ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೂರನೇ ಟಿಪ್ಪು ಎನ್ನಲು ನನ್ನಲ್ಲಿ ಫೋಟೋ ದಾಖಲೆಗಳಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶಾಸಕ ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಎರಡನೇ ಟಿಪ್ಪು ಸುಲ್ತಾನ್ ಎಂದು ಹೇಳುತ್ತಿರುವ ಇದೇ ಯತ್ನಾಳ್. ಈ ಹಿಂದೆ ಟಿಪ್ಪು ಸುಲ್ತಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಫೋಟೋಗಳು ನನ್ನ ಬಳಿ ಇವೆ. ಮಾಧ್ಯಮದವರೇ ಯಾರೋ ನನಗೆ ಅವುಗಳನ್ನು ಕಳಿಸಿದ್ದಾರೆ. ಎಲ್ಲವೂ ನಿಮ್ಮ ಬಳಿಯೇ ಇದ್ದರೂ ನಮ್ಮ ಬಾಯಿಂದ ಹೇಳಿಸುತ್ತೀರಲ್ಲ ಎಂದು ಪತ್ರಕರ್ತರಿಗೆ ಮರುಪ್ರಶ್ನೆ ಹಾಕಿದರು. ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುವ ಮುನ್ನ ಹೊಂದಾಣಿಕೆ, ಸೌಹಾರ್ದತೆ ಇತ್ತು. ಇದೀಗ ಕದಡಲಾಗಿದ್ದು, ಶಿಕ್ಷಣದ ನೆಲೆಗಳಲ್ಲಿ ಜಾತಿ, ಧರ್ಮ, ಪಕ್ಷ ಅಂತೆಲ್ಲ ವೈಮನಸ್ಸು ಸೃಷ್ಟಿಸಲಾಗಿದೆ. https://ainlivenews.com/sabarimala-ayyappa-swami-temple-earned-204-crore-rupees-in-39-days/ ಪರಿಣಾಮ ಹಿಜಾಬ್ ವಿಷಯ ಇದೀಗ ಕೋರ್ಟ್ ಮೆಟ್ಟಿಲೇರಿದೆ ಎಂದು ಎಂದರು. ಈ ಹಿಂದೆ ಶಾಲಾ ಕಾಲೇಜುಗಳಲ್ಲಿ ಪರಸ್ಪರ ಹೊಂದಾಣಿಕೆ, ವಿಶ್ವಾಸ, ಸೌಹಾರ್ದತೆ ಕದಡಲಾಗಿದೆ. ಸದ್ಯ ಹಿಜಾಬ್ ನಿಷೇಧ ಪ್ರಕರಣ…
Author: AIN Author
ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ (Shruti Prakash) ಹಾಗೂ ಮೇಡ್ ಇನ್ ಬೆಂಗಳೂರು ಚಿತ್ರದ ನಾಯಕ ಮಧುಸೂದನ್ ಗೋವಿಂದ್ (Madhusudan Govind) ನಾಯಕ – ನಾಯಕಿಯಾಗಿ ನಟಿಸುತ್ತಿರುವ ‘ಫ್ರೈಡೆ’ (Friday) ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಧರ್ಮಗಿರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. Dees films ಸಂಸ್ಥೆ Shoolin media ಸಂಸ್ಥೆ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಹಿಂದೆ ‘ಹೊಸ ದಿನಚರಿ’ ಚಿತ್ರವನ್ನು ನಿರ್ದೇಶಿಸಿದ್ದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಫ್ರೈಡೆ ಚಿತ್ರದ ಬಗ್ಗೆ ಮಾಹಿತಿ ನೀಡಿದರು ಈ ಸಂಸ್ಥೆ ನಿರ್ಮಾಣದ ನಾಲ್ಕನೇ ಚಿತ್ರ ಹಾಗೂ Dees films ಸಂಸ್ಥೆ, shoolin media ಸಂಸ್ಥೆಯ ಸಹಯೋಗದೊಂದಿಗೆ ನಿರ್ಮಿಸುತ್ತಿರುವ ಎರಡನೇ ಚಿತ್ರ ಫ್ರೈಡೆ. ಈ ಹಿಂದೆ ಆಯನ, ಹೊಸ ದಿನಚರಿ ಹಾಗೂ ಗ್ರೇ ಗೇಮ್ಸ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೆವು. ಇದು ನಾಲ್ಕನೇ ಚಿತ್ರ. ಆಯನ ಹಾಗೂ ಗ್ರೇ…
ಬೆಂಗಳೂರು:- ಬಿಜೆಪಿ ಸರ್ಕಾರದ ವಿರುದ್ಧ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ತನಿಖಾ ಆಯೋಗಕ್ಕೆ ಯತ್ನಾಳ್ ದೂರು ಸಲ್ಲಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೊರೋನಾ ಮೊದಲ ಅಲೆ ತಡೆಯುವ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಕ್ರಮ ನಡೆಸಿದೆ. ಕೊರೋನಾ ತಡೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಅವರು ಈ ಆರೋಪಕ್ಕೆ ಪೂರಕವಾದ ದಾಖಲೆಗಳನ್ನು ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ತನಿಖಾ ಆಯೋಗಕ್ಕೆ ಸಲ್ಲಿಸಬೇಕು. ಆ ಮೂಲಕ ತಮ್ಮ ಆರೋಪವನ್ನು ಸಾಬೀತು ಮಾಡಬೇಕು ಎಂದರು. ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನಿಜಕ್ಕೂ ಭ್ರಷ್ಟರಿಗೆ ಶಿಕ್ಷೆಯಾಗಬೇಕು ಎಂಬ ಉದ್ದೇಶವಿದ್ದರೆ, ಆಯೋಗದ ಮುಂದೆ ದಾಖಲೆಗಳನ್ನು ಸಲ್ಲಿಸಲಿ. ನಾವು ಅಕ್ರಮ ಪತ್ತೆಗಾಗಿಯೇ ನಿವೃತ್ತ ನ್ಯಾ. ನಾಗಮೋಹನ್‌ದಾಸ್ ಅವರ ತನಿಖಾ ಆಯೋಗ ರಚಿಸಿದ್ದೇವೆ. ಅಲ್ಲಿಗೆ ದಾಖಲೆ ಸಲ್ಲಿಸಿದರೆ, ತನಿಖೆಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.
ಕಣ್ಣಿನ ಆರೋಗ್ಯಕ್ಕೆ ಬೀಟಾ ಕ್ಯಾರೋಟಿನ್ ಅತ್ಯಗತ್ಯ. ಡ್ರ್ಯಾಗನ್ ಹಣ್ಣಿನಲ್ಲಿರುವ ಬೀಟಾ ಕ್ಯಾರಟ್ ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ ಅಲ್ಲದೆ ಕಣ್ಣಿನ ಪೊರೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಕಬ್ಬಿಣದ ಮಟ್ಟವನ್ನು ಹೆಚ್ಚಿಸುತ್ತದೆ ಡ್ರ್ಯಾಗನ್ ಹಣ್ಣಿನಲ್ಲಿ ಕಬ್ಬಿಣ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ . ದೇಹದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸುವ ಕೆಂಪು ರಕ್ತ ಕಣಗಳ ರಚನೆಗೆ ಕಬ್ಬಿಣ ಅಂಶವು ಅವಶ್ಯಕವಾಗಿದೆ ವಿಟಮಿನ್ ಸಿ ದೇಹದ ರಕ್ಷಣಾ ವ್ಯವಸ್ಥೆಯಲ್ಲಿ ಸಹಾಯ ಮಾಡುವುದರ ಜೊತೆಗೆ ಕಬ್ಬಿಣವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ಆಹಾರದಲ್ಲಿ ಡ್ರ್ಯಾಗನ್ ಹಣ್ಣನ್ನು ಸೇರಿಸುವುದರಿಂದ ಈ ಪ್ರಮುಖ ಪೋಷಕಾಂಶಗಳ ನಿಮ್ಮ ಆಹಾರದ ಅವಶ್ಯಕತೆಗಳನ್ನು ಪೂರೈಸಬಹುದು. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಡ್ರ್ಯಾಗನ್ ಹಣ್ಣುಗಳು ಅತ್ಯುತ್ತಮ ಹಣ್ಣುಗಳು. ಏಕೆಂದರೆ ಇದರಲ್ಲಿ ಹೆಚ್ಚಿನ ಕ್ಯಾಲೊರಿಗಳಿಲ್ಲ. ತಿರುಳು ಬಿಳಿಯಾಗಿರುತ್ತದೆ. ಮಧ್ಯದಲ್ಲಿ ಬೀಜಗಳಿವೆ. ಆದ್ದರಿಂದ ಈ ಹಣ್ಣನ್ನು ತಿನ್ನುವವರು ಮಧ್ಯದಲ್ಲಿರುವ ಬೀಜಗಳನ್ನು ಸೇರಿಸಿ ತಿನ್ನುತ್ತಾರೆ. ವಿಟಮಿನ್ ಸಿ: ವೀಕ್ಷಣಾ ಅಧ್ಯಯನಗಳು ವಿಟಮಿನ್ ಸಿ ಸೇವನೆ ಮತ್ತು ಕ್ಯಾನ್ಸರ್ ಅಪಾಯದ ನಡುವಿನ ಪರಸ್ಪರ…
ಬೆಂಗಳೂರು:- ಯುವನಿಧಿ ಯೋಜನೆಗೆ ಬರೊಬ್ಬರಿ 6062 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪದವಿ ಹಾಗೂ ಡಿಪ್ಲೊಮಾ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಯಾವುದೇ ಅಡಚಣೆ ಇಲ್ಲದೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ತಿಳಿಸಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದಿರಬೇಕು. ಅದೇ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿರಬೇಕು. ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸೇರಿದವರು ಕೂಡ ಅರ್ಜಿ ಸಲ್ಲಿಸಬಹುದು. ಯಾವುದೇ ಉದ್ಯೋಗಕ್ಕೆ ಸೇರದೆ ಇರುವವರು ಅರ್ಹರಾಗುತ್ತಾರೆ. ಪದವಿ ಮತ್ತು ಡಿಪ್ಲೋಮಾ ತೇರ್ಗಡೆ ಆದವರಿಗೆ ಮಾತ್ರ ಇಲ್ಲಿ ಅವಕಾಶವಿದೆ. ಇನ್ನು ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ಆರ್ಥಿಕ ನೆರವು. ಹಾಗೂ ಡಿಪ್ಲೋಮಾ ಪೂರೈಸಿದವರಿಗೆ ಮಾಸಿಕ 1,500 ರೂ. ಆರ್ಥಿಕ ನೆರವು ಸಿಗಲಿದೆ. ಯುವನಿಧಿ ಯೋಜನೆಗೆ ಪ್ರಸಕ್ತ ಸಾಲಿ ವರ್ಷದಲ್ಲಿ 250 ಕೋಟಿ ರೂ. ಹಾಗೂ ಮುಂದಿನ ವರ್ಷಕ್ಕೆ 1,250 ಕೋಟಿ ರೂ.…
ಇದು ವಿಶಿಷ್ಟವಾದ ಜಾಗತಿಕ ಲೀಗ್ ಆಗಿದ್ದು, ಪ್ರಸಿದ್ಧ ಆಟಗಾರರು T20 ಕ್ರಿಕೆಟ್ ಮತ್ತು LLC 2023 ತಂಡಕ್ಕೆ ಪುನರಾಗಮನ ಮಾಡುತ್ತಿದ್ದಾರೆ. ಈ ಲೀಗ್ ಕೇವಲ ಪ್ರದರ್ಶನ ಪಂದ್ಯಗಳಲ್ಲ; ಇದು ಸ್ಪರ್ಧಾತ್ಮಕ ಮುಖಾಮುಖಿಯಾಗಿದೆ. ಲೆಜೆಂಡ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿಗಳು T20 ಪಂದ್ಯಗಳನ್ನು ನಿವೃತ್ತ ಕ್ರಿಕೆಟಿಗರ ಸ್ಟಾರ್ ಗಮ್ಯಸ್ಥಾನದ ಉನ್ನತ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಯೋಜಿಸಲಾಗಿದೆ, ಇದು ರೋಮಾಂಚಕ ಕ್ರಿಕೆಟ್ ಕ್ರಿಯೆಯನ್ನು ನೀಡುತ್ತದೆ. ಈ ದ್ವೈವಾರ್ಷಿಕ ಲೀಗ್ ತನ್ನ ಮೊದಲ ಋತುವಿನಲ್ಲಿ ತ್ರಿಕೋನ ಸರಣಿಯ ಸ್ವರೂಪದೊಂದಿಗೆ ಪ್ರಾರಂಭವಾಗುತ್ತದೆ. ಇದು ಭಾರತ ತಂಡ, ಏಷ್ಯನ್ ತಂಡ ಮತ್ತು ವಿಶ್ವ ತಂಡದ ಉಳಿದ ತಂಡಗಳು ಪರಸ್ಪರ ಸ್ಪರ್ಧಿಸಲು ಸಾಕ್ಷಿಯಾಗಲಿದೆ. ಈ ವಿಶಿಷ್ಟ ಸೆಟಪ್ ಎಂದರೆ ಅಂತಿಮ ಮುಖಾಮುಖಿಯ ಮೊದಲು ಆರು ಆಕರ್ಷಕ ಲೀಗ್ ಪಂದ್ಯಗಳು. ಈವೆಂಟ್ ಮಾರ್ಚ್ 2022 ರ ಆರಂಭದಲ್ಲಿ ಪ್ರಾರಂಭವಾಗುತ್ತದೆ, ಮತ್ತು ಇದು ಭಾರತ, ಪಾಕಿಸ್ತಾನ, ಶ್ರೀಲಂಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಹೆಚ್ಚಿನ ಕ್ರಿಕೆಟ್ ರಾಷ್ಟ್ರಗಳ ಉನ್ನತ ನಿವೃತ್ತ ಆಟಗಾರರು ಮತ್ತೆ ಮೈದಾನಕ್ಕಿಳಿಯುವುದನ್ನು ನೋಡುವ ದ್ವೈವಾರ್ಷಿಕ…
ಕಂಪಾಲ: 70 ವರ್ಷದ ವೃದ್ಧೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಹೌದು 70ರ ಇಳಿ ವಯಸ್ಸಿನಲ್ಲಿ ತಾಯಿಯಾಗಿರುವ ಸಫೀನಾ ನಮುಕ್ವಾಯಾ ಸದ್ಯ ವಿಶ್ವದ ಹಿರಿಯ ತಾಯಂದಿರಲ್ಲಿ ಒಬ್ಬರಾಗಿದ್ದಾರೆ. ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಿಗೆ ಸಫೀನಾ ಜನ್ಮ ನೀಡಿದ್ದಾರೆ. ಇವರಿಗೆ ವಿಟ್ರೋ ಫರ್ಟಿಲೈಜೇಶನ್ ಎಂಬ ಚಿಕಿತ್ಸೆ ನೀಡಲಾಗಿತ್ತು. ಇದೀಗ ಸಫೀನಾ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದೇ ಚಿಕಿತ್ಸೆ ಬಳಿಕ ಭಾರತದಲ್ಲೂ 2019ರಲ್ಲಿ 73ರ ವೃದ್ಧೆಯೊಬ್ಬರು ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಇಂಟ್ರೊವೆನಸ್ ಫರ್ಟಿಲಿಟಿ ಚಿಕಿತ್ಸೆ ನಂತರ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಈ ಮೂಲಕ ಮಗುವಿಗೆ ಇಳಿವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದ ವಿಶ್ವದ ಕೆಲವೇ ಮಹಿಳೆಯರಲ್ಲಿ ಸಫೀನ ಕೂಡ ಒಬ್ಬರೆನಿಸಿದ್ದಾರೆ. ಸಿ ಸೆಕ್ಷನ್ (ಸಿಸೇರಿಯನ್ )ಮೂಲಕ ಇವರು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಆಕೆಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವಕ್ತಾರರು ಹೇಳಿದ್ದಾರೆ. https://ainlivenews.com/sabarimala-ayyappa-swami-temple-earned-204-crore-rupees-in-39-days/…
ಬೆಂಗಳೂರು:- ಡಿ.31 ರಂದು ಮೆಟ್ರೊ ರೈಲು ಸಂಚಾರವನ್ನು ರಾತ್ರಿ 2 ಗಂಟೆ ವರೆಗೆ ವಿಸ್ತರಿಸಿದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವ ಸಾರ್ವನಿಕರಿಗೆ ಅನುಕೂಲ ಆಗುವಂತೆ ಈ ವ್ಯವಸ್ಥೆ ಮಾಡಲಾಗಿದೆ. ಆದರೆ, ಈ ಹೆಚ್ಚುವರಿ ಅವಧಿಯಲ್ಲಿ ಎಂ.ಜಿ. ರಸ್ತೆ ನಿಲ್ದಾಣವನ್ನು ತೆರೆಯದಂತೆ ಪೊಲೀಸ್ ಇಲಾಖೆ ನಿರ್ದೇಶನ ನೀಡಿದೆ. ಪ್ರತಿ ದಿನ ರಾತ್ರಿ 11.30ಕ್ಕೆ ಮೆಟ್ರೋ ರೈಲು ಸಂಚಾರ ಕೊನೆಗೊಳ್ಳುತ್ತದೆ. ಆದರೆ ಕೊನೆಯ ರೈಲು ಸೇವೆಯನ್ನು ಡಿ.31 ರಂದು ರಾತ್ರಿ 2 ಗಂಟೆ ವರೆಗೆ ವಿಸ್ತರಿಸಲಾಗಿದೆ. ಈ ಸಂದರ್ಭದಲ್ಲಿ ಪ್ರತಿ 15 ನಿಮಿಷಕ್ಕೊಂದು ರೈಲು ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ. ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ರಾತ್ರಿ 11.30ರ ನಂತರ ಎಂ.ಜಿ. ರಸ್ತೆಯ ಮೆಟ್ರೊ ನಿಲ್ದಾಣ ಪ್ರವೇಶ ನಿರ್ಬಂಧಿಸಬೇಕು ಎಂದು ಗುರುವಾರವೇ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಅಂದು ಹೆಚ್ಚುವರಿ ಅವಧಿಯಲ್ಲಿ ಅಂದರೆ ರಾತ್ರಿ 11.30ರ ನಂತರ ಎಂ.ಜಿ.ರಸ್ತೆಯಿಂದ ಪ್ರಯಾಣ ಬೆಳೆಸುವ ಪ್ರಯಾಣಿಕರು ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳಿಗೆ…
2023ರ ವರ್ಷ ಮುಕ್ತಾಯದ ಅಂತ್ಯದಲ್ಲಿ ಇದೆ ಈ ವರುಷ ಕ್ರಿಕೆಟ್ ಕ್ಷೇತ್ರ ಸಾಧನೆ ಮತ್ತು ನೋವಿನ ಎರಡು ಹಾದಿಯನ್ನು ಕಂಡಿದೆ. ಹಾಗಿದ್ರೆ ಈ ಕಳೆದ 12 ತಿಂಗಳ ಅವಧಿಯ ನಿಧನರಾದ ಕ್ರಿಕೆಟ್ ದಿಗ್ಗಜರು ಯಾರೆಂಬುವುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಹೌದು,ಕ್ರಿಕೆಟ್ ಲೋಕಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ್ದ ಹಲವು ಆಟಗಾರರಿಗೆ 2023 ವರ್ಷ ವಿದಾಯ ಹೇಳಿದ್ದಾರೆ. 1. ಸಲೀಂ ದುರಾನಿ (ಭಾರತ) 1960ರ ದಶಕದಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗರಾಗಿದ್ದರು. ಇವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘಕಾಲಿನ ಕಾಯಿಲೆಯಿಂದ ಏಪ್ರಿಲ್ 2 2023ರಂದು ಗುಜಾರಾತ್ನ ಜಾಮ್‌ನಗರದಲ್ಲಿ ನಿಧನರಾಗಿದ್ದರು. ಆಲ್ರೌಂಡರ್ ಕ್ರಿಕೆಟಿಗರಾಗಿದ್ದ ದುರಾನಿ ಅವರು ಬಾಲಿವುಡ್ ಸಿನಿಮಾದಲ್ಲೂ ನಟಿಸಿದ್ದಾರೆ. 1934ರ ಡಿಸೆಂಬರ್ 11ರಂದು ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ಜನಿಸಿದ್ದ ಸಲೀಂ ದುರಾನಿ, ಭಾರತ ತಂಡದಲ್ಲಿ ಬ್ಯಾಟ್ ಮತ್ತು ಬೌಲಿಂಗ್ನಿಂದಲೇ ಖ್ಯಾತಿ ಗಳಿಸಿದ್ದರು. ಎಡಗೈ ಬೌಲರ್ ಆಗಿದ್ದ ಸಲೀಂ, ಟೀಂ ಇಂಡಿಯಾ ಪರವಾಗಿ 29 ಟೆಸ್ಟ್‌ಗಳನ್ನು ಆಡಿದ್ದು, 1961- 62 ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ 5 ಪಂದ್ಯಗಳ ಸರಣಿಯಲ್ಲಿ ಭಾರತ…
ಚಳಿಗಾಲದಲ್ಲಿ ಪದೇಪದೆ ಶೀತ-ಕೆಮ್ಮು ಕಾಡುತ್ತಿದ್ದರೆ, ʻಚಳಿಗಾಲಾಂದ್ರೆ ಇಷ್ಟೆʼ ಎಂದು ತಳ್ಳಿ ಹಾಕುತ್ತೇವೆ. ಸ್ನಾಯುಸೆಳೆತ ಹಿಂಡುತ್ತಿದ್ದರೆ ಹಣೆಬರಹವನ್ನು ಹಳಿಯುತ್ತೇವೆ. ನಮಗೆ ವಿಟಮಿನ್ ಡಿ ಕೊರತೆಯಿದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳುವುದೇ ಇಲ್ಲ. ವಿಟಮಿನ್ ಡಿ ಕೊರತೆ ಎಲ್ಲಾ ವಯೋಮಾನದವರನ್ನೂ ಬಾಧಿಸಬಹುದು. ಕಾರಣ, ಡಿ ಜೀವಸತ್ವ ದೊರೆಯುವ ಮೂಲಗಳ ಬಗ್ಗೆ ಇರುವ ಅರಿವಿನ ಕೊರತೆ. ಸೂರ್ಯನ ಬಿಸಿಲಿನಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್ ಡಿ ದೊರೆಯುತ್ತದೆ, ನಿಜ. ಆದರೆ ದಿನದಲ್ಲಿ ಒಂದಿಷ್ಟು ಹೊತ್ತು ನಮ್ಮನ್ನು ನಾವು ಬಿಸಿಗೆ ಒಡ್ಡಿಕೊಳ್ಳಬೇಕಾಗುತ್ತದೆ. ಈ ಆಹಾರಗಳ ಸೇವನೆ ಮಾಡಿ ವಿಟಮಿನ್ ಡಿ ನೀಡುವ ಆಹಾರಗಳು ಮೀನು ಹಾಗೂ ಮೀನೆಣ್ಣೆಯ ವಸ್ತುಗಳಲ್ಲಿ ಡಿ ಜೀವಸತ್ವ ಸಮೃದ್ಧವಾಗಿದೆ. ಉತ್ತಮ ಕೊಬ್ಬಿನಾಂಶವಿರುವ ಟ್ರೌಟ್, ಸಾಲ್ಮನ್, ಟ್ಯೂನ ಮತ್ತು ಮ್ಯಾಕರೆಲ್‌ನಂಥ ಮೀನುಗಳಲ್ಲಿ ವಿಟಮಿನ್ ಡಿ ಹೆಚ್ಚಿನ ಪ್ರಮಾಣದಲ್ಲಿ ದೊರೆಯುತ್ತದೆ. ಇದಲ್ಲದೆ, ಮೀನೆಣ್ಣೆಯ ಮೂಲಕವೂ ನೈಸರ್ಗಿಕವಾಗಿ ವಿಟಮಿನ್ ಡಿ ಪಡೆಯಲು ಸಾಧ್ಯವಿದೆ. ಡೈರಿ ಉತ್ಪನ್ನಗಳು ಹಸುವಿನ ಹಾಲು ಸಹ ಡಿ ಜೀವಸತ್ವದ ಸ್ವಾಭಾವಿಕ ಮೂಲ. ಹಾಲು, ಮೊಸರು, ಬೆಣ್ಣೆ, ಚೀಸ್‌ಗಳ…