_&ref_url=https%3A%2F%2Fkeralakaumudi.com%2Fen%2Fnews%2Fnews.php%3Fid%3D1217886u%3Dslipper-hurdled-at-actor-vijay-while-paying-tributes-to-vijayakant ನೆಚ್ಚಿನ ನಟನ ಅಂತಿಮ ದರ್ಶನ ಪಡೆಯುವುದಕ್ಕಾಗಿ ಜನಸಾಗರವೇ ಹರಿದು ಬಂದಿತ್ತು. ಜನರ ನಡುವೆ ಸಾಗಿ, ತಮ್ಮ ಕಾರಿನತ್ತ ಹೊರಟಿದ್ದರು ವಿಜಯ್. ಕಾರಿನತ್ತ ಹೊರಡಲು ವಿಜಯ್ ಹರಸಾಹಸ ಪಡುತ್ತಿದ್ದರು. ಈ ಸಮಯದಲ್ಲೇ ಯಾರೋ ಚಪ್ಪಲಿ ಎಸೆದಿದ್ದಾರೆ. ಆದರೆ, ಅವರಿಗೆ ಅದು ಬಿದ್ದಿಲ್ಲ. ಸಹಜ ಸಾವಲ್ಲ ರಾಜಕಾರಣಿ ವಿಜಯಕಾಂತ್ (Vijayakanth) ಅವರದ್ದು ಸಹಜವಾವಲ್ಲ, ಅದೊಂದು ಕೊಲೆ (Murder) ಎಂದು ಮಲಯಾಳಂನ ಖ್ಯಾತ ಸಿನಿಮಾ ನಿರ್ದೇಶಕ ಅಲ್ಪೋನ್ಸ್ ಪುತ್ರೆನ್ (Alphonse Puthren) ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ಅವರು ಇನ್ಸ್ಟಾದ ಸ್ಟೋರಿ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ತನ್ನ ಆತಂಕವನ್ನು…

Read More

ಬೆಂಗಳೂರು: ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರ. ಅದಕ್ಕೆ ರಾಹುಲ್ ಗಾಂಧಿ (Rahul Gandhi) ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವ ಶಕ್ತಿ ಇದೆ. ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರವಾಗಿದ್ದು, ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದರು. ಯಾರು ಕೂಡ ಈ ದೇಶದಲ್ಲಿ ಭಾರತ್ ಜೋಡೋ (Bharat Jodo) ಮಾಡಿರಲಿಲ್ಲ. ಈಗ ಭಾರತ್ ಜೋಡೋ.2 ಪ್ರಾರಂಭ ಮಾಡ್ತಿದ್ದಾರೆ. https://ainlivenews.com/krishna-stone-from-mysore-is-used-to-carve-sri-rama-idol/ ಭಾರತ ನ್ಯಾಯ ಯಾತ್ರೆ ಮಾಡ್ತಿದ್ದಾರೆ. ಯಾಕಂದ್ರೆ ಈ ದೇಶದಲ್ಲಿ ಯಾರಿಗೂ ನ್ಯಾಯ ಸಿಕ್ಕಿಲ್ಲ. ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಸಿಗಬೇಕು ಅಂತ ಪಾದಯಾತ್ರೆ ಮಾಡ್ತಿದ್ದಾರೆ. ಇಂತವರ ಕೈಗೆ ಅಧಿಕಾರ ಸಿಗಬೇಕೋ ನರೇಂದ್ರ ಮೋದಿಗೆ ಅಧಿಕಾರ ಸಿಗಬೇಕೋ..?. ಹಾಗಾಗಿ ನಾವು…

Read More

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಎಲ್ಲಾ ಸ್ಥಾನ ಗೆಲ್ಲಲು ನಮ್ಮ ರಣತಂತ್ರ ಏನಿರಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ರಾಜ್ಯ ಮತ್ತು ದೇಶದ ಜನರು ನರೇಂದ್ರ ಮೋದಿಯವರು ಮತ್ತೆ ಪ್ರಧಾನಮಂತ್ರಿ ಆಗಬೇಕೆಂದು ಬಯಸುತ್ತಿದ್ದಾರೆ ಎಂದು ಬಿಜೆಪಿ (BJP) ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸಿ.ಟಿ.ರವಿ (CT Ravi) ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜನರು ನಮ್ಮನ್ನು ಬಯಸುತ್ತಿದ್ದಾರೆ. ನಾವು ವಿಶೇಷ ಪ್ರಯತ್ನ ಮಾಡಿದರೆ, ಒಂದಾಗಿ ಹೋದರೆ 28ಕ್ಕೆ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸ ನಮಗಿದೆ ಎಂದರು.  https://ainlivenews.com/krishna-stone-from-mysore-is-used-to-carve-sri-rama-idol/ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಅವರ ನೇತೃತ್ವದಲ್ಲಿ ಪ್ರಮುಖರ ವಿಶೇಷ ಸಮಾಲೋಚನಾ ಸಭೆ ನಡೆಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 28 ಸ್ಥಾನಗಳನ್ನೂ ಗೆಲ್ಲುವ ಕುರಿತು ಯಾವ ರೀತಿ ಕಾರ್ಯಯೋಜನೆ ರೂಪಿಸಬೇಕು, ಜೆಡಿಎಸ್ ಜೊತೆ ಸಮನ್ವಯ ಸಾಧಿಸಿ ಹೇಗೆ ಒಟ್ಟಾಗಿ ಕೆಲಸ ಮಾಡಬೇಕು ಎಂಬ ವಿಷಯ ಚರ್ಚಿಸಲಾಗಿದೆ.…

Read More

ಅಯೋಧ್ಯೆ: ಕರ್ನಾಟಕಕ್ಕೆ‌ ಸಂಪರ್ಕ ಕಲ್ಪಿಸಲಿರುವ 2 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಹಾಗೂ ಹೊಸ ಮಾದರಿಯ ಒಂದು ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇರಿದಂತೆ ದೇಶದ ವಿವಿಧ ನಗರಳಿಗೆ ಸಂಪರ್ಕಿಸುವ ಒಟ್ಟು 8 ರೈಲುಗಳ ಸಂಚಾರ ಸೇವೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಯಲ್ಲಿ ವರ್ಚುವಲ್‌ ಆಗಿ ಚಾಲನೆ ನೀಡಿದ್ದಾರೆ. ಹೊಸದಾಗಿ ಚಾಲನೆಗೊಂಡ ವಂದೇ ಭಾರತ್‌ ರೈಲುಗಳು ಮಂಗಳೂರು-ಮುಂಡ್ಗಾವ್‌ (ಗೋವಾ) ಮತ್ತು ಬೆಂಗಳೂರು-ಕೊಯಮತ್ತೂರು ನಡುವೆ ಸಂಚರಿಸಿದರೆ, ಅಮೃತ್‌ ಭಾರತ್‌ ರೈಲು (Amrit Bharat Trains) ಪಶ್ಚಿಮ ಬಂಗಾಳದ ಮಾಲ್ಡಾ-ಬೆಂಗಳೂರು ನಡುವೆ ಸಂಚರಿಸಲಿದೆ. ಈಗಾಗಲೇ ರಾಜ್ಯದಲ್ಲಿ ಬೆಂಗಳೂರು-ಬೆಳಗಾವಿ, ಬೆಂಗಳೂರು-ಹೈದರಾಬಾದ್‌, ಮೈಸೂರು-ಚೆನ್ನೈ ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳು (Vande Bharat Trains) ಸಂಚರಿಸುತ್ತಿವೆ, https://ainlivenews.com/krishna-stone-from-mysore-is-used-to-carve-sri-rama-idol/ ಇದೀಗ ಮಂಗಳೂರು-ಮುಂಡ್ಗಾವ್‌ ಹಾಗೂ ಬೆಂಗಳೂರು-ಕೊಯಮತ್ತೂರು ನಡುವೆಯೂ ಸಂಚಾರ ಆರಂಭಗೊಂಡಿದೆ. ಅತ್ಯಾಧುನಿಕ ತಂತ್ರಜ್ಞಾನ ಆಧರಿತವಾಗಿರುವ ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಗಂಟೆಗೆ 130 ಕಿಮೀ ವೇಗದಲ್ಲಿ ಚಲಿಸುತ್ತದೆ. 22 ಕೋಚ್‌ಗಳನ್ನ ಒಳಗೊಂಡಿದ್ದು, 1,800 ಪ್ರಯಾಣಿಕರು ಏಕಕಾಲಕ್ಕೆ ಪ್ರಯಾಣಿಸಬಹುದಾಗಿದೆ.…

Read More