Author: AIN Author

ಬೆಂಗಳೂರು: ಹಾಸನಾಂಬೆ (Hasanamba) ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ (Public Viewing) ಐದನೇ ದಿನವಾದ ಇಂದು (ಮಂಗಳವಾರ) ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ ಶಾಸಕರು ಸಾಥ್ ನೀಡಲಿದ್ದಾರೆ. ನ.2ರಂದು ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆದಿದ್ದು, ನ.3ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಾರ್ವಜನಿಕ ದರ್ಶನದ ಐದನೇ ದಿನವಾಗಿದ್ದು, ಮಂಗಳವಾರ ಶಕ್ತಿ ದೇವತೆಯ ದರ್ಶನ ಪಡೆಯಲು ಸಿಎಂ ಆಗಮಿಸುತ್ತಿದ್ದಾರೆ.

Read More

ಹುಣಸೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹುಣಸೂರು-೨ ಯೋಜನಾ ಕಚೇರಿ ವ್ಯಾಪ್ತಿಯ ಬಿಳಿಕೆರೆ ಹೋಬಳಿ ಹಂದನಹಳ್ಳಿಯಲ್ಲಿ ಒಕ್ಕೂಟ ಪದಗ್ರಹಣ ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಎಚ್.ಎಲ್.ಮುರಳಿಧರ್ ಮಾತನಾಡಿ ಧರ್ಮಾಧಿಕಾರಿ ಡಾ.ವೀರೇಂದ್ರಹೆಗ್ಗಡೆಯವರು ಗ್ರಾಮೀಣ ಭಾಗದ ಮಹಿಳೆಯರಲ್ಲಿ ಸ್ವಾವಲಂಬನೆ, ಸ್ವಾಭಿಮಾನ, ಸಂಘಟನೆ, ಆರ್ಥಿಕ ಅಭಿವೃದ್ಧಿ, ಶಿಸ್ತು ಮೂಡಿಸಬೇಕೆಂದು ಉದ್ದೇಶದಿಂದ ಸಂಘಟನೆಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯುತ್ತಿದೆ.  ಈ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವತಿಯಿಂದ ಹತ್ತು ವರ್ಷಗಳಿಂದ ಮಹಿಳಾ ಸ್ವಸಹಾಯ ಸಂಘಟನೆ ಮಾಡಿದು,್ದ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಾಮಾಜಿಕ ಕಾರ್ಯಗಳನ್ನು ನಡೆಸಿ, ಗ್ರಾಮೀಣರಿಗೆ ನೆರವಾಗುತ್ತಿದೆ. ಇದಕ್ಕೆ ಸಹಕಾರ ನೀಡಿದ ಎಲ್ಲರನ್ನು ಅಭಿನಂದಿಸುವುದಾಗಿ ತಿಳಿಸಿದರು.  ಜಿಲ್ಲಾ ಜನಜಾಗೃತಿ  ವೇದಿಕೆಯ  ಅಧ್ಯಕ್ಷ ಹಂದನಹಳ್ಳಿ ಸೋಮಶೇಖರ್ ಮಾತನಾಡಿ, https://ainlivenews.com/supreme-ray-healing-centre-reiki-treatment/ ಯೋಜನೆವತಿಯಿಂದ ಸ್ವಸಹಾಯ ಸಂಘದ ಮಕ್ಕಳಿಗೆ ವಿದ್ಯಾರ್ಥಿವೇತನ, ನಿರ್ಗತಿಕರಿಗೆ ಮಾಶಾಸನ,ಸವಲತ್ತು ಕೊಡುಗೆಯಾಗಿ ನೀಡುತ್ತಿದೆ ಅಲ್ಲದೆ ಸ್ಥಳೀಯವಾಗಿ ಸಮುದಾಯದ ಕಾರ್ಯಕ್ರಮಗಳಾದ ದೇವಸ್ಥಾನ ಜೀರ್ಣೋದ್ಧಾರ, ಶಾಲೆಗಳಲ್ಲಿ ಶಿಕ್ಷಕರ ನಿಯೋಜನೆ, ಹಾಲಿನ ಡೇರಿ ಅಭಿವೃದ್ದಿಗೆ ನೆರವು ನೀಡಲಾಗುತ್ತಿದೆ. ಸ್ವಸಹಾಯ ಸಂಘದ ಸದಸ್ಯರು…

Read More

ಬೆಂಗಳೂರು : ಕಳ್ಳನನ್ನು ಹಿಡಿಯುವುದು ಪೊಲೀಸ್​ ಅಧಿಕಾರಿ ಕೆಲಸ. ಆದರೆ, ಪೊಲೀಸ್​ ಅಧಿಕಾರಿಯೇ ಕಳ್ಳತನ ಮಾಡಿ ಖಾಕಿ ಬಲೆಗೆ ಬಿದ್ದಿದ್ದಾನೆ. ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ಓರ್ವರನ್ನು ಬೈಯ್ಯಪ್ಪನಹಳ್ಳಿ ಠಾಣೆ ಪೋಲಿಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿದ್ದರಾಮರೆಡ್ಡಿ (37)ಬಂಧಿತ ಆರೋಪಿಯಾಗಿದ್ದು, ಈತ ಚಿಕ್ಕಬಳ್ಳಾಪುರ ರೈಲ್ವೆ ಹೊರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಆಗಿದ್ದ. ಕಳ್ಳತನದಲ್ಲಿ ಈತನಿಗೆ ಸಾಬಣ್ಣ (38) ಸಾಥ್ ನೀಡುತ್ತಿದ್ದನು ಎಂದು ಪೊಲೀಸರು ಹೇಳಿದ್ದಾರೆ. ಬೆಳಗ್ಗೆ ಪೋಲಿಸ್ ಡ್ಯೂಟಿ, ರಾತ್ರಿ ವೇಳೆ ಕಳ್ಳತನವೇ ಕಾಯಕವನ್ನಾಗಿ ಮಾಡಿಕೊಂಡಿದ್ದ ಈತ ಕೇರಳ, ತಮಿಳುನಾಡು ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಇನ್ನು, ಆಗಸ್ಟ್‌ನಲ್ಲಿ ಬೈಯ್ಯಪ್ಪನಹಳ್ಳಿ ಸ್ಟೇಷನ್ ಬಳಿ ರೈಲಿನಿಂದ ಪ್ರಯಾಣಿಕರ ಬ್ಯಾಗ್ ಕಳುವು ಮಾಡಿ, ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ದೋಚಿಕೊಂಡಿದ್ದ.

Read More

ಕಂಪ್ಲಿ , ಕರ್ನಾಟಕ ರಾಜ್ಯ ದೇವದಾಸಿ ವಿಮೋಚನಾ ಸಂಘ ತಾಲೂಕ ಘಟಕದಿಂದ ಮಂಗಳವಾರ ರಂದು ದೇವದಾಸಿ ಮಹಿಳೆಯರಿಗೆ ಸರ್ಕಾರದಿಂದ ದೊರೆಯಬಹುದಾದ ಮೂಲಭೂತ ಸೌಲಭ್ಯಗಳನ್ನು ತಕ್ಷಣವೇ ಕಲ್ಪಿಸಬೇಕೆಂದು ಒತ್ತಾಯಿಸಿ ದೇವದಾಸಿ ಮಹಿಳೆಯರು ಕಂಪ್ಲಿ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಮಂಗಳವಾರಂದು ಪ್ರತಿಭಟನೆ ನಡೆಸಿದರು. ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರು ಹುಲಿಗೆಮ್ಮ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡರು ಸಹ ಇದುವರೆಗೆ ದೇವದಾಸಿ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಗೊಳಿಸುವಲ್ಲಿ ಸರ್ಕಾರ ವಿಪ ಲ ವಾಗಿದೆ. ವಂಚನೆಗೆ ಒಳಗಾದ ದೇವದಾಸಿ ಮಹಿಳೆಯರಿಗೆ ನಿವೇಶನ ವಸತಿ ಮಾಶಾಸನ ಹೆಚ್ಚಳ ಉಪಜೀವನಕ್ಕಾಗಿ ಭೂಮಿ ಸೇರಿದಂತೆ ಸರಕಾರದ ನೇಮಕಾತಿಯಲ್ಲಿ ವಿಶೇಷ ಆದ್ಯತೆ ಕಲ್ಪಿಸುವಂತೆ ತಾಲೂಕು ಅಧ್ಯಕ್ಷರು ಹುಲಿಗೆಮ್ಮ ತಿಳಿಸಿದರು ಜೊತೆಗೆ ದೇವದಾಸಿ ಪಟ್ಟಿಯಲ್ಲಿ ಹೊರಗೂಳಿದ ಮಹಿಳೆಯರನ್ನು ಸೇರ್ಪಡೆಗೊಳಿಸುವುದು ಅಂತಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಉದ್ಯೋಗ ಕಲ್ಪಿಸುವುದು ಹಾಗೆ ದೇವದಾಸಿ ಮಕ್ಕಳ ವಿವಾಹಕ್ಕೆ ಮುಂದಾಗುವವರಿಗೆ ಪ್ರೋತ್ಸಾಹ ಧನ ನೀಡುವಿಕೆ ಸೇರಿದಂತೆ ಪ್ರಮುಖ ಏಳು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ…

Read More

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ, ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಅವರಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ತಿಳಿಸಿದ್ದಾರೆ.

Read More

ನವದೆಹಲಿ: ಮಿಜೋರಾಂ ಮತ್ತು ಛತ್ತೀಸ್‌ʼಗಢ ವಿಧಾನಸಭೆಗೆ ಇಂದು ಮೊದಲ ಹಂತದ ಮತದಾನ ಶುರುವಾಗಿದೆ. ಛತ್ತೀಸ್‌ಗಢದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 20 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 17 ರಂದು ಉಳಿದ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಿಜೋರಾಂ‌ನಲ್ಲಿ 40 ವಿಧಾನಸಭಾ ಕ್ಷೇತ್ರಗಳಿದ್ದು, ಮತದಾನಕ್ಕೆ ಎಲ್ಲ ತಯಾರಿ ಮಾಡಿಕೊಂಡಿದೆ. ರಾಜ್ಯದ 1,276 ಮತದಾನ ಕೇಂದ್ರಗಳಲ್ಲಿ 149 ದೂರದ ಮತಗಟ್ಟೆಗಳಾಗಿವೆ. ಅಂತರರಾಜ್ಯ ಮತ್ತು ಅಂತರಾಷ್ಟ್ರೀಯ ಗಡಿಗಳಲ್ಲಿ ಸುಮಾರು 30 ಮತಗಟ್ಟೆಗಳನ್ನು ನಿರ್ಣಾಯಕ ಮತ್ತು ದುರ್ಬಲ ಎಂದು ಘೋಷಿಸಲಾಗಿದೆ. ರಾಜ್ಯದಾದ್ಯಂತ ಮತ್ತು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನ ಅಂತರರಾಷ್ಟ್ರೀಯ ಗಡಿಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಿಜೋರಾಂ ಮ್ಯಾನ್ಮಾರ್‌ನೊಂದಿಗೆ 510 ಕಿಮೀ ಸರಂಧ್ರ ಗಡಿಯನ್ನು ಮತ್ತು ಬಾಂಗ್ಲಾದೇಶದೊಂದಿಗೆ 318 ಕಿಮೀ ಗಡಿಯನ್ನು ಹಂಚಿಕೊಂಡಿದೆ. ಛತ್ತೀಸ್‌ಗಢ ಮೊದಲ ಹಂತದ ಮತದಾನದಲ್ಲಿ ಬಸ್ತಾರ್ ವಿಭಾಗದ 12 ಸೇರಿದಂತೆ 20 ಕ್ಷೇತ್ರಗಳು ಸೇರಿವೆ. ಈ 20 ಕ್ಷೇತ್ರಗಳು ನಕ್ಸಲ್ ಪೀಡಿತ ಬಸ್ತಾರ್ ವಿಭಾಗದಲ್ಲಿ ಏಳು…

Read More

ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಪರ ಸಚಿವ ಸಂತೋಷ್ ಲಾಡ್​ ಬ್ಯಾಟ್​ ಬೀಸಿದ್ದಾರೆ. ​​​ಸಂತೋಷ್ ಲಾಡ್ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದು, ಶಾಸಕ ಕೋನರೆಡ್ಡಿ ಜೊತೆ ಚರ್ಚೆ ವೇಳೆ ನಾನು ಜಿ ಪರಮೇಶ್ವರ ಕಡೆಯವರು ಎಂದಿದ್ದಾರೆ. ನೀವು ನಮ್ಮನ್ನು ಚೆನ್ನಾಗಿ ನೋಡಿಕೊಳ್ಳಬೇಕು. ನಾವು ಹೋಮ್ ಮಿನಿಸ್ಟರ್​ ಕಡೆಯವರು ಎಂದು ಎರಡು ಬಾರಿ ಉಚ್ಛರಿಸಿದರು. ಇದೇ ವೇಳೆ ನಾನು ಸಿಎಂ ಶಾಸಕ ಎಂದು ಕೋನರೆಡ್ಡಿ ಕಿಚಾಯಿಸಿದರು. ನೀವು ಯಾವ ಸಿಎಂ ಎಂದು ಸಚಿವ ಸಂತೋಷ್ ಲಾಡ್ ಕಾಲೆಳೆದರು. ಹೋಮ್ ಮಿನಿಸ್ಟರ್​​ ಇದ್ದಲ್ಲೇ ಸಿಎಂ ಎಂದು ಸಂತೋಷ್​ ಲಾಡ್​ ಹೇಳಿರುವ ವಿಡಿಯೋ  ವೈರಲ್​ ಆಗಿದೆ.

Read More

ಕಲಬುರಗಿ: ಆರೋಪಿ RD ಪಾಟೀಲ್ ತಪ್ಪಿಸಿಕೊಂಡು ಹೋಗಲು ಕಾಂಗ್ರೆಸ್ ಸರ್ಕಾರದ ಮಂತ್ರಿಗಳು & ಶಾಸಕರ ಸಹಕಾರವಿದೆ ಅಂತ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ವಿಜಯೇಂದ್ರ ಈ ಹಿಂದೆ ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ಗೂಬೆ ಕೂರಿಸಿತ್ತು. ಇದೀಗ KEA ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ ಪಿನ್ RD ಪಾಟೀಲ್ ಬಗ್ಗೆ ಖಚಿತ ಮಾಹಿತಿ ಇದ್ರೂ ಯಾಕೆ ಬಂಧನ ಮಾಡ್ತಿಲ್ಲ..ಎಲ್ಲಾ ಬೆಳವಣಿಗೆ ನೋಡಿದರೆ RD ಪಾಟೀಲ್ ಗೆ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡ್ತಿದೆ ಅಂತ ಹೇಳಿದ್ರು..

Read More

ಇನ್ನೇನು ಬಿಡುಗಡೆಗೆ ಕೆಲವೇ ದಿನಗಳಿರುವಂತೆಯೇ, ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಎಂಬ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಲಾಗಿದೆ. ರಾಜ್‍ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವನ್ನು ‘ಸ್ಯಾಂಡಲ್‌ವುಡ್‌ ಕ್ವೀನ್‌’ ರಮ್ಯಾ ಅವರು ತಮ್ಮ ಆಪಲ್‍ ಬಾಕ್ಸ್ ಸ್ಟುಡಿಯೋಸ್‍ ಮೂಲಕ ಇದೇ ಮೊದಲ ಬಾರಿಗೆ ನಿರ್ಮಿಸಿದ್ದಾರೆ. ಲೈಟರ್‍ ಬುದ್ಧ ಫಿಲಂಸ್‍ ಸಹಯೋಗದೊಂದಿಗೆ ನಿರ್ಮಾಣವಾಗಿರುವ ಈ ಚಿತ್ರವನ್ನು ನವೆಂಬರ್‍ 24ರಂದು ಕೆ.ಆರ್.ಜಿ. ಸ್ಟುಡಿಯೋಸ್‍ ಸಂಸ್ಥೆಯು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ. ‘ಮೆಲ್ಲಗೆ’ ಹಾಡಿಗೆ ಮಿಥುನ್‍ ಮುಕುಂದನ್‍ ಸಂಗೀತ ಸಂಯೋಜಿಸಿದ್ದು, ಮಾಧುರಿ ಶೇಷಾದ್ರಿ ಹಾಡಿದ್ದಾರೆ. ಇನ್ನು, ಮಂಗಳೂರಿನಲ್ಲಿ ಓದುತ್ತಿರುವ ವಿದ್ಯಾರ್ಥಿ ಪೃಥ್ವಿ ಈ ಹಾಡನ್ನು ಬರೆದಿದ್ದಾರೆ. ಈ ಕುರಿತು ಮತನಾಡುವ ನಿರ್ದೇಶಕ ರಾಜ್‍ ಶೆಟ್ಟಿ, ‘ಇದು ಪ್ರೀತಿಯ ಕುರಿತ ಒಂದು ಮಹಿಳೆಯ ದೃಷ್ಟಿಕೋನದ ಹಾಡು’. ಈ ಪ್ರೀತಿಯನ್ನು ಮಹಿಳೆಯರು ಹೇಗೆ ಅನುಭವಿಸುತ್ತಾರೆ ಎನ್ನುವುದು ಬೇಕಾಗಿತ್ತು. ಹಾಗಾಗಿ, ಪೃಥ್ವಿ ಅವರಿಂದಲೇ ಬರೆಸಿದೆ’ ಎನ್ನುತ್ತಾರೆ ರಾಜ್‍. ಈ…

Read More

ಹುಬ್ಬಳ್ಳಿ: ಪಾಲಿಕೆ ಆಯುಕ್ತರ ವರ್ಗಾವಣೆ ಬೇಡ ಎಂದು ಹುಬ್ಬಳ್ಳಿಯಲ್ಲಿ ಹೋರಾಟಗಾರ ರಾಜು ಸಾ ನಾಯಕವಾಡಿ ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ  ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿಅವರನ್ನು ನಿಯುಕ್ತಿಗೊಳಿಸುವಂತೆ ವಾರ್ಡ್ ನಂಬರ್ 53ರ ಪಾಲಿಕೆ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಸರಿಯಲ್ಲ, ಈಶ್ವರ ಉಳ್ಳಾಗಡ್ಡಿ ಅವರು ಇತ್ತೀಚಿಗೆ ಬಂದವರು ಉತ್ತಮ ಕೆಲಸ ಮಾಡುತಿದ್ದಾರೆ. ಪಾಲಿಕೆಗೆ ಈಶ್ವರ ಉಳ್ಳಾಗಡ್ಡಿ ಅವರು ವರ್ಗಾವಣೆ ಆಗಿ ಬಂದ ನಂತರ ಸಾಕಷ್ಟು ಕೆಲಸ ಮಾಡುತಿದ್ದಾರೆ. ಯಾರೂ ತಮ್ಮ ವೈಯಕ್ತಿಕ ಪ್ರತಿಷ್ಠೆಗಾಗಿ ಒಳ್ಳೆಯ ಅಧಿಕಾರಿಗಳನ್ನ ವರ್ಗಾವಣೆ ಮಾಡುವುದು ಸರಿಯಲ್ಲ, ಅನಗತ್ಯವಾಗಿ ಅವರ ಬಗ್ಗೆ ಮಾತನಾಡುವುದು ಸರಿಯಲ್ಲ, ಒಂದು ವೇಳೆ ಸರಕಾರ ಅಥವಾ ಹಿರಿಯ ಅಧಿಕಾರಿಗಳು ವರ್ಗಾವಣೆಗೆ ಮುಂದಾದರೆ ಉಗ್ರ ಸ್ವರೂಪದ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

Read More