ಬೆಂಗಳೂರು: ಲೋಕಸಭೆಯಲ್ಲಿ ಸಂಸದರನ್ನು ಅಮಾನತುಗೊಳಿಸಿದ ಮೋದಿ ನಿರಂಕುಶಪ್ರಭುತ್ವವನ್ನು ವಿರೋಧಿಸಿ ಆಫ್ ಪ್ರತಿಭಟನೆ ನಡೆಸಿತು. ಲೋಕಸಭೆಯ ಉಭಯ ಸದನಗಳಲ್ಲಿ ಪ್ರತಿಪಕ್ಷದ 141 ಸದಸ್ಯರುಗಳ ಅಮಾನತುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದದಲ್ಲಿ ಆಪ್ ಪ್ರತಿಭಟನೆ ನಡೆಸಿತು. ಕೇಂದ್ರ ಸರ್ಕಾರದ ನಿರಂಕುಶ ಪ್ರಭುತ್ವವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ರವರ ನೇತೃತ್ವದಲ್ಲಿ ಪ್ರತಿಭಟನೆ ಬೆಂಗಳೂರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಮಾಡಿ ವಿರೋಧ ವ್ಯಕ್ತಪಡಿಸಲಾಯಿತು.
Author: AIN Author
ದೊಡ್ಡಬಳ್ಳಾಪುರ: ಕಳೆದ ಒಂದು ವಾರದಿಂದ ಕುಡಿಯುವ ನೀರಿನ ಪೂರೈಕೆ ಇಲ್ಲದೆ ತಿರುಮಗೊಂಡನಹಳ್ಳಿ ಗ್ರಾಮಸ್ಥರು ಹಾಗು ಜಾನುವಾರು ಗಳು ಪರದಾಡುವ ಪರಿಸ್ಥಿತಿ ಬಂದಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ 150 ಕ್ಕೂ ಹೆಚ್ಚು ಮನೆಗಳಿದ್ದು ಜಾನುವಾರುಗಳ ಸಂಖ್ಯೆ ಕೂಡ ಹೆಚ್ಚಾಗಿವೆ.. ಗ್ರಾಮದಲ್ಲಿ ಕೇವಲ ಒಂದು ಬೋರ್ ವೆಲ್ ಇದ್ದು, 24 ಗಂಟೆ ಕರೆಂಟ್ ನೀಡದೆ ನೀರಿನ ಪೂರೈಕೆಯಲ್ಲಿ ವ್ಯತ್ಯಾಸವಾಗುತ್ತಿದೆ. ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಪ್ರಾರಂಭ ದಿನದಿಂದಲೂ ಕೂಡ ತಿರುಮಗೊಂಡನಹಳ್ಳಿ ಗ್ರಾಮದ ಜನರಿಗೆ ಅನ್ಯಾಯ ಮಾಡುತ್ತಿದ್ದು ಪಂಚಾಯ್ತಿ ಇಂದ ಸಿಗಬೇಕಾದ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ. ರಾಜಕೀಯ ಬಣ್ಣದ ತೇಪೆ ಹಾಕಿ ಗ್ರಾಮಕ್ಕೆ ಸಿಗಬೇಕಾದ ಕನಿಷ್ಠ ಸೌಕರ್ಯಗಳನ್ನು ಕೂಡ ಇವರು ನೀಡುತ್ತಿಲ್ಲ.ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪಂಚಾಯ್ತಿ ಪ್ರತಿಭಟನೆ ಮಾಡಿದ್ದರು. ಕೇವಲ ಕಾಟಚಾರಕ್ಕೆ ನೀರನ್ನು ಪೂರೈಕೆ ಮಾಡಿ ಗ್ರಾಮಸ್ಥರು ಕಣ್ಣೊರೆಸುವ ತಂತ್ರ ರೂಪಿಸಿದರು.. ದಶಕಗಳಿಂದ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡುವಲ್ಲಿ ವಿಫಲವಾಗಿದ್ದು,…
ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನವು ದಾವಣಗೆರೆಯ ಬಾಪೂಜಿ ಎಂ.ಬಿ.ಎ ಕಾಲೇಜು ಮೈದಾನದಲ್ಲಿ ಡಿ. 23 ಹಾಗೂ 24ರಂದು ಜರುಗಲಿದೆ. ಜಿಲ್ಲೆಯಿಂದ ಸುಮಾರು ಜನರು ಭಾಗವಹಿಸುವ ನಿರೀಕ್ಷೆ ಇರುವುದರಿಂದ ನಾಳೆಯ ಅಧಿವೇಶಕ್ಕೆ ದಾವಣಗೆರೆಯಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆಯಾಗಿದ್ದು, ಮೈದಾನದಲ್ಲಿ ಅದ್ಧೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಸಮಾಜದ ಮುಖಂಡರು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಡಿಸೆಂಬರ್ 23 ಮತ್ತು 24 ಎರಡು ದಿನಗಳ ಕಾಲ ನಡೆಯಲಿರುವ ಮಹಾ ಅಧಿವೇಶನಕ್ಕೆ ಸುತ್ತೂರ ಮಠದ ದೇಶಿಕೇಂದ್ರ ಸ್ವಾಮೀಜಿಗಳಿಂದ ಉದ್ಘಾಟನೆ ಮಾಡಲಾಗುತ್ತದೆ. ಅಧಿವೇಶನದಲ್ಲಿ ಸಮಾಜದ ವಿವಿಧ ಮಠಗಳ ಸ್ವಾಮೀಜಿಗಳು ಭಾಗಿ ಸಾಧ್ಯತೆಯಿದೆ. ಸಮಾಜದ ರಾಜಕಾರಣಿಗಳು, ಹಿರಿಯ ಮುಖಂಡರು ಹಾಗೂ ಯುವಕರು ಸೇರಿದಂತೆ 2 ಲಕ್ಷಕ್ಕುಅಧಿಕ ಜನರು ಭಾಗಿ ನಿರೀಕ್ಷೆಯಾಗಿದ್ದು, 60 ವರ್ಷಗಳ ಬಳಿಕ ಇದೀಗ ದಾವಣಗೆರೆಯಲ್ಲಿ ನಡೆಯುತ್ತಿರುವ ಲಿಂಗಾಯತ ಮಹಾ ಅಧಿವೇಶನವಾಗಿದೆ.
ಬೆಂಗಳೂರು: ಮೋದಿಯವರು ಯಾವ ಫ್ಲೈಟ್‍ನಲ್ಲಿ ಓಡಾಡುತ್ತಾರೆ.? ಅದು ಐಷಾರಾಮಿ ಫ್ಲೈಟ್ ಅಲ್ವಾ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ತಿರುಗು ಬಾಣ ಬಿಟ್ಟಿದ್ದಾರೆ. https://ainlivenews.com/is-luxury-air-travel-necessary-during-rainy-season-r-ashok-kidi/ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಮೀರ್ ಜೊತೆ ಐಷಾರಾಮಿ ಜೆಟ್‍ನಲ್ಲಿ ಪ್ರಯಾಣ ಮಾಡಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತದ್ದು?. ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ಸಿಎಂ ಕಿಡಿಕಾರಿದ್ಧಾರೆ. ಏನಿದು ಘಟನೆ..?: ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮೆಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು ಎಂದು ವೀಡಿಯೋವೊಂದನ್ನು ಜಮೀರ್ ಅಹ್ಮದ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ಇದೀಗ ಭಾರೀ ವೈರಲ್ ಆಗುತ್ತಿದ್ದು, ವೀಡಿಯೋ ಶೇರ್ ಮಾಡಿಕೊಂಡು ಬಿಜೆಪಿ ನಾಯಕರು ಭಾರೀ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಕಂಟಕವಾಗುತ್ತಾ ಕ್ರಿಸ್ಮಸ್ ಹಾಗೂ ಇಯರ್ ಎಂಡ್ ಸಾಲು ಸಾಲು ರಜೆ ಯಾಕಂದರೆ ನಾಳೆಯಿಂದ ಸಾಲು ಸಾಲು ರಜೆ ಶುರುವಾಗ್ತಾ ಇದ್ದು ಊರುಗಳತ್ತ ಮುಖಮಾಡಿರುವ ಜನ. ಕೊರೊನಾ ಆತಂಕ ಹೆಚ್ಚಿರುವ ರಾಜ್ಯದ ವಲಸಿಗರು ಕ್ರಿಸ್ಮಸ್ ಹಿನ್ನೆಲೆ ಊರಿಗೆ ಪಯಣ ಮಾಡುತ್ತಿದ್ದು ಹೈ ರಿಸ್ಕ್ ರಾಜ್ಯಗಳಾದ ಗೋವಾ, ಕೇರಳ, ಮಹಾರಾಷ್ಟ್ರ ದ ಜನರು ವಾಪಾಸ್ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ. https://ainlivenews.com/why-is-the-appointment-of-corporation-board-delayed-in-the-congress-government-here-are-the-full-details/ ರಜೆ ಎಂಜಾಯ್ ಮಾಡಲು ಊರುಗಳತ್ತ ಟಿಕೆಟ್ ಬುಕ್ ಮಾಡಿರುವ ವಲಸಿಗರು ಆನ್ ಲೈನ್ ನಲ್ಲಿ ಈ ಮೂರು ರಾಜ್ಯಗಳಿಗೆ ಭರ್ಜರಿಯಾಗಿ ಬುಕ್ ಆಗಿವೆ ಬಸ್ ಟಿಕೆಟ್ ಗಳು ದಿನ ಖಾಸಗಿ ಬಸ್ ಹಾಗೂ KSRTC ಸೇರಿದಂತೆ ಮೂರು ರಾಜ್ಯಗಳಿಗೆ ಬೆಂಗಳೂರಿನಿಂದ 400ಕ್ಕೂ ಅಧಿಕ ಬಸ್ ಗಳು ಓಡಾಟ ಇದೀಗ ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್ ಗಳ ಸಂಖ್ಯೆಯೂ ಹೆಚ್ಚಳ ಮೂರು ರಾಜ್ಯಗಳಿಗೆ ಈಗಾಗಲೇ 10 ಸಾವಿರಕ್ಕೂ ಹೆಚ್ಚಿನ ಟಿಕೆಟ್ ಬುಕ್ ಕಂಟಕವಾಗುತ್ತಾ ಸಾಲು ಸಾಲು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ , ಕೃಷ್ಣಬೈರೇಗೌಡ ಐಷಾರಾಮಿ ಜೆಟ್‍ನಲ್ಲಿ ಪ್ರಯಾಣ ಮಾಡುತ್ತಾರೆ. ಇತ್ತ ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇನಾ ನಿಮ್ಮ ಸಮಾಜವಾದ..?, ಈ ರೀತಿಯ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashok) ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಜಮೀರ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಜೆಟ್ ವಿಮಾನ ಪ್ರಯಾಣದ ವೀಡಿಯೋ ಕುರಿತು ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬರದ ಸಂಕಷ್ಟಕ್ಕೆ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. 60 ಲಕ್ಷಕ್ಕೂ ಹೆಚ್ಚು ರೈತರ ಜಮೀನಿನಲ್ಲಿ ಬೆಳೆ ನಷ್ಟ ಆಗಿದೆ. ರೈತರು ಬೇರೆ ರಾಜ್ಯಗಳಿಗೆ ಗುಳೇ ಹೋಗುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ಜೆಸಿಬಿಯಲ್ಲಿ (JCB) ಶಾಲೆ ಮಕ್ಕಳು ಶಾಲೆಗೆ ಹೋಗ್ತಿದ್ದಾರೆ. ಇತ್ತ ಸಿಎಂ, ಸಚಿವರು ಖಾಸಗಿ ಜೆಟ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಬರದ ಛಾಯೆ ಸಂದರ್ಭದಲ್ಲಿ ಐಷಾರಾಮಿ ವಿಮಾನ ಪ್ರಯಾಣ ಬಗ್ಗೆ ಖುಷಿಯಾಗಿದೆ ಅಂತ ಜಮೀರ್ ವಿಡಿಯೋ ಹಂಚಿಕೊಂಡಿದ್ದಾರೆ…
ಚಾಮರಾಜನಗರ: ಬರದ ಬಗ್ಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ. ಸಿದ್ಧತೆ ಮಾಡಿಕೊಳ್ಳುವುದಕ್ಕಾಗಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ ಎಂದು ಕೊಳ್ಳೇಗಾಲದಲ್ಲಿ ಸಚಿವ ಕೆ ವೆಂಕಟೇಶ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೊಳ್ಳೇಗಾಲ, ಯಳಂದೂರು, ಹನೂರು ನಾಳೆ ಗುಂಡ್ಲುಪೇಟೆಯಲ್ಲಿ ಅಧಿಕಾರಿಗಳೊಂದಿಗೆ ಸಭೆಯ ನಡೆಸುತ್ತೇನೆ. ಕೋವಿಡ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಲ್ಲಾ ಗಡಿಗಳಲ್ಲೂ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿಯಂತೆ ಯಾವುದೇ ಅನಾಹುತ ಸಂಭವಿಸದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ತಮಿಳುನಾಡು, ಕೇರಳ ಗಡಿಯಲ್ಲಿ ತಪಾಸಣೆ ಕಡ್ಡಾಯ ಎಂದು ಸಚಿವ ಕೆ ವೆಂಕಟೇಶ್ ಹೇಳಿದರು.
ಚಾಮರಾಜನಗರ: ಯುವತಿಗೆ ರೇಗಿಸುತ್ತಿದ್ದಾನೆಂದು ದುಷ್ಕರ್ಮಿಗಳು ಯುವಕನಿಗೆ ಆರು ಬಾರಿ ಚಾಕು ಇರಿದ ಘಟನೆ ಚಾಮರಾಜನಗರದ ಸೇಂಟ್ ಜೋಸೆಫ್ ಕಾನ್ವೆಂಟ್ ರಸ್ತೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವಕ ಸಂಜಯ್‌ಕುಮಾರ್ (22)ನನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ನಡೆಸಿ ಚಾಕುವಿನಿಂದ ಇರಿಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಯುವತಿಯನ್ನು ರೇಗಿಸುತ್ತಿದ್ದಾನೆಂದು ತಿಳಿದ ಆಕೆಯ ಸ್ನೇಹಿತರಾದ ಅರುಣ್, ಶ್ಯಾಮ್ ಈ ಕೃತ್ಯ ಎಸಗಿದ್ದಾರೆ. ಇಬ್ಬರು ಆರೋಪಿಗಳಾದ ಅರುಣ್, ಶ್ಯಾಮ್ ಅವರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವಾಕ್ ಮಾಡುತ್ತಿದ್ದ ಸಂಜಯ್ ಕುಮಾರ್‌ನನ್ನು ನೋಡಿದ ಕೂಡಲೇ ಯುವತಿ ಕರೆ ಮಾಡಿ ತನ್ನ ಮೂವರು ಸ್ನೇಹಿತರನ್ನು ಕರೆಯಿಸಿದ್ದಾಳೆ. ಬೈಕ್‌ನಲ್ಲಿ ಬಂದ ಮೂವರು ಏಕಾಎಕಿ ಸಂಜಯ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತೋರ್ವನಿಗಾಗಿ ಹುಡುಕಾಟ ನಡೆಸಿದ್ದಾರೆ.
ಚಿತ್ರದುರ್ಗ: ಚುನಾವಣಾ ರಾಜಕೀಯದಿಂದ ಹಿಂದೆ ಸರಿದು ಬಿಟ್ರಾ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ.? ಹೌದು ಇಂತಹ ಒಂದು ಪ್ರಶ್ನೆ ಇಂದು ಅವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ತಿಳಿದುಬಂದಿದೆ. ನಾನು ರಾಜಕೀಯದಿಂದ ದೂರ ಇರಲು ನಿರ್ಧಾರ ಮಾಡಿದ್ದೇನೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಭ್ರಷ್ಟ ರಾಜಕೀಯ ವ್ಯವಸ್ಥೆಯಿಂದ ದೂರ ಇರಲು ನಿರ್ಧಾರ ಮಾಡಿರುವೆ ಎಂದರು. ಇಂಥ ವ್ಯವಸ್ಥೆಯಲ್ಲಿ ಮುಂದುವರಿಯುವ ರಾಜಕಾರಣಿ ನಾನಲ್ಲ. ಭ್ರಷ್ಟಾಚಾರ ನನ್ನ ಕಣ್ಣಿಗೆ ಯಾವತ್ತೂ ಬಿತ್ತು, ಆ ಕುರ್ಚಿ ಪಕ್ಕ ಕೂಡಾ ಕುಳಿತುಕೊಳ್ಳಲ್ಲ ಎಂದು ಹೇಳಿದರು. ನಾನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ. ನಾನು ಬಿಜೆಪಿ ಪಕ್ಷದ ಸೇನಾನಿ, ಪಕ್ಷ ಹೇಳಿದ್ದನ್ನ ಕೇಳುತ್ತೇನೆ. ಸ್ಪರ್ಧೆ ವಿಚಾರ ಪಕ್ಷ ನಿರ್ಧಾರವನ್ನ ಮಾಡುತ್ತದೆ ಎಂದು ಹೇಳಿದರು. ನಾನೇ ಕ್ಯಾಂಡಿಡೇಟ್ ಆಗಬೇಕು ಅಥವಾ ನನ್ನ ಮಕ್ಕಳು ಆಗಬೇಕು ಅನ್ನೋದಲ್ಲ. ಚಿತ್ರದುರ್ಗಕ್ಕೆ ನನ್ನ ಪಕ್ಷ ಹೇಳಿದ್ದಕ್ಕೆ ಸ್ಪರ್ಧೆ ಮಾಡಿದ್ದೆ. ಜನರು ಆಶೀರ್ವಾದ ಮಾಡಿ ಆಯ್ಕೆ…
ಬೆಂಗಳೂರು: ಅನುದಾನ ಖಾಲಿಯಾಗಿದ್ದಕ್ಕೆ ಮೂರು ವರ್ಷಗಳಿಂದ ಜಾರಿಯಲ್ಲಿದ್ದ ಮಹಿಳಾ ಪರ ಯೋಜನೆಯನ್ನು ಸಿದ್ದರಾಮಯ್ಯ ಸರ್ಕಾರ ನಿಲ್ಲಿಸಿದೆ. ಹೌದು. ಸೇಫ್ ಸಿಟಿ ಪ್ರಾಜೆಕ್ಟ್ (Safe City Project) ಆಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವುಮೆನ್ ಹೆಲ್ಪ್ ಡೆಸ್ಕ್ (Women Help Desk) ಸಿಬ್ಬಂದಿಯ ತೆರವಿಗೆ ಸರ್ಕಾರ ಸೂಚಿಸಿದೆ. ಮಹಿಳೆಯರಿಗೆ ಆಗುವ ಕಿರಿ ಕಿರಿ ತಪ್ಪಿಸುವ ಉದ್ದೇಶದಿಂದ 2021 ಜನವರಿಯಲ್ಲಿ ಮಹಿಳಾ ಸಹಾಯ ಕೇಂದ್ರ ಆರಂಭವಾಗಿತ್ತು. ಪೋಕ್ಸೋ, ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣದ ಸಂತ್ರಸ್ತರಿಗೆ ಮಹಿಳಾ ಹೆಲ್ಪ್ ಡೆಸ್ಕ್ ಸಹಕಾರಿಯಾಗಿತ್ತು ಮೂರು ವರ್ಷಗಳಿಗೆ ಮಾತ್ರ ಅನುದಾನ ಮೀಸಲಿಡಲಾಗಿತ್ತು ಎಂದು ಈಗ ಈ ವುಮೆನ್ ಹೆಲ್ಪ್ ಡೆಸ್ಕ್ ನಿಲ್ಲಿಸಿದೆ. ಈಗಾಗಲೇ ಸರ್ಕಾರ ಪೊಲೀಸ್ ಠಾಣೆಗಳಿಗೆ ಹೆಲ್ಪ್ ಡೆಸ್ಕ್ ಸಿಬ್ಬಂದಿಯನ್ನು ಡಿ.31ಕ್ಕೆ ಬಿಡುಗಡೆ ಮಾಡುವಂತೆ ಅದೇಶಿಸಿದೆ.