Author: AIN Author

ಬೆಂಗಳೂರು: ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ಮುಂದೂಡಿದೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿರುವ ತಡೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಸಿಬಿಐ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಸಿಬಿಐ ತನಿಖೆಗೆ ಸರಕಾರ ಶಿಫಾರಸು ಮಾಡಿದ್ದನ್ನು ಡಿಕೆ ಶಿವಕುಮಾರ್​​ ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಕರ್ನಾಟಕದ ಹೈಕೋರ್ಟ್ ವಿಭಾಗೀಯ ಪೀಠ ಸಿಬಿಐ ತನಿಖೆಗ ತಡೆ ನೀಡಿತ್ತು. ಹೈಕೋರ್ಟ್ ತಡೆಯಾಜ್ಞೆ ಆದೇಶ ಪ್ರಶ್ನಿಸಿ ಸಿಬಿಐ, ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್, ನವೆಂಬರ್ 10ಕ್ಕೆ ಮುಂದೂಡಿದ್ದಾರೆ.

Read More

ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ಪಿಜಿಗಳ ಮಾಲೀಕರು ಫುಲ್ ಅಲರ್ಟ್ ಆಗಿದ್ದಾರೆ. ನಗರದಲ್ಲಿ ವೈರಲ್ ಫಿವರ್‌ಗಳು ಹೆಚ್ಚಾಗುತ್ತಿವೆ. ಹೀಗಾಗಿ ಬೇರೆ ಬೇರೆ ಕಡೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಿಜಿಗಳಿಗೆ ಬರೋ ಹಿನ್ನೆಲೆ ಸೋಂಕು ತಡೆಗೆ ಪಿಜಿ ಅಸೋಸಿಯೇಷನ್ ಪಣತೊಟ್ಟಿದೆ. ಪಿಜಿಗಳಲ್ಲಿ ಆದಷ್ಟು ಮಾಸ್ಕ್ ಬಳಸುವಂತೆ ಪಿಜಿ ಮಾಲೀಕರಿಗೆ ಪಿಜಿ ಅಸೋಸಿಯೇಷನ್ ಸೂಚಿಸಿದ್ದಾರೆ. ಇನ್ನು, ಈಗಾಗಲೇ ಬೆಂಗಳೂರಿನ ಪ್ರತಿಯೊಂದು ಪಿಜಿಗಳ ಸ್ವಚ್ಛತಾ ಕಾರ್ಯ ಕೂಡ ಆರಂಭವಾಗಿದ್ದು, ಸೊಳ್ಳೆ ಕಡಿತಾ ತಪ್ಪಿಸಿಕೊಳ್ಳಲು ಪ್ರತಿಯೊಬ್ಬರಿಗೂ ಸೊಳ್ಳೆ ಪರದೆ ಒದಗಿಸಲು ಪಿಜಿ ಮಾಲೀಕರಿಗೆ, ಪಿಜಿ ಅಸೋಸಿಯೇಷನ್ ಸೂಚಿಸಿದ್ದಾರೆ. ಝೀಕಾ ಸೋಂಕಿನ ಲಕ್ಷಣಗಳು 2 ರಿಂದ 7 ದಿನಗಳವರೆಗೆ ಜ್ವರ, ಕಣ್ಣು ಕೆಂಪಾಗುವುದು, ತಲೆನೋವು, ಚರ್ಮದ ಮೇಲೆ ದದ್ದು, ಮೈಕೈ ಹಾಗೂ ಕೀಲು ನೋವು ಝೀಕಾ ಸೋಂಕಿನ ಲಕ್ಷಣಗಳು. ಈ ಲಕ್ಷಣಗಳು ಕಂಡುಬಂದ ಪ್ರಕರಣಗಳಲ್ಲಿ ಸೀರಮ್‌ (ರಕ್ತ) ಮಾದರಿಯನ್ನು ಸಂಗ್ರಹಿಸಿ ಬೆಂಗಳೂರಿನ ರಾಷ್ಟ್ರೀಯ ವೈರಾಣು ಸಂಸ್ಥೆ (ಎನ್‌ಐವಿ)ಗೆ ಕಳುಹಿಸಬೇಕು.

Read More

ಗ್ಲಾಮರ್ ಪಾತ್ರಗಳ ಮೂಲಕ ಫೇಮಸ್ ಆಗಿರುವ ಎಸ್ತರ್ ನರೋನ್ಹಾ ನಿರ್ದೇಶಕಿಯಾಗಿ ಬಡ್ತಿ ಪಡೆದಿರುವುದು ಗೊತ್ತೇ ಇದೆ. ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್ ಟ್ರೈನ್’, ‘ಲಂಕೆ’ ಇನಾಮ್ದಾರ್ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಈ ಬ್ಯೂಟಿ ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ಡೈರೆಕ್ಟರ್ ಆಗಿ ಕ್ಯಾಪ್ ತೊಟ್ಟಿದ್ದಾರೆ. ನಿರ್ದೇಶನದ ಜೊತೆ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನರೋನ್ಹಾ ಹೊಸ ಕನಸ್ಸಿಗೆ ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ. ಈ ಬಗ್ಗೆ SRV ಥಿಯೇಟರ್ ನಲ್ಲಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನಟಿ ಎಸ್ತಾರ್ ನರೋನ್ಹಾ ಮಾತನಾಡಿ, ದಿ ವೆಕೆಂಟ್ ಹೌಸ್..ಹಾರರ್ ಸಿನಿಮಾವಲ್ಲ. ಇದೊಂದು ಖಾಲಿ ಮನೆ ಸುತ್ತಾ ಸಾಗುವ ಕಥೆ. ಈಗಿನ ಯೂತ್ ಗೆ ಬಹಳ ಕನೆಕ್ಟ್ ಆಗುವ ಸಿನಿಮಾವಿದು. ಪ್ರೀತಿ ಮತ್ತು ಎಮೋಷನ್ ಎರಡನ್ನು ಸೇರಿ ಎಣೆದ ಕಥೆ. ಡೈರೆಕ್ಷನ್ ಮಾಡಿದ್ದು ಖುಷಿ ಅನಿಸಿತು. ನನ್ನ ವಿಷನ್ ನ್ನು ನಾನು ಓಪನ್ ಆಗಿ ಹೇಳುವ ಸ್ವಾತಂತ್ರ…

Read More

ಮಂಡ್ಯ: ಮನೆ ನಿರ್ಮಾಣದ ಮೇಸ್ತ್ರಿಯೋರ್ವರನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಸಹ ಕೆಲಸಗಾರ ಕಬ್ಬನಹಳ್ಳಿಯ ರವಿ ಎಂಬ ವ್ಯಕ್ತಿಯೇ ಕೆಲಸ ನೀಡಿ, https://ainlivenews.com/supreme-ray-healing-centre-reiki-treatment/ ಅನ್ನಕ್ಕೆ ದಾರಿ ಮಾಡಿಕೊಟ್ಟಿದ್ದ ಮೇಸ್ತ್ರಿ ಮಂಟೇಸ್ವಾಮಿಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಇವರಿಬ್ಬರ ನಡುವೆ ಹಣದ ವಿಚಾರಕ್ಕೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಮನೆಯಲ್ಲಿದ್ದ ಮಂಟೇಸ್ವಾಮಿ ಅವರನ್ನು ಹೊರಗೆ ಮಾತುಕತೆಗೆಂದು ಕರೆದುಕೊಂಡು ಬಂದು ರವಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು: ಕೆಇಎ (KEA) ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್.ಡಿ. ಪಾಟೀಲ್‌ನನ್ನು (RD Patil) ಆದಷ್ಟು ಬೇಗ ಪೊಲೀಸರು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಪೊಲೀಸರ ನಿರ್ಲಕ್ಷ್ಯದಿಂದ ಆರ್.ಡಿ. ಪಾಟೀಲ್ ಎಸ್ಕೇಪ್ ಆಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಆರ್‌ಡಿ ಪಾಟೀಲ್ ಎಸ್ಕೇಪ್ ಪ್ರಕರಣದಲ್ಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಆರ್‌ಡಿ ಪಾಟೀಲ್ ಬಂಧನ ಮಾಡಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ತಪ್ಪಿಸಿಕೊಂಡು ಹೋಗಿರೋ ಬಗ್ಗೆ ಮಾಹಿತಿ ಇದೆ. ಪೊಲೀಸರು ಅವರನ್ನು ಅರೆಸ್ಟ್ ಮಾಡಿಕೊಂಡು ಬರುತ್ತಾರೆ. ಒಂದು ದಿನ ತಪ್ಪಿಸಿಕೊಂಡು ಹೋಗಬಹುದು. ಯಾರಾದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿ ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಈಗಾಗಲೇ ಆರ್‌ಡಿ ಪಾಟೀಲ್ ಮೇಲೆ ಕೇಸ್‌ಗಳು ಇವೆ. ಪಿಎಸ್‌ಐ (PSI) ಕೇಸ್‌ನಲ್ಲೂ ಅವರ ಮೇಲೆ ಕೇಸ್ ಇದೆ. ಕೆಇಎ ಕೇಸ್‌ನಲ್ಲಿ ಇದ್ದಾರೆ ಅಂದರೆ ನಮಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸಾಕ್ಷಿ ಆಧಾರಗಳು ಸಿಗುತ್ತವೆ. ಹೀಗಾಗಿ ನಾವು…

Read More

ಬೆಂಗಳೂರು:  ಅಲ್ಲಿ ಬ್ರೋಕರ್ ಗಳ್ದೇ ಆಟ.. ಅವರು ಫಿಕ್ಸ್ ಮಾಡಿದ್ದೇ ರೇಟ್ . ಅವರ ಆಟಕ್ಕೆ ಅಲ್ಲಿನ ಅಧಿಕಾರಿಗಳೇ ಸಪೋರ್ಟ್ ಇದರಿಂದ ಜಿಲ್ಲಾಡಳಿತ ಅಂಗಳದಲ್ಲಿ ನಿತ್ಯವೂ ಕಿರಿಕಿರಿ. ಇದೆಕ್ಕೆಲ್ಲಾ ಬ್ರೇಕ್ ಹಾಕಬೇಕು ಅಂತ ಬೆಂಗಳೂರು ಜಿಲ್ಲಾಡಳಿತ ಕಚೇರಿಯ ಎಲ್ಲಾ ವಿಭಾಗಗಳು ಕಾರ್ಯವೈಖರಿ ಬದಲಾಗಲಿದೆ.ಹೌದು ನಗರದ ಭ್ರಷ್ಟ ಕೂಪವಾಗಿರೋ ಜಿಲ್ಲಾಡಳಿತ ಇನ್ಮೇಲೆ ಕಂಪ್ಯೂಟರ್ ಕರಣ ಆಗ್ತಿದೆ.. ಬೆಂಗಳೂರು ನಗರ ಕಂದಾಯ ಇಲಾಖೆ ಆವರಣದಲ್ಲಿ ಬ್ರೋಕರ್ ಗಳ ಹಾವಳಿ ಹೆಚ್ಚಾಗಿದೆ ಅನ್ನೋದು ಇವತ್ತು ನಿನ್ನೆಯ್ದಲ್ಲ. ಇದಕ್ಕೆ ಬ್ರೇಕ್ ಹಾಕಬೇಕು ಅಂತ ಬೆಂಗಳೂರು ನಗರ ಡಿಸಿ ಕೆಎ ದಯಾನಂದ್ ಇದೀಗ ಹೆಜ್ಜೆ ಇಟ್ಟಿದ್ದಾರೆ. ಕಂದಾಯ ಇಲಾಖೆಯಲ್ಲಿ ಹೊಸ ವ್ಯವಸ್ಥೆಗೆ ಒಗ್ಗಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇ ಆಡಳಿತ ಮಾಡಿದೆ. ಈ ಮೊದಲು ಕಡತಗಳು ತಿಂಗಳುಗಟ್ಟಲೇ ವಿಲೇವಾರಿ ಆಗದೆ ಕಚೇರಿಗೆ ಸಾರ್ವಜನಿಕರು ಅಲೆದಾಡಬೇಕಿದೆ ಎಂಬುದು ನಾಗರಿಕರ ಪ್ರಮುಖ ತಗಾದೆ ಇತ್ತು. ಇದಕ್ಕೆ ಕಡಿವಾಣ ಹಾಕಿ ಕಡತ ವಿಲೇವಾರಿಯಲ್ಲಿ ತ್ವರಿತ ಹಾಗೂ ಪಾರದರ್ಶಕ ವ್ಯವಸ್ಥೆ ತರಬಯಸಲು ಎಲ್ಲಾ…

Read More

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ವಿಳಂಬವಾಗುತ್ತಿರುವುದು ಮತ್ತು ಆರ್ಥಿಕ‌ ಇಲಾಖೆ ಸೂಚನೆ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ತಿಂಗಳದ್ದು ಸುಮಾರು ಒಂದು ಕೋಟಿ ಹತ್ತು ಲಕ್ಷ ಜನರಿಗೆ ಸರ್ಕಾರದಿಂದ ಹಣ ಬಿಡುಗಡೆ ಆಗಿದೆ. ಕೆವೈಸಿ ತೊಂದರೆ, ತಾಂತ್ರಿಕ ತೊಂದರೆ ಆಗಿದ್ದರಿಂದ ಹಣ ವರ್ಗಾವಣೆಗೆ ತೊಂದರೆ ಆಗಿದೆ. ಸರ್ಕಾರದಿಂದ ಹಣ ಬರುವುದು ಕೂಡ ಲೇಟ್ ಆಗ್ತಿದೆ. ತಡವಾದರೂ ಒಮ್ಮೆಯೇ ನಾಲ್ಕು ಸಾವಿರ ಹಣ ಜಮಾ ಆಗುತ್ತದೆ. ಅಗಸ್ಟ್ 30ರ‌ ನಂತರ ನೋಂದಣಿ ಮಾಡಿಸಿದವರಿಗೆ ಒಂದು ಕಂತಿನ ಹಣ ಬಂದಿದೆ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ. ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಇಲಾಖೆಯಿಂದ ಆಗ್ತಿದೆ. ಬೆಂಗಳೂರಿನ ಬಾಲ ಭವನದಲ್ಲಿ ಪ್ರತಿಯೊಂದು ಜಿಲ್ಲೆಯ ಸಿಡಿಪಿಒ ಕರೆದು ಕ್ಲಿಯರ್ ಮಾಡುತ್ತಿದ್ದೇವೆ. ಆರ್ಥಿಕ ಇಲಾಖೆಯ ಸುತ್ತೋಲೆಯನ್ನು ಸೋಮವಾರ ನೋಡಿದ್ದೇನೆ. ಇದು ಬಹಳ ಒಳ್ಳೆಯದು, ಜನರಿಗೆ ಹಣ ಯಾವಾಗ ಬರುತ್ತೆ ಅಂತಾ ಗೊಂದಲವಿತ್ತು. 15ರಿಂದ 20ರ ಒಳಗೆ ಗೃಹಲಕ್ಷ್ಮಿ ಹಣ ಬರುತ್ತೆ ಅನ್ನೋ ವಿಶ್ವಾಸವಿರಲಿ.…

Read More

ಧಾರವಾಡ: ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದರ ಜೊತೆಗೆ ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿಯೂ ಅಭಾವ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಲಪ್ರಭಾ ಜಲಾಶಯದಿಂದ 1 ಟಿಎಂಸಿ ನೀರು ಧಾರವಾಡ ಜಿಲ್ಲೆಗೆ ಬಿಡುಗಡೆಯಾಗಿದ್ದು, ಇಂದಿನಿಂದ 9 ದಿನಗಳ ಕಾಲ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಯಲಿದೆ. ಧಾರವಾಡ ಜಿಲ್ಲೆಯ ಕುಂದಗೋಳ, ಅಣ್ಣಿಗೇರಿ, ನವಲಗುಂದ ಹಾಗೂ ಹುಬ್ಬಳ್ಳಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಾಕಷ್ಟು ಸಮಸ್ಯೆ ಎದುರಾಗಿದೆ. ಸದ್ಯ ಬಿಡುಗಡೆಯಾಗುತ್ತಿರುವ 1 ಟಿಎಂಸಿ ನೀರಿನಿಂದ ಈ ನೀರಿನ ಅಭಾವ ಇರುವ ಪ್ರದೇಶಗಳಲ್ಲಿ ಕೆರೆ ತುಂಬಿಸಿಕೊಳ್ಳಲು ಅನುಕೂಲವಾಗಲಿದೆ. https://ainlivenews.com/supreme-ray-healing-centre-reiki-treatment/ ಈ ಹಿಂದೆ ಮಲಪ್ರಭಾ ನೀರಿನಿಂದ ಜಿಲ್ಲೆಯ 81 ಕೆರೆಗಳನ್ನು ತುಂಬಿಸಲಾಗಿತ್ತು. ಅದರಲ್ಲಿ ಸುಮಾರು 50 ಕೆರೆಗಳಲ್ಲಿ ಅರ್ಧದಷ್ಟು ನೀರು ಇನ್ನೂ ಇದೆ. 32 ಕೆರೆಗಳು ಅರ್ಧಕ್ಕಿಂತಲೂ ಕಡಿಮೆ ನೀರು ಹೊಂದಿವೆ. ಅಂತ ಕೆರೆಗಳಿಗೆ ನೀರು ತುಂಬಿಸಲು ಈಗ ಆದ್ಯತೆ ನೀಡಲಾಗಿದೆ. ಇದರಿಂದ 5 ರಿಂದ 6 ತಿಂಗಳವರೆಗೆ ನೀರಿನ…

Read More

ರಾಯಚೂರು: ಹಠಾತ್ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ರಾಯಚೂರು (Raichuru) ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ಜನರಲ್ ಸರ್ಜನ್ ಡಾ. ಚಂದ್ರಶೇಖರ ಮಾದಿನೂರು ಸಾವನ್ನಪ್ಪಿರುವ ವೈದ್ಯ. https://ainlivenews.com/supreme-ray-healing-centre-reiki-treatment/ ಎಂದಿನಂತೆ ರೋಗಿಗಳನ್ನ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಿದ್ದರು. ಸ್ವಲ್ಪ ಒತ್ತಡ ಎನ್ನಿಸಿದ್ದರಿಂದ ವಿಶ್ರಾಂತಿ ಪಡೆಯಲು ಮನೆಗೆ ತೆರಳಲು ಮುಂದಾದಾಗ ಮೆಟ್ಟಿಲು ಹತ್ತುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಮೇಲ್ಮಹಡಿಯಲ್ಲೇ ಮನೆಯಿದ್ದಿದುದರಿಂದ ಮೆಟ್ಟಿಲು ಹತ್ತಿ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಠಾತ್ ಹೃದಯಾಘಾತದಿಂದ ಸಾವು ಸಂಭವಿಸಿದ್ದು ಇಡೀ ಆಸ್ಪತ್ರೆಯಲ್ಲಿ ನೀರವ ಮೌನ ಆವರಿಸಿದೆ.

Read More

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ​ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮ ಜಿಲ್ಲೆಯ ಒಂದಷ್ಟು ಸಮಸ್ಯೆ ಇದೆ, ಬಗೆಹರಿಸಿಕೊಳ್ಳುತ್ತೇವೆ. ರಾಜಕೀಯವಾಗಿ ಎಲ್ಲಾ ಜಿಲ್ಲೆಗಳಲ್ಲೂ ಈ ಸಮಸ್ಯೆ ಇದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಬೆಳಗಾವಿಯಲ್ಲಿ ಸಮಸ್ಯೆ ಇತ್ತು. ಈಗಲೂ ಸಮಸ್ಯೆ ಇದ್ದೇ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್​ ಹೇಳಿದರು. ರಾಜ್ಯ ಬಿಜೆಪಿ ನಾಯಕರಿಂದ ಬರ ಅಧ್ಯಯನ ಪ್ರವಾಸ ವಿಚಾರವಾಗಿ  ಮಾತನಾಡಿ ಕೇಂದ್ರವೇ ಅಧ್ಯಯನ ಮಾಡಿದೆ, ಇವರೇನು ಅಧ್ಯಯನ ಮಾಡುತ್ತಾರೆ? ನಾವು ಕೂಡ ಬರ ಅಧ್ಯಯನ ಮಾಡಿದ್ದೀವಲ್ಲ. ಬಿಜೆಪಿಯವರು ರಾಜಕೀಯಕ್ಕಾಗಿ ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ. ಕೇಂದ್ರ ತಂಡ ಅಧ್ಯಯನ ಮಾಡಿ ಹೋಗಿದೆ, ಆದರೆ ವರದಿ ನೀಡಿಲ್ಲ. ಮೊದಲು ಕೇಂದ್ರ ಸರ್ಕಾರದ ಬಳಿ ಚರ್ಚಿಸಿ ಅನುದಾನ ಕೊಡಿಸಲಿ. ಬರ ಅಧ್ಯಯನ ಮಾಡಬಾರದು ಅಂತಾ ನಾವು ಹೇಳಲು ಹೋಗಲ್ಲ. ಕೇಂದ್ರ ಸರ್ಕಾರದ ಬಳಿ 17,900 ಕೋಟಿ ರೂ. ಪರಿಹಾರ ಕೇಳಿದ್ದೇವೆ. 33,700 ಕೋಟಿ ನಷ್ಟವಾಗಿದೆ, ಅದನ್ನ ಮೊದಲು ಕೊಡಿಸಲಿ ಎಂದರು.

Read More