Author: AIN Author

ದೊಡ್ಡಬಳ್ಳಾಪುರ: ನಗರದ ಒಕ್ಕಲಿಗರ ಭವನದಲ್ಲಿ ಡಿ.25 ರಂದು 2024ರ ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ತಾಲ್ಲೂಕಿನ ನಗರ ಭಾಗದ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು . ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷ ಸಿದ್ದತೆ ನಡೆಸಲಾಗುತ್ತಿದೆ ಎಂದು ಹೇಳಿದರು. ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿದ್ದು ವಿಧಾನ ಸಭಾ ಚುನಾವಣಾ ಸಂದರ್ಭಗಳಲ್ಲಿ ಕೆಲ ಸಮಸ್ಯೆಗಳಿಂದ ಹಿನ್ನಡೆಯಾಗುತ್ತಿದೆ ಮುಂದೆ ಈ ರೀತಿಯ ಸಮಸ್ಯೆಗಳು ಎದುರಾಗದಂತೆ ಕಾರ್ಯ ನಿರ್ವಹಿಸಲು ನಮ್ಮ ಪಕ್ಷದ ಮುಖಂಡರು ಮುಂದಾಗಿದ್ದೇವೆ ಎಂದರು. ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಚೈತನ್ಯ ತುಂಬಲು ಹಾಗೂ ತಾಲ್ಲೂಕಿನ ಸಮಸ್ಯೆಗಳ ಪರಿಹಾರಕ್ಕೆ ತಾಲ್ಲೂಕಿನ ಜನತೆಯ…

Read More

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIAL) ಟರ್ಮಿನಲ್ 2 (Terminal 2) ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳಲ್ಲಿ (Beautiful Airport Terminals in the World) ಒಂದೆಂಬ ಗೌರವಕ್ಕೆ ಪಾತ್ರವಾಗಿದೆ. ಈ ಮೂಲಕ ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುನೆಸ್ಕೋದ ಪ್ರತಿಷ್ಠಿತ ವಾಸ್ತುಶಿಲ್ಪ ಸ್ಪರ್ಧೆಯ ಪ್ರಿಕ್ಸ್ ವರ್ಸೈ (Prix Versailles) ಗೌರವಕ್ಕೆ ಬೆಂಗಳೂರು ವಿಮಾನ ನಿಲ್ದಾಣ (Bengaluru Airport) ಪಾತ್ರವಾಗಿದೆ. ಟಿ2ನಲ್ಲಿರುವ ಒಳಾಂಗಣ ವಿನ್ಯಾಸಕ್ಕಾಗಿ ಈ ವರ್ಷದ ಗೌರವ ಸಿಕ್ಕಿದೆ. ಅಷ್ಟೇ ಅಲ್ಲದೇ ಈ ಗೌರವಕ್ಕೆ ಪಾತ್ರವಾದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಯೂ ಈಗ ಕೆಐಎಎಲ್‌ಗೆ ಸಿಕ್ಕಿದೆ. ಪ್ಯಾರಿಸ್‌ ಮೂಲದ ಪ್ರಿಕ್ಸ್ ವರ್ಸೈಲ್ಸ್ 2015 ರಲ್ಲಿ ಸ್ಥಾಪಿಸಲಾಗಿದ್ದು ವಿಮಾನ ನಿಲ್ದಾಣಗಳು, ಶಾಪಿಂಗ್ ಮಾಲ್‌ಗಳು, ಕ್ಯಾಂಪಸ್‌ಗಳು ಮತ್ತು ಪ್ರಯಾಣಿಕರ ನಿಲ್ದಾಣಗಳು ಸೇರಿದಂತೆ ಹಲವಾರು ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡುತ್ತದೆ. ಕಳೆದ ವರ್ಷದ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಟರ್ಮಿನಲ್‌ 2 ಉದ್ಘಾಟಿಸಿದ್ದರು. ಈ ವರ್ಷದ ಜನವರಿ 15 ದಿಂದ…

Read More

ದೊಡ್ಡಬಳ್ಳಾಪುರ: ಕೆಳ ನ್ಯಾಯಾಲಯಗಳಲ್ಲಿ ಕನ್ನಡದಲ್ಲೇ ತೀರ್ಪು ನೀಡುತ್ತಿರುವ ಕ್ರಮ ಅತ್ಯಂತ ಶ್ಲಾಘನೀಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಲ್.ರಘುನಾಥ್ ಹೇಳಿದರು. ನಗರದ ಕೋರ್ಟ್ ಆವರಣದಲ್ಲಿ ತಾಲೂಕು ವಕೀಲರ‌ ಸಂಘದ ವತಿಯಿಂದ ಆಯೋಜಿಸಿದ್ದ ೬೪ನೇ ಕನ್ನಡ ರಾಜ್ಯೋತ್ಸವ ಹಾಗೂ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳಾದರೂ ಕನ್ನಡಕ್ಕಾಗಿ ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ಬೇಸರದ ವಿಚಾರ. ಎಲ್ಲ ರಂಗಗಳಲ್ಲಿ ಕನ್ನಡ ಉಳಿಸುವ ಪ್ರಯತ್ನ ಇಂದು ಅಗತ್ಯವಾಗಿದೆ ಎಂದು ಹೇಳಿದರು. ನ್ಯಾಯಾಲಯಗಳಲ್ಲಿ ಕನ್ನಡದಲ್ಲಿ ವಾದಿಸಿದರೆ ಕೀಳು, ಆಂಗ್ಲ ಭಾಷೆಯಲ್ಲಿ ವಾದಿಸಿದರೆ ಮೇಲು ಎಂಬ ಮನೋಭಾವವನ್ನು ಹಿರಿಯ-ಕಿರಿಯ ವಕೀಲರು ಬಿಡಬೇಕು. ಮಾತೃಭಾಷೆಯಲ್ಲೇ ವಾದ ಮಂಡನೆ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ನ್ಯಾಯಾಧೀಶ ಎಂ.ಎಲ್.ರಘುನಾಥ್ ಅಭಿಪ್ರಾಯಪಟ್ಟರು. ಕನ್ನಡದಲ್ಲಿ ತೀರ್ಪು ಬರೆಯುವ ನ್ಯಾಯಾಧೀಶರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ವಿಶೇಷ ಪಾರಿತೋಷಕ‌ ನೀಡುತ್ತಾ ಗೌರವಿಸುತ್ತಿದೆ. ಸುಪ್ರೀಂ ಕೋರ್ಟಿನ ಇ-ಕೋರ್ಟ್ ಸರ್ವಿಸ್ ನಲ್ಲೂ ತೀರ್ಪುಗಳನ್ನು ಕನ್ನಡಕ್ಕೆ…

Read More

ಬೆಂಗಳೂರು: ಡಿ.26 ರಂದು ಯುವನಿಧಿ (Yuvanidhi) ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ವಿವೇಕಾನಂದ ಜಯಂತಿ ದಿನ ಶಿವಮೊಗ್ಗದಲ್ಲಿ ಯುವನಿಧಿ ಗ್ಯಾರಂಟಿ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Sharan Prakash Patil) ಹೇಳಿದ್ದಾರೆ. https://ainlivenews.com/corona-outbreak-again-24-people-in-the-state-are-corona-positive/ ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಸೆಂಬರ್ 26 ರಂದು ಸಿಎಂ ಸಿದ್ದರಾಮಯ್ಯ ಯುವನಿಧಿ ಗ್ಯಾರಂಟಿ ಕಾರ್ಯಕ್ರಮದ ಲೋಗೋ ಅನಾವರಣ ಮಾಡಲಿದ್ದಾರೆ. ಪದವಿ ಮುಗಿಸಿದವರಿಗೆ 3,000 ರೂ., ಡಿಪ್ಲೊಮಾ ಮಾಡಿದವರಿಗೆ 2,000 ರೂ. ನಿರುದ್ಯೋಗ ಭತ್ಯೆ ನೀಡಲಿದ್ದೇವೆ. ಯುವನಿಧಿ ಕಾರ್ಯಕ್ರಮ ವಿಳಂಬ ಆಗಿಲ್ಲ. ಪದವಿ ಮುಗಿಸಿ ಆರು ತಿಂಗಳ ನಂತರ ಈ ಯೋಜನೆಯನ್ನು ಪಲಾನುಭವಿಗಳಿಗೆ ತಲುಪಿಸುವುದು ನಮ್ಮ ಉದ್ದೇಶ ಎಂದು ತಿಳಿಸಿದ್ದಾರೆ ಅಂದಹಾಗೆ ರಾಜ್ಯದಲ್ಲಿ ಯುವನಿಧಿ ಯೋಜನೆಗೆ ಅಂದಾಜು 5,29,153 ಫಲಾನುಭವಿಗಳನ್ನ ಗುರುತಿಸಲಾಗಿದ್ದು, 4,81,000 ಪದವೀಧರರು, 48,153 ಡಿಪ್ಲೊಮಾ ತೇರ್ಗಡೆಯಾದವರು ಇದ್ದಾರೆ. 2023-24 ರಲ್ಲಿ ನಿರುದ್ಯೋಗ ಭತ್ಯೆ ನೀಡಲು 250 ಕೋಟಿ ಅನುದಾನ ಮೀಸಲು ಇಡಲಾಗಿದೆ. ಅಲ್ಲದೆ ಈ ಯೋಜನೆಯ ಫಲಾನುಭವಿಗಳಾಗಲು…

Read More

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರು (Mallikarjun Kharge) ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಅವರೇ ತೀರ್ಮಾನಿಸಬೇಕು. ಅವರೇ ಎಐಸಿಸಿ ಅಧ್ಯಕ್ಷರಾಗಿದ್ದು, ಸ್ಪರ್ಧೆ ಮಾಡುವ ನಿರ್ಧಾರ ಮಾಡಿದರೆ ಗೆಲ್ಲಿಸಿಕೊಂಡು ಬರುವ ಕೆಲಸ ನಾವು ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (Dr G. Parameshwar) ಹೇಳಿದ್ದಾರೆ. https://ainlivenews.com/even-in-drought-the-government-gave-a-big-shock-to-the-people-of-the-state-increase-in-the-price-of-drinking-water/ ಬೆಂಗಳೂರಲ್ಲಿ ಮಾತನಾಡಿದ ಅವರು, ಪ್ರಧಾನಿ ಹುದ್ದೆಗೆ ಖರ್ಗೆಯವರ ಹೆಸರನ್ನು ಪ್ರಸ್ತಾಪಿಸಿರುವುದು ನಮಗೂ ಸಂತೋಷ ತಂದಿದೆ. ಕರ್ನಾಟಕದಿಂದ ಮತ್ತೊಬ್ಬರು ಪ್ರಧಾನಿ ಆಗ್ತಾರೆ ಎನ್ನುವುದಾದರೆ ಎಲ್ಲರಿಗೂ ಖುಷಿಯ ವಿಚಾರವಾಗಿದೆ. ಈ ಬಗ್ಗೆ ಖರ್ಗೆಯವರು ಇನ್ನೂ ಸಮಯ ಇದೆ. ಮೊದಲು ಗೆಲ್ಲೋಣ ಎಂದಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ ಇದೇ ವೇಳೆ ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿಯವರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿಗೆ ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಇಲ್ಲ ಎಂದು ಕಾಂಗ್ರೆಸ್ ಮೊದಲಿನಿಂದಲೂ ಹೇಳುತ್ತಾ ಬಂದಿದೆ. ಈಗ ಸಂಸತ್ತಿನಲ್ಲಿ ಸಸ್ಪೆಂಡ್ ಮಾಡಿದ್ದಕ್ಕಿಂತ ಬೇರೆ ಸಾಕ್ಷಿ ಬೇಕಾ? ನೂರಾರು ಜನ ಸಂಸದರನ್ನ ಹೊರಗಡೆ ಇಟ್ಟು ಪ್ರಮುಖವಾದ ಮಸೂದೆಗಳನ್ನು ಪಾಸ್ ಮಾಡಿದ್ದಾರೆ. ಇದಕ್ಕೆ…

Read More

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ (Covid-19) ಆರ್ಭಟ ಹೆಚ್ಚಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24 ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ. ಆ ಮೂಲಕ ಸೋಂಕಿತರ ಸಂಖ್ಯೆ ಶತಕ ದಾಟಿದೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 105 ಕ್ಕೆ ಏರಿದೆ. ಇದುವರೆಗೆ 11 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಇಂದು ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ 23 ಹಾಗೂ ದಕ್ಷಿಣ ಕನ್ನಡ ಜಿಲ್ಲೆ 1 ಪಾಸಿಟಿವ್‌ ಪ್ರಕರಣ ದೃಢಪಟ್ಟಿದೆ. ಕೆಲಕಾಲ ವಿರಾಮದ ನಂತರ ಕೊರೊನಾ ವೈರಸ್‌ನ ಹೊಸ ಉಪತಳಿ ಜೆಎನ್‌.1 ಕಾಲಿಟ್ಟಿದೆ. ಭಾರತದಲ್ಲೂ ಹೊಸ ತಳಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅಗತ್ಯ ಕ್ರಮಗಳನ್ನು ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

Read More

ಬೆಂಗಳೂರು: ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ…” ಎಂದು ವರ್ಣಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ. https://x.com/BYVijayendra/status/1738080269398372737?s=20 ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ.” ಎಂದು ವರ್ಣಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

Read More

ಶಾರೂಖ್ ಖಾನ್ ನಟನೆಯ ರಾಜ್​ಕುಮಾರ್ ಹಿರಾನಿ ನಿರ್ದೇಶನದ ಬಹುನಿರೀಕ್ಷೆಯ ಡಂಕಿ ಗುರುವಾರವೇ ವರ್ಲ್ಡ್​​ ವೈಡ್ ತೆರೆಗೆ ಬಂದಿದೆ. ಡಂಕಿಗೆ ನಿರೀಕ್ಷೆಯಂತೆ  ವಿಶ್ವದಾದ್ಯಂತ  ಭರ್ಜರಿ ಓಪನಿಂಗ್ ಕೂಡ ಸಿಕ್ಕಿದೆ. ಹಾಗಾದರೆ ಈ ಬಹುನಿರೀಕ್ಷೆಯ ಸಿನಿಮಾ ಹೇಗೆ ಮೂಡಿಬಂದಿದೆ.? ಡಂಕಿಯನ್ನ ನೋಡಿದ ಪ್ರೇಕ್ಷಕರು ಹೇಳಿದ್ದೇನು..? ಇಲ್ಲಿದೆ ವರದಿ. ಯೆಸ್, ಬಾಲಿವುಡ್ ಅಂಗಳದ ಬಹುನಿರೀಕ್ಷೆಯ ಡಂಕಿ ಸಿನಿಮಾ ಇವತ್ತು ವಿಶ್ವದಾದ್ಯಂತ ತೆರೆಗೆ ಬಂದಿದೆ.  ನಿರೀಕ್ಷೆಯಂತೆಯೇ ಡಂಕಿಗೆ ಭರ್ಜರಿ ಓಪನಿಂಗ್ ಕೂಡ ಸಿಕ್ಕಿದೆ. ಚಿತ್ರವನ್ನ ನೋಡಿದ ಫ್ಯಾನ್ಸ್ ರಾಜಕುಮಾರ್ ಹಿರಾನಿ ಮ್ಯಾಜಿಕ್ ಈ ಬಾರಿಯೂ ಮಿಸ್ ಆಗಿಲ್ಲ ಅಂತಿದಾರೆ. ಅಷ್ಟೇ ಅಲ್ಲ ಕಿಂಗ್ ಖಾನ್ ಶಾರೂಖ್ ಅಕೌಂಟ್​​ನಲ್ಲಿ ಹ್ಯಾಟ್ರಿಕ್ ಹಿಟ್ ಸೇರೋದು ಪಕ್ಕಾ ಅಂತಿದಾರೆ. ಡಂಕಿ ಸಿನಿಮಾ  ಫಸ್ಟ್ ಹಾಫ್​ ನಲ್ಲಿ ಸಖತ್ ಫನ್ನಿ ದೃಶ್ಯಗಳಿವೆ. ವಿದೇಶಕ್ಕೆ ಹೊರಡಲು ಪರದಾಡೋ ನಾಲ್ವರು ಸ್ನೇಹಿತರು. ಅದಕ್ಕಾಗಿ ಅವರ ಇಂಗ್ಲೀಷ್ ಕಲಿಕೆಯ ಸಾಹಸ, ವೀಸಾ ಪಡೆಯೋದಕ್ಕೆ ಮಾಡೋ ಸರ್ಕಸ್, ಕೊನೆಗೆ ಕಳ್ಳಮಾರ್ಗದಲ್ಲಿ ಫಾರಿನ್ ಗೆ ಹೊರಡೋ ಹುಚ್ಚಾಟ ನೋಡುಗರನ್ನ ಹೊಟ್ಟೆ…

Read More

ಮೈಸೂರು: ಅರಮನೆ ನಗರಿ ಮೈಸೂರಿಗೆ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ಕಳೆದೆರೆಡು ವರ್ಷಗಳ ಹಿಂದೆ ತಾಂಡವಾಡಿದ್ದ ಮಾಹಾಮಾರಿ ಮತ್ತೆ ಅಬ್ಬರಿಸುತ್ತಾ ಅನ್ನೋ ಭಯ ಎದುರಾಗಿದೆ. ಮೈಸೂರಲ್ಲಿ 6 ಮಂದಿಗೆ ಕೊರೊನಾ ರೂಪಾಂತರಿ JN.1 ವೈರಸ್ ದೃಢಪಟ್ಟಿದೆ. 5 ಮಂದಿ 60 ವರ್ಷ ಮೇಲ್ಪಟ್ಟವರಾಗಿದ್ದು, 48 ವರ್ಷದ ಓರ್ವರಲ್ಲಿ ಕೋವಿಡ್ ಸೋಂಕು ಪತ್ತೆ‌ಯಾಗಿದೆ. https://ainlivenews.com/apple-watch-series-9-watch-ultra-2-sales-halt-in-us-why/ ಸೋಂಕು ಪತ್ತೆಯಾದ ಆರು ಮಂದಿಗೂ ತುರ್ತು ನಿಗಾ ಘಟಕದಲ್ಲಿರಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಬಗ್ಗೆ ಹೆಚ್ಚಿನ ನಿಗಾ ಇಟ್ಟು ಚಿಕಿತ್ಸೆ ನೀಡಲಾಗುತ್ತಿದ್ದು, ಟ್ರಾವೆಲ್ ಹಿಸ್ಟರಿ ಬಗ್ಗೆಯೂ ಆರೋಗ್ಯ ಇಲಾಖೆ ಅಧಿಕಾರಿಗಳು ಗಮನಹರಿಸಿದ್ದಾರೆ. ಖುದ್ದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ ಈ ಸಂಬಂಧ ಮಾಹಿತಿ ಕಲೆಹಾಕಿ , ವೈದ್ಯರಿಗೆ ಕಠಿಣ ಸೂಚನೆ ನೀಡಿದ್ದಾರೆ.

Read More

ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ. ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ. ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.

Read More