ಸೂರ್ಯೋದಯ: 06.40 AM, ಸೂರ್ಯಾಸ್ತ : 06.02 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಹುಣ್ಣಿಮೆ 06:02 AM ತನಕ ನಂತರ ಪಾಡ್ಯ ನಕ್ಷತ್ರ: ಇವತ್ತು ಆರ್ದ್ರಾ 11:29 PM ತನಕ ನಂತರ ಪುನರ್ವಸು ಯೋಗ: ಇವತ್ತು ಶುಕ್ಲ 03:22 AM ತನಕ ನಂತರ ಬ್ರಹ್ಮ ಕರಣ: ಇವತ್ತು ಬವ 06:02 AM ತನಕ ನಂತರ ಬಾಲವ 06:20 PM ತನಕ ನಂತರ ಕೌಲವ ರಾಹು ಕಾಲ: 12:00 ನಿಂದ 01:30 ವರೆಗೂ ಯಮಗಂಡ: 07::30 ನಿಂದ 09:00 ವರೆಗೂ ಗುಳಿಕ ಕಾಲ: 10:30 ನಿಂದ 12:00 ವರೆಗೂ ಅಮೃತಕಾಲ: 01.00 PM to 02.41 PM ಅಭಿಜಿತ್ ಮುಹುರ್ತ: 0: ನಿಂದ 0: ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ…
Author: AIN Author
ಬೆಂಗಳೂರು:- ನಗರದಲ್ಲಿ ಯುವಕರ ಬೈಕ್ ವ್ಹೀಲಿಂಗ್ ಹಾವಳಿ ನಿಂತಿಲ್ಲ. ಎಲ್ಲೆಂದರಲ್ಲಿ ಪುಂಡ ಯುವಕರ ಬೈಕ್ ವ್ಹೀಲಿಂಗ್ ನಿಂದ ಇತರೆ ವಾಹನಗಳಿಗೆ ತೊಂದರೆ- ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತಿವೆ. ನಿನ್ನೆ ನೈಸ್ ರಸ್ತೆಯಲ್ಲಿ ಪುಂಡ ಯುವಕರಿಂದ ಮೋಜು ಮಸ್ತಿ ನಡೆದಿದ್ದು, ಬೈಕ್ ವ್ಹೀಲಿಂಗ್ ನಡುವೆ ಡೇಂಜರ್ ಡ್ರ್ಯಾಗ್ ರೇಸ್ ಮೂಲಕ ಹುಚ್ಚಾಟ ಮೆರೆದಿದ್ದಾರೆ. ಪುಂಡರು, ಬೆಟ್ಟಿಂಗ್ ಕಟ್ಟಿ ಡ್ರ್ಯಾಗ್ ರೇಸ್ ಮಾಡುವ ಮೂಲಕ ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತಿದ್ದಾರೆ. ವೀಕೆಂಡ್ ಮತ್ತು ವೀಕ್ ಡೇಸ್ ಗಳಲ್ಲಿ ಈ ರೀತಿ ಬೆಂಗಳೂರು ಯುವಕರು ಹುಚ್ಚಾಟ ಮೆರೆದಿದ್ದಾರೆ. ನಿನ್ನೆ ನೈಸ್ ರಸ್ತೆಯಲ್ಲಿ ಎರಡು ಯಮಹ ಬೈಕ್ ಗಳ ಮೂಲಕ ಡ್ರ್ಯಾಗ್ ರೇಸ್ ಮಾಡುತ್ತಿದ್ದು, ಡ್ರ್ಯಾಗ್ ರೇಸ್ ಆಡಿದ್ದನ್ನ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಪುಂಡರು, Yamaha Rx Fan base ಎಂಬ ಖಾತೆಯಲ್ಲಿ ಡ್ರ್ಯಾಗ್ ರೇಸ್ ವಿಡಿಯೋ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸಧ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಕಂಡು ಪೊಲೀಸ್ ಇಲಾಖೆಗೆ ಸಾರ್ವಜನಿಕರು…
ದಾಂಡೇಲಿ:- ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಉಪ ವಿಭಾಗದ ವ್ಯಾಪ್ತಿಯ ದಾಂಡೇಲಿ ತಾಲ್ಲೂಕಿನ ಭರ್ಚಿ ಕ್ರಾಸ್ ನಿಂದ ನೆರೆಯ ಖಾನಾಪುರ ತಾಲ್ಲೂಕು ಗಡಿಗೆ ಸಂಪರ್ಕ ಮಾಡುವ ಲೋಕೋಪಯೋಗಿ ಇಲಾಖೆ ರಸ್ತೆ ತುಂಬಾನೇ ಹದಗೆಟ್ಟಿದ್ದು, ದಿನನಿತ್ಯ ಸಾಕಷ್ಟು ಅಪಘಾತಗಳು ಸಹ ಸಂಭವಿಸುತ್ತಿವೆ. ಆದ್ರೆ ಇದಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಟೆಲಿಕಾಂ ಕಂಪನಿಗಳು ಕೇಬಲ್ ಅಳವಡಿಸುವ ಕಾಮಗಾರಿಯಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆಯನ್ನು ಇನ್ನಷ್ಟು ಹದಗೆಡಿಸಿ ಕಾಮಗಾರಿ ನಿರ್ವಹಣೆ ಮಾಡ್ತಾ ಇರೋದು ನೋಡಿದ್ರೆ ನಿಜವಾಗ್ಲೂ ಈ ರಸ್ತೆಯನ್ನೇ ಈ ಕಾಮಗಾರಿಯೇ ನುಂಗಿ ಹಾಕಿ ಬಿಡ್ತೇನೋ ಅನಿಸುತ್ತಾ ಇದೆ. ಇನ್ನೂ ರಸ್ತೆಯ ಅಳತೆಯನ್ನು ನೋಡದೇ ರಸ್ತೆಯ ಅಂಚಿನಲ್ಲೇ ಕೊರೆದು ಕೇಬಲ್ ಅಳವಡಿಸಿ ರಸ್ತೆಯನ್ನು ಕೆಡಿಸಿರೋದು ನೋಡಿದ್ರೆ ಇದಕ್ಕೆ ಹಳಿಯಾಳ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಟ್ಟಿಮನಿ ಯವರು ಸಹ ಇವರ ಆಮಿಷಕ್ಕೆ ಒಳಗಾದರೇನೋ ಎಂಬ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಮಾಧ್ಯಮ ಪ್ರತಿನಿಧಿ ಬಸವರಾಜುಅವರು ಶಿರಸಿಯಲ್ಲಿರುವ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರ ಅಭಿಪ್ರಾಯ ಸಂಗ್ರಹ ಮಾಡಿದಾಗ ಅವರು ಹೇಳೋ…
ಬೆಂಗಳೂರು:- ಮೋದಿಯಂತಹ ಸುಳ್ಳು ಪ್ರಧಾನಿ ನಾ ಕಂಡಿಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಭಾರತದ ಇತಿಹಾಸದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ ಎಂದರು. ನಾವು ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳು ಮುಟ್ಟಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ ಮೋದಿಯವರೇ ನೀವು ಉದ್ಯೋಗ ಸೃಷ್ಟಿಸಿದರೇ ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಅಂದ್ರೆ ಇಷ್ಟೊತ್ತಿಗೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಎಲ್ಲಿ ಸೃಷ್ಟಿಯಾಯ್ತು ಮೋದಿಯವರೇ ? ನೀವು ಮಾತಿಗೆ ತಪ್ಪಿದ್ದೀರಿ ಮೋದಿ ಎಂದು ಟೀಕಿಸಿದರು. ಗ್ಯಾರಂಟಿ ಜಾರಿಯಾಗಲ್ಲ ಎಂದು ಮೋದಿ ಹೇಳಿದ್ದರು. ಪ್ರಧಾನಿ ಮೋದಿಯವರೇ, ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಿಮ್ಮ ಮಾತು ಸುಳ್ಳಾಗಿದೆ ಎಂದು ವ್ಯಂಗ್ಯವಾಡಿದರು. ಹನ್ನೆರೆಡು ವರ್ಷ ಸಿಎಂ, ಹತ್ತು ವರ್ಷ ಪ್ರಧಾನಿಯಾಗಿರುವ ಮೋದಿ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೆ ರಾಜ್ಯ ದಿವಾಳಿ ಆಗುತ್ತದೆಎಂದು ಭಾಷಣ…
ಬೆಂಗಳೂರು:- ಮಗುವಿನ ಪಿತೃತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಮಾನಸಿಕ ಕ್ರೌರ್ಯ ಇದ್ದಂತೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುದಗಲ್ಮತ್ತು ಕೆ.ವಿ.ಅರವಿಂದ್ ಅವರ ನೇತೃತ್ವದ ವಿಭಾಗೀಯ ಪೀಠವು ಈ ಅಭಿಪ್ರಾಯ ಪಟ್ಟಿದೆ. ಹೆಂಡತಿಯ ವ್ಯಭಿಚಾರಕ್ಕೆ ಸಂಬಂಧಿಸಿದಂತೆ ಪತಿಯು ಆಧಾರರಹಿತ ಆರೋಪಗಳನ್ನು ಮಾಡುವುದು, ಹೆಂಡತಿಯ ನಡತೆಯ ಬಗ್ಗೆ ಶಂಕಿಸುವುದು, ಮಗುವಿನ ಪಿತೃತ್ವದ ಬಗ್ಗೆ ಅನುಮಾನಿಸುವುದು, ಹೆಂಡತಿ ಮತ್ತು ಮಗನನ್ನು ಡಿಎನ್ಎ ಪರೀಕ್ಷೆಗೆ ಒಳಗಾಗುವಂತೆ ಒತ್ತಾಯಿಸುವುದು ಪತ್ನಿಗೆ ಮಾನಸಿಕ ಕ್ರೌರ್ಯ ನೀಡುವುದಕ್ಕೆ ಸಮನಾಗಿರುತ್ತದೆ ಎಂದು ಹೇಳಿರುವ ಹೈಕೋರ್ಟ್, ವ್ಯಕ್ತಿಯೊಬ್ಬರಿಗೆ ವಿಚಾರಣಾಧೀನ ನ್ಯಾಯಾಲಯವು 2011ರಲ್ಲಿ ನೀಡಿದ್ದ ವಿಚ್ಛೇದನ ಆದೇಶವನ್ನು ರದ್ದುಗೊಳಿಸಿದೆ. ಪತ್ನಿ ತಿಂಗಳಿಗೆ ಹದಿನೈದು ದಿನ ತನ್ನ ಹೆತ್ತವರೊಂದಿಗೆ ವಾಸಿಸುತ್ತಾಳೆ ಮತ್ತು ಆಗಾಗ್ಗೆ ತನ್ನೊಂದಿಗೆ ಜಗಳವಾಡುತ್ತಿದ್ದಳು ಎಂದು ಆರೋಪಿಸಿದ್ದ ಪತಿ, ಹೆಂಡತಿ ವ್ಯಭಿಚಾರ ಮತ್ತು ‘ಮಾಟಮಂತ್ರ’ ಮಾಡಿದ್ದಾಳೆ ಎಂದು ಶಂಕಿಸಿ ಕೌಟುಂಬಿಕ ನ್ಯಾಯಾಲಯದಲ್ಲಿ 2003ರಲ್ಲಿ, ತಮ್ಮ ಮದುವೆ ರದ್ದುಗೊಳಿಸುವಂತೆ ಕೋರಿ ಮನವಿ ಮಾಡಿದ್ದರು. ಕೌಟಂಬಿಕ ನ್ಯಾಯಲಯವು ವ್ಯಭಿಚಾರದ ಆರೋಪಗಳನ್ನು ತಿರಸ್ಕರಿಸಿದರೂ, ಕ್ರೌರ್ಯದ ಆಧಾರದ ಮೇಲೆ ಪತಿಯ ವಿಚ್ಛೇದನ ಅರ್ಜಿಯನ್ನು…
ಹಲವಾರು ಕಾರಣಗಳಿಂದಾಗಿ ಪಾದಗಳು ಊದಿಕೊಳ್ಳುತ್ತದೆ.ಕೆಲವೊಮ್ಮೆ ಸಮಸ್ಯೆ ತಾನಾಗಿಯೇ ಕಡಿಮೆಯಾಗುತ್ತದೆ. ಆದರೆ ಕೆಲವೊಮ್ಮೆ ಅದು ಕಡಿಮೆಯಾಗುವುದಿಲ್ಲ. ಅನೇಕ ಜನರು ಈ ಸಮಸ್ಯೆಯನ್ನು ನಿರ್ಲಕ್ಷಿಸುತ್ತಾರೆ ಆದರೆ ಪಾದಗಳಲ್ಲಿ ಊತದ ಸಮಸ್ಯೆಯನ್ನು ಎಲ್ಲಾ ಸಂದರ್ಭಗಳಲ್ಲಿ ಅಜಾಗರೂಕತೆಯಿಂದ ತೆಗೆದುಕೊಳ್ಳಬಾರದು. ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳು, ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು, ರಕ್ತನಾಳದ ಸಮಸ್ಯೆಗಳು, ಹೃದಯ ಸಂಬಂಧಿತ ಸಮಸ್ಯೆಗಳು ಸಹ ಪಾದಗಳಲ್ಲಿ ಊತಕ್ಕೆ ಕಾರಣವಾಗಬಹುದು. ಪಾದಗಳಲ್ಲಿ ಊತ ಮತ್ತು ಕೆಂಪಾಗುವಿಕೆ, ನೋವು ಮತ್ತು ಅಸ್ವಸ್ಥತೆಯಂತಹ ಇತರ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸಹ ಸೂಕ್ತವಾಗಿದೆ. ಪಾದಗಳಲ್ಲಿ ಸೋಂಕು ಮತ್ತು ಉರಿಯೂತದಿಂದಾಗಿ ಇದು ಸಂಭವಿಸುತ್ತದೆ. ಅಲ್ಲದೆ, ಹಾರ್ಮೋನುಗಳಲ್ಲಿನ ಬದಲಾವಣೆಗಳು ಮತ್ತು ತೂಕ ಹೆಚ್ಚಳದಿಂದಾಗಿ, ಪಾದಗಳು ಸಹ ಊದಿಕೊಂಡಿವೆ. ಅಂತೆಯೇ, ಪಾದದ ವಲಯದಲ್ಲಿನ ಗಾಯಗಳು ಪಾದಗಳಲ್ಲಿ ಊತಕ್ಕೆ ಕಾರಣವಾಗಬಹುದು. ಗಾಯದಿಂದಾಗಿ ಅಸ್ವಸ್ಥತೆ ಮತ್ತು ದೇಹದ ಎಲ್ಲಾ ತೂಕವು ಪಾದಗಳ ಮೇಲೆ ಬೀಳುವುದು ಮುಂತಾದ ಕಾರಣಗಳಿಂದಾಗಿ ಪಾದಗಳಲ್ಲಿ ಊತ ಉಂಟಾಗುತ್ತದೆ. ಪಾದಗಳಲ್ಲಿ ಊತ, ನೋವು ಮತ್ತು ತೀವ್ರ ಅಸ್ವಸ್ಥತೆ ಇದ್ದರೆ, ನೀವು ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಅನೇಕ…
ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಕನಸಿನ ಕೂಸಿಗೆ ಕಾಂಗ್ರೆಸ್ ಸರ್ಕಾರದಿಂಲೇ ಎಳ್ಳು ನೀರು ಬಿಡುವಂತಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದ ಯೋಜನೆ ಹಳ್ಳ ಹಿಡಿದಿವೆ ಎಂದು ಬೊಬ್ಬೆ ಹೊಡೆದ್ದಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಕಾಂಗ್ರೆಸ್ ಸರ್ಕಾರದಿಂದಲ್ಲೇ ಎಳ್ಳು ನೀರು ಬಿಡಲಾಗುತ್ತಿದೆ. ನಗರದಲ್ಲಿ ಕಳೆದ ಎರಡೂ ಮೂರು ದಿನಗಳಿಂದ ಹಲವು ಕಡೆ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗಿದೆ. ಮೊಬೈಲ್ ಕ್ಯಾಂಟೀನ್ ಸೇರಿ ಮೂವತ್ತಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ ಗಳಿಗೆ ಬೀಗ ಹಾಕಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊದಗಿಸಲು ಹೋಗಿ ಕ್ಯಾಂಟೀನ್ ಕೈ ಬಿಟ್ರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಗ್ಯಾರಂಟಿ ಯೋಜನೆ ಜಾರಿಯಿಂದ ಕ್ಯಾಂಟೀನ್ ಗೆ ಅನುದಾನ ಒದಗಿಸಲು ಆಗ್ಲಿಲ್ವಾ ಎನ್ನುವ ಪ್ರಶ್ನೆ ಉದ್ಭವಿಸಿದ್ದು, ಇನ್ನೂ 90 ಕೋಟಿ ಯಷ್ಟು ಬ್ಯಾಲೆನ್ಸ್ ಉಳಿಸಿಕೊಂಡಿರುವ ಕಾರಣಕ್ಕಾಗಿ ಕ್ಲೋಸ್ ಆದ್ವಾ ಇಂದಿರಾ ಕ್ಯಾಂಟೀನ್ ಎನ್ನುವಂತಾಗಿದೆ. ಸದ್ಯ ಬಿಬಿಎಂಪಿ ಅಧಿಕಾರಿಗಳ ಮಾಹಿತಿ ಪ್ರಕಾರ ಹಣ ಬಿಡುಗಡೆ ಆಗಿಲ್ಲ ಹೀಗಾಗಿ ಕ್ಯಾಂಟೀನ್ ಕ್ಲೋಸ್ ಆಗಿವೆಯಂತೆ. ಸದ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ 180…
ಮಂಡ್ಯ:- ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಜಾಮೀನು ರಹಿತ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಡಿಸೆಂಬರ್ 24 ರಂದು ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಿಕಾರಿಗಳನ್ನು ಉದ್ದೇಶಿಸಿ ಮುಸ್ಲಿಮರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಮಹಿಳೆಯರನ್ನು ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನ ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿರುವ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ. ರೌಡಿಶೀಟರ್ ತೆರೆದು ಕಾನೂನು ಕ್ರಮ ತೆಗೆದುಕೊಳ್ಳುವಂತೆ ನಜ್ಮಾ ನಝೀರ್ ದೂರು ನೀಡಿದ್ದರು ಹಿಂದೆ ತಲಾಖ್ ತಲಾಖ್ ಎಂದು ಹೇಳಿ ಮುಸ್ಲಿಂ ಗಂಡಂದಿರು ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗುತ್ತಿದ್ದ. ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ. ಹಿಜಬ್ ಧರಿಸಲು ಅನುಮತಿ ಕೊಟ್ಟರೆ ನಾವು ಕೇಸರಿ ಶಾಲು, ಟೋಪಿ…
ಹುಬ್ಬಳ್ಳಿ: ಮಾದಿಗ ದಂಡೋರ ಸಂಘಟನೆ ವತಿಯಿಂದ ಡಿ.30ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಂಗಣದಲ್ಲಿ ಮಾದಿಗ ಮುನ್ನಡೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ದುರ್ಯೋಧನ ಐಹೊಳೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕರಾದ ಬಸವರಾಜ ಬೊಮ್ಮಾಯಿ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಮಾದಿಗ ಡಂಡೋರ ರಾಜ್ಯ ಘಟಕದ ಅಧ್ಯಕ್ಷ ಬಿ.ನರಸಪ್ಪ ದಂಡೋರ, ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮಿನಾರಾಯಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. 30 ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಸಲಾಗುತ್ತಿದೆ. ಕಳೆದ ಸರ್ಕಾರ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಹೆಚ್ಚಿಸಿ ಅಧಿಸೂಚನೆ ಹೊರಡಿಸಿತ್ತು. ಅಲ್ಲದೆ,…
ಕೆಆರ್ ಪುರ:- ಕಳೆದ ಏಳು ದಶಕಗಳಲ್ಲಿ ಆಗದಷ್ಟು ಅಭಿವೃದ್ಧಿ ಕೆಲಸಗಳು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಅವಧಿಯ ಹತ್ತು ವರ್ಷಗಳಲ್ಲಿ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು. ಕ್ಷೇತ್ರದ ಕೆ.ಆರ್.ಪುರ ಬಿಬಿಎಂಪಿ ಕಛೇರಿ ಬಳಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಗ್ಯಾರೆಂಟಿ ಹಾಗೂ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿಕೊಡುವ ನಮ್ಮ ಸಂಕಲ್ಪ ವಿಕಸಿತ ಭಾರತ ಯಾತ್ರೆಯ ಡಿಜಿಟಲ್ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು, ಜಗತ್ತಿನಲ್ಲಿ ಭಾರತದ ಶ್ರೇಷ್ಟತೆಯನ್ನು ಎತ್ತಿಹಿಡಿದಿದ್ದು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು, ಕಟ್ಟಕಡೆಯ ವ್ಯಕ್ತಿಯವರೆಗೂ ಅಭಿವೃದ್ದಿ ಕಾರ್ಯಗಳನ್ನು ತಲುಪಿಸಲು ಅವಿರತವಾಗಿ ಪ್ರಯತ್ನಿಸುತ್ತಿದ್ದಾರೆ ಅದರಲ್ಲಿ ಯಶಸ್ವಿಯೂ ಆಗಿದ್ದಾರೆ.ಪ್ರತಿದಿನ ಸತತ ಹದಿನೆಂಟು ಗಂಟೆಗಳ ಕಾಲ ಕೆಲಸ ಮಾಡುವ ಜಗತ್ತಿನ ಏಕೈಕ ವ್ಯಕ್ತಿಯಾಗಿ ಪ್ರಧಾನಿ ನರೇಂದ್ರಮೋದಿಯವರು ನಿಲ್ಲುತ್ತಾರೆ ಎಂದರು. ನಮ್ಮ ಸಂಕಲ್ಪ ವಿಕಸಿತ ಭಾರತದ ಯಾತ್ರೆಯು ಪ್ರತಿ ಪಂಚಾಯಿತಿಯ ಪ್ರತಿ ಹಳ್ಳಿಗಳು, ಪ್ರತಿ ವಾರ್ಡ್ ನ ಎಲ್ಲಾ ಗ್ರಾಮಗಳಲ್ಲಿ ಸಂಚರಿಸುತ್ತದೆ. ಸರ್ಕಾರದ ಪ್ರತಿಯೊಂದು ಯೋಜನೆಗಳ ಬಗ್ಗೆಯೂ…