ಬೆಂಗಳೂರು: ಕೇಂದ್ರ ಸರಕಾರ ಕೊಬರಿಗೆ ಬೆಂಬಲ ಬೆಲೆ ನೀಡಿರುವುದನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯದಲ್ಲಿ ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬರಿ ಖರೀದಿಸಬೇಕು ಎಂದು ಕೇಂದ್ರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. (ಪ್ರತಿ ಕ್ವಿಂಟಾಲ್‌ಗೆ) ಏರಿಕೆ ಮಾಡಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದ್ದಾರೆ ಡಿಸೆಂಬರ್ 21ರಂದು ನವದೆಹಲಿಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ನೇತೃತ್ವದಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೊಬರಿ ರೈತರ ಸಂಕಷ್ಟ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮಾನ್ಯ ಪ್ರಧಾನಿಗಳು ನಮ್ಮ ಮನವಿಗೆ ಅತ್ಯಂತ…
Author: AIN Author
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದೆ. ಕನ್ನಡ ಹೋರಾಟಗಾರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು (Kuvempu) ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದಿದ್ದಾರೆ. ನಾವು ಕನ್ನಡದ ಅನುಷ್ಠಾನಕ್ಕಾಗಿ ವಿಧೇಯಕ ಜಾರಿಗೊಳಿಸಿದ್ದೆವು. ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು, ಕನ್ನಡನಾಡಿನಲ್ಲಿ ಕನ್ನಡದ ಅನುಷ್ಠಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಈಗ ಕಾನೂನೂ ಮಾಡದಿದ್ದರೆ ನಮ್ಮ ಮಕ್ಕಳಿಗೆ…
ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಸೂಚಿಸಿದರು. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸೂಚಿಸಿದರು. ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಯಿತು. ವಸತಿ ಇಲಾಖೆ ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ…
ನವದೆಹಲಿ: ರಾಮಮಂದಿರ (Ram Mandir) ಲೋಕಾರ್ಪಣೆ ವಿಚಾರದಲ್ಲಿ ನಿರೀಕ್ಷೆಯಂತೆಯೇ ರಾಜಕೀಯ ಜೋರಾಗಿದೆ. ಅಯೋಧ್ಯೆ (Ayodhya) ಹೆಸರಿನಲ್ಲಿ ಒಂದು ಧರ್ಮಕ್ಕೆ ಮಿತಿಮೀರಿದ ಪ್ರಾಧಾನ್ಯತೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ, ಸೋನಿಯಾ ಗಾಂಧಿ (Sonia Gandhi) ಕುಟುಂಬದ ಆಪ್ತ ಸ್ಯಾಮ್ ಪಿತ್ರೊಡಾ (Sam Pitroda) ಹೇಳಿದ್ದಾರೆ. ಪ್ರಧಾನಿ ಮೋದಿ ಬರೀ ಆಲಯಕ್ಕೆ ಪೂರ್ಣಪ್ರಮಾಣದಲ್ಲಿ ಸಮಯ ಕೊಟ್ಟಿದ್ದಾರೆ. ರಾಮಮಂದಿರದ ಸುತ್ತವೇ ದೇಶ ರಾಜಕೀಯ ಪ್ರದಕ್ಷಿಣೆ ಹಾಕಲಾರಂಭಿಸಿದೆ. ಪ್ರತಿಯೊಬ್ಬರು ಆಲಯದ ಬಗ್ಗೆ, ರಾಮನ ಬಗ್ಗೆ ಮಾತನಾಡುತ್ತಿದ್ದಾರೆ. ಇದನ್ನು ನೋಡಿ ನನಗೆ ನೋವಾಗುತ್ತಿದ್ದು, ಹೀಗಾದರೆ ಆಧುನಿಕ ಭಾರತದ ನಿರ್ಮಾಣ ಹೇಗೆ ಸಾಧ್ಯ ಪಿತ್ರೋಡಾ ಪ್ರಶ್ನಿಸಿದ್ದಾರೆ. https://ainlivenews.com/eat-these-foods-if-you-are-deficient-in-vitamin-d-in-winter/ ಧರ್ಮ ಎನ್ನುವುದು ವೈಯಕ್ತಿಕ ವಿಚಾರ. ಆದರೆ ಇದನ್ನು ರಾಷ್ಟ್ರೀಯ ವಿಚಾರವಾಗಿಸಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಿರುವನಂತಪುರದ ಕಾಂಗ್ರೆಸ್ ಸಂಸದ ಶಶಿ ತರೂರ್, ರಾಮಮಂದಿರ ವಿಚಾರದಲ್ಲಿ ಧರ್ಮ ರಾಜಕೀಯ ನಡೆಯುತ್ತಿದೆ. ರಾಜಕೀಯಕ್ಕಾಗಿ ಧರ್ಮದ ದುರ್ಬಳಕೆ ಸಲ್ಲದು ಎಂದಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ತವರು ರಾಜ್ಯ ಗುಜರಾತ್‌ನಲ್ಲಿ (Gujarat) ಟೆಸ್ಲಾ (Tesla) ಕಂಪನಿ ತನ್ನ ಫ್ಯಾಕ್ಟರಿ ತೆರೆಯುವ ಸಾಧ್ಯತೆಯಿದೆ. ಟೆಸ್ಲಾ ಕಂಪನಿ ಭಾರತದಲ್ಲಿ ಘಟಕ ತೆರೆಯಲಿದೆ ಎಂಬ ಸುದ್ದಿ ಕೆಲ ವರ್ಷಗಳಿಂದ ಪ್ರಕಟವಾಗುತ್ತಲೇ ಇದೆ. ಆದರೆ ಇಲ್ಲಿಯವರೆಗೆ ಎಲ್ಲಿ ಘಟಕ ತೆರೆಯಲಿದೆ ಎಂಬುದರ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ. ಆದರೆ ಈಗ ಗುಜರಾತ್‌ನಲ್ಲಿ ಫ್ಯಾಕ್ಟರಿ ತೆರೆಯಲಿದೆ ಎಂದು ವರದಿಯಾಗಿದೆ. ಜನವರಿಯಲ್ಲಿ ನಡೆಯಲಿರುವ ವೈಬ್ರೆಂಟ್ ಗುಜರಾತ್ (Vibrant Gujarat) ಹೂಡಿಕೆ ಸಮಾವೇಶದಲ್ಲಿ ಈ ಬಗ್ಗೆ ಅಂತಿಮ ಘೋಷಣೆ ಯಾಗಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. https://ainlivenews.com/eat-these-foods-if-you-are-deficient-in-vitamin-d-in-winter/ ಕಳೆದ ಕೆಲ ವರ್ಷಗಳಿಂದ ಅಟೋಮೊಬೈಲ್ ಕ್ಷೇತ್ರಕ್ಕೆ ಗುಜರಾತ್ ಉದ್ಯಮ ಸ್ನೇಹಿ ರಾಜ್ಯವಾಗಿರುವ ಹಿನ್ನೆಲೆಯಲ್ಲಿ ಟೆಸ್ಲಾ ಇಲ್ಲೇ ತನ್ನ ಘಟಕ ತೆರೆಯಲು ಮುಂದಾಗಿದೆ ಎನ್ನಲಾಗುತ್ತಿದೆ. ಸಾನಂದ್, ಬೆಚರಾಜಿ ಅಥವಾ ಧೋಲೇರಾ ಪೈಕಿ ಒಂದು ಜಾಗದಲ್ಲಿ ಘಟಕ ನಿರ್ಮಾಣವಾಗಲಿದೆ. ಈಗಾಗಲೇ ಗುಜರಾತ್‌ನಲ್ಲಿ ಮಾರುತಿ ಸುಜುಕಿ, ಸಿಇಎಟಿ ಟಯರ್, ಫೋರ್ಡ್, ಹೋಂಡಾ, ಎಂಜಿ ಮೋಟಾರ್,…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿ ಸೆಲೆಬ್ರೆಷನ್ಗೆ ಕೌಂಟ್ಡೌನ್ ಶುರುವಾಗಿದೆ.. ಹಾಟ್ ಆಫ್ ದಿ ಟೌನ್ನಲ್ಲಿ ಲಕ್ಷಾಂತರ ಜನ ಪಾರ್ಟಿ ಮಾಡೊಕ್ಕೆ ಸೇರಲಿದ್ದಾರೆ.. ಪಾರ್ಟಿಗಾಗಿ ಮೆಟ್ರೋ ಬಳಸೊ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಸಿಹಿ ಸುದ್ದಿಯ ಜೊತೆ ಶಾಕಿಂಗ್ ನ್ಯೂಸ್ ನೀಡ್ತಿದೆ. . ಎಂಜಿ ರೋಡ್.. ಬ್ರಿಗೆಡ್ ರೋಡ್..ಕಲರ್ ಫುಲ್ ಲೈಟಿಂಗ್ಸ್ ಮಧ್ಯೆ ನ್ಯೂ ಇಯರ್ ಸೆಲೆಬ್ರೆಷನ್ಗೆ ಸಿಕ್ಕಾಪಟ್ಟೆ ಜನ ಸೇರೊ ಹಾಟ್ಸ್ಪಾಟ್.. ಹೊಸ ವರ್ಷ ಎನ್ಜಾಯ್ ಮಾಡಲು ಸಾವಿರಾರು ಜನ ನಮ್ಮ ಮೆಟ್ರೋ ಬಳಸುತ್ತಾರೆ..ಹೀಗಾಗಿ ಹೊಸ ವರ್ಷಕ್ಕೆ ರಾತ್ರಿ 1:30 ಗಂಟೆಯವರೆಗೆ ನಮ್ಮ ಮೆಟ್ರೋ ರೈಲು ವಿಸ್ತರಣೆ ಮಾಡಲಾಗಿದೆ.. ರಾತ್ರಿ 11 ರ ಬಳಿಕ 2 ಗಂಟೆಯವರೆಗೆ ಎಂಜಿ ರಸ್ತೆ,ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಜನ ರಾತ್ರಿ 10 ನಂತರ ಸೇರುತ್ತಾರೆ.. ಜನದಟ್ಟಣೆ ಮತ್ತು ಚಿಲ್ಲರೆ ಸಮಸ್ಯೆಯನ್ನು ಕಡಿಮೆ ಮಾಡೋ ನಿಟ್ಟಿನಲ್ಲಿ ಬಿಎಂಆರ್ಸಿಎಲ್ ಟೋಕನ್ ದರವನ್ನು ಹೆಚ್ಚಳ ಮಾಡಿದೆ. ಹೌಡು ಎರಡು ನಿಲ್ದಾಣಗಳಲ್ಲಿ ಮೆಟ್ರೋ…
ಬೆಂಗಳೂರು: ಕನ್ನಡಪರ ಸಂಘಟನೆಗಳು ಹೋಟೆಲ್, ಮಳಿಗೆಗಳು ಸೇರಿದಂತೆ ಇನ್ನಿತರ ಕಡೆಗಳಲ್ಲಿ ಇಂಗ್ಲಿಷ್ ನಾಮಫಲಕಗಳನ್ನು ಒಡೆದು ಹಾಕುವುದು, ಮಸಿ ಬಳಿಯುವುದನ್ನು ಮಾಡಬಾರದು. ಯಾರೂ ಕೂಡ ಕಾನೂನು ಕ್ರಮ ಕೈಗೊಳ್ಳಬಾರದು. ಇದೆಲ್ಲ ನಾಳೆ ವೈರಲ್ ಆಗಿ ವಿದೇಶಗಳಿಗೆ ಹೋದರೆ ಇಲ್ಲಿ ಇಂಡಸ್ಟ್ರಿಗಳಲ್ಲಿ ಬಂಡವಾಳ ಹೂಡಿಕೆಗೆ ಯಾರೂ ಬರುವುದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕೆಂಬ ನಿಯಮ ಇದ್ದರೂ ಪಾಲಿಸದವರ ವಿರುದ್ಧ ಕರವೇ ಸೇರಿದಂತೆ ಕನ್ನಡಪರ ಕಾರ್ಯಕರ್ತರು ಕಾನೂನು ಕೈಗೆತ್ತಿಗೊಂಡಿದ್ದಾರೆ. ಯಾರೂ ಕೂಡ ಕಾನೂನು ಕ್ರಮ ಕೈಗೊಳ್ಳಬಾರದು. ಇದರಿಂದ ನಮ್ಮ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ನಾಳೆ ಬಂಡವಾಳ ಹೂಡುವವರು ಬಾರದೇ ಇರುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿದರು. ಕನ್ನಡ ನಾಡಲ್ಲಿ ಇದ್ದೇವೆ, ಹೀಗಾಗಿ ಬೋರ್ಡ್ ಹಾಕಬೇಕು ಅಂತ ಅಭಿಮಾನದಿಂದ ಹಾಕಬೇಕು. ಇಂಡಸ್ಟ್ರಿ ವಿಚಾರದಲ್ಲಿ ಬಹಳ ಪೈಪೋಟಿ ಇದೆ. ಇಂಥ ಸಂದರ್ಭದಲ್ಲಿ ಯಾರಿಗೂ ಯಾವ ರಾಜ್ಯ, ಯಾವ ದೇಶವೂ ಅನಿವಾರ್ಯ ಇಲ್ಲ. ಇದನ್ನು ಕನ್ನಡಪರ ಸಂಘಟನೆಯವರು…
ಬೆಂಗಳೂರು: ಹೊಸ ವರ್ಷದ (New Year 2024) ಪಾರ್ಟಿ ಮೂಡ್‌ನ ಬೆಂಗಳೂರಿಗೆ ‘ನಮ್ಮ ಮೆಟ್ರೋ’ (Namma Metro) ಗುಡ್ ನ್ಯೂಸ್ ಕೊಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಡಿ.31 ರ ಮಧ್ಯರಾತ್ರಿಯಿಂದ ಜನವರಿ 1 ರ ಬೆಳಗಿನ ಜಾವ 2:15 ರವರೆಗೆ ಮೆಟ್ರೋ ಸೇವೆ ಅವಧಿ ವಿಸ್ತರಿಸಿ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆ ಹೊರಡಿಸಿದೆ. https://ainlivenews.com/state-government-decides-to-release-extra-bmtc-buses-for-new-year/ 2024 ರ ಹೊಸ ವರ್ಷದ ಮುನ್ನಾದಿನ, ನಿಗಮವು ಮೆಟ್ರೋ ರೈಲು ಸೇವೆಗಳನ್ನು ನೇರಳೆ ಮತ್ತು ಹಸಿರು ಮಾರ್ಗದಲ್ಲಿ ವಿಸ್ತರಿಸುತ್ತಿದೆ. ಜ.1 ರ ಮಧ್ಯರಾತ್ರಿ 1:30 ಗಂಟೆಗೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲು ಸೇವೆ ಇರಲಿದೆ. 15 ನಿಮಿಷದ ಅವಧಿಗೆ ಒಂದರಂತೆ ಮೆಟ್ರೋ ಸಂಚರಿಸಲಿವೆ. ಮೆಜೆಸ್ಟಿಕ್‌ನಿಂದ ಜ.1 ರ ಬೆಳಗಿನ ಜಾವ 2:15 ರ ವರೆಗೆ ಎಲ್ಲಾ ನಾಲ್ಕು ದಿಕ್ಕುಗಳಿಗೂ ಕೊನೆಯ ರೈಲು ಸೇವೆ ಇರಲಿದೆ ಸಾರ್ವಜನಿಕರ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಎಂ.ಜಿ. ರೋಡ್ ಮೆಟ್ರೋ ನಿಲ್ದಾಣವನ್ನು ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನಕ್ಕೆ ಡಿ.31 ರ…
ಬೆಂಗಳೂರು: ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪನವರು (KH Muniyappa) ಕೆಎಸ್‍ಆರ್ ಟಿಸಿ (KSRTC) ಮತ್ತು ಬಿಎಂಟಿಸಿ (BMTC) ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು. ಜೊತೆಗೆ ಬಸ್‍ಗಳಿಗೆ ಹಸಿರು ನಿಶಾನೆ ತೋರಿದರು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (Bengaluru Airport) ಅತ್ಯಾಧುನಿಕ ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು, ಇದು ಎಲ್ಲಾ ವಿಮಾನ ನಿಲ್ದಾಣಗಳಿಗಿಂತ ವಿಭಿನ್ನವಾಗಿದೆ ಮತ್ತು ಅತಿ ದೊಡ್ದ ವಿಮಾನ ನಿಲ್ದಾಣವಾಗಿದೆ. ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು ಬಿಎಂಟಿಸಿ ಮತ್ತು ವಾಯುವಜ್ರದ ಎಲೆಕ್ಟ್ರಿಕ್ ಬಸ್‍ಗಳ ಸೇವೆಯನ್ನು ಕಲ್ಪಿಸಲಾಗಿದೆ. ಜೊತೆಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಗಳನ್ನು ನೀಡಲು ಸಚಿವರು ಒಪ್ಪಿಗೆಯನ್ನು ನೀಡಿದರು. ಈಗಾಗಲೇ ಟರ್ಮಿನಲ್ 1 ರಲ್ಲಿ ಸುಸಜ್ಜಿತ ಬಸ್ ನಿಲ್ದಾಣವಿದ್ದು, ಟರ್ಮಿನಲ್ 2 ರಲ್ಲಿ ನಿಲ್ದಾಣ ಇರಲಿಲ್ಲ. ಹೀಗಾಗಿ ಪ್ರಯಾಣಿಕರು ಟರ್ಮಿನಲ್ 2 ರಿಂದ…
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ವಿಗ್ರಹ ಪ್ರತಿಷ್ಠಾಪನೆಗೆ ಇನ್ನೇನು ಕೆಲವೇ ದಿನಗಳಿರುವ ಹೊತ್ತಿನಲ್ಲಿ ಉತ್ತರಪ್ರದೇಶದ (Uttar Pradesh) ಸ್ವರೂಪ ಸಂಪೂರ್ಣ ಬದಲಾಗುತ್ತಿದೆ. ರಾಜ್ಯದ ಪ್ರಮುಖ ಸ್ಥಳಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಇದೀಗ ಅಯೋಧ್ಯೆಯ ರೈಲ್ವೇ ನಿಲ್ದಾಣಕ್ಕೆ `ಅಯೋಧ್ಯಾ ಧಾಮ್’ ಜಂಕ್ಷನ್ (Ayodhya Dham) ಎಂದು ಮರುನಾಮಕರಣ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದ ಲುಲ್ಲು ಸಿಂಗ್, ಇದೇ ತಿಂಗಳ 30ರಂದು ಪ್ರಧಾನಿ ನರೇಂದ್ರ ಮೋದಿಯವರು (Narendra Modi) `ಅಯೋಧ್ಯಾ ಧಾಮ್’ ರೈಲ್ವೇ ನಿಲ್ದಾಣ ಉದ್ಘಾಟಿಸಲಿದ್ದಾರೆ. ರೈಲ್ವೇ ನಿಲ್ದಾಣದ ಎಸ್ಕಲೇಟರ್‌ಗಳು ಮತ್ತು ಗೋಡೆಗಳ ಮೇಲೆ ಭಗವಾನ್ ರಾಮನ ಭಿತ್ತಿಚಿತ್ರಗಳನ್ನು ಚಿತ್ರಿಸಲಾಗಿದೆ. ರೈಲು ನಿಲ್ದಾಣದಲ್ಲಿ ಲಿಫ್ಟ್‌ಗಳು, ಪ್ರವಾಸಿ ಮಾಹಿತಿ ಕೇಂದ್ರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚುವರಿಯಾಗಿ ಕಲ್ಪಿಸಲಾಗಿದೆ. ಜನರ ನಿರೀಕ್ಷೆಯಂತೆ ಈ ಹೆಸರನ್ನು ಬದಲಿಸಲಾಗಿದೆ ಎಂದು ತಿಳಿಸಿದ್ದಾರೆ. ನಿಲ್ದಾಣದ ಮುಖ್ಯ ಕಟ್ಟಡವು ರಾಮ ಮಂದಿರವನ್ನು ಹೋಲುತ್ತದೆ. ಕಟ್ಟಡದ ನಿರ್ಮಾಣಕ್ಕೆ ರಾಮ ಮಂದಿರದ ನಿರ್ಮಾಣದಲ್ಲಿ ಬಳಸಿದ ರಾಜಸ್ಥಾನದಿಂದ ತಂದ ಗುಲಾಬಿ ಬನ್ಸಿ ಪಹರ್ಪುರ್ ಕಲ್ಲುಗಳನ್ನು…