ಹೆಸರಾಂತ ನಟಿ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಲ್ಲದೇ, ತಿಶ್ರಾ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದ ನಟ ಮನ್ಸೂರ್ ಅಲಿಖಾನ್ (Mansoor Alikhan) ಗೆ ಮದ್ರಾಸ್ ಹೈಕೋರ್ಟ್ (Madras High Court) ಒಂದು ಲಕ್ಷ ರೂಪಾಯಿ ದಂಡವಿಧಿಸಿದೆ. ಜೊತೆಗೆ ತ್ರಿಶಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಅನುಮತಿಯನ್ನೂ ನಿರಾಕರಿಸಿದೆ. ಈ ಹಿಂದೆ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ. ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿರಲಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದರು. ನ್ಯಾಯಾಲಯದ ಸಮಯ ವ್ಯರ್ಥ…
Author: AIN Author
ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಬದಲಾಗಿ ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ ಇದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಹಿಂದೂ ಯುವಕ, ಯುವತಿಯರಿಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು. ‘ಅಂದಿನ ಬಿಜೆಪಿ ಸರ್ಕಾರದ ಅದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹಿಜಾಬ್ ಆದೇಶ ವಾಪಸ್ ಪಡೆದರೆ ಹಿಂದೂ ಯುವಕರಿಗೆ ಕೇಸರಿ ಶಾಲು ಧರಿಸುವಂತೆ ನಾವೇ ಕರೆ ನೀಡುತ್ತೇವೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಊಟ, ಬಟ್ಟೆ ನಮ್ಮ ಹಕ್ಕು ಎನ್ನುತ್ತಿದ್ದಾರೆ. https://ainlivenews.com/consuming-okra-is-very-good-for-diabetics-do-you-know-why/ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಬದಲಾಗಿ ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ ಇದೆ’ ಎಂದು ಆರೋಪಿಸಿದರು. ‘ಎಲ್‌ಕೆಜಿಯಿಂದ ಕಾಲೇಜಿನವರೆಗೂ ಸಮವಸ್ತ್ರ ಕಡ್ಡಾಯ ಮಾಡಲಾಗಿದ್ದು, 2021ರಲ್ಲಿ ಉಡುಪಿ ಪಿಯು ಕಾಲೇಜು ವಿದ್ಯಾರ್ಥಿನಿಯರು ಹಿಜಾಬ್ ಅನ್ನು ಮುನ್ನೆಲೆಗೆ ತಂದಿದ್ದರು. ಅಂದು…
ಬೆಂಗಳೂರು: ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ.ಪ್ರತಿವರ್ಷದಂತೆ ಈ ಬಾರಿ ಕೂಡ ಮಲ್ಲೇಶ್ವರ ಟಿಟಿಡಿಯಲ್ಲಿ ಸಂಭ್ರಮದ ವಾತವರಣ ಸೃಷ್ಟಿಯಾಗಿದೆ. ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ಥಾನದ ಸುತ್ತಲೂ ದಕ್ಷಿಣ ಶೈಲಿಯ ಚಪ್ಪರ ಹಾಕಿ ಹೂವಿನಿಂದ ಅಲಾಂಕಾರ ಮಾಡಲಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೇ ವಿಶೇಷ ಪೂಜೆ ಆರಂಭವಾಗಿದೆ. ವೆಂಕಟೇಶ್ವರನಿಗೆ ಪಂಚಾಭಿಷೇಕ ಮಾಡಿ, ಪುಷ್ಪಾಭಿಷೇಕ ಮಾಡಿ ನಂತರ ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ವೈಕುಂಠನಿಗೆ ಬೆಳಗ್ಗೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೂ ವಿಶೇಷ ಪೂಜೆ, ಹೊಮ, ಹವನಗಳು ನೆರವೇರಲಿದ್ದು, ಮಧ್ಯರಾತ್ರಿಯವರೆಗೂ ಭಕ್ತದಿಗಳು ದೇವಸ್ಥಾನಕ್ಕೆ ಬರಲು ಅವಕಾಶ ಮಾಡಿಕೊಡಲಾಗಿದೆ. ವೈಕುಂಠ ಏಕಾದಶಿ ಅಂದರೆ ಹಿಂದೂಗಳಿಗೆ ಒಂದು ಸಂಭ್ರಮ. ಈ ದಿನ ದೇವಸ್ಥಾನಕ್ಕೆ ಬಂದು ವೈಕುಂಠ ದರ್ಶನ ಮಾಡಿದ್ರೆ ಒಳ್ಳೆಯದಾಗುತ್ತೆ ಎನ್ನೋದು ನಂಬಿಕೆ. ಅಲ್ಲದೇ ಟ್ರಾಫಿಕ್ ಜಾಮ್ ಆಗುವ ಸಾಧ್ಯಾತೆಗಳು ಇರುವುದರಿಂದ ಟ್ರಾಪಿಕ್ ಪೋಲಿಸರನ್ನೂ ನಿಯೋಜನೆ ಮಾಡಲಾಗಿದೆ.
ಟಾಸ್ಕ್ ನಲ್ಲಿ ಗಾಯಗಳಾಗೋದು ಸಹಜ. ಎಷ್ಟೋ ಬಾರಿ ವಿಪರೀತ ಏಟು ಮಾಡಿಕೊಂಡು ಬಿಗ್ ಬಾಸ್ (Bigg Boss Kannada) ಮನೆಯಿಂದ ಆಚೆ ಬಂದವರು ಇದ್ದಾರೆ. ಈ ಸೀಸನ್ ನಲ್ಲಿ ತನಿಷಾ ಏಟು ಮಾಡಿಕೊಂಡು ಆಸ್ಪತ್ರೆ ಪಾಲಾಗಿದ್ದರು. ಹುಷಾರಾಗಿ ಮತ್ತೆ ಮನೆ ಪ್ರವೇಶ ಮಾಡಿದರು. ಮೊನ್ನೆ ಮೊನ್ನೆಯಷ್ಟೇ ಪ್ರತಾಪ್ ಮತ್ತು ಸಂಗೀತಾ ಕೂಡ ಕಣ್ಣಿಗೆ ಕೆಮಿಕಲ್ ನೀರು ಹಾಕಿಸಿಕೊಂಡು ಆಸ್ಪತ್ರೆ ಸೇರಿಕೊಂಡಿದ್ದರು. ನಿನ್ನೆ ನಡೆದ ಟಾಸ್ಕ್ ನಲ್ಲಿ ವಿನಯ್ ಮತ್ತು ಕಾರ್ತಿಕ್ ಇಬ್ಬರೂ ಗಾಯಗೊಂಡಿದ್ದಾರೆ. ಅದರಲ್ಲೂ ವಿನಯ್ ಬೆರಳಿಗೆ ಬಲವಾಗಿಯೇ ಏಟು ಬಿದ್ದಿದೆ. ಟಾಸ್ಕ್ ನಲ್ಲಿ ವಿನಯ್ (Vinay) ಗೌಡ ಸಿಕ್ಕಾಪಟ್ಟೆ ಅಗ್ರೆಸಿವ್ ಆಗಿ ಆಡುತ್ತಾರೆ. ಅವರನ್ನು ಕಂಟ್ರೋಲ್ ಮಾಡೋದು ತುಂಬಾ ಕಷ್ಟ. ಕುಸ್ತಿ ಪಟುವಿನಂತೆ ಸದಾ ಮುಸಿಮುಸಿ ಅನ್ನುತ್ತಲೇ ಇರುತ್ತಾರೆ. ನಿನ್ನೆ ನಡೆದ ಕಲೆ ಒಳ್ಳೆಯದಲ್ಲ ಟಾಸ್ಕ್ ನಲ್ಲೂ ಅವರು ಸಖತ್ ಅಗ್ರೆಸಿವ್ ಆಗಿಯೇ ಆಟವಾಡಿದರು. ಪರಿಣಾಮ ಬೆರಳಿಗೆ ಏಟು ಮಾಡಿಕೊಂಡರು. ಅದಕ್ಕಾಗಿ ಅವರು ಆ ಟಾಸ್ಕ್ ನಿಂದಲೇ ಹೊರ ಬರಬೇಕಾಯಿತು.…
ನವದೆಹಲಿ: ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಆಪ್ತ ಸಂಜಯ್ ಸಿಂಗ್ (Sanjay Singh) ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ವಿರೋಧಿಸಿ, ಕುಸ್ತಿಪಟು ಬಜರಂಗ್ ಪುನಿಯಾ (Bajrang Punia) ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ. ಸಂಜಯ್ ಸಿಂಗ್ ಆಯ್ಕೆ ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್ (Sakshee Mallikh), ಗುರುವಾರ ಕಣ್ಣೀರಿಟ್ಟು ಕುಸ್ತಿಗೆ ವಿದಾಯ ಹೇಳಿದರು. ಇದರ ಬೆನ್ನಲ್ಲೇ ಬಜರಂಗ್ ಪುನಿಯಾ, ಪದ್ಮಶ್ರೀ ಪ್ರಶಸ್ತಿ (Padma Shri) ಹಿಂದಿರುಗಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿದ್ದಾರೆ. ‘ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಗೆ ಹಿಂದಿರುಗಿಸುತ್ತಿದ್ದೇನೆ. ಅದನ್ನು ಹೇಳಲು ಈ ಪತ್ರ ಬರೆದಿದ್ದೇನೆ ಎಂದು ಬಜರಂಗ್ ಪುನಿಯಾ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. https://ainlivenews.com/consuming-okra-is-very-good-for-diabetics-do-you-know-why/ ‘ಎಲ್ಲಿ ಹೋಗಬೇಕು, ಏನು ಮಾಡಬೇಕು ಮತ್ತು ಹೇಗೆ ಬದುಕಬೇಕು ಎಂದು ನನಗೆ ಅರ್ಥವಾಗಲಿಲ್ಲ. ಸರ್ಕಾರ ಮತ್ತು ಜನರು ನನಗೆ ತುಂಬಾ ಗೌರವ ನೀಡಿದರು. ಈ ಗೌರವದ ಹೊರೆಯಲ್ಲಿ ನಾನು ಉಸಿರುಗಟ್ಟುವುದನ್ನು ಮುಂದುವರಿಸಬೇಕೇ?…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು ಅಗ್ನಿ ಅವಘಡಕ್ಕೆ ಸುಟ್ಟು ಕರುಕಲಾದ ಗ್ಯಾರೇಜ್ ಕೆಜಿ ಹಳ್ಳಿಯ ಪಾನಿಕಂ ಚಾಯ್ ಸರ್ಕಲ್ ಬಳಿ ನಡೆದಿರುವ ಘಟನೆಯಾಗಿದೆ. ಬೆಳಗಿನ ಜಾವ ಗ್ಯಾರೇಜ್ ನಲ್ಲಿ ಕಾಣಿಸಿಕೊಂಡ ಬೆಂಕಿ ಆಕಸ್ಮಿಕ ಅಗ್ನಿ ಅವಘಡಕ್ಕೆ ಹೊತ್ತಿಯುರಿದ ಗ್ಯಾರೇಜ್ ಹಾಗೆ ಆ ಬೆಂಕಿಯ ತೀವ್ರತೆಗೆ ಗ್ಯಾರೇಜ್ ನಲ್ಲಿದ್ದ 6 ಮಿನಿ ಟೆಂಪೋ ಕೂಡ ಸುಟ್ಟು ಕರುಕಲಾಗಿವೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ ಸಂಭವಿಸಿಲ್ಲ ತಕ್ಷಣ ಸ್ಥಳಕ್ಕೆ ಕೆಜಿ ಹಳ್ಳಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು ಅಗ್ನಿ ಶಾಮಕ ತಂಡದಿಂದ ಬೆಂಕಿಯನ್ನು ನಂದಿಸಿದ್ದಾರೆ.
ಹೊಸ ವರ್ಷದ ಮೊದಲ ಮಾಸದಂದು ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ರೆಟ್ರೋ ಮೂವಿ ರಂಗಸಮುದ್ರ ಬಿಡುಗಡೆಗೆ ಸಿದ್ದವಾಗಿದೆ. ಈಗಾಗಲೆ ಚಿತ್ರದ ಮೂರು ಹಾಡುಗಳು ಜಂಕಾರ್ ಮ್ಯೂಸಿಕ್ ಯುಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡು ಸಂಗೀತ ಪ್ರಿಯರ ಮನಸ್ಸು ಗೆದ್ದಿವೆ.. ಈಗ ಭಾರತದ ಮುಂಚೂಣಿಯಲ್ಲಿರುವ ಮ್ಯೂಸಿಕ್ ಡೈರೆಕ್ಟರ್, ಪದ್ಮಶ್ರೀ, ರಾಷ್ಟ್ರ ಪ್ರಶಸ್ತಿ ಹಾಗೂ ವಿಶ್ವದ ಅತ್ಯಂತ ಪ್ರಮುಖ ಪ್ರಶಸ್ತಿಯಾದ ಆಸ್ಕರ್ ವಿಜೇತ ಬಾಹುಬಲಿ ಹಾಗೂ ಆರ್.ಆರ್.ಆರ್ ಚಿತ್ರಗಳ ಸಂಗೀತ ಮಾಂತ್ರಿಕ ನಿರ್ದೇಶಕ ಎಮ್.ಎಮ್ ಕೀರವಾಣಿ ಅವರಿಂದ ಚಿತ್ರದಲ್ಲಿ ತಿರುವು ಪಡೆಯುವ ಅದ್ಭುತ ಗೀತೆಯೊಂದನ್ನು ಹಾಡಿಸಿ ಗೀತೆಯನ್ನು ಬಿಡುಗಡೆಗೆಗೊಳಿಸಿದೆ. ಹೌದು ಭಾರತದ ಎಮ್.ಎಮ್ ಕೀರವಾಣಿಯವರು ಹಲವು ದಶಕಗಳ ನಂತರ “ರಂಗಸಮುದ್ರ” ಚಿತ್ರದ ಮೂಲಕ ಕನ್ನಡಕ್ಕೆ ಮರಳಿ ಗೀತೆಯೊಂದಕ್ಕೆ ದನಿಯಾಗಿರುವುದು ಚಿತ್ರತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದಂತಾಗಿದೆ. ಅರ್ಥಾತ್ ಬಾಹುಬಲಿ ಸಂಗೀತ ಮಾಂತ್ರಿಕನ ಬಲ ಸಿಕ್ಕಾಂತಾಗಿದೆ ಎನ್ನುವುದು ಈಗಾಗಲೆ ಗಾಂಧಿನಗರದಲ್ಲಿ ಪ್ರಸ್ತುತ ಪರಸ್ಪರ ಪಿಸುಮಾತಗುತ್ತಿರುವ ಸುದ್ದಿ. ರಂಗಸಮುದ್ರ ಚಿತ್ರದ ನಿರ್ದೇಶಕ ರಾಜ್ ಕುಮಾರ್ ಅಸ್ಕಿ , ಸಾಹಿತಿ ವಾಗೀಶ್…
ವಿಶ್ವಾದ್ಯಂತ ಪ್ರಭಾಸ್ ಅಭಿನಯದ ಸಲಾರ್ ಚಿತ್ರ ಇಂದು ರಿಲೀಸ್ ಆದ ಬಳಿಕ ಪ್ರಭಾಸ್ ಫ್ಯಾನ್ಸ್ ಥಿಯೇಟರ್‌ಗಳಿಗೆ ಮುಗಿಬೀಳುತ್ತಿದ್ದಾರೆ. ಇದೀಗ ಪ್ರೇಕ್ಷಕರು ಸಲಾರ್ ವಿಮರ್ಶೆಯನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಪ್ರಶಾಂತ್ ನೀಲ್ ಅವರ ನಿರ್ದೇಶನ ಹಾಗೂ ಪ್ರಭಾಸ್ ಅವರ ಅಭಿನಯಕ್ಕಾಗಿ ಹಾಡಿ ಹೊಗಳುತ್ತಿದ್ದಾರೆ. ವ್ಯಾಪಾರ ತಜ್ಞ ಮನೋಬಾಲಾ ವಿ ಅವರು ಸಲಾರ್ ವಿಮರ್ಶೆಯನ್ನು ಬರೆದು, ಪೃಥ್ವಿರಾಜ್ ಸುಕುಮಾರನ್ ಅವರ ನಟನೆಯನ್ನು ಶ್ಲಾಘಿಸಿದರು. ಮನೋಬಾಲಾ ಅವರು ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ, ʻʻಪ್ರಭಾಸ್ ದೇವನಾಗಿ ಮಿಂಚಿದ್ದಾರೆ. ಹ್ಯಾಟ್ರಿಕ್ ಬ್ಲಾಕ್‌ಬಸ್ಟರ್‌ಗಳನ್ನು ನೀಡಿದ ಬಳಿಕ ಪ್ರಶಾಂತ್ ನೀಲ್ ಈ ಸಿನಿಮಾದೊಂದಿಗೆ ಯಶಸ್ಸನ್ನು ಮುಂದುವರಿಸುವಲ್ಲಿ ಗೆದ್ದಿದ್ದಾರೆ. ವರ್ಧರಾಜ ಮನ್ನಾರ್ ಪಾತ್ರಕ್ಕೆ ಪೃಥ್ವಿರಾಜ್ ಸೂಕ್ತವಾಗಿ ಹೊಂದಿಕೆಯಾಗುತ್ತದೆ. ಜಗಪತಿ ಬಾಬು ಅವರು ತಂದೆಯಾಗಿ ಮಿಂಚಿದ್ದಾರೆ. ಹಿನ್ನೆಲೆ ಧ್ವನಿ ಅದ್ಭುತʼʼಎಂದು ಬರೆದುಕೊಂಡಿದ್ದಾರೆ. ಯಶ್ ಬಾಸ್ ಅತಿಥಿ ಪಾತ್ರ ಅಚ್ಚರಿಯ ಪ್ಯಾಕೇಜ್ ಆಗಿದೆ. ಕ್ಲೈಮ್ಯಾಕ್ಸ್ ಇನ್ನೂ ವಿಶೇಷವಾಗಿಸುತ್ತದೆ, ”ಎಂದು ಇನ್ನೊಬ್ಬರು ಬರೆದುಕೊಂಡಿದ್ದಾರೆ. ಬಾಹುಬಲಿ ನಂತರ ಪ್ರಭಾಸ್ ಈ ಸಿನಿಮಾ ಮೂಲಕ ಅತ್ಯುತ್ತಮ ಅಭಿನಯವನ್ನು ನೀಡಿದ್ದಾರೆ. ಅನೇಕರು…
ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಉಡುಪಿ (Udupi) ಶ್ರೀ ಕೃಷ್ಣ ಮಠಕ್ಕೆ (Shrikrishna Math) ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಕೈಗೊಂಡಿದ್ದಾರೆ. ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು. ಸಾಯಿ ಪಲ್ಲವಿ (Sai pallavi) ಪ್ರತಿಭಾನ್ವಿತ ನಟಿ. ಆದರೆ ಕಳೆದೊಂದು ವರ್ಷದಿಂದ ಸಾಯಿ ಪಲ್ಲವಿ ಅಡ್ರೆಸ್‌ಗೆ ಇಲ್ಲ. ಗಾರ್ಗಿ ರಿಲೀಸ್ ಆಗಿ ವರ್ಷ ಉರುಳಿದೆ. ಬಳಿಕ ಒಂದೂ ಸಿನಿಮಾ ಬಂದಿಲ್ಲ. ಸಿನಿಮಾ ಘೋಷಣೆಯೂ ಆಗಿಲ್ಲ. ಏನಾಯ್ತು ಸಾಯಿ ಪಲ್ಲವಿ ಬದುಕಲ್ಲಿ? ವಿರಾಟ ಪರ್ವಂ ಇದೊಂದು ಚಿತ್ರಕ್ಕಾಗಿ ಸಾಯಿಪಲ್ಲವಿ ನೀಡಿದ ಸಂದರ್ಶನ ಜೀವನದ ದಿಕ್ಕನ್ನೇ ಬದಲಾಯಿಬಿಡುತ್ತೆ ಅಂತ ಖುದ್ದು ಸಾಯಿಪಲ್ಲವಿ ಅಂದುಕೊಂಡಿರಲಿಲ್ಲ. ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾದ…
ಭಾರತದಲ್ಲಿ ಪ್ರತಿ ವರ್ಷ ಡಿಸೆಂಬರ್ 23 ರಂದು ರೈತರ ದಿನವನ್ನು ಆಚರಿಸಲಾಗುತ್ತದೆ. ಭಾರತದ ರೈತರ ಕೊಡುಗೆ ಮತ್ತು ಶ್ರಮಕ್ಕೆ ನಮನವನ್ನು ಸಲ್ಲಿಸಲು ದಿನವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಈ ದಿನದಂದು, ದೇಶದ ಪ್ರತಿ ರೈತನ ಅದ್ಭುತ ಕೊಡುಗೆಯನ್ನು ನೆನಪಿಸಿಕೊಳ್ಳಲು ಮತ್ತು ಒಗ್ಗೂಡಲು ಈ ಸಮಯ ತುಂಬ ಅವಿಸ್ಮರಣೀಯವಾದದ್ದು. ಮಾಜಿ ಪ್ರಧಾನಿ ಜನ್ಮದಿನದಂದು ರೈತ ದಿನಾಚರಣೆ ಆಚರಣೆ! ನಿಮಗೆ ಗೊತ್ತಾ ಭಾರತದ ಮಾಜಿ ಪ್ರಧಾನಿಯೊಬ್ಬರ ಜನ್ಮ ದಿನದಂದು ರೈತ ದಿನಾಚರಣೆ ಆಚರಿಸುತ್ತಾರೆಂದು? ಹೌದು ಭಾರತದಲ್ಲಿ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ದಿನದಂದು ರೈತ ದಿನಾಚರಣೆ ಆಚರಣೆ ಮಾಡಲಾಗುತ್ತದೆ. ಚೌಧರಿ ಚರಣ್ ಸಿಂಗ್ ಅವರು ದೇಶಾದ್ಯಂತ ರೈತರ ಅನುಕೂಲ ಹಾಗೂ ಕಲ್ಯಾಣಕ್ಕಾಗಿ ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದ್ದರು. ಇದರ ಸ್ಮರಣಾರ್ಥವಾಗಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವನ್ನು ಭಾರತದಲ್ಲಿ ರೈತರ ದಿನವನ್ನಾಗಿ ಆಚರಿಸಲಾಗುತ್ತದೆ. ಅಷ್ಟೇ ಅಲ್ಲದೆ ಚೌಧರಿ ಚರಣ್ ಸಿಂಗ್ ಅವರು ರೈತರುಗಾಗಿ ಭೂಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದರು.…