ಶಿವಮೊಗ್ಗ : ರಾಜ್ಯದಲ್ಲಿ ಹಿಜಾಬ್ ರಾಜಕಾರಣ ಮಾಡಲು ಯತ್ನಿಸಿ ಮುಸಲ್ಮಾನರನ್ನು ಓಲೈಸಬೇಕು ಎಂದು ಯತ್ನಿಸಿದ್ದ ಸಿದ್ದರಾಮಯ್ಯ ಅವರ ಯತ್ನ. ಇದರ ವಿರುದ್ಧ ಬಿಜೆಪಿಯ ವಿರೋಧ, ಹಿಂದುತ್ವದ ಶಕ್ತಿ ಗಮನಿಸಿ ಸಿಎಂ ಉಲ್ಟಾ ಹೊಡೆದಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ನಾನು ಹಾಗೆ ಹೇಳಿಲ್ಲ. ಪರಿಶೀಲನೆ ಮನನ ಮಾಡುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಹಿಂದುಗಳಿಂದ ವ್ಯಕ್ತವಾದ ವಿರೋಧ ಗಮನಿಸಿ ಹೀಗೆ ಹೇಳಿದ್ದಾರೆ ಎಂದು ಕುಟುಕಿದ್ದಾರೆ. ಕಾನೂನು ಸಚಿವರು ಸಿಎಂ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ? ಎಂದು ಹೇಳಿದ್ದಾರೆ. ಕಾನೂನು ಸಚಿವರು ಹೀಗೆ ಹೇಳುವುದು ಸರಿಯಲ್ಲ. ಚರ್ಚೆಯೇ ಮಾಡದೆ ಈ ರೀತಿಯಲ್ಲಿ ನಡೆದುಕೊಳ್ಳುವುದು ಸರಿಯಲ್ಲ. ಅದಕ್ಕೆ ನಾನು ಸಿದ್ದರಾಮಯ್ಯ ಅವರದ್ದು ತೊಘಲಕ್ ದರ್ಬಾರ್ ಎಂದು ಹೇಳಿದ್ದು ಎಂದು ಕಿಡಿಕಾರಿದ್ದಾರೆ.
Author: AIN Author
ಕೊಪ್ಪಳ: ಹನುಮಮಾಲೆ ವಿಸರ್ಜನೆ ಅಂಗವಾಗಿ ಶನಿವಾರ ಮಧ್ಯರಾತ್ರಿಯೇ ಹನುವನಿಗೆ ತರಹೇವಾರಿ ಬಣ್ಣಗಳ ಹೂಗಳಿಂದ ಮೂರ್ತಿಯನ್ನು ಅಲಂಕಾರ ಮಾಡಲಾಗಿತ್ತು. ನಾಡಿನ ವಿವಿದೆಡೆ ಹನುಮಮಾಲಾ ಧಾರಿಗಳಿಂದ ಮಾಲೆ ವಿಸರ್ಜನೆ ಮಾಡಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. 575 ಮೆಟ್ಟಿಲುಗಳನ್ನು ಹತ್ತಿ ಬಂದು ಮಾಲೆ ವಿಸರ್ಜನೆ ಮಾಡುತ್ತಿರುವ ಹನುಮ ಭಕ್ತರು ಹನುಮಮಾಲಾ ವಿಸರ್ಜನೆ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇನ್ನೂ ಶನಿವಾರವೂ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರಿಂದ ಅವರ ಸಂಖ್ಯೆ ಭಾನುವಾರ ಕೂಡ ಹೆಚ್ಚುತ್ತಲೇ ಹೋಯಿತು. ಹೊತ್ತು ಏರುತ್ತಿದ್ದಂತೆಯೇ ಸಾಲುಸಾಲಾಗಿ ಬರುತ್ತಿರುವ ಭಕ್ತರನ್ನು ನಿಯಂತ್ರಿಸಲು ಹಾಗೂ ಸರತಿ ಸಾಲಿನಲ್ಲಿ ಕಳಿಸಲು ಪೊಲೀಸರು ಎರಡು ದಿನಗಳಿಂದ ಸರತಿ ಮೇಲೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದಂತೆಯೇ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಅಂಜನಾದ್ರಿಗೆ ಬರುತ್ತಿದ್ದಾರೆ. ಅವರಿಗೆ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಲಾಗಿದೆ.
ವಿಜಯಪುರ: ಯಡ್ಡಿಯೂರಪ್ಪನವರದ್ದು ಕೆಜೆಪಿ 1, ಇದು ಕೆಜೆಪಿ 2, ಮೊಮ್ಮಗನದು ಕೆಜೆಪಿ 3 ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda Patil Yatnal) ಬಿಜೆಪಿ ರಾಜ್ಯ ಘಟಕದ ನೂತನ ಪಟ್ಟಿಗೆ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಪಟ್ಟಿಯ ಆಯುಷ್ಯ 2024ರ ಲೋಕಸಭೆ ಚುನಾವಣೆ. 28 ಸೀಟ್ ತರುತ್ತೇನೆ ಅಂತಾ ಹೇಳಿದ್ದಾರೆ. 28 ರಲ್ಲಿ ಒಂದು ಕಡಿಮೆ ಬಿದ್ದರೂ ಚಿಕ್ಕಮಕ್ಕಳು ಹೇಗೆ ಸಿಗರೇಟ್ ಪ್ಯಾಕ್ ಮನೆ ಮಾಡಿರ್ತಾರೆ ಆ ರೀತಿಯಾಗಿ ಈ ಪಟ್ಟಿ ಹಾಗೆ ಬಿದ್ದು ಹೋಗುತ್ತದೆ ಎಂದರು ಈಗ ರಾಜಕೀಯದಲ್ಲಿ ಏನಾಗಿದೆ ಎಂದರೆ ಲಂಪಟರು ಬಹಳ ಇದ್ದಾರೆ. ಅವರೆಲ್ಲ ಹಲ್ಕಾ ಕೆಲಸ ಮಾಡುತ್ತಾರೆ. ಇವತ್ತು ಮೌಲ್ಯಾಧಾರಿತ ರಾಜಕಾರಣ ಇಲ್ಲ. ಎಲ್ಲಾ ಕಳ್ಳರು, ಲಫಂಗರು ಹೆಚ್ಚು ಸೇರುತ್ತಿದ್ದಾರೆ. ಒಳ್ಳೆಯವರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಾರೆ. 2024 ರ ಚುನಾವಣೆಯ ನಂತರ ಮೇಜರ್ ಆಪರೇಷನ್ ಮಾಡದೇ ಇದ್ದರೆ ಮುಂದಿನ ನಿರ್ಣಯ ನಾನು ಮಾಡುತ್ತೇನೆ ಎಂದು ಹೇಳಿದರು. ಸಾರ್ವಜನಿಕ ಕೆಲಸ ಮಾಡಲು, ಕ್ರಾಂತಿ ಮಾಡಲು…
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯವಾಗಿದ್ದ ಪ್ರಕರಣದಲ್ಲಿ ಇಂದು ಓರ್ವ ವ್ಯಕ್ತಿ ಸೇರಿದಂತೆ ಒಂದು ಮಗು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಮಂಗಳವಾರ ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ನಡೆದಿದ್ದ ಘಟನೆಯಾಗಿದೆ ಸಂದೇಶ್ (30) , ರೋಹನ್ (2.5) ಸಾವನ್ನಪ್ಪಿದ್ದು ಸೆಂಟ್ ಜೋಸೆಪ್ ನಲ್ಲಿ ಮೊದಲು ಚಿಕಿತ್ಸೆ ಪಡೆಯುತ್ತಿದ್ರೂ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದಾರೆ ಇನ್ನೂಳಿದ ಮೂವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಬೇಗೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್ ಪ್ರಕರಣವಾಗಿದ್ದು.
ಚಿಕ್ಕಮಗಳೂರು: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಏಕತೆ ಬೆಳೆಯಲಿ ಎಂಬ ಕಾರಣಕ್ಕೆ ಶಾಲೆಗಳಲ್ಲಿ ಮಾತ್ರ ಸಮವಸ್ತ್ರ ಕಡ್ಡಾಯಗೊಳಿಸಿ ಹಿಜಬ್ (Hijab) ನಿಷೇಧಿಸಲಾಗಿತ್ತು. ಆದ್ರೆ ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್‌ಗೆ ನಿಷೇಧ ಹೇರಿರಲಿಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿ (CT Ravi) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಬ್ ನಿಷೇಧ ಮಾಡಿರಲಿಲ್ಲ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಲಾಗಿತ್ತು. ಸಿದ್ದರಾಮಯ್ಯ (Siddaramaiah) ಸಮವಸ್ತ್ರಕ್ಕೆ ಹಿಜಬ್ ಜೋಡಿಸುತ್ತಾರೋ ಅಥವಾ ಸಮವಸ್ತ್ರ ಕಡ್ಡಾಯ ಅನ್ನೋದನ್ನೇ ತೆಗೆಯುತ್ತಾರೋ ಗೊತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಹಿಜಬ್ ನಿಷೇಧ ಆಗಿರಲಿಲ್ಲ. ಕೇವಲ ಶಾಲೆ-ಕಾಲೇಜುಗಳಲ್ಲಿ 1964 ಶಿಕ್ಷಣ ಕಾಯ್ದೆ ಪ್ರಕಾರ ಯೂನಿಫಾರಂ ಕಡ್ಡಾಯ ಮಾಡಲಾಗಿತ್ತು ಎಂದು ಹೇಳಿದ್ದಾರೆ. ಕಾಲೇಜು ಆಡಳಿತ ಮಂಡಳಿ ತೀರ್ಮಾನಿಸುವ ಸಮವಸ್ತ್ರ ಪಾಲಿಸಬೇಕು ಅಂತ ನಿಯಮವಿತ್ತು. ಆದ್ರೆ ಈಗ ಮುಖ್ಯಮಂತ್ರಿಗಳು ಎಲ್ಲಾ ಯೂನಿಫಾರಂಗೂ ಹಿಜಬ್ ಕಡ್ಡಾಯ ಮಾಡಲು ಹೊರಟಿದ್ದಾರೋ ಅಥವಾ ಅವರಿಷ್ಟದಂತೆ ಮಾಡಲು ಹೊರಟಿದ್ದಾರೋ ಎಂಬುದನ್ನು ಸ್ಪಷ್ಟಪಡಿಸಬೇಕು. ಮಕ್ಕಳಿಗೆ ಯೂನಿಫಾರಂ ಕಡ್ಡಾಯಗೊಳಿಸಿದ್ದು, ಬಡವ ಬಲ್ಲಿದ ಅಂತ ಭೇದ ಇರಬಾರದು, ಜಾತಿಯ ತಾರತಮ್ಯ ಇರಬಾರದು, ನಾವೆಲ್ಲರೂ…
ಕಲಬುರಗಿ: ಕಾಂಗ್ರೆಸ್ ಮುಖಂಡನ ಪುತ್ರ ಭೀಕರವಾಗಿ ಕೊಲೆಯಾಗಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಳಂದ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದ್ದು ಕೈ ಲೀಡರ್ ಬಸವರಾಜ್ ಚೌಲೆಯ ಪುತ್ರ ಚಂದ್ರಶೇಖರ್ ಕೊಲೆಯಾದ ದುರ್ದೈವಿಯಾಗಿದ್ದಾನೆ. https://ainlivenews.com/hijab-ban-back-siddaramaiahs-statement-sparks-page/ KMF ಅಧ್ಯಕ್ಷ ಆರ್ ಕೆ ಪಾಟೀಲ್ PA ಆಗಿರುವ ಬಸವರಾಜ ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಪ್ರಭಾವಿ ಎನ್ನಲಾಗಿದೆ.ಕೊಲೆಯಾದ ಚಂದ್ರಶೇಖರ್ ಗೆಳೆಯ ಮಿಲನ್ ಕೊಲೆ ಮಾಡಿರೋ ಶಂಕೆ ಹಿನ್ನಲೆ ಆರೋಪಿಯನ್ನ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಎಣ್ಣೆ ಪಾರ್ಟಿ ಮಾಡಲು ಗೆಳೆಯರಿಬ್ಬರು ಸೇರಿದ್ದಾರೆ.ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಅಂತ ಹೇಳಲಾಗ್ತಿದೆ..
ಕಲಬುರಗಿ: ಶಾಸಕ ಬಿ.ಆರ್ ಪಾಟೀಲ್ (BR Patil) ಆಪ್ತರೂ ಆಗಿರುವ ಕಾಂಗ್ರೆಸ್ ಮುಖಂಡ (Congress Leader) ಬಸವರಾಜ್ ಚೌಲ್ ಪುತ್ರನನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಆಳಂದ (Aland) ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಘಟನೆ ನಡೆದಿದ್ದು, ಕಾಂಗ್ರೆಸ್ ಮುಖಂಡನ ಪುತ್ರ ಚಂದ್ರಶೇಖರ್ ಚೌಲ್ (21) ಹತ್ಯೆಗೀಡಾಗಿದ್ದಾನೆ. ಚಂದ್ರಶೇಖರ್ ಚೌಲ್ ಸ್ನೇಹಿತರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಆಳಂದ ಪಟ್ಟಣದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ
ಬೆಳಗಾವಿ : ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ನಿಗಿನಿಗಿ ಕೆಂಡವಾಗಿದ್ದಾರೆ. ಇನ್ನೂ ಈ ಬಗ್ಗೆ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಸಿದ್ದರಾಮಯ್ಯ ರಾಜ್ಯದ ಎಲ್ಲರ ಮುಖ್ಯಮಂತ್ರಿ ಆಗಿದ್ದಾರೆಯೇ ಹೊರತು ಯಾವುದೇ ಒಂದು ಪಂಗಡದ ಮುಖ್ಯಮಂತ್ರಿ ಅಲ್ಲ’ ಎಂದು ತಿಳಿಸಿದ್ದಾರೆ. ‘ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವುದರಿಂದ ಸಮಾಜದಲ್ಲಿ ದೊಡ್ಡ ಕ್ಷೋಭೆ ಉಂಟು ಮಾಡಬಹುದು. ಕಾನೂನು ಮಾಡಲಿ. ಆದರೆ, ಅದು ಸಮಾಜದಲ್ಲಿ ಒಂದು ಪಂಗಡವನ್ನು ಮಾತ್ರ ಗುರಿಯಾಗಿರಿಸಿಕೊಂಡು ಮಾಡುವುದು ಸರಿಯಲ್ಲ’ ಎಂದು ಹೇಳಿದ್ದಾರೆ.
ಈ ಹಿಂದೆ ‘ಮಂಡ್ಯದ ಹುಡುಗರು’, ‘ಗರ್ನಲ್’ ಚಿತ್ರಗಳನ್ನು ನಿರ್ದೇಶಿಸಿದ್ದ ಜೆ.ಜೆ.ಶ್ರೀನಿವಾಸ್ (Srinivas)ನಿರ್ದೇಶಿಸಿ ಹಾಗೂ ನಿರ್ಮಾಣವನ್ನು ಮಾಡುತ್ತಿರುವ ‘ಡಿಟೆಕ್ಟಿವ್ ಗಜವದನ’ (Detective Gajavadana)ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಇಟ್ಟಮಡುವಿನ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಕನ್ನಡ ಚಿತ್ರರಂಗದ ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಕಲಾವಿದನಾಗಿ ಸಕ್ರಿಯರಾಗಿರುವ ಬಸು ಕುಮಾರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ಇದು ನನ್ನ ನಿರ್ದೇಶನದ ಮೂರನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಜೆ.ಜೆ ಶ್ರೀನಿವಾಸ್, ಡಿಟೆಕ್ಟಿವ್ ಗಜವದನ ಚಿತ್ರದ ಚಿತ್ರೀಕರಣ ಇಂದಿನಿಂದ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಹೆಚ್ಚು ಚಿತ್ರೀಕರಣ ನಡೆಯಲಿದೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ ಇದಾಗಿದೆ. ಉತ್ತಮ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬರುವ ಭರವಸೆಯಿದೆ ಎಂದರು. ನಾನು ಡಿಟೆಕ್ಟಿವ್ ಗಜವದನ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಾನು ಚಿತ್ರದಲ್ಲಿ ಡಿಟೆಕ್ಟಿವ್‌ಆಗಿರುವುದಿಲ್ಲ. ನನ್ನ ಕುಟುಂಬ…
ಬಿಗ್ ಬಾಸ್ ಮನೆಯ (Bigg Boss Kannada 10) ಆಟ 76 ದಿನಗಳನ್ನ ಪೂರೈಸಿ ಮುನ್ನುಗ್ಗುತ್ತಿದೆ. ಹೀಗಿರುವಾಗ ದೊಡ್ಮನೆಯಲ್ಲಿ ‘ಚಾರ್ಲಿ’ ಸುಂದರಿ ಸಂಗೀತಾ ಶೃಂಗೇರಿ (Sangeetha Sringeri) ಕೂಡ ಸಹ ಸ್ಪರ್ಧಿಗಳಿಗೆ ಪೈಪೋಟಿ ನೀಡುತ್ತಿದ್ದಾರೆ. ಇನ್ನೂ ಕೆಲ ಕಿಡಿಗೇಡಿಗಳು ಸಂಗೀತಾ ಅಭಿಮಾನಿಗಳು ಎನ್ನುವ ಸೋಗಿನಲ್ಲಿ ಬೇರೇ ಸ್ಪರ್ಧಿಗಳ ಹೆಸರನ್ನ ಟಾರ್ಗೆಟ್ ಮಾಡಿ ಅಪಪ್ರಚಾರ ಮಾಡುತ್ತಿರೋದು ನಟಿಯ ಕುಟುಂಬದ ಗಮನಕ್ಕೆ ಬಂದಿದೆ. ಸಂಗೀತಾ ಅತ್ತಿಗೆ ಸುಚಿತ್ರಾ ಅವರು ಈ ಬಗ್ಗೆ ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ. ಇದೀಗ ಸಂಗೀತಾ ಅತ್ತಿಗೆ ಸುಚಿತ್ರಾ, ಕೆಲವರು ಫೇಕ್ ಅಕೌಂಟ್ ಸೃಷ್ಟಿ ಮಾಡಿ, ಪ್ರತಿಸ್ಪರ್ಧಿಗಳ ಮೇಲೆ ಆರೋಪ ಮಾಡುತ್ತಿದ್ದಾರಂತೆ. ಪ್ರಸ್ತುತ ‘ಬಿಗ್ ಬಾಸ್’ ಸಂಗೀತಾ ಕುಟುಂಬದವರು ಈ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಧ್ವನಿಯೆತ್ತಿದ್ದಾರೆ. ಸಂಗೀತಾಳ ಅಭಿಮಾನಿಗಳು ಎನ್ನುವ ಸೋಗಿನಲ್ಲಿ ಅವಳ ಹೆಸರಿನಲ್ಲಿ ಫೇಕ್ ಅಕೌಂಟ್ಸ್ ಸೃಷ್ಟಿ ಮಾಡಿ, ಅನ್ಯ ಸ್ಪರ್ಧಿಗಳ ಮೇಲೆ ಸುಳ್ಳು ಪ್ರಚಾರಗಳನ್ನು ಮಾಡುತ್ತ, ಸಂಗೀತಾತಾ ಹೆಸರನ್ನು ಎಳೆಯುತ್ತಾ ಸುಮ್ಮ ಸುಮ್ಮನೆ ನಿಮ್ಮ ಕಪಿ…