ಮೈಸೂರು: ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. https://ainlivenews.com/prime-minister-modis-youtube-channel-has-crossed-2-crore-subscribers/ ಮೈಸೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಅವರು ಪ್ರತಾಪ್ ಸಿಂಹ ವಿರುದ್ಧ ದೂರು ನೀಡಿದ್ದರು. ಸದ್ಯ ಈ ದೂರಿನನ್ವಯ ಪೊಲೀಸರು ಸಂಸದರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಸಿಂಹ ಹೇಳಿದ್ದೇನು..?: ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ್ದ ಸಂಸದರು, ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದರು. ಸಿದ್ದರಾಮಯ್ಯ ಅವರೇ ನಿಮಗೆ ನಿಜವಾಗಲೂ ತಾಖತ್, ಧಮ್ ಇದ್ದರೆ ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ. ಆದರೆ ಈ ರೀತಿಯಾಗಿ ದ್ವೇಷದ ರಾಜಕಾರಣ ಮಾಡಬೇಡಿ ಎಂದು ಗರಂ ಆಗಿದ್ದರು. ಸಿದ್ದರಾಮಯ್ಯ ಅವರು ಅಭದ್ರತೆಯಿಂದ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ 28 ಜನ ಸಂಸದರು ಇದ್ದಾರೆ. ಆದರೆ ಪ್ರತಾಪ್ ಸಿಂಹನ ಮಾತ್ರ ಟಾರ್ಗೆಟ್ ಮಾಡುತ್ತಾರೆ ಏಕೆ?. ನಾನು ಸೋಮಾರಿ ಸಿದ್ದನ ರೀತಿ ಸುಮ್ಮನೆ ಕುಳಿತುಕೊಂಡು ಜಾತಿ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ…
Author: AIN Author
ಬೆಂಗಳೂರು: ಕನ್ನಡ ನಾಮಫಲಕ ಅಳವಡಿಕೆ ವಿಚಾರ ಹಿನ್ನೆಲೆ ಸಚಿವ ಶಿವರಾಜ್ ತಂಗಡಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ನಾರಾಯಣಗೌಡರ ಹೋರಾಟವನ್ನ ಬೆಂಬಲಿಸುತ್ತೇನೆ ಆದರೆ ಮತ್ತೊಬ್ಬರಿಗೆ ತೊಂದರೆ ಕೊಡುವುದು ಬೇಡ ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ಮಾಡುತ್ತಿದ್ದೇವೆ ಸರೋಜಿನಿ ಮಹಿಷಿ ವರದಿ ಎರಡೂ ಸದನಗಳಲ್ಲಿ ಪಾಸ್ ಆಗಿದೆ ಈ ವರಿದಯ ರೂಲ್ಸ್ ಫ್ರೇಮ್ ಮಾಡುತ್ತಿದ್ದೇವೆ ಎಂದರು. ಜನವರಿ ಮೊದಲ ವಾರದಲ್ಲಿ ಈ ಬಗ್ಗೆ ಅಂತಿಮ ಸಭೆ ಮಾಡುತ್ತೇವೆ ಬೋರ್ಡ್‌ನ 60% ಕನ್ನಡ ಪದಗಳು ಇರಬೇಕು ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆ, ಕನ್ನಡ ಭೋದನೆ ಅನುಷ್ಠಾನಕ್ಕಾಗಿ ಟಾಸ್ಕ್‌ಫೋರ್ಸ್ ಸಮಿತಿ ರಚನೆ ಕನ್ನಡ ಸಂಸ್ಕೃತಿ , ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಒಳಗೊಂಡ ಟಾಸ್ಕ್‌ಫೋರ್ಸ್ ಸಮಿತಿ ರಚನೆಗೆ ಚಿಂತನೆ
ನವದೆಹಲಿ: ರಾಮ ನನ್ನ ಹೃದಯದಲ್ಲಿದ್ದಾನೆ, ನಾನು ಅದನ್ನು ತೋರಿಸಿಕೊಳ್ಳುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಮಾಜಿ ನಾಯಕ, ಹಾಲಿ ಎಸ್‌ಪಿ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ (Kapil Sibal) ಹೇಳಿದ್ದಾರೆ. ಅಯೋಧ್ಯೆಯಲ್ಲಿ (Ayodhya) ನಡೆಯಲಿರುವ ರಾಮ್ ಲಲ್ಲಾ (Ram Lalla) ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನೀವು ಬಯಸುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಶ್ರೀ ರಾಮ ನನ್ನ ಹೃದಯದಲ್ಲಿದ್ದಾನೆ ಮತ್ತು ಯಾವುದೇ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿಲ್ಲ. ನಾನು ನಿಮಗೆ ಹೇಳುವುದು ನನ್ನ ಹೃದಯದಿಂದ ಬಂದದ್ದು. ಏಕೆಂದರೆ ನಾನು ಈ ಎಲ್ಲಾ ವಿಷಯಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ರಾಮ ನನ್ನ ಹೃದಯದಲ್ಲಿದ್ದರೆ ಮತ್ತು ನನ್ನ ಪ್ರಯಾಣದುದ್ದಕ್ಕೂ ರಾಮ ನನಗೆ ಮಾರ್ಗದರ್ಶನ ನೀಡಿದರೆ, ನಾನು ಸರಿಯಾದ್ದನ್ನೇ ಮಾಡಿದ್ದೇನೆ ಎಂದರ್ಥ ಎಂದು ತಿಳಿಸಿದರು. ಇಡೀ ರಾಮಮಂದಿರ ನಿರ್ಮಾಣ ವಿಷಯ ಒಂದು ಪ್ರದರ್ಶನ. ಏಕೆಂದರೆ ಆಡಳಿತ ಪಕ್ಷದ ನಡವಳಿಕೆ, https://ainlivenews.com/prime-minister-modis-youtube-channel-has-crossed-2-crore-subscribers/ ಸ್ವಭಾವವು ಎಲ್ಲಿಯೂ ರಾಮನನ್ನು ಹೋಲುವುದಿಲ್ಲ. ಈ ಇಡೀ ವಿಷಯ ಪ್ರದರ್ಶನವಾಗಿದೆ. ಬಿಜೆಪಿಯವರು (BJP) ರಾಮನ ಬಗ್ಗೆ ಮಾತನಾಡುತ್ತಾರೆ.…
ದಾವಣಗೆರೆ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನ ದಾವಣಗೆರೆ ಜಿಲ್ಲೆ ಸಂತೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ನಲ್ಲೂರಿನ ಸೈಯದ್ ಖಾದೀರ್, ಇಸ್ಮಾಯಿಲ್ ಜಬಿ, ಪ್ರಜ್ವಲ್ ಬಂಧಿತ ಆರೋಪಿಗಳಾಗಿದ್ದು, ಸಂತೆಬೆನ್ನೂರ-ಚನ್ನಗಿರಿ ರಸ್ತೆಯ ಪುಷ್ಕರಣಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 543 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದ್ದು, ಈ ಘಟನೆ ಸಂಬಂಧ ದಾವಣಗೆರೆ ಜಿಲ್ಲೆ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡುಲಾಗಿದೆ.
ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ನ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ಪರಿಷತ್ ಸದಸ್ಯ ಟಿ.ಎ. ಶರವಣ ಭಾಗಿಯಾಗಿದ್ದರು. ನಗರದ ಜೆಪಿ ಭವನದಲ್ಲಿ ಬೆಂಗಳೂರು ಮಹಾನಗರದ ಜೆಡಿಎಸ್ನ ಪದಾಧಿಕಾರಿಗಳ ಸಭೆ ನಡೆದಿದ್ದು ಪಕ್ಷ ಸಂಘಟನೆ ಸಂಬಂಧ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬಂದವು ಹಾಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಸಲಾಯಿತು ಈ ವೇಳೆ ಶರವಣ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಸಭೆಗೆ ಬೆಂಗಳೂರಿನ ಜೆಡಿಎಸ್ನ ಎಲ್ಲಾ ಪದಾಧಿಕಾರಿಗಳು ಭಾಗಿಯಾಗಿದ್ದರು.
ದಾವಣಗೆರೆ: ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ. ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಟಿ.ಅಸ್ಗರ್, “ಶ್ರೀರಂಗಪಟ್ಟಣದಲ್ಲಿ ಮಾತನಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ‘ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ’ ಎಂದು ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಮಾತನಾಡಿದ್ದಾರೆ. ವಿವಾಹಿತ ಮಹಿಳೆಯರ ಲೈಂಗಿಕ ಜೀವನವನ್ನು ಬಹಿರಂಗವಾಗಿ ಅವಮಾನಿಸಿದ್ದಾರೆ. ಆತನನ್ನು ಬಂಧಿಸಿ, ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ. ತಂಜಿಮ್ ಕಮಿಟಿ ಕಾರ್ಯದರ್ಶಿ ಶಾನವಾಜ್ ಖಾನ್ ಮಾತನಾಡಿ, “ಪ್ರಪಂಚದಲ್ಲಿ ಹೆಣ್ಣಿಗೆ ಪೂಜೆ ಮಾಡುವ ಏಕೈಕ ದೇಶ ಭಾರತ. ಇಂತಹ ದೇಶದಲ್ಲಿ ಹುಟ್ಟಿದ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಆರ್‌ಎಸ್‌ಎಸ್ ಇಂತಹ ಹೊಲಸು ಮಾತುಗಳನ್ನು…
ಕಲಬುರಗಿ: ಸಾರ್ವಜನಿಕ ಜೀವನದಲ್ಲಿರೋರು ಎಚ್ಚರಿಕೆಯಿಂದ ಮಾತಾಡೋದನ್ನ ರೂಢಿ ಮಾಡ್ಕೋಬೇಕು ಅಂತ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಪರಮೇಶ್ವರ ಸಂಸದ ಪ್ರತಾಪಸಿಂಹ ನೀಡಿರುವ ಸೋಮಾರಿ ಸಿದ್ಧ ಹೇಳಿಕೆಗೆ ಈ ರೀತಿ ರಿಯಾಕ್ಟ್ ಮಾಡಿದ್ರು.. ಇದೇವೇಳೆ ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಪ್ರಭಾವಿಗಳಿಗೆ ನೋಟೀಸ್ ನೀಡಿರೋ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್ ಉನ್ನತ ಮಟ್ಟದ ತನಿಖಾ ಸಂಸ್ಥೆ ಹತ್ರ ಏನ್ ಮಾಹಿತಿ ಇದ್ಯೋ ನನಗೆ ಗೊತ್ತಿಲ್ಲ ಅಂದ್ರು. ಮಾತ್ರವಲ್ಲ ಕೋವಿಡ್ ಹಗರಣದ ಬಗ್ಗೆ ಬಿಎಸ್ವೈ ವಿರುದ್ಧ ಯತ್ನಾಳ್ ಆರೋಪ ಮಾಡಿದ್ದು ನಮ್ಮ ಕೆಲಸವನ್ನ ಮತ್ತಷ್ಟು ಹಗುರ ಮಾಡಿದ್ದಾರೆ ಅಂದ್ರು..
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರಿ ಪತ್ತಿನ ಸಂಘ ನಿಯಮಿತದ ಚುನಾವಣೆಯಲ್ಲಿ ಸೋತಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡ ನೌಕರನೋರ್ವ, ಧಾರವಾಡದ ರೇಣುಕಾನಗರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಂದ್ರಕಾಂತ ಸಾವಳಗಿ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆಯಷ್ಟೇ ನಡೆದಿದ್ದ ಚುನಾವಣೆಯಲ್ಲಿ ಚಂದ್ರಕಾಂತ ಸೋತಿದ್ದರು. ಅದೇ ವಿಷಯಕ್ಕೆ ಸಾಕಷ್ಟು ಮನನೊಂದಿದ್ದ ಚಂದ್ರಕಾಂತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಇನ್ನೂ ಕುಟುಂಬಸ್ಥರ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಚಂದ್ರಕಾತ ಮೃತದೇಹವನ್ನು ಕೇಲಗೆ ಇಳಿಸಿರೋ ಪೊಲೀಸರು, ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀನಗರ: ಗಾಜಾ (Gaza) ಮೇಲೆ ಇಸ್ರೇಲ್ (Israel) ಪಡೆಗಳು ದಾಳಿಗಳನ್ನು ಮುಂದುವರೆಸಿದ್ದು, ಅಲ್ಲಿನ ಪರಿಸ್ಥಿತಿ ಅತ್ಯಂತ ದಾರುಣವಾಗಿದೆ. ಇದೇ ಹೊತ್ತಲ್ಲಿ ಕಾಶ್ಮೀರವನ್ನು (Kashmir) ಗಾಜಾಗೆ ಸಮೀಕರಿಸಿ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ (Farooq Abdullah) ಹೇಳಿಕೆ ನೀಡಿದ್ದಾರೆ. ನೆರೆಯ ಪಾಕಿಸ್ತಾನದ (Pakistan) ಜೊತೆ ಭಾರತ (India) ತನ್ನ ಸಂಬಂಧವನ್ನು ಸುಧಾರಿಸಿಕೊಳ್ಳದೇ ಇದ್ದಲ್ಲಿ ಮುಂದೊಂದು ದಿನ ಕಾಶ್ಮೀರಕ್ಕೆ ಗಾಜಾ ಪರಿಸ್ಥಿತಿ ಬರಬಹುದು. ಅಲ್ಲದೇ ಬಾಂಬ್‌ಗಳು ಸದ್ದು ಮಾಡಬಹುದು ಎಂಬ ಎಚ್ಚರಿಕೆಯನ್ನು ಫಾರೂಖ್ ಅಬ್ದುಲ್ಲಾ ನೀಡಿದ್ದಾರೆ. ನೆರೆ ಹೊರೆ ದೇಶಗಳ ಜೊತೆ ಸುಮಧುರ ಬಾಂಧವ್ಯ ಹೊಂದಿದರೆ ಎರಡೂ ದೇಶಗಳು ಅಭಿವೃದ್ಧಿ ಹೊಂದುತ್ತವೆ ಎಂದು ಹೇಳಿದ್ದಾರೆ. https://ainlivenews.com/prime-minister-modis-youtube-channel-has-crossed-2-crore-subscribers/ ಇದೇ ಮಾತನ್ನು ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು. ಈಗ ಪ್ರಧಾನಿ ಮೋದಿ ಕೂಡ ಯುದ್ಧ ಆಯ್ಕೆಯಲ್ಲ ಎಂದಿದ್ದಾರೆ. ಪಾಕ್ ವಿಚಾರಕ್ಕೂ ಇದನ್ನು ಅನ್ವಯಿಸಬಹುದು. ನವಾಜ್ ಷರೀಫ್ ಅವರು ಪಾಕಿಸ್ತಾನದ ಪ್ರಧಾನಿಯಾಗಲಿದ್ದಾರೆ. ಅವರು ಭಾರತದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳುತ್ತಿದ್ದಾರೆ. ಆದರೆ ನಾವು ಏಕೆ ಮಾತನಾಡಲು…
ಚಳಿಗಾಲದ ಪ್ರಾರಂಭದೊಂದಿಗೆ, ಋುತುಮಾನದ ನಿರ್ದಿಷ್ಟ ಆಹಾರ ಪದಾರ್ಥಗಳು ಜನಪ್ರಿಯ ವಾಗುತ್ತವೆ. ಚಳಿಗಾಲದಲ್ಲಿ ಶುಂಠಿ ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದು ಶೀತ, ಜ್ವರ ಇತರ ಚಳಿಗಾಲದ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಹಾಗಾಗಿ ಈ ಸೀಸನ್ ನಲ್ಲಿ ಶುಂಠಿ ತಿನ್ನುವುದು ಒಳ್ಳೆಯದು. ಶುಂಠಿಯು ಅದರ ಥರ್ಮೋಜೆನಿಕ್ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದು ದೇಹದಲ್ಲಿ ಶಾಖವನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ಶೀತ ವಾತಾವರಣದಲ್ಲಿ ನಿಮ್ಮನ್ನು ಬೆಚ್ಚಗಾಗಿಸುತ್ತದೆ. ದೇಹವು ರೋಗಗಳ ವಿರುದ್ಧ ಹೋರಾಡಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಶೀತ ಮತ್ತು ಕೆಮ್ಮಿನಿಂದ ಪರಿಹಾರ ಆಯುರ್ವೇದದಲ್ಲಿ (Ayurveda) ಶುಂಠಿಯನ್ನು ಅತ್ಯಂತ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಚಳಿಗಾಲದಲ್ಲಿ ಶುಂಠಿಯನ್ನು ಸೇವಿಸುವುದರಿಂದ ಶೀತ ಮತ್ತು ಕೆಮ್ಮು ನಿವಾರಣೆಯಾಗುತ್ತದೆ. ಶುಂಠಿಯನ್ನು ಕುದಿಸುವುದು (ಶುಂಠಿ ಚಹಾ) ಪ್ರಯೋಜನಕಾರಿಯಾಗಿದೆ. ಇದು ದೇಹವನ್ನು ಸೋಂಕಿನಿಂದ ರಕ್ಷಿಸುತ್ತದೆ. ಕೆಮ್ಮು ಮತ್ತು ಉಸಿರಾಟದ ಸಮಸ್ಯೆಗಳನ್ನು ಕಡಿಮೆ ಮಾಡಲು ಶುಂಠಿ ಸಹಾಯ ಮಾಡುತ್ತದೆ. ಚಳಿಗಾಲದ ಸಂಬಂಧಿತ ಉಸಿರಾಟದ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. ಕಠಿಣ ಚಳಿಗಾಲದಲ್ಲಿ…