Author: AIN Author

ಚನ್ನಪಟ್ಟಣ :- ಶಾಲಾ ಮಕ್ಕಳಲ್ಲಿ ಸಿದ್ದರಾಮಯ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮರೆತು ಹೋಗಿದ್ದ ಹಿಜಾಬ್ ಪ್ರಕರಣವನ್ನು ಮತ್ತೆ ಕೆದಕುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲಾ ಮಕ್ಕಳಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ಪಡೆಯುವ ಉದ್ದೇಶದಿಂದ ಹಿಜಾಬ್ ವಿಚಾರವನ್ನು ಕಾಂಗ್ರೆಸ್‌ನವರು ಮತ್ತೆ ಮುನ್ನಲೆಗೆ ಎಳೆದು ತರುತ್ತಿದ್ದಾರೆ. ಇದು ರಾಜ್ಯದ ಜನರಿಗೂ ಗೊತ್ತಿದೆ’ ಎಂದು ಭಾನುವಾರ ಕಾರ್ಯಕ್ರಮವೊಂದರಲ್ಲಿ ಹೇಳಿದರು. ‘ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಿರಾ’ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ಸೂಕ್ತ ಸಂದರ್ಭದಲ್ಲಿ ಹೇಳುತ್ತೇನೆ ಎಂದು ಹೇಳಿದ್ದಾರೆ.

Read More

ಬೆಂಗಳೂರು:- ವೃದ್ಧೆಯೊಬ್ಬರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕ್‌ಲೈನ್ ವೆಂಕಟೇಶ್ ಪುತ್ರನನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಪುತ್ರ ಅಭಿಲಾಷ್ ವೆಂಕಟೇಶ್ ಮೇಲೆ ಈ ಆರೋಪ ಬಂದಿದ್ದು, ಈ ಪ್ರಕರಣದ ಬಂಧಿತ ಆರೋಪಿಗಳಿಂದ ವೆಂಕಟೇಶ್ ಪುತ್ರನ ಮಾಲೀಕತ್ವದ ಕಂಪನಿಯ ಬ್ಯಾಂಕ್ ಖಾತೆಗೆ ೧.೨ ಕೋಟಿ ರೂ.ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ವೆಂಕಟೇಶ್ ಅವರ ಪುತ್ರ ಅಭಿಲಾಷ್‌ಗೆ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ತನಿಖಾಧಿಕಾರಿ ಮುಂದೆ ಅಭಿಲಾಷ್ ವೆಂಕಟೇಶ್ ಹಾಜರಾಗಿದ್ದರು. ಕೆಲ ಹೊತ್ತು ಅಭಿಲಾಷ್ ಅವರನ್ನು ತೀವ್ರ ವಿಚಾರಣೆ ನಡೆಸಿದ ಅಧಿಕಾರಿಗಳು ಅವರ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ ನಾನು ತಪ್ಪು ಮಾಡಿಲ್ಲ. ಮೋಸದ ಬಗ್ಗೆ ತಿಳಿಯದೆ ಹಣ ಪಡೆದಿದ್ದೆ ಎಂದು ಅಭಿಲಾಷ್ ಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ ಅಗತ್ಯವಿದ್ದರೆ ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಿ ಅಭಿಲಾಷ್ ಅವರನ್ನು ಸಿಸಿಬಿ ಅಧಿಕಾರಿಗಳು ಕಳುಹಿಸಿದ್ದಾರೆ. ಇನ್ನೂ ೨೫ ಲಕ್ಷ ಕಮಿಷನ್ ಕೊಟ್ಟಿದ್ದ ಅಭಿಲಾಷ್: ಜೆ.ಪಿ.ನಗರ…

Read More

ಬೆಂಗಳೂರು: ಕೊರೊನಾ ಮಹಾಮಾರಿ ಜೆಎನ್.1 ರೂಪತಾಳಿ ಯಾರಿಗೂ ಗೋಚರಿಸದಂತೆ ಲಗ್ಗೆ ಇಟ್ಟಿದೆ. ಈಗಾಗಲೇ ಸಾವಿನ ಷರಾ ಬರೆದಿರುವ ಕೊರೊನಾ, ಅಬ್ಬರಿಸಲು ಹೊರಟಿದೆ. ಈಗಾಗಲೇ ಕೆಲ ನಿಯಮಗಳನ್ನ ಜಾರಿಗೆ ತಂದು  ಕೊರೊನಾ ಕ್ರಿಮಿಯನ್ನ ಹದ್ದುಬಸ್ತಿನಲ್ಲಿಟ್ಟಿದೆ.ಇದೀಗ ಸಾಲು ಸಾಲು ಹಬ್ಬಗಳು ಬರುತ್ತಿರೋದು ಮತ್ತೆ ಕೊರೊನಾ ಸುನಾಮಿಯಂತೆ ಹರಡುವ ಆತಂಕ ಕಾಡ್ತಿದ್ದು, ಇದು ಬಿಬಿಎಂಪಿಗೆ ಟೆನ್ಷನ್ ಹೆಚ್ಚಿಸಿದೆ. ಹೋಂ ಐಸೋಲೇಷನ್ ಕಡ್ಡಾಯ.. ಕ್ವಾರಂಟೈನ್ ಆದವರ ಮೇಲೆ ಹೆಚ್ಚು ನಿಗಾ.. ಕೋವಿಡ್ ಟೆಸ್ಟ್ ಹೆಚ್ಚಳ.. ನೆರೆ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು. ಹೀಗೆ ಏನೇ ಮುನ್ನೆಚ್ಚರಿಕೆಗಳನ್ನ ಆರೋಗ್ಯ ಇಲಾಖೆ ತೆಗೆದುಕೊಳ್ಳುತ್ತಿದ್ರು, ಚೀನಾ ಕೂಸು ಕೊರೊನಾ ಮಹಾಮಾರಿ ಜೆಎನ್.1 ರೂಪತಾಳಿ ಮೆಲ್ಲ ಮೆಲ್ಲನ್ನೆ ರಾಜ್ಯದ ಜಿಲ್ಲೆಗಳಿಗೆ ಎಂಟ್ರಿ ಕೊಡ್ತಿದೆ. ಕಳೆದ ಬಾರಿಯಂತೆ ಈ ಬಾರಿಯೂ ಬೆಂಗಳೂರು ಹಾಟ್ ಸ್ಪಾಟ್ ಆಗಲಿದೆಯೇ ಎಂಬ ಸಂದೇಹ ಮೂಡಿದೆ. ಹೌದು .. ಕೊರೊನಾ ಹೊಸ ಅವತಾರದಲ್ಲಿ ಎಲ್ಲೆಡೆ ಹಬ್ಬುತ್ತಿದೆ.  ಅತ್ತ ವೈರಸ್ ಹಾವಳಿ ಇದ್ರೆ ಇತ್ತ ಸಾಲು ಸಾಲು ರಜೆಗಳು…

Read More

ಮೇರಿ ಕ್ರಿಸ್ಮಸ್ ಸೂರ್ಯೋದಯ: 06.39 AM, ಸೂರ್ಯಾಸ್ತ : 06.01 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ತ್ರಯೋದಶಿ 05:54 AM ತನಕ ನಂತರ ಚತುರ್ದಶಿ ನಕ್ಷತ್ರ: ಇವತ್ತು ರೋಹಿಣಿ 09:39 PM ತನಕ ನಂತರ ಮೃಗಶಿರ ಯೋಗ: ಇವತ್ತು ಸಾಧ್ಯ 05:42 AM ತನಕ ನಂತರ ಶುಭ ಕರಣ: ಇವತ್ತು ತೈತಲೆ 05:54 AM ತನಕ ನಂತರ ಗರಜ 05:48 PM ತನಕ ನಂತರ ವಣಿಜ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 06.24 PM to 08.02 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:54 ನಿಂದ ಮ.12:37 ವರೆಗೂ ಮೇಷ: ಮಕ್ಕಳ ಭವಿಷ್ಯದ ವಿಚಾರದಲ್ಲಿ ಚಿಂತನೆ. ಅನಾವಶ್ಯಕವಾಗಿ ಮಕ್ಕಳ ಜೊತೆ ಕಿರಿಕಿರಿ ಹಾಗೂ ಮನಃಸ್ತಾಪ.ಸಂಗಾತಿ ಜೊತೆ…

Read More

ಕಾರವಾರ: ಲೋಕಸಭಾ ಚುನಾವಣೆಗೆ (Lok Sabha Election) ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯ ಮಾಡಿದಾಗ ತಿರಸ್ಕರಿಸುವುದು ಮೂರ್ಖತನವಾಗುತ್ತದೆ ಎಂದು ಉತ್ತರ ಕನ್ನಡದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ಹೇಳಿದ್ದಾರೆ. ಆರೋಗ್ಯದ (Health) ಸಮಸ್ಯೆಯಿಂದಾಗಿ ಚುನಾವಣಾ ರಾಜಕಾರಣ, ಪಕ್ಷದ ರಾಜಕಾರಣದಿಂದ ದೂರವಿದ್ದೆ.  ಅಭಿಮಾನಿಗಳಿಂದ ಚುನಾವಣೆಗೆ ನಿಲ್ಲಬೇಕೆಂಬ ಒತ್ತಡ ಬರುತ್ತಿದೆ ಎಂದು ಅವರು ಹೇಳಿದರು. ಪಕ್ಷ ಹಾಗೂ ರಾಜಕಾರಣದಿಂದ ಮೂರು ವರ್ಷದಿಂದ ದೂರ ಉಳಿದಿದ್ದ ಅನಂತ್‌ಕುಮಾರ್ ಹೆಗಡೆ ಇಂದು ಶಿರಸಿಯ ಕೆ.ಹೆಚ್.ಬಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರು. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಅಲ್ಪಸಂಖ್ಯಾತರ ವೋಟುಗಳು ಇಲ್ಲದೇ ಕಾಂಗ್ರೆಸ್ ಬದುಕಲು ಸಾಧ್ಯವಿಲ್ಲ. ಯಾವತ್ತೂ ಕಾಂಗ್ರೆಸ್ ಬಹುಸಂಖ್ಯಾತರ ರಾಜಕಾರಣ ಮಾಡಿಲ್ಲ. ಕಾಂಗ್ರೆಸ್‌ನವರು ಮನಸ್ಸಿಗೆ ಬಂದಂತೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು ಹಾಕುವ ಬದಲು ಕನ್ನಡಿಗರ ತಲೆಯ ಮೇಲೆ ಕಲ್ಲು ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ (R.Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಏಳು ಕೋಟಿ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕಿರುವ ಸರ್ಕಾರ, ಅಭಿವೃದ್ಧಿ ಕಾಮಗಾರಿಗೆ ಒಂದು ಅಡಿಗಲ್ಲನ್ನೂ ಹಾಕಿಲ್ಲ. ಜನರು ಸರ್ಕಾರದ ಬಗ್ಗೆ ಛೀ, ಥೂ ಎಂದು ಮಾತನಾಡುತ್ತಿದ್ದಾರೆ. ಸರ್ಕಾರ ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯನವರು ಜಾತಿ, ಧರ್ಮಗಳ ನಡುವೆ ಬೆಂಕಿ ಹಚ್ಚುವ ವೀರ ಎಂದು ಟೀಕಿಸಿದ್ದಾರೆ. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಬರ ಪರಿಹಾರಕ್ಕೆ ಇದೇ ವಾರದಲ್ಲಿ 2 ಸಾವಿರ ರೂ. ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ ಈವರೆಗೆ ಹಣ ಸಿಕ್ಕಿಲ್ಲ. ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. 15-20 ಸಾವಿರ ರೂ.ಗೆ ಯಾರೂ ಬರದೆ ಶಾಲಾ ಮಕ್ಕಳ ಕೈಯಲ್ಲಿ…

Read More

ಧಾರವಾಡ: ಆತ ಹಿರಿಯರ ಕ್ರೀಡಾ ಕೂಟದಲ್ಲಿ ಪಾಲ್ಗೊಂಡು ಧಾರವಾಡಕ್ಕೆ ಕೀರ್ತಿ ತಂದ ವೃದ್ಧ. ರಾಜ್ಯ ಹಾಗೂ ಅಂತರರಾಜ್ಯಮಟ್ಟದಲ್ಲಿ ನಡೆದ ಹಿರಿಯರ ಕ್ರೀಡಾಕೂಟದಲ್ಲಿ ಗೆದ್ದು ಪದಕಗಳಿಗೆ ಮುತ್ತಿಕ್ಕಿದ್ದಾನೆ. 75 ರ ಇಳಿ ವಯಸ್ಸಿನಲ್ಲೂ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಧಾರವಾಡದ ಕೀರ್ತಿ ಹೆಚ್ಚಿಸಿದ್ದಾನೆ. ಆದರೆ, ಆತನನ್ನು ಆತನ ಮಕ್ಕಳು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಇದೀಗ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರ ಬಳಿ ತನ್ನ ಅಸಹಾಯಕತೆ ತೋಡಿಕೊಂಡಿದ್ದಾನೆ. ಹೌದು! ಈ ರೀತಿ ಸಚಿವರ ಬಳಿ ತನ್ನ ಅಹವಾಲು ಸಲ್ಲಿಸುತ್ತಿರುವ ಈ ವೃದ್ಧನ ಹೆಸರು ಬಸಪ್ಪ ಸಳಾಯಿ. ಧಾರವಾಡ ತಾಲೂಕಿನ ಶಿಬಾರಗಟ್ಟಿ ಗ್ರಾಮದವನು. 75 ವರ್ಷದ ಹಿರಿಯರ ಕರ್ನಾಟಕ ಓಪನ್ ನ್ಯಾಷನಲ್ ಮಾಸ್ಟರ್ ಗೇಮ್ಸ್‌ನಲ್ಲಿ ಸ್ಪರ್ಧೆ ಮಾಡಿ 100, 200, 300, 800 ಹಾಗೂ 1500 ಮೀಟರ್ ಓಟದಲ್ಲಿ ಪಾಲ್ಗೊಂಡು ಪದಕಗಳನ್ನು ಪಡೆದಿದ್ದಾನೆ. ಆದರೆ, ಈ ವಯೋವೃದ್ಧನನ್ನು ಆತನ ಮಕ್ಕಳು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಹೀಗಾಗಿ ತನಗೆ ಏನಾದರೂ ಧನ ಸಹಾಯ ಮಾಡಿ ಎಂದು ಸಚಿವರ ಜನತಾ ದರ್ಶನ…

Read More

ಬೆಂಗಳೂರು: ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಮನೆಗೆ ಸ್ವಲ್ಪ ದೂರದಲ್ಲಿರುವ ಆಂಜನೇಯ ದೇವಸ್ಥಾನದ ಬಳಿ ಹನುಮ ಜಯಂತಿ ಅಂಗವಾಗಿ ಅನ್ನದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವ್ಯಕ್ತಿಯನ್ನು ಎಲ್ಲರೆದುರೇ ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿದ ದುರ್ಘಟನೆ ನಡೆದಿದೆ. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ರಾಜ್ಯದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಮನೆ ಹತ್ತಿರ ವ್ಯಕ್ತಿಯ ಹತ್ಯೆ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜೈ ಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಎಂದು ಗುರುತಿಸಲಾಗಿದೆ. ಆಡುಗೋಡಿ ಠಾಣಾ ವ್ಯಾಪ್ತಿಯ ಲಕ್ಕಸಂದ್ರ ಬಳಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಆಡುಗೋಡಿ ಪೊಲೀಸರು ಭೇಟಿ ಪರಿಶೀಲನೆ ಮಾಡುತ್ತಿದ್ದಾರೆ.

Read More

ಬೆಂಗಳೂರು: ಸಮವಸ್ತ್ರ ಇರುವುದು ವಿಷಬೀಜ ಬಿತ್ತುವುದಕ್ಕಲ್ಲ. ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪು ನಮ್ಮ ಮುಂದೆ ಇದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ್ದು ಒಡೆದಾಳುವ ನೀತಿ. ರಾಜ್ಯದ ಕಾನೂನು ಸುವ್ಯವಸ್ಥೆ ಒಳ್ಳೆಯದಾಗಿ ಇರಬಾರದಾ.?, ನಿಮ್ಮ ಉದ್ದೇಶ ಏನು ಹಾಗಾದ್ರೆ..?, ನಿಮ್ಮನ್ನೇನು ಬಂದು ಮಕ್ಕಳು ಕೇಳಿದ್ರಾ..?, ಯಾರೋ ಸಭೆಯಲ್ಲಿ ಕೇಳಿದ್ರಂತೆ ಇವರು ಹೇಳಿಬಿಟ್ರಂತೆ ಎಂದು ಹಿಜಬ್ ನಿಷೇಧ (Hijab Ban) ವಾಪಸ್ ಪಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಕಿಡಿಕಾರಿದ್ದಾರೆ. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಹಿಜಬ್ ವಿಚಾರದಲ್ಲಿ ಬೇಜವ್ದಾರಿ ಹೇಳಿಕೆ ನೀಡಿದ್ದಾರೆ. ಶಿಕ್ಷಣ ಕಲುಷಿತಗೊಳಿಸಲು ಕೈಹಾಕಿರುವುದು ನಾಡಿನ ದುರಾದೃಷ್ಟ. ಸಿಎಂ ಅವರಿಂದ ನಿರೀಕ್ಷೆ ಮಾಡಿರಲಿಲ್ಲ. ಶಾಲಾ ಮಕ್ಕಳನ್ನು ಕೊಳಕು ರಾಜಕೀಯದಿಂದ ದೂರ ಇಡಬೇಕಿತ್ತು. ಪರೀಕ್ಷೆಗೆ ಹೋಗುವವರಿಗೆ ತಾಳಿ, ಕಾಲುಂಗುರ ಬಿಚ್ಚಿಸುತ್ತಾರೆ. ಇದು ತಲೆ ತಗ್ಗಿಸುವಂತಹ ವಿಚಾರವಾಗಿದೆ ಎಂದರು.

Read More

ಬೆಂಗಳೂರು: ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಮುಖ್ಯಮಂತ್ರಿಗಳು ತೆಗೆದುಕೊಂಡಿರೋ ನಿರ್ಧಾರವನ್ನ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa) ಅವರು ಸಿದ್ದರಾಮಯ್ಯ (Siddaramaiah) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಮುಖ್ಯಮಂತ್ರಿಗಳು ತೆಗೆದುಕೊಂಡಿರೋ ಈ ನಿರ್ಧಾರವನ್ನ ಖಂಡಿಸುತ್ತೇನೆ. ಇದು ಶೋಭೆ ತರುವಂತಹದ್ದಲ್ಲ, ಅಧಿಕಾರ ಇದೆ ಅಂತ ರಾಜಕೀಯ ದೊಂಬರಾಟ ಮಾಡಲು ಹೊರಟಿದ್ದಾರೆ. ನೋಡೋಣ ಎಲ್ಲಿಯವರೆಗೆ ಇದೇ ರೀತಿ ಮಾಡ್ತಾರೆ ಅಂತ. ಬಿಜೆಪಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ವಿಚಾರ ಇಲ್ಲ, ಜನರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬುದ್ಧಿ ಕಲಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಶಾಲೆಗಳಲ್ಲಿ ಹಿಜಬ್‌ (Hijab) ನಿಷೇಧ ವಾಪಸ್‌ ಪಡೆಯಬೇಕೆಂಬ ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸ್ತೇನೆ. ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ ಅಗತ್ಯ. ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದ್ದಾರೆ. ಈಗಲೇ ಎಚ್ಚೆತ್ತು ತೀರ್ಮಾನ ವಾಪಸ್‌ ಪಡೆಯಬೇಕು ಎಂದು ಎಚ್ಚರಿಸಿದ್ದಾರೆ. 

Read More