Author: AIN Author

ಭರಪೂರ ಭಾವುಕತೆಯಲ್ಲಿಯೇ ಈ ವಾರ ಕಳೆದಿದೆ. ಬಿಗ್‌ಬಾಸ್‌ ಮನೆಯೊಳಗೆ ಪ್ರವೇಶಿಸಿದ ಎಲ್ಲ ಸದಸ್ಯರ ಕುಟುಂಬದವರು, ಎಲ್ಲ ಸದಸ್ಯರಿಗೂ ಕಿವಿಮಾತು ಹೇಳಿ ಹೋಗಿದ್ದಾರೆ. ಬಿಗ್‌ಬಾಸ್ ಕುಟುಂಬದ ಬಂಧವನ್ನು ಇನ್ನಷ್ಟು ಗಟ್ಟಿ ಮಾಡಿದ್ದಾರೆ. ವಾರವಿಡೀ ಹಲವು ಹೃದಯಸ್ಪರ್ಶಿ ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದ ಬಿಗ್‌ಬಾಸ್‌ ಮನೆ ವಾರಾಂತ್ಯದಲ್ಲಿ ಮತ್ತೆ ಮೊದಲಿನ ಹಳಿಗೆ ಮರಳುತ್ತಿದೆ. ‘ಕ್ಯಾಪ್ಟನ್‌ ಯಾರು?’ ಈ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ. ಈ ಪ್ರಶ್ನೆಗೆ ಉತ್ತರದ ಜೊತೆಗೇ ಕಿಚ್ಚನ ವಾರಾಂತ್ಯದ ಎಪಿಸೋಡ್‌ಗಳಲ್ಲಿ ಭಾಗಿಯಾಗಲು ಸದಸ್ಯರು ಕಾಯುತ್ತಿದ್ದಾರೆ. ಈ ಪ್ರಶ್ನೆಗೆ ಉತ್ತರದ ಸುಳಿವು ಈವತ್ತು JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಇದೆ. ಈ ವಾರ ಮನೆಯೊಳಗೆ ಬಂದ ಸ್ಪರ್ಧಿಗಳ ಕುಟುಂಬದವರಿಗೆ ಒಂದು ಪ್ರಶ್ನೆ ಕೇಳಲಾಗಿತ್ತು. ಅವರ ಕುಟುಂಬದ ಸದಸ್ಯರನ್ನು ಬಿಟ್ಟು ಬೇರೆ ಯಾರು ಈ ಮನೆಯ ಕ್ಯಾಪ್ಟನ್ ಆಗಬೇಕಾಗಬೇಕು ಎಂದು ಬಯಸುತ್ತೀರಿ? ಎಂಬ ಪ್ರಶ್ನೆಗೆ ಎಲ್ಲರೂ ತಮ್ಮ ಅಭಿಪ್ರಾಯ ಸೂಚಿಸಿದ್ದರು. ಅದರ ಅನುಸಾರ ಸಂಗೀತಾ, ತನಿಷಾ ಮತ್ತು ಪ್ರತಾಪ್ ಹೆಸರು ಅತಿ ಹೆಚ್ಚು ಸಲ ಬಂದಿತ್ತು. ಹಾಗಾಗಿ…

Read More

ಬೆಂಗಳೂರು:- ಡ್ರಗ್ಸ್ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ರೆ ಹುಷಾರ್, ಇನ್ಮುಂದೆ ಕಠಿಣ ಕ್ರಮಕ್ಕೆ ಬೆಂಗಳೂರು ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಮಾಹಿತಿ ನೀಡಿದ ಸಂಚಾರ ಪೊಲೀಸ್ ಇಲಾಖೆಯ ಜಂಟಿ ಆಯುಕ್ತ ಎಂಎನ್ ಅನುಚೇತ್, ರಸ್ತೆ ಅಪಘಾತಗಳ ನಂತರ ರಕ್ತ ಪರೀಕ್ಷೆಗಳು ನಿಯಮಿತವಾದವು, ಆದರೆ ಈಗ, ಪ್ರತಿ ರಸ್ತೆ ಅಪಘಾತ ಮತ್ತು ವೀಲಿಂಗ್ ಮಾಡುವವರು, ಡ್ರ್ಯಾಗ್ ರೇಸ್ಗಳಲ್ಲಿ ತೊಡಗಿರುವವರ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗುತ್ತದೆ. ರಸ್ತೆ ಅಪಘಾತಗಳಾದಾಗ ಮಾರಣಾಂತಿಕ ಮತ್ತು ಮಾರಣಾಂತಿಕವಲ್ಲದ ಪ್ರಕರಣಗಳಲ್ಲಿ ರಕ್ತದ ಆಲ್ಕೋಹಾಲ್ ಪರೀಕ್ಷೆಗಳನ್ನು ನಡೆಸುತ್ತೇವೆ. ಹಿಂದೆ, ಇದನ್ನು ಮಾರಣಾಂತಿಕ ಪ್ರಕರಣಗಳಲ್ಲಿ ಮಾತ್ರ ಮಾಡಲಾಗುತ್ತಿತ್ತು ಎಂದರು. Drug ಡ್ರೈವಿಂಗ್ ಮಾಡಿದವರು ರಸ್ತೆಯಲ್ಲಿರುವವರಿಗೆ ಗಂಭೀರ ಅಪಾಯವನ್ನುಂಟುಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೆಚ್ಚಿನ ಗಾಂಜಾ ಹೊಂದಿರುವ ವ್ಯಕ್ತಿಯು ವಾಹನ ಚಾಲನೆ ಮಾಡುವಾಗ ಸಮಯ ಮತ್ತು ದೂರದ ನಿರ್ಣಯ ಮಾಡಲು ದುರ್ಬಲನಾಗಿರುತ್ತಾನೆ, ಕಡಿಮೆ ಸಮನ್ವಯತೆ, ನಿಧಾನ ಪ್ರತಿಕ್ರಿಯೆ ಸಮಯವನ್ನು ಹೊಂದಿರುತ್ತಾನೆ. ಕೊಕೇನ್ ಅಥವಾ ಮೆಥಾಂಫೆಟಮೈನ್ನ ಪ್ರಭಾವದಲ್ಲಿರುವವರು ಚಾಲನೆ ಮಾಡುವಾಗ ಆಕ್ರಮಣಕಾರಿ ಮತ್ತು…

Read More

ಬೆಂಗಳೂರು:- ಹೊಸ ವರ್ಷಕ್ಕೆ ರಾಜಧಾನಿ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಡಿ.31 ರಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ರೆಸಿಡೆನ್ಸಿ ರಸ್ತೆಯಂತಹ ಹಾಟ್‌ಸ್ಪಾಟ್‌ಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಪ್ರಯಾಣಿಕರಿಗೆ ಮತ್ತು ಪಾರ್ಟಿಗೆ ಹೋಗುವವರಿಗೆ ಸಹಾಯ ಮಾಡಲು ವಿವರವಾದ ಟ್ರಾಫಿಕ್ ಸಲಹೆಯನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಹೊಸ ವರ್ಷದ ಮುನ್ನಾದಿನ ಕೋರಮಂಗಲದ ಟ್ರಾಫಿಕ್ ಅಪ್‌ಡೇಟ್ ಪ್ರಕಾರ ವೈಡಿ ಮಠದ ರಸ್ತೆ ಮತ್ತು ಪಕ್ಕದ ಅಡ್ಡರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ಪಾರ್ಕಿಂಗ್ ನಿರ್ಬಂಧಗಳು ಇರುತ್ತವೆ. ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳು ಮತ್ತು ಸಾರ್ವಜನಿಕ ಸಾರಿಗೆಯನ್ನು ಬಳಸಬೇಕು. ಸಂಚಾರ ನಿಯಮಗಳ ಅನುಸರಣೆ ಕಡ್ಡಾಯವಾಗಿದೆ ಎಂದು ತಿಳಿಸಲಾಗಿದೆ. ವೈ.ಡಿ. ಮಠದ ರಸ್ತೆಯಲ್ಲಿ ಸುಖ್ ಸಾಗರ್ ಜಂಕ್ಷನ್‌ನಿಂದ ಮೈಕೋ ಲೇಔಟ್ ಜಂಕ್ಷನ್‌ವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಜ್ಯೋತಿ ನಿವಾಸ್ ಕಾಲೇಜು ರಸ್ತೆ, 4ನೇ ಬಿ ಅಡ್ಡರಸ್ತೆ, 1ನೇ ಮುಖ್ಯರಸ್ತೆ, 17ನೇ ಎಚ್ ಮುಖ್ಯರಸ್ತೆ…

Read More

ಬೆಂಗಳೂರು:- ವೃದ್ಧೆಗೆ ವಂಚನೆ ಮಾಡಿದ ಆರೋಪದಲ್ಲಿ ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪುತ್ರ ಅಭಿಲಾಷ್​ಗೆ ಸಿಸಿಬಿ ನೋಟಿಸ್ ನೀಡಿದೆ. ಪುಟ್ಟೇನಹಳ್ಳಿಯಲ್ಲಿ ವೃದ್ದೆಗೆ ಮನೆ ಮಾರಾಟ ಮಾಡಿಸಲು ಸಹಾಯ ಮಾಡುವ ನೆಪದಲ್ಲಿ ವಂಚನೆ ಮಾಡಲಾಗಿತ್ತು. ವೃದ್ದೆಯ ಮನೆಗೆ ದಾಖಲಾತಿಗಳನ್ನು ಬಳಸಿ ಮೂರು ಕೋಟಿ ಲೋನ್ ಪಡೆಯಲಾಗಿತ್ತು. ಮೂರು ಕೋಟಿ ಪೈಕಿ ಒಂದು ಕೋಟಿ ಮಿಥುನ್‌ ಎಂಬ ಓರ್ವ ಪಾಲುದಾರನ ಮೂಲಕ ಅಭಿಲಾಷ್ ಪಾಲುದಾರನಾಗಿರುವ ಕಂಪನಿಗೆ ಬಂದಿದೆ. ಬಳಿಕ ನಲವತ್ತು ಲಕ್ಷ ಹಣವನ್ನು ಮಿಥುನ್‌ ಪಡೆದಿದ್ದಾನೆ. ಉಳಿದ ಅರವತ್ತು ಲಕ್ಷ ಕಂಪನಿಯ ಅಕೌಂಟ್ ನಲ್ಲಿಯೇ ಇದೆ. ಇದು ಕಂಪನಿಯ ಪಾಲುದಾರನಾಗಿರುವ ಅಭಿಲಾಷ್​ಗೂ ಸೇರಿದೆ. ಸದ್ಯ ಈ ಬಗ್ಗೆ ಮಾಹಿತಿ ಪಡೆಯಲು ಸಿಸಿಬಿ ವಿಚಾರಣೆಗೆ ಕರೆದಿದೆ. ಆದರೆ ಅಭಿಲಾಷ್ ಮೊದಲ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡಿಲ್ಲ. ಹೀಗಾಗಿ ಮತ್ತೆ ವಿಚಾರಣೆಗೆ ಕರೆಯಲಾಗಿದೆ. ದಾಖಲಾತಿಗಳ ಪ್ರಕಾರ ಹಣ ಅಕೌಂಟ್​ಗೆ ಬಂದು ನಂತರ ಹಣ ಬಳಸಿರುವುದು ಪತ್ತೆಯಾಗಿದೆ. ಸದ್ಯ ಕೇಸ್​ನಲ್ಲಿ ಇದುವರೆಗೆ ಐವರನ್ನು ಅರೆಸ್ಟ್ ಮಾಡಲಾಗಿದೆ.…

Read More

ಬೆಳಗಾವಿ:- ಭೀಕರ ರಸ್ತೆ ‌ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ‌ತಾಲೂಕಿನ ಇಂಚಲ ಗ್ರಾಮದಲ್ಲಿ ‌ಜರುಗಿದೆ. ಬೈಲಹೊಂಗಲ ‌ನಿವಾಸಿ ಮಂಗಲ ಭರಮನಾಯ್ಕರ್ (50) ಚಾಲಕ ಶ್ರೀಶೈಲ ನಾಗನಗೌಡರ ಮೃತರು. ರಾಯನಾಯ್ಕ ಭರಮನಾಯ್ಕರ್ (87), ಗಂಗವ್ವ ಭರಮನಾಯ್ಕರ್ (80), ಮಂಜುಳ ನಾಗನಗೌಡರ (30)ಇಂಚಲ‌‌ ಗ್ರಾಮದ‌ ಮತ್ತೊಂದು ‌ಕಾರಿನ ಚಾಲಕ ಸುಬಾನಿ ವಕ್ಕುಂದ‌ (28) ಗಾಯಾಳುಗಳು. ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ‌ದಾಖಲಿಸಿ‌ ಚಿಕಿತ್ಸೆ ನೀಡಲಾಗಿದೆ. ಮನೆ ಗೃಹಪ್ರವೇಶಕ್ಕೆ ಬಟ್ಟೆ ಖರೀದಿಸಿ ಮರಳಿ ಬರುತ್ತಿದ್ದ ಭರಮನಾಯ್ಕರ್ ‌ಕುಟುಂಬ, ಈ ವೇಳೆ ಗೋಕಾಕ ತಾಲೂಕಿನ ‌ಕೊಣ್ಣೂರು ಪಟ್ಟಣದಲ್ಲಿ ಬಟ್ಟೆ ‌ಖರೀದಿಸಿ ಮರಳುವಾಗ ಅವಘಡ ಸಂಭವಿಸಿದೆ. ಮುರಗೋಡ ಠಾಣೆ ‌ಪೊಲೀಸರು ಸ್ಥಳಕ್ಕೆ ‌ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Read More

ಹಾವೇರಿ:- ಸ್ವಪಕ್ಷದವರ ವಿರುದ್ಧ ಶಾಸಕ ಬಸವನಗೌಡ ಯತ್ನಾಳ್ ವಾಗ್ದಾಳಿ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಈ ಕುರಿತು ರಾಷ್ಟ್ರೀಯ ನಾಯಕರು ಮಾತನಾಡ್ತಾರೆ. ನಮ್ಮಲ್ಲಿ ಏನೆ ಸಮಸ್ಯ ಇದ್ರು ಹಿರಿಯರು ಮಾತ್ನಾಳ್ತಾರೆ. ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರ ಅಸಹಕಾರ ತೋರೊದು ಸರಿಯಲ್ಲ ಎಂದರು. ಇನ್ನೂ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಜೋಶಿ ಕಾರಣ ಎಂಬ ಬಿಕೆ ಹರಿಪ್ರಸಾದ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅವರಿಗೆ ನಾನು ಇಷ್ಟೇ ಹೇಳೊದು ಅವರಂತೆ ನಾನು ಅಸಭ್ಯ ವರ್ತನೆ ಮಾಡಲ್ಲ. ನನ್ನ ಬಯ್ಯೊದ್ರಿಂದ ನೀವು ಮಂತ್ರಿ ಆಗೊದ್ರಿಂದ ನನಗೆ ಬೈಲಿ. ನಿಮ್ಮನ್ನ ಸಿದ್ದರಾಮಯ್ಯ ಮಂತ್ರಿ ಮಾಡಲ್ಲ ಅಂತಾ ಬಿಕೆ ಹರಿಪ್ರಸಾದಗೆ ಜೋಶಿ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ತೊರೆದು ಕೆಲ ನಾಯಕರು ಕಾಂಗ್ರೆಸ್ ಸೇರುವ ವಿಚಾರವಾಗಿ ಮಾತನಾಡಿ, ನಮ್ಮ ಪಕ್ಷದವರು ಕಾಂಗ್ರೆಸ್ ಸೇರುವದು ಅಸಾಧ್ಯ. ಒಂದು ವೇಳೆ ಕಾಂಗ್ರೆಸ್ ಪಕ್ಷದತ್ತ ಹೋದರು ಅವರಿಗೆ ಸ್ಥಾನಮಾನ…

Read More

ಬೆಂಗಳೂರು:- ಅತಿಥಿ ಉಪನ್ಯಾಸಕರ ಮನವಿಗೆ ಸ್ಪಂದಿಸಿರುವ ಸರ್ಕಾರವು ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದೆ. ಈ ಸಂಬಂಧ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು, ಅತಿಥಿ ಉಪನ್ಯಾಸಕರ ವೇತನ 5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದು, ಇದೇ ವೇಳೆ ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಅತಿಥಿ ಉಪನ್ಯಾಸಕರು ಕೆಲವು ಬೇಡಿಕೆಗಳನ್ನು ನಮ್ಮ ಮುಂದೆ ಇಟ್ಟಿದ್ದರು. ಸೇವೆ ಕಾಯಂ ಅವರ ಪ್ರಮುಖ ಬೇಡಿಕೆಯಾಗಿದೆ. ಅವರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಅವರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ವರ್ಕ್ ಲೋಡ್ ಬಗ್ಗೆಯೂ ಸೂಚನೆ ನೀಡಲಾಗಿದೆ. 60 ವರ್ಷ ಪೂರೈಸಿದ ಅತಿಥಿ ಉಪನ್ಯಾಸಕರು ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನ ಮಾಡಲಾಗಿದೆ. ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ ನೀಡಲಾಗುವುದು. ಸಹಾಯಕ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು…

Read More

ಬೆಂಗಳೂರು:- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಶಿಕ್ಷೆ ನೀಡಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ದಂಡ‌ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ‌ ಅನುಭವಿಸಲು ಆದೇಶಿಸಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡದ ಹಣದಲ್ಲಿ 6,96,60,000 ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಕೋರ್ಟ್ ಆದೇಶಿಸಿದೆ. ಕೋರ್ಟ್​ನಲ್ಲಿ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದ್ರೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುಚ್ಚಳಿಕೆ ಒಪ್ಪಲು ನಿರಾಕರಿಸಿದೆ. ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಹೀಗಾಗಿ ಜಡ್ಜ್ ಜೆ.ಪ್ರೀತ್ ಅವರು ಮಧು…

Read More

ಗೌರಿಬಿದನೂರು : ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿನ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಹಿತ ಕಾಪಾಡುವುದರಲ್ಲಿ ವಿಫಲವಾಗಿದ್ದು, ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಆಗ್ನೇಯ ‌ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತು ಸದಸ್ಯ ವೈ.ಎ.ನಾರಾಯಣಸ್ವಾಮಿ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಶಿಕ್ಷಕರೊಂದಿಗೆ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ‌ಮಾಡಿ, ಅವರ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಾ ಅವರು ಮಾತನಾಡಿದರು. ಕಳೆದ 20 ವರ್ಷಗಳಿಂದಲೂ ಈ ಭಾಗದ ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದೇನೆ. ಮುಂಬರುವ 2024 ರ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಅಭ್ಯರ್ಥಿಯಾಗಿ ಮತ್ತೊಮ್ಮೆ ಶಿಕ್ಷಕರ ಸೇವೆ ಮಾಡಲು ಬಯಸಿದ್ದೇನೆ. ಸತತ ಮೂರು ಬಾರಿ ವಿಧಾನಪರಿಷತ್ತು ಸದಸ್ಯನಾಗಿ ಕಾರ್ಯನಿರ್ವಹಿಸುವ ಮೂಲಕ ಶಿಕ್ಷಣ ಕ್ಷೇತ್ರದ ಒಳಿತಿಗಾಗಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಹಿತ ಕಾಪಾಡಲು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಎಲ್ಲ ಶಿಕ್ಷಕರ ಸಂಘದ ಪದಾಧಿಕಾರಿಗಳು ನಮ್ಮೊಂದಿಗೆ ಇದ್ದಾರೆ.…

Read More

ಸೀತಾಫಲದ ಹಣ್ಣಿನಲ್ಲಿ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 6, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳಿವೆ. ಇದರಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ. ದೀರ್ಘಕಾಲದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿರುವ ಜನರು ಈ ಹಣ್ಣನ್ನು ಸೇವಿಸಿದರೆ ಬೇಗನೆ ಗುಣಮುಖರಾಗುತ್ತಾರೆ. ಅಂತೆಯೇ, ಆಮ್ಲೀಯತೆ ಸಮಸ್ಯೆ ಇರುವವರು ಸಹ ಈ ಹಣ್ಣನ್ನು ತಿನ್ನಬಹುದು. ನಮ್ಮ ದೇಹದಲ್ಲಿ ಚಯಾಪಚಯ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಇದು ನಮ್ಮ ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿದೆ. ಕಣ್ಣು ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದನ್ನು ತಿನ್ನುವುದರಿಂದ ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಇದು ಹೃದಯದ ಆರೋಗ್ಯ ಮತ್ತು ಮೆದುಳಿನ ಆರೋಗ್ಯಕ್ಕೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಈ ಹಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶಗಳು ಸಮೃದ್ಧವಾಗಿದ್ದು, ಇದು ಚರ್ಮಕ್ಕೆ ಮೃದುವಾಗುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ಕಣ್ಣಿನ ಸಮಸ್ಯೆ ಇರುವ ಮಕ್ಕಳಿಗೆ ಈ ಹಣ್ಣು ಉಪಯುಕ್ತವಾಗಿದೆ. ಇದು ನಮ್ಮ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ರಕ್ತಹೀನತೆ ಇರುವ ಮಹಿಳೆಯರು ಮತ್ತು ಗರ್ಭಾವಸ್ಥೆಯಲ್ಲಿ ಹಿಮೋಗ್ಲೋಬಿನ್ ಕೊರತೆ ಇರುವ ಮಹಿಳೆಯರು ಈ…

Read More