Author: AIN Author

ಬೆಂಗಳೂರು: ಹೊಸವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಸಿಲಿಕಾನ್ ಸಿಟಿ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಪಬ್‌, ಪಾರ್ಟಿ ಲಾನ್‌, ಫಾರ್ಮ್‌ಹೌಸ್‌ನಲ್ಲಿ ತಯಾರಿ ಜೋರಾಗಿದೆ. ಹಾಗಾಗಿ ಹೊಸವರ್ಷ ದಿನಾಚರಣೆ ಆಚರಣೆಗೆ ಪೊಲೀಸ್ ಭದ್ರತೆ ವಿಚಾರ ಕುರಿತು  ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಇಂದು ಮತ್ತೆ ಸುದ್ದಿಗೋಷ್ಠಿ ನಡೆಸಿದರು. ಹಾಗೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ವಿವಿಧ ಇಲಾಖೆಗಳು ಸಭೆ ನಡೆಸಿ ಕೆಲವೊಂದು ನಿಯಮ ಜಾರಿಗೊಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ (B Dayanand) ಈ ಬಾರಿ ಸಿಲಿಕಾನ್ ಸಿಟಿಯ ಎಂಜಿ ರೋಡ್, ಬ್ರಿಗೆಡ್ ರೋಡ್, ರೆಸಿಡೆನ್ಸಿ ರೋಡ್, ಟ್ರಿನಿಟಿ ಸರ್ಕಲ್, ಫಿನಿಕ್ಸ್ ಮಾಲ್, ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆ, ಸ್ಟಾರ್ ಹೋಟೆಲ್‌ಗಳು ಸೇರಿದಂತೆ ಪಬ್ ಕ್ಲಬ್‌ಗಳಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗುತ್ತಿದೆ. ನಗರದಲ್ಲಿ ಮಾತನಾಡಿದ ಅವರು,ಹೊಸವರ್ಷ ದಿನಾಚರಣೆ ಆಚರಣೆಗೆ  ಈಗಾಗಲೇ ಮಾರ್ಗಸೂಚಿ ನೀಡಲಾಗಿದೆ ನಗರದಾದ್ಯಂತ‌ ಕಟ್ಟೆಚ್ಚರ ವಹಿಸಲಾಗಿದೆ ಡ್ರಂಕ್ ಅಂಡ್…

Read More

ದಾವಣಗೆರೆ: ತರಿಕೆರೆ ಹಾಗೂ ಕಡೂರು ಭಾಗಕ್ಕೆ ಶಿವಮೊಗ್ಗದ ಭದ್ರಾ ಜಲಾಶಯದಿಂದ ನೀರನ್ನು ಹರಿಸಲು ಆದೇಶ ಮಾಡಿರುವುದನ್ನ ಖಂಡಿಸಿ ಇಂದು ದಾವಣಗೆರೆಯಲ್ಲಿ ಭಾರತೀಯ ರೈತ ಒಕ್ಕೂಟದ ಮುಖಂಡರು ಪ್ರತಿಭಟನೆಯನ್ನ ನಡೆಸಿದ್ದಾರೆ. ದಾವಣಗೆರೆಯ ನೀರಾವರಿ ಇಲಾಖೆಯ ಎಇಇ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಭಾರತೀಯ ರೈತ ಒಕ್ಕೂಟದ ಮುಖಂಡರು, ಭದ್ರಾ ಸೂಪರಿಟೆಂಡೆಂಟ್ ವಿರುದ್ಧ ಆಕ್ರೋಶವನ್ನ ವ್ಯಕ್ತಪಡಿಸಿದರು. ಬಳಿಕ, ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿಯನ್ನ ಸಲ್ಲಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯಡಿ ತರೀಕೆರೆ ಏತ ನೀರಾವರಿ ಯೋಜನೆ ಅಚ್ಚುಕಟ್ಟು ಪ್ರದೇಶಕ್ಕೆ ನೀರನ್ನು ಒದಗಿಸಲು ಅನುವಾಗುವಂತೆ ಮತ್ತು ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯ ಮೂಲಕ ವಾಣಿ ವಿಲಾಸ ಸಾಗರಕ್ಕೆ ನೀರನ್ನು ‌ಹರಿಸಲು ಅನುವಾಗುವಂತೆ ಭದ್ರಾ ಜಲಾಶಯದ ನೀರನ್ನು ಒಳಹರಿವಿನ ಪ್ರಮಾಣ ಹೆಚ್ಚಾದ ನಂತರ ಮತ್ತು ನೀರಿನ ಲಭ್ಯತೆ ನೋಡಿಕೊಂಡು ನೀರು ಹರಿಸಬೇಕು ಎಂದು ಸರ್ಕಾರದ ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಆದೇಶ ನೀಡಿದ್ದಾರೆ. ಆದರೆ ಭದ್ರಾ ಸೂಪರಿಂಟೆಂಡೆಂಟ್ ಇಂಜಿನಿಯರ್ ತರೀಕೆರೆ ಮತ್ತು ಕಡೂರು ಭಾಗದ…

Read More

ಹುಬ್ಬಳ್ಳಿ: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್​ಗಾಗಿ ಬಸ್​ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್​ನಲ್ಲಿ ನಡೆದಿದೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ​ ಜಾರಿ ಮಾಡಿದ ಹಿನ್ನಲೆ ಸೀಟ್​ಗಾಗಿ ಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್​ವೊಂದರಲ್ಲಿ ಯಾವುದೇ ಸೀಟ್​ ಇರಲಿಲ್ಲ. ಈ ವೇಳೆ ಇಬ್ಬರು ಮಹಿಳೆಯರು ಸೀಟ್​ಗಾಗಿ ಜಡೆ ಜಗಳವಾಡಿದ್ದಾರೆ. ಇನ್ನು ಇಬ್ಬರು ಮಹಿಳೆಯರ ಜಡೆ ಜಗಳ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Read More

ಗದಗ: ಪರಭಾಷಾ ನಾಮಫಲಕಗಳ ವಿರುಧ್ಧ ಸಮರ ಸಾರಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಸೇರಿದಂತೆ ಇತರೆ ಕರವೇ ಹೋರಾಟಗಾರರ ಬಂಧನ ಖಂಡಿಸಿ ಹಾಗೂ ತಕ್ಷಣವೇ ಅವರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗದಗ ತಾಲೂಕಾ ಅಧ್ಯಕ್ಷ ನಾಗಪ್ಪ ಅಣ್ಣಿಗೇರಿ ನೇತೃತ್ವದಲ್ಲಿ ಗದಗ ತಹಶಿಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಯನ್ನು ಸಲ್ಲಿಸಿದ್ರು. ಈ ಸಂದರ್ಭದಲ್ಲಿ ಗದಗ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ನಿಂಗನಗೌಡ ಮಾಲಿ ಪಾಟೀಲ್, ಗದಗ ತಾಲೂಕ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಭೋವಿ, ಗದಗ ತಾಲೂಕಾ ಉಪಾಧ್ಯಕ್ಷ ಈರಣ್ಣ ಹುರಕಡ್ಲಿ, ಗದಗ ತಾಲೂಕ ಸಂಚಾಲಕ ಅಲ್ಲಾ ಸಾಬ್ ನದಾಫ್, ಸಾಮಾಜಿಕ ಜಾಲತಾಣ ಸಂಚಾಲಕ ಮುಸ್ತಾಕ್ ದಾವಣಗೆರೆ ಸೇರಿದಂತೆ ಕರವೇ ಕಾರ್ಯಕರ್ತರಾದ ಪ್ರವೀಣ್ ಬನ್ನಿಗೊಳ್ಳ, ವೀರೇಶ್ ಕೊಣ್ಣೂರ, ಫಾರೂಕ ಕನವಳ್ಳಿ, ಚಂದ್ರು ಮಣ್ಣೂರ, ಮಂಜು ಕೊಣ್ಣೂರ, ಶಿವು, ಜಾಫರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More

ಬೆಂಗಳೂರು: ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ (BJP) ಪರ ಅಲೆ ಇದೆ. ಆದರೂ ರಾಜ್ಯದಲ್ಲಿ ಕಾಂಗ್ರೆಸ್ (Congress) ಪಕ್ಷವು ಆಡಳಿತ ನಡೆಸುವ ಸಂದರ್ಭದಲ್ಲಿ ನಮ್ಮ ವಿರೋಧಿಗಳನ್ನು ಹಗುರವಾಗಿ ಪರಿಗಣಿಸದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಕಿವಿಮಾತು ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ  ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯಲ್ಲೂ ಕೂಡ ವಿವಿಧ ರೀತಿಯ ಸವಾಲುಗಳಿರುತ್ತವೆ. ಆ ಸವಾಲುಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತು ಸಾಧನೆ ಮಾಡಲು ನಮ್ಮ ಎದುರಾಳಿಗಳನ್ನು ನಾವು ಹಗುರವಾಗಿ ಪರಿಗಣಿಸಬಾರದು. ನರೇಂದ್ರ ಮೋದಿಜೀ (Narendra Modi) ಅವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು. ಸ್ವಾತಂತ್ರ‍್ಯ ಬಂದ ಬಳಿಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡ ಮನೆ ಬಾಗಿಲಿಗೆ ಸೌಲಭ್ಯಗಳನ್ನು ಬಿಜೆಪಿಯ ಕೇಂದ್ರ ಸರ್ಕಾರ ತಲುಪಿಸಿದೆ. ಇತರ ಯಾವ ಸರ್ಕಾರಗಳೂ ಇಂಥ ಕೆಲಸ ಮಾಡಿರಲಿಲ್ಲ. ರಾಜ್ಯದ ಕಾರ್ಯಕರ್ತರ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸಬೇಕಿದೆ.…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅಂಗಡಿ ಮುಂಗಟ್ಟುಗಳು ವಾಣಿಜ್ಯ ಮಳಿಗೆಗಳಲ್ಲಿ ನಾಮಫಲಕಗಳನ್ನು ಅಳವಡಿಸುವ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿದರು. ಇಲ್ಲಿದೆ ಸಿಎಂ ಸುದ್ದಿಗೋಷ್ಠಿಯ ವಿವರ. • ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ನ್ಯಾಸಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ. • ಇದಕ್ಕೂ ಮೊದಲು 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ…

Read More

ಚಾಮರಾಜನಗರ: 17ಕ್ಕೂ ಅಧಿಕ ಆನೆಗಳ ಹಿಂಡು ಜಮೀನುಗಳಿಗೆ ಲಗ್ಗೆ ಇಟ್ಟು ರೈತರಿಗೆ ಆತಂಕ ಸೃಷ್ಟಿ ಮಾಡಿರುವ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ‌ ಅರಳವಾಡಿಯಲ್ಲಿ ನಡೆದಿದೆ. ತಮಿಳುನಾಡಿನ ಅರಳವಾಡಿ ಹಾಗೂ ಚಾಮರಾಜನಗರ ಗಡಿಗೂ ಕೇವಲ 6-7 ಕಿಲೋ ಮೀಟರ್‌ ದೂರವಿದ್ದು, ಸದ್ಯ ಬೆಳೆ ನಷ್ಟದ ಆತಂಕದಲ್ಲಿ ರೈತರಿದ್ದಾರೆ.  ಆಹಾರ ಅರಸಿ ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟಿರುವ ಆನೆ ಹಿಂಡನ್ನು ಕಂಡ ರೈತರು ಕಂಗಲಾಗಿದ್ದು, ಅವುಗಳನ್ನು ಮತ್ತೇ ಕಾಡಿಗಟ್ಟಲು ಹರಸಾಹಸವನ್ನೇ ಪಡುತ್ತಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡು ಗಡಿಯಲ್ಲಿ ಅರಣ್ಯ ಪ್ರದೇಶವಿದ್ದು, ಯಾವುದೇ ಆನೆ ಕಂದಕ ನಿರ್ಮಾಣ ಮಾಡದಿರುವುದರಿಂದ ಆಗಾಗ್ಗೆ ಜಮೀನುಗಳತ್ತ ಕಾಡನೆಗಳು ಲಗ್ಗೆ ಹಾಕಲಿವೆ. ಅಲ್ಲಿನ ಅರಣ್ಯ ಇಲಾಖೆಯವರು ಕಾಡಿಗಟ್ಟುವ ಪ್ರಯತ್ನ ಮಾಡುತ್ತಿದ್ದಾರೆ.

Read More

ಬೆಂಗಳೂರು: ನಗರದಲ್ಲಿ ಸರಣಿ ಅಪಘಾತ ಮಾಡಿ ಅಪ್ರಾಪ್ತನ ಸಾವಿಗೆ ಕಾರಣವಾಗಿದ್ದ ಚಾಲಕನಿಗೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್-51 ನ್ಯಾಯಾಧೀಶರಿಂದ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.ಚಾಲಕ ಸುರೇಶ್(24)ಗೆ 3 ವರ್ಷಗಳ ಕಠಿಣ ಶಿಕ್ಷೆ & 2 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್ 2017ರ ಮೇ.27ರಂದು ಬಾಬುಸಾಪಾಳ್ಯದಲ್ಲಿ ನಡೆದಿದ್ದ ಅಪಘಾತವಾಗಿದ್ದು ಝೆನ್ ಕಾರಿನಲ್ಲಿದ್ದ ಸುರೇಶ್ನಿಂದ ಅತಿವೇಗ & ಅಜಾಗರುಕತೆಯಿಂದ ಸರಣಿ ಅಪಘಾತವಾಗಿತ್ತು. ಮೊದಲು ಬೈಕ್ ಗೆ ಡಿಕ್ಕಿ ಹೊಡೆದು, ಮತ್ತೊಂದು ಕಾರ್, ಮತ್ತೆರಡು ಬೈಕ್ ಗೆ ಡಿಕ್ಕಿ ಹೊಡೆದಿದ್ದ ಬಳಿಕ ರಸ್ತೆ ಪಕ್ಕದಲ್ಲಿದ್ದ ಇಬ್ಬರು ಬಾಲಕರಿಗೆ ಡಿಕ್ಕಿ ಹೊಡೆದಿದ್ದ  ಇದರಿಂದ 12 ವರ್ಷದ ಎಂಬ ಬಾಲಕ ಮೃತಪಟ್ಟು, ಮತ್ತೊಬ್ಬ ಬಾಲಕನಿಗೆ ಗಂಭೀರ ಗಾಯವಾಗಿತ್ತು ಈ ಬಗ್ಗೆ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ‌.. ತನಿಖೆ ವೇಳೆ ಚಾಲಕ ಸುರೇಶ್ ನಕಲಿ ನಂಬರ್ ಪ್ಲೇಟ್ ಬಳಸಿದ್ದು ಪತ್ತೆ ಅಷ್ಟಲ್ಲದೇ ಸುರೇಶ್ ಬಳಿ ಡಿಎಲ್, ಕಾರ್ ಇನ್ಸುರೆನ್ಸ್ ಕೂಡ ಇಲ್ಲದಿರುವುದು ಪತ್ತೆಯಾಗಿದ್ದು…

Read More

ಬೆಂಗಳೂರು: ಇಬ್ಬರು ಅಲ್‌ ಖೈದಾ (Al-Qaeda) ಉಗ್ರರಿಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ (NIA Special Court) 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಖ್ತರ್ ಹುಸೇನ್ ಲಷ್ಕರ್ ಮತ್ತು ಅಬ್ದುಲ್ ಅಲೀಂ ಮೊಂಡಲ್‌ಗೆ ಕೋರ್ಟ್‌ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. 2022ರ ಆಗಸ್ಟ್ 30ರಂದು ಪ್ರಕರಣ ದಾಖಲಾಗಿತ್ತು. ಇಬ್ಬರು ಉಗ್ರರು ವಿದೇಶದಲ್ಲಿರುವ ಹ್ಯಾಂಡ್ಲರ್‌ಗಳಿಂದ ಆನ್‌ಲೈನ್ ಮೂಲಕ ಮನ ಪರಿವರ್ತನೆಗೊಂಡು ಅಲ್‌ ಖೈದಾಗೆ ಹೊಸ ಯುವಕರನ್ನು ಸೇರ್ಪಡೆಗೊಳಿಸುತ್ತಿದ್ದರು. ಬಳಿಕ ಟೆಲಿಗ್ರಾಂ ಗ್ರೂಪ್‌ಗಳಿಗೆ ಸೇರಿಸಿ ಅಫ್ಘಾನಿಸ್ತಾನಕ್ಕೆ ತೆರಳಲು ಪ್ಲಾನ್ ಮಾಡುತ್ತಿದ್ದರು. ಅಸ್ಸಾಂ (Assam) ಮೂಲದ ಅಖ್ತರ್ ಹುಸೇನ್‍ನ್ನು ಸಿಸಿಬಿ ಪೊಲೀಸರು ಮೊದಲು ಬಂಧಿಸಿದ್ದರು. ಈತ ತಿಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿ ಕೋಣೆಯಲ್ಲಿ ಕೆಲ ಯುವಕರೊಂದಿಗೆ ವಾಸ್ತವ್ಯ ಹೂಡಿದ್ದ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ

Read More

ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಲಾಭ ಎಲ್ಲಾ ಫಲಾನುಭವಿಗಳಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಅವರು, ನಾಡಿನ ಮಹಿಳೆಯರ ಆರ್ಥಿಕ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಾ, ಜನಪರ ಆಡಳಿತದ ಮೂಲಕ ನುಡಿದಂತೆ ನಡೆಯುತ್ತಿರುವ ನಮ್ಮ ಕಾಂಗ್ರೆಸ್ (Congress) ಸರ್ಕಾರವು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಿದೆ ಎಂದು ತಿಳಿಸಿದ್ದಾರೆ. ರಾಜ್ಯದ ಎಲ್ಲಾ 5,000ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಏಕಕಾಲದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೇಟ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ…

Read More