ಬಳ್ಳಾರಿ : ಫ್ರೀ ಗ್ಯಾರಂಟಿಯು ಎಎಪಿ ಪಕ್ಷದ ಪ್ರಾಣಾಳಿಕೆ ಇಂದು ಕಾಂಗ್ರೆಸ್ ಪಕ್ಷದವರು ಎಎಪಿಯಿಂದ ಕದ್ದು ಜಾರಿಗೆ ತಂದಿದ್ದಾರೆ ಎಂದು ಎಎಪಿ ಪಕ್ಷದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ ಸಿದ್ದರಾಮಯ್ಯ ಅವರು ಕದ್ದಿರುವುದನ್ನು ಒಪ್ಪಿಕೊಳ್ಳಬೇಕು ಬಡಜನರ ಶ್ರೇಯಸ್ಸುನ್ನು ಬಯಸುವ ಪಕ್ಷ ಎಎಪಿ ಇಂದು ಕರ್ನಾಟಕ, ತಮಿಳುನಾಡು, ತೆಲಂಗಾಣದಲ್ಲಿ ಜಾರಿಗೆ ತಂದಿರುವ ಗ್ಯಾರಂಟಿಗಳ ಮೂಲಕ ನಮ್ಮ ಎಎಪಿ, ನಮ್ಮ ಪಕ್ಷ ದೆಹಲಿಯಲ್ಲಿ ಜಾರಿಗೆ ತಂದ ನಂತರ ಮುಂದೆ ಪ್ರತಿ ರಾಜ್ಯದಲ್ಲಿ ಜಾರಿಗೆ ತಂದಿದ್ದಾರೆ ನಮ್ಮ ಪಕ್ಷದ ಅಭ್ಯಾರ್ಥಿಗಳು 75% ನ್ಯಾಯಯುತವಾದ ಆಸ್ತಿಗಳನ್ನು ಘೋಷಿಸಿಕೊಂಡಿದ್ದಾರೆ ಇನ್ನು ಜೆಸಿಬಿ ಪಕ್ಷದಿಂದ ದೇಶವನ್ನು ಕೊಳ್ಳೆ ಹೊಡೆಯುವ ಕೆಲಸವಾಗಿದೆ, ಪಾರದರ್ಶಕವಾಗಿ ಆಡಳಿತ ನಡೆಸುವ ಕಾರ್ಯ ಎಎಪಿ ಮಾಡುತ್ತಿದೆ ಪ್ರಭಕರ್ ಕಲ್ಡಕರ್ ಹೇಳಿಕೆ ಕುರಿತು ಮಾತನಾಡಿದ ಅವರು, ಅವರ ಹೇಳಿಕೆ ಸಮಾಜ ತಲೆಕಗ್ಗಿಸುವ ಮಾತು ಈ ರೀತಿಯ ಹೇಳಿಕೆಯನ್ನು ನೀಡುವ ಅವರು ದೇಶ ದ್ರೋಹಿಗಳು, ಬಿಜೆಪಿ ಅಧಿಕಾರಕ್ಕೆ ಬಂದರೇ…
Author: AIN Author
ಬೆಂಗಳೂರು: ಕೊರೊನಾ ನರ್ತನ ನಡುವೆ ಪಾಲಿಕೆಗೆ ಎದುರಾಯ್ತು ಮತ್ತೊಂದು ಸಮಸ್ಯೆ ರುಧ್ರಭೂಮಿ ನೌಕಕರಿಂದ ದಿಢೀರ್ ಪ್ರತಿಭಟನೆ ನಡೆಸಲಾಗುತ್ತಿದ್ದು ನಗರದ 107 ರುಧ್ರಭೂಮಿ ನೌಕರರಿಂದ ಪ್ರತಿಭಟನೆ ಒಟ್ಟು 457 ಸಿಬ್ಬಂದಿಯಿಂದ ಕಾರ್ಯ ನಡೆಯುತ್ತಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ 457 ಜನರನ್ನ ನೇಮಕ ಮಾಡಿ ಅಂತ ಅದೇಶ ಮಾಡಿತ್ತು ಆದ್ರೆ ಈಗ ಕೇವಲ 92 ಜನರನ್ನ ಮಾತ್ರ ನೇಮಕ ಮಾಡಿಕೊಂಡಿದ್ದಾರೆ. ಈ ಹಿನ್ನೆಲ್ಲೆಯಲ್ಲಿಬಿಬಿಎಂಪಿ ಆಯುಕ್ತರ ಕಛೇರಿ ಮುಂದೆ ಕೂತು ಪ್ರತಿಭಟನೆ ಕೊರೋನಾ ಸೊಂಕಿನ ಸಮಯದಲ್ಲಿ ಪ್ರಾಣಪಣಕ್ಕಿಟ್ಟು ಕೆಲಸ ಮಾಡಿದ್ದೇವೆ ಸಂಬಳ ನೀಡಬೇಕು, ಮತ್ತು ಆದೇಶ ನೀಡಬೇಕು ಸರ್ಕಾರ ನಮ್ಮಬೇಡಿಕೆ ಈಡೇರಿಸದೇ ಹೋದ್ರೇ ನಾವೂ ಯಾರು ಹೆಣ ಸುಡೋಲ್ಲ ನಾಲ್ಕು ವಿದ್ಯುತ್ ಚಿತಗಾರವನ್ನ ಕೋವಿಡ್ ಗೆ ಮೀಸಲಿಟ್ಟದ್ದಾರೆ ಅಲ್ಲೂ ನಾವೂ ಕೆಲಸ ಮಾಡೋಲ್ಲ ಲಂಚ ಪಡೆದು ಕೆಲವರನ್ನ ನೇಮಕ ಮಾಡಿಕೊಂಡಿದ್ದಾರೆ 40 ರಿಂದ 45 ಲಕ್ಷ ಲಂಚ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದಾರೆ. ನೌಕರರ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕಮಿಷನರ್ ತುಷಾರ್ ಗಿರಿನಾಥ್ ಒಂದು ಗಂಟೆ…
ಬೆಂಗಳೂರು : ಹೊಸ ವರ್ಷಕ್ಕೆ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆದಯಂತೆ ಎಚ್ಚರಿಕೆ ವಹಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಜನಸಂದಣಿ ಜಾಗದಲ್ಲಿ ಬಂದೋಬಸ್ತ್ ಪಿಕೇಟಿಂಗ್ ಪಾಯಿಂಟ್ ಗಳ ನೇಮಕ ಸ್ಟಾರ್ ಹೋಟೆಲ್, ಪಬ್ , ಕ್ಲಬ್ ಗಳ ಏರಿಯಾದಲ್ಲೊ ಬಂದೋಬಸ್ತ್ ಪಾಯಿಂಟ್ ಗಳ ನಿಯೋಜನೆ ಬ್ರಿಗೇಡ್, ಎಂಜಿ ರಸ್ತೆಯಲ್ಲಿ 3 ಸಾವಿರ ಪೊಲೀಸರ ನಿಯೋಜನೆ ಮಹಿಳೆಯರ ಸುರಕ್ಷತೆಗಾಗಿ ಸೇಫ್ ಟೀಂ ಐಲ್ಯಾಂಡ್ ಗಳ ನಿರ್ಮಾಣ ಮಕ್ಕಳು ಕಾಣೆಯಾದರೆ ಕಳುವು ಬಗ್ಗೆ ಮಾಹಿತಿ ನೀಡಲು ಪೊಲೀಸ್ ಕಿಯೋಸ್ಕ್ ಗಳ ನಿರ್ಮಾಣ ಸೂಕ್ತ ಕಣ್ಗಾವಲು ಪ್ರದೇಶದಲ್ಲಿ ವಾಚ್ ಟವರ್ ಗಳ ನಿರ್ಮಾಣ, ಬೈನಾಕುಲರ್ ಮೂಲಕ ವೀಕ್ಷಣೆ ಉಳಿದಂತೆ ಇಂದಿರಾನಗರ ಹಾಗೂ ಕೋರಮಂಗಲದಲ್ಲೂ ಹೆಚ್ಚಿನ ಪೊಲೀಸರ ನಿಯೋಜನೆ ಡ್ರಗ್ ಫೆಡ್ಲರ್ ಗಳ ಮೇಲೆ ತೀವ್ರ ನಿಗಾ ಇಟ್ಟಿರೋ ಪೊಲೀಸರು ಯಾವುದೇ ಕಾರಣಕ್ಕೂ ಡ್ರಗ್ಸ್ ಸೇವನೆ ಮಾಡೋಕೆ ಬಿಡಲ್ಲ ಈಗಾಗಲೇ ಫೆಡ್ಲರ್ ಗಳನ್ನು ವಶಕ್ಕೆ ಪಡೆದು…
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಲಿಂಗಾಯತ ಸಮುದಾಯದ ಮೂವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ಚರ್ಚೆಗಳು ನಡೆಯುತ್ತಿದ್ದವು. ಈ ಬಗ್ಗೆ ಬಹಿರಂಗವಾಗಿಯೇ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಹಲವು ಸಚಿವರು ಹೇಳಿಕೆಯನ್ನು ನೀಡಿದ್ದರು. ಮೂವರು ಮುಖ್ಯಮಂತ್ರಿಗಳ ನೇಮಕ ವಿಚಾರ ಕಾಂಗ್ರೆಸ್‌ನಲ್ಲಿ ಒಳ ಬೇಗುದಿ ಹುಟ್ಟು ಹಾಕಿದ್ದನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್, ಈ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡದಂತೆ ತಾಕೀತು ಮಾಡಿತ್ತು.
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯಾ ಹಾಗೂ ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಬಡವರ ಹಾಗೂ ರೈತರ ಸಂಕಷ್ಟ ಸ್ಪಂದಿಸುವ ಕೆಲಸ ಮಾಡದೇ ಐಷಾರಾಮಿ ವಿಮಾನ ನಿಲ್ದಾಣದಲ್ಲಿ ಪ್ರಯಾಣ ಮಾಡುವ ಮೂಲಕ ನಾಡಿನ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ರತ್ನ ಭಾರತ ರೈತ ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷ ಹೇಮನಗೌಡರ ಬಸನಗೌಡರ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಯಾರದ್ದೋ ದುಡ್ಡು ಆಕಾಶದಲ್ಲಿ ಜಾತ್ರೆ’ ‘ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕರ್ನಾಟಕ ಬರಗಾಲದಿಂದ ಬೇಯುತ್ತಿದೆ. ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತಮ್ಮ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಾ, ಸಚಿವ ಜಮೀರ್ ಅಹಮದ್ ಖಾನ್ ಜತೆ ಜನರ ತೆರಿಗೆ ಹಣ ವ್ಯಯಿಸಿ ಐಷಾರಾಮಿ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೋಜಿನ ಭಾಗವಾಗಿರುವುದು ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನೂ ಅಲ್ಲ’ ‘ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು…
ದೊಡ್ಡಬಳ್ಳಾಪುರ: ಜೆಡಿಎಸ್ ಪಕ್ಷ ಸೋತಿರಬಹುದು ಆದರೆ ಸತ್ತಿಲ್ಲ ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು. ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ನೂತ ನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಸ್ಥಳೀಯ ಶಾಸಕರು ನನ್ನ ಸ್ನೇಹಿತರು. ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಸಂಬಂಧ ಸ ಸ್ನೇಹಮಯವಾಗಿರಲಿ, ಶಾಸಕರ ಒಳ್ಳೆಯ ಕೆಲಸಗಳಿಗೆ ನಮ್ಮ ಸಹ ಕಾರವೂ ಇರಲಿದೆ. ಆದರೆ, ವಿರೋಧ ಪಕ್ಷದ ನಾಯಕರು ಜೆಡಿಎಸ್ ನಾಯಕರನ್ನು ಕೊಳ್ಳುವ ಮಾತನಾಡಿರುವುದು ಸರಿಯಲ್ಲ. ಪಕ್ಷದ ಹಿತಾಸಕ್ತಿಗೆ ಧಕ್ಕೆಯಾದರೆ ಖಂಡಿಸುವ ಅಧಿಕಾರ ವನ್ನು ವರಿಷ್ಠರು ನೀಡಿದ್ದಾರೆ ಎಂದು ಪರೋಕ್ಷ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ ರೆಸ್ಸಿಗೆ ದೇಶದಲ್ಲಿ ಎಂತಹ ಪರಿಸ್ಥಿತಿ ಬಂದೊದಗಿದೆ ಎಂ ಬುದು ಎಲ್ಲರಿಗೂ ತಿಳಿದಿದೆ. ತಾಲೂಕಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಿಡು ಗಡೆಯಾಗಿದ್ದ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದೇವ ನಹಳ್ಳಿಗೆ ವರ್ಗಾಯಿಸಿದೆ. ಕ್ಷೇತ್ರದ ಮಾಜಿ…
ಚಿತ್ರದುರ್ಗ : ಊಟ ತರಲು ಹೋಗುತ್ತಿದ್ದಾಗ ಅಮಾಯಕ ಕೂಲಿ ಕಾರ್ಮಿಕನ ಮೇಲೆ ಮೂರು ನಾಯಿಗಳು ದಾಳಿ ನಡೆಸಿ, ಕಾರ್ಮಿಕನನ್ನು ಕಚ್ಚಿ ಗಾಯಗೊಳಿಸಿದ ಘಟನೆ ನಂದಿಹಳ್ಳಿ ಸಮೀಪ ಭಾನುವಾರ ರಾತ್ರಿ ನಡೆದಿದೆ. ಶಿರಾ ತಾಲೂಕಿನ ಯರದಕಟ್ಟೆ ಗ್ರಾಮದ ಮಧು (23) ವರ್ಷ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ತಾಲೂಕಿನ ನಂದಿಹಳ್ಳಿ ಬಳಿ ಇರುವ ಖಾಸಗಿ ಅಸೆಂಟ್ ಪಿಯು ಕಾಲೇಜು ಶಿಕ್ಷಣ ಸಂಸ್ಥೆಯ ಮಾಲೀಕನಿಗೆ ಸೇರಿದ ನಾಯಿಗಳು ವ್ಯಕ್ತಿಯ ಬಲಗೈ, ಬೆನ್ನು, ತೊಡೆ ಸೇರಿದಂತೆ ಇನ್ನಿತರ ಭಾಗಗಳಿಗೆ ಕಚ್ಚಿ ಮನಸೋ ಇಚ್ಛೆ ಬಂದಂತೆ ದಾಳಿ ನಡೆಸಿ, ಗಂಭೀರವಾಗಿ ಗಾಯಗೊಳಿಸಿದ್ದು, ನಾಯಿಯ ದಾಳಿಗೆ ಒಳಗಾಗಿರುವ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಗಾಯಗೊಂಡ ವ್ಯಕ್ತಿಯನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ದಾಖಲಿಸಲಾಗಿದೆ. ಗಾಯಾಳು ಶಿರಾ ತಾಲೂಕಿನಿಂದ ನಂದಿಹಳ್ಳಿ ಬಳಿ ಕೆಲಸಕ್ಕೆ ಬಂದಿದ್ದನು. ಊಟ ತರಲು ನಂದಿಹಳ್ಳಿ ಕಡೆಯಿಂದ ಆದಿವಾಲ ಕಡೆಗೆ ನಡೆದು ಕೊಂಡು ಬರುವಾಗ…
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತಜಯಂತಿ (Datta Jayanthi) ಕೊನೆ ದಿನವಾದ ಇಂದು ಪಾದುಕೆ ದರ್ಶನ ನಡೆಯಲಿದೆ. ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ (Baba Budan giri) ಸ್ವಾಮಿ ದರ್ಗಾದಲ್ಲಿ ದತ್ತಮಾಲಾಧಾರಿಗಳು ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾವಿರಾರು ದತ್ತಮಾಲಾಧಾರಿಗಳು ಆಗಮಿಸಲಿದ್ದಾರೆ. ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ ಹೋಮ-ಹವನ-ಪೂಜೆ ನಡೆಯುತ್ತಿದೆ ದತ್ತಜಯಂತಿ (Dattajayanthi) ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ನಗರದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳು ಬಂದ್ ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳುವ ಮಾರ್ಗದಲ್ಲಿ ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಆಗಿದೆ. ಶೋಭಾಯಾತ್ರೆಯಲ್ಲಿ 20 ರಿಂದ 25 ಸಾವಿರ ದತ್ತ ಭಕ್ತರು ಪಾಲ್ಗೊಂಡಿದ್ರು. ವೀರಭದ್ರ ವೇಷಧಾರಿಗಳ ಜೊತೆ ವೀರಗಾಸೆ ಕತ್ತಿ ಹಿಡಿದು ಮಾಡಿದ ನೃತ್ಯ ಎಲ್ಲರ ಗಮನ ಸೆಳೆಯಿತು. ಮೂರು ಡಿಜೆ ಶಬ್ಧಕ್ಕೆ ಯುವಜನತೆ ಯುವಕ-ಯುವತಿಯರು ಎನ್ನದೆ ಎಲ್ಲರೂ ಒಂದೆಡೆ…
ಮುಂಬೈ: ಶಂಕಿತ ಮಾನವ ಕಳ್ಳಸಾಗಣೆ ಆರೋಪದ ಮೇಲೆ ಫ್ರಾನ್ಸ್ (France) ವಶದಲ್ಲಿದ್ದ 303 ಭಾರತೀಯ ಪ್ರಯಾಣಿಕರಿದ್ದ A-340 ವಿಮಾನವು ಮಂಗಳವಾರ ಮುಂಜಾನೆ ಮುಂಬೈಗೆ ಬಂದಿಳಿಯಿತು. ವಿಮಾನವು ದುಬೈನಿಂದ ನಿಕರಾಗುವಾಗೆ ಹೋಗುತ್ತಿತ್ತು. ಆದರೆ ಕಳೆದ ವಾರ ಫ್ರಾನ್ಸ್‌ನ ವ್ಯಾಟ್ರಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು, ಭಾರತೀಯ ಪ್ರಯಾಣಿಕರಿಗೆ ನೀಡಿದ ಆತಿಥ್ಯ ಮತ್ತು ಯಾವುದೇ ತೊಂದರೆಯಾಗದಂತೆ ಮನೆಗೆ ಹಿಂತಿರುಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಫ್ರೆಂಚ್ ಸರ್ಕಾರ ಮತ್ತು ವಾಟ್ರಿ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದೆ. ರಾಯಭಾರ ಕಚೇರಿ ತಂಡದೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದು ಮತ್ತು ನಾಗರಿಕರ ಸುರಕ್ಷಿತ ವಾಪಸ್ ಆಗಲು ಫ್ರೆಂಚ್ ಅಧಿಕಾರಿಗಳು ನೀಡಿದ ಸಹಕಾರವನ್ನು ರಾಯಭಾರ ಕಚೇರಿ ಶ್ಲಾಘಿಸಿದೆ. ಭಾರತೀಯ ಪ್ರಯಾಣಿಕರು ವಾಪಸ್ ಆಗಲು ಉತ್ತಮ ಆತಿಥ್ಯದೊಂದಿಗೆ ಸಹಕರಿಸಿದ ಫ್ರೆಂಚ್ ಸರ್ಕಾರ ಮತ್ತು ವಾಟ್ರಿ ವಿಮಾನ ನಿಲ್ದಾಣಕ್ಕೆ ಧನ್ಯವಾದಗಳು. ರಾಯಭಾರ ತಂಡದೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದಕ್ಕಾಗಿ, ಪ್ರಯಾಣಿಕರ ಯೋಗಕ್ಷೇಮ ನೋಡಿಕೊಂಡಿದ್ದಕ್ಕಾಗಿ ಕೃತಜ್ಞತೆಗಳು ಎಂದು ಫ್ರಾನ್ಸ್‌ನಲ್ಲಿರುವ ಭಾರತೀಯ…
ಕಲಬುರಗಿ: ಬೆಳ್ಳಂ ಬೆಳಿಗ್ಗೆಯೇ ರಸ್ತೆಗಿಳಿದು ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಫಜಲಪುರದ ಆತನೂರಿನಲ್ಲಿ ಪ್ರತಿಭಟನೆ ನಡೆದಿದ್ದು ಬಸ್ ನಿಲ್ಲಿಸದಿದ್ದಕ್ಕೆ ಕೋಪಗೊಂಡು ವಿಧ್ಯಾರ್ಥಿಗಳು ಪ್ರೋಟೆಸ್ಟ್ ಮಾಡಿದ್ದಾರೆ. ಆದರ್ಶ ಮಹಾವಿದ್ಯಾಲಯದ ವಿಧ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿ ಸಾರಿಗೆ ಇಲಾಖೆ ವಿರುದ್ಧ ಕಿಡಿ ಕಾರಿದ್ದಾರೆ. ಅತನೂರ್ ಮಾರ್ಗದಲ್ಲಿ ಬಸ್ ನಿಲ್ಲಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.