Author: AIN Author

ಬೆಂಗಳೂರು:- ಕರವೇ ನಾರಾಯಣಗೌಡರನ್ನು ರಿಲೀಸ್ ಮಾಡಬೇಕು ಇಲ್ಲವಾದರೆ ಬೆಂಗಳೂರು ಬಂದ್‌ಗೆ ಕರೆ ಕೊಡುವುದಾಗಿ ಕನ್ನಡಪರ ಸಂಘಟನೆಗಳು ಒಕ್ಕೊರಲಿನಿಂದ ಸರಕಾರಕ್ಕೆ ಎಚ್ಚರಿಕೆ ನೀಡಿವೆ. ಮತ್ತೂಂದೆಡೆ ವಾಟಾಳ್‌ ನಾಗರಾಜ್‌ ಅವರು, ಬಂಧಿತರ ಬಿಡುಗಡೆಗೆ 24 ಗಂಟೆಗಳ ಗಡುವು ನೀಡಿದ್ದಾರೆ. ವಸಂತನಗರದ ಕರ್ನಾಟಕ ಬ್ಯಾಡ್ಮಿಂಟನ್‌ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಖಂಡನಾ ಸಭೆಯಲ್ಲಿ 80ಕ್ಕೂ ಹೆಚ್ಚು ಕನ್ನಡಪರ ಸಂಘಟನೆ ಮುಖಂಡರು ಪಾಲ್ಗೊಂಡಿದ್ದು, ಅದರಲ್ಲಿ ಈ ನಿರ್ಧಾರವಾಗಿದೆ. ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ವಾಟಾಳ್‌ ನಾಗರಾಜ್‌, ಸಾ.ರಾ.ಗೋವಿಂದು ಸಹಿತ ಎಲ್ಲ ಹೋರಾಟಗಾರರ ಸಭೆ ಕರೆದು ಬೆಂಗಳೂರು ಬಂದ್‌ಗೆ ಕರೆ ಕೊಡುವ ಕಾಲ ಸನ್ನಿಹಿತ ಆಗುತ್ತದೆ ಎಂದು ಕರವೇ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಸರಕಾರಕ್ಕೆ ಎಚ್ಚರಿಕೆ ನೀಡಿದರು. ಬಂಧಿತ ಎಲ್ಲರನ್ನೂ ಬೇಷರತ್‌ ಆಗಿ ಬಿಡುಗಡೆ ಮಾಡಬೇಕು, ಕನ್ನಡಪರ ಹೋರಾಟಗಾರರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ಸರಕಾರ ಹಿಂಪಡೆದುಕೊಳ್ಳಬೇಕು ಎಂದು ಸಭೆಯಲ್ಲಿ ಒಕ್ಕೊರಲಿನಿಂದ ಮನವಿ ಮಾಡಲಾಯಿತು. ಫೆ.28ರ ಒಳಗೆ ವಾಣಿಜ್ಯ ಮಳಿಗೆಗಳ ನಾಮಫ‌ಲಕಗಳು ಕನ್ನಡದಲ್ಲಿ ಇರದಿದ್ದರೆ ಬೆಂಗಳೂರಿನಲ್ಲಿ ಎಲ್ಲ ಕನ್ನಡ ಸಂಘಟನೆಗಳೂ ಮತ್ತೆ ಬೀದಿಗೆ…

Read More

ಅಹಮದಾಬಾದ್‌:‌ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮಮಂದಿರದ (Ram Mandir in Uttar Pradesh’s Ayodhya) ಕಾಮಗಾರಿ ಅಂತಿಮ ಹಂತದಲ್ಲಿದ್ದು, ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ದೇಶದ ವಿವಿಧ ಭಾಗಗಳ ಜನರು ಅಯೋಧ್ಯೆಗೆ ತಮ್ಮ ಕೈಲಾದಷ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ. ಅಂತೆಯೇ ಇದೀಗ ಅಹಮದಾಬಾದ್‌ನ ಸಂಸ್ಥೆಯೊಂದು ದೇಗುಲಕ್ಕೆ ಉಡುಗೊರೆಯಾಗಿ ನೀಡಲೆಂದು ಮೆಗಾ ಡ್ರಮ್ (ದೊಡ್ಡ ನಗಾರಿ) ಅನ್ನು ಸಿದ್ಧಪಡಿಸಿದೆ. ಅಖಿಲ ಭಾರತ ದಗ್ಬರ್ ಸಮಾಜ ತಯಾರಿಸಿದ ಈ ವಿಶೇಷ ಡ್ರಮ್ (Mega Drum) ಬರೋಬ್ಬರಿ 450 ಕೆ.ಜಿ ತೂಗುತ್ತದೆ. ಇದನ್ನು 2024 ರ ಜನವರಿ 22 ರ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಅಯೋಧ್ಯೆಗೆ ತಲುಪಿಸುವ ಪ್ಲ್ಯಾನ್‌ ಕೂಡ ನಡೆಯುತ್ತಿದೆ. ಈ ಡ್ರಮ್‌ ಅಥವಾ ನಗಾರಿಯನ್ನು ಕೊಂಡೊಯ್ಯಲು ಸಂಸ್ಥೆಯು ಈಗಾಗಲೇ ಸಾಕಷ್ಟು ತಯಾರಿಗಳನ್ನು ಮಾಡಿಕೊಂಡಿದ್ದು, ಅದಕ್ಕಾಗಿಯೇ 700 ಕೆ.ಜಿ ತೂಕದ ವಿಶೇಷವಾದ ರಥವೊಂದನ್ನು (Power Steering Chariot) ಕೂಡ ರೆಡಿ ಮಾಡುತ್ತಿದೆ. https://ainlivenews.com/eat-these-foods-if-you-are-deficient-in-vitamin-d-in-winter/ ಈ ಕುರಿತು ದಗ್ಬರ್ ಸಮಾಜದ (Dagbar…

Read More

ಈರುಳ್ಳಿ ತಿನ್ನುವುದರಿಂದ ಹೃದಯ, ರಕ್ತದೊತ್ತಡ ಮತ್ತು ಇತರ ಸಮಸ್ಯೆಗಳಿಂದ ನಮ್ಮನ್ನು ರಕ್ಷಿ, ಆದರೆ ರಕ್ಷಿಸಿ ಕೊಳ್ಳಬಹುದು. ಅದನ್ನು ಅತಿಯಾಗಿ ಹಸಿ ಈರುಳ್ಳಿ ಸೇವಿಸಿದರೆ ಅದು ನಮ್ಮ ದೇಹಕ್ಕೆ ಹಾನಿಕಾರಕವಾಗಿದೆ ಮಧುಮೇಹ ಯಾರಾದರೂ ಮಧುಮೇಹ ಹೊಂದಿದ್ದರೆ ಅಥವಾ ಅದರ ಲಕ್ಷಣಗಳನ್ನು ಅನುಭವಿಸುತ್ತಿದ್ದರೆ, ಅವರು ಹಸಿ ಈರುಳ್ಳಿಯನ್ನು ಕಡಿಮೆ ತಿನ್ನಬೇಕು, ತಜ್ಞರ ಪ್ರಕಾರ, ಇದು ರಕ್ತದಲ್ಲಿನ ಸಕ್ಕರೆಯನ್ನು ಇನ್ನಷ್ಟು ಕಡಿಮೆ ಮಾಡುತ್ತದೆ. ನಿಮ್ಮ ಸಲಾಡ್‌ನಲ್ಲಿ ಹಸಿ ಈರುಳ್ಳಿಯನ್ನು ತಿನ್ನಲು ನೀವು ಬಯಸಿದರೆ, ಮೊದಲು ತಜ್ಞರನ್ನು ಸಂಪರ್ಕಿಸಿ. ಅಲ್ಲದೆ, ಅದನ್ನು ಸೇವಿಸಿದ ನಂತರ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಿ. ಗ್ಯಾಸ್ಟ್ರಿಕ್ ಗ್ಲೂಕೋಸ್ ಮತ್ತು ಫ್ರಕ್ಟೋಸ್ ಸೇರಿದಂತೆ ಈರುಳ್ಳಿಯಲ್ಲಿ ಅನೇಕ ಘಟಕಗಳು ಕಂಡುಬರುತ್ತವೆ ಮತ್ತು ಅವುಗಳನ್ನು ಅತಿಯಾಗಿ ಸೇವಿಸಿದರೆ, ಜಠರದುರಿತದ ಅಪಾಯವು ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಗ್ಯಾಸ್ಟ್ರಿಕ್ ಸಮಸ್ಯೆಗಳು ಹೆಚ್ಚಾಗುತ್ತವೆ. ಅಲ್ಲದೆ, ನಿಮಗೆ ಮಲಬದ್ಧತೆ ಇದ್ದರೆ, ಹಸಿ ಈರುಳ್ಳಿ ತಿನ್ನುವುದನ್ನು ತಪ್ಪಿಸಿ ಏಕೆಂದರೆ ಇದು ಫೈಬರ್ ಅಂಶವನ್ನು ಹೆಚ್ಚಿಸುತ್ತದೆ ಮತ್ತು ದೇಹದಲ್ಲಿ ಮಲಬದ್ಧತೆಯನ್ನು ಹೆಚ್ಚಿಸುತ್ತದೆ. ಜೀರ್ಣಕಾರಿ…

Read More

ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ಎಂಎಸ್.ವಿ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಅದ್ಧೂರಿ ವಾರ್ಷಿಕೋತ್ಸವ ನೆರವೇರಿತು. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಳಿಕ ಮಾತನಾಡಿದ ಅವರು, ಜಾಗತೀಕರಣ, ವಿಜ್ಞಾನ- ತಂತ್ರಜ್ಞಾನ ಬೆಳೆದಂತೆ ‘ಅಂಗೈಯಲ್ಲೇ ಪ್ರಪಂಚ ‘ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೊಬೈಲ್ ಎಂಬುದು ಆಧುನಿಕ ಯುಗದ ಬಹುದೊಡ್ಡ ಆವಿಷ್ಕಾರವೆನಿಸಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸಾಕಷ್ಟು ಜ್ಞಾನ ಸಂಪಾದನೆ ಮಾಡಬಹುದು. ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಸಾವು ಖಚಿತ. ನಮ್ಮ ಸ್ವಾರ್ಥ ಬದಿಗಿಟ್ಟು ಸಮಾಜಕ್ಕಾಗಿ ದುಡಿಯುವಂತಹ ವ್ಯಕ್ತಿಗಳಾಗಬೇಕು. ಸ್ವಾಮಿ ವಿವೇಕಾನಂದ, ಗೌತಮ ಬುದ್ಧ, ಮಹಾತ್ಮ ಗಾಂಧಿ, ಭಗತ್ ಸಿಂಗ್ ಅವರು ಈಗಲೂ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆಂದರೆ ಅದು ಅವರು ಸಮಾಜಕ್ಕೆ ಕೊಟ್ಟ ಕೊಡುಗೆಯಿಂದ ಮಾತ್ರ ಸಾಧ್ಯವಾಗಿದೆ. ಅಂತಹ ಸಮಾಜೋದ್ಧಾರಕ್ಕಾಗಿ ಶ್ರಮಿಸಿ ಜನರ ಮನಸ್ಸಲ್ಲಿ ಆಚಂದ್ರಾರ್ಕ ಸ್ಥಾಯಿಯಾಗಿ ಉಳಿಯುವಂತಹ ಸಾಧಕರು ನೀವಾಗಬೇಕು ಎಂದು ಹಿತವಚನ ನೀಡಿದರು. ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಎಂಎಸ್ ವಿ ಪಬ್ಲಿಕ್ ಶಾಲೆ ಸತತ 16…

Read More

ಬೆಂಗಳೂರು:- ಹೊಸವರ್ಷಾಚರಣೆಗೆ ನಗರದಾದ್ಯಂತ ಸಿದ್ಧತೆಗಳು ಜೋರಾಗಿಯೋ ನಡೆಯುತ್ತಿವೆ. ಡಿಸೆಂಬರ್ 31ರ ಮಧ್ಯರಾತ್ರಿ ನಗರದಲ್ಲಿ ಜನರ ಓಡಾಟ ಹೆಚ್ಚಿರುವ ಕಾರಣ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದಂದು ಜನ ಸಂಚಾರದ ಅನುಕೂಲಕ್ಕಾಗಿ ನೇರಳೆ ಮತ್ತು ಹಸಿರುವ ಎರಡೂ ಮಾರ್ಗಗಳಲ್ಲಿ ರೈಲು ಸೇವೆಯನ್ನು ವಿಸ್ತರಿಸುವುದಾಗಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಘೋಷಣೆ ಮಾಡಿದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್ ಹೊರತು ಪಡಿಸಿ ಎಲ್ಲಾ ಟರ್ಮಿನಲ್‌ ನಿಲ್ದಾಣಗಳಿಂದ ಜನವರಿ 1ರಂದು ಬೆಳಗ್ಗೆ 1.30ಕ್ಕೆ ಕೊನೆಯ ರೈಲು ಹೊರಡಲಿದೆ. ಆದರೆ ಮೆಜೆಸ್ಟಿಕ್‌ನಿಂದ ಅಂದು ಬೆಳಗ್ಗೆ 2 ಗಂಟೆಗೆ 15 ನಿಮಿಷಕ್ಕೆ ಕೊನೆಯ ರೈಲು ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. 15 ನಿಮಿಷಕ್ಕೊಮ್ಮೆ ರೈಲು ಸೇವೆ ಲಭ್ಯವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪೊಲೀಸ್ ಇಲಾಖೆಯಿಂದ ಬಂದಿರುವ ಸಲಹೆ ಮೇರೆಗೆ ಸಾರ್ವಜನಿಕರ ಸುರಕ್ಷತೆ ಹಾಗೂ ಭದ್ರತೆಯ ದೃಷ್ಟಿಯಿಂದ ಮಹಾತ್ಮಾ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನು ಡಿಸೆಂಬರ್ 31ರ ರಾತ್ರಿ 11 ಗಂಟೆಗೆ…

Read More

ಹುಬ್ಬಳ್ಳಿ: ಆತ ದೇಶದ ಪ್ರಖ್ಯಾತ ಮುಫ್ತಿ( ಮೌಲ್ವಿ) ದೇಶ ವಿದೇಶಗಳಲ್ಲಿ ಆತ ಭಾಷಣ ಮಾಡ್ತಿದ್ದ.ಇದೀಗ ಆ ಮುಫ್ತಿ ( ಮೌಲ್ವಿಯ) ಬಂಧನವಾಗಿದೆ..ಅದು ಯುವತಿಯೊಬ್ಬರ ಮೇಲೆ ಅತ್ಯಾಚಾರ ಮಾಡಿರೋ ಕೇಸ್ ಗೆ ಸಂಭಂದಿಸಿದಂತೆ.ಮದಾರಾಸಾದಲ್ಲಿ ಶಿಕ್ಷಕಿಯಾದ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ ಮೌಲ್ವಿಯನ್ನ ಬಂಧಿಸಲಾಗಿದೆ.ಹುಬ್ಬಳ್ಳಿ ಪೊಲೀಸರು ಮಹಾರಾಷ್ಟ್ರದಲ್ಲಿ ಆತನನ್ನ ಬಂಧಿಸಿದ್ದಾರೆ.ಏನಿದು ಮೌಲ್ವಿಯ ಬಂಧನ,ಹುಬ್ಬಳ್ಳಿಗೆ ಸಂಭಂದ ಏನೂ ಅಂತೀರಾ ಈ ಸ್ಟೋರಿ ನೋಡಿ.. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೂಲೀಸರು,ಮಧ್ಯಪ್ರದೇಶದಲ್ಲಿ ಅಡಗಿ ಕುಳಿತಿದ್ದ ದೇಶದ ಖ್ಯಾತ ಮುಫ್ತಿಯೊಬ್ಬನನ್ನು ಬಂಧಿಸಿದ್ದಾರೆ.ಗುಲಾಮ ಜಿಲಾನಿ ಅಜಹರಿ ಎಂಬ ಮುಫ್ತಿಯನ್ನು ಖಂಡ್ವಾ ಎಂಬಲ್ಲಿ ಬಂಧಿಸಿ, ಹುಬ್ಬಳ್ಳಿಗೆ ಕರೆತರುತ್ತಿದ್ದಾರೆ.ಎಸ್ ಹುಬ್ಬಳ್ಳಿ ಪೊಲೀಸರಿಂದ ಬಂಧಿತನಾಗಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿ, ಆತನ ಮದರಸಾದಲ್ಲಿ ಶಿಕ್ಷಕಿಯಾಗಿದ್ದ ಹುಬ್ಬಳ್ಳಿ ಮೂಲದ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಬಲಾತ್ಕಾರ ಮಾಡಿದ ಆರೋಪ ಕೇಳಿ ಬಂದಿದೆ. ಮದುವೆ ಮಾಡಿಕೊಳ್ಳುವದಾಗಿ ಹೇಳಿ ಎರಡು ವರ್ಷದ ಅವಧಿಯಲ್ಲಿ ಮೇಲಿಂದ ಮೇಲೆ ಬಲಾತ್ಕಾರ ಮಾಡಿದ್ದಾನೆಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಎರಡು ವರ್ಷದ…

Read More

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕೆಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ಕೋರ್ಟ್ 6 ಕೋಟಿ 96 ಲಕ್ಷದ 70 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದರೆ 6 ತಿಂಗಳ ಸೆರೆವಾಸ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಆದೇಶಿಸಲಾಗಿದೆ. ಇಂಥ ಹಿನ್ನೆಲೆಯಿರುವ ಸಚಿವರು ಶಿಕ್ಷಣ ಇಲಾಖೆಗೆ ಕಪ್ಪುಚುಕ್ಕಿ. ಅವರು ಈ ಇಲಾಖೆಯನ್ನು ನಿಭಾಯಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ. ಮಧು ಬಂಗಾರಪ್ಪರವರು ತಮ್ಮ ಆಕಾಶ್ ಆಡಿಯೋ ಸಂಸ್ಥೆಯಿಂದ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ 6 ಕೋಟಿ 96 ಲಕ್ಷದ 60 ಸಾವಿರ ರೂ. ಸಂದಾಯ ಮಾಡಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಹಣವನ್ನು ಪಾವತಿಸಲು ಚೆಕ್ ನೀಡಿದ್ದು, ಅದು ಬೌನ್ಸ್ ಆಗಿತ್ತು. ಈಗ ಒಟ್ಟು ಮೊತ್ತದಲ್ಲಿ 6 ಕೋಟಿ 96 ಲಕ್ಷದ 60 ಸಾವಿರ…

Read More

ಬೆಂಗಳೂರು:- ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ. ಇದು ಇಂದಿನಿಂದಲೇ ಜಾರಿಯಾಗಲಿದೆ. ಡಿಸ್ಮಿಸ್, ಸಸ್ಪೆಂಡ್, ಐದು ಸಾವಿರ ರುಪಾಯಿ ದಂಡ ಕಟ್ಟಬೇಕಿದ್ದ, ಇನ್ಕ್ರಿಮೆಂಟ್​ ಕಟ್ ಆಗುವ ಭಯದಲ್ಲಿದ್ದ 6960 ನೌಕರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತಮ್ಮ ಮಾತು ಕೇಳಲಿಲ್ಲ, ಸಣ್ಣಪುಟ್ಟ ತಪ್ಪುಗಳಿಗೂ ಶಿಕ್ಷೆಗೆ ಒಳಗಾಗಿದ್ದ ಡ್ರೈವರ್ ಮತ್ತು ಕಂಡಕ್ಟರ್​ಗಳ ಕೇಸ್​ಗಳು ವಜಾ ಆಗಿವೆ. ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, ಗೈರು ಹಾಜರಿ, ಸಂಚಾರಿ ನಿಯಮ ಉಲ್ಲಂಘನೆ, ಬಸ್​ಗಳನ್ನು ಎಲ್ಲಂದರಲ್ಲಿ ನಿಲ್ಲಿಸುವುದು, ಡೋರ್ ಹಾಕದೆ ಬಸ್ ಚಾಲನೆ ಮಾಡಿದ್ದು, ಯೂನಿಫಾರಂ ಹಾಕದೆ ಡ್ಯೂಟಿ ಮಾಡಿರುವುದು ಇಂತಹ ಎಲ್ಲಾ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿದ್ದ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳನ್ನು ಬಿಎಂಟಿಸಿ ವಜಾ ಮಾಡಿದೆ.

Read More

ಬೆಂಗಳೂರು:- ರಾಜ್ಯದಲ್ಲಿ ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಬೇಕು ಎಂದು ಕೇಂದ್ರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ. ಕೊಬ್ಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್‌ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. ಏರಿಕೆ ಮಾಡಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದ್ದಾರೆ ಡಿಸೆಂಬರ್ 21ರಂದು ನವದೆಹಲಿಯಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೆಗೌಡರ ನೇತೃತ್ವದಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೊಬ್ಬರಿ ರೈತರ ಸಂಕಷ್ಟ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮಾನ್ಯ ಪ್ರಧಾನಿಗಳು ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದರು ಎಂದಿದ್ದಾರೆ ಅವರು.

Read More

ಮೈಸೂರು: ಉತ್ತರ ಪ್ರದೇಶದಲ್ಲಿರುವ (Uttar Pradesh) ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮ ಮಂದಿರ (Sri Rama Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಕೋಟ್ಯಾನುಕೋಟಿ ರಾಮನ ಭಕ್ತರು ರಾಮನಾಮ ಜಪಿಸುತ್ತಿದ್ದಾರೆ. ಈ ನಡುವೆ ಅಯೋಧ್ಯೆಯಲ್ಲಿ ಪ್ರತಿಷ್ಟಾಪನೆಗೊಳಿಸಲು ಕಳುಹಿಸಿರುವ ಬಾಲ ಶ್ರೀರಾಮನ ಮೂರ್ತಿ ಕೆತ್ತನೆಗೆ ಬಳಸಿರುವುದು ಮೈಸೂರಿನ ಕೃಷ್ಣ ಶಿಲೆ (Mysuru Krishna Stone) ಎಂಬ ವೀಶೇಷ ಸಂಗತಿಯೊಂದು ಬೆಳಕಿಗೆ ಬಂದಿದೆ. https://ainlivenews.com/eat-these-foods-if-you-are-deficient-in-vitamin-d-in-winter/ ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಜಮೀನಿನಲ್ಲಿ 6 ತಿಂಗಳ ಹಿಂದೆ ಸಿಕ್ಕ ಬೃಹತ್ ಕೃಷ್ಣಶಿಲೆಯಲ್ಲೇ ಬಾಲ ರಾಮನ ಮೂರ್ತಿ (Sri Rama Idol) ಕೆತ್ತಲಾಗಿದೆ. ಅಯೋಧ್ಯೆಯ ಟ್ರಸ್ಟಿಗಳು ಈ ಸ್ಥಳಕ್ಕೆ ಬಂದು ಕಲ್ಲು ಪರೀಕ್ಷೆ ಮಾಡಿ ಕಲ್ಲನ್ನು ತೆಗೆದುಕೊಂಡು ಹೋಗಿದ್ದಾರೆ. ಇಲ್ಲಿನ ಮಣ್ಣನ್ನು ಕೂಡ ಕುಂಭದಲ್ಲಿ ತೆಗೆದು ಕೊಂಡು ಹೋಗಿ ರಾಮ ಮಂದಿರದ ಗರ್ಭಗುಡಿಯ ಒಳಗಿಟ್ಟಿದ್ದಾರೆ ಎಂದು ಕೃಷ್ಣಶಿಲೆ ಅರ್ಪಿಸಿದ ಗುತ್ತಿಗೆದಾರ ಶ್ರೀನಿವಾಸ್‌ ತಿಳಿಸಿದ್ದಾರೆ. ಆಯ್ಕೆಯಾಗುತ್ತಾ ಕರ್ನಾಟಕದ ಬಾಲರಾಮ ಮೂರ್ತಿ? ಜನವರಿ 22ರಂದು ಶ್ರೀರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಬಾಲ ಶ್ರೀರಾಮ ಮೂರ್ತಿ ಆಯ್ಕೆ…

Read More