ಚಿಕ್ಕಮಗಳೂರು : ಅನುಕಂಪದ ಆಧಾರದ ಕೆಲಸಕ್ಕೆ ಶಿಫಾರಸ್ಸು ಮಾಡಲು ಮಹಿಳೆ ಬಳಿ ಲಂಚ ಸಮೇತ ಲೋಕಾಯುಕ್ತ ಬಲೆಗೆ BEP ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಇಂದು ನಡೆದಿದೆ. ಹೇಮಂತ್ ರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ ಅಧಿಕಾರಿಯಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹಳ್ಳಿಯೊಂದರ ಮಹಿಳೆಯ ಪತಿ ಮೂಡಿಗೆರೆ ತಾಲೂಕಿನ ಹೊಯ್ಸಳಲು ಗ್ರಾಮದ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. 2023ರ ಮೇ 5 ರಂದು ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹಾಗಾಗಿ, ಶಿಕ್ಷಕರ ಪತ್ನಿ ಅನುಕಂಪದ ಆಧಾರದ ನೌಕರಿಗೆ ಶಿಫಾರಸ್ಸು ಮಾಡುವಂತೆ ಬಿಇಓಗೆ ಮನವಿ ಮಾಡಿದ್ದರು. ಅವರು ದಾಖಲೆ ಕೇಳುವ ನೆಪದಲ್ಲಿ ದಿನದೂಡುತ್ತಿದ್ದರು. ಮಹಿಳೆ ಬಿಇಓ ಕಚೇರಿಯ ಎಸ್.ಡಿ.ಎ. ಬಳಿ ಕೇಳಿದಾಗ 15000 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಮಹಿಳೆ ಬಿಇಓ ಬಳಿ ಮನವಿ ಮಾಡಿದಾಗ ಬಿಇಓ ಹೇಮಂತ್ ರಾಜ್ 15000 ದಿಂದ 10 ಸಾವಿರಕ್ಕೆ ಬಂದಿದ್ದರು. 10 ಸಾವಿರ ಹಣ ಪಡೆದುಕೊಳ್ಳುವಾಗ ಬಿಇಓ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ…
Author: AIN Author
ಸೂಪರ್‌ಸ್ಪೋರ್ಟ್ ಸ್ಟೇಡಿಯಂನಲ್ಲಿ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ 38 ರನ್‌ಗಳಿಸಿ ವೇಗಿ ಕಗಿಸೊ ರಬಾಡಗೆ ವಿಕೆಟ್ ಒಪ್ಪಿಸಿದ್ದಾರೆ. ಆದರೆ ನಾಯಕ ರೋಹಿತ್ ಶರ್ಮಾ ಹಾಗೂ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಮಹತ್ತರ ದಾಖಲೆಗಳನ್ನು ಮುರಿದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜನೆಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ 35 ಇನಿಂಗ್ಸ್‌ಗಳಿಂದ ವಿರಾಟ್ ಕೊಹ್ಲಿ 4 ಶತಕಗಳ ನೆರವಿನಿಂದ 2,101 ರನ್ ಗಳಿಸಿ ರೋಹಿತ್ ಶರ್ಮಾ (2097 ರನ್, 26 ಇನಿಂಗ್ಸ್, 7 ಶತಕ) ಅವರನ್ನು ಹಿಂದಿಕ್ಕಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳು * 2,101 ರನ್ -ವಿರಾಟ್ ಕೊಹ್ಲಿ * 2,097 ರನ್- ರೋಹಿತ್ ಶರ್ಮಾ * 1,769 ರನ್- ಚೇತೇಶ್ವರ್ ಪುಜಾರ * 1,589 ರನ್- ಅಜಿಂಕ್ಯ ರಹಾನೆ ಹರಿಣಿಗಳ ನಾಡಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ…
ಪ್ರಥಮ ಟೆಸ್ಟ್ ಪಂದ್ಯದ ಮೊದಲ ದಿನವೇ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಗಳನ್ನು ತಬ್ಬಿಬ್ಬುಗೊಳಿಸಿದ ದಕ್ಷಿಣ ಆಫ್ರಿಕಾದ ಬಲಗೈ ವೇಗಿ ಕಗಿಸೊ ರಬಾಡ 5 ವಿಕೆಟ್ ಸಾಧನೆ ಮಾಡಿದ್ದಾರೆ. ಆ ಮೂಲಕ ಹರಿಣಿಗಳ ಪರ 500 ಅಂತಾರಾಷ್ಟ್ರೀಯ ವಿಕೆಟ್ ಪಡೆದ 7ನೇ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. 24 ರನ್ ಗಳಾಗುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದ್ದ ಟೀಮ್ ಇಂಡಿಯಾಗೆ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ 4ನೇ ವಿಕೆಟ್ ಗೆ 68 ರನ್ ಗಳ ಜೊತೆಯಾಟ ನೀಡಿದ್ದರು. ಆದರೆ ಭೋಜನ ವಿರಾಮದ ನಂತರ ಶ್ರೇಯಸ್ ಅಯ್ಯರ್ (31 ರನ್) ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಕಗಿಸೊ ರಬಾಡ ಟೀಮ್ ಇಂಡಿಯಾಗೆ ಮತ್ತೊಮ್ಮೆ ಆಘಾತ ನೀಡಿದರು. ಆಧುನಿಕ ಕ್ರಿಕೆಟ್ ನ ದಿಗ್ಗಜ ವಿರಾಟ್ ಕೊಹ್ಲಿ (38 ರನ್) ಕಗಿಸೊ ರಬಾಡ ಬೌಲಿಂಗ್‌ನಲ್ಲಿ ಔಟ್ ಸೈಡ್ ದಿ ಆಫ್ ಸ್ಟಂಪ್ ಎಸೆತವನ್ನು ಆಡಲು ಹೋಗಿ ವಿಕೆಟ್…
ಬೆಂಗಳೂರು: ಕನ್ನಡ ನಾಮಫಲಕ ಅಳವಡಿಸದ ಉದ್ದಿಮೆಗಳ ವಿರುದ್ಧ ಕರವೇ ಸಮರ ಸಾರಿದ್ದಾರೆ.ಬೆಂಗಳೂರಿನ ವಿವಿಧ ಕಡೆ ಕರವೇ ಜಾಥ ಆರಂಭ ಮಾಡಿದ್ದು ಅಲ್ಲಲ್ಲಿ ಇಂಗ್ಲಿಷ್ ನಾಮಫಲಕ ಕಿತ್ತು ಹಾಕ್ತಿರೋ ಕರವೇ ಕಾರ್ಯಕರ್ತರು ಬಿಬಿಎಂಪಿ ವಿವಿಧೆಡೆ ಕರವೇ ಕಾರ್ಯಕರ್ತರಿಂದ ಇಂಗ್ಲಿಷ್ ಪೋಸ್ಟರ್ ವಿರುದ್ಧ ಸಮರ ಸಾರುತ್ತಿದ್ದು ಕನ್ನಡ ನಾಮಫಲಕ ಆಳವಡಿದ ಅಂಗಡಿ ಮಾಲೀಕರು ವಿರುದ್ಧ ಸಮರ ಸಾರತಿರೋ ಕರವೇ
ಯಡ್ರಾಮಿ:- ಹತ್ತಿ ಬೆಳೆ ಇಳುವರಿ ಕಡಿಮೆಯಾಗಿರುವ ಜೊತೆಗೆ ಅದರ ಬೆಲೆಯೂ ಕುಸಿತ ಕಂಡಿರುವ ಘಟನೆ ಯಡ್ರಾಮಿಯಲ್ಲಿ ಜರುಗಿದೆ. ತಿಂಗಳ ಹಿಂದೆ ಹತ್ತಿ ಬೆಳೆಗೆ ಪ್ರತಿ ಕ್ವಿಂಟಲ್‌ಗೆ ₹11 ಸಾವಿರದಿಂದ ₹13 ಸಾವಿರ ಬೆಲೆ ಇತ್ತು. ಹತ್ತಿ ಬಿಡಿಸಿ ಮನೆಗೆ ತರುವ ಹೊತ್ತಿಗೆ ₹7 ಸಾವಿರದ ಆಸುಪಾಸು ಮಾರಾಟವಾಗುತ್ತಿತ್ತು. ಈಗ ಅದರ ಬೆಲೆ ₹5 ಸಾವಿರದಿಂದ ₹6 ಸಾವಿರ ಆಗಿದೆ. ಕೂಲಿ ಕಾರ್ಮಿಕರಿಗೆ ಹೆಚ್ಚಿನ ಹಣ ನೀಡಿ ಹತ್ತಿ ಬಿಡಿಸಿ ಮನೆಗೆ ತಂದಿದ್ದ ರೈತರಿಗೆ ಇದು ನುಂಗಲಾರದ ತುತ್ತಾಗಿದೆ. ಪ್ರತಿ ವರ್ಷ ಹತ್ತಿ ಬೆಳೆ ಬೆಳೆಯುವುದರಲ್ಲಿ ಯಡ್ರಾಮಿ, ಜೇವರ್ಗಿ ತಾಲ್ಲೂಕುಗಳು ಮುಂಚೂಣಿಯಲ್ಲಿರುತ್ತವೆ. ಯಡ್ರಾಮಿ ತಾಲ್ಲೂಕಿನಲ್ಲಿ ಕಳೆದ ಬಾರಿ 28,808 ಹೆಕ್ಟೇರ್ ಪ್ರದೇಶದಲ್ಲಿ ರೈತರು ಹತ್ತಿ ಬೆಳೆದಿದ್ದರು. ಮಳೆ ಕೂಡ ಚೆನ್ನಾಗಿ ಆಗಿದ್ದರಿಂದ ಇಳುವರಿ ಚೆನ್ನಾಗಿ ಬಂದಿತ್ತು. ಇದರ ಜೊತೆಗೆ ಬೆಲೆ ಕೂಡ ಉತ್ತಮ ಸಿಕ್ಕ ಕಾರಣಕ್ಕೆ ರೈತರು ಉತ್ತಮ ಲಾಭ ಪಡೆದಿದ್ದರು. ಈ ಸಲವೂ ಕಳೆದ ಹೆಚ್ಚಿನ ಬೆಲೆ ಸಿಗುತ್ತದೆ ಎಂದು ತಾಲ್ಲೂಕಿನ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಭರವಸೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹಿಳೆಯರಿಗೆ ಇನ್ನೂ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಹೊಸ ನಿಯಮವನ್ನು ತಂದಿದೆ. ಮನೆ ಯಜಮಾನಿಗೆ ನೀಡುವ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮೀ ಯೋಜನೆ ಯಾರ್ಯಾರಿಗೆ ಬೇಗ ಸಿಗುತ್ತಿಲ್ಲ ಅಂತವರಿಗೆ ಪರಿಹಾರ ಸೂಚಿಸಲು ಕ್ರಮ ಕೈಗೊಳ್ಳಲು ಹಾಗೆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ವಿಶೇಷ ಶಿಬಿರ ಏರ್ಪಾಟ್ ಮಾಡಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಶಿಬಿರ ಸ್ಥಾಪಿಸಲಾಗಿದ್ದು ಇದೇ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದ್ದು ಗೃಹ ಲಕ್ಷ್ಮೀ ಯೋಜನೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಫಲಾನುಭವಿಗಳು ಗ್ರಾಮ ಪಂಚಾಯಿತಿಗೆ ತೆರಳಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಬಾಗಲಕೋಟೆ:- ಸಾರ್ವಜನಿಕರ ಸಮಸ್ಯೆ ಆಲಿಸಲು ಸಿಎಂ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಕೈಗೊಂಡ ಜನತಾ ದರ್ಶನ ಸಕ್ಸಸ್ ಆಗಿದ್ದು, ಶೇಖಡಾ 99 ರಷ್ಟು ಯಶಸ್ಸು ಕಂಡಿದೆ. ಈ ಬಗ್ಗೆ ಸಚಿವ ಆರ್ ಬಿ ತಿಮ್ಮಾಪುರ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಹೌದು, ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳ ಜನತಾ ದರ್ಶನ ಶೇಖಡಾ ೯೯ ರಷ್ಟು ಯಶಸ್ಸು ಕಂಡಿದೆ. ಈ ಜನತಾದರ್ಶನ ದಿಂದ ಜನರ ಸಮಸ್ಯೆ ಆಲಿಸಿ ಸ್ಥಳದಲ್ಲಿ ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ. ಸೂಚನೆ ನೀಡಲಾಯಿತು ಎಂದು ಸುದ್ದಿಗೋಷ್ಠಿ ನಡೆಸಿ ಸಚಿವ ಆರ್, ಬಿ,ತಿಮ್ಮಾಪೂರ ಮಾತನಾಡಿದರು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ನೀಡಲು ತುರ್ತು ಕ್ರಮ ಕೈಗೊಳ್ಳತ್ತಿರುವುದನ್ನು ನೋಡಿ ಶ್ಲಾಘಿಸಿದರು. ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೀಳಗಿ ಶಾಸಕ ಜೆ,ಟಿ,ಪಾಟೀಲ, ಶಿಕ್ಷಕರು ಶಾಲಾ ಸಮಯದಲ್ಲಿ ಖಾಸಗಿ ಫ್ಯೂಶನ್ ನಡೆಸುವಂತಿಲ್ಲ ,ಬೇಜವಬ್ದಾರಿ ಹೇಳಿಕೆ ನೀಡುವಂತಿಲ್ಲ, ಅರ್ಹ ಫಲಾನುಭವಿಗಳಿಗೆ ರೇಷನ ಕಾರ್ಡ ನೀಡಿ,…
ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ವಿಚಾರಣಾ ಆಯೋಗವು ಮಾಜಿ ಮುಖ್ಯಮಂತ್ರಿ ಸೇರಿದಂತೆ ಹಲವು ರಾಜಕಾರಣಿಗಳಿಗೆ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಡಿಸಿಎಂ ಡಾ. ಸಿ.ಎನ್.ಅಶ್ವತ್ ನಾರಾಯಣ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಶಾಸಕ ಬಸವರಾಜ ದಡೇಸುಗೂರ್ ಅವರಿಗೆ ನೊಟೀಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಹೆಚ್.ಡಿ.ಕುಮಾರಸ್ವಾಮಿ ಮತ್ತಿತರರು ಪಿಎಎಸ್ ಐ ನೇಮಕಾತಿ ಹಗರಣದ ಸಂಬಂಧ ತಮ್ಮ ಬಳಿ ಮಹತ್ವದ ದಾಖಲೆಗಳಿವೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ ನಾರಾಯಣ ಅವರ ಸಹೋದರ ಸಂಬಂಧಿ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಹಾಗಾಗಿ ನ್ಯಾಯಮೂರ್ತಿ ವೀರಪ್ಪ ಆಯೋಗವು ಇವರಿಗೆ ನೊಟೀಸ್ ಜಾರಿ ಮಾಡಿದ್ದು, ಖುದ್ದಾಗಿ ಇಲ್ಲವೇ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಬೆಂಗಳೂರು: ಸ್ಕೋಪ್ ಫೌಂಡೇಶನ್ ಇಂಕ್ ಸ್ಥಾಪಕ ಅಧ್ಯಕ್ಷ, ಮಂಡ್ಯ ಮೂಲದ ಡಾ. ಹಲ್ಲೆಗೆರೆ ಮೂರ್ತಿ (ಲಕ್ಷ್ಮೀ ನರಸಿಂಹಮೂರ್ತಿ) ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ ಎಂಎಲ್ಸಿ ದಿನೇಶ್ ಗೂಳಿಗೌಡ, ಅಮೇರಿಕಾದ ಅಕ್ಕಾ ಸಂಸ್ಥೆ ಮಾಜಿ ಅಧ್ಯಕ್ಷ ಶಿವಮೂರ್ತಿ ಕಿಲಾರ ಜತೆಗಿದ್ದರು. ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಜನವರಿ 21 ರಂದು ಹಮ್ಮಿಕೊಂಡಿರುವ “ಭೂಮಿ ತಾಯಿ ಉಳಿಸಿ, ಮರ ಗಿಡ ಬೆಳೆಸಿ” ಸಂದೇಶ ಸಾರುವ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಹಲ್ಲೆಗೆರೆ ಮೂರ್ತಿ ಅವರು ಡಿಸಿಎಂ ಅವರನ್ನು ಆಹ್ವಾನಿಸಿದರು. ಮಂಡ್ಯ ತಾಲೂಕಿನ ಹಲ್ಲೆಗೆರೆಯಲ್ಲಿ ಶ್ರೀ ಭೂದೇವಿ ಟ್ರಸ್ಟ್ ವತಿಯಿಂದ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಕೇಂದ್ರ ಸ್ಥಾಪನೆ ಸಂಬಂಧ ಚರ್ಚಿಸಿದರು. ಹಲ್ಲೆಗೆರೆ ಮೂರ್ತಿ ಅವರ ಪುತ್ರ ಡಾ ವಿವೇಕ್ ಮೂರ್ತಿ ಅವರು ವಿಶ್ವ ಆರೋಗ್ಯ ಸಂಸ್ಥೆ ಸದಸ್ಯರು ಹಾಗೂ ಅಮೇರಿಕ ಅಧ್ಯಕ್ಷ ಜೋಬೈಡನ್ ಅವರ ಆರೋಗ್ಯ ಸಲಹೆಗಾರರು ಆಗಿದ್ದಾರೆ.
ಬೆಂಗಳೂರು: ಕಸ ಗುತ್ತಿಗೆದಾರರಿಂದ ಪೌರ ಕಾರ್ಮಿಕರಿಗೆ ವಂಚನೆ ಆರೋಪ ವಂಚಕ ಗುತ್ತಿಗೆದಾರರ ಮೇಲೆ ಎಫ್ ಐ ಅರ್ ದಾಖಲು 134 ಪೌರ ಕಾರ್ಮಿಕರ pf..ESI ಹಣ ಲೂಟಿ ಮಾಡಿದ ಗುತ್ತಿಗೆದಾರರ ಪದ್ಮನಾಭನಗರದ ವಾರ್ಡ 165 ಗಣೇಶ್ ಮಂದಿರ ವಾರ್ಡ ನಲ್ಲಿ ವಂಚನೆ ಕಳೆದ ನಾಲ್ಕು ವರ್ಷಗಳಿಂದ ಪೌರ ಕಾರ್ಮಿಕರನ್ನೂ ಬಳಸಿ ಕೊಂಡು ESI..PF .ಕಟ್ಟದೆ ವಂಚನೆ ಕೋಟ್ಯಂತರ ಹಣ ಪೌರಕಾರ್ಮಿಕರ ಹೆಸರಲ್ಲಿ ಲೂಟಿ ಮಾಡಿದ್ದು ಪಾಲಿಕೆಯಿಂದ PF..ESI .ಬಿಡುಗಡೆ ಅಗಿದ್ರು ಪೌರ ಕಾರ್ಮಿಕರಿಗೆ ನೀಡುತ್ತಿರಲಿಲ್ಲ ಸ್ಥಳೀಯ ಶಾಸಕ ಹಾಗೂ ಬಿಜೆಪಿ ವಿಪಕ್ಷ ನಾಯಕ ಅರ್ .ಅಶೋಕ ಕ್ಷೇತ್ರದಲ್ಲೆ ವಂಚನೆ ವಿಕೆ. ಎಂಟರ್ ಪ್ರೈಸಸ್ ಹೆಸರಲ್ಲಿ ಪೌರ ಕಾರ್ಮಿಕರಿಗೆ ವಂಚನೆ ಮಾಡಿದ್ದು ಗುತ್ತಿಗೆದಾರರದ ವಿಜಯ್ ಕುಮಾರ್.. ಮುನಿರಾಜು ರವರಿಂದ ವಂಚನೆ ಮಾಡುತ್ತಿರುವ ಆರೋಪ ಕೇಳಿಬಂದಿದ್ದು ದಾಖಲೆ ಸಮೇತ ಚನ್ನಮ್ಮನ ಕೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ ಕೂಡಲೇ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದು ಇಲ್ಲದಿದ್ರೆ ಮುಂದಿನ ದಿನಗಳಲ್ಲಿ ಅಶೋಕ…