ಬೆಂಗಳೂರು: ಬ್ರಿಟೀಷರು ದೇಶ, ರಾಜ್ಯವನ್ನು ವಿಭಜಿಸಿ ಆಳಿದ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ (N Ravi Kumar) ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿಜಬ್ (Hijab) ವಿಷಯ ಇದೀಗ ಸುಪ್ರೀಂ ಕೋರ್ಟಿನಲ್ಲಿದೆ. ಇಂತಹ ಸಂದರ್ಭದಲ್ಲಿ ಹಿಜಬ್‍ಗೆ ಅನುಮತಿ ಕೊಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು. ಈ ವಿಷಯ ಹಿಂದೆ ಬಿಜೆಪಿ (BJP) ಆಡಳಿತದ ಸಂದರ್ಭದಲ್ಲಿ ಹೈಕೋರ್ಟಿಗೆ ಹೋಗಿ, ಹಿಜಬ್ ಬೇಕೇ ಬೇಡವೇ ಎಂಬುದು ಸಾಕಷ್ಟು ಚರ್ಚೆ ಆಗಿತ್ತು. ಹಿಜಬ್ ಧರಿಸಬಾರದು, ಸಮವಸ್ತ್ರ ಧರಿಸಿ ಹೋಗಬೇಕೆಂದು ಹೈಕೋರ್ಟಿನಿಂದ ತೀರ್ಪು ಬಂದಿತ್ತು ಎಂದು ತಿಳಿಸಿದರು. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಆದರೆ ಶುಕ್ರವಾರ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಹಿಜಬ್ ಧರಿಸಿಕೊಂಡು ಹೋಗಬಹುದು ಎಂದು ಹೇಳಿದ್ದಾರೆ ಎಂದು ಟೀಕಿಸಿದರು.…
Author: AIN Author
ಬೆಂಗಳೂರು: ಹಿಜಬ್ (Hijab) ವಿಚಾರದಲ್ಲಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಕಾನೂನಿನ ಅಡಿಯಲ್ಲೇ ಕ್ರಮ ತಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿಜಬ್ ನಿಷೇಧ ವಾಪಸ್ ಪಡೆಯುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಹಿಜಬ್ ವಿಚಾರದಲ್ಲಿ ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದು, ಕಾನೂನು ಏನು ಹೇಳುತ್ತದೆ ಎಂಬುದನ್ನ ನೋಡಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಶಾಲಾ ಕಾಲೇಜುಗಳಲ್ಲಿ ಈ ಹೇಳಿಕೆಯಿಂದ ಗೊಂದಲ ಆಗಿದ್ದರೆ, ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದು ಚರ್ಚೆ ಮಾಡಿ ನಿರ್ದೇಶನ ನೀಡುತ್ತೇನೆ ಎಂದಿದ್ದಾರೆ. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಇದು ಸೂಕ್ಷ್ಮವಾದ ವಿಚಾರವಾಗಿದ್ದು, ಎಲ್ಲಾ ಸಾಧಕ-ಬಾಧಕಗಳ ಬಗ್ಗೆ ಕಾನೂನು ತಜ್ಞರ ಜೊತೆ ಮಾತುಕತೆ ನಡೆಸುತ್ತೇವೆ. ನಾವು ಏನೇ ತೀರ್ಮಾನ ಮಾಡಿದರೂ ಅದು ಕಾನೂನು ತಜ್ಞರ ಸಲಹೆ ಪಡೆದು ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿ…
ಹನುಮ ಜಯಂತಿ ಅಂಗವಾಗಿ ನಗರದಲ್ಲಿ ಶ್ರೀ ಹನುಮ ಜಯಂತ್ಯುತ್ಸವ ಸಮಿತಿವತಿಯಿಂದ ಶ್ರೀ ಆಂಜನೇಯಸ್ವಾಮಿಯ ಬೃಹತ್ ಮೂರ್ತಿಯ ಮೆರವಣಿಗೆ ಸಾವಿರಾರು ಭಕ್ತರ ಹಾಗೂ ವಿವಿಧ ಸಾಂಸ್ಕೃತಿ ಕಲಾತಂಡಗಳೊಂದಿಗೆ ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ವಿಜೃಂಭಣೆಯಿಂದ ಜರುಗಿತು.ನಗರದ ಹಳೆ ಬಸ್ ನಿಲ್ದಾಣದಲ್ಲಿರುವ ಅಭಯ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಹನುಮಂತನ ಉತ್ಸವ ಮೂರ್ತಿಗೆ ಅರಳುಕೋಟೆ ಆಂಜನೇಯಸ್ವಾಮಿ ದೇಗುಲದ ಅರ್ಚಕ ಶ್ರೀನಿಧಿ, ರಾಮಕೃಷ್ಣ ಭಾರಧ್ವಜ್ ಹಾಗೂ ಶ್ರೀ ಹನುಮ ಜಯಂತ್ಯುತ್ಸವ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಅಲಂಕೃತ ವಾಹನಗಳಲ್ಲಿ ನಗರದ ಹಳೇ ಬಸ್ ನಿಲ್ದಾಣದಿಂದ ಹೊರಟ ಹನುಮ ಹಾಗೂ ಶ್ರೀರಾಮನ ಉತ್ಸವ ಮೂರ್ತಿಯ ಮೆರವಣಿಗೆ ಚಿಕ್ಕ ಅಂಗಡಿಬೀದಿ, ಸಂತೇರಮಹಳ್ಳಿ ವೃತ್ತ, ಡೀವಿಯೇಷನ್ ರಸ್ತೆ ಮೂಲಕ ಗುಂಡ್ಲುಪೇಟೆ ವೃತ್ತ ತಲುಪಿ ದೊಡ್ಡಂಗಂಡಿ ಬೀದಿಯಲ್ಲಿ ತೆರಳಿ ಬಳಿಕ ವೀರಭದ್ರೇಶ್ವರಸ್ವಾಮಿ ದೇಗುಲದ ಮೂಲಕ ಹಳೆ ಬಸ್ ನಿಲ್ದಾಣ ತಲುಪಿ ಮೆರವಣಿಗೆ ಶ್ರೀ ಅಭಯ ಆಂಜನೇಯಸ್ವಾಮಿ ದೇಗುಲದ ಎದುರು ಕೊನೆಗೊಂಡಿತು. ಮೆರವಣಿಗೆಯಲ್ಲಿ ವೀರಗಾಸಿ ಕುಣಿತ…
ಗದಗ: ಮನೆ ಕಟ್ಟುವಂತ ಕೆಲಸ ಮಾಡಬೇಕು ವಿನಃ ಮನೆ ಒಡೆಯುವ ಕೆಲಸ ಮಾಡಬಾರದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟಾಂಗ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತ್ಯೇಕ ಲಿಂಗಾಯತ ಕೂಗು ಶೆಟ್ಟರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರ ಮಾತನ್ನು ಕೇಳಿದೆ. ಕಳೆದ ಬಾರಿ ಸಿದ್ದರಾಮಯ್ಯ ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಅನ್ನುವುದು ಖಾತ್ರಿ ಆದ ಬಳಿಕ ವೀರಶೈವ ಲಿಂಗಾಯತ ಸಮಾಜವನ್ನು ಪ್ರತ್ಯೇಕ ಧರ್ಮ ಅಂತ ಬೆಂಕಿ ಹಚ್ಚುವ ಕೆಲಸ ಮಾಡಿದರು ಎಂದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗವಾಗಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಷಯಕ್ಕೆ ಕೈ ಹಾಕಬಾರದು ಅಂತ ಕ್ಷಮೆಯಾಚನೆ ಮಾಡಿದ್ದರು. ಸ್ವಾರ್ಥ ರಾಜಕಾರಣಕ್ಕಾಗಿ ಕಾಂಗ್ರೆಸ್ನವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ ಎಂಬುದು ಮತ್ತೊಮ್ಮೆ ರುಜುವಾತಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಐಷಾರಾಮಿ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ ಇದು ಅವಶ್ಯಕತೆ ಇತ್ತಾ ಅಂತ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಜೊತೆಗೆ ಇರುವ ಮಂತ್ರಿ ಫ್ಯಾಷನ್ ಶೋ ಮಾಡಿದ್ದರು. 500ಕ್ಕೂ…
ಹುಬ್ಬಳ್ಳಿ: ರೈತರು ಚಿಕ್ಕ ಭೂಮಿಯಲ್ಲಿಯೇ ಸಮಗ್ರ ಬೆಳೆಗಳನ್ನು ಎಲ್ಲ ಋತುಗಳಲ್ಲಿಯೂ ಬೆಳೆದು ಅಥಿರ್ಕ ಸ್ವಾವಲಂಬಿಗಳಾಗಬೇಕು. ಬಂಜರು ಭೂಮಿಯಲ್ಲಿ ಸಾವಯವ ಕೃಷಿ ಮತ್ತು ಹನಿ ನೀರಾವರಿ ಮೂಲಕ ಆದಾಯ ಗಳಿಸಬಹುದು ಎಂದು ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ ಹೇಳಿದರು. ಇಲ್ಲಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ತಾವು 10 ಎಕರೆಯಲ್ಲಿ ಋತುಗಳಿಗೆ ತಕ್ಕಂತೆ ಬಹು&ಬೆಳೆ ವಿಧಾನವನ್ನು ಬಳಸಿ, ವರ್ಷವಿಡಿ ಆದಾಯ ಗಳಿಸುತ್ತಿದ್ದೇವೆ ಎಂದು ಉದಾಹರಣೆ ಸಮೇತ ಮಾಹಿತಿ ನೀಡಿದ ಅವರು, ನಂಬಿರುವ ಮನುಷ್ಯ ಕೈಬಿಡಬಹುದು. ಆದರೆ, ನಂಬಿದ ಮಣ್ಣು ಎಂದೂ ನಮ್ಮನ್ನು ಕೈಬಿಡುವುದಿಲ್ಲ ಎಂದು ಹೇಳಿದರು. ಅನಂತಪುರದ ಕೃಷ್ಣದೇವರಾಯ ಕೃಷಿ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಡಾ. ಭಾಗಣ್ಣ ಹರಳಯ್ಯ ಅವರು ಮಾತನಾಡಿ, ಬ್ಯಾಡಗಿ ಮೆಣಸಿನಕಾಯಿಯು ಉತ್ಕ್ರಷ್ಟ ಗುಣಮಟ್ಟವನ್ನು ಹೊಂದಿದೆ. ರೈತರು ತಾವು ಬೆಳೆದ ಬೆಳೆಗಳನ್ನು ಸಂಸ್ಕರಿಸಿ ಮೌಲ್ಯವರ್ಧನೆ ಮಾಡಿದಲ್ಲಿ ಹೆಚ್ಚಿನ ಆದಾಯವನ್ನು ಗಳಿಸಬಹುದು ಎಂದರು. ಕಿತ್ತೂರಿನ ಪ್ರಗತಿ ಪರ ರೈತ ಮಹಿಳೆ…
ಹಿರಿಯೂರು : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತಾಂತ್ರಿಕ ಸಮಸ್ಯೆಯಿಂದ ತುರ್ತು ಭೂಸ್ಪರ್ಶವಾದ ಘಟನೆ ಆರನಕಟ್ಟೆ ಗ್ರಾಮದಲ್ಲಿ ಘಟನೆ ಭಾನುವಾರ ನಡೆದಿದೆ. ಸಚಿವರು ಬೆಂಗಳೂರಿನಿಂದ ಗದಗ ಜಿಲ್ಲೆಯ ಸಂಕೇಶ್ವರ ಕಡೆಗೆ ಪ್ರಯಾಣಿಸುತ್ತಿದ್ದಾಗ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಆರನಕಟ್ಟೆ ಗ್ರಾಮದ ವಾಣಿ ವಿಲಾಸ ಪ್ರೌಢಶಾಲಾ ಆವರಣದಲ್ಲಿ ಹೆಲಿಕಾಪ್ಟರ್ ನನ್ನು ತುರ್ತು ಭೂ ಸ್ಪರ್ಶ ಮಾಡಲಾಯಿತು. ಸದ್ಯ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವರು ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ 10.15 ಕ್ಕೆ ಬೆಂಗಳೂರಿನ ಜಕ್ಕೂರು ಏರೋಡ್ರಂನಿಂದ ಟೇಕಾಫ್ ಆಗಿತ್ತು. ಆರನಕಟ್ಟೆ ಬಳಿ 11.30ರ ಸಮಯದಲ್ಲಿ ಆರನಕಟ್ಟೆ ಬಳಿ ತುರ್ತು ಭೂಸ್ಪರ್ಶವಾಗಿಯಿತು. ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾದ ಬಳಿಕ ಸಚಿವರು ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆದರು. ಈ ವೇಳೆ ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸಚಿವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ನಂತರ ಸಚಿವರು…
ಬೆಂಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್ (Corona Virus) ಮತ್ತೆ ಭೀತಿ ಹುಟ್ಟಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಭಾನುವಾರ)33 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದೆ. ಪಾಸಿಟಿವಿ ರೇಟ್ ಕೂಡ ಏರಿಕೆ ಕಂಡಿದ್ದು, https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ 7.35 % ಆಗಿದೆ. ಬೆಂಗಳೂರು ನಗರದಲ್ಲಿ ದಿನೇ ದಿನೇ ಕೊರೊನಾ (Covid-19) ಕೇಸ್ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇಂದು ನಗರದಲ್ಲಿ 95 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಆ ಮೂಲಕ ದಿನದ ಕೇಸ್ ಶತಕದ ಸನಿಹಕ್ಕೆ ತಲುಪಿದೆ. ಚಾಮರಾಜನಗರದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಮಂಡ್ಯದಲ್ಲಿ 1, ಮೈಸೂರಿನಲ್ಲಿ 6, ಶಿವಮೊಗ್ಗದಲ್ಲಿ 1 ಪ್ರಕರಣ ವರದಿಯಾಗಿದೆ. ಕೊರೊನಾದಿಂದಾಗಿ ಇಂದು 323 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 21 ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 7 ಮಂದಿ ಐಸಿಯುನಲ್ಲಿದ್ದಾರೆ.
ತಮಿಳುನಾಡು: ರಾಜ್ಯ ಮೈಚೌಂಗ್ ಚಂಡಮಾರುತದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಭಾರೀ ಮಳೆಯಿಂದ ಬಹುತೇಕ ಗ್ರಾಮಗಳು ಮುಳುಗಡೆಯ ಜೊತೆಗೆ ಸಾವಿರಾರು ಎಕರೆ ಬೆಳೆಗಳಿಗೆ ಹಾನಿಯುಂಟಾಗಿದೆ. ಭಾರೀ ಮಳೆಗೆ ಹಲವು ಮನೆಗಳು ಕುಸಿದಿದ್ದು, ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಪ್ರವಾಹ ದ ತೀವ್ರತೆ ಕಡಿಮೆಯಾಗಿದ್ದರೂ ಸಹ ಕೆಸರು ತುಂಬಿ ತೀವ್ರ ತೊಂದರೆಯಾಗುತ್ತಿದೆ. ಇಂತಹ ಸನ್ನಿವೇಶಗಳ ನಡುವೆ ಕೇಂದ್ರ ಸರ್ಕಾರ ಜನರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದ್ದು, ಸ್ವತಹ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧೈರ್ಯ ಹೇಳಿದ್ದಾರೆ. ಪ್ರವಾಹದ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಈ ಪರಿಸ್ಥಿತಿಯಲ್ಲಿ ರಾಜ್ಯವನ್ನು ಬೆಂಬಲಿಸಲು ಇಂದು ಪಿಎಂಒದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಎನ್‌ಡಿಆರ್‌ಎಫ್ ಮತ್ತು ಹೆಲಿಕಾಪ್ಟರ್ ಸೇರಿದಂತೆ ಸಶಸ್ತ್ರ ಪಡೆಗಳ ನಿಯೋಜನೆಯ ಹೆಚ್ಚಿನ ಅಗತ್ಯತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ವಾರದ ಹಿಂದೆ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು. ಸದ್ಯ ಪ್ರವಾಹ ಸಂತ್ರಸ್ತರಿಗೆ ಆಹಾರ, ಉತ್ತಮ ನೀರು ಪೂರೈಕೆ ಮಾಡಲಾಗುತ್ತಿದೆ.
ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಅಲಂಕಾರದ ವಿಚಾರಕ್ಕೆ ಮಾಲ್‌ಗೆ ನುಗ್ಗಿ ಗಲಾಟೆ ಮಾಡಿರೋ ಆರೋಪ ಹಿನ್ನೆಲೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್‌ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ. ನಿನ್ನೆ ಏಷ್ಯಾ ಮಾಲ್ ಬಳಿ ಹೋಗಿದ್ದ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು. ಈ ವೇಳೆ ಯಾಕೆ ಕ್ರಿಸ್ಮಸ್ ಟ್ರೀ ಗಳ ಅಲಂಕಾರ ಮಾಡಿದ್ದೀರ ಅಂತಾ ಮಾಲ್ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿರುವ ಪುನೀತ್ ಕೆರೆಹಳ್ಳಿ, https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಸಹಚರರು. ಕ್ರಿಸ್‌ಮಸ್ ಟ್ರೀ ಅಲಂಕಾರ ಮಾಡಿದ್ದಲ್ಲದೇ 200 ರೂ ಎಂಟ್ರಿ ಫೀಸ್ ಬೇರೆ ಇಟ್ಟಿದ್ದೀರಾ? ಇದಕ್ಕೆ ಕಾನೂನು ಇದ್ಯಾ? ಹಿಂದೂ ಹಬ್ಬಗಳಿಗೆ ನೀವು ಇದೇ ರೀತಿಯ ಅಲಂಕಾರ ಮಾಡ್ತೀರ? 22-01-24 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದೆ. ಅವತ್ತೂ ಹೀಗೆ ಅಲಂಕಾರ ಮಾಡಬೇಕು. ಮಾಡದಿದ್ರೆ ಮಾಲ್ ಮುಂದೆ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಹಿನ್ನೆಲೆ ಎಫ್‌ಐಆರ್ ದಾಖಲು ಮಾಡಲಾಗಿದೆ.
ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಜೊತೆಗಿನ ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಆದ ಬಳಿಕ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನನಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸಂಚಲನ ಸೃಷ್ಟಿಸುವ ಭರವಸೆ ಮೂಡಿಸಿದೆ. ಈ ಭೇಟಿ ಸ್ಫೂರ್ತಿದಾಯಕ ಅಂತ ಕುಮಾರಸ್ವಾಮಿ ತಿಳಿಸಿದರು. ದೇವೇಗೌಡರ ಜತೆಗೂ ಪ್ರಧಾನಿಯವರು ಆತ್ಮೀಯವಾಗಿ ಮಾತಾಡಿದ್ದಾರೆ. ಈ ಸಲ ಲೋಕಸಭೆ ಚುನಾವಣೆಯಲ್ಲಿ ನಾವು ಎಲ್ಲಾ ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಹೇಳಿದರು. “ಪ್ರಧಾನಿಯವರ ಜತೆ ಟಿಕೆಟ್ ಹಂಚಿಕೆ ವಿಚಾರವಾಗಿ ಏನೂ ಮಾತಾಡಿಲ್ಲ ಅಂತ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಆದರೆ ಈ ವಿಚಾರದಲ್ಲಿ ಯಾವುದೇ ತಕರಾರು ಇಲ್ಲ. ಸೀಟು ಹಂಚಿಕೆಯಲ್ಲಿ ಒಂದು ಸೀಟ್ ಹೆಚ್ಚು ಕಡಿಮೆ ಆದರೂ ನಡೆಯುತ್ತದೆ ಎಂದಿದ್ದಾರೆ.