ಬೆಂಗಳೂರು: ಬಿಬಿಎಂಪಿ ಶಾಲೆಗಳು ಇನ್ಮುಂದೆ ಶಿಕ್ಷಣ ಇಲಾಖೆ ಅಧೀನಕ್ಕೆ ನೀಡಲು ಬಿಬಿಎಂಪಿ ನಿರ್ಧಾರ ಮಾಡಿದೆ. ಇಂದು (ಶುಕ್ರವಾರ) ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಶಾಲೆಗಳನ್ನ ಶಿಕ್ಷಣ ಇಲಾಖೆಗೆ ನೀಡುವ ನಿರ್ಧಾರ ಮಾಡಲಾಯ್ತು. https://ainlivenews.com/hijab-ban-is-out-of-the-question-i-condemn-it-ex-cm-bommai/ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ (BBMP) ಶಾಲೆಗಳನ್ನು ಇನ್ಮುಂದೆ ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷ ಫಲಿತಾಂಶದಲ್ಲಿ ಬಿಬಿಎಂಪಿ ಶಾಲೆಗಳಲ್ಲಿ ಕುಸಿತ ಕಂಡಿರುವುದನ್ನು ನಾವು ಗಮನಿಸಿದ್ದೇವೆ. ಇದಕ್ಕೆ ಅವಕಾಶ ನೀಡಬಾರದು. ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಲು ಈ ತೀರ್ಮಾನ ಮಾಡಲಾಗಿದೆ. ಶಾಲೆಗಳಲ್ಲಿ ಶಿಕ್ಷಣ ನೀಡುವಂತಹ ಜವಾಬ್ದಾರಿಯನ್ನು ಮಾತ್ರ ಶಿಕ್ಷಣ ಇಲಾಖೆಗೆ ನೀಡಲಾಗುತ್ತಿದ್ದು, ಈ ಶಾಲೆಗಳ ಮೂಲಸೌಕರ್ಯಗಳ ಉನ್ನತೀಕರಣ ಹಾಗೂ ನಿರ್ವಹಣೆಯನ್ನು ಬಿಬಿಎಂಪಿಯಿಂದಲೇ ಮಾಡಲಾಗುವುದು. ಶಾಲೆಯ ಜಾಗ, ಕಟ್ಟಡ ನಿರ್ವಹಣೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಪಾಲಿಕೆಯಿಂದಲೇ ನಿರ್ವಹಿಸಲಾಗುವುದು. ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಇಲಾಖೆಗೆ ಹಸ್ತಾಂತರಿಸಲಾಗಿದೆ…
Author: AIN Author
ಜೈಪುರ್: ಎರಡು ವರ್ಷಗಳ ಹಿಂದೆ ಬಾರ್ಮರ್‌ನ ಮಾಜಿ ಶಾಸಕ ಹಾಗೂ ಕಾಂಗ್ರೆಸ್ (Congress) ಮುಖಂಡ ಮೇವರಂ ಜೈನ್ (Mevaram Jain) ಮತ್ತು ಆರ್‌ಪಿಎಸ್ ಅಧಿಕಾರಿ ಆನಂದ್ ಸಿಂಗ್ ರಾಜಪುರೋಹಿತ್ ಸೇರಿದಂತೆ ಒಂಬತ್ತು ಮಂದಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದು, ತನ್ನ ಮಗಳಿಗೂ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬಳು ಆರೋಪಿಸಿ ಪ್ರಕರಣ ದಾಖಲಿಸಿದ್ದಾಳೆ. ಆರೋಪಿಗಳು ತನ್ನ ಅಪ್ರಾಪ್ತ ವಯಸ್ಸಿನ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿದ್ದು, ಇತರ ಹುಡುಗಿಯರನ್ನು ತಮ್ಮ ಬಳಿಗೆ ಕರೆತರುವಂತೆ ತನ್ನ ಮೇಲೆ ಒತ್ತಡ ಹೇರಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಜೋಧಪುರದ ರಾಜೀವ್ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಲ್ಲಿ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳಾದ ಬಾರ್ಮರ್ ಎಸ್‍ಎಚ್‍ಒ ಗಂಗಾರಾಮ್ ಖಾವಾ ಮತ್ತು ಸಬ್ ಇನ್ಸ್‍ಪೆಕ್ಟರ್ ದೌದ್ ಖಾನ್ ಹಾಗೂ ಪ್ರಧಾನ್ ಗಿರ್ಧಾರಿ ಸಿಂಗ್ ಸೋಧಾ ಸೇರಿದ್ದಾರೆ. https://ainlivenews.com/is-eating-garlic-on-an-empty-stomach-good-for-health-here-is-the-answer/ ಎಫ್‍ಐಆರ್ ನ್ನು ದೃಢೀಕರಿಸಿದ ಎಸ್‍ಎಚ್‍ಒ ಶಕೀಲ್ ಅಹ್ಮದ್, ಜೈನ್ ಮತ್ತು ಇತರ 8 ಜನರ ವಿರುದ್ಧ…
ಬೆಂಗಳೂರು: ಹಿಜಾಬ್ ನಿಷೇಧ ವಾಪಸ್ ಬಗ್ಗೆ ಸಿಎಂ ಹೇಳಿಕೆ ವಿಚಾರ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಜಾಬ್ ನಿಷೇಧ ಅನ್ನೋದು ಪ್ರಶ್ನೆಯೇ ಇಲ್ಲ ಎಲ್ಲಿ ಡ್ರೆಸ್ ಕೋಡ್ ಇದ್ಯೋ ಅಲ್ಲಿ ಹಿಜಾಬ್ ಇಲ್ಲ ಹಿಜಾಬ್ ನಿಷೇಧ ಆಗಿಲ್ಲ ಎಲ್ಲ ಮಾರ್ಕೆಟ್ ನಲ್ಲಿ ಹಾಕ್ತಾರೆ,ಅಧಿವೇಶನದಲ್ಲಿ ಹಾಕ್ಕೊಂಡು ಬರ್ತಾರೆ ಈ ಹಿಂದೆ ಇದ್ದ ಡ್ರೆಸ್ ಕೋಡ್ ಇದೆ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆದಿದೆ ಸುಪ್ರೀಂ ಕೋರ್ಟ್ ನಲ್ಲಿ ಇಬ್ಬರು ನ್ಯಾಯಾಧೀಶರು ಬೇರೆ ಬೇರೆ ಆದೇಶ ಕೊಟ್ಟಿದ್ದರು ಇದೀಗ ಸುಪ್ರೀಂ ಸಿಜೆ ತ್ರಿಸದಸ್ಯ ಪೀಠ ರಚನೆ ಮಾಡಿದ್ದಾರೆ https://ainlivenews.com/congress-government-is-a-bank-government-yadiyurappa-spark/ ಹಿಜಾಬ್ ನಿಷೇಧ ವಿಷಯವೇ ಇಲ್ಲ ಈ ವಿಚಾರವನ್ನ ಸಿಎಂ ರಾಜಕೀಯ ಮಾಡ್ತಿದ್ದಾರೆ ಇದನ್ನ ನಾನು ಖಂಡಿಸುತ್ತೇನೆ ಬೆಳಗಾವಿ ಅಧಿವೇಶನ ನಡೆಯುವಾಗ ಹುಬ್ಬಳ್ಳಿ ಮುಸ್ಲಿಂ ಸಮಾವೇಶಕ್ಕೆ ಹೋಗಿ ಹತ್ತು ಸಾವಿರ ಕೋಟಿ ಕೊಡ್ತೀನಿ ಎಂದಿದ್ದರು ವಿಷಯಂತರ ಮಾಡಲು ಪ್ರಯತ್ನ ಮೈನಾರಿಟಿ ಓಲೈಕೆ ಮಾಡಲು ಪ್ರಯತ್ನ…
ಬೆಂಗಳೂರು ಗ್ರಾಮಾಂತರ: ಎರಡನೇ ತಿರುಪತಿ ಅಂತಾನೇ ಪ್ರಸಿದ್ಧಿ ಪಡೆದಿರುವ ಶ್ರೀ ದೇವಿಸಮೇತ ಶ್ರೀ ರಂಗನಾಥ ಸ್ವಾಮಿ ದೇಗುಲದಲ್ಲಿ ವಿಶೇಷ ಅಲಂಕಾರ,ಪೂಜೆ ಸಂಭ್ರಮ. ನೆಲಮಂಗಲ ಹೊರಹೊಲಯದ ದಾಸನಪುರ ದಲ್ಲೂ ಕಳೆಗಟ್ಟಿದ ಏಕಾದಶಿ ಸಂಭ್ರಮ ಕಳೆಗಟ್ಟಿದೆ ಹೀಗಾಗಿ ಇಂದು ಮತ್ತು ನಾಳೆ ದ್ವಾದಶಿಗೆ ವಿಶೇಷ ದರ್ಶನ ಪಡೆಯಲು ಭಕ್ತರ ದಂಡೇ ಆಗಮಿಸುತ್ತಿದೆ. ಸನ್ನತದಾಸ ಮಹಾರಾಜರ ನೇತ್ರತ್ವದಲ್ಲಿ ವಿಶೇಷ ಪೂಜೆ ನಡೆಯಲಿದ್ದು ಲಕ್ಷ್ಮಿ ಪದ್ಮಾವತಿ ದೇವಿಗೆ ಸಹಸ್ರ ಅರ್ಚನ ನೆರವೇರಲಿದೆ.ಈ ಉತ್ಸವ ಕಣ್ತುಂಬಿಕೊಳ್ಳಲು ಆಗಮಿಸೋ ಭಕ್ತರಿಗೆ ಲಡ್ಡು ಪ್ರಸಾದ ನೀಡಲು ದೇಗುಲ ಸಮಿತಿ ತಯಾರಾಗಿದೆ.. ಕ್ಷೀರ ಸಾಗರ ಯೋಗ ಮುದ್ರೆಯ ಶೇಷಸಾಯಿ ಮೇಲೆ ಶಯನಿಸಿದ ಶ್ರೀಹರಿಯು ಎದ್ದೇಳಿದ ದಿನವೇ ಏಕಾದಶಿ ಅನ್ನೋದು ವಿಶೇಷ..
ಕಲಬುರಗಿ: ಎರಡನೇ ತಿರುಪತಿ ಅಂತಾನೇ ಪ್ರಸಿದ್ಧಿ ಪಡೆದಿರುವ ಕಲಬುರಗಿಯ ಸೂಗೂರುK ವೆಂಕಟೇಶ್ವರನ ಸನ್ನಿಧಿಯಲ್ಲಿ ಇವತ್ತು ವೈಕುಂಠ ಏಕಾದಶಿ ಸಂಭ್ರಮ ಕಳೆಗಟ್ಟಿದೆ.. ಹೀಗಾಗಿ ಇಂದು ಮತ್ತು ನಾಳೆ ದ್ವಾದಶಿಗೆ ವಿಶೇಷ ದರ್ಶನ ಪಡೆಯಲು ಭಕ್ತರ ದಂಡೇ ಆಗಮಿಸುತ್ತಿದೆ. ಸನ್ನತದಾಸ ಮಹಾರಾಜರ ನೇತ್ರತ್ವದಲ್ಲಿ ವಿಶೇಷ ಪೂಜೆ ನಡೆಯಲಿದ್ದು ಲಕ್ಷ್ಮಿ ಪದ್ಮಾವತಿ ದೇವಿಗೆ ಸಹಸ್ರ ಅರ್ಚನ ನೆರವೇರಲಿದೆ. ಈ ಉತ್ಸವ ಕಣ್ತುಂಬಿಕೊಳ್ಳಲು ಆಗಮಿಸೋ ಭಕ್ತರಿಗೆ ಲಡ್ಡು ಪ್ರಸಾದ ನೀಡಲು ದೇಗುಲ ಸಮಿತಿ ತಯಾರಾಗಿದೆ.. ಕ್ಷೀರ ಸಾಗರ ಯೋಗ ಮುದ್ರೆಯ ಶೇಷಸಾಯಿ ಮೇಲೆ ಶಯನಿಸಿದ ಶ್ರೀಹರಿಯು ಎದ್ದೇಳಿದ ದಿನವೇ ಏಕಾದಶಿ ಅನ್ನೋದು ವಿಶೇಷ..
ಪ್ಯಾರಿಸ್: 300 ಕ್ಕೂ ಹೆಚ್ಚು ಭಾರತೀಯ (Indians) ಪ್ರಯಾಣಿಕರನ್ನು ಹೊತ್ತು ನಿಕರಾಗುವಾಗೆ ಹೊರಟಿದ್ದ ವಿಮಾನವನ್ನು ಫ್ರಾನ್ಸ್‌ನಲ್ಲಿ (France) ಶಂಕಿತ ಮಾನವ ಕಳ್ಳಸಾಗಣೆಯ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಣೆಯ (Human Trafficking) ಬಗ್ಗೆ ಅಪರಿಚಿತರಿಂದ ಸುಳಿವು ಸಿಕ್ಕ ಬಳಿಕ ವಿಮಾನವನ್ನು (Plane) ವಶಕ್ಕೆ ತೆಗೆದುಕೊಳ್ಳಲಾಗಿದೆ. ಅದರಲ್ಲಿ 303 ಭಾರತೀಯ ಪ್ರಯಾಣಿಕರು ಇದ್ದರು. https://ainlivenews.com/is-eating-garlic-on-an-empty-stomach-good-for-health-here-is-the-answer/ ವಿಮಾನವು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ (United Arab Emirates) ಟೇಕಾಫ್ ಆಗಿದೆ. ಮಾನವ ಕಳ್ಳಸಾಗಾಣಿಕೆ ಅಥವಾ ಪ್ರವಾಸದ ಉದ್ದೇಶವೇ ಎಂಬುದನ್ನು ಖಚಿತ ಪಡಿಸಿಕೊಳ್ಳಲು ನ್ಯಾಯಾಂಗ ತನಿಖೆ ಪ್ರಾರಂಭಿಸಲಾಗಿದೆ ಎಂದು ಪ್ಯಾರಿಸ್‍ನ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ಪ್ರಯಾಣಿಕರನ್ನು ಅಕ್ರಮ ವಲಸಿಗರು ಎಂದು ನಂಬಲಾಗಿದೆ. ಪ್ರಯಾಣಿಕರು ಯುನೈಟೆಡ್ ಸ್ಟೇಟ್ಸ್ ಅಥವಾ ಕೆನಡಾಕ್ಕೆ ಅಕ್ರಮ ಪ್ರವೇಶಕ್ಕಾಗಿ ಪ್ರಯತ್ನಿಸುವ ಸಲುವಾಗಿ ಮಧ್ಯ ಅಮೆರಿಕಕ್ಕೆ ಪ್ರಯಾಣಿಸಲು ಯೋಜಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದು ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸುತ್ತೇನೆ ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ ಅಗತ್ಯ ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದೆ ಈಗಲೇ ಎಚ್ಚೆತ್ತು ಈ ತೀರ್ಮಾನ ವಾಪಸ್ ಪಡೆಯಲಿ ಇದೊಂದು ಭಂಡ ಸರ್ಕಾರ ಎಂದು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಜಾಬ್ ನಿಷೇಧ ವಾಪಸ್ ಕುರಿತು ಸಿಎಂ ಹೇಳಿಕೆ ವಿಚಾರ ಬಗ್ಗೆಯೂ ಮಾತನಾಡಿ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎನ್ನುವ ಪಕ್ಷ ಬಿಜೆಪಿ ಇಂದು ಸಿಎಂ ಹಿಜಾಬ್ ರದ್ದು ಮಾಡುವ ತೀರ್ಮಾನ ತೆಗೆದುಕೊಳ್ಳಲು ಹೊರಟಿರುವುದನ್ನು ಖಂಡಿಸುತ್ತೇನೆ ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಈ ತೀರ್ಮಾನ ತೆಗೆದುಕೊಂಡಿದ್ದಾರೆ ಹಿಜಾಬ್ ರದ್ದು ಮಾಡಿ ಅಂತಾ ಯಾವ ಮುಸ್ಲಿಂ ಮುಖಂಡರು ಸಿದ್ದರಾಮಯ್ಯನವರನ್ನು ಕೇಳಿದ್ದರು? ಇವೆಲ್ಲಾ ರಾಜಕೀಯ ದೊಂಬರಾಟವನ್ನು ಸಿಎಂ ಬಿಡಬೇಕು ಈ ರೀತಿ ಮಾಡುವುದರಿಂದ ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಸಾಧ್ಯವಿಲ್ಲ ಲೋಕಸಭಾ ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ ಎನ್ನುವುದನ್ನೂ ಮರೆತು…
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಂದು ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹನಿ ಬೀಳುವ ಸಾಧ್ಯತೆಗಳಿರಲಿವೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ನಾಳೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲೂ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಹವಾಮಾನ ವರದಿಯ ಪ್ರಕಾರ ಕರ್ನಾಟಕದಲ್ಲಿ ಚಂಡಮಾರುತ ಸೇರಿದಂತೆ ಯಾವುದೇ ರೀತಿಯ ಮಳೆಯ ಭೀತಿ ಇಲ್ಲ. ಪರಿಣಾಮವಾಗಿ ಭಾರಿ ಮಳೆ, ಗುಡುಗು ಸಹಿತ ಮಳೆ ಹಾಗೂ ಮೀನುಗಾರರಿಗೆ ಯಾವುದೇ ರೀತಿಯ ಮುನ್ನೆಚ್ಚರಿಕೆಯೂ ಇಲ್ಲ ಅಂತ ಹೇಳಿದೆ. ಇವತ್ತು…
ದರ್ಶನ್ (Darshan) ನಟನೆಯ ಕಾಟೇರ ಸಿನಿಮಾದ ಪ್ರಿ ರಿಲೀಸ್ ಇವೆಂಟ್ (Pre Release Event) ಇಂದು ಮಂಡ್ಯದಲ್ಲಿ (Mandya )ಅದ್ಧೂರಿಯಾಗಿ ನಡೆಯಲಿದೆ. ಇಂದು ರೈತದಿನ ಆಗಿದ್ದರಿಂದ ಈ ಕಾರ್ಯಕ್ರಮದಲ್ಲಿ ರೈತಗೀತೆಯನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ಸಾವಿರಾರು ಸಂಖ್ಯೆಯಲ್ಲಿ ಇಂದು ದರ್ಶನ್ ಅಭಿಮಾನಿಗಳು ಮಂಡ್ಯದಲ್ಲಿ ಸೇರಲಿದ್ದಾರೆ. ಮೊನ್ನೆಯಷ್ಟೇ ಕಾಟೇರ (Katera) ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಅದ್ಭುತ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ. ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಕಾಟೇರ ಚಿತ್ರ ಇದೇ ತಿಂಗಳು 29ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ನಟ ದರ್ಶನರ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ…
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಐದು ಸಾವಿರ ಕೋಡ್ತಾರಂತೆ ಅಂತೆ ಸುಳ್ಳು ವದಂತಿ ಹಬ್ಬಿದ್ದು ಹುಬ್ಬಳ್ಳಿ ಸಮೀಪದ ಕಲಘಟಗಿಯ ಗ್ಯಾಸ್ ಕಚೇರಿವೊಂದರ ಮುಂದೆ ಮಹಿಳೆಯರ ದಂಡು ಸೇರಿದೆಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಗಾಗಿ ಇ ಕೆವೈಸಿ ಮಾಡಲು ಆದೇಶ ಹೋರಡಿಸಿದ್ದು, ಗ್ಯಾಸ್ ಕಚೇರಿ ಮುಂದೆ ಇ ಕೆವೈಸಿ ಗಾಗಿ ಜನರು ಆಗಮಿಸುತ್ತಿರೋದು ತಮಗೆಲ್ಲ ಗೋತ್ತೆ ಇದೆ. ಹುಬ್ಬಳ್ಳಿ ಧಾರವಾಡ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಮೀಣ ಬಾಗದಲ್ಲಿ ಮೋದಿಯವರು ಐದು ಸಾವಿರ ನೀಡುತ್ತಿದ್ದಾರೆ ಎಂದು ಸುಳ್ಳು ವದಂತಿ ಹಬ್ಬಿಸಿದ್ದು ಇಂದು ಕಲಘಟಗಿ ಪಟ್ಟಣದ ಲೋಕಪೂಜ್ಯ ಗ್ಯಾಸ್ ಕಚೇರಿ ಮುಂದೆ ನೂರಾರು ಮಹಿಳೆಯರು ಮುಂಜಾನೆಯಿಂದಲೇ ಸರದಿಯಲ್ಲಿ ನಿಂತಿದ್ದಾರೆ. ನಿನ್ನೆಯವರಗೂ ಇ ಕೆವೈಸಿಗೆ ಅಲ್ಪಪ್ರಮಾಣದ ಜನರು ಆಗಮಿಸುತ್ತಿದ್ದರು ಇಂದು ಏಕಾಏಕಿ ಗ್ರಾಮೀಣ ಬಾಗದಿಂದ ನೂರಾರು ಜನರು ಆಗಮಿಸಿದ್ದು ಈ ಕೆವೈಸಿ ಮಾಡಲು ತೊಂದರೆ ಆಗುತ್ತಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಐದು ಸಾವಿರ ಹಣ ನೀಡುತ್ತಿದ್ದಾರೆ ಎನ್ನುವ ಸುಳ್ಳು ವದಂತಿಗೆ ಮಹಿಳೆಯರು ಆಗಮಿಸುತ್ತಿದ್ದು…