Author: AIN Author

ಗದಗ:- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಅದರಂತೆ ಗದಗನಲ್ಲಿಯೂ ಕೂಡ ಇಂದು 2 ಪಾಸಿಟಿವ್ ಕೇಸ್ ಪತ್ತೆ ಆಗಿದ್ದು, ಜಿಲ್ಲಾಡಳಿತ ಫುಲ್ ಅಲರ್ಟ್ ಆಗಿದೆ. ಇನ್ನೂ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು 158 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 568 ಹಾಗೂ ಸೋಂಕು ಪ್ರಮಾಣ ದರ ಶೇ. 1.89 ತಲುಪಿದೆ. ಕಳೆದ 24 ಗಂಟೆಗಳಲ್ಲಿ 8,350 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ 85, ಮೈಸೂರು 12, ದಕ್ಷಿಣ ಕನ್ನಡ 8, ಚಾಮರಾಜನಗರ 7, ವಿಜಯನಗರ 6, ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ರಾಮನಗರದಲ್ಲಿ ತಲಾ 5, ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ತಲಾ 4, ಚಿಕ್ಕಮಗಳೂರು ಮತ್ತು ಕೋಲಾರದಲ್ಲಿ ತಲಾ 3, ಚಿಕ್ಕಬಳ್ಳಾಪುರ, ಧಾರವಾಡ, ಗದಗ ಹಾಗೂ ಹಾಸನ ತಲಾ ಇಬ್ಬರು ಮತ್ತು ಬೀದರ್, ಕಲಬುರಗಿ, ಕೊಪ್ಪಳದಲ್ಲಿ ತಲಾ ಒಬ್ಬರಂತೆ 158 ಮಂದಿ…

Read More

ಬೆಂಗಳೂರು:- ಕರವೇ ನಾರಾಯಣ ಗೌಡರ ಬಂಧನಕ್ಕೆ ಆಕ್ರೋಶ ಭುಗಿಲೆದ್ದಿದ್ದು, ನಾಳೆ ಫ್ರೀಡಂ‌ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಪರಭಾಷಿಕ ಉದ್ಯಮಿ, ವ್ಯಾಪಾರಸ್ಥರ ವಿರುದ್ಧ ಸಿಡಿದೆದ್ದಿದ್ದ ಕರ್ನಾಟಕ ರಕ್ಷಣಾ ವೇದಿಕೆಗೆ ಪೊಲೀಸ್‌ ಇಲಾಖೆ ಶಾಕ್ ನೀಡಿದೆ. ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡರನ್ನು ಬಂಧಿಸುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಇನ್ನು ಸರ್ಕಾರದ ಈ ನಡೆಗೆ ತೀವ್ರ ಅಸಮಾಧಾನಗೊಂಡಿರುವ ಕರವೇ ಕಾರ್ಯಕರ್ತರು ಮತ್ತೊಂದು ಹಂತದ ಹೋರಾಟಕ್ಕೆ ಸಜ್ಜಾಗಿದ್ದಾರೆ. ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ಮೂಲಕ ನಾರಾಯಣ ಗೌಡರ ಬಿಡುಗಡೆಗೆ ಒತ್ತಾಯಿಸಲಾಗುತ್ತಿದೆ. ಈ ನಡುವೆ, ಕರವೇಯ ಪ್ರವೀಣ್‌ ಶೆಟ್ಟಿ ಬಣ ಕೂಡಾ ಈ ಹೋರಾಟಕ್ಕೆ ಬೆಂಬಲ ನೀಡಿದೆ. ಬುಧವಾರ ರಾಜಧಾನಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಹೋರಾಟ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎನ್ನೋ ಮಾತನ್ನ ಗಟ್ಟಿಯಾಗಿ ಉಳಿಯುವಂತೆ ಮಾಡಿತ್ತು. ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ ಎಂಬ ಆದೇಶ ಇದ್ದರೂ ಅನ್ಯಭಾಷೆಯ ನಾಮಫಲಕಗಳನ್ನು ಹಾಕಿದ್ದ ವಾಣಿಜ್ಯ ಮಳಿಗೆಗಳ ಅಂಗಡಿ ಮುಂಗಟ್ಟುಗಳ…

Read More

ಕೋಲಾರ:- ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಠುಸ್ ಆಗಿದೆ ಎಂದು ಸಂಸದ ಮುನಿಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,2024ರ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಅವರಿಗೆ ಮತ ನೀಡುವಂತೆ ಹಾಗೂ ದೇಶದಲ್ಲಿ ಬಿಜೆಪಿ ಗೆಲ್ಲಿಸಿ, ಮತ್ತೊಮ್ಮೆ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಲು ಬಿಜೆಪಿ ಕಾರ್ಯಕರ್ತರು ಧೈರ್ಯದಿಂದ ಕಾರ್ಯನಿರ್ವಹಿಸಿ ಹಾಗೂ ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಹೆಚ್ಚು ಮತ ಬೀಳುವಂತೆ ಮತದಾರರಿಗೆ ಮನವೊಲಿಸುವಂತೆ ಕರೆ ನೀಡಿದರು. ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳ ಬಗ್ಗೆ ಮತದಾರರ ಮನವರಿಕೆ ಮಾಡಿ ಅವರ ಮನವೊಲಿಸಿ ಎಂದರು. ಕಳೆದ ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮರುಳಾಗಿದ್ದರಿಂದ ಬಿಜೆಪಿ ಸೋಲಲು ಕಾರಣವಾಯಿತು. ಆದರೆ ಈಗ ಅವರಿಗೆ ಮತ ಹಾಕಿದವರೇ ಪಶ್ಚಾತ್ತಾಪ ಪಟ್ಟು ಕಾಂಗ್ರೆಸ್ ಗೆ ಮತ ಹಾಕಿ ನಾವು ತಪ್ಪು ಮಾಡಿದ್ದೇವೆ ಎಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ…

Read More

ಬೆಂಗಳೂರು:- ಹೊಸವರ್ಷಾಚರಣೆಯಲ್ಲಿ ಕೋವಿಡ್ ನಿಯಮ ಪಾಲಿಸಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹೊಸ ವರ್ಷದ ಆಚರಣೆ ವೇಳೆ ಹೆಚ್ಚು ಜನರು ಒಂದೆಡೆ ಸೇರುವುದರಿಂದ ಕೋವಿಡ್ ಮಾರ್ಗಸೂಚಿ ಪಾಲನೆ ಬಗ್ಗೆ ಖಚಿತಪಡಿಸಿಕೊಳ್ಳಬೇಕು’ ಎಂದರು. ಕೊರೊನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್‌ನ ಉಪತಳಿ ಜೆಎನ್‌.1 ಪ್ರಕರಣ ನಗರದಲ್ಲಿ ವರದಿಯಾಗಿರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಈಗಾಗಲೇ ಮಾರ್ಗಸೂಚಿಗಳು, ಸುತ್ತೋಲೆಗಳು ಹಾಗೂ ಸಲಹಾ ಪತ್ರಗಳನ್ನು ಹೊರಡಿಸಲಾಗಿದೆ. ಅವುಗಳ ಪಾಲನೆಯ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಲಭ್ಯವಿರುವ ಮಾಹಿತಿಯ ಪ್ರಕಾರ ಜೆಎನ್‌.1 ಉಪತಳಿಯು ಹೆಚ್ಚು ಹರಡುವಿಕೆಯ ಸಾಮರ್ಥ್ಯವನ್ನು ಹೊಂದಿದೆ. ಇದರಿಂದಾಗಿ ವೃದ್ಧರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಇತರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಹೆಚ್ಚಿವೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ ವರದಿಯಾದ 34 ಜೆಎನ್‌.1 ಪ್ರಕರಣಗಳಲ್ಲಿ 21 ಪ್ರಕರಣಗಳು ನಗರದಲ್ಲಿಯೇ ದೃಢಪಟ್ಟಿವೆ. ಆದ್ದರಿಂದ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೊರಾಂಗಣ ಹಾಗೂ ಒಳಾಂಗಣ ಪ್ರದೇಶದಲ್ಲಿ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು…

Read More

ಬೆಂಗಳೂರು:- ಕೂಡಲೇ ಕನ್ನಡಪರ ಹೋರಾಟಗಾರರನ್ನು ರಿಲೀಸ್ ಮಾಡಿ ಎಂದು ಬಿಸಿ ಪಾಟೀಲ್ ಆಗ್ರಹಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡವೇ ಸತ್ಯ ಕನ್ನಡವೇ ಮಿತ್ಯ. ಕನ್ನಡಪರ ಹೋರಾಟ ಮಾಡೋರನ್ನ ಬಂಧಿಸಿರೋದು ಸರಿಯಲ್ಲ. ಕನ್ನಡದಲ್ಲಿ ಬೋರ್ಡ್ ಇರಬೇಕು. ಕೂಡಲೇ ಬಂಧಿಸಿರೋನ್ನ ಬಿಡುಗಡೆ ಮಾಡಬೇಕು ಎಂದು ಹೇಳಿದ್ದಾರೆ.

Read More

ಬೆಂಗಳೂರು:- PM ಮೋದಿ ಅವರನ್ನು ನರಹಂತಕ ಅಂದಿದ್ದು ಸರಿಯೇ!? ಎಂದು ಸಿಎಂ ಸಿದ್ದು ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಸರ್ಕಾರ ಮಾತೆತ್ತಿದ್ರೆ ಸಂವಿಧಾನ ಅಂತಾರೆ. ಕರ್ನಾಟಕದಲ್ಲಿ ಪತ್ರಿಕಾ, ವಾಕ್ ಸ್ವಾತಂತ್ರ್ಯ ಹರಣ ಆಗ್ತಿದೆ. ಪ್ರಜಾಪ್ರಭುತ್ವದಲ್ಲಿ ಟೀಕೆ, ಟಿಪ್ಪಣಿ ಮಾಡಿದ್ರೆ ಸರ್ಕಾರವೇ ಭಯೋತ್ಪಾದನೆ ರೀತಿಯಲ್ಲಿ ಕೇಸ್ ದಾಖಲು ಮಾಡ್ತಿದೆ. ಪ್ರತಾಪ್ ಸಿಂಹ, ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ಕೇಸ್ ಹಾಕಿದೆ. ಜಾಮೀನು ರಹಿತ ಕೇಸ್ ಹಾಕುವ ವರೆಗೂ ಬಂದಿದೆ. ಸಿದ್ದರಾಮಯ್ಯ ದೇಶದ ಪ್ರಧಾನಿ ಬಗ್ಗೆ ಲಘುವಾಗಿ ಮಾತಾಡಿದ್ದು, ನರ ಹಂತಕ ಅಂದಿದ್ದು ಏನೂ ಅನಿಸೋದಿಲ್ಲ. ಜಮೀರ್ ಅವರಂತ ಹೇಳಿಕೆ ತಪ್ಪು ಅನಿಸಲ್ಲ. ಸಿದ್ದರಾಮಯ್ಯ ಸರ್ಕಾರ ತುರ್ತುಪರಿಸ್ಥಿತಿ ಹೇರುವ ರೀತಿ ವರ್ತಿಸುತ್ತಿದೆ. ಇದು ಅತ್ಯಂತ ಹೇಯ ಕೃತ್ಯ ಅಂತ ಬಾವಿಸ್ತೇನೆ ಎಂದು ಹೇಳಿದ್ದಾರೆ.

Read More

ಬೆಂಗಳೂರು:- ಕನ್ನಡಪರ ಹೋರಾಟಗಾರರಿಗೆ ಎಲ್ಲರ ಸಹಕಾರ ಅಗತ್ಯ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇಂಗ್ಲಿಷ್ ನಾಮಫಲಕಗಳ ವಿರುದ್ಧ ಹೋರಾಟ ಮಾಡಿದ ಕರವೇ ನಾರಾಯಣಗೌರನ್ನ ಅರೆಸ್ಟ್ ಮಾಡಿರುವ ವಿಚಾರವಾಗಿ ಮಾತನಾಡಿ, ಕನ್ನಡದ ನಾಮಫಲಕವೂ ಇರಬೇಕು, ಹೋರಾಟಗಾರರನ್ನು ಬಂಧಿಸಿರೋದು ಕಾನೂನು ವಿಚಾರಕ್ಕೆ ಸಂಬಂಧಿಸಿದ್ದು, ಅದರ ಬಗ್ಗೆ ಗೊತ್ತಿಲ್ಲ ನನಗೆ. ಆದರೆ ನಾಮಫಲಕಗಳೂ ಕನ್ನಡದಲ್ಲೂ ಇರಬೇಕು. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.

Read More

ಬೆಂಗಳೂರು:- ಕೋವಿಡ್‌ನಲ್ಲಿ 40 ಸಾವಿರ ಕೋಟಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ MP ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಯತ್ನಾಳ್ ಒಬ್ಬ ಕಾಮಿಡಿ ಪೀಸ್. ಅವರಿಗೆ ನಾಲಿಗೆಗೂ ಮೆದುಳಿಗೂ ಲಿಂಕೇ ಇಲ್ಲ. ಮೊದಲ ಅವರನ್ನು ನಿಮಾನ್ಸ್ ಆಸ್ಪತ್ರೆಗೆ ಸೇರಿಸಬೇಕು. ಯತ್ನಾಳ್ ಒಬ್ಬ ಹುಚ್ಚು ನಾಯಿ, ನನ್ನನ್ನು ಅವರಿಗೆ ಹೋಲಿಕೆ ಮಾಡಬೇಡಿ. ಬಸನಗೌಡ ಪಾಟೀಲ್ ಯತ್ನಾಳ್ ಗೆ ನಾನು ಸವಾಲು ಹಾಕ್ತೀನಿ. ಕಾಂಗ್ರೆಸ್ ಏಜೆಂಟ್ ರು ತರ ನೀವು ವರ್ತನೆ ಮಾಡ್ತಿದ್ಸೀರಿ. ಯಡಿಯೂರಪ್ಪ ವಿರುದ್ಧವಾಗಿ ಮಾತಾಡಿದ್ರೆ, ಸಿದ್ದರಾಮಯ್ಯ ಸರ್ಕಾರದಿಂದ ಹೆಚ್ಚು ಕೆಲಸ ಮಾಡಿಸಿಕೊಳ್ಳಬಹುದು. ವಿಜಯಪುರದ ಒಬ್ಬ ಪ್ರಭಾವಿ ಸಚಿವರ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡ್ಕೊಂಡು ಗೆದ್ದಿದ್ದೀರಿ. ಕೊವೀಡ್ ಬಗ್ಗೆ ಸದನದಲ್ಲಿ ವಿಸ್ತೃತವಾಗಿ ಚರ್ಚೆ ಆಗಿದೆ. 40 ಸಾವಿರ ಕೋಟಿ ಹಗರಣ ಅಂತೀರಲ್ಲ, ದಾಖಲೆ ಸಮೇತ ಬನ್ನಿ ಚರ್ಚೆ ಮಾಡೋಣ. ಕಾಂಗ್ರೆಸ್ ಜೊತೆ ಮ್ಯಾಚ್ ಫಿಕ್ಸ್ ಮಾಡ್ಜೊಂಡು ಈ ರೀತಿ ಆರೋಪ ಮಾಡ್ತಿದ್ದೀರಿ. ಉ ಕ ಭಾಗದ ಜನರು ಯಡಿಯೂರಪ್ಪರ ಬಗ್ಗೆ…

Read More

ಅಯೋಧ್ಯೆ:- ರಾಮ ಮಂದಿರ ಪ್ರಾಣಪ್ರತಿಷ್ಠೆಯಿಂದ ಆಯೋಧ್ಯೆಯಲ್ಲಿ ಮದ್ಯ, ಮಾಂಸ ಮಾರಾಟ ನಿಷೇಧಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಬಕಾರಿ ಸಚಿವ ನಿತಿನ್ ಅಗರ್ವಾಲ್, ಇದು ಮುಖ್ಯಮಂತ್ರಿ ಆದೇಶವಾಗಿದ್ದು, ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದಿದ್ದಾರೆ. 500 ವರ್ಷಗಳ ಸತತ ಹೋರಾಟದ ಬಳಿಕ ಭವ್ಯ ಶ್ರೀರಾಮ ಮಂದಿರ ಉದ್ಘಾಟನೆಗೆ ಸಜ್ಜಾಗಿದೆ. ಆಯೋಧ್ಯೆ ರಾಮನಗರಿ ಎಂದೇ ಜನಪ್ರಿಯವಾಗಿದೆ. ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಆಯೋಧ್ಯೆಯಲ್ಲಿ ಮದ್ಯ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆಯೋಧ್ಯೆ ಮಾತ್ರವಲ್ಲ, ರಾಮ ಮಂದಿರಕ್ಕೆ ತೆರಳು ಮಾರ್ಗ 84 ಕೋಸಿ ಪರಿಕ್ರಮ ಮಾರ್ಗ್‌ದಲ್ಲಿರುವ ಮದ್ಯದ ಅಂಗಡಿ ಹಾಗೂ ಮಾಂಸ ಮಾರಾಟ ಅಂಗಡಿಗಳನ್ನೂ ಬೇರೆಡೆಗೆ ಸ್ಥಳಾಂತರಿಸಲಾಗಿದೆ. 150 ರಿಂದ 175 ಕಿಲೋಮೀಟರ್ ದೂರದ ಈ ಕೋಸಿ ಪರಿಕ್ರಮ ಮಾರ್ಗ್‌ನಲ್ಲಿರುವ ಎಲ್ಲಾ ಮದ್ಯದ ಅಂಗಡಿ ಹಾಗೂ ಮಾಂಸ ಮಾರಾಟ ಅಂಗಡಿಗಳನ್ನು ಸ್ಥಳಾಂತರಿಸಲಾಗುತ್ತಿದೆ. ರಾಮ ಮಂದಿರ ಪ್ರಾಣಪ್ರತಿಷ್ಠೆ ಕಾರಣದಿಂದ ಯಾವುದೇ ರೀತಿಯಲ್ಲಿ ಚ್ಯುತಿ ಬರದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ರಾಮಾಯಾಣ ಭವ್ಯ ಪರಂಪರೆ, ಗತವೈಭವ…

Read More

ಬೆಂಗಳೂರು:- ಕನ್ನಡದ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು DCM ಡಿಕೆಶಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾವೆಲ್ಲರೂ ಸೇರಿ ಕನ್ನಡವನ್ನು ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದರು. ಕನ್ನಡ ನಾಮಫಲಕ ಕುರಿತ ಹೋರಾಟದ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. “ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ. ಇದರಿಂದ ಕರ್ನಾಟಕದ ಗೌರವ, ಘನತೆಗೆ ಧಕ್ಕೆಯಾಗುತ್ತದೆ. ಕಾನೂನು ಪಾಲನೆ ಎಲ್ಲರ ಕರ್ತವ್ಯ. ನೀವು ಹೋರಾಟ ಮಾಡುವುದಾದರೆ ಮಾಡಿ, 60% ನಾಮಫಲಕ ಹಾಕಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ ಎಂದು ಡಿ.ಕೆ ಶಿವಕುಮಾರ್‌ ಹೇಳಿದರು. ʻʻಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್…

Read More