ಸೂರ್ಯೋದಯ: 06.41 AM, ಸೂರ್ಯಾಸ್ತ : 06.03 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಹೇಮಂತ ಋತು, ತಿಥಿ: ಇವತ್ತು ತದಿಗೆ 09:43 AM ತನಕ ನಂತರ ಚೌತಿ ನಕ್ಷತ್ರ: ಇವತ್ತು ಪುಷ್ಯ 03:10 AM ತನಕ ನಂತರ ಆಶ್ಲೇಷ ಯೋಗ: ಇವತ್ತು ವೈಧೃತಿ 02:29 AM ತನಕ ನಂತರ ವಿಷ್ಕುಂಭ ಕರಣ: ಇವತ್ತು ವಿಷ್ಟಿ 09:43 AM ತನಕ ನಂತರ ಬವ 10:46 PM ತನಕ ನಂತರ ಬಾಲವ ರಾಹು ಕಾಲ: 09:00 ನಿಂದ 10:30 ವರೆಗೂ ಯಮಗಂಡ:01:30 ನಿಂದ 03:00 ವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೂ ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:40 ವರೆಗೂ ಮೇಷ: ಈ ದಿನ ನಿಮಗೆ ವ್ಯಾಪಾರದಲ್ಲಿ ಪ್ರಗತಿ. ಧನ ಲಾಭ ಆಗಲಿದೆ, ಮಾನಸಿಕ ನೆಮ್ಮದಿ.ಉದ್ಯೋಗದಲ್ಲಿ ಬಡ್ತಿ. ಶತ್ರುಗಳ ಬಾಧೆ.ದಾನ-ಧರ್ಮದಲ್ಲಿ ಆಸಕ್ತಿ ಹೆಚ್ಚಾಗಲಿದೆ.ವ್ಯಾಪಾರಿ ವರ್ಗದವರುತಮ್ಮವ್ಯವಹಾರದಲ್ಲಿ ಹೆಚ್ಚಿನ ಸ್ಪರ್ಧೆ ಎದುರಿಸಬೇಕಾಗುತ್ತದೆ. ಧನಾದಾಯ…
Author: AIN Author
ನವದೆಹಲಿ:- ಭಾರತದಲ್ಲಿ ʻಶೂನ್ಯ ರೂಪಾಯಿ ನೋಟು ಮುದ್ರಣವಾಗಿದ್ದು, ಇದರ ಉಪಯೋಗವೇನು ಎಂಬುವ ಕಂಪ್ಲೀಟ್ ಮಾಹಿತಿ ತಿಳಿಯಲು ಪೂರ್ತಿ ಓದಿ. ಭಾರತದಲ್ಲಿ ಶೂನ್ಯ ರೂಪಾಯಿ ನೋಟು ಏಕೆ ಮುದ್ರಿಸಲಾಗಿದೆ ಎಂದು ಎಲ್ಲರಿಗೂ ಕಾಡುವ ಪ್ರಶ್ನೆ. ಇದರ ಅಗತ್ಯವೇನಿತ್ತು? ಅಂತಾ ಇಲ್ಲಿ ನೋಡೋಣ ಬನ್ನಿ… ವಾಸ್ತವವಾಗಿ, 2007 ರಲ್ಲಿ 5 ನೇ ಪಿಲ್ಲರ್, ಚೆನ್ನೈನ ಸರ್ಕಾರೇತರ ಸಂಸ್ಥೆ (ಎನ್‌ಜಿಒ) ಶೂನ್ಯ ರೂಪಾಯಿಯ ನೋಟನ್ನು ಮುದ್ರಿಸಿತ್ತು. ಈ ನೋಟಿನ ಮೇಲೆ ಸರ್ಕಾರ ಅಥವಾ ರಿಸರ್ವ್ ಬ್ಯಾಂಕ್ ಯಾವುದೇ ಗ್ಯಾರಂಟಿ ನೀಡಿಲ್ಲ. ಅದು ಆಚರಣೆಗೂ ಬರಲಿಲ್ಲ. ಅಂದರೆ, ಅದನ್ನು ವಹಿವಾಟಿನಿಂದ ಹೊರಗಿಡಲಾಗಿದೆ. ಈ ಟಿಪ್ಪಣಿಯ ಮೂಲಕ ವಿಶೇಷ ಸಂದೇಶವನ್ನು ನೀಡಲಾಗಿದೆ. ಇದು ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಪ್ರಕಟವಾಯಿತು. ಶೂನ್ಯ ರೂಪಾಯಿ ನೋಟುಗಳನ್ನು ಏಕೆ ಮುದ್ರಿಸಲಾಯಿತು? ದೇಶದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ಎಲ್ಲೆಲ್ಲಿ ಯಾವುದೇ ಕೆಲಸವಿದ್ದರೂ ಹಣವಿಲ್ಲದೇ ಯಾವ ಕೆಲಸವೂ ನಡೆಯುತ್ತಿರಲಿಲ್ಲ. ಇದರಿಂದ ಸಾರ್ವಜನಿಕರ ಸ್ಥಿತಿ ಶೋಚನೀಯವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಭ್ರಷ್ಟಾಚಾರವನ್ನು…
ಬೆಂಗಳೂರು:- ಕೆಂಪೇಗೌಡ ಏರ್ಪೋರ್ಟ್ನಲ್ಲಿ ಟರ್ಮಿನಲ್-2 ವಾಯುವಜ್ರ ಬಸ್ ನಿಲ್ದಾಣ ಉದ್ಘಾಟಿಸಿ ರಾಮಲಿಂಗಾರೆಡ್ಡಿ ಹೇಳಿಕೆ ಸತೀಶ್ ಜಾರಕಿ ಹೊಳಿ ಡಿಸಿಎಂ ಸ್ಥಾನಕ್ಕೆ ಬೇಡಿಕೆ ವಿಚಾರವಾಗಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಡಿ.ಸಿ.ಎಂ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಡಿ.ಸಿ.ಎಂ ಸ್ಥಾನ ಕೊಡೋದು ಬೀಡೋ ತೀರ್ಮಾನ ಹೈಕಮ್ಯಾಂಡ್ ನದ್ದು. ನಾನು ಡಿ.ಸಿ.ಎಂ ಸ್ಥಾನದ ಆಕಾಂಕ್ಷಿ ಅಲ್ಲ ಎಂದರು. ಇನ್ನೂ ಯತ್ನಾಳ್ ಕಾಂಗ್ರೆಸ್ ಜೊತೆ ಮ್ಯಾಚ್ ಫಿಕ್ಸಿಂಗ್ ಬಿಜೆಪಿ ಆರೋಪ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರಿಗೆ ಮಾಡೋಕೆ ಬೇರೆ ಏನು ಕೆಲಸ ಇಲ್ಲ. ಯತ್ನಾಳ್ ಯಾರ ಮಾತು ಕೇಳೋದಿಲ್ಲ. ಮನಸ್ಸಿಗೆ ಬರೋದನ್ನ ಹೇಳೋದು ಅವರ ವ್ಯಕ್ತಿತ್ವ. ಮೈಸೂರುಹಕ್ಕಿ ವಿಶ್ವನಾಥ್ ಸಹ ಹಾಗೆಯೇ. ಮನಸ್ಸಿಗೆ ಏನ್ ಬರುತ್ತೋ ಅದನ್ನ ಹೇಳಿಬಿಡ್ತಾರೆ. ಮನಸ್ಸಲ್ಲಿ ಇಟ್ಟಕೊಳ್ಳಲ್ಲ ಅಂತಹವರಲ್ಲಿ ಯತ್ನಾಳ್ ಕೂಡ ಒಬ್ಬರು. ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿ ಪಕ್ಷಕ್ಕೆ ಟಾಂಗ್ ನೀಡಿ ಯತ್ನಾಳ್ ಪರ ರಾಮಲಿಂಗಾರೆಡ್ಡಿ ಸಾಫ್ಟ್ ಕಾರ್ನರ್ ಮಾತನಾಡಿದ್ದಾರೆ.
ಬೆಂಗಳೂರು:- ಮಗನನ್ನು ಬಿಡುಗಡೆ ಮಾಡದಿದ್ದರೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಕರವೇ ನಾರಾಯಣಗೌಡರ ತಾಯಿ ಎಚ್ಚರಿಕೆ ನೀಡಿದ್ದಾರೆ. ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಹೋರಾಟ ನಡೆಸಿದ್ದ ನಾರಾಯಣಗೌಡರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆಯಲ್ಲಿ ಗೌರಮ್ಮ ಅವರು ತಮ್ಮ ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ʼನನ್ನ ಮಗ ಏನು ತಪ್ಪು ಮಾಡಿದ್ದ ಎಂದು ಜೈಲಿಗೆ ಹಾಕಿದ್ದೀರಿʼ ಎಂದು ಸರಕಾರವನ್ನು ಗೌರಮ್ಮ ಪ್ರಶ್ನಿಸಿದ್ದು, ನನ್ನ ಮಗನ ಆರೋಗ್ಯ ಸರಿಯಿಲ್ಲ. ಮಾತನಾಡಲೂ ತ್ರಾಣವಿಲ್ಲದಷ್ಟು ಸುಸ್ತಾಗಿದ್ದರು. ಆದರೂ ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಅದೇ ತಪ್ಪೇ. ದರೋಡೆ, ಕಳ್ಳತನ ಮಾಡಿದ್ದಾರೆಯೇ, ಯಾವ ಕಾರಣಕ್ಕೆ ಜೈಲಿನಟ್ಟಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.28ರಂದು ನಮ್ಮ ಕುಟುಂಬದ ಸದಸ್ಯರು ನಾರಾಯಣಗೌಡರಿಗೆ ಕೊಡಲು ಊಟ ಮತ್ತು ಮಾತ್ರೆಯನ್ನು ತೆಗೆದುಕೊಂಡು ಹೋಗಿದ್ದರು. ಆದರೆ ಜೈಲಿನ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮಗ ಊಟ ಇಲ್ಲದೆ, ಜೈಲಿನಲ್ಲಿರಬೇಕಾದರೆ ಹೆತ್ತ ಕರಳು ಎಷ್ಟು ಸಂಕಟ ಪಡುತ್ತದೆ ಎಂದು ನಿಮಗೆ ಗೊತ್ತಾಗುತ್ತದೆಯೇ ಎಂದು…
ಬೆಂಗಳೂರು:- ಬೆಂಗಳೂರಿನ ನಾಗರೀಕರು ತಮ್ಮ ಅಹವಾಲುಗಳನ್ನು ನಮ್ಮ ಮನೆವರೆಗೂ ತರುವುದನ್ನು ತಪ್ಪಿಸಿ, ಸರ್ಕಾರವೇ ಅವರ ಬಳಿಗೆ ಹೋಗಿ ಅವರ ಸಮಸ್ಯೆ ಆಲಿಸಲು ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾರ್ಯಕ್ರಮದ ಪೂರ್ವಭಾವಿ ಸಭೆ ನಂತರ ಬಿಬಿಎಂಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಅವರು ಈ ವಿಚಾರ ತಿಳಿಸಿದರು. ಒಟ್ಟಾರೆ ಅವರು ಹೇಳಿದ್ದಿಷ್ಟು; ಮುಂದಿನ ತಿಂಗಳು 3 ರಿಂದ ತಿಂಗಳಾಂತ್ಯದವರೆಗೂ 10 ದಿನಗಳ ಕಾಲ ಜನಸಂಖ್ಯೆಗೆ ಅನುಗುಣವಾಗಿ ಎರಡು ಮೂರು ವಿಧಾನಸಭಾ ಕ್ಷೇತ್ರಗಳ ಜನರ ಅಹವಾಲು ಆಲಿಸಲಾಗುವುದು. ಬಿಬಿಎಂಪಿ, ಬಿಡಿಎ, ಬೆಸ್ಕಾಂ, ಬಿಎಂಟಿಸಿ, ಕಂದಾಯ ಇಲಾಖೆಯ ಖಾತೆ ಸಮಸ್ಯೆ, ನಮ್ಮ ಇಲಾಖೆ ಹಾಗೂ ಸರ್ಕಾರದ ಐದು ಗ್ಯಾರಂಟಿ ಸೇರಿದಂತೆ ಜನರ ಸಮಸ್ಯೆಗಳ ವಿಚಾರವಾಗಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ನಾಗರೀಗರು ತಮ್ಮ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜನರು ನನ್ನ ಬಳಿ, ಮುಖ್ಯಮಂತ್ರಿಗಳು ಹಾಗೂ ಇತರ ಸಚಿವರುಗಳ ಬಳಿ ಪ್ರತಿನಿತ್ಯ…
ಬೆಂಗಳೂರು:- ಕರ್ನಾಟಕದಲ್ಲಿ ಇಂದು 173 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, 2 ಸಾವಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಇಂದು 173 ಹೊಸ ಕೋವಿಡ್ -19 ಸೋಂಕು ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 702ಕ್ಕೆ ಏರಿದೆ. ಈ ಪೈಕಿ 649 ಜನರು ಮನೆಯಲ್ಲಿ ಪ್ರತ್ಯೇಕವಾಗಿರುತ್ತಾರೆ ಮತ್ತು ಉಳಿದ 53 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂತೆಯೇ ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 10ಕ್ಕೇರಿದೆ. ಮೃತರು ಕ್ರಮವಾಗಿ 59 ಮತ್ತು 69 ವರ್ಷ ವಯಸ್ಸಿನವರಾಗಿದ್ದಾರೆ, ಇಬ್ಬರೂ ಬೆಂಗಳೂರು ನಗರ ಜಿಲ್ಲೆಯಲ್ಲಿ ದಾಖಲಾಗಿದ್ದಾರೆ. ಇಬ್ಬರಿಗೂ ಜ್ವರ ಮತ್ತು ಕೆಮ್ಮಿನ ಲಕ್ಷಣಗಳಿತ್ತು ಎಂದು ಹೇಳಲಾಗಿದೆ. ಕಳೆದ 24 ಗಂಟೆಗಳಲ್ಲಿ 37 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು 8,349 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ 6,400 RTPCR ಮತ್ತು 1,949 ರಾಪಿಡ್ ಆಂಟಿಜೆನ್ ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಸಂಖ್ಯೆಯ ಪರೀಕ್ಷೆಗಳನ್ನು…
ಕೊಪ್ಪಳ:- ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರನ್ನು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ನೇಮಿಸಲಾಗಿದೆ. ಈ ಮೂಲಕ ಸಿ.ಎಂ. ಅವರ ರಾಯರಡ್ಡಿ ಮುನಿಸು ತಣ್ಣಗೆ ಮಾಡುವ ಪ್ರಯತ್ನ ಮಾಡಿದ್ದಾರೆ. ಇಂದು ಆದೇಶ ಹೊರಡಿಸಿರುವ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಿದೆ ರಾಯರಡ್ಡಿ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರೂ ಆಗಿದ್ದರಿಂದ ಅವರು ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ ಖಾತೆಯ ಸಚಿವ ಸ್ಥಾನಮಾನ ಸಿಗುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅವರಿಗೆ ಯಾವುದೇ ಸ್ಥಾನ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಅವರು ಮೇಲಿಂದ ಮೇಲೆ ಸರ್ಕಾರಕ್ಕೆ ಪತ್ರ ಬರೆಯುತ್ತಲೇ ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಅಧಿಕಾರಿಗಳು ಹಾಗೂ ಸಚಿವರು ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ನನಗಿಂತ ಕಿರಿಯರು ಸಚಿವರಾಗಿದ್ದಾರೆ ಎಂದು ಹಿಂದೆ ರಾಯರಡ್ಡಿ ಅಸಮಾಧಾನ ಹೊರಹಾಕಿದ್ದರು. ಇತ್ತೀಚೆಗೆ ಪಕ್ಷದ ವರಿಷ್ಠರು ನಿಗಮ ಮಂಡಳಿ ಸ್ಥಾನಮಾನ ನೀಡುವುದಾಗಿ ಹೇಳಿದ್ದರೂ ನಯವಾಗಿ ತಿರಸ್ಕರಿಸಿದ್ದರು. ಈಗ ಸರ್ಕಾರ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ನೇಮಿಸಿದೆ.
ಮೈಸೂರು:- ಕೋಮುವಾದಿ ರಾಜಕಾರಣ ಕೊನೆಗಾಣಿಸಬೇಕು ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸ್ವಾತಂತ್ರ್ಯ ಸಂಗ್ರಾಮದ ಮೂಲಕ ಸಮೃದ್ಧ ಭಾರತದ ನಿರ್ಮಾಣಕ್ಕೆ ಪೂರಕವಾಗುವಂತೆ ದೇಶದ ಆತ್ಮವಾದ ಸಂವಿಧಾನದ ಆಶಯವನ್ನು ಬಲಪಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ ಧರ್ಮ ಮತ್ತು ದೇವರ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಹೊರಟಿರುವ ಕೋಮುವಾದಿ ರಾಜಕಾರಣವನ್ನು ಕೊನೆಗಾಣಿಸಬೇಕಿದೆ ಎಂದರು. ಚಳವಳಿಗೆ ಆಗಾಧವಾದ ಶಕ್ತಿ ಇದೆ. ಇಂದಿನ ದೇಶದ ಪರಿಸ್ಥಿತಿಗೆ ಅನುಗುಣವಾಗಿ ಚಳವಳಿಯನ್ನು ನಿರಂತರವಾಗಿ ನಡೆಸುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ ಎಂದು ಹೇಳಿದರು. ಅನೇಕ ಧರ್ಮಗಳು, ವಿವಿಧ ಭಾಷೆಯ ಜನರು ವಾಸಿಸುವ ಬಹುತ್ವದ ಭಾರತಕ್ಕೆ ಕಾಂಗ್ರೆಸ್ ಅನೇಕ ಕೊಡುಗೆಗಳನ್ನು ನೀಡಿದೆ. ಇಂದು ಕೋಮುವಾದ, ಮತೀಯವಾದ, ಧರ್ಮಾಂದತೆ, ಸ್ವಾತಂತ್ರ್ಯದ ಉದ್ದೇಶ ಕಾಂಗ್ರೆಸ್ ಹೋರಾಟದ ಆಶಯಗಳನ್ನು ನಾಶ ಮಾಡಲು ಹೊರಟಿದ್ದಾರೆ. ಭಾರತದ ಇಡೀ ಚರಿತ್ರೆಯನ್ನು ತಿರುಚುವ ಕೆಲಸ ಮಾಡಲಾಗುತ್ತದೆ. ನಮ್ಮ ನಾಗರೀಕ ಬದುಕನ್ನು, ಸಾಂಸ್ಕೃತಿಕ ಜೀವನ ನಾಶಮಾಡಿ ಬಹುತ್ವಕ್ಕೆ…
ಕಲಬುರಗಿ:- ಜಿಲ್ಲೆ ಆಳಂದ ಮತಕ್ಷೇತ್ರದ ಶಾಸಕ ಬಿಆರ್ ಪಾಟೀಲ್ ಮುಖ್ಯಮಂತ್ರಿಗಳ ಸಲಹೆಗಾರರಾಗಿ ನೇಮಕ ಮಾಡಲಾಗಿದೆ..ಕರ್ನಾಟಕ ರಾಜ್ಯಪಾಲರ ಆದೇಶದ ಅನುಸಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.. ಮಾತ್ರವಲ್ಲ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡುವಂತೆ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ..ವಿಶೇಷ ಅಂದ್ರೆ ಸಚಿವರು ತಮ್ಮ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವು ವಿಚಾರದಲ್ಲಿ ಗಮನ ಕೊಡ್ತಿಲ್ಲ ಅಂತ ಬಹಿರಂಗವಾಗಿ ಅಸಮಧಾನ ತೋಡಿಕೊಂಡಿದ್ದರು.ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು..
ಅರಕಲಗೂಡು: ತಾಲೂಕಿನ ಗೊಬ್ಬಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಬುಧವಾರ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿರುವ ಮೂವರು ಆರೋಪಿಗಳನ್ನು ಬಂಧಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ 12.100 ಕೆಜಿ ತೂಕದ ಶ್ರೀಗಂಧ ತುಂಡುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕು ಮಹದೇಶ್ವರ ಕಾಲನಿ ಮಲ್ಲೇಶ್, ಪಿರಿಯಾಪಟ್ಟಣ ತಾಲೂಕು ಚನ್ನಕಲ್ಲು ಕಾವಲು ಹಾಡಿ ಗ್ರಾಮದ ಅಭಿ, ಮುತ್ತುರಾಜ್ ಬಂಧಿತ ಆರೋಪಿಗಳು. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ವೇಳೆ ಮರ ಕಡಿಯುವ ಶಬ್ಧ ಕೇಳಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದಾಗ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಕೃತ್ಯಕ್ಕೆ ಬಳಸಿದ ಕೈ ಅರೆ, ಗರಗಸ, ಬೈಕ್ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಗೊಬ್ಬಳಿ ಅರಣ್ಯದಲ್ಲಿ ಅನೇಕ ಬಾರಿ ಕಳ್ಳತನ ನಡೆಯುತ್ತಿದ್ದು ಆರೋಪಿಗಳು ತಲೆಮರೆಸಿಕೊಳ್ಳುತ್ತಿದ್ದಾರೆ. ಶ್ರೀಗಂಧ ಕಳ್ಳತನದ ಪ್ರಮುಖ ಆರೋಪಿ ಪರಾರಿಯಾಗಿದ್ದು ಈ ಕುರಿತು ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಯಶ್ಮ ಮಾಚಮ್ಮ ತಿಳಿಸಿದರು.