Author: AIN Author

ಧಾರವಾಡ: ಧಾರವಾಡ ತಾಲೂಕಿನ ತಡಸಿನಕೊಪ್ಪ ಗ್ರಾಮದಲ್ಲಿ ಇಂದು 14 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ ಹಾಗೂ ಶ್ರೀ ಅಯ್ಯಪ್ಪ ಮೂರ್ತಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಗ್ರಾಮದ ಹೊರವಲಯದ ಶ್ರೀ ಅಯ್ಯಪ್ಪ ಸನ್ನಿಧಾನದಿಂದ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಅಯ್ಯಪ್ಪ ಸ್ವಾಮಿ ಮೂರ್ತಿ ಮೆರವಣಿಗೆ ನಡೆಸಲಾಯಿತು. ಇನ್ನೂ ಮೆರವಣಿಗೆಯಲ್ಲಿ ಮಹಿಳೆಯರು ತಲೆಯ ಮೇಲೆ ಕುಂಬ ಹೊತ್ತು ಸಾಗಿದ್ದು, ಮೂರ್ತಿ ಮೆರವಣಿಗೆಯ ಮೆರುಗು ಹೆಚ್ಚಿಸಿತ್ತು. ಮಹಿಳೆಯರೊಂದಿಗೆ ಚಿಕ್ಕ ಚಿಕ್ಕ ಹೆಣ್ಣು ಮಕ್ಕಳು ಭಕ್ತಿ ಭಾವದಿಂದ ಕುಂಬ ಹೊತ್ತು ಸಾಗುತ್ತಿದ್ದು, ಅವರಿಗೆ ಹಿರಿಯ ಮಹಿಳೆಯರು ಮಾರ್ಗದರ್ಶ ಮಾಡುತ್ತಿರುವ ದೃಶ್ಯ ಕಂಡು ಬಂದಿತ್ತು. ಜೊತೆಗೆ ಕುಂಬ ಮುಂದೆ ಅಯ್ಯಪ್ಪ ಮಾಲಾಧಾರಿಗಳು ಶ್ರೀ ಅಯ್ಯಪ್ಪನ ನಾಮ ಜಪ ಮಾಡುತ್ತಾ ಸಾಗಿದ್ದು, ತಡಸಿನಕೊಪ್ಪದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಗುರು ಸ್ವಾಮಿ ನಾಗೇಂದ್ರ ಸ್ವಾಮಿ ನೇತೃತ್ವದಲ್ಲಿ ಮೆರವಣಿಗೆ ಸಾಗಿತ್ತು. ಕೊನೆಯಲ್ಲಿ ಟ್ಯಾಕ್ಟರನಲ್ಲಿ ಶ್ರೀ ಅಯ್ಯಪ್ಪ ಮೂರ್ತಿ ತರಲಾಗಿದ್ದು, ಅದ್ದೂರಿಯಾಗಿ ಗ್ತಾಮದಲ್ಲಿ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ ಹಾಗೂ…

Read More

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಟಿಡಿಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ವರ್ಮಾ ನಿರ್ದೇಶನ ಮಾಡಿರುವ ವ್ಯೂಹಂ ಸಿನಿಮಾ ರಿಲೀಸ್ ಮಾಡದಂತೆ ಪ್ರತಿಭಟಿಸಲಾಗುತ್ತಿದೆ. ಈ ಕುರಿತಂತೆ ಮಾಧ್ಯಮದೊಂದಿಗಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿರುವ ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು (Kolikapudi Srinivas Naidu), ಎಡವಟ್ಟಿನ ಹೇಳಿಕೆಯನ್ನು ನೀಡಿದ್ದಾರೆ. ವರ್ಮಾ ತಲೆ ಕಡಿದು ತಂದಿವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ನಿನ್ನೆಯಷ್ಟೇ ರಾಮ್ ಗೋಪಾಲ್ ವರ್ಮಾ ಕಚೇರಿಗೆ ಟಿಡಿಪಿ ಕಾರ್ಯಕರ್ತರು ಮತ್ತು ಎನ್.ಟಿ.ಆರ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದರು. ಹೈದರಾಬಾದ್ ನಲ್ಲಿರುವ ವರ್ಮಾ ಅವರ ಡೆನ್ ಕಚೇರಿಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ವ್ಯೂಹಂ ಸಿನಿಮಾದ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದರು. ಆಗ ಸಿನಿಮಾಗಳ ಮೂಲಕ ಸಖತ್ ಸುದ್ದಿ ಆಗುತ್ತಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) , ಇದೀಗ ವಿವಾದಗಳಿಂದಾಗಿ ಹೆಚ್ಚು ಪ್ರಚಾರ ಪಡೆಯುತ್ತಿದ್ದಾರೆ. ಸದ್ಯ ವರ್ಮಾ ‘ವ್ಯೂಹಂ’ (Vyuham) ಹೆಸರಿನಲ್ಲಿ…

Read More

ಕನ್ನಡದ ಹೆಮ್ಮೆಯ ಹೊಂಬಾಳೆ ಫಿಲ್ಮ್ಸ್ (Hombale Films) ನಿರ್ಮಾಣದ ಮತ್ತೊಂದು ಸಲಾರ್ (Salaar) ಸಿನಿಮಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಕಳೆದ ಶುಕ್ರವಾರ ರಿಲೀಸ್ ಆಗಿರುವ ಈ ಸಿನಿಮಾ ಬಿಡುಗಡೆಯಾದ ಆರೇ ದಿನಕ್ಕೆ ವಿಶ್ವದಾದ್ಯಂತ 500 ಕೋಟಿಗೂ ಅಧಿಕ ಹಣವನ್ನು ಗಳಿಸಿದೆ. ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ಹಣ ಹರಿದು ಬರುತ್ತಿದೆ. ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿರುವ ಚಿತ್ರವು ಮೊದಲ ದಿನವೇ 178.7 ಕೋಟಿ ರೂ ಸಂಪಾದಿಸಿದರೆ, ಎರಡನೇ ದಿನಕ್ಕೆ 295.7 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮೂರನೇ ದಿನಕ್ಕೆ 350 ಕೋಟಿಗೂ ಅಧಿಕ ಗಳಿಕೆ ಆಗಿತ್ತು. ನಾಲ್ಕು, ಐದು ಮತ್ತು ಆರನೇ ದಿನದ ಒಟ್ಟು ಗಳಿಕೆ 500 ಕೋಟಿಗೂ ಅಧಿಕ ಎಂದು ಅಂದಾಜು ಮಾಡಲಾಗಿದೆ. ಸಲಾರ್ ಎನ್ನುವ ಅಧಿಕೃತ ಸೋಷಿಯಲ್ ಮೀಡಿಯಾ ಪುಟದಲ್ಲಿ ಪೋಸ್ಟರ್ ಕೂಡ ಹಾಕಲಾಗಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೊಸ…

Read More

ಧಾರವಾಡ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಜ್ವಲ್ ಯೋಜನೆಯ ಗ್ಯಾಸ್ ಸಿಲಿಂಡರ್‌ಗಾಗಿ ಧಾರವಾಡದಲ್ಲಿ ಏಜೆನ್ಸಿಗಳ ಮುಂದೆ ಮಹಿಳೆಯರ ಸರದಿ ಸಾಲು ಕಂಡುಬರುತ್ತಿದೆ. ನಗರದ ಹೆಡ್ ಪೋಸ್ಟ್ ಕಚೇರಿ ಬಳಿಯ ಹೆಚ್ ಪಿ ಹಾಗೂ ಭಾರತ ಗ್ಯಾಸ್ ಸಿಲಿಂಡರ್ ಏಜೆನ್ಸಿ ಮುಂಭಾಗದಲ್ಲಿ ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರ ಪಡೆಯಲು ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಇಷ್ಟು ದಿನ ಖಾಲಿ ಖಾಲಿಯಾಗಿ ಕಾಣುತ್ತಿದ್ದ ನಗರದ ಬಹುತೇಕ ಗ್ಯಾಸ್ ಏಜೆನ್ಸಿಗಳಲ್ಲ ಮುಂದೆ ಮಹಿಳೆಯರ ಸರದಿ ಸಾಲು ಕಂಡು ಬರುತ್ತಿದೆ. ಹೊಗೆ ಮುಕ್ತ ರಾಷ್ಡ್ರವನ್ನಾಗಿಸುವ ಉದ್ದೇಶದಿಂದ ಸ್ವಚ್ಚ ಭಾರತ ಬೆಹ್ತಾರ್ ಜೀವನ ಅಡಿಬರಹದೊಂದಿಗೆ ಕಳೆದ ಮೇ.1 2016 ರಂದು ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯನ್ಮು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಬಿಪಿಎಲ್ ಕಾರ್ಡ್ ಹೊಂದಿದ್ದರಿಗೆ ಉಚಿತ ಗ್ಯಾಸ್ ಸಲಿಂಡರ್ ನೀಡಲಾಗುತ್ತಿದೆ. ಆರಂಭದಲ್ಲಿ ಯೋಜನೆಗೆ ಉತ್ತಮ ರಸ್ಪಾನ್ಸ್ ವ್ಯಕ್ತವಾಗಿದ್ದು, ಮತ್ತೆ ಯೋಜನೆ ಮುಂದುವರಿಸಿದ್ದ ಬೆನ್ನಲೇ ಧಾರವಾಡದಲ್ಲಿ ಪ್ರಧಾನ ಮಂತ್ರಿ ಉಜ್ವಲ್ ಯೋಜನಯ ಉಚಿತ ಸಿಲಿಂಡರ್‌ಗಾಗಿ ಈಗ ಮಹಿಳೆಯರು…

Read More

ತಮಿಳಿನ (Tamil Nadu) ಹೆಸರಾಂತ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದವರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಇತ್ತೀಚೆಗಷ್ಟೇ ಅವರಿಗೆ ಕೋವಿಡ್ ಪಾಸಿಟಿವ್ (Covid positive) ಆಗಿದ್ದು, ನಂತರ ತತಕ್ಷಣವೇ ಅವರನ್ನು ಐಸಿಯೂಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಮಿಳು ನಾಡಿನ ಡಿಎಂಡಿಕೆ (DMDK) ಮುಖ್ಯಸ್ಥರೂ ಆಗಿರುವ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದ್ದವು. ಕ್ಯಾಪ್ಟನ್ ವಿಜಯಕಾಂತ್ (Vijayakanth) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿತ್ತು. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದರು.ಆದರೆ, ಮನೆಗೆ ಬಾರದೇ, ಬಾರದ…

Read More

ಬಿಗ್ ಬಾಸ್ ಮನೆಯ (Bigg BossKannada 10) ಆಟ ಫಿನಾಲೆಗೆ ಸಮೀಪಿಸುತ್ತಿದೆ. ದೊಡ್ಮನೆಯಲ್ಲಿ ಫ್ಯಾಮಿಲಿ ರೌಂಡ್ ಶುರುವಾಗಿದೆ. ಇದೀಗ ಮನೆಗೆ ನಮ್ರತಾ (Namratha Gowda) ತಾಯಿಯ ಆಗಮನವಾಗಿದೆ. ಮಗಳಿಗೂ ಮನೆಮಂದಿಗೂ ತಮ್ಮ ಮನೆಯ ಅಡುಗೆ ಊಟ ಬಡಿಸಿ ಸಂಭ್ರಮಿಸಿದ್ದಾರೆ. ಇದರ ನುಡವೆ ಮತ್ತೆ ಮನೆಯಲ್ಲಿ ಸ್ನೇಹಿತ್ ಕುರಿತು ಬಿಸಿ ಬಿಸಿ ಚರ್ಚೆ ನಡೆದಿದೆ. ಬಿಗ್ ಬಾಸ್’ (Bigg Boss Kannada) ಪಾಸ್ & ಪ್ಲೇ ಎಂದು ಟಾಸ್ಕ್ ನೀಡಿದರು. ಇದನ್ನು ನೀವೆಲ್ಲರೂ ಶಿಸ್ತಿನಿಂದ ಪಾಲಿಸಬೇಕು ಅಂತ ಸ್ಪರ್ಧಿಗಳಿಗೆ ಬಿಗ್ ಬಾಸ್ ಎಚ್ಚರಿಕೆ ಕೂಡ ನೀಡಿದ್ದರು. ಅದರಂತೆ ಒಂದಷ್ಟು ಸಮಯ ಪಾಸ್, ಪ್ಲೇ ಅಂತ `ಬಿಗ್ ಬಾಸ್’ ಹೇಳಿ ಸ್ಪರ್ಧಿಗಳಿಗೆ ಸರಿಯಾಗಿ ಆಟ ಆಡಿಸಿದರು. ಈ ಟಾಸ್ಕ್ ನಿಜಕ್ಕೂ ಮನರಂಜನಾದಾಯಕವಾಗಿತ್ತು ಬಿಗ್ ಬಾಸ್‌ನಲ್ಲಿದ್ದಾಗಲೇ ನಮ್ರತಾ ಹಿಂದೆ ಬಿದ್ದಿದ್ದರೂ ಸ್ನೇಹಿತ್. ಹಲವು ಪ್ರೇಮ ನಿವೇದನೆ ಮಾಡಿದ್ದರು. ಆದರೆ ನಮ್ರತಾ, ಸ್ನೇಹಿತ್ ಪ್ರೀತಿಗೆ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ಸ್ನೇಹಿತ್ (Snehith Gowda) ಎಲಿಮಿನೇಷನ್ ನಂತರ ಮಿಸ್ಸಿಂಗ್…

Read More

ಪ್ಯಾರಾಸೈಟ್ ಸಿನಿಮಾದ ಮೂಲಕ ಸಾಕಷ್ಟು ಫೇಮಸ್ ಆಗಿದ್ದ ಹಾಲಿವುಡ್ ನಟ ಲೀ ಸನ್ ಕ್ಯುನ್ (Lee Sun-kyun) ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕೊರಿಯಾದ (South Korea) ಸೆಂಟ್ರಿಲ್ ಸಿಯೋಲ್ ನ ಕಾರ್ ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನಲ್ಲೇ ನಟನ ಶವ ಪತ್ತೆಯಾಗಿದೆ. ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಸ್ಥಳೀಯ ಪತ್ರಿಕೆ ವರದಿ ಮಾಡಿತ್ತು. ಸ್ಥಳಕ್ಕೆ ಬಂದ ಪೊಲೀಸರು ವ್ಯಕ್ತಿಯನ್ನು ಪತ್ತೆ ಮಾಡಿ, ಅದು ಲೀ ಸನ್ ಕ್ಯೂನ್ ಎಂದು ದೃಢಪಡಿಸಿದ್ದಾರೆ. ಲೀ ಸನ್ ಕ್ಯೂನ್ ಆತ್ಮಹತ್ಯೆ (suicide)ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಅವರನ್ನು ವಿಚಾರಣೆ ಮಾಡಲಾಗಿತ್ತು. ವಿಚಾರಣೆಗೆ ಒಳಗಾದ ಮರುದಿನವೇ ಅವರು ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 48ರ ವಯಸ್ಸಿನ ನಟನ ಸುದ್ದಿಯು ದಕ್ಷಿಣ ಕೊರಿಯಾಗೆ ಆಘಾತವನ್ನೇ ಮೂಡಿಸಿದೆ. ಅಲ್ಲದೇ ಮನೆಯಲ್ಲಿ ಆತ್ಮಹತ್ಯೆಯ ಪತ್ರವನ್ನು ಬರೆದಿಟ್ಟು, ತಮ್ಮ ಪತಿ ಹೋಗಿರುವುದಾಗಿ ಲೀ ಸನ್ ಕ್ಯೂನ್ ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಾಗುತ್ತಿದೆ. ಕಾರಿನಲ್ಲಿ ಶವದ ಜೊತೆ…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ನಾಯಕ ಅನುಪಮ್ ಹಜ್ರಾ (Anupam Hazra) ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಕಿತ್ತೆಸೆಯಲಾಗಿದೆ. ಲೋಕಸಭೆಯ (Loksabha) ಮಾಜಿ ಸಂಸದ ಹಜ್ರಾ ಅವರು ರಾಜ್ಯದಲ್ಲಿ ಪಕ್ಷದ ಕಾರ್ಯಚಟುವಟಿಕೆಯನ್ನು ಕೆಲವು ಸಮಯದಿಂದ ಟೀಕಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಹಜ್ರಾ ಅವರನ್ನು ಹುದ್ದೆಯಿಂದ ತೆಗೆದುಹಾಕಿದ್ದಾರೆ. https://ainlivenews.com/sabarimala-ayyappa-swami-temple-earned-204-crore-rupees-in-39-days/ ಗೃಹ ಸಚಿವ ಅಮಿತ್ ಶಾ (AmitShah) ಮತ್ತು ಜೆ.ಪಿ ನಡ್ಡಾ (JP Nadda) ಅವರು ರಾಜಕೀಯ ಕಾರ್ಯಕ್ರಮಗಳಿಗಾಗಿ ಕೋಲ್ಕತ್ತಾಗೆ ಆಗಮಿಸಿದ್ದ ಸಂದರ್ಭದಲ್ಲಿ ಚರ್ಚಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಹಜ್ರಾ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಮೂಲಕ ಪಕ್ಷದೊಳಗಿನ ಭಿನ್ನಮತೀಯರಿಗೆ ಶಿಸ್ತು ಪಾಲಿಸುವಂತೆ ಹಾಗೂ ನಾಯಕತ್ವವನ್ನು ನಿಷ್ಠೆಯಿಂದ ಅನುಸರಿಸುವಂತೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎನ್ನಲಾಗಿದೆ.  

Read More

ಬಾಲಿವುಡ್ (Bollywood) ಖ್ಯಾತ ನಟ ಆಮೀರ್ ಖಾನ್ (Aamir Khan) ಪುತ್ರಿ ಇರಾ ಖಾನ್ (Ira Khan)  ಮದುವೆ ಜನವರಿ 3ರಂದು ಅದ್ಧೂರಿಯಾಗಿ ನಡೆಯಲಿದ್ದು, ಅದಕ್ಕೂ ಮುನ್ನ ಮದುವೆ ಶಾಸ್ತ್ರಗಳು ನಡೆಯುತ್ತಿವೆ. ಈ ಕುರಿತಂತೆ ಸ್ವತಃ ಇರಾ ಖಾನ್ ಅವರೇ ಕೆಲ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದ್ದಾರೆ. ಅಕ್ಟೋಬರ್ 3ರಂದು ಇರಾ ಮತ್ತು ನೂಪುರ್ ಶಿಖಾರೆ ರಿಜಿಸ್ಟರ್ ಮದುವೆ (Marriage) ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಮನೆಯವರು ಅವಕಾಶ ಕೊಡದೇ ಸಾಂಪ್ರದಾಯಿಕವಾಗಿ ನೂಪುರ್ ಮನೆಯಲ್ಲಿ ಮದುವೆ ನಡೆಯಲಿದೆ. ಜನವರಿ ಅಥವಾ ಫೆಬ್ರವರಿಯಲ್ಲಿ ಹೊಸ ಬದುಕಿಗೆ ಕಾಲಿಡಲಿದ್ದಾರೆ ಎಂದು ಸ್ವತಃ ಆಮೀರ್ ಖಾನ್ ಹೇಳಿಕೊಂಡಿದ್ದರು. ಅದರಂತೆ ಜನವರಿ 3ಕ್ಕೆ ಮದುವೆ ಫಿಕ್ಸ್ ಆಗಿದೆ. ಕಳೆದ ವರ್ಷ ನವೆಂಬರ್ ನಲ್ಲಿ ನಿಶ್ಚಿತಾರ್ಥ (Engaged) ಮಾಡಿಕೊಂಡು, ತನ್ನ ಪ್ರಿಯಕರಿಗೆ ಉಂಗುರ ತೊಡಿಸಿ, ಮುತ್ತಿಡುವ ಮೂಲಕ ಎಂಗೇಜ್ಡ್ ಆಗಿರುವುದಾಗಿ ಅವರು ಘೋಷಣೆ ಮಾಡಿತ್ತು ಈ ಜೋಡಿ. ಇದೀಗ ಇರಾ ಹೊಸ ಜೀವನಕ್ಕೆ ಕಾಲಿಡಲು…

Read More

ಬೆಂಗಳೂರು ಗ್ರಾಮಾಂತರ:  ಮೇಲಿನಾಜೂಗಾನಹಳ್ಳಿ(ಘಾಟಿ) ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಇಂದು ಸಾರ್ವಜನಿಕ ಸಂಪರ್ಕ ಸಭೆಯನ್ನು ನಡೆಸಲಾಯಿತು. ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಅವುಗಳಿಗೆ ಪರಿಹಾರ ಕೊಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಉಚಿತವಾಗಿ ಊಟದ ವ್ಯವಸ್ಥೆಯನ್ನು ಕಲ್ಪಿಸಲು ಬೇಡಿಕೆ ನೀಡಿದ್ದು ಅದಕ್ಕೆ ಸ್ಪಂದಿಸುತ್ತೇನೆ ಎಂದರು. ತೂಬಗೆರೆ ಪಂಚಾಯತಿಯಲ್ಲಿ ರಸ್ತೆಗಳ ನಿರ್ಮಾಣ ,ನೀರಿನ ಸಮಸ್ಯೆಗಳು, ಆಸ್ಪತ್ರೆಯ ಸಮಸ್ಯಗಳ ಬಗ್ಗೆ ಮಾನ್ಯ ಸಚಿವರಿಗೆ ನಾಗರಿಕರು ಮನವಿಗಳನ್ನು ನೀಡಿದ್ದು ಅವುಗಳನ್ನು ಅತಿ ಬೇಗನೆ ಈಡೇರಿಸಲು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್, ಮುಖ್ಯಕಾರ್ಯನಿರ್ವಹಣಾಧಿಕಾರಿ.ಡಾ.ಅನುರಾಧ, ಅಪರ ಮುಖ್ಯ ಜಿಲ್ಲಾಧಿಕಾರಿ ಅಂಬರೀಶ್, ತಹಶಿಲ್ದಾರ್ ವಿಭಾ ರಾಥೋಡ್, ಘಾಟಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೋಪಾಲ್ ನಾಯಕ್, ರಂಗಪ್ಪ ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಅಧಿಕಾರಿಗಳು…

Read More