ದೊಡ್ಡಬಳ್ಳಾಪುರ: ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದಲ್ಲಿ ಮೂರು ವರ್ಷಗಳಿಂದ ನಿಂತಿದ್ದ ದನಗಳ ಜಾತ್ರೆ ಆರಂಭವಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಜೋಡಿ ಎತ್ತುಗಳು ಸೇರಿದ್ದು, ಜಾತ್ರೆಯಲ್ಲಿ ಇರುವ ಜಾನುವಾರುಗಳಿಗೆ ಬಿಜೆಪಿ ಪಕ್ಷದಿಂದ ಉಚಿತವಾಗಿ ಮೇವು ಹಾಗು ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೆ ಸಂದರ್ಭದಲ್ಲಿ ವಕೀಲರು, ಬಿಜೆಪಿ ಮುಖಂಡ ಪ್ರತಾಪ್ ಮಾತನಾಡಿ ಕೊರೊನಾ ವೈರಸ್ ಹಾಗು ಗಂಟು ರೋಗದಿಂದ ಮೂರು ವರ್ಷಗಳ ಕಾಲ ದನಗಳ ಜಾತ್ರೆ ನಡೆದಿರಲಿಲ್ಲ.ಈ ಬಾರಿ ಅದ್ದೂರಿಯಾಗಿ ಜಾತ್ರೆ ನಡೆಯುತ್ತಿದ್ದು ಬಹಳಷ್ಟು ಸಂಖ್ಯೆಯಲ್ಲಿ ಎತ್ತುಗಳನ್ನು ಮಾರಾಟ ಮಾಡಲು ಬಂದಿದ್ದಾರೆ. ಬಿಜೆಪಿ ಯುವ ಮೋರ್ಚಾದಿಂದ ಮೂರು ದಿವಸಗಳ ಕಾಲ ಜಾನುವಾರುಗಳಿಗೆ ಉಚಿತವಾಗಿ ಮೇವು ಮತ್ತು ರೈತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ,ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಇದೆ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಘಾಟಿ ಪಂಚಾಯ್ತಿ ಸದಸ್ಯ ವಾಸುದೇವ್, ,ತೂಬಗೆರೆ ಗ್ರಾಮ ಪಂ. ಸದಸ್ಯ ಕೃಷ್ಣಪ್ಪ,ಬಿಜೆಪಿ ಮುಖಂಡ ಗಂಗರಾಜು,ಲಗುಮಯ್ಯ,ಸುರೇಶ್,ಶರತ್,ಹರ್ಷ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
Author: AIN Author
ಮಂಡ್ಯ: ಮಂಡ್ಯ ನಗರದ ಜನತೆಗೆ ರಾಜ್ಯ ಸರ್ಕಾರ ಹೊಸ ವರ್ಷದ ಗಿಫ್ಟ್ ಕೊಟ್ಟಿದ್ದು, ನೀರಿನ ದರವನ್ನು 225ರೂ. ಗೆ ನಿಗದಿಗೊಳಿಸಿ ಆದೇಶಿಸಿದೆ. ಹೌದು ಮಂಡ್ಯದಲ್ಲಿಂದು ಶಾಸಕ ಗಣಿಗ ರವಿಕುಮಾರ್ ಸುದ್ದಿಗೋಷ್ಟಿ ನಡೆಸಿ ಸರ್ಕಾರಕ್ಕೆ ಧನ್ಯವಾದ ತಿಳಿಸಿದರು. ಸರ್ಕಾರ ಈ ಹಿಂದೆ 282 ರೂ ಇದ್ದ ನೀರಿನ ದರವನ್ನು ಪರಿಷ್ಕರಿಸಿ 282 ರಿಂದ 225ರೂ. ಗೆ ನಿಗದಿ ಪಡಿಸಿದ್ದು, ಮಂಡ್ಯ ನಗರದ 20757 ಸಾವಿರ ಕುಟುಂಬಕ್ಕೆ ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಜನರು ಹಲವು ವರ್ಷಗಳಿಂದ ನೀರಿನ ಪರಿಷ್ಕರಣೆಗೆ ಒತ್ತಾಯಿಸಿದ್ದರು. ಈ ಹಿನ್ನಲೆ ಸಭೆ ನಡೆಸಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಹೊಸ ನೀರಿನ ದರ ನಿಗದಿಪಡಿಸಲಾಗಿತ್ತು. ಡಿಸೆಂಬರ್ 1ರಿಂದಲೇ ಹೊಸ ನೀರಿನ ದರ ಜಾರಿಯಾಗಿದೆ. 44.51 ಕೋಟಿ ನೀರಿನ ಬಾಕಿಯಿದ್ದು, https://ainlivenews.com/prime-minister-modis-youtube-channel-has-crossed-2-crore-subscribers/ 27.66 ಕೋಟಿ ಅಸಲು, 16.91 ಕೋಟಿ ಬಡ್ಡಿ ಇದೆ. ಬಡ್ಡಿ ಮನ್ನಾ ಮಾಡಿಸಲು ಸರ್ಕಾರದ ಜೊತೆ ಚರ್ಚಿಸಲು ಪ್ರಯತ್ನ ಮಾಡ್ತೇನೆ ಎಂದ ಶಾಸಕ…
ವಿಜಯಪುರ: ಯತ್ನಾಳ್ (Basangouda Patil Yatnal) ವಿರುದ್ಧ ದೂರು ನೀಡಲ್ಲ ಎಂದಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ (BS Yediyurappa) ವಿಜಯಪುರದಲ್ಲಿ (Vijayapura) ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದು, ಯಡಿಯೂರಪ್ಪ ಶಕುನಿ ಇದ್ದ ಹಾಗೆ ಎಂದು ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಏನು ಹೇಳುತ್ತಾರೆ ಅದರ ಉಲ್ಟಾ ನಡೆದಿರುತ್ತದೆ. ವಿರೋಧ ಪಕ್ಷದ ನಾಯಕ ಆಗಲಿ ಎಂದಿದ್ದ ವಿಜಯೇಂದ್ರ ಹೈಕಮಾಂಡ್ ಬಳಿ ಪ್ಯಾಕ್ ಮಾಡಿಕೊಂಡು ಬಂದಿದ್ದ. ಅದಕ್ಕೆ ಆಗ ಯತ್ನಾಳ್ ವಿರೋಧ ಪಕ್ಷದ ನಾಯಕರಾಗಲು ತಕರಾರು ಇಲ್ಲ ಎಂದು ಹೇಳಿಕೆ ಕೊಟ್ಟಿದ್ದರು ಎಂದು ಹರಿಹಾಯ್ದರು. https://ainlivenews.com/prime-minister-modis-youtube-channel-has-crossed-2-crore-subscribers/ ಯಡಿಯೂರಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ. ಈಗಾಗಲೇ ದೂರು ಕೊಟ್ಟಿದ್ದಾರೆ. ಕಂಪ್ಲೆಂಟ್ ಕೊಟ್ಟಿದ್ದಾರೆ. ಆದರೆ ಏನೂ ನಡೆಯುತ್ತಿಲ್ಲ. ಯತ್ನಾಳ್‌ಗೆ ನೋಟಿಸ್ ಕೊಡಲಿಲ್ಲ. ಮರ್ಯಾದೆ ಹೋಗಬಾರದು ಎಂದು ಈ ಹೇಳಿಕೆ ಕೊಡುತ್ತಿದ್ದಾರೆ. ಈ ವಿಚಾರದಲ್ಲಿ ಯಡಿಯೂರಪ್ಪ ಶಕುನಿ ಥರ ಆಡುತ್ತಿದ್ದಾರೆ ಎಂದು ದೂರಿದರು.
ಬೆಂಗಳೂರು: ನಮ್ಮ ರಾಜ್ಯದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಪ್ಪತ್ತು ಎಕರೆ ವ್ಯಾಪ್ತಿಯ ‘ಸ್ಪೋರ್ಟ್ಸ್ ಸಿಟಿ’ ನಿರ್ಮಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು, ಮುಂಬರುವ ದಿನಗಳಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ 2023ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, “ರಾಜ್ಯದ ಯುವಕರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಯುವಕರಿಗೆ ಕ್ರೀಡೆಯನ್ನು ಉತ್ತೇಜಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಲ್ಪ ತೊಟ್ಟು ಶ್ರಮದಿಂದ ಕ್ರೀಡಾ ಅಭ್ಯಾಸ ನಡೆಸಿ, ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತಂದು ಕೊಡಬೇಕು. ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ” ಎಂದು ತಿಳಿಸಿದರು. ಸುಸಜ್ಜಿತವಾದ ಬಾಸ್ಕೆಟ್ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 5 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ. ಅಲ್ಲದೇ, ರಾಜ್ಯದಲ್ಲಿ 15ಕ್ಕೂ ಹೆಚ್ಚು ಸಿಂಥೆಟಿಕ್ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗಿದೆ. ತುಮಕೂರಿನಲ್ಲಿ 58 ಕೋಟಿ ರೂ. ಅನುದಾನದಲ್ಲಿ ಸುಸಜ್ಜಿತವಾದ ಕ್ರೀಡಾಂಗಣವನ್ನು…
ಹುಬ್ಬಳ್ಳಿ: ಸಿದ್ದರಾಮಯ್ಯ (Siddaramaiah) ಮುಗ್ಧ ಅಲ್ಲ ಧೂರ್ತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಿಮ್ಮ ವೈಫಲ್ಯ ಮುಚ್ಚಲು ಈ ರೀತಿ ವಿವಾದ ಹುಟ್ಟು ಹಾಕೋದು ನಿಮ್ಮ ಕೆಲಸವಾ? ನಾವೇನಾದರೂ ಹಿಜಬ್ ವಿಷಯ ಎತ್ತಿದ್ವಾ? ಬಹುತೇಕ ಇಸ್ಲಾಂ ದೇಶಗಳಲ್ಲಿ ಹಿಜಬ್ ಇಲ್ಲ. ನಿಮಗ್ಯಾಕೆ ಈ ಕೆಟ್ಟ ವಿಚಾರ. ಸಿದ್ದರಾಮಯ್ಯಗೆ ಇದು ಗೊತ್ತಿಲ್ಲ ಅಂತಾ ಅಲ್ಲ. ಸಿದ್ದರಾಮಯ್ಯ ಮುದ್ಧ ಅಲ್ಲ, ಸಿದ್ದರಾಮಯ್ಯ ಧೂರ್ತರಿದ್ದಾರೆ. ಇದು ನನ್ನ ಗಂಭೀರ ಆರೋಪ ಎಂದು ಗರಂ ಆಗಿದ್ದಾರೆ. ಸಿದ್ದರಾಮಯ್ಯನವರೇ ಏನ್ ಮಾಡೋಕೆ ಹೊರಟಿದ್ದೀರಿ. ನಿಮ್ದು ಮುಠ್ಠಾಳತನವೋ, ಸಮಾಜ ಒಡೆಯಲು ಅತ್ಯಂತ ತಲೆ ಕೆಟ್ಟವರ ಥರ ಹೇಳಿಕೆ ಕೊಡ್ತಿದ್ದೀರೋ. https://ainlivenews.com/prime-minister-modis-youtube-channel-has-crossed-2-crore-subscribers/ ಸಮಾಜ ಒಡೆದು ವೋಟ್ ತೆಗೆದುಕೊಳ್ಳಬೇಕು ಅನ್ನೋದಾ? ಒಂದು ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಮಾತ್ರ ನೀವಿರೋದು. ಇದು ನಿಮ್ಮ ಸ್ಥಿತಿ. ಹೀಗೆ ನೀವು ಹುಚ್ಚ ಹುಚ್ಚರಾಗಿ ಮಾತಾಡಿದ್ರೆ ಜನ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಸದ ಬುಟ್ಟಿಗೆ ಸೇರಿಸ್ತಾರೆ…
ಚಂಡೀಗಢ: ಹರಿಯಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಜರಂಗ್ ಪೂನಿಯಾ ಸೇರಿ ಹಲವು ಕುಸ್ತಿಪಟುಗಳನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಅವರು ಬಜರಂಗ್ ಪೂನಿಯಾ ಜತೆ ಕುಸ್ತಿ ಆಡಿದ್ದಾರೆ. ಈ ಫೋಟೊಗಳನ್ನು ರಾಹುಲ್ ಗಾಂಧಿ ಅವರೇ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ವಿವಾದ, ಡಬ್ಲ್ಯೂಎಫ್‌ಐ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕೇಳಿ ಬಂದ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದಂತೆ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸೇರಿ ಹಲವರು ಪ್ರಶಸ್ತಿ ಹಿಂತಿರುಗಿಸಿದ ಬೆನ್ನಲ್ಲೇ ಹರಿಯಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಜರಂಗ್ ಪೂನಿಯಾ ಸೇರಿ ಹಲವು ಕುಸ್ತಿಪಟುಗಳನ್ನು ಭೇಟಿಯಾಗಿದ್ದಾರೆ.
ಹೃದಯಾಘಾತದಿಂದ ನಿಧನರಾಗಿರುವ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ (Jolly Bastin), ಮೂಲತಃ ಮೆಕ್ಯಾನಿಕ್ (mechanic). ಬಗೆ ಬಗೆಯ ಬೈಕ್ ಗಳನ್ನು ರಿಪೇರಿ ಮಾಡುತ್ತಿದ್ದವರು, ಸ್ಟಂಟ್ ಡೈರೆಕ್ಟರ್ ಆಗಿದ್ದು ರೋಚಕ ಕಥೆ. ರಿಪೇರಿಗೆ ಬಂದಿದ್ದ ಬೈಕ್ ಗಳಲ್ಲಿ ನಾನಾ ರೀತಿಯ ಸಾಹಸ ಪ್ರದರ್ಶನಗಳನ್ನು ಮಾಡುತ್ತಿದ್ದರು ಜಾಲಿ ಬಾಸ್ಟಿನ್. ಒಂದು ಬಾರಿ ರಸ್ತೆಯಲ್ಲಿ ಬೈಕ್ ನಲ್ಲಿ ಸಾಹಸ ಮಾಡುತ್ತಾ ಹೋಗುತ್ತಿದ್ದಾಗ ರವಿಚಂದ್ರನ್ ಕಣ್ಣಿಗೆ ಬಿದ್ದರು. ಅಲ್ಲಿಂದ ಜಾಲಿ ಬಾಸ್ಟಿನ್ ಬದುಕೇ ಬದಲಾಯಿತು. ಮೊದ ಮೊದಲು ರವಿಚಂದ್ರನ್ ಅವರಿಗೆ ಡ್ಯೂಪ್ ಆಗಿ ಜಾಲಿ ಬಾಸ್ಟಿನ್ ಕೆಲಸ ಮಾಡಿದರು. ರವಿಚಂದ್ರನ್ ಅವರ ಸಿನಿಮಾಗಳಲ್ಲಿ ಯಾವುದೇ ಸಾಹಸ ದೃಶ್ಯಗಳು ಇರಲಿ, ಅಲ್ಲಿ ರವಿಚಂದ್ರನ್ ಬದಲಾಗಿ ಸಾಹಸ ಮಾಡುತ್ತಿದ್ದವರು ಇದೇ ಜಾಲಿ ಮಾಸ್ಟರ್. ಡ್ಯೂಪ್ ಆಗಿದ್ದವರನ್ನು ಸ್ಟಂಟ್ ಡೈರೆಕ್ಟರ್ ಮಾಡಿದ್ದು ಇದೇ ರವಿಚಂದ್ರನ್. ಹಾಗಾಗಿ ರವಿಚಂದ್ರನ್ ಅವರ ಬಹುತೇಕ ಚಿತ್ರಗಳಿಗೆ ಜಾಲಿ ಕೆಲಸ ಮಾಡಿದ್ದರು. ರವಿಚಂದ್ರನ್ ಮಾತ್ರವಲ್ಲ, ಅನೇಕ ಕಲಾವಿದರಿಗೆ ಜಾಲಿ ಬಾಸ್ಟಿನ್ ಡ್ಯೂಪ್ ಆಗಿದ್ದಾರೆ. ಕನ್ನಡದಲ್ಲಿ ಇವರು…
ಹುಬ್ಬಳ್ಳಿ: ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಈಗ ಸಂವಿಧಾನದ ಸರ್ಕಾರ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬಿಜೆಪಿಗೆ ಟಾಂಗ್ ಕೊಟ್ಟರು. ನಗರದಲ್ಲಿ ಮಾತನಾಡಿದ ಅವರು, ದೇಶ ನಡಿತಿರೋದು ಭಗವದ್ಗೀತೆ ಮೇಲೆ ಅಲ್ಲ, ಕುರಾನ್ ಮೇಲೆ ಅಲ್ಲ, ಬೈಬಲ್ ಮೇಲೆಯೂ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರ ಏನಾದರೂ ಎನ್ನಲಿ, ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ. ಸರ್ಕಾರಗಳು ನಡೆಯೋದು ಸಂವಿಧಾನದ ಮೇಲೆ ಎಂದು ತಿಳಿಸಿದರು. https://ainlivenews.com/prime-minister-modis-youtube-channel-has-crossed-2-crore-subscribers/ ಬಸವ ತತ್ವ, ಅಂಬೇಡ್ಕರ್ ತತ್ವದ ಮೇಲೆ ಸರ್ಕಾರ ನಡೀತಿದೆ. ಹಿಂದಿನ ಸರ್ಕಾರ ಹಿಂದುತ್ವದ ಮೇಲೆ ನಡೀತಿತ್ತು. ಪೀಠದ ಮೇಲೆ ಕುಳಿತು ಕಾಗೇರಿ ನಾನು ಆರ್‌ಎಸ್‌ಎಸ್‌ನವರು ಎಂದಿದ್ದರು. ಬಿಜೆಪಿಯವರು ಹಣದ ಮೇಲೆ ಹೆಣ ಮಾಡಿದ್ದಾರೆ. ಕೋವಿಡ್ ಕಾಲದಲ್ಲಿ ಬಿಜೆಪಿಯವರು ಹೆಣದ ಮೇಲೂ ಹಣ ಮಾಡಿದ್ದಾರೆ ಎಂದು ಆರೋಪಿಸಿದರು.
ವಂಚನೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ (Jail) ತಮಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಜಾಕ್ವೆಲಿನ್ ಆರೋಪ ಮಾಡಿದ್ದಾರೆ. ಜೈಲಿನಿಂದ ಜಾಕ್ವೆಲಿನ್ ಗೆ ಪ್ರೇಮ ಪತ್ರ ಕಳುಹಿಸುತ್ತಿದ್ದರು. ಇದೀಗ ಬೆದರಿಕೆಯ ಪತ್ರ ಬರೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ತನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ತಿಳಿಸಿರುವುದಾಗಿ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ. ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು…
ಬೆಂಗಳೂರು: ಪ್ರಾಸಿಕ್ಯೂಷನ್ ಅನುಮತಿ ನೀಡುವ ವಿಚಾರದಲ್ಲಿನ ಲೋಪದಿಂದಾಗಿ ಮಾಡಾಳ್ ವಿರೂಪಾಕ್ಷಪ್ಪ ಮತ್ತು ದೇವೇಂದ್ರಪ್ಪ ಸೇರಿದಂತೆ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟಾಚಾರ ಪ್ರಕರಣಗಳು ನ್ಯಾಯಾಲಯಗಳಲ್ಲಿ ವಜಾ ಆಗುತ್ತಿರುವುದು ಬೇಸರದ ಸಂಗತಿ ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಹೇಳಿದರು. ಪ್ರಾಸಿಕ್ಯೂಷನ್ ಅನುಮತಿ ನೀಡುವಲ್ಲಿ ಆಗುತ್ತಿರುವ ಲೋಪದಿಂದಾಗಿ ಭ್ರಷ್ಟಾಚಾರಿಗಳ ವಿರುದ್ಧದ ಪ್ರಕರಣಗಳು ನ್ಯಾಯಾಲಯದಲ್ಲಿ ವಜಾ ಆಗುತ್ತಿದ್ದು, ಲೋಕಾಯುಕ್ತ ಹಾಗೂ ರಾಜ್ಯ ಸರ್ಕಾರ ಭ್ರಷ್ಟರಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗುತ್ತಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷವು ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಮೋಹನ್ ದಾಸರಿ ಅವರು, ನೂರಾರು ಕೋಟಿ ಲೂಟಿ ಮಾಡಿರುವ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣವನ್ನು ಪ್ರಾಸಿಕ್ಯೂಷನ್ ಅನುಮತಿ ಪಡೆದಿಲ್ಲ ಎಂದು ರದ್ದು ಮಾಡಲಾಗುತ್ತದೆ. ದೇವೇಂದ್ರಪ್ಪ ಮೇಲೆ ದಾಳಿಯಾದಾಗ ಕರ್ನಾಟಕದಾದ್ಯಂತ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ದೇವೇಂದ್ರಪ್ಪ ಅವರು 20 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಆದರೂ, ರಾಜಾರೋಷವಾಗಿ…