ಶಿರಸಿ:- ಲೋಕಸಭಾ ಚುನಾವಣೆಗೆ ಮತ್ತೆ ನಾನೇ ಸ್ಪರ್ಧಿಸಿದರೆ ಆ ಭಗವಂತ ಒಪ್ಪಲ್ಲ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಕಾರ್ಯಕರ್ತರು ಮಂಗಳವಾರ ಅವರ ಮನೆಗೆ ತೆರಳಿ ಚುನಾವಣೆಗೆ ಸ್ಪರ್ಧಿಸಲು ಒಪ್ಪಿಗೆ ಸೂಚಿಸದಿದ್ದರೆ ನಾವು ಸ್ಥಳದಲ್ಲೇ ಉಪವಾಸ ಕೂರುತ್ತೇವೆ ಎಂದು ಪಟ್ಟುಹಿಡಿದರು. ಆದರೆ ಅನಂತ ಕುಮಾರ್ ಮಾತ್ರ ಇನ್ನೂ ಸ್ಪರ್ಧಿಸಿದರೆ ಭಗವಂತ ಒಪ್ಪುವುದಿಲ್ಲ. ನಿಮ್ಮ ಪ್ರೀತಿ, ವಿಶ್ವಾಸ ತಿರಸ್ಕರಿಸುವಂಥ ಮೂರ್ಖತನವನ್ನು ಭಗವಂತ ನನಗೆ ನೀಡದಿರಲಿ ಎಂದು ಮಾರ್ಮಿಕವಾಗಿ ನುಡಿದರು. ಆರು ಬಾರಿ ನನ್ನನ್ನು ಗೆಲ್ಲಿಸಿದ್ದೀರಿ, ನನಗೆ ಇನ್ನೇನು ಬೇಕು? ರಾಜಕೀಯದಿಂದ ದೂರ ಆಗಬೇಕು ಎಂದು ಕಳೆದ ಮೂರು ಅವಧಿಯಿಂದ ಹೇಳಿಕೊಂಡು ಬಂದಿದ್ದೇನೆ. ಜನ ನನ್ನನ್ನು ತಿರಸ್ಕರಿಸಿ ಹೊಸಬರ ಹೆಸರು ಹೇಳಲಿ ಎಂದು ಮೂರು ವರ್ಷಗಳಿಂದ ಸಾರ್ವಜನಿಕರ ಭೇಟಿ ಸಹ ಮಾಡಿರಲಿಲ್ಲ. ನಾನೇ ಮತ್ತೆ ಮತ್ತೆ ಸ್ಪರ್ಧೆ ಮಾಡುವುದನ್ನು ಭಗವಂತನೂ ಒಪ್ಪುವುದಿಲ್ಲ. ಜಿಲ್ಲೆಯಲ್ಲಿ ಸಾಮರ್ಥ್ಯ ಉಳ್ಳವರು, ಆಕಾಂಕ್ಷಿತರು ಜಾಸ್ತಿ ಇದ್ದಾರೆ. ಅವರಿಗೂ ಅವಕಾಶ ಸಿಗಬೇಕು ಎಂದರು.
Author: AIN Author
ಸೆಂಚುರಿಯನ್ನಲ್ಲಿ ಟೆಸ್ಟ್ ಕ್ರಿಕೆಟ್ಗೆ ಕನ್ನಡಿಗ ಪ್ರಸಿದ್ಧ ಕೃಷ್ಣ ಪಾದಾರ್ಪಣೆ ಮಾಡಿದ್ದು, ಬೆನ್ನುನೋವಿನಿಂದ ಜಡೇಜಾ ಗೈರಾಗಿದ್ದಾರೆ. ಆಲ್ರೌಂಡರ್ ರವೀಂದ್ರ ಜಡೇಜಾ ಬೆನ್ನುನೋವಿನ ಸಮಸ್ಯೆಯಿಂದಾಗಿ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾದರು. ಅವರ ಗೈರಿನಲ್ಲಿ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಆಡುವ 11ರ ಬಳಗದಲ್ಲಿ ಸ್ಥಾನ ಸಂಪಾದಿಸಿದರು. ದಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಪಂದ್ಯದ ಮೊದಲ ದಿನದಾಟದ ವೇಳೆ ಗಾಯದಿಂದಾಗಿ ಮೈದಾನ ತೊರೆದರು. ಮಾಕೋರ್ ಜಾನ್ಸೆನ್ ಎಸೆದ 20ನೇ ಓವರ್ನಲ್ಲಿ ವಿರಾಟ್ ಕೊಹ್ಲಿ ಹೊಡೆದ ಚೆಂಡನ್ನು ಡೈವ್ ಮಾಡಿ ತಡೆಯುವ ಯತ್ನದ ವೇಳೆ ಬವುಮಾನ ಎಡಗಾಲಿನ ಸ್ನಾಯುಸೆಳೆತಕ್ಕೆ ಒಳಗಾದರು. ಇದರಿಂದಾಗಿ ಬವುಮಾ ಪಂದ್ಯದಲ್ಲಿ ಮರಳಿ ಕಣಕ್ಕಿಳಿಯುವುದು ಅನುಮಾನವೆನಿಸಿದೆ. ಬವುಮಾ ಗೈರಿನಲ್ಲಿ ಅನುಭವಿ ಬ್ಯಾಟರ್ ಡೀಲ್ ಎಲ್ಗರ್ ಹಂಗಾಮಿ ನಾಯಕರಾಗಿ ತಂಡವನ್ನು ಮುನ್ನಡೆಸಿದರು. ಬವುಮಾ ಬದಲಿಗೆ ವಿಯಾನ್ ಮುಲ್ಡರ್ ಫೀಲ್ಡಿಂಗ್ ನಿರ್ವಹಿಸಿದರು.
ಮೈಸೂರು:- ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿದ ಹಿನ್ನೆಲೆ, ಸಂಸದ ಪ್ರತಾತ್ ಸಿಂಹ ವಿರುದ್ಧ ಎಫ್‌ಐಅರ್ ದಾಖಲಾಗಿದೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಮಾಧ್ಯಮಗಳಿಗೆ ಹೇಳಿಕೆ ಕೊಡುವಾಗ ಸೋಮಾರಿ ಸಿದ್ದ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ನಿನ್ನೆ(ಮಂಗಳವಾರ)ಸಂಸದ ಪ್ರತಾಪ್ ಸಿಂಹ ಕಚೇರಿ ಮುಂದೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದರು. ಸಂಸದರ ಕಚೇರಿ ಮುಂದೆ ಗ್ರಾಮಾಂತರ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ನಡೆಸಿ ಸಂಸದರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪಟ್ಟು ಹಿಡಿದು, ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಎಫ್‌ಐಆರ್ ದಾಖಲಿಸುವ ಭರವಸೆ ನೀಡಿದ ಬಳಿಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯನ್ನ ವಾಪಸ್ ಪಡೆದಿದ್ದರು.
ಕಿರುತೆರೆ ಖ್ಯಾತಿಯ ಯುವಜೋಡಿ ಜಗ್ಗಪ್ಪ (Jaggappa), ಸುಶ್ಮಿತಾ (Sushmita) ಅಭಿನಯದ, ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದ ಆನ್‌ಲೈನ್ ಮದುವೆ, ಆಫ್‌ಲೈನ್ ಶೋಭನ ಚಿತ್ರದ ಟ್ರೈಲರ್ ಹಾಗೂ 2 ಹಾಡುಗಳ ಪ್ರದರ್ಶನ ಇತ್ತೀಚೆಗೆ ನಡೆಯಿತು, ಆನ್ ಲೈನ್ ಆಪ್ ಮೂಲಕ ಜೊತೆಯಾದ ಯುವಜೋಡಿಯ ಸುತ್ತ ನಡೆಯುವ ಹಾಸ್ಯಪ್ರದಾನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಅಪ್ಸರ ಮೂವೀಸ್ ಬ್ಯಾನರ್ ಅಡಿಯಲ್ಲಿ ವೇಂಪಲ್ಲಿ ಬಾವಾಜಿ (Vempalli Bawaji) ಅವರೇ ನಿರ್ಮಾಣ ಮಾಡಿದ್ದಾರೆ. ಜಗಪ್ಪ, ಸುಶ್ಮಿತ, ಸೀರುಂಡೆ ರಘು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ವೇಂಪಲ್ಲಿ ಬಾವಾಜಿ ಪೂರ್ಣ ಪ್ರಮಾಣದ ಎಂಟರ್‌ಟೈನರ್ ಕಥಾಹಂದರ ಈ ಚಿತ್ರದಲ್ಲಿದ್ದು, ಈ ಕಥೆಗೆ ಯಾರು ಸೂಟ್ ಆಗ್ತಾರೆ ಅಂತ ಹುಡುಕಿದಾಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಫೇಮಸ್ ಆಗಿದ್ದ ಜಗಪ್ಪ , ಸುಶ್ಮಿತಾ ಸಿಕ್ಕರು. ಇಡೀ ಚಿತ್ರದಲ್ಲಿ ನಗದೇ ಇರೋದಕ್ಕೆ ಗ್ಯಾಪ್ ಕೊಟ್ಟಿಲ್ಲ, ನಗದೇ ಇರುವವರಿಗೆ ಲಕ್ಷ ರೂಪಾಯಿ ಬಹುಮಾನ ಕೊಡುತ್ತೇವೆ. ಈ ಚಿತ್ರಕ್ಕೆ ಬೆಂಗಳೂರು ನಗರ, ಬೆಂಗಳೂರು…
ಬೆಂಗಳೂರು:- ಬಿಜೆಪಿಯದ್ದು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂಬುವುದಕ್ಕೆ ಯತ್ನಾಳ್ ಸಾಕ್ಷಿ ಒದಗಿಸಿದ್ದಾರೆ ಎಂದು cm ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರ ಕೊರೋನಾ ಅವಧಿಯಲ್ಲಿ 40 ಸಾವಿರ ಕೋಟಿ ರು. ಭ್ರಷ್ಟಾಚಾರ ಮಾಡಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪವನ್ನು ಅಸ್ತ್ರ ಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು X ಮಾಡಿದ್ದಾರೆ. ಈ ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ತಮ್ಮ ಬಳಿ ದಾಖಲೆಗಳು ಇದ್ದರೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತನಿಖಾ ಆಯೋಗಕ್ಕೆ ಒದಗಿಸಬೇಕು. ಹಿಟ್ ಅಂಡ್ ರನ್ ಮಾಡಬಾರದು ಎಂದು ಯತ್ನಾಳ್‌ಗೆ ಕರೆ ನೀಡಿದ್ದಾರೆ. ಕೊರೋನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಿನಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಸುಮಾರು 4 ಸಾವಿರ ಕೋಟಿ ರು. ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆ ಸಹಿತ ನಾವು ಆರೋಪ ಮಾಡಿದ್ದೆವು. ಈಗ ಬಸನಗೌಡ ಪಾಟೀಲ್ ಯತ್ನಾಳ್ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ 10…
ಅಭಿಷೇಕ್ ಬಚ್ಚನ್- ಐಶ್ವರ್ಯ (Aishwarya Rai) ಇಬ್ಬರೂ ಡಿವೋರ್ಸ್ ಹೊಸ್ತಿಲಲ್ಲಿ ನಿಂತಿದ್ದಾರೆ. ಆದರೂ ಅದ್ಯಾಕೆ ಡಿವೋರ್ಸ್ ಕೊಡುತ್ತಿಲ್ಲ? ಅದಕ್ಕಿರುವ ಕಾರಣಗಳೇನು? ಕೋಟಿ ಕೋಟಿ ಹಣದ ವಿಚಾರವೇ ಡಿವೋರ್ಸ್‌ಗೆ ಅಡ್ಡಗಾಲು ಹಾಕಿದೆಯಾ? ಐಶ್ವರ್ಯಗೆ ಅದೆಷ್ಟು ಕೋಟಿ ಅಭಿಷೇಕ್ ಬಚ್ಚನ್ (Abhishek Bachchan) ಕೊಡಬೇಕಾಗುತ್ತದೆ? ಡಿವೋರ್ಸ್ ಅಸಲಿ ವಿಚಾರ ಇಲ್ಲಿದೆ ಹೆಚ್ಚು ಕಮ್ಮಿ ಇಬ್ಬರೂ ಬೇರೇ ಆಗಿ ಒಂದು ತಿಂಗಳಾಗಿದೆ. ಅಭಿಷೇಕ್ ಬಚ್ಚನ್- ಐಶ್ವರ್ಯ ರೈ ಇನ್ನೇನು ಡಿವೋರ್ಸ್ ಕೊಡುತ್ತಾರೆ. ಪ್ರತ್ಯೇಕ ಮನೆಯಲ್ಲಿ ವಾಸ ಮಾಡಲು ಸಜ್ಜಾಗುತ್ತಾರೆ. ಅದನ್ನು ಅಧಿಕೃತ ಘೋಷಣೆ ಮಾಡುತ್ತಾರೆ. ಇದೇ ಮಾತು ಎಲ್ಲಾ ಕಡೆ ಹರಿದಾಡುತ್ತಿದೆ. ಅದಕ್ಕೆ ಪೂರಕವಾಗಿ ಐಶ್ವರ್ಯ ಗಂಡನ ಮನೆ ಬಿಟ್ಟು ಅಮ್ಮನ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಹೀಗಿದ್ದರೂ ಅದ್ಯಾಕೆ ಡಿವೋರ್ಸ್ ಕೊಡುತ್ತಿಲ್ಲ ಗೊತ್ತಾ? ಇದಕ್ಕೆಲ್ಲಾ ಕಾರಣ ಹಣ. ಅದೇ ಅಭಿಷೇಕ್‌ಗಿರುವ ತಲೆ ನೋವು. ತಿಂಗಳಿಗೆ ಇಂತಿಷ್ಟು ಮಾಸಾಶನ ಜೊತೆಗೆ ಅಪ್ಪನ ಆಸ್ತಿಯಲ್ಲಿ ಪತ್ನಿಗೆ ಪಾಲು ಕೊಡಬೇಕಿದೆ. ಇದರಿಂದ ಅಭಿಷೇಕ್ ಕೂಡ ಯೋಚನೆ ಮಾಡ್ತಿದ್ದಾರೆ. ಡಿವೋರ್ಸ್ (Divorce)…
ಯುವ ಆಟಗಾರರಿಗೆ ಸ್ಫೂರ್ತಿಯ ಚಿಲುಮೆ ಆಗಿದ್ದಾರೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಮುಕ್ತ ಕಂಠದಿಂದ ಗುಣಗಾನ ಮಾಡಿದ್ದಾರೆ. ಆದರೆ ವಿರಾಟ್ ಶೀಘ್ರವೇ ಒಂದು ಸ್ವರೂಪದ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. 2023ರ ಏಕದಿನ ವಿಶ್ವಕಪ್ ಟೂರ್ನಿಯ ನಂತರ ಡಿಸೆಂಬರ್ 26 ರಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಮೂಲಕ ರೋಹಿತ್ ಶರ್ಮಾ ನಾಯಕತ್ವದಡಿ ವಿರಾಟ್ ಕೊಹ್ಲಿ ಸ್ಪರ್ಧಾಸ್ಪರ್ಧಾತ್ಮಕ ಕ್ರಿಕೆಟ್ ಗೆ ಮರಳಲಿದ್ದು, ಹರಿಣಿಗಳ ನಾಡಿನಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. 2023ರ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಟಾಪ್ ರನ್ ಸ್ಕೋರರ್ ಆಗಲಿ ಎಂದು ಬಯಸುತ್ತೀರಾ ಎಂದು ಫಾಫ್ ಡುಪ್ಲೆಸಿಸ್ ಅವರನ್ನು ಸಂದರ್ಶನ ಒಂದರಲ್ಲಿ ಪ್ರಶ್ನಿಸಲಾಗಿತ್ತು. “ಹೌದು ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಪ್ರದರ್ಶನದಿಂದ ಯಾವ ರೀತಿ ವ್ಯವಹರಿಸುತ್ತಾರೆ ಎಂದು ನೋಡಲು ಕಾತರನಾಗಿದ್ದೇನೆ. ವಿಶ್ವಕಪ್ ಟೂರ್ನಿಯ ಆರಂಭಕ್ಕೂ…
ನೀವು ಸಣ್ಣ ವಿಚಾರಕ್ಕೆ ಒತ್ತಡಕ್ಕೆ ಒಳಗಾಗುವಾಗ ಒಂದು ಕ್ಷಣ ನಿಮ್ಮ ಆಲೋಚನೆಗಳನ್ನು ನಿಲ್ಲಿಸಿ ಆಳವಾದ ಉಸಿರನ್ನು ತೆಗೆದುಕೊಳ್ಳಿ. ನಂತರ ನಿಧಾನವಾಗಿ ಬಿಡಿ. ಇದರಿಂದ ನಿಮ್ಮ ಮನಸ್ಸು ಶಾಂತವಾಗುತ್ತದೆ. ಹಾಗೇ ನಿಮ್ಮ ಮನಸ್ಸು ಒತ್ತಡಕ್ಕೆ ಒಳಗಾದಾಗ ಶಾಂತವಾದ ಸ್ಥಳದಲ್ಲಿ ಕುಳಿತು ನಿಮ್ಮ ಭಾವನೆಗಳನ್ನು ನಿಗ್ರಹಿಸಿ. ಮತ್ತು ಮನಸ್ಸನ್ನು ಶಾಂತಗೊಳಿಸಿ. ನಿಮ್ಮ ಆಲೋಚನೆಗಳ ಮೇಲೆ ಕೇಂದ್ರೀಕರಿಸಿ. ನಿಮ್ಮ ಆಲೋಚನೆಗಳನ್ನು ವಿಮರ್ಶೆ ಮಾಡಿ. ಅದು ಸತ್ಯವೇ ಎಂಬುದನ್ನು ಅರ್ಥಮಾಡಿಕೊಳ್ಳಿ. ಆಗ ಆ ಆಲೋಚನೆಯಿಂದ ದೂರ ಸರಿಯಬಹುದು. ಹಾಗೇ ನೀವು ಸಂಹವನ ಮಾಡುವ ರೀತಿಯನ್ನು ಬದಲಾಯಿಸಿ. ಇದರಿಂದ ನಿಮ್ಮ ಮನಸ್ಸು ಒತ್ತಡಕ್ಕೆ ಒಳಗಾಗುವುದಿಲ್ಲ.
2023ರಲ್ಲಿ ಐಸಿಸಿ ಆಯೋಜನೆಯ ಏಕದಿನ ವಿಶ್ವಕಪ್ ಟೂರ್ನಿ ಜಯಿಸಬೇಕೆಂದು ಪಣತೊಟ್ಟಿದ್ದ ವಿಶ್ವದ ಬಹುತೇಕ ತಂಡಗಳು ಒಡಿಐ ದ್ವಿಪಕ್ಷೀಯ ಸರಣಿಗಳನ್ನೇ ಹೆಚ್ಚಾಗಿ ಆಯೋಜಿಸಿತ್ತು. ಈ ವರ್ಷ ಒಂದೇ ಇನಿಂಗ್ಸ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ ಬ್ಯಾಟ್ಸ್ ಮನ್ ಆಗಿ ಗುರುತಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿರುವ ಟಾಪ್ 10 ಆಟಗಾರರ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಏಡೆನ್ ಮಾರ್ಕ್ರಮ್ (ದಕ್ಷಿಣ ಆಫ್ರಿಕಾ) ಹರಿಣಿಗಳ ನಾಡಿನ ನಾಯಕ ಏಡೆನ್ ಮಾರ್ಕ್ರಮ್ ಈ ಪಟ್ಟಿಯಲ್ಲಿ 6ನೇ ಸ್ಥಾನ ಅಲಂಕರಿಸಿದ್ದಾರೆ. ಏಪ್ರಿಲ್ 2ರಂದು ಜೋಹಾನ್ಸ್‌ಬರ್ಗ್ ಪಿಚ್‌ನಲ್ಲಿ ನೆದರ್ಲೆಂಡ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ 126 ಎಸೆತಗಳಲ್ಲಿ 17 ಬೌಂಡರಿ ಹಾಗೂ 7 ಸಿಕ್ಸರ್ ಸಿಡಿಸಿ 175 ರನ್ ಗಳಿಸಿದ್ದರು. ಮಿಚೆಲ್ ಮಾರ್ಷ್ (ಆಸ್ಟ್ರೇಲಿಯಾ) 2023ರ ಏಕದಿನ ವಿಶ್ವಕಪ್ ವಿಜೇತ , ಆಸ್ಟ್ರೇಲಿಯಾದ ಬ್ಯಾಟಿಂಗ್ ಆಲ್ ರೌಂಡರ್ ಮಿಚೆಲ್ ಮಾರ್ಷ್, ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ 134.09 ಸ್ಟ್ರೆಕ್ ರೇಟ್ ನಲ್ಲಿ 17 ಬೌಂಡರಿ ಹಾಗೂ 9 ಸಿಕ್ಸರ್ ನೆರವಿನಿಂದ…
ಮನೆಯಲ್ಲಿ ಹಲವಾರು ಸಮಸ್ಯೆ ಗಳು ಕಾಡುತ್ತದೆ. ಹಣ, ಆರೋಗ್ಯ, ಜಗಳ, ಉದ್ಯೋಗ ಮುಂತಾದವುಗಳಲ್ಲಿ ಸಮಸ್ಯೆ ಕಂಡುಬರುತ್ತದೆ. ಹಾಗಾಗಿ ಅದನ್ನು ನಿವಾರಿಸಲು ಉಪ್ಪಿನಿಂದ ಈ ಪರಿಹಾರ ಮಾಡಿ. ನೆಲ ಒರೆಸುವ ನೀರಿಗೆ ಕಲ್ಲುಪ್ಪನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ನೆಲವನ್ನು ಸ್ವಚ್ಛಗೊಳಿಸಿ. ಇದರಿಂದ ಮನೆಯಲ್ಲಿ ನೆಮ್ಮದಿಯ ವಾತಾವರಣ ನೆಲೆಸುತ್ತದೆ. ಮನೆಯ ಮೂಲೆ ಮೂಲೆಯಲ್ಲಿ ಗಾಜಿನ ಬೌಲ್ ನಲ್ಲಿ ಕಲ್ಲುಪ್ಪನ್ನು ಹಾಕಿಡಿ. ಈ ಉಪ್ಪು ಸ್ವಲ್ಪ ದಿನದಲ್ಲಿ ಕಪ್ಪಾಗುತ್ತದೆ. ಯಾಕೆಂದರೆ ಇದು ಮನೆಯಲ್ಲಿರುವ ನಕರಾತ್ಮಕ ಶಕ್ತಿಯನ್ನು ಎಳೆದುಕೊಳ್ಳುತ್ತದೆ. ಇದನ್ನು ಬಾತ್ ರೂಂನಲ್ಲಿ ಹಾಕಿ. ಮನೆಯಲ್ಲಿ ವಾಸ್ತು ದೋಷವಿದ್ದರೆ ಮನೆಯ ಬಾತ್ ರೂಂನಲ್ಲಿ ಗಾಜಿನ ಬಟ್ಟಲಿನಲ್ಲಿ ಕಲ್ಲುಪ್ಪನ್ನು ಹಾಕಿಡಿ. ಹಾಗೇ ನಿಮ್ಮ ಸಾಲದ ಬಾಧೆಯನ್ನು ನಿವಾರಿಸಿ ಮನೆಯಲ್ಲಿ ಹಣದ ಬಲವನ್ನು ಹೆಚ್ಚಿಸಲು ಅಡುಗೆ ಮನೆಯಲ್ಲಿರುವ ಉಪ್ಪಿನ ಡಬ್ಬದಲ್ಲಿ ಲವಂಗವನ್ನು ಹಾಕಿಡಿ. ಇದರಿಂದ ಮನೆಯಲ್ಲಿನ ಸಮಸ್ಯೆ ನಿವಾರಿಸಬಹುದು.