ನ್ಯೂಯಾರ್ಕ್: ಅಮೆರಿಕಾದ ಕ್ಯಾಲಿಫೋರ್ನಿಯಾದ (California) ನೆವಾರ್ಕ್ ಸಿಟಿಯಲ್ಲಿ (Newark City) ಹಿಂದೂ ದೇವಾಲಯದ ಗೋಡೆಯಲ್ಲಿ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆಯಲಾಗಿದೆ. ಈ ಕುರಿತು ಇದೀಗ ಭಾರೀ ಖಂಡನೆ ವ್ಯಕ್ತವಾಗುತ್ತಿದೆ. ಹಿಂದೂ ಅಮೇರಿಕನ್ ಫೌಂಡೇಶನ್ ತನ್ನ ಎಕ್ಸ್ ಖಾತೆಯಲ್ಲಿ, ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ (Swaminarayan Mandir Vasana Sanstha) ಗೋಡೆಗಳ ಮೇಲೆ ಘೋಷಣೆಗಳನ್ನು (Pro-Khalistani Slogans) ಬರೆದಿರುವ ಫೋಟೋಗಳನ್ನು ಹಂಚಿಕೊಂಡಿದೆ. ಫೋಟೋದಲ್ಲಿ, ದೇಗುಲದ ಗೋಡೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಭಾರತದ (India) ವಿರುದ್ಧ ದ್ವೇಷಪೂರಿತ ಬರಹಗಳನ್ನು ಬರೆಯಲಾಗಿದೆ. ಘಟನೆಯ ಕುರಿತು ಸಂಪೂರ್ಣ ತನಿಖೆಯಾಗಬೇಕು ಎಂದು ಪ್ರತಿಷ್ಠಾನ ಒತ್ತಾಯಿಸಿದೆ. ಅಲ್ಲದೆ ಈ ಕುರಿತು ನೆವಾರ್ಕ್ ಪೊಲೀಸ್ ಇಲಾಖೆ ಹಾಗೂ ನ್ಯಾಯಾಂಗ ನಾಗರಿಕ ಹಕ್ಕುಗಳ ವಿಭಾಗಕ್ಕೆ ದೂರು ನೀಡಿದೆ. ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಯ ಮೇಲೆ ಬರೆದಿರುವ ದ್ಷೇಷದ ಬರಹಗಳನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಖಂಡಿಸಿದೆ. ಇದನ್ನು ಬರೆದಿರುವ ಕಿಡಿಗೇಡಿಗಳ ವಿರುದ್ಧ ತ್ವರಿತ ತನಿಖೆ ಮತ್ತು ಕಠಿಣ ಕ್ರಮಕ್ಕಾಗಿ…
Author: AIN Author
ಮಂಡ್ಯ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದಲೇ ಸ್ಪರ್ಧೆ ಖಚಿತ. ಈ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ. ಮುಂದೆ ಎಲ್ಲ ವಿಷಯವನ್ನೂ ತಿಳಿಸುತ್ತೇನೆ ಎಂದು ತಿಳಿಸಿದರು. ಮಂಡ್ಯ ಸೇರಿದಂತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಂಸತ್ ಅಧಿವೇಶನದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇನೆ. ಕಾವೇರಿ ವಿಚಾರ ಎಂದು ಬಂದಾಗ ನಾವು ಒಬ್ಬರನ್ನು ದೂಷಿಸುವುದು ಸರಿಯಲ್ಲ. ನ್ಯಾಯಾಲಯಗಳಲ್ಲಿ ಎಂದೂ ಕರ್ನಾಟಕಕ್ಕೆ ನ್ಯಾಯ ದೊರೆತಿಲ್ಲ. ಎರಡೂ ರಾಜ್ಯ ಸರ್ಕಾರಗಳು ಕುಳಿತು ಮಾತನಾಡಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು. ಇನ್ನು ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ, ಕ್ಷೇತ್ರ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಮೈತ್ರಿ ವಿಚಾರ ನನಗೆ ಗೊತ್ತಿಲ್ಲ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದೂ ಇಲ್ಲ ಎಂದು ಜಾಣ್ಮೆಯ ಉತ್ತರ ನೀಡಿದರು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆ ಮಂಜು ಕವಿದ ವಾತವರಣವಿದ್ದು ಮೈ ನಡುಗುವಂತೆ ಚಳಿ ಆವರಿಸಿದೆ. ರಾಜ್ಯದಲ್ಲಿಂದು ಬಹುತೇಕ ಕಡೆಗಳಲ್ಲಿ ಒಣಹವೆ ಇರಲಿದೆ. 48 ಗಂಟೆಯಲ್ಲಿ ತಾಪಮಾನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಖ್ಯವಾಗಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಇದರಿಂದ ಚಳಿಯು ಹೆಚ್ಚಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ತಾಪಮಾನ ಇಳಿಕೆ ಆಗಲಿದೆ. ಇದರಿಂದಾಗಿ ಥಂಡಿ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಮೈಸೂರು, ರಾಮನಗರ, ಮಂಡ್ಯ, ತುಮಕೂರು, ವಿಜಯನಗರದಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ಜತೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ಮೋಡ ಕವಿದ ವಾತಾವರಣ…
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 (Covid-19) ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಇಂದು (ಭಾನುವಾರ) ಒಂದೇ ದಿನ 104 ಪಾಸಿಟಿವ್ ಕೇಸ್ ವರದಿಯಾಗಿವೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಶನಿವಾರ 8 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271 ಕ್ಕೆ ಏರಿಕೆ ಕಂಡಿದೆ. ಕೊರೊನಾ ಪಾಸಿಟಿವಿಟಿ ದರ 5.93% ಇದೆ. ಸಿಲಿಕಾನ್ ಸಿಟಿ ಬೆಂಗಳೂರು ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ನಗರದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಏರಿಕೆ ಕಂಡಿದ್ದು, ಭೀತಿ ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ 85 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಚಾಮರಾಜನಗರ ಜಿಲ್ಲೆಯಲ್ಲಿ 2, ದಕ್ಷಿಣ ಕನ್ನಡದಲ್ಲಿ 1, ಮಂಡ್ಯ 1, ಮೈಸೂರು 7, ಶಿವಮೊಗ್ಗ 6, ತುಮಕೂರಿನಲ್ಲಿ 2 ಪ್ರಕರಣಗಳು ದೃಢಪಟ್ಟಿವೆ. ಪ್ರವಾಸಕ್ಕೆಂದು ಸಿಂಗಾಪುರಕ್ಕೆ ತೆರಳಿದ್ದ ಮಂಡ್ಯ ಮೂಲದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಸಿಂಗಾಪುರ ಪ್ರವಾಸ ಮುಗಿಸಿ ಕಳೆದ ಮೂರು ದಿನಗಳ ಹಿಂದೆ ಮಂಡ್ಯಗೆ ವ್ಯಕ್ತಿ ವಾಪಸಾಗಿದ್ದ. ಆತನಿಗೆ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು.…
ಸೌತ್ ಇಂಡಿಯಾ ಸಿನಿಮಾದ ಮೂಲಕ ಕನ್ನಡ ಚಿತ್ರೋದ್ಯಮದಲ್ಲಿ ಮಿಂಚಿದ್ದ ನಟಿ ಕಾಶಿಮಾ ರಫಿ (Kashima Rafi) ಇದೀಗ ಮತ್ತೊಂದು ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ರಾಜೇಶ್ ಎನ್ನುವವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಕೂಡ ಶುರುವಾಗಿದೆ. ಕಾಶಿಮಾ ರಫಿ ಅವರಿಗೆ ಮಹಿಳಾ ಪ್ರಧಾನ ಸಿನಿಮಾದಲ್ಲಿ ನಟಿಸಬೇಕು ಎನ್ನುವುದು ಬಹುದಿನಗಳ ಆಸೆಯಂತೆ. ಈ ಸಿನಿಮಾದ ಮೂಲಕ ಅದು ಈಡೇರಿದೆ. ಇಷ್ಟು ಬೇಗ ಇಂಥದ್ದೊಂದು ಅವಕಾಶ ನನಗೆ ಬರುತ್ತದೆ ಎಂದು ನಂಬಿರಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಈ ಚಿತ್ರಕ್ಕೆ ಇನ್ನೂ ಟೈಟಲ್ ಇಟ್ಟಿಲ್ಲ. ಟೈಟಲ್ ಇಡದೇ ಸಿನಿಮಾದ ಚಿತ್ರೀಕರಣವನ್ನು ಶುರು ಮಾಡಿದ್ದಾರೆ ನಿರ್ದೇಶಕರು. ಈ ಚಿತ್ರದಲ್ಲಿ ಕಾಶಿಮಾ ಎರಡು ಶೇಡ್ ಇರುವಂತಹ ಪಾತ್ರವನ್ನು ಮಾಡುತ್ತಿದ್ದಾರಂತೆ. ಒಂದು ಮಹಾರಾಣಿ ಲುಕ್ ಆಗಿದ್ದರೆ, ಮತ್ತೊಂದು ಪುರಾತತ್ವಶಾಸ್ತ್ರಜ್ಞೆಯ ಪಾತ್ರವಂತೆ. ಈ ಸಿನಿಮಾದಲ್ಲಿ ಸಾಹಸ ಪ್ರಧಾನ ದೃಶ್ಯಗಳಿದ್ದು, ಅದಕ್ಕಾಗಿ ಅವರು ಫೈಟ್ ಕೂಡ ಕಲಿಯುತ್ತಿದ್ದಾರಂತೆ. ಜೊತೆಗೆ ಮತ್ತೊಂದು ಸಿನಿಮಾಗೂ ಅವರು ಸಹಿ ಮಾಡಿದ್ದು,…
ಬಾಲಿವುಡ್ (Bollywood) ಖ್ಯಾತ ನಟ ಸಲ್ಮಾನ್ ಖಾನ್ ಕಿರಿಯ ಸಹೋದರ ಅರ್ಬಾಜ್ ಖಾನ್ (Arbaaz Khan) ಮದುವೆ ಇದೇ ಡಿಸೆಂಬರ್ 24ರಂದು ನಡೆಯಲಿದೆ. ಮೇಕಪ್ ಆರ್ಟಿಸ್ಟ್ ಶುರಾ ಖಾನ್ (Shura Khan) ಜೊತೆ ಅರ್ಬಾಜ್ ಮದುವೆ (Marriage) ನಡೆಯಲಿದ್ದು, ಮುಂಬೈನಲ್ಲಿರುವ ಕುಟುಂಬದ ಸದಸ್ಯರು ಮತ್ತು ಆತ್ಮೀಯರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಮಲೈಕಾ ಅರೋರಾ ಜೊತೆ ಅರ್ಬಾಜ್ 1998ರಲ್ಲಿ ಮದುವೆ ಆಗಿದ್ದರು. ನಂತರ ಇಬ್ಬರೂ ಡಿವೋರ್ಸ್ ಪಡೆದುಕೊಂಡು ದೂರವಾದರು. 19 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದ ಮಲೈಕಾ ಮತ್ತು ಅರ್ಬಾಜ್ ಅವರಿಗೆ ಒಬ್ಬ ಮಗ ಕೂಡ ಇದ್ದಾನೆ. ನಂತರ ಅರ್ಬಾಜ್ ರೂಪದರ್ಶಿ ಜಾರ್ಜಿಯಾ ಜೊತೆ ಡೇಟ್ ಮಾಡುತ್ತಿದ್ದರು. ಆ ಸಂಬಂಧವೂ ಮುರಿದು ಬಿದ್ದಿದೆ. ಒಂಟಿಯಾಗಿ ಜೀವನ ನಡೆಸುತ್ತಿದ್ದ ಅರ್ಬಾಜ್ ಖಾನ್ ಇದೀಗ ಮೇಕಪ್ ಕಲಾವಿದೆ ಜೊತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅರ್ಬಾಜ್ ಖಾನ್ ಅವರಿಗೂ ಮತ್ತು ಶುರಾ ಖಾನ್ ಅವರ ವಯಸ್ಸಿನ ಅಂತ ಬರೋಬ್ಬರಿ 22 ವರ್ಷ ಎಂದು ಹೇಳಲಾಗುತ್ತಿದೆ.
ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಉಡುಪಿ (Udupi) ಶ್ರೀ ಕೃಷ್ಣ ಮಠಕ್ಕೆ (Shrikrishna Math) ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಕೈಗೊಂಡಿದ್ದಾರೆ. ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು. ಸಾಯಿ ಪಲ್ಲವಿ (Sai pallavi) ಪ್ರತಿಭಾನ್ವಿತ ನಟಿ. ಆದರೆ ಕಳೆದೊಂದು ವರ್ಷದಿಂದ ಸಾಯಿ ಪಲ್ಲವಿ ಅಡ್ರೆಸ್‌ಗೆ ಇಲ್ಲ. ಗಾರ್ಗಿ ರಿಲೀಸ್ ಆಗಿ ವರ್ಷ ಉರುಳಿದೆ. ಬಳಿಕ ಒಂದೂ ಸಿನಿಮಾ ಬಂದಿಲ್ಲ. ಸಿನಿಮಾ ಘೋಷಣೆಯೂ ಆಗಿಲ್ಲ. ಏನಾಯ್ತು ಸಾಯಿ ಪಲ್ಲವಿ ಬದುಕಲ್ಲಿ? ವಿರಾಟ ಪರ್ವಂ ಇದೊಂದು ಚಿತ್ರಕ್ಕಾಗಿ ಸಾಯಿಪಲ್ಲವಿ ನೀಡಿದ ಸಂದರ್ಶನ ಜೀವನದ ದಿಕ್ಕನ್ನೇ ಬದಲಾಯಿಬಿಡುತ್ತೆ ಅಂತ ಖುದ್ದು ಸಾಯಿಪಲ್ಲವಿ ಅಂದುಕೊಂಡಿರಲಿಲ್ಲ. ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾದ…
2023ರ ಕ್ಯಾಲೆಂಡರ್ ವರ್ಷ ಮುಗಿಯಲು ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಕೆಲ ಯುವ ಆಟಗಾರರು ಈ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಗಮನ ಸೆಳೆದಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲರ್ ಮೂಲಕ ಯುವ ಆಟಗಾರರು ಭವಿಷ್ಯದ ಸ್ಟಾರ್‌ಗಳು ಎಂಬುದನ್ನು ಸಾಬೀತುಪಡಿಸಿದ್ದಾರೆ. ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಮುಖೇಶ್ ಕುಮಾರ್ ಸೇರಿದಂತೆಡ ಅಗ್ರ ಐವರು ಯುವ ಆಟಗಾರರ ಬಗ್ಗೆ ಇಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ. 1.ಜಿತೇಶ್ ಶರ್ಮಾ ಪಂಜಾಬ್ ಕಿಂಗ್ಸ್‌ನ 27ರ ಪ್ರಾಯದ ಯುವ ವಿಕೆಟ್ ಕೀಪರ್, ಬ್ಯಾಟರ್ ಜಿತೇಶ್ ಶರ್ಮಾ, ಫಿನಿಷಿಂಗ್ ಹಾಗೂ ಕ್ಲೀನ್ ಹಿಟ್ಟಿಂಗ್ ಮೂಲಕ ಗಮನ ಸೆಳೆದಿದ್ದಾರೆ 2. ರಿಂಕು ಸಿಂಗ್ ಕಳೆದ ಐಪಿಎಲ್ ಟೂರ್ನಿಯಲ್ಲಿ ರಿಂಕು ಸಿಂಗ್ ಸತತ 5 ಸಿಕ್ಸರ್ ಸಿಡಿಸಿ ಕೆಕೆಆರ್‌ಗೆ ಪಂದ್ಯ ಗೆಲ್ಲಿಸುವ ಮೂಲಕ ಗ್ರೇಟ್ ಫಿನಿಷರ್ ಆಗಿದ್ದಾರೆ. 26ರ ಹರೆಯದ ರಿಂಕು ಸಿಂಗ್ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ತಮ್ಮ ಆಕ್ರಮಣಕಾರಿ ಹೊಡೆತಗಳ ಮೂಲಕ ಮ್ಯಾಚ್ ಫಿನಿಷರ್ ಎಂಬ ಕೀರ್ತಿಯನ್ನು ಸಂಪಾದಿಸಿದ್ದಾರೆ 3.…
ಕೇಕ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಚಿಕ್ಕಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕೇಕ್ ಅನ್ನು ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಯಾವುದೇ ಶುಭಸಮಾರಂಭಗಳಿದ್ದರೂ ಅಲ್ಲಿ ಕೇಕ್ ಇದ್ದೇ ಇರುತ್ತದೆ. ಆದರೆ ಕೆಲವರು ಮೊಟ್ಟೆ ಹಾಕಿದ ಕೇಕ್ ತಿನ್ನಲು ಬಯಸುವುದಿಲ್ಲ. ಇಂಥವರಿಗಾಗಿಯೇ ಇವತ್ತಿನ ನಮ್ಮ ರೆಸಿಪಿಯಲ್ಲಿ ಎಗ್‌ಲೆಸ್ ಚಾಕ್ಲೆಟ್ ಕೇಕ್ ಯಾವ ರೀತಿ ಮಾಡಬಹುದು ಇಲ್ಲಿದೆ ನೋಡಿ! ಬೇಕಾಗುವ ಸಾಮಗ್ರಿಗಳು: ಕೋಕೋ ಪೌಡರ್ – ಕಾಲು ಕಪ್ ಬಿಸಿ ನೀರು – ಕಾಲು ಕಪ್ ಎಣ್ಣೆ – ಕಾಲು ಕಪ್ ಮೊಸರು – ಅರ್ಧ ಕಪ್ ಬೇಕಿಂಗ್ ಪೌಡರ್ – ಅರ್ಧ ಕಪ್ ಬೇಕಿಂಗ್ ಸೋಡಾ – ಕಾಲು ಕಪ್ ಮೈದಾ, ಗೋಧಿ ಹಿಟ್ಟು – ಮುಕ್ಕಾಲು ಕಪ್ ಸಕ್ಕರೆ – ಮುಕ್ಕಾಲು ಕಪ್ ಕಾಫಿ ಪೌಡರ್ – ಒಂದು ಚಮಚ ಚಾಕ್ಲೆಟ್ ಸಿರಪ್ – ಅಗತ್ಯಕ್ಕೆ ತಕ್ಕಷ್ಟು ಮಾಡುವ ವಿಧಾನ: * ಮೊದಲಿಗೆ ಒಂದು ಬೌಲ್‌ನಲ್ಲಿ ಬಿಸಿ ನೀರು…
Apple ಈ ವರ್ಷ iPhone 15 ಮತ್ತು iPhone 15 Plus ಮಾದರಿಗಳಲ್ಲಿ ಹಳೆಯ A16 ಚಿಪ್ ಅನ್ನು ಪ್ಯಾಕ್ ಮಾಡಿದೆ, ಆದರೆ ಉನ್ನತ ಶ್ರೇಣಿಯ ‘iPhone 15 Pro’ ಮತ್ತು iPhone 15 Pro Max ಎಲ್ಲಾ ಹೊಸ A17 Pro ಚಿಪ್‌ನೊಂದಿಗೆ ಪ್ರಾರಂಭವಾಯಿತು. ಈಗ, ಆರಂಭಿಕ ಸೋರಿಕೆಗಳು ಕ್ಯುಪರ್ಟಿನೊ ಆಧಾರಿತ ಟೆಕ್ ದೈತ್ಯ ಎಲ್ಲಾ iPhone 16 ಮಾದರಿಗಳಲ್ಲಿ A18 ಪ್ರೊಸೆಸರ್ ಅನ್ನು ಬಳಸುತ್ತದೆ ಎಂದು ಸೂಚಿಸುತ್ತದೆ. iOS 18 ಆಪರೇಟಿಂಗ್ ಸಿಸ್ಟಮ್‌ನ ಆರಂಭಿಕ ಅಭಿವೃದ್ಧಿ ಆವೃತ್ತಿಗಳು A18 ಚಿಪ್‌ನೊಂದಿಗೆ ನಾಲ್ಕು ಹೊಸ ಐಫೋನ್ ಮಾದರಿಗಳ ಉಲ್ಲೇಖಗಳನ್ನು ಒಳಗೊಂಡಿವೆ ಎಂದು ವರದಿಯಾಗಿದೆ. Macrumors ನ ವರದಿಯ ಪ್ರಕಾರ, iOS 18 ಆಪರೇಟಿಂಗ್ ಸಿಸ್ಟಂನ ಆರಂಭಿಕ ಅಭಿವೃದ್ಧಿ ಆವೃತ್ತಿಗಳು ನಾಲ್ಕು ಹೊಸ ಐಫೋನ್ ಮಾದರಿಗಳ ಉಲ್ಲೇಖಗಳನ್ನು ಒಳಗೊಂಡಿವೆ. iPhone 16, iPhone 16 Plus, iPhone 16 Pro ಮತ್ತು iPhone 16 Pro Max ಎಂದು ನಂಬಲಾದ ಈ…