ಅಯೋಧ್ಯೆ: ರಾಮಮಂದಿರ ಉದ್ಘಾಟನೆಗೂ ಮುನ್ನವೇ ಅಯೋಧ್ಯೆಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ (ಡಿ.30) ಸಂಪೂರ್ಣ ಪರಿಸರ ಸ್ನೇಹಿಯಾಗಿ ಅಭಿವೃದ್ಧಿಪಡಿಸಲಾದ ಅಯೋಧ್ಯಧಾಮ ಜಂಕ್ಷನ್ ರೈಲು ನಿಲ್ದಾಣದ (Railway Station) ಉದ್ಘಾಟನೆ ನೆರವೇರಿಸಿದರು. ಬಳಿಕ ರೈಲು ನಿಲ್ದಾಣವನ್ನ ಪರಿಶೀಲಿಸಿದ ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ 2 ಅಮೃತ್ ಭಾರತ್ ರೈಲು ಹಾಗೂ 6 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೂ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್, ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ ಪ್ರಮುಖ ಗಣ್ಯರು ಜೊತೆಯಲ್ಲಿದ್ದರು. https://ainlivenews.com/krishna-stone-from-mysore-is-used-to-carve-sri-rama-idol/ ಏರ್‌ಪೋರ್ಟ್ ವ್ಯವಸ್ಥೆಯ ರೈಲ್ವೇ ನಿಲ್ದಾಣದಂತಿರುವ ಅಯೋಧ್ಯಧಾಮ ಜಂಕ್ಷನ್ (Ayodhya Dham Junction) ಸಂಪೂರ್ಣ ಪರಿಸರ ಸ್ನೇಹಿಯಾಗಿ ನಿರ್ಮಿಸಲಾಗಿದೆ. ರಾಮ ಮಂದಿರದಿಂದ 2.1 ಕಿ.ಮೀ. ದೂರದಲ್ಲಿ ನಿರ್ಮಾಣಗೊಂಡಿದ್ದು, ಮೊದಲ ಹಂತದಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಕೆಲಸ ಕಾರ್ಯ ನಡೆದಿದೆ. 10,000 ಚದರ ಮೀಟರ್ ವಿಸ್ತೀರ್ಣ ಹೊಂದಿದೆ.…
Author: AIN Author
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿ ಸೆಲೆಬ್ರೆಷನ್ಗೆ ಕೌಂಟ್ಡೌನ್ ಶುರುವಾಗಿದೆ.. ಹಾಟ್ ಆಫ್ ದಿ ಟೌನ್ನಲ್ಲಿ ಲಕ್ಷಾಂತರ ಜನ ಪಾರ್ಟಿ ಮಾಡೊಕ್ಕೆ ಸೇರಲಿದ್ದಾರೆ.. ಪಾರ್ಟಿಗಾಗಿ ಮೆಟ್ರೋ ಬಳಸೊ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಸಿಹಿ ಸುದ್ದಿಯ ಜೊತೆ ಶಾಕಿಂಗ್ ನ್ಯೂಸ್ ನೀಡ್ತಿದೆ. ಎಂಜಿ ರೋಡ್.. ಬ್ರಿಗೆಡ್ ರೋಡ್..ಕಲರ್ ಫುಲ್ ಲೈಟಿಂಗ್ಸ್ ಮಧ್ಯೆ ನ್ಯೂ ಇಯರ್ ಸೆಲೆಬ್ರೆಷನ್ಗೆ ಸಿಕ್ಕಾಪಟ್ಟೆ ಜನ ಸೇರೊ ಹಾಟ್ಸ್ಪಾಟ್.. ಹೊಸ ವರ್ಷ ಎನ್ಜಾಯ್ ಮಾಡಲು ಸಾವಿರಾರು ಜನ ನಮ್ಮ ಮೆಟ್ರೋ ಬಳಸುತ್ತಾರೆ..ಹೀಗಾಗಿ ಹೊಸ ವರ್ಷಕ್ಕೆ ರಾತ್ರಿ 1:30 ಗಂಟೆಯವರೆಗೆ ನಮ್ಮ ಮೆಟ್ರೋ ರೈಲು ವಿಸ್ತರಣೆ ಮಾಡಲಾಗಿದೆ.. ರಾತ್ರಿ 11 ರ ಬಳಿಕ 2 ಗಂಟೆಯವರೆಗೆ ಎಂಜಿ ರಸ್ತೆ,ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಜನ ರಾತ್ರಿ 10 ನಂತರ ಸೇರುತ್ತಾರೆ.. ಜನದಟ್ಟಣೆ ಮತ್ತು ಚಿಲ್ಲರೆ ಸಮಸ್ಯೆಯನ್ನು ಕಡಿಮೆ ಮಾಡೋ ನಿಟ್ಟಿನಲ್ಲಿ ಬಿಎಂಆರ್ಸಿಎಲ್ ಟೋಕನ್ ದರವನ್ನು ಹೆಚ್ಚಳ ಮಾಡಿದೆ. ಹೌಡು ಎರಡು ನಿಲ್ದಾಣಗಳಲ್ಲಿ ಮೆಟ್ರೋ ಹತ್ತುವ…
ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅಭಿನಯದ ‘ಡಂಕಿ’ ಸಿನಿಮಾ ಬಿಡುಗಡೆಯಾಗಿ 7 ದಿನ ಕಳೆದಿದೆ. ಡಿಸೆಂಬರ್ 21ರಂದು ಈ ಚಿತ್ರ ಬಿಡುಗಡೆ ಆಗಿತ್ತು. ಕ್ಲಾಸ್ ಸಿನಿಮಾ ಆದ್ದರಿಂದ ಡಂಕಿ ನಿಧಾನಗತಿಯಲ್ಲಿ ಕಲೆಕ್ಷನ್ ಮಾಡಿದೆ. ಒಟ್ಟು ಏಳು ದಿನಗಳಲ್ಲಿ ಈ ಸಿನಿಮಾದ ಕಲೆಕ್ಷನ್ 305 ಕೋಟಿ ರೂಪಾಯಿ ಆಗಿದ್ದು, ಭಾರತದಲ್ಲಿಯೇ 150 ಬಾಚಿಕೊಂಡಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಶಾರುಖ್ ಈ ಹಿಂದಿನ ಸಿನಿಮಾಗಳಾದ ಪಠಾಣ್ ಹಾಗೂ ಜವಾನ್ ಸಿನಿಮಾಗಳು ಭರ್ಜರಿ ಕಲೆಕ್ಷನ್ ಮಾಡಿದ್ದವು. ಈ ಎರಡು ಚಿತ್ರಗಳು 1000 ಕೋಟಿ ಕ್ಲಬ್ ಸೇರಿದ್ದವು. ಅದರಂತೆ ಡಂಕಿ ಸಿನಿಮಾವೂ ಅದ್ಭುತ ಪ್ರದರ್ಶನ ಕಾಣುತಿದೆ. ರಿಲೀಸ್ ಆದ ಮೊದಲ ದಿನವೇ 29 ಕೋಟಿ ಕಲೆಕ್ಷನ್ ಮಾಡಿದ್ದ ಚಿತ್ರ ಹಂತ ಹಂತವಾಗಿ ಒಳ್ಳೆ ಮೊತ್ತವನ್ನೇ ತನ್ನದಾಗಿಸಿಕೊಂಡಿದೆ. ‘ಡಂಕಿ’ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್, ಬೊಮನ್ ಇರಾನಿ, ವಿಕ್ರಂ ಕೊಚ್ಚರ್, ಅನಿಲ್ ಗ್ರೋವರ್ ಮುಂತಾದವರು ನಟಿಸಿದ್ದಾರೆ. ರಾಜ್ಕುಮಾರ್…
ನಾಲ್ಕು ತಿಂಗಳ ಹಿಂದೆ ಪ್ರಾರಂಭವಾಗಿದ್ದ ನಾಗಶೇಖರ್ ಅವರ ನಿರ್ದೇಶನದ ಸಂಜು ವೆಡ್ಸ್ ಗೀತಾ ೨’ ಚಿತ್ರದ ಚಿತ್ರೀಕರಣ ಪ್ರಮುಖ ಘಟ್ಟಕ್ಕೆ ಬಂದಿದೆ. ಇದೇ ತಿಂಗಳು ಚಿತ್ರತಂಡ ಸ್ವಿಟ್ಜರ್ ಲ್ಯಾಂಡ್ ಗೆ ಹೋಗಿ 2 ಹಾಡುಗಳನ್ನು ಚಿತ್ರೀಕರಿಸಿಕೊಂಡು ಬಂದಿದೆ. ಈವರೆಗೆ ನಡೆಸಿದ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಳ್ಳಲೆಂದು ನಿರ್ದೇಶಕ ನಾಗಶೇಖರ್ ಹಾಗೂ ತಂಡ ಮಾದ್ಯಮಗಳ ಮುಂದೆ ಬಂದಿತ್ತು. ಅಶೋಕ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ವಿಟ್ಜರ್ ಲ್ಯಾಂಡ್ ಶೂಟಿಂಗ್ ದೃಶ್ಯಗಳ ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ನಾಗಶೇಖರ್ ಹಿಂದೆ ಸಂಜು ವೆಡ್ಸ್ ಗೀತಾ ಸಿನಿಮಾ ಮಾಡುವಾಗ ಆದ ಅನುಭವಗಳನ್ನು ಮೆಲುಕು ಹಾಕಿದರು. ಅಲ್ಲದೆ ಈ ಚಿತ್ರ ಅದಕ್ಕಿಂತ ಚೆನ್ನಾಗಿ, ವೈಭವಯುತವಾಗಿ ಮೂಡಿಬರುತ್ತಿದೆ. ಇತ್ತೀಚೆಗಷ್ಟೇ ಸ್ವಿಟ್ಜರ್ ಲ್ಯಾಂಡ್ ನಲ್ಲಿ ಹಾಡುಗಳ ಶೂಟಿಂಗ್ ಮಾಡಿಕೊಂಡು ಬಂದಿದ್ದೇವೆ. ನಂತರ ಮುಂಬಯಿ, ಹೈದರಾಬಾದ್ ಶೂಟಿಂಗ್ ಮಾಡಿ, 2024ರ ಏಪ್ರಿಲ್ 1ರಂದು ಚಿತ್ರವನ್ನು ರಿಲೀಸ್ ಮಾಡುವ ಯೋಜನೆಯಿದೆ. ಸಂಜು ವೆಡ್ಸ್ ಗೀತಾ ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದಲೇ ಭಾಗ ಎರಡು ಇಷ್ಟು…
ಚಿಕ್ಕಬಳ್ಳಾಪುರ: ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ, ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್ ಆಗಿ ಫೋಟೊ ಶೂಟ್ ಮಾಡಿಸಿದ್ದರು. ವಿದ್ಯಾರ್ಥಿ ಕೂಡ ಶಿಕ್ಷಕಿಯನ್ನು ಮುದ್ದಾಡಿದ್ದು, ಮುಖ್ಯೋಪಾಧ್ಯಾಯಿನಿ ಕೂಡ ವಿದ್ಯಾರ್ಥಿಯನ್ನು ತಬ್ಬಿಕೊಂಡು ಪ್ರಣಯವಾಗಿ ವರ್ತಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಈ ಎಲ್ಲ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಶೂಟ್‌ನ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಚಿಂತಾಮಣಿ ಜಿಲ್ಲಾ ಶಿಕ್ಷಣಾಧಿಕಾರಿ ಉಮಾದೇವಿ ಶಾಲೆಗೆ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಸಹ ಶಿಕ್ಷಕರು, https://ainlivenews.com/good-news-for-metro-commuters-trains-will-run-till-2-15-midnight-on-new-years-day/ ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದ್ದಾರೆ. ಡಿಸೆಂಬರ್ 22 ರಿಂದ 25 ರವರೆಗೆ ಶಾಲೆಯ ವಿದ್ಯಾರ್ಥಿಗಳು ಮತ್ತು…
ಖ್ಯಾತ ನಟ ಆಮೀರ್ ಖಾನ್ (Aamir Khan) ಮಗಳ ಮದುವೆ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಇರಾ ಮದುವೆ ಶಾಸ್ತ್ರಗಳು ನಡೆದಿದ್ದು, ಎರಡೂ ಕುಟುಂಬಗಳು ಭಾಗಿಯಾಗಿವೆ. ಇರಾ ಖಾನ್ (Ira Khan) ಮದುವೆ ಜನವರಿ 3ರಂದು ಅದ್ಧೂರಿಯಾಗಿ ನಡೆಯಲಿದ್ದು, ಅದಕ್ಕೂ ಮುನ್ನ ಮದುವೆ ಶಾಸ್ತ್ರಗಳು ನಡೆಯುತ್ತಿವೆ. ಈ ಕುರಿತಂತೆ ಸ್ವತಃ ಇರಾ ಖಾನ್ ಅವರೇ ಕೆಲ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದ್ದಾರೆ. ಅಕ್ಟೋಬರ್ 3ರಂದು ಇರಾ ಮತ್ತು ನೂಪುರ್ ಶಿಖಾರೆ ರಿಜಿಸ್ಟರ್ ಮದುವೆ (Marriage) ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಮನೆಯವರು ಅವಕಾಶ ಕೊಡದೇ ಸಾಂಪ್ರದಾಯಿಕವಾಗಿ ನೂಪುರ್ ಮನೆಯಲ್ಲಿ ಮದುವೆ ನಡೆಯಲಿದೆ. ಜನವರಿ ಅಥವಾ ಫೆಬ್ರವರಿಯಲ್ಲಿ ಹೊಸ ಬದುಕಿಗೆ ಕಾಲಿಡಲಿದ್ದಾರೆ ಎಂದು ಸ್ವತಃ ಆಮೀರ್ ಖಾನ್ ಹೇಳಿಕೊಂಡಿದ್ದರು. ಅದರಂತೆ ಜನವರಿ 3ಕ್ಕೆ ಮದುವೆ ಫಿಕ್ಸ್ ಆಗಿದೆ. https://ainlivenews.com/good-news-for-metro-commuters-trains-will-run-till-2-15-midnight-on-new-years-day/ ಕಳೆದ ವರ್ಷ ನವೆಂಬರ್ ನಲ್ಲಿ ನಿಶ್ಚಿತಾರ್ಥ (Engaged) ಮಾಡಿಕೊಂಡು, ತನ್ನ ಪ್ರಿಯಕರಿಗೆ ಉಂಗುರ ತೊಡಿಸಿ, ಮುತ್ತಿಡುವ ಮೂಲಕ…
ಬೆಂಗಳೂರು:- ವಿಕಲಚೇತನರಿಗೆ ಬಿಎಂಟಿಸಿ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ಸಾರಿಗೆ ಇಲಾಖೆ ನಿರ್ದೇಶನದಂತೆ 2024 ರ ಅವದಿಗೆ ವಿಕಲಚೇತನರಿಗೆ ರಿಯಾಯಿತಿ ದರದಲ್ಲಿ ಪಾಸ್ ವಿತರಣೆ ಮಾಡಲು ಸಜ್ಜಾಗಿದೆ. ಒಂದು ವರ್ಷಕ್ಕೆ 660 ರೂ ದರವನ್ನು ಬಿಎಂಟಿಸಿ ನಿಗದಿ ಮಾಡಿದೆ. ಡಿಸೆಂಬರ್ 29 ರಿಂದ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. https://ainlivenews.com/good-news-for-metro-commuters-trains-will-run-till-2-15-midnight-on-new-years-day/ ಅಗತ್ಯ ಇರುವ ನಿಲ್ದಾಣ ಆಯ್ಕೆ ಮೂಲಕ ಸೇವಾಸಿಂಧು ಪೂರ್ಟಲ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ ಒಂದು ವರ್ಷವಿಡಿ ವಿಲಕನಚೇತನರಿಗೆ ರಿಯಾಯಿತಿ ದರದ ಪಾಸ್ BMTC ನೀಡಲಿದೆ. ನೂತನ ಪಾಸ್ ಅರ್ಜಿ ಸಲ್ಲಿಸಲು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇನ್ನುಳಿದಂತೆ ಪಾಸ್ ನವೀಕರಣಕ್ಕೆ ಅರ್ಜಿ ಸಲ್ಲಿಸದರೆ ನಗರದ 12 ಕಡೆ ಪಾಸ್ ಲಭ್ಯವಾಗಿದೆ.
ಬೆಂಗಳೂರು: ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವುದು ನಮ್ಮ ಉದ್ದೇಶ. ಪ್ರತಿಯೊಂದು ಕುಟುಂಬದ ಹೆಣ್ಣುಮಕ್ಕಳು ನಮ್ಮ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭಾವನೆ ಮೇಲೆ ರಾಜಕಾರಣ ಮಾಡುತ್ತಿದ್ದರೆ, ನಾವು ಜನರ ಬದುಕಿನ ಬಗ್ಗೆ ರಾಜಕಾರಣ ಮಾಡುತ್ತಿದ್ದೇವೆ. ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವುದು ನಮ್ಮ ಉದ್ದೇಶ. ಪ್ರತಿಯೊಂದು ಕುಟುಂಬದ ಹೆಣ್ಣುಮಕ್ಕಳು ನಮ್ಮ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ನನ್ನ 40 ವರ್ಷಗಳ ರಾಜಕಾರಣದಲ್ಲಿ ಇಂತಹ ಅವಕಾಶ, ಭಾಗ್ಯ ದೊರಕಿರಲಿಲ್ಲ. ನುಡಿದಂತೆ ನಡೆದಿದ್ದೇವೆ, ಇದನ್ನು ಕಾರ್ಯಕರ್ತರು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು. ಈ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ನೆಲೆಯೂರುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷ. https://ainlivenews.com/good-news-for-metro-commuters-trains-will-run-till-2-15-midnight-on-new-years-day/ ಈ ದೇಶದ ಇತಿಹಾಸ, ಅಭಿವೃದ್ಧಿ ಪರ್ವ ಬರೆದದ್ದು ನಮ್ಮ ಹೆಗ್ಗಳಿಕೆ. ಅನ್ಯರು ಏನು ಬೇಕಾದರೂ ಹೇಳಬಹುದು, ಆದರೆ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು, ಅದನ್ನು ಅಭಿವೃದ್ದಿಯ ಪಥದಲ್ಲಿ ಕೊಂಡೊಯ್ದದ್ದು ಕಾಂಗ್ರೆಸ್. ನಿರ್ಲಕ್ಷಿತ ಸಮುದಾಯಕ್ಕೆ ಧ್ವನಿ, ವಿದ್ಯಾಭ್ಯಾಸ, ಆರ್ಥಿಕ…
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದೆ. ಕನ್ನಡ ಹೋರಾಟಗಾರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು (Kuvempu) ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದಿದ್ದಾರೆ. https://ainlivenews.com/what-is-the-warning-given-by-the-kannada-organizations-while-the-capital-bangalore-is-locked/ ನಾವು ಕನ್ನಡದ ಅನುಷ್ಠಾನಕ್ಕಾಗಿ ವಿಧೇಯಕ ಜಾರಿಗೊಳಿಸಿದ್ದೆವು. ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು, ಕನ್ನಡನಾಡಿನಲ್ಲಿ ಕನ್ನಡದ ಅನುಷ್ಠಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಈಗ ಕಾನೂನೂ ಮಾಡದಿದ್ದರೆ ನಮ್ಮ ಮಕ್ಕಳಿಗೆ…
ಮೈಸೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಸ್ತೆಗೆ (Bengaluru Mysuru Expressway) ಸಿದ್ದರಾಮಯ್ಯ ಇಷ್ಟು ಅನುದಾನ ಕೊಟ್ಟಿದ್ದೀನಿ ಅಂತ ಹೇಳಿಬಿಡಲಿ, ಅವರ ಹೆಸರನ್ನೇ ರಸ್ತೆಗೆ ಇಡೋಣ. ಬೇಕಿದ್ದರೆ ಸಿದ್ದರಾಮಯ್ಯ-ಮಹದೇವಪ್ಪ ಜೋಡಿ ರಸ್ತೆ ಅಂತಾನೇ ನಾಮಕರಣ ಮಾಡೋಣ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಕ್ಸ್‌ಪ್ರೆಸ್‌ವೇ ನಿರ್ಮಾಣ ಯೋಜನೆಗೆ 8,500 ಕೋಟಿ ರೂ. ಖರ್ಚಾಗಿದೆ. ಅದರಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಮಹದೇವಪ್ಪ (HC Mahadevappa) ಅವರು ಎಂಟುವರೆ ರೂಪಾಯಿಯನ್ನೂ ಕೊಟ್ಟಿಲ್ಲ. ಅವರು ಇಷ್ಟು ಕೊಟ್ಟಿದ್ದೀನಿ ಅಂತ ಹೇಳಿದ್ರೆ ರಸ್ತೆಗೆ ಅವರ ಹೆಸರನ್ನೇ ಇಡೋಣ ಎಂದು ಕುಟುಕಿದ್ದಾರೆ. ಎಕ್ಸ್‌ಪ್ರೆಸ್‌ವೇ ಹೆದ್ದಾರಿ ಆರಂಭವಾಗುವುದಕ್ಕೂ ಮುಂಚಿನಿಂದಲೂ ಕ್ರೆಡಿಟ್ ವಾರ್ ನಡೆಯುತ್ತಿದೆ. ಈ ವಿಚಾರದಲ್ಲಿ ಇತ್ತೀಚೆಗಷ್ಟೇ ಸಿಎಂ ವಿರುದ್ಧ ಸಿಂಹ ವಾಗ್ದಾಳಿ ನಡೆಸಿದ್ದರು. https://ainlivenews.com/what-is-the-warning-given-by-the-kannada-organizations-while-the-capital-bangalore-is-locked/ ಯಾರು ಬುರುಡೆ ಬಿಡುತ್ತಿದ್ದಾರೆ, ಖಾಲಿ ಡಬ್ಬ ಅಲ್ಲಾಡಿಸುತ್ತಿದ್ದಾರೆ ಎಂಬುದು ಆ ರಸ್ತೆಯಲ್ಲಿ ಓಡಾಡುತ್ತಿರುವ ಜನರಿಗೆ ಗೊತ್ತು. ರಸ್ತೆಯಲ್ಲಿ ನೀರು ತುಂಬಿದ್ದಾಗ, ಅಂಡರ್ ಪಾಸ್‌ನಲ್ಲಿ ನೀರು ತುಂಬಿದಾಗ ಬೈಯ್ದಿದ್ದು…