Author: AIN Author

ಟೆಲ್ ಅವೀವ್: ಒಂದೆಡೆ ಗಾಜಾದ ಮೇಲೆ ಇಸ್ರೇಲ್ (Israel) ವೈಮಾನಿಕ ದಾಳಿ (Airstrike) ನಡೆಸಿದ್ದರೆ, ಇನ್ನೊಂದೆಡೆ ಹಮಾಸ್ (Hamas) ಬಂಡುಕೋರರ ಸುರಂಗದಲ್ಲಿ ಐವರು ಒತ್ತೆಯಾಳುಗಳ ಶವ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಗಾಜಾದ ಮಾಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೇನಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೊಂದೆಡೆ ಉತ್ತರ ಗಾಜಾದಲ್ಲಿ ಹಮಾಸ್ ಉಗ್ರರ ಭೂಗತ ಸುರಂಗ ಜಾಲದಲ್ಲಿ ಸೆರೆಯಲ್ಲಿದ್ದ ಐವರು ಇಸ್ರೇಲಿ ಒತ್ತೆಯಾಳುಗಳ ಶವಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ ಗಾಜಾದ ಮೇಲೆ ಭಾನುವಾರ ರಾತ್ರಿ ಆರಂಭವಾದ ಇಸ್ರೇಲ್ ದಾಳಿ ಕ್ರಿಸ್‍ಮಸ್ ದಿನವಾದ ಸೋಮವಾರ ಬೆಳಗ್ಗೆವರೆಗೂ ಮುಂದುವರಿಯಿತು. ಈ ವೇಳೆ ಗಾಜಾದ ಅಲ್-ಬುರೇಜ್‍ನ ಮೇಲೆ ಇಸ್ರೇಲ್ ತೀವ್ರ ವೈಮಾನಿಕ ದಾಳಿ ನಡೆಸಿದೆ. ಪರಿಣಾಮ ಮಾಘಜಿ ನಿರಾಶ್ರಿತರ ಶಿಬಿರದಲ್ಲಿ 70 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ. ಇದರ ನಡುವೆಯೇ ಬೆಥ್ ಲೆಹೆಮ್‍ನಲ್ಲಿ (Bethlehem) ಪ್ಯಾಲೇಸ್ತೇನಿ ಜನರು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಅ.7ರಂದು…

Read More

ಬೆತ್ಲೆಹೆಮ್‌ (ಪ್ಯಾಲೆಸ್ತೀನ್): ಜಗತ್ತಿನಾದ್ಯಂತ ಕ್ರಿಸ್ಮಸ್‌ (Christmas) ಹಬ್ಬದ ಸಂಭ್ರಮ ಮನೆ ಮಾಡಿತ್ತು. ಎಲ್ಲೆಡೆ ಏಸುಕ್ರಿಸ್ತನ ಸ್ಮರಣೆ ಮಾಡಲಾಗುತ್ತಿದೆ. ಇಂತಹ ಹೊತ್ತಿನಲ್ಲಿ ಜೀಸಸ್‌ (Jesus Christ) ಹುಟ್ಟಿದ ನಾಡಲ್ಲೇ ಕ್ರಿಸ್ಮಸ್‌ ಸಂಭ್ರಮವಿಲ್ಲ. ಕ್ರಿಸ್ಮಟ್‌ ಟ್ರೀ ಕೂಡ ಇಲ್ಲ. ಈ ನೆಲದಲ್ಲಿ ಮಾತ್ರ ಸೂತಕದ ಛಾಯೆ ಆವರಿಸಿದೆ. ಬೆತ್ಲೆಹೆಮ್‌ (Bethlehem) ಸಾಮಾನ್ಯವಾಗಿ ಕ್ರಿಸ್ಮಸ್‌ನಲ್ಲಿ ಅತ್ಯಂತ ಜನನಿಬಿಡವಾಗಿರುತ್ತದೆ. ಆದರೆ ಈ ವರ್ಷ ಯುದ್ಧದಿಂದಾಗಿ ಇಸ್ರೇಲಿ ಆಕ್ರಮಿತ ವೆಸ್ಟ್ ಬ್ಯಾಂಕ್‌ನಲ್ಲಿರುವ ಪ್ಯಾಲೇಸ್ಟಿನಿಯನ್ ಪಟ್ಟಣ ಪ್ರವಾಸಿಗರು ಮತ್ತು ಯಾತ್ರಿಕರಿಲ್ಲದೇ ಬಣಗುಡುತ್ತಿವೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸ್ಮಾರಕ ಅಂಗಡಿಗಳು ಖಾಲಿ ಖಾಲಿಯಾಗಿವೆ ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲ್‌ನಲ್ಲಿ ಹಮಾಸ್ ದಾಳಿ ನಡೆಯಿತು. ಇದಾದ ಬಳಿಕ ಇಸ್ರೇಲ್‌ ಯುದ್ಧವನ್ನು ಘೋಷಿಸಿತು. ಗಾಜಾದ ಮೇಲೆ ಇಸ್ರೇಲ್‌ನ ಮಿಲಿಟರಿ ದಾಳಿ ಮತ್ತು ಪಶ್ಚಿಮ ದಂಡೆಯಲ್ಲಿ ಹಿಂಸಾಚಾರದ ಹೆಚ್ಚಳವಾಗಿದೆ. ಹೀಗಾಗಿ ಬೆತ್ಲೆಹೆಮ್‌ಗೆ ವ್ಯಾಪಾರ ಮಾಲೀಕರು ಯಾರೂ ಬರುತ್ತಿಲ್ಲ. ಇದು ಪಟ್ಟಣಕ್ಕೆ (ಬೆತ್ಲೆಹೆಮ್‌) ಬಂದೊದಗಿದ ಅತ್ಯಂತ ಕೆಟ್ಟ ಕ್ರಿಸ್ಮಸ್‌ ದಿನವಾಗಿದೆ. ಬೆತ್ಲೆಹೆಮ್‌ ಅನ್ನು ಬಂದ್‌ ಮಾಡಲಾಗಿದೆ. ಕ್ರಿಸ್ಮಸ್…

Read More

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮೊ ಸಿಕ್ವೇನ್ಸಿಂಗ್ ನಲ್ಲಿ ಒಮೆಕ್ರಾನ್ ವೈರಾಣು ಉಪತಳಿ JN.1 ಪತ್ತೆಯಾಗಿದೆ. ಸುಮಾರು 34 ಕೋವಿಡ್ ಸೊಂಕಿತರಿಗೆ JN.1 ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮದವರಿಗೆ ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, JN.1 ವೈರಾಣು ರಾಜ್ಯದಲ್ಲಿ ಇರಬಹುದು ಎಂದು ಮೊದಲೇ ನಿರೀಕ್ಷಿಸಲಾಗಿತ್ತು.  ಆದರೆ ಅದು ಜಿನೋಮೊ ಸಿಕ್ವೆನ್ಸಿಂಗ್ ನಲ್ಲೇ ನಮಗೆ ಸ್ಪಷ್ಟವಾಗಿ ಗೊತ್ತಾಗೊದು. ಹೀಗಾಗಿ ಜಿನೋಮೊ ಸಿಕ್ವೆನ್ಸಿಂಗ್ ಗೆ ಕಳಿಸಿದ್ವಿ.‌ ಇದೀಗ ವರದಿ ಬಂದಿದ್ದು, ರಾಜ್ಯದಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿದೆ ಎಂದರು. ಆದರೆ ರಾಜ್ಯದ ಜನರು ಕೋವಿಡ್ ಸಂಬಂಧ ಆತಂಕ ಪಡುವ ಅಗತ್ಯವಿಲ್ಲ. JN.1 ಉಪತಳಿ ಅಪಾಯಕಾರಿ ಅಲ್ಲ ಎಂಬುದನ್ನ ತಜ್ಞರು ಈಗಾಗಲೇ ಹೇಳಿದ್ದಾರೆ. ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸ್ಬಲ್ಪ ಎಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆಯಿಂದ ಕೂಡ ಈಗಾಗಲೇ ಎಲ್ಲ…

Read More

ಬೆಂಗಳೂರು: ಕೆಲ ಸೆಲೆಬ್ರೆಟಿಗಳು ಬದುಕಲ್ಲಿ ಲವ್ , ಸೆಕ್ಸ್, ದೋಖಾ ಅನ್ನೊದು ಕಾಮನ್ ಏನೂ ಅನ್ನೋಷ್ಟರ ಮಟ್ಟಿಗೆ ಆಗಿಬಿಟ್ಟಿದೆ. ಹೌದು. ಇದೀಗ ಕರ್ನಾಟಕದ ಕ್ರಿಕೆಟಿಗರೊಬ್ಬರ ಮೇಲೆ ಇಂತಹದೇ ಆರೋಪ ಕೇಳಿ ಬಂದಿದೆ.. ಸದ್ಯ ಕ್ರಿಕೆಟರ್ ನ ಪ್ರೇಮ ಪುರಾಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮಾಜಿ ಸೈನಿಕರೊಬ್ಬರ ಪುತ್ರಿ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ…. ಕೊಡಗು ಮೂಲದ ಕ್ರಿಕೆಟಿಗ ಕೆ.ಸಿ.‌ಕಾರಿಯಪ್ಪ ವಿರುದ್ದ ಗಂಭೀರ ಆರೋಪ ಕೇಳಿ‌ ಬಂದಿದೆ.‌ಇನ್ಸ್ಟಾ ಗ್ರಾಮ್ ನಲ್ಲಿ  ಪರಿಚಯವಾಗಿದ್ದ ಯುವತಿಯನ್ನ ಮದ್ವೆಯಾಗೋದಾಗಿ ನಂಬಿಸಿ ವಂಚಿಸಿದ್ದಾರಂತೆ. ಇನ್ನು ಕಾರಿಯಪ್ಪನಿಂದ ವಂಚನೆಗೊಳಗಾದ ಯುವತಿಯೂ ಕೊಡಗು ಮೂಲದವರಾಗಿದ್ದು, ಎರಡು ವರ್ಷಗಳ‌ ಹಿಂದೆ ಇಬ್ಬರಿಗೂ ಇನ್ಸ್ಟಾ ದಲ್ಲಿ‌ ಪರಿಚಯವಾಗಿತ್ತಂತೆ. ನಂತರ ಪರಿಚಯ ಪ್ರೇಮಕ್ಕೆ ತಿರುಗಿದ್ದು, ದೈಹಿಕ‌ ಸಂಪರ್ಕವೂ ಬೆಳೆಸಿ ಕೊನೆಗೆ ಸದ್ಯಕ್ಕೆ ಮಗು ಬೇಡ ಅಂತ ಅಬಾರ್ಷನ್ ಮಾಡಿಸಲು ಕಾರಿಯಪ್ಪನೇ ಬಲವಂತವಾಗಿ ಯುವತಿಗೆ ಮಾತ್ರೆ ನುಂಗಿಸಿದ್ದ ಎಂದು ಆರೋಪಿಸಲಾಗಿದೆ.. https://ainlivenews.com/countdown-to-congresss-fifth-guarantee-yuvanidhi/ ಅದಾದ ಬಳಿಕ…

Read More

ಬೆಳಗಾವಿ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಹಿಜಾಬ್ ನಿಷೇಧ ವಾಪಸ್ ತೆಗೆದುಕೊಳ್ಳುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದೆವು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಮ್ಮ ಸರ್ಕಾರದ ನಿಲುವನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಂಚೆ ತರಗತಿಗಳಲ್ಲಿ ಹಿಜಾಬ್ ಧಾರಣೆಗೆ ಅವಕಾಶವಿತ್ತು. ಹಿಂದಿನ ಸರ್ಕಾರ ನಿಷೇಧಿಸಿತ್ತು. ನಾವು ಅದನ್ನು ಹಿಂಪಡೆಯುತ್ತೇವೆ. ಈ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿದೆ. ನಮ್ಮ ನಿರ್ಧಾರವನ್ನು ಕೋರ್ಟ್‌ಗೆ ಹೇಳುತ್ತೇವೆ ಎಂದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು ಹತ್ತು ಸಾವಿರ ಕೋಟಿ ರೂ. ರಸ್ತೆ ಯೋಜನೆಗಳಿವೆ. ಇದರಲ್ಲಿ ಎರಡು ಸಾವಿರ ಕೋಟಿ ರೂ. ಖರ್ಚಾಗಿದೆ. ಇನ್ನೂ ಎಂಟು ಸಾವಿರ ಕೋಟಿ ಹಣ ಖರ್ಚಾಗಬೇಕು. ಈ ಹಣವನ್ನು ಖರ್ಚು ಮಾಡದಿದ್ದರೆ ಕಾಮಗಾರಿ ಬಂದ್ ಮಾಡುತ್ತಾರೆ. ರಸ್ತೆ ಕಾಮಗಾರಿಗೆ ತೊಂದರೆ ಇರುವುದನ್ನು ಸರಿಪಡಿಸಬೇಕು. ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದೇನೆ. ರಾಷ್ಟ್ರೀಯ ಹೆದ್ದಾರಿ ಸಲುವಾಗಿ ಚರ್ಚೆಯಾಗಿದೆ. ಸುಮಾರು 12 ವರ್ಷದಿಂದ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಸ್ಥಗಿತಗೊಂಡಿವೆ. ಆರು ತಿಂಗಳಿಂದ…

Read More

ಹುಬ್ಬಳ್ಳಿ:- ಸಿದ್ದರಾಮಯ್ಯರನ್ನು ಮೂರ್ಖ ಎಂದುಕೊಂಡವರು ಮೂರ್ಖರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗ್ದರಲ್ಲ, ಧೂರ್ತ. ಹಿಜಾಬ್ ನಿಷೇಧವೇ ಆಗಿಲ್ಲ, ಹೀಗಿರುವಾಗ ಹಿಜಾಬ್ ಬ್ಯಾನ್ ಹಿಂಪಡೆಯುತ್ತೇವೆ ಅಂದರೆ ಅದಕ್ಕೆ ಅರ್ಥವಿಲ್ಲ. ಸಮವಸ್ತ್ರ ಸಂಹಿತೆ ಬಿಟ್ಟು ಹಿಜಾಬ್ ಧರಿಸಲು ಅವಕಾಶ ಕೊಡುತ್ತೇವೆ ಎಂದು ಹೇಳಿದರೆ, ಆಗ ಇನ್ನೊಬ್ಬರು ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎನ್ನುತ್ತಾರೆ. ಸಿದ್ದರಾಮಯ್ಯನವರೇ ನೀವು ರಾಜ್ಯವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ, ಸಮಾಜ ಒಡೆಯಲು ಅತ್ಯಂತ ತಲೆ ಕೆಟ್ಟವರ ತರಹ ಹೇಳಿಕೆ ಕೊಡುತ್ತಿದ್ದಿರೋ? ಸಮಾಜ ಒಡೆದು ವೋಟ್ ತಗೆದುಕೊಳ್ಳಬೇಕು ಎನ್ನುವುದು ನಿಮ್ಮ ಉದ್ದೇಶ ಎಂದು ಪ್ರಲ್ಹಾದ್​ ಜೋಶಿ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷ ಈಗ ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಮಾತ್ರ ಅಧಿಕಾರದಲ್ಲಿದೆ. ಇದು ನಿಮ್ಮ ಸ್ಥಿತಿ. ಇನ್ನು ನೀವು ಹೀಗೇ ಹುಚ್ಚು ಹುಚ್ಚಾಗಿ ಮಾತನಾಡಿದ್ರೆ, ಜನ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಸದ ಬುಟ್ಟಿಗೆ ಸೇರಿಸುತ್ತಾರೆ ನೆನಪಿಟ್ಟುಕೊಳ್ಳಿ ಎಂದು ಕಿಡಿಕಾರಿದರು.

Read More

ಬೆಂಗಳೂರು:- ನಗರದಲ್ಲಿ ಮನೆ ಬೀಗ ಒಡೆದು ಕಳ್ಳರು ಕೈಚಳಕ ತೋರಿರುವ ಘಟನೆ ಕಾಟನ್ ಪೇಟೆ ಪೊಲೀಸ್ ಠಾಣೆಯ ಅಕ್ಕಿಪೇಟೆಯಲ್ಲಿ ಜರುಗಿದೆ. ಬಟ್ಟೆ ವ್ಯಾಪಾರಿ ಸಂಜಯ್ ಜೈನ್ ಎಂಬುವವರ ನಿವಾಸದಲ್ಲಿ ಕಳ್ಳತನ ನಡೆದಿದೆ. ಸಂಜಯ್ ಜೈನ್ ಪತ್ನಿ ಮಕ್ಕಳು ಚಿತ್ರದುರ್ಗಕ್ಕೆ ತೆರಳಿದ್ರು. ಸಂಜಯ್ ಜೈನ್ ಮನೆ ಲಾಕ್ ಮಾಡಿ ಬಟ್ಟೆ ಶೋ ರೂಂ ಗೆ ತೆರಳಿದ್ದಾಗ ಕೃತ್ಯ ನಡೆದಿದೆ. ಕಳ್ಳರು, 15 ಲಕ್ಷ ನಗದು 400 ಗ್ರಾಂ ಚಿನ್ನಾಭರಣ ಹೊತ್ತೊಯ್ದಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ.

Read More

ನೆಲಮಂಗಲ: ನೈಸ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವು ಹಾಗೂ ಮೂವರಿಗೆ ಗಾಯವಾಗಿರುವ ಘಟನೆ ಜರುಗಿದೆ. ಮಾದಾವರ ಬಳಿಯ ನೈಸ್ ಟೋಲ್ ಬಳಿ ಲಾರಿ ಕಾರು ನಡುವೆ ಅಪಘಾತ ಸಂಭವಿಸಿದೆ. ಆವರಿಸಿದ್ದ ದಟ್ಟವಾದ ಮಂಜು ರಸ್ತೆ ಕಾಣದೆ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ತೆರಳಿ ವಾಪಸ್ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಬದಿ ಕುಳಿತಿದ್ದ ಮಂಜುನಾಥ್ ಹಾಗೂ ಕಾರು ಚಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ನೆಲಮಂಗಲ ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸೋಮವಾರ ಕನ್ನಡ ಚಲನಚಿತ್ರ ಕಪ್‌ಗೆ ಅದ್ದೂರಿ ತೆರೆ ಬಿದ್ದಿದೆ. ಸದಾ ಸಿನಿಮಾ ಚಿತ್ರೀಕರಣ, ಸಿನಿಮಾ ಡಿಸ್ಕಶನ್‌ ಎಂದು ಬಿಝಿಯಾಗಿರುತ್ತಿದ್ದ ಸಿನಿಮಾ ತಾರೆಯರು ಮೂರು ದಿನಗಳ ಕಾಲ ಅವೆಲ್ಲವನ್ನು ಮರೆತು ಪಕ್ಕಾ ಪ್ರೊಫೆಶನಲ್‌ ಕ್ರಿಕೆಟರ್‌ಗಳ ತರಹ ಆಡಿದ್ದು ವಿಶೇಷವಾಗಿತ್ತು. ಬಿಸಿಲಿನ ಬೇಗೆಯ ನಡುವೆಯೂ ಪ್ರತಿಯೊಬ್ಬ ಆಟಗಾರರ ತಮ್ಮ ತಂಡವನ್ನು ಗೆಲ್ಲಿಸಲು ಪಣತೊಟ್ಟು ಆಡುವ ಮೂಲಕ ತಾವು ತೆರೆಮೇಲೆಯಷ್ಟೇ ಅಲ್ಲ, ಮೈದಾನದಲ್ಲೂ ಹೀರೋಗಳೇ ಎಂಬಂತೆ ಹಾಡಿದರು. ಕೆಸಿಸಿಗೆ ಕ್ರಿಕೆಟರ್‌ಗಳಾದ ಸುರೇಶ್‌ ರೈನಾ, ದಿಶ್ಯಾನ್‌, ರಾಬೀನ್‌ ಉತ್ತಪ್ಪ ಸೇರಿ ಮತ್ತಷ್ಟು ತುಂಬಿದರು ಕೆಸಿಸಿಯ ಕೊನೆಯ ದಿನವಾದ ಸೋಮವಾರ ತಮ್ಮ ನೆಚ್ಚಿನ ನಟರನ್ನು ಮೈದಾನದಲ್ಲಿ ನೋಡಲು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಒಬ್ಬೊಬ್ಬ ನಟ ಬ್ಯಾಟ್‌ ಹಿಡಿದು ಮೈದಾನಕ್ಕೆ ಬಂದಾಗಲೂ ಕೇಕೆ, ಶಿಳ್ಳೆ ಮುಗಿಲು ಮುಟ್ಟುತ್ತಿತ್ತು. ಒಟ್ಟು ಆರು ತಂಡಗಳ ನಡುವೆ ನಡೆದ ರೋಚಕ ಪಂದ್ಯದಲ್ಲಿ ಅಂತಿಮ ಹಣಾಹಣಿಗೆ ಗಣೇಶ್‌ ನಾಯಕತ್ವದ ಗಂಗಾ ವಾರಿಯರ್ ಹಾಗೂ ಶಿವಣ್ಣ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ ಬಂದುವು. ಮೂರನೇ ದಿನ ಆರಂಭದಲ್ಲಿ…

Read More

ಗದಗ:- ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ರೂಪಾಂತರಿ ಕೇಸ್ ಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕರೋನಾ ಜೆಎನ್-೧ ನಿಯಂತ್ರಣಕ್ಕೆ ಗದಗ ಜಿಲ್ಲಾಡಳಿತ ಸಜ್ಜಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಕಲ ಸಿಧ್ಧತೆ ಮಾಡಲಾಗಿದೆ. ಸಧ್ಯ ಕರೋನಾ ಸೋಂಕಿತರಿಗಾಗಿ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ 50 ವಿಶೇಷ ಬೆಡ್ ವ್ಯವಸ್ಥೆ ಮಾಡಲಾಗಿದೆ. ಸೋಂಕಿತರ ಸಂಖ್ಯೆಯಾಧಾರದ ಮೇಲೆ ಹಂತಹಂತವಾಗಿ ಬೆಡ್ ಕನ್ವರ್ಟಗೆ ನಿರ್ಧಾರ ಮಾಡಲಾಗಿದೆ. 50ರ ಪೈಕಿ 10ಐಸಿಯು, 5ಪಿಡಿಯಾಟ್ರಿಕ್, 15 ಮಹಿಳೆಯರಿಗೆ, ಪುರುಷರಿಗೆ 20 ಬೆಡ್ ಮೀಸಲಿಡಲಾಗಿದೆ. ಎರಡು ಆಕ್ಸಿಜನ್ ಘಟಕಗಳು 20ಕೆಎಲ್ -1, 13ಕೆಎಲ್-1, ಒಂದು ನಿಮಿಷಕ್ಕೆ 1000ಲೀಟರ್ ಉತ್ಪಾದನೆಯ 1ಪ್ಲಾಂಟ್, 1ನಿಮಿಷಕ್ಕೆ 500ಲೀಟರ್- 3ಆಕ್ಸಿಜನ್ ಜನರೇಟರ್ ಪ್ಲಾಂಟ್ ಜಿಮ್ಸ್ ವ್ಯಾಪ್ತಿಯಲ್ಲಿ ಆಕ್ಸಿಜನ್ ಸಿಲಿಂಡರ್ಸ್ – 200 ಪರಿಸ್ಥಿತಿಗನುಗುಣವಾಗಿ 120-ವೆಂಟಿಲೇಟರ್, ಸಂಬಂಧಿತ ಔಷಧಿ ವ್ಯವಸ್ಥೆ ಮಾಡಲಾಗಿದ್ದು, ಸೋಂಕಿತರನ್ನ ಕರೆತರಲು ಪೂರಕ ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ವೈದ್ಯಾಧಿಕಾರಿಗಳು ಸೇರಿದಂತೆ ಪ್ರತಿ ವಿಭಾಗಕ್ಕೂ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಗುತ್ತಿಗೆ, ಅರೆಗುತ್ತಿಗೆ ಸೇರಿ ಸರ್ಕಾರಿ ವೈದ್ಯ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

Read More