Author: AIN Author

ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ವಿಗ್ರಹ ಪ್ರತಿಷ್ಠಾಪನೆಗೆ ಇನ್ನೇನು ಕೆಲವೇ ದಿನಗಳಿರುವ ಹೊತ್ತಿನಲ್ಲಿ ಉತ್ತರಪ್ರದೇಶದ (Uttar Pradesh) ಸ್ವರೂಪ ಸಂಪೂರ್ಣ ಬದಲಾಗುತ್ತಿದೆ. ರಾಜ್ಯದ ಪ್ರಮುಖ ಸ್ಥಳಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಇದೀಗ ಅಯೋಧ್ಯೆಯ ರೈಲ್ವೇ ನಿಲ್ದಾಣಕ್ಕೆ `ಅಯೋಧ್ಯಾ ಧಾಮ್’ ಜಂಕ್ಷನ್ (Ayodhya Dham) ಎಂದು ಮರುನಾಮಕರಣ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದ ಲುಲ್ಲು ಸಿಂಗ್, ಇದೇ ತಿಂಗಳ 30ರಂದು ಪ್ರಧಾನಿ ನರೇಂದ್ರ ಮೋದಿಯವರು (Narendra Modi) `ಅಯೋಧ್ಯಾ ಧಾಮ್’ ರೈಲ್ವೇ ನಿಲ್ದಾಣ ಉದ್ಘಾಟಿಸಲಿದ್ದಾರೆ. ರೈಲ್ವೇ ನಿಲ್ದಾಣದ ಎಸ್ಕಲೇಟರ್‌ಗಳು ಮತ್ತು ಗೋಡೆಗಳ ಮೇಲೆ ಭಗವಾನ್ ರಾಮನ ಭಿತ್ತಿಚಿತ್ರಗಳನ್ನು ಚಿತ್ರಿಸಲಾಗಿದೆ. ರೈಲು ನಿಲ್ದಾಣದಲ್ಲಿ ಲಿಫ್ಟ್‌ಗಳು, ಪ್ರವಾಸಿ ಮಾಹಿತಿ ಕೇಂದ್ರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚುವರಿಯಾಗಿ ಕಲ್ಪಿಸಲಾಗಿದೆ. ಜನರ ನಿರೀಕ್ಷೆಯಂತೆ ಈ ಹೆಸರನ್ನು ಬದಲಿಸಲಾಗಿದೆ ಎಂದು ತಿಳಿಸಿದ್ದಾರೆ. ನಿಲ್ದಾಣದ ಮುಖ್ಯ ಕಟ್ಟಡವು ರಾಮ ಮಂದಿರವನ್ನು ಹೋಲುತ್ತದೆ. ಕಟ್ಟಡದ ನಿರ್ಮಾಣಕ್ಕೆ ರಾಮ ಮಂದಿರದ ನಿರ್ಮಾಣದಲ್ಲಿ ಬಳಸಿದ ರಾಜಸ್ಥಾನದಿಂದ ತಂದ ಗುಲಾಬಿ ಬನ್ಸಿ ಪಹರ್ಪುರ್ ಕಲ್ಲುಗಳನ್ನು…

Read More

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಪಾರ್ಟಿ ಮುಗಿಸಿ ತೆರಳುವ ಜನರಿಗಾಗಿಯೇ ಬಿಎಂಟಿಸಿ ಡಿಸೆಂಬರ್ 31ರಂದು ವಿಶೇಷ ಬಸ್‌ಗಳನ್ನು ಓಡಿಸುತ್ತಿದೆ. ಬಿಎಂಟಿಸಿ ಎಂ. ಜಿ. ರಸ್ತೆ/ ಬ್ರಿಗೇಡ್ ರಸ್ತೆಯಿಂದ ವಿವಿಧ ಪ್ರದೇಶಗಳಿಗೆ ಈ ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ. ಡಿಸೆಂಬರ್ 31ರ ರಾತ್ರಿ 11 ಗಂಟೆಯಿಂದ ಜನವರಿ 1ರ 2 ಗಂಟೆಯ ತನಕ ಬಸ್‌ಗಳು ಸಂಚಾರ ನಡೆಸಲಿವೆ. ಬಿಎಂಟಿಸಿ ಡಿಸೆಂಬರ್ 31ರಂದು ಎಂ. ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಭಾಗವಹಿಸುವ ಜನರಿಗೆ ಅನುಕೂಲವಾಗುವಂತೆ ಬೇಡಿಕೆಗೆ ಅನುಗುಣವಾಗಿ ಬಿಎಂಟಿಸಿ ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೇ ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ/ ಜಂಕ್ಷನ್‌ಗಳಾದ ಯಲಹಂಕ, ಇಂದಿರಾನಗರ, ಕೋರಮಂಗಲ, ಶಾಂತಿನಗರ, ಬನಶಂಕರಿ, ಜಯನಗರ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಕಾಡುಗೋಡಿ, ನಾಗಸಂದ್ರ, ಹೆಬ್ಬಾಳ, ಸೆಂಟ್ರಲ್ ಸಿಲ್ಕ್ ಬೋರ್ಡ್‌ಗಳಿಂದಲೂ ಬಸ್ ಸಂಚಾರಕ್ಕೆ ಬಿಎಂಟಿಸಿ ಕ್ರಮ ಕೈಗೊಂಡಿದೆ. ಬಸ್ ಮಾರ್ಗ, ಸಂಖ್ಯೆಗಳು ಈ…

Read More

ಬೆಂಗಳೂರು: ನಾರಾಯಣಗೌಡರನ್ನು (Narayana Gowda) ಸರಿಯಾಗಿ ನಡೆಸಿಕೊಳ್ಳೋದು ಅಂದರೆ ಹೇಗೆ? ಪೊಲೀಸರು ಹೇಗೆ ನಡೆಸಿಕೊಳ್ಳಬೇಕು ಎಂದು ಅವರನ್ನೇ ಕೇಳುತ್ತೇನೆ ಹೇಳಲಿ. ಹೀಗೆ ಕಾನೂನು ಕೈಗೆತ್ತಿಕೊಂಡರೆ ಸುಮ್ಮನೆ ಇರೋದಕ್ಕೆ ಆಗುತ್ತಾ? ಪ್ರತಿಭಟನೆಗೆ ಅರ್ಧಗಂಟೆ ಸಮಯ ಕೊಡಬಹುದು. ಆದರೆ ರಸ್ತೆಯಲ್ಲಿ ಇದ್ದರೆ ಏನು ಮಾಡಬಹುದು ಎಂದು ಕರವೇ (Karnataka Rakshana Vedike) ನಾರಾಯಣಗೌಡ ವಿರುದ್ಧ ಗೃಹ ಸಚಿವ ಪರಮೇಶ್ವರ್ (G Parameshwar) ಗರಂ ಆಗಿದ್ದಾರೆ. https://ainlivenews.com/karave-activists-released-from-agrahara-jail-in-parappa/ ಈ ಕುರಿತು ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರವೇ ಹೋರಾಟಗಾರರು ಬಲವಂತವಾಗಿ ಬೋರ್ಡ್ ತೆಗೆಯೋದು, ಒಡೆದು ಹಾಕುವುದು ಮಾಡಿದ್ದಾರೆ. ಪೊಲೀಸರು ಸುಮ್ಮನೆ ಇರೋದಕ್ಕೆ ಆಗಲ್ಲ. ಕರವೇ ಹೋರಾಟಗಾರರು ಸಾರ್ವಜನಿಕರಿಗೆ ಧಕ್ಕೆ ತರುವ ಕೆಲಸ ಮಾಡಬಾರದಾಗಿತ್ತು. ಅದಕ್ಕೆ ಪೊಲೀಸರು ಸುಮ್ಮನೆ ಇರಲು ಆಗಲ್ಲ. ಕನ್ನಡ ನಾಮಫಲಕ ಕಡ್ಡಾಯ ಮಾಡೋದಕ್ಕೆ ಬಿಬಿಎಂಪಿಯವರು ಫೆಬ್ರವರಿ 28ರ ಗಡುವು ನೀಡಿದ್ದಾರೆ. ಸ್ವಲ್ಪ ಸಂಯಮ ಇರಬೇಕಲ್ವಾ? ಕಾನೂನಿನ ಉಲ್ಲಂಘನೆ ಮಾಡಿದರೆ ಸುಮ್ಮನಿರೋಕೆ ಆಗಲ್ಲ. ಇದನ್ನು ಸರ್ಕಾರ ಸಹಿಸಲ್ಲ ಎಂದು ಎಚ್ಚರಿಕೆ ಕೊಟ್ಟರು. ನಾವು…

Read More

ಬೆಂಗಳೂರು: ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆಯ (KaRaVe) 15 ಕಾರ್ಯಕರ್ತರು ಬಿಡುಗಡೆಯಾಗಿದ್ದಾರೆ. ಬುಧವಾರ ಲ್ಯಾವೆಲ್ಲೆ ರಸ್ತೆಯಲ್ಲಿ ಇಂಗ್ಲಿಷ್ ಬೋರ್ಡ್ (English Board) ಒಡೆದು ಹಾಕಿದ ಹಿನ್ನೆಲೆ ಕಬ್ಬನ್‌ ಪಾರ್ಕ್‌ ಪೊಲೀಸರು ಅರೆಸ್ಟ್ ಮಾಡಿದ್ದರು. ಬುಧವಾರ ರಾತ್ರಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ 15 ಮಂದಿಗೆ ಎಂಟನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು https://ainlivenews.com/big-shock-for-oil-lovers-huge-increase-in-the-price-of-liquor-for-the-new-year/ ಬುಧವಾರ ಲ್ಯಾವೆಲ್ಲೆ ರಸ್ತೆಯಲ್ಲಿ ಇಂಗ್ಲಿಷ್ ಬೋರ್ಡ್ (English Board) ಒಡೆದು ಹಾಕಿದ ಹಿನ್ನೆಲೆ ಕಬ್ಬನ್‌ ಪಾರ್ಕ್‌ ಪೊಲೀಸರು ಅರೆಸ್ಟ್ ಮಾಡಿದ್ದರು. ಬುಧವಾರ ರಾತ್ರಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ 15 ಮಂದಿಗೆ ಎಂಟನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಪರಪ್ಪನ ಅಗ್ರಹಾರದಿಂದ ಕರವೇ ಕಾರ್ಯಕರ್ತರು ಬಿಡುಗಡೆಯಾಗಿದ್ದಾರೆ. ಕರವೇ ಕಾರ್ಯಕರ್ತರು ಜೈಲಿನಿಂದ ಬಿಡುಗಡೆಯಾಗುವ ಮೊದಲು ಜೈಲು ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಬ್ಯಾರಿಕೇಡ್ ಹಾಕಿ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಪ್ಪನ ಅಗ್ರಹಾರ…

Read More

ಬೆಂಗಳೂರು: ಈ ಬಾರಿ ಹೊಸ ವರ್ಷ ಸಂಭ್ರಮಕ್ಕೆ (New Year 2024) ರಾಜ್ಯದ ಅಬಕಾರಿ ಇಲಾಖೆಯಿಂದ ಕೋಟಿ ಕೋಟಿ ತೆರಿಗೆ ಹಣದ ನಿರೀಕ್ಷೆಯಲ್ಲಿದೆ. ಆದ್ರೆ, ರಾಜ್ಯದಲ್ಲಿ ಮಧ್ಯದ ದರ ಹೆಚ್ಚಾದ (Liquor Price Hike) ಹಿನ್ನೆಲೆಯಲ್ಲಿ ನೆರೆಯ ಗೋವಾ, ತೆಲಂಗಾಣ ಹಾಗೂ ಮಹಾರಾಷ್ಟ್ರಗಳಿಂದ ಮದ್ಯ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರದ ಬೊಕಸಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟವಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. 2024ರ ಹೊಸ ವರ್ಷದ ಸಂಭ್ರಮವನ್ನ ಕೊಂಡಾಡಲು ಇಡೀ ದೇಶವೇ ತುದಿಗಾಲಲ್ಲಿ ನಿಂತಿದೆ. ಈ ಸಂತಸದ ಕ್ಷಣವನ್ನ ಸಂಭ್ರಮಿಸಲು ಲೆಕ್ಕವಿಲ್ಲದಷ್ಟು ಮದ್ಯ (Liquor) ಮಾರಾಟವಾಗುತ್ತೆ. ಆದ್ರೆ ರಾಜ್ಯದಲ್ಲಿ ಮದ್ಯದ ದರ ಗಣನೀಯವಾಗಿ ಏರಿಕೆಯಾದ ಹಿನ್ನೆಲೆಯಲ್ಲಿ, ಎಲ್ಲರ ಕಣ್ಣು ಪಕ್ಕದಲ್ಲಿರೋ ಗೋವಾದತ್ತ ನೆಟ್ಟಿದೆ. ಕರ್ನಾಟಕದಲ್ಲಿ ಮದ್ಯದ ದರ ದುಪ್ಪಟ್ಟಾದ ಹಿನ್ನೆಲೆ ನೆರೆಯ ರಾಜ್ಯಗಳಿಂದ ಮದ್ಯ ಆಮದು ಮಾಡಿಕೊಳ್ಳುವ ತಯಾರಿ ನಡೆದಿದೆ ಗೋವಾದಿಂದ ಅಕ್ರಮವಾಗಿ ಕಲಬುರಗಿಗೆ ಮದ್ಯ ಸಾಗಿಸುತ್ತಿದ್ದ ವೇಳೆ ಖಾಸಗಿ ಬಸ್ ಮೇಲೆ ಕಲಬುರಗಿ ಜಿಲ್ಲಾ ಅಬಕಾರಿ ಅಧಿಕಾರಿಗಳು…

Read More

ಪ್ರಾಣಿಗಳ ಮೇಲಿನ ಪ್ರೀತಿಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ ನಟ ದರ್ಶನ್. ಸ್ವತಃ ಪ್ರಾಣಿ ಪ್ರಿಯರೂ ಆಗಿರುವ ದರ್ಶನ್, ಮೈಸೂರು ಮೃಗಾಲಯ ಸೇರಿದಂತೆ ನಾನಾ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಅವರು ದತ್ತು ಪಡೆದಿದ್ದಾರೆ. ಜೊತೆಗೆ ಮನೆಯಲ್ಲೂ ಹಲವು ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಅದರಲ್ಲೂ ಆನೆಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಕಾಟೇರ ಸಿನಿಮಾವನ್ನು ಹುತಾತ್ಮ ಆನೆ (Elephant) ಅರ್ಜುನ್ (Arjun) ಗೆ ಅರ್ಪಿಸಿದ್ದಾರೆ. ಸಿನಿಮಾ ಶುರುವಾಗುವ ಮುನ್ನ ‘ನಾಡ ದೇವಿ ಚಾಮುಂಡಿಯ ಅಂಬಾರಿಯನ್ನು ಹೊತ್ತು ದಸರೆಯ ವೈಭವವನ್ನು ಜಗತ್ತಿನಾದ್ಯಂತ ಕಣ್ತುಂಬಿಸಿ ಕಣ್ಮರೆಯಾದ ದೃತ್ಯ ಮತ್ತು ದೈವ ಜೀವ ಅರ್ಜುನ ಇದಕ್ಕೆ ನಮ್ಮ ಕಾಟೇರ ಚಿತ್ರ ಅರ್ಪಣೆ’ ಎಂದು ಬರೆಯಲಾಗಿದೆ. ಈ ಮೂಲಕ ಅರ್ಜುನ್ ಗೆ ಗೌರವ ನೀಡಲಾಗಿದೆ. ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಶುರುವಾಗಿದೆ. ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್‌ ಕಟೌಟ್‌ಗೆ…

Read More

ಹುಬ್ಬಳ್ಳಿ: ಮದರಸಾದಲ್ಲಿ ಶಿಕ್ಷಕಿಯಾಗಿದ್ದ ಹುಬ್ಬಳ್ಳಿ ಮೂಲದ ಯುವತಿಗೆ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರವೆಸಗಿದ ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಗುಲಾಮ್ ಜಿಲಾನಿ ಅಜಹರಿ ಸೇರಿದಂತೆ 8 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಹುಬ್ಬಳ್ಳಿ ಮೂಲದ 23 ವರ್ಷದ ಯುವತಿ, ಮಧ್ಯಪ್ರದೇಶದ ಖಂಡವಾದಲ್ಲಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿಯ ಮದರಸಾದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಯ ಪರಿಚಯಸ್ಥನಾಗಿದ್ದನು. ಹೀಗಾಗಿ ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಗೆ “ನಿಮ್ಮ ಮಗಳಿಗೆ ನಮ್ಮಲ್ಲಿ ಕೆಲಸ ಇದೆ” ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಯುವತಿ ಖಂಡವಾ ಪಟ್ಟಣಕ್ಕೆ ಹೋಗಿದ್ದಳು.‌ https://ainlivenews.com/eat-these-foods-if-you-are-deficient-in-vitamin-d-in-winter/ ಅಲ್ಲಿ ಯುವತಿಯನ್ನು ಪುಸಲಾಯಿಸಿದ ಮುಫ್ತಿ ಗುಲಾಮ ಜಿಲಾನಿ ಅಜಹರಿ, ನನ್ನ ಮೊದಲ ಹೆಂಡತಿಗೆ ವಿಚ್ಚೆದನ ನೀಡಿದ್ದೇನೆ. ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ಹೇಳುತ್ತಲೇ ಯುವತಿಗೆ ಮತ್ತು ಬರುವ ಔಷಧ ಕೊಟ್ಟು ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಮದುವೆ ಮಾಡಿಕೊಳ್ಳುವದಾಗಿ ಹೇಳಿ ಎರಡು ವರ್ಷದ…

Read More

ಹೊಸ ವರ್ಷವನ್ನು ಹೊಸ ರೀತಿಯಲ್ಲಿ ಸ್ವಾಗತಿಸುತ್ತಿದ್ದಾರೆ ಕನ್ನಡದ ಹೆಸರಾಂತ ನಟ ನೀನಾಸಂ ಸತೀಶ್. ನಾಳೆ ಅವರ ಮ್ಯಾಟ್ನಿ ಸಿನಿಮಾದ ಹೊಸ ಹಾಡು ರಿಲೀಸ್ ಆಗುತ್ತಿದ್ದು, ಸಂಜೆ 5ಕ್ಕೆ ‘ಬಾರೋ ಬಾರೋ ಬರುವಾಗ ಬಾಟಲ್ ತಾರೋ’ ಎರಡನೇ ಹಾಡನ್ನು ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಇದೇ ಕಲರ್ ಫುಲ್ ಎಣ್ಣೆ ಸಾಂಗ್ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯಿತು. ರಂಗು ರಂಗಾದ ಸೆಟ್ ನಲ್ಲಿ ನಡೆದ ಚಿತ್ರೀಕರಣದಲ್ಲಿ ನೀನಾಸಂ ಸತೀಶ್, ನಾಗಭೂಷಣ್ (Nagabhushan), ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದೊಂದು ಎಣ್ಣೆ ಸಾಂಗ್ ಆಗಿದ್ದು, ಸಿನಿಮಾದ ಪ್ರಮುಖ ಘಟ್ಟದಲ್ಲಿ ಈ ಹಾಡು ಬರಲಿದೆಯಂತೆ. ನೀನಾಸಂ ಸತೀಶ್ ನಟನೆಯ ಬಹುತೇಕ ಸಿನಿಮಾದ ಹಾಡುಗಳು ಹಿಟ್ ಆಗಿವೆ. ಇದೇ ಮ್ಯಾಟ್ನಿ ಸಿನಿಮಾದ ಹಾಡೊಂದು ಈ ಹಿಂದೆ ರಿಲೀಸ್ ಆಗಿದ್ದು, ಸಂಜೆ ಮೇಲೆ ಸುಮ್ನೆ ಹಂಗೆ ಹೆಸರಿನ ಗೀತೆಯೂ ಹಿಟ್ ಲಿಸ್ಟ್ ಗೆ ಸೇರ್ಪಡೆ ಆಗಿದೆ. ಹಾಗಾಗಿ ಎಣ್ಣೆ ಸಾಂಗ್ ಕೂಡ ಅದೇ ಸಾಲಿಗೆ ಸೇರಲಿದೆ…

Read More

ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಇಶಾ ಕೊಪ್ಪಿಕರ್ (Isha Koppikar) ಕುರಿತಾಗಿ ಆಘಾತಕಾರಿ ಸುದ್ದಿಯೊಂದು ಬಂದಿದೆ. ಉದ್ಯಮಿಯೊಬ್ಬರನ್ನು ಮದುವೆಯಾಗಿದ್ದ ಇಶಾ, 14 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹದಿನಾಲ್ಕು ವರ್ಷಗಳ ಹಿಂದೆ ಉದ್ಯಮ ಟಮ್ಮಿ ನಾರಂಗ್ ಅವರನ್ನು ಇಶಾ ಮದುವೆ ಆಗಿದ್ದರು. ಹಲವು ವರ್ಷಗಳಿಂದ ಈ ಜೋಡಿಯ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಮತ್ತೆ ಅದನ್ನು ಸರಿ ಮಾಡಲು ಸಾಧ್ಯವಾಗಲೇ ಇಲ್ಲವೆಂದು ಹೇಳಲಾಗುತ್ತಿದೆ. ಹಾಗಾಗಿ ಒಂಬತ್ತು ವರ್ಷದ ಹೆಣ್ಣು ಮಗುವನ್ನು ಕರೆದುಕೊಂಡು, ಗಂಡನ ಮನೆ ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಕನ್ನಡದಲ್ಲಿ ರವಿಚಂದ್ರನ್ ನಟನೆ ಓ ನನ್ನ ನಲ್ಲೆ, ವಿಷ್ಣುವರ್ಧನ್  ನಟನೆಯ ಸೂರ್ಯವಂಶ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ, ಬಾಲಿವುಡ್ ಸಿನಿಮಾ ರಂಗದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇದೀಗ ದಾಂಪತ್ಯ ಜೀವನಕ್ಕೆ ಅಂತ್ಯ ಹೇಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

Read More

ಬೆಂಗಳೂರು: ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ದಾರುಣ ಸಾವು ವಿದ್ಯುತ್‌ ತಂತಿ (Electricity Wire) ತಗುಲಿ 10 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುರುವಾರ ಸಂಜೆ 7:30ರ ಸುಮಾರಿಗೆ ವರ್ತೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ (Apartment) ಘಟನೆ ನಡೆದಿದೆ. ವಿದ್ಯುತ್‌ ಶಾಕ್‌ ತಗುಲಿದ ಸ್ವಲ್ಪ ಸಮಯದಲ್ಲೇ ಸ್ಥಳೀಯರು ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಆಸ್ಪತ್ರೆಯಲ್ಲೇ (Hospital) ಮೃತಪಟ್ಟಿದ್ದಾಳೆ. ಸದ್ಯ ಬಾಲಕಿ ಪೋಷಕರಿಂದ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ https://ainlivenews.com/damage-to-the-party-from-yatnals-statement-decision-to-go-to-high-command/ ಮಧ್ಯರಾತ್ರಿಯೇ ರೊಚ್ಚಿಗೆದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಅಪಾರ್ಟ್ಮೆಂಟ್‌ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿ 100ಕ್ಕೂ ಹೆಚ್ಚು ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ವಿದ್ಯುತ್ ಪೂರೈಕೆ, ವಿದ್ಯುತ್‌ ಕಂಬಗಳ ನಿರ್ವಹಣೆ ನೋಡಿಕೊಳ್ತಿದ್ದ ಪಿಪಿಎಂಎಸ್ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿರುವುದಾಗಿ ಆರೋಪಿಸಿದ್ದಾರೆ. ನನ್ನ ಮಗಳು ಪ್ರತಿ ದಿನ ಪಾರ್ಕನಲ್ಲಿ ಆಟ ಆಡಲು ಹೋಗ್ತಾ ಇದ್ದಳು ಅಲ್ಲಿ ಕರೆಂಟ್ ಶಾಕ್ ಹೊಡೆದು ಸ್ವಿಮ್ಮಿಂಗ್ ಪೂಲ್ ಬಿದ್ದಿದ್ದಾಳೆ ಸ್ವಿಮ್ಮಿಂಗ್ ಪೂಲ್…

Read More