ಬೆಂಗಳೂರು:- ಕರವೇ ಆಯ್ತು ಈಗ ಕನ್ನಡ ಒಕ್ಕೂಟದಿಂದ ಡಿ.30ರಂದು ಕನ್ನಡ ಉಳಿಸಿ, ಕನ್ನಡ ಬೆಳೆಸಿ ಚಳವಳಿ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳು 30ರ ಶನಿವಾರದಂದು ಬೆಳಗ್ಗೆ 11:30 ಗಂಟೆಗೆ ಕನ್ನಡ ಒಕ್ಕೂಟದಿಂದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಉಳಿಸಿ, ಕನ್ನಡ ಬೆಳೆಸಿ ಚಳವಳಿಗೆ ಕರೆ ನೀಡಲಾಗಿದೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಇದೇ ತಿಂಗಳು 30ರ ಶನಿವಾರದಂದು ಬೆಳಗ್ಗೆ 11:30 ಗಂಟೆಗೆ ಕನ್ನಡ ಒಕ್ಕೂಟದಿಂದ ನೇತೃತ್ವದಲ್ಲಿ ಕನ್ನಡ ಉಳಿಸಿ, ಕನ್ನಡ ಬೆಳೆಸಿ ಚಳವಳಿ ನಡೆಸಲಾಗುವುದು ಎಂದು ಹೇಳಿದರು. ಅಲ್ಲದೇ ಸರ್ಕಾರಕ್ಕೆ ಪ್ರಮುಖ ಒತ್ತಾಯಗಳನ್ನು ಮಾಡಲು ತೀರ್ಮಾನಿಸಿವೆ. ಸರ್ಕಾರಕ್ಕೆ ಪ್ರಮುಖ ಒತ್ತಾಯಗಳು ಕನ್ನಡದಲ್ಲೇ ಕಡ್ಡಾಯವಾಗಿ ನಾಮಫಲಕಗಳು ಇರಲೇಬೇಕು. ಶಾಲಾ-ಕಾಲೇಜುಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಕಲಿಯಲೇಬೇಕು. ಪದವೀಧರರಿಗೆ ಉದ್ಯೋಗ ನೀಡಲೇಬೇಕು. ಪರಭಾಷೆಯವರ ದಾಂಧಲೆ ನಿಲ್ಲಲೇಬೇಕು. ರೈಲ್ವೆಯಲ್ಲಿ ಹಾಗೂ ಬ್ಯಾಂಕುಗಳಲ್ಲಿ ಕನ್ನಡ ಬೇಕೇ ಬೇಕು. ಐಟಿ-ಬಿಟಿಗಳಲ್ಲಿ ಹಾಗೂ ಅಂಗಡಿ ಮಾಲ್‌ಗಳಲ್ಲಿ ಕನ್ನಡ ಇರಲೇಬೇಕು, ಹಿಂದಿ ಹೇರಿಕೆ ಬೇಡವೇ ಬೇಡ. ನ್ಯಾಯಾಲಯಗಳಲ್ಲಿ…
Author: AIN Author
ಬೆಂಗಳೂರು:- ಅಕ್ರಮ ಬಡಾವಣೆ ನಿರ್ಮಿಸಿದರೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇನ್ನು ಮುಂದೆ ಯಾರೇ ಅನಧಿಕೃತವಾಗಿ ಬಡಾವಣೆ ನಿರ್ಮಿಸಿ, ಸಂಬಂಧಿತ ಸ್ಥಳೀಯ ಸಂಸ್ಥೆಗಳಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿದರೆ ಅಂತಹವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವಂತೆ ಕಾನೂನಿಗೆ ತಿದ್ದುಪಡಿ ತರುವುದು ಅಗತ್ಯ. ಇಲ್ಲವಾದರೆ ಅನಧಿಕೃತ ಬಡಾವಣೆಗಳು ರಾಜ್ಯದಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಲೇ ಇರುತ್ತವೆ. ಹೀಗಾಗಿ ಕಾನೂನು ತಂದು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು. ಯಾರೇ ನ್ಯಾಯಸಮ್ಮತವಾಗಿ ಸಾರ್ವಜನಿಕ ಉದ್ದೇಶಕ್ಕೆ ಜಾಗ ಬಿಟ್ಟು ಬಡಾವಣೆ ನಿರ್ಮಿಸಲು ಮುಂದಾದರೆ ಮತ್ತು ಮನೆ ನಿರ್ಮಾಣ ಮಾಡಲು ನಿಯಮಾನುಸಾರ ನಕ್ಷೆ ಮಂಜೂರಾತಿ ಬಯಸಿದಲ್ಲಿ ನಿಯಮ ಸರಳೀಕರಣ ಮಾಡಿ, ಮುಖಾಮುಖಿ ರಹಿತವಾಗಿ ನಿರ್ದಿಷ್ಟ ಕಾಲಮಿತಿಯೊಳಗೆ ಮಂಜೂರಾತಿ ಲಭಿಸುವಂತೆ ತಂತ್ರಾಂಶ ಅಭಿವೃದ್ಧಿ ಪಡಿಸುವ ಅಗತ್ಯವನ್ನೂ ಪ್ರತಿಪಾದಿಸಿದರು. ಯಾರೊಬ್ಬರೂ ನಕಲಿ ಖಾತೆ ಪಡೆದು ನೋಂದಣಿ ಮಾಡಿಸದಂತೆ ‘ಕಾವೇರಿ’ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದರೆ ಆಗ ಅನಧಿಕೃತ ಬಡಾವಣೆ, ಕಟ್ಟಡಗಳನ್ನು…
ಬೆಂಗಳೂರು:- ಕೋವಿಡ್ ಪಾಸಿಟಿವಿಟಿ ಪ್ರಮಾಣದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪ್ರತ್ಯೇಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈಗಾಗಲೇ 400ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ರೋಗಗಳಿಂದ ಬಳಲಲುತ್ತಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಸೋಂಕು ಹರಡುವಿಕೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಹೊರಡಿಸಲಾಗಿದೆ. ಮಾರ್ಗಸೂಚಿಯಲ್ಲೇನಿದೆ? ರಾಜ್ಯದಲ್ಲಿ ಪ್ರತಿದಿನ 5000 ಟೆಸ್ಟಿಂಗ್ ಗುರಿಯನ್ನು ಸಾಧಿಸಲಾಗುವುದು. ಕೋವಿಡ್ ಟೆಸ್ಟಿಂಗ್ ನಲ್ಲಿ ರಾಜ್ಯವು 2ನೇ ಸ್ಥಾನದಲ್ಲಿರುವುದರಿಂದ (ಕೇರಳ ರಾಜ್ಯವು ಮೊದಲನೇ ಸ್ಥಾನದಲ್ಲಿದೆ). ಪಾಸಿಟಿವ್ ಪ್ರಕರಣಗಳ ಸಂಪರ್ಕಿತರು ಸೋಂಕಿನ ಲಕ್ಷಣಗಳನ್ನು ಹೊಂದಿದ್ದಲ್ಲಿ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ರಾಜ್ಯದ 432 ಸೋಂಕಿತರ ಪೈಕಿ 400 ಪ್ರಕರಣಗಳು ಹೋಂ ಐಸೋಲೇಷನ್ ನಲ್ಲಿದ್ದು, ಉಳಿದ 32 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಂ ಐಸೋಲೇಷನ್ ನಲ್ಲಿರುವ ಹಾಗೂ ಆಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ಕೋವಿಡ್ ಚಿಕಿತ್ಸೆಗಾಗಿ ದಾಖಲಾಗಿರುವವರನ್ನು ನಗರ ಪ್ರಾಥಮಿಕ…
ಕೆಲವರಿಗೆ ಹಸಿ ಈರುಳ್ಳಿ ತಿನ್ನೋ ಅಭ್ಯಾಸ ಇರುತ್ತದೆ. ಆದರೆ ಹಸಿ ಈರುಳ್ಳಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದರಿಂದ ಹಲವಾರು ಸಮಸ್ಯೆಗಳು ಕಾಡುತ್ತದೆಯಂತೆ. ಇದು ಕೆಲವು ಜೀರ್ಣಕಾರಿ ಸಮಸ್ಯೆಯನ್ನು ಉಂಟುಮಾಡುತ್ತದೆಯಂತೆ. ಇದರಿಂದ ಗ್ಯಾಸ್, ಹೊಟ್ಟೆಯುಬ್ಬರ ಸಮಸ್ಯೆ ಕಾಡುತ್ತದೆಯಂತೆ. ಹಸಿ ಈರುಳ್ಳಿ ತಿನ್ನುವುದರಿಂದ ಅಲರ್ಜಿ ಸಮಸ್ಯೆ ಕಾಡಬಹುದು. ಇದರಿಂದ ಚರ್ಮದಲ್ಲಿ ತುರಿಕೆ ಮತ್ತು ಉಸಿರಾಟದ ಸಮಸ್ಯೆಗಳು ಕಾಡುತ್ತದೆಯಂತೆ. ಹಸಿ ಈರುಳ್ಳಿ ತಿನ್ನುವುದರಿಂದ ಎದೆಯುರಿ ಸಮಸ್ಯೆ ಕಾಡುತ್ತದೆ. ಹಾಗಾಗಿ ಈಗಾಗಲೇ ಎದೆಯುರಿ ಸಮಸ್ಯೆಯಿಂದ ಬಳಲುತ್ತಿರುವವರು ಹಸಿ ಈರುಳ್ಳಿ ತಿನ್ನಬೇಡಿ. ಹಸಿ ಈರುಳ್ಳಿಯಲ್ಲಿ ಟೈರಮೈನ್ ಇದ್ದು, ಇದು ತಲೆನೋವನ್ನು ಉಂಟುಮಾಡುತ್ತದೆ. ಹಾಗಾಗಿ ಮೈಗ್ರೇನ್ ಸಮಸ್ಯೆ ಇರುವವರು ಇದನ್ನು ತಿನ್ನಬೇಡಿ.
ಹಾನಗಲ್:- ಹೌದು ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳು ಬಹುಶಃ ಮತ್ತು ಭಾಗಶಃ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಗೆ ಬರುವ ಕತ್ರಿಕೊಪ್ಪ ಗ್ರಾಮದ ಸರ್ಕಾರಿ ಶಾಲೆ ದುಸ್ಥಿತಿ ನೋಡಿದ್ರೆ ಎಷ್ಟು ಕಾರ್ಯ ಪ್ರವೃತ್ತ ವಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ಹೌದು ಅದ್ಯಾಕೋ ಏನೋ ಗೊತ್ತಿಲ್ಲಾ ಈ ಒಟ್ಟು 15 ಶಾಲಾ ವಿದ್ಯಾರ್ಥಿಗಳು ಇರುವ ಕತ್ರಿಕೊಪ್ಪ ಗ್ರಾಮದ ಸರ್ಕಾರಿ ಶಾಲೆಗೆ ಎರಡು ಸಮಸ್ಯೆಗಳು ಜ್ವಲಂತ ಸಮಸ್ಯೆಗಳಾಗಿ ಮಾರ್ಪಟ್ಟಿವೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಕಾಮಗಾರಿ ಇರೋದ್ರಿಂದ ಕಳೆದ 1 ವರ್ಷದಿಂದ ಬರೀ ಧೂಳಿನಿಂದ ಮುಚ್ಚಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿ, ಮಕ್ಕಳ ಆರೋಗ್ಯದ ಮೇಲೂ ಪರಿಣಾಮ ಬೀರಿವೆ, ಇನ್ನೊಂದು ಕಡೆ ತುಂಬಾ ಶಿಥಿಲಗೊಂಡ ಕಟ್ಟಡದಲ್ಲೇ ಮಕ್ಕಳು ಅಭ್ಯಾಸ ಮಾಡುತ್ತಿರುವುದರಿಂದ ದಿನ ನಿತ್ಯ ಜೀವ ಭಯದಲ್ಲೇ ಪಾಠ ಕೇಳುವ ಪರಿಸ್ಥಿತಿ ಬಂದೊದಗಿದೆ. ಇನ್ನೂ ಶಾಲಾ ಆವರಣದ ತುಂಬಾ ಬರೀ ಮಣ್ಣಿನ ಧೂಳೇ ಇರುವ ಕಾರಣ ಮಕ್ಕಳಿಗೆ ಉಸಿರಾಟದ ಸಮಸ್ಯೆಯು ಸಹ ಎದುರಾಗುವ…
ಕೊಲೆಸ್ಟ್ರಾಲ್ ಮತ್ತು ಮಧುಮೇಹ ಸಮಸ್ಯೆ ಹಲವು ಜನರನ್ನು ಕಾಡುತ್ತಿದೆ. ಹಾಗಾಗಿ ಈ ಸಮಸ್ಯೆಗಳನ್ನು ನಿಯಂತ್ರಿಸಲು ಈ ಎಲೆಗಳನ್ನು ಸೇವಿಸಿ. ಪುದೀನಾ ಎಲೆಗಳು : ಇದು ಮಧುಮೇಹ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ದೇಹವನ್ನು ನಿರ್ವಿಷಗೊಳಿಸುತ್ತದೆ. ಬೇವಿನ ಎಲೆಗಳು : ಇದು ಹಲವು ರೋಗಗಳನ್ನು ಗುಣಪಡಿಸುವಂತಹ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ ಆಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಇದು ಕೊಲೆಸ್ಟ್ರಾಲ್ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿರಿಸುತ್ತದೆ. ತುಳಸಿ ಎಲೆಗಳು : ಇದು ಆರೋಗ್ಯಕ್ಕೆ ಒರಯೋಜನಕಾರಿಯಾಗಿದೆ. ಇದು ಔಷಧೀಯ ಗುಣಗಳನ್ನು ಹೊಂದಿದೆ. ಹಾಗಾಗಿ ಇದನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ ಎಂದು ಹೇಳಲಾಗಿದೆ.
ರಾಮನಗರ: ಮಾಗಡಿ ತಾಲೂಕಿನ ಸಾವನದುರ್ಗ ಏಕಶಿಲಾ ಬೆಟ್ಟಕ್ಕೆ ಸ್ನೇಹಿತನ ಜೊತೆ ಚಾರಣಕ್ಕೆ ಬಂದ ಯುವಕ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾರ್ಯಾಚರಣೆ ಬಳಿಕ ಶವವಾಗಿ ಪತ್ತೆಯಾದ ಘಟನೆ ರಾಮನಗರದಲ್ಲಿ ನಡೆದಿದೆ. ಚಾರಣದ ವೇಳೆ ಕಾಲುಜಾರಿ ಕಂದಕಕ್ಕೆ ಜಾರಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಕಳೆದ ಭಾನುವಾರ ಉತ್ತರ ಪ್ರದೇಶ ಮೂಲದ ಯುವಕ ಗಗನ್‌ದೀಪ್ ಸಿಂಗ್ ಸ್ನೇಹಿತನ ಜೊತೆ ಮಾಗಡಿ ತಾಲೂಕಿನ ಸಾವನದುರ್ಗ ಏಕಶಿಲಾ ಬೆಟ್ಟಕ್ಕೆ ಚಾರಣ ಬಂದಿದ್ದ. ಈ ವೇಳೆ ಅರಣ್ಯ ಪ್ರದೇಶದಲ್ಲಿ ದಾರಿ ತಪ್ಪಿದ ಗಗನ್ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಮೊಬೈಲ್ ಕೂಡಾ ಸ್ವಿಚ್‌ಆಫ್ ಆಗಿತ್ತು. ಬಳಿಕ ಗಗನ್ ಸ್ನೇಹಿತ ಈ ಸಂಬಂಧ ಮಾಗಡಿ ಪೊಲೀಸರ ಸಹಾಯ ಕೋರಿದ್ದರು. https://ainlivenews.com/end-countdown-to-new-year-begins-increased-police-security-in-the-city/ ಈ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ನಿರಂತರ ಹುಡುಕಾಟ ನಡೆಸಿದ್ದ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ, ಥರ್ಮಲ್ ಡ್ರೋನ್, ಶ್ವಾನದಳ ಸೇರಿ ಎಸ್‌ಡಿಆರ್‌ಎಫ್ ತಂಡದಿಂದಲೂ ಶೋಧ ನಡೆಸಿ ಸತತ 100 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಗಗನ್‌ದೀಪ್…
ಬೆಂಗಳೂರು, ಡಿ, 28; ಬೆಳಗಾವಿ ಮೂಲದ ದಕ್ಷಿಣ ಭಾರತದ ಪ್ರಮುಖ ಸಹಕಾರಿ ಸಂಸ್ಥೆ ಬೀರೇಶ್ವರ ಕೋ ಅಪರೇಟಿವ್ ಬ್ಯಾಂಕ್ (ಮಲ್ಟಿ ಸ್ಟೇಟ್) ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದು, ಇಂದು ಉತ್ತರಹಳ್ಳಿಯ ಕೆಂಗೇರಿ ಮುಖ್ಯ ರಸ್ತೆಯ ಪೂರ್ಣ ಪ್ರಜ್ಞ ನಗರದಲ್ಲಿ 197 ನೇ ನೂತನ ಶಾಖೆ ಹಾಗೂ ಬನಶಂಕರಿ ಮೂರನೇ ಹಂತದಲ್ಲಿ 196 ನೇ ಶಾಖೆಗಳಿಗೆ ಚಾಲನೆ ನೀಡಲಾಯಿತು. ಬೀರೇಶ್ವರ ಕೋ ಅಪರೇಟಿವ್ ಬ್ಯಾಂಕ್ (ಮಲ್ಟಿ ಸ್ಟೇಟ್) ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಬ್ಯಾಂಕ್ ತನ್ನ ಜಾಲವನ್ನು ಹೊಂದಿದೆ. ಬ್ಯಾಂಕ್ ಒಟ್ಟು 3.54 ಲಕ್ಷ ಸದಸ್ಯರು ಮತ್ತು 3438 ಕೋಟಿ ರೂಪಾಯಿ ಠೇವಣಿ ಹೊಂದಿದೆ. 2731 ಕೋಟಿ ರೂಪಾಯಿ ಸಾಲ ಸೌಲಭ್ಯ ಒದಗಿಸಿ, 35.01 ಕೋಟಿ ರೂಪಾಯಿ ಲಾಭ ಗಳಿಸಿದೆ. ಶಾಸಕ ಎಂ. ಕೃಷ್ಣಪ್ಪ ಅವರು ಪೂರ್ಣ ಪ್ರಜ್ಞ ನಗರದಲ್ಲಿ 197 ನೇ ನೂತನ ಶಾಖೆಗೆ ಚಾಲನೆ ನೀಡಿ ಶುಭ ಕೋರಿದರು. ನಮ್ಮ ಕ್ಷೇತ್ರದಲ್ಲಿ ಬ್ಯಾಂಕ್ ನ ಹೊಸ ಶಾಖೆ ಆರಂಭಿಸಿರುವುದು ಉತ್ತಮ ಬೆಳವಣಿಗೆ.…
ಬೀದರ್: ಡಿ. 22ರಂದು ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆರಂಭವಾಗಿದ್ದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ (ಪಾನ್) ಗ್ರಾಮದ ದತ್ತ ಮಹಾರಾಜರ ಅವತಾರ ಪುರುಷ ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿರವರ 7ನೇ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಸಂಜೆ ರಥೋತ್ಸವದೊಂದಿಗೆ ಸಂಪನ್ನವಾಯಿತು.ಡಿ. 22ರಂದು ಖಾಶೆಂಪುರ್ ಪಿ ಗ್ರಾಮದಲ್ಲಿರುವ ವಿವಿಧ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಮೂಲಕ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಗ್ರಾಮಸ್ಥರು ಆರಂಭಿಸಿದರು. 23 ಮತ್ತು 24ರಂದು ಎರಡು ದಿನ ಸಂಗೀತ ಹಾಗೂ ಭಜನೆ ಕಾರ್ಯಕ್ರಮಗಳು ಜರುಗಿದವು. 25ರಂದು ಕಲಮೂಡದ ಸುಕ್ಷೇತ್ರ ಸೊಂತ್ ಮಠದ ಶ್ರೀ ಶ್ರೀ ಶ್ರೀ ಅಭಿನವ್ ಬಾಲಯೋಗಿ ಶರಣ ಶಂಕರಲಿಂಗ ಮಹಾರಾಜರು, ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಇಟಗಾದ ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿ ಮಠದ ಶ್ರೀ ಶರಣಯ್ಯಾ ಸ್ವಾಮೀಜಿ, ಬೀದರ್ ತಾಲೂಕಿನ ಕಮಠಾಣಾದ ಗವಿಮಠದ ಶ್ರೀ ಶ್ರೀ ಷ.ಬ್ರ 108 ಸದ್ಗುರು ರಾಚೋಟೇಶ್ವರ ಶಿವಚಾರ್ಯ ಮಹಾರಾಜರು, ಶ್ರೀ ಅರ್ಜುನಗಿರಿ ಮಹಾರಾಜರು ಸೇರಿದಂತೆ ಅನೇಕ ಶರಣರು, ಮಠಾದೀಶರು…
ಭೋಪಾಲ್: ಬಸ್ಸೊಂದು ಟ್ರಕ್ʼಗೆ ಡಿಕ್ಕಿಯಾಗಿ (Accident) ಹೊತ್ತಿ ಉರಿದ ಪರಿಣಾಮ 12 ಜನ ಸಾವಿಗೀಡಾದ ಘಟನೆ ಮಧ್ಯಪ್ರದೇಶದ (Madhya Pradesh) ಗುನ ಹಾಗೂ ಅರೋನ್ ನಡುವಿನ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ 14 ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದರಲ್ಲಿ 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಬಸ್ ಗುನಾದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಅರೋನ್‍ಗೆ ತೆರಳುತ್ತಿತ್ತು ಈ ವೇಳೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತ ಕ್ಕೊಳಗಾದ ಬಸ್ ಬಿಜೆಪಿ (BJP) ಮುಖಂಡ ಧರ್ಮೇಂದ್ರ ಸಿಕರ್ವಾರ್ ಅವರ ಒಡೆತನದ್ದು ಎಂದು ತಿಳಿದು ಬಂದಿದೆ. ಬಸ್‍ನ ವಿಮೆ ಪ್ರಮಾಣಪತ್ರಗಳ ಅವಧಿ ಮುಗಿದಿದ್ದು, https://ainlivenews.com/sabarimala-ayyappa-swami-temple-earned-204-crore-rupees-in-39-days/ 2021 ರಿಂದ ರಸ್ತೆ ತೆರಿಗೆ ಸಹ ಪಾವತಿಸಿಲ್ಲ. ಬಸ್‍ನ ಸುರಕ್ಷತಾ ಪ್ರಮಾಣ ಪತ್ರದ ಅವಧಿ ಸಹ ಮುಗಿದಿತ್ತು ಎಂದು ವರದಿಯಾಗಿದೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ನೆರವು ಘೋಷಣೆ ಮಾಡಲಾಗಿದೆ. ಅಪಘಾತಕ್ಕೆ ಕಾರಣ ಹಾಗೂ…